Subscribe to Updates
Get the latest creative news from FooBar about art, design and business.
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
- ಖಮೇನಿ ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್ ಬಾಬು ಸೂಚನೆ
- ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
- ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
Author: admin
ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ ಬಿದ್ದ ಹಿನ್ನೆಲೆಯಲ್ಲಿ ವಾಲ್ಮಿಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಅನಿರ್ಧಿಷ್ಟಾವಧಿ ಧರಣಿ ಅಂತ್ಯಗೊಳಿಸಿದರು. ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಪೀಠದ ಪೀಠಾಧ್ಯಕ್ಷರಾಗಿರುವ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು 257 ದಿನಗಳಿಂದ ಅಂದರೇ ಫೇ.10ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ಕೈಗೊಂಡದ್ದರು. ಎಸ್.ಸಿ ಗೆ ಶೇ.15ರಿಂದ 17 ಹಾಗೂ ಪರಿಶಿಷ್ಟ ವರ್ಗಕ್ಕೆ ಶೇ.3ರಿಂದ 7ರಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಸಹಿ ಹಾಕಿದ್ದಾರೆ. ಹೀಗಾಗಿ ನಗರದ ಫ್ರೀಡಂಪಾರ್ಕ್ ನಲ್ಲಿ ಪ್ರಸನ್ನಾನಂದ ಪುರಿ ಸ್ವಾಮೀಜಿಗಳು ಧರಣಿ ಅಂತ್ಯಗೊಳಿಸಿದ್ದು ಈ ವೇಳೆ ಕಂದಾಯ ಸಚಿವ ಆರ್.ಅಶೋಕ್ ಸುಗ್ರಿವಾಜ್ಞೆ ಪ್ರತಿ ಹಸ್ತಾಂತರ ಮಾಡಿ ಸಿಹಿ ತಿನ್ನಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಪ್ರಧಾನಿಯಾದ ಬಳಿಕ 2014 ರಿಂದಲೂ ಗಡಿಯಲ್ಲಿ ಭಾರತೀಯ ಯೋಧರ ಜೊತೆ ಪ್ರಧಾನಿ ಮೋದಿ ದೀಪಾವಳಿ ಹಬ್ಬವನ್ನ ಆಚರಿಸುತ್ತಿದ್ದು ಈ ಬಾರಿಯೂ ಇದೇ ಸಂಪ್ರದಾಯವನ್ನ ಮುಂದುವರೆಸಿದ್ದಾರೆ. ಲಡಾಖ್ ನ ಕಾರ್ಗಿಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಮೋದಿ. ದೇಶದ ಯೋಧರೇ ನನ್ನ ಕುಟುಂಬ. ಗಡಿಯಲ್ಲಿ ದೀಪಾವಳಿ ಆಚರಣೆ ಮಾಡುವುದು ನನ್ನ ಸೌಭಾಗ್ಯ. ದೀಪಾವಳಿಯ ಅರ್ಥ ಭಯವನ್ನ ಅಂತ್ಯ ಗೊಳಿಸುವ ಉತ್ಸವ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಅತ್ಯಾಚಾರ ಮತ್ತು ಜೀವ ಬೆದರಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ರನ್ನ ಅಮಾನತು ಮಾಡಲಾಗಿದೆ. ಸಿಪಿಐ ಜಿ.ಬಿ ಉಮೇಶ್ ಅಮಾನತುಗೊಳಿಸಿ ದಾವಣಗೆರೆ ಪೂರ್ವವಲಯ ಐಜಿಪಿ ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ತನ್ನ ಸೋದರ ಮಾವನ ಮಗ ಜಿ.ಬಿ. ಉಮೇಶ್ ವಿರುದ್ಧ ಅತ್ಯಾಚಾರ, ಜೀವಬೆದರಿಕೆ ಆರೋಪ ಮಾಡಿ ಯುವತಿ ದೂರು ನೀಡಿದ್ದರು. 5 ವರ್ಷಗಳ ಹಿಂದೆ ದಾವಣಗೆರೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಉಮೇಶ್ ನಿರಂತರವಾಗಿ ಅತ್ಯಾಚಾರ, ಮಾಡಿದ್ದು, ಪರಿಣಾಮವಾಗಿ ಐದು ಬಾರಿ ಗರ್ಭಪಾತ ಮಾಡಲಾಗಿದೆ ಎಂದು ಯುವತಿ ಆರೋಪಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಮಾಜಿ ಡಿಸಿಎಂ ಹಾಗೂ ಹಾಲಿ ಶಾಸಕರಾದ ಡಾ.ಜಿ.ಪರಮೇಶ್ವರ್ ತನ್ನ ಸ್ವಕ್ಷೇತ್ರವಾದ ಕೊರಟಗೆರೆಯ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆಯ ನಮ್ಮೂರ ಹಬ್ಬವೆಂಬ ಕಾರ್ಯಕ್ರಮದಲ್ಲಿ ತಮ್ಮ ರಾಜಕೀಯ ಭವಿಷ್ಯದ ಮನದಾಸೆಯನ್ನು ಸಾರ್ವಜನಿಕವಾಗಿ ಬಿಚ್ಚಿಟ್ಟಿದ್ದಾರೆ. ಕೊರಟಗೆರೆ ಕ್ಷೇತ್ರದ ಅಭಿವೃದ್ಧಿ ವಿಚಾರವನ್ನು ನಮ್ಮೂರ ಹಬ್ಬದ ಕಾರ್ಯಕ್ರಮದ ವೇದಿಕೆ ಮೇಲೆ ಮಾತನಾಡುತ್ತಾ, ತಮ್ಮ ಮನದಾಳದ ಮಾತು ಬಿಚ್ಚಿಟ್ಟ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಈ ಕ್ಷೇತ್ರದ ಜನತೆ ನನ್ನನ್ನ ಎರಡು ಬಾರೀ ಆಯ್ಕೆ ಮಾಡಿದ್ದಾರೆ. ಆದ್ರೆ ಒಳ್ಳೆ ಟೈಂ ನಲ್ಲಿ ನನ್ನ ಪಲ್ಟಿ ಒಡೆಸಿದ್ದಾರೆ. 2013 ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಗೆದ್ದಿದ್ರೆ ಈ ರಾಜ್ಯದ ಮುಖ್ಯಮಂತ್ರಿ ಆಗೋ ಅವಕಾಶ ಇತ್ತು ಎಂದರು. ನನ್ನದು ಹಣೆಬರಹ ಇರಬೇಕಲ್ಲಾ, ಬರೇ ನಿಮ್ಮದೇ ಹೇಳಿದ್ರೆ ನಾನು ಏನು ಹೇಳಲಿ. ಹಣೆ ಬರಹ ಬಹುಶಃ ನನಗಿರಲಿಲ್ಲ ಅಂತಾ ಕಾಣಿಸುತ್ತೆ. ಆಗಾಗಿ ಇವತ್ತು ನನ್ನ ಕೈಲಾದ ಕೆಲಸ ಮಾಡಿದ್ದೇನೆ ಅನ್ನೋ ಆತ್ಮತೃಪ್ತಿ ನನಗಿದೆ. ತಮಗೆ ಇದೆಯೋ ಇಲ್ವೋ ಗೊತ್ತಿಲ್ಲ ಎಂದು ಪರಮೇಶ್ವರ್…
ಶಿವಮೊಗ್ಗ : ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ದಿನದಂದು ವಾಹನಗಳನ್ನು ಜಖಂಗೊಳಿಸಿದ ಆರೋಪದ ಮೇಲೆ ಹತ್ಯೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಮಂದಿ ವಿರುದ್ಧ ಜಿಲ್ಲೆಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕಲ್ಲಪ್ಪನಕೇರಿಯಿಂದ ಅಜಾನ್ ನಗರಕ್ಕೆ ಬೈಕ್‍ನಲ್ಲಿ ಬಂದ 10ರಿಂದ 15 ಜನರ ಗುಂಪು ಸಯ್ಯದ್ ಫರ್ವೀಜ್ ಎಂಬವರಿಗೆ ಸೇರಿದ್ದ ಇನ್ನೋವಾ ಕಾರನ್ನು ಜಖಂ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೇ ಆ ಗುಂಪು ಜೈ ಶ್ರೀರಾಮ್ ಎಂದು ಕೂಗುತ್ತಾ ಕೇಸರಿ ಬಾವುಟ ಹಿಡಿದುಕೊಂಡಿತ್ತು ಎಂದು ಸಯ್ಯದ್ ಫರ್ವೀಜ್ ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹರ್ಷನ ಸಹೋದರಿ ಅಶ್ವಿನಿ ಸೇರಿ 10-15 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮೈಸೂರು; ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್‌ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು 32 ಜನರನ್ನು ಬಂಧಿಸಿ, 17.24 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಹಿನಕಲ್ ಗ್ರಾಮದ ಯಶಸ್ವಿನಿ ಕಲ್ಯಾಣಮಂಟಪದ ಬಳಿಯ ಆದಿತ್ಯ ಬಡಾವಣೆಯ ಗ್ಯಾರೇಜ್ ಹಿಂಭಾಗದ ಕೊಠಡಿಯಲ್ಲಿ ಜೂಜಾಡುತ್ತಿರುವ ಬಗ್ಗೆ ವಿಜಯನಗರ ಪೊಲೀಸರಿಗೆ ಮಾಹಿತಿ ದೊರೆತಿದೆ. ತಕ್ಷಣವೇ ವಿಜಯನಗರ ಠಾಣೆ ಪೊಲೀಸರು ಮತ್ತು ಅಪರಾಧ ವಿಭಾಗ ಘಟಕದ ಪೊಲೀಸರು ರಾತ್ರಿ ಜೂಜು ಅಡ್ಡೆಯ ಮೇಲೆ ದಿಢೀರ್ ಜಂಟಿ ಕಾರ್ಯಾಚರಣೆ ನಡೆಸಿ ಜೂಜಾಡುತ್ತಿದ್ದ 32 ಜನರನ್ನು ಬಂಧಿಸಿದರು. ಜೂಜಾಟಕ್ಕೆ ಪಣಕ್ಕಿಡಲಾಗಿದ್ದ 17.24 ಲಕ್ಷ ರೂ.ನಗದು, ಹಣವನ್ನು ಎಣಿಸುವ ಯಂತ್ರವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ, ಅಪರಾಧ ಮತ್ತು ಸಂಚಾರವಿಭಾಗದ ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ನರಸಿಂಹರಾಜ ವಿಭಾಗದ ಎಸಿಪಿ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿಜಯನಗರ ಠಾಣೆ ಇನ್‌ಸ್ಪೆಕ್ಟರ್ ಬಿ.ಎಸ್.ರವಿಶಂಕರ್, ಸಿಸಿಬಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಮೀಸಲಾತಿ ಹೆಚ್ಚಳದ ಬಗ್ಗೆ ನ್ಯಾ. ನಾಗಮೋಹನದಾಸ್ ಸಮಿತಿ ನೀಡಿದ್ದ ವರದಿಯ ಶಿಫಾರಸ್ಸನ್ನು ಯಥಾವತ್ತಾಗಿ ಒಪ್ಪಿಕೊಂಡು ಮೀಸಲಾತಿ ಹೆಚ್ಚಳ ಜಾರಿಗೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಈ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ರಾಜ್ಯದ ಪರಿಶಿಷ್ಟ ಜಾತಿ ಪಂಗಡದವರಿಗೆ ಇಂದಿನಿಂದ ಮೀಸಲಾತಿ ಹೆಚ್ಚಳವಾಗಲಿದೆ. ಪರಿಶಿಷ್ಟ ಜಾತಿ ಮೀಸಲಾತಿ ಶೇ. 15 ರಿಂದ ಶೇ. 17 ರಷ್ಟು, ಪರಿಶಿಷ್ಟ ಪಂಗಡದ ಮೀಸಲಾತಿ ಶೇ. 3ರಿಂದ ಶೇ. 7ರಷ್ಟು ಹೆಚ್ಚಳವಾಗಲಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸಿಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ: ದೀಪಾವಳಿಗೆ ಬಟ್ಟೆ ಖರೀದಿಸಿ ಊರಿಗೆ ದ್ವಿಚಕ್ರ ವಾಹನದ ಮೇಲೆ ಹೊರಟಿದ್ದಾಗ ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ 5 ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ 4ಲ್ಲಿ ನಡೆದಿದೆ. ಯಮಕನಮರಡಿ ಸಮೀಪದ ಅನಂತಪುರ ಗ್ರಾಮದ ವರ್ಧನ ಈರಣ್ಣ ಬೇಲಿ(5) ಮೃತಪಟ್ಟ ಬಾಲಕ. ಗಾಂಧಿ ನಗರದ ಹಣ್ಣಿನ ಮಾರುಕಟ್ಟೆ ಎದುರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಾಲಕನ ಕುತ್ತಿಗೆಗೆ ಗಾಳಿಪಟದ ದಾರ ಬಿಗಿದಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತಂದೆ ಈರಣ್ಣ ಅವರೊಂದಿಗೆ ವರ್ಧನ ಬೆಳಗಾವಿಗೆ ಬಟ್ಟೆ ಖರೀದಿಗೆ ಬಂದಿದ್ದನು. ನಗರದಲ್ಲಿ ಬಟ್ಟೆ ಖರೀದಿಸಿ ಬೆಳಗಾವಿಯಿಂದ ಊರಿಗೆ ಹೊರಟಾಗ ದ್ವಿಚಕ್ರ ವಾಹನದಲ್ಲಿ ಮುಂಭಾಗದಲ್ಲಿ ವರ್ಧನ ಕುಳಿತುಕೊಂಡಿದ್ದ. ಈ ವೇಳೆ ಗಾಳಿಪಟದ ದಾರ ನೇರವಾಗಿ ವರ್ಧನ ಕುತ್ತಿಗೆಗೆ ಬಿಗಿದು ಸ್ಥಳದಲ್ಲಿಯೇ ಅಸುನೀಗಿದ್ದಾನೆ. ತಂದೆ ಎಷ್ಟೇ ಪ್ರಯತ್ನಿಸಿದರೂ ಬಾಲಕ ವರ್ಧನ ಬದುಕಿ ಉಳಿಯಲಿಲ್ಲ. ಮಾಂಜಾ ಸಂಪೂರ್ಣ ನಿಷೇಧಿಸಲು ಜಿಲ್ಲಾಡಳಿತ ಹಾಗೂ ಪೊಲೀಸರು ಅಗತ್ಯ ಕ್ರಮ ಜರುಗಿಸಬೇಕು ಎಂದು ಬಾಲಕನ ಸಂಬಂಧಿಕರು ಆಗ್ರಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ…
ದಾವಣಗೆರೆ : ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಡಿಜಿಪಿಯಂತಹ ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು ಹೇಗೆ ಪ್ರಶ್ನಿಸುತ್ತಾರೆ. ಸಿಐಡಿಯಿಂದ ಸತ್ಯಾಸತ್ಯತೆ ಹೊರಬರುತ್ತದೆ ಎಂಬ ವಿಶ್ವಾಸ ನಮಗೆ ಇಲ್ಲ ಎಂದಿದ್ದಾರೆ. ಇನ್ನು ಮಹಿಳೆಗೆ ಕಪಾಳಮೋಕ್ಷ ಮಾಡಿರುವ ವಸತಿ ಸಚಿವ ವಿ.ಸೋಮಣ್ಣ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರು ಸಚಿವರಾಗಲು ನಾಲಾಯಕ್, ಜನರ ಸಂಕಷ್ಟ, ಸಮಸ್ಯೆಗಳಿಗೆ ಸ್ಪಂದಿಸುವ ತಾಳ್ಮೆ, ಸಹನೆ ಇರದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಿಜಯನಗರ: ನಗರಸಭೆ, ಗ್ರಾಮ ಪಂಚಾಯ್ತಿ ಸದಸ್ಯರಿಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ದೀಪಾವಳಿ ಭರ್ಜರಿ ಗಿಫ್ಟ್ ನೀಡಿದ್ದಾರೆ. ಬೆಳ್ಳಿ, ನಗದು, ರೇಷ್ಮೆ ಸೀರೆ ಮತ್ತು ಪಂಚೆಯನ್ನು ಉಡುಗೋರೆಯಾಗಿ ನೀಡಿದ್ದಾರೆ. ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ತನ್ನ ಕ್ಷೇತ್ರದ ನಗರಸಭೆ ಹಾಗೂ ಪಟ್ಟಣ ಪಂಚಾಯ್ತಿ ಸದಸ್ಯರು ಮತ್ತು 182 ಗ್ರಾಮ ಪಂಚಾಯ್ತಿ ಸದಸ್ಯರಿಗೆ ಬೆಳ್ಳಿ, ನಗದು, ರೇಷ್ಣೆ ಸೀರೆ, ಪಂಚೆ ನೀಡಿ, ದೀಪಾವಳಿ ಹಬ್ಬದ ಲಕ್ಷ್ಮೀ ಪೂಜೆಗೆ ಆಹ್ವಾನಿಸಿದ್ದಾರೆ. ನಗರಸಭೆ, ಪಟ್ಟಣ ಪಂಚಾಯ್ತಿ ಸದಸ್ಯರಿಗೆ ತಲಾ 1 ಲಕ್ಷದ 44 ಸಾವಿರ ರೂ ನಗದು, 144 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ, ರೇಷ್ಣೆ ಸೀತಿ, ಪಂಚೆ, ಅಂಗಿ, ಮುತ್ತಿನ ಹಾರ ಹಾಗೂ ಡ್ರೈ ಪ್ರೂಟ್ಸ್ ನೀಡಿದ್ದಾರೆ. ಇನ್ನೂ 182 ಗ್ರಾಮ ಪಂಚಾಯ್ತಿ ಸದಸ್ಯರಿಗೆ ಅರ್ಧ ಕೆಜಿ ಬೆಳ್ಳಿ, 27 ಸಾವಿರ ನಗದು, ರೇಷ್ಮೆ ಸೀರೆ, ಪಂಚೆ, ರೇಷ್ಮೆ ಶರ್ಟ್, ಮುತ್ತಿನ ಹಾರ ಮತ್ತು ಡ್ರೈ ಪ್ರೂಟ್ಸ್ ನೀಡಿ, ದೀಪಾವಳಿ ಹಬ್ಬದ ಲಕ್ಷ್ಮೀ…