Subscribe to Updates
Get the latest creative news from FooBar about art, design and business.
- ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
- ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
- ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
- ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
- ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
- ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
- ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
- ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
Author: admin
ಸರಗೂರು: ತಾಲೂಕಿನ ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಮಾಡಲು ಪ್ರಯತ್ನ ಮಾಡಲಾಗುವುದು ಎಂದು ಶಾಸಕ, ಅರಣ್ಯ ಮತ್ತು ವಸತಿ ವಿಹಾರ ಸಂಸ್ಥೆಗಳ ಅಧ್ಯಕ್ಷ ಅನಿಲ್ ಕುಮಾರ್ ತಿಳಿಸಿದರು. ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಸೋಮವಾರ ಮುಳ್ಳೂರು–ಬಿರ್ವಾಳ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಸರಗೂರು ಈ ಮೊದಲು ಹೋಬಳಿ ಕೇಂದ್ರವಾಗಿತ್ತು. ಆನಂತರ ಕೋಟೆಯಿಂದ ಬೇರ್ಪಟ್ಟು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಿತ್ತು. ಹೀಗಾಗಿ ಸರಗೂರು ಹೋಬಳಿ ಕೇಂದ್ರವಾಗಿಯೇ ಇದೆ. ಅದನ್ನು ಹೀಗಾಗಿ ಸರಗೂರು ಹೋಬಳಿ ಎಂಬುದನ್ನು ತೆಗೆದುಹಾಕಿ ಮುಳ್ಳೂರನ್ನು ಹೋಬಳಿ ಕೇಂದ್ರವನ್ನಾಗಿ ಮಾಡಲು ಸರಕಾರದೊಂದಿಗೆ ಚರ್ಚಿಸಿ ಮಾಡಲಾಗುವುದು ಎಂದು ಅವರು ಹೇಳಿದರು. ಪಿಯು ಕಾಲೇಜು: ಮುಳ್ಳೂರು ಭಾಗದ ಹತ್ತಾರು ಗ್ರಾಮಗಳಿಗೆ ಹೃದಯ ಭಾಗವಾಗಿದ್ದು, ಜನಸಂಖ್ಯೆಯು ಹೆಚ್ಚಿದೆ. ಇಲ್ಲಿಂದ ನೂರಾರು ವಿದ್ಯಾರ್ಥಿಗಳು ನಂಜನಗೂಡು, ಸರಗೂರು, ಹೆಡಿಯಾಲಕ್ಕೆ ಹೋಗುತ್ತಿರುವುದು ಗಮನಕ್ಕೆ ಬಂದಿದ್ದು, ಪಿಯು ಕಾಲೇಜು ಮಂಜೂರಿಗೆ ಶ್ರಮಿಸಲಾಗುವುದು. ಇದಲ್ಲದೆ ಬ್ಯಾಂಕ್ ತೆರೆಯಲು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕೆಡಿಪಿ ಸಭೆಯಲ್ಲಿ ಚರ್ಚಿಸಲಾಗುವುದು…
ಕೊರಟಗೆರೆ : ಬೀದಿ ಬದಿ ವ್ಯಾಪಾರಿಗಳು ಸುರಕ್ಷಿತ ಸ್ಥಳದಲ್ಲಿ ಕುಳಿತು ವ್ಯಾಪಾರ ಮಾಡದೇ ನಡು ರಸ್ತೆಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ವ್ಯಾಪಾರದ ವೇಳೆ ವಾಹನಗಳಿಂದ ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ಅಧಿಕಾರಿಗಳ ವಿರುದ್ದ ಪ.ಪಂ. ಸದಸ್ಯರು ಸೋಮವಾರ ಸಾಮಾನ್ಯ ಸಭೆಯಲ್ಲಿ ಅಸಾಮಾಧಾನ ವ್ಯಕ್ತಪಡಿಸಿದ್ದು ಕಂಡು ಬಂದಿತ್ತು. ಪ.ಪಂ ಅಧ್ಯಕ್ಷೆ ಅನಿತಾ ನೇತೃತ್ವದಲ್ಲಿ ಕಚೇರಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮುಂಜಾನೆ 5 ರಿಂದಲೇ ಪೋಸ್ಟ್ ಆಫೀಸ್ ಹತ್ತಿರ ನಡು ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರದ ವಹಿವಾಟುವಿನಲ್ಲಿ ತೊಡಗಿದ್ದು, ಖಾಸಗಿ ಬಸ್ ಗಳು ನಗರದೊಳಗೆ ವೇಗವಾಗಿ ಸಂಚರಿಸುವುದರಿಂದ ರಸ್ತೆಯಲ್ಲಿ ವ್ಯಾಪಾರ ಮಾಡುವ ಜನರಿಗೆ ನೋವುಂಟಾದರೆ ಹೊಣೆ ಯಾರು? ಇದಕ್ಕೆ ಪ.ಪಂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಸುರಕ್ಷಿತ ಸ್ಥಳದಲ್ಲಿ ವ್ಯಾಪಾರ ಮಾಡಲು ಅನುಕೂಲ ಕಲ್ಪಿಸಿ ಮುಂದೆ ನಡೆಯುವ ದುರಂತವನ್ನು ತಪ್ಪಿಸುವಂತೆ ಒತ್ತಾಯ ಮಾಡಿದರು. ಬೀದಿ ನಾಯಿಗಳ ಶಾಸ್ತ್ರ ಚಿಕಿತ್ಸೆಗೆ ಚಿಂತನೆ: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಬಲಿಯಾಗುತ್ತಿರುವ ಪ್ರಕರಣಗಳ ಸಂಖೈ ದಿನನಿತ್ಯ…
ಕೊರಟಗೆರೆ: ಉದ್ಯೋಗ ಹರಸಿ ಬೆಂಗಳೂರಿಗೆ ಪ್ರಯಾಣಿಸುವಂತಹ ಸಮಸ್ಯೆ, ಆದರೆ ವಾರದ ಮೊದಲ ದಿನ ಸೋಮವಾರ ಮಾತ್ರ ಪ್ರಯಾಣಿಕರು ಗಂಟೆ ಗಟ್ಟಲೆ ಬಸ್ ಗಾಗಿ ಕಾಯುವಂತಹ ಪರಿಸ್ಥಿತಿ ಎದುರಾಗಿದ್ದು, ಬೇಸತ್ತ ಪ್ರಯಾಣಿಕರು ಸೋಮವಾರ ಮುಂಜಾನೆ ಕೆಎಸ್ ಆರ್ ಟಿಸಿ ಬಸ್ ತಡೆದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಪಾವಗಡ, ಮಧುಗಿರಿ ಮಾರ್ಗದಿಂದ ಬರುವಂತಹ ಕೆಎಸ್ ಆರ್ ಟಿಸಿ ಬಸ್ ಗಳು ಭರ್ತಿಯಾಗಿ ಬರುತ್ತಿರುವ ಕಾರಣ ನಿಲ್ದಾಣದಲ್ಲಿ ನಿಲ್ಲಿಸುತ್ತಿಲ್ಲಾ, ಕೆಲ ಬಸ್‌ಗಳು ಪಟ್ಟಣದೊಳಗೆ ಬಾರದೆ ಬೈಪಾಸ್ ಮೂಲಕವೇ ಹೋಗುತ್ತಿವೆ, ಎಂದು ಗಂಟೆ ಗಟ್ಟಲೆ ಬಸ್‌ಗಾಗಿ ಕಾದು ಬೇಸೆತ್ತು ಕೆಲ ನಿಮಿಷಗಳ ಕಾಲ ಬಸ್ ತಡೆದು ಆಕ್ರೋಶ ಹೊರಹಾಕಿದ್ದಾರೆ. ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವ ತನಕ ಬಸ್ ಮುಂದಕ್ಕೆ ಬಿಡುವುದಿಲ್ಲಾ, ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಬರಲು ಹೇಳಿ ಪ್ರಯಾಣಿಕರ ನೋವನ್ನು ಗಮನಿಸುವಂತೆ ತಿಳಿಸಿ ಎಂದು ಪ್ರಯಾಣಿಕರು ಸಾರಿಗೆ ಬಸ್ ಚಾಲಕ, ನಿರ್ವಾಹಕರಿಗೆ ಸೂಚನೆ ನೀಡಿದ್ದು, ಪೊಲೀಸ್ ಅಧಿಕಾರಿಗಳ ಮಧ್ಯಪ್ರವೇಶದಿಂದ ಪ್ರಯಾಣಿಕರು ಮತ್ತು…
ಮಂಡ್ಯ: ಮಂಡ್ಯ ಜಿಲ್ಲೆಯ ಸಗ್ಯ ಗ್ರಾಮದಲ್ಲಿ ತೆಂಗಿನ ಗರಿಗಳನ್ನು ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶಿಸಿ ರೈತ ಸಾವಿಗೀಡಾಗಿರುವ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಪ್ರಕಾರ, ರೈತ ರಮೇಶ್ (38) ಎಂಬುವವರು ತಮ್ಮ ಹೊಲದಲ್ಲಿ ತೆಂಗಿನ ಗರಿಗಳನ್ನು ತೆರವುಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ 11 ಕೆವಿ ವಿದ್ಯುತ್ ತಂತಿಗಳಿಗೆ ತಗುಲಿವೆ. ಇದರಿಂದ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೋತಿ ನಗರ ಪೊಲೀಸ್ ಠಾಣೆಯ ಪೊಲೀಸರು ರಸ್ತೆ ಬದಿಯಲ್ಲಿ ರಮೇಶ್ ಅವರ ದೇಹವು ವಿದ್ಯುತ್ ತಂತಿಗೆ ಸಿಲುಕಿಕೊಂಡಿರುವುದನ್ನು ಗಮನಿಸಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತೆಲಂಗಾಣ: ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದು ಎಂಟು ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದಲ್ಲಿ ನಡೆದಿದೆ. ಚೆವೆಲ್ಲಾ ಎಸಿಪಿ ಬಿ ಕಿಶನ್ ಪ್ರಕಾರ, ಆರ್ ಟಿಸಿ ಬಸ್ ತಂಡೂರಿನಲ್ಲಿ ಹೊರಟಿದ್ದು, ಚೆವೆಲ್ಲಾ ತಲುಪಬೇಕಿತ್ತು. “ಟ್ರಕ್ ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿತ್ತು. ಈ ಅಪಘಾತದಲ್ಲಿ ಟ್ರಕ್ ಚಾಲಕ ಮತ್ತು ಹಲವು ಬಸ್ ಪ್ರಯಾಣಿಕರು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ” ಎಂದು ಎಸಿಸಿ ಇಂದು ಮುಂಜಾನೆ ಹೇಳಿದ್ದರು. ಇದಾದ ಬಳಿಕ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿ 24ಕ್ಕೆ ತಲುಪಿದೆ. ರಾಜೇಂದ್ರನಗರ ಡಿಸಿಪಿ ಯೋಗೇಶ್ ಗೌತಮ್, “ಟ್ರಕ್ ಚಾಲಕ ಓವರ್‌ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಅಪಘಾತ ಸಂಭವಿಸಿದೆಯೇ ಅಥವಾ ತಪ್ಪು ದಿಕ್ಕಿನಲ್ಲಿ ಚಾಲನೆ ಮಾಡುತ್ತಿದ್ದನೇ ಎಂದು ನಾವು ಪರಿಶೀಲಿಸಬೇಕಾಗಿದೆ” ಎಂದಿದ್ದಾರೆ. ಬಸ್ ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಮತ್ತು ಡಿಕ್ಕಿಯ ನಂತರ ಟ್ರಕ್ ನಲ್ಲಿದ್ದ ಜಲ್ಲಿಕಲ್ಲು ಪ್ರಯಾಣಿಕರ ಮೇಲೆ…
ಬೆಳಗಾವಿ: ಜಿಲ್ಲೆಯ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೇ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ. ಖಾನಾಪುರ ತಾಲೂಕಿನ ಸುಳೇಗಾಳಿ ಮೀಸಲು ಅರಣ್ಯ ಪ್ರದೇಶದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಜೊಡಾನೆಗಳು ಸಾವನ್ನಪ್ಪಿದ್ದವು. ಆನೆಗಳ ಹಿಂಡಿನಿಂದ ಬಂದ ಸರಿಸುಮಾರು ನಾಲ್ಕು ವರ್ಷಗಳ ವಯಸ್ಸಿನ ಒಂದು ಗಂಡು, ಒಂದು ಹೆಣ್ಣು ಆನೆ ಮೃತಪಟ್ಟಿದ್ದವು. ಘಟನೆ ತಿಳಿಯುತ್ತಿದ್ದಂತೆ ನಾಗರಗಾಳಿ ವಲಯದ ಆರ್‌ಎಫ್ ಓ ಸಚೀನ ಹೊನಮನಿ, ಡಿಎಫ್ ಓ ಕ್ರಾಂತಿ ಅಧಿಕಾರಿಗಳ ತಂಡದಿಂದ ಸ್ಥಳ ಪರೀಶಿಲನೆ ನಡೆಸಲಾಗಿತ್ತು. ಮೃಗಾಲಯ…
ಬಿಗ್ ಬಾಸ್ ಮನೆಯಿಂದ ಮಾತಿನ ಮಲ್ಲಿ ಮಲ್ಲಮ್ಮ ಔಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ವೈಯಕ್ತಿಕ ಕಾರಣದಿಂದ ಮಲ್ಲಮ್ಮ ಬಿಗ್ ಬಾಸ್ ಮನೆಯನ್ನು ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈಗ ಕಡಿಮೆ ವೋಟ್ ಪಡೆದು ಎಲಿಮಿನೇಟ್ ಆಗಿದ್ದಾರೆ. ಆರಂಭದಲ್ಲಿ ಮಲ್ಲಮ್ಮ ಅವರಿಗೆ ಟಾಸ್ಕ್ ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿತ್ತು. ಅಷ್ಟೇ ಅಲ್ಲದೇ ಟಾಸ್ಕ್ ಸಮಯದಲ್ಲಿ ಮನೆಯ ಸದಸ್ಯರು ಅವರನ್ನು ಅಷ್ಟಾಗಿ ಪರಿಗಣಿಸುತ್ತಿರಲಿಲ್ಲ. ಈ ವಿಚಾರದ ಬಗ್ಗೆ ಸುದೀಪ್ ಅವರು ಮನೆ ಮಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಮಲ್ಲಮ್ಮ ಹೆಚ್ಚಾಗಿ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್ ಜೊತೆ ಗುರುತಿಸಿಕೊಳ್ಳುತ್ತಿದ್ದರು. ಈ ವಾರದ ಟಾಸ್ಕ್‌ನಲ್ಲೂ ಅವರು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಶನಿವಾರ ಸುದೀಪ್ ಜೊತೆ ಮಾತನಾಡುತ್ತಿದ್ದಾಗ ನಾನು ಕಾಲೇಜಿಗೆ ಹೋಗಿರಲಿಲ್ಲ ಎಂದು ಹೇಳಿ ಕಣ್ಣೀರಿಟ್ಟಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯಕ್ಕೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು ಇಂದು ಹಾಜರಾದರು. ಎಲ್ಲ ಆರೋಪಿಗಳು ಕೂಡ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಹಾಗಾಗಿ ಮುಂದಿನ ಹಂತದ ಸಾಕ್ಷಿಗಳ ವಿಚಾರಣೆಗೆ ನ್ಯಾಯಾಲಯ ದಿನಾಂಕ ನಿಗದಿ ಮಾಡಿದೆ. ನವೆಂಬರ್ 10ರಂದು ವಿಚಾರಣೆಗೆ ದಿನಾಂಕ ನಿಗದಿ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಬೀದರ್‍ನ ಕಾಂಗ್ರೆಸ್ ಮುಖಂಡ ಜಾನಸನ್ ಘೋಡೆ, ಬಿಹಾರದ ಮುಜಾಫರ್‍ಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯೇಂದ್ರ ಚೌಧರಿ ಪರ ಸೋಮವಾರ ವಿವಿಧೆಡೆ ಪ್ರಚಾರ ನಡೆಸಿ ಗಮನ ಸೆಳೆದರು. ಜಿಲ್ಲೆಯವರೇ ಆದ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ, ಮುಖಂಡರಾದ ರಾಜರತನ್ ಸಿಂಧೆ, ರತ್ನದೀಪ್ ಕಸ್ತೂರೆ, ಸ್ಥಳೀಯರು ಆದ ಅಕ್ರಂ ಪಾಶಾ, ಶೇಕ್ ಮುಜಮ್ಮಿಲ್ ಮತ್ತಿತರರು ಕ್ಷೇತ್ರದ ಲಕ್ಷ್ಮಿನಗರ, ಬ್ರಹ್ಮಪುರ, ಮೋತಿಜ್ ಮೈದಾನ, ತಿಲಕನಗರದಲ್ಲಿ ಮನೆಗೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪರ ಮತ ಯಾಚಿಸಿದರು. ಮುಜಾಫರ್‍ಪುರ ವಿಧಾನಸಭಾ ಕ್ಷೇತ್ರಕ್ಕೆ ನ. 6 ರಂದು ಚುನಾವಣೆ ನಡೆಯಲಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಗ್ರೇಟರ್ ಮೈಸೂರು ಆಗಬೇಕು. ಆದರೆ ನಗರದ ಈಗಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಗ್ರೇಟರ್ ಮೈಸೂರು ಕುರಿತ ಪ್ರಥಮ ಸಭೆಯಲ್ಲಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, ಎಸ್‌ಟಿಪಿ ಯಾವುದರ ಸಮಸ್ಯೆಯೂ ಇರದಂತೆ ಜಿಲ್ಲಾಡಳಿತವು ಸ್ಪಷ್ಟವಾದ, ವೈಜ್ಞಾನಿಕವಾದ ಬ್ಲೂ ಪ್ರಿಂಟ್ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು ಎಂದರು. ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಈಗಿನ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸದೆ, ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಬೇಕಿದೆ. ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು ಎಂದು ಸೂಚಿಸಿದರು. ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ ತಂತ್ರಜ್ಞಾನ ಬಳಕೆ ಮಾಡುವ ಬಗ್ಗೆ ಯೋಜನೆ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು. ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ…