Author: admin

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬಂದಿದೆ, ದೀಪಾವಳಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ. ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ನಡೆಸಿದ ಬಳಿಕ ಸಂಪುಟ ವಿಸ್ತರಣೆಯಾಗಲಿದೆ. ಸಂಪುಟ ವಿಸ್ತರಣೆ ವಿಚಾರ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಆಸೆ ಮತ್ತೆ ಚಿಗುರೊಡೆದಿದ್ದು, ಲಾಭಿ ಆರಂಭವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ಒಂದೆಡೆ ಮಳೆ ಆರ್ಭಟದಿಂದ ಬೆಳೆ ನಷ್ಟ ಮತ್ತು ಮೇವಿನ ತೊಂದರೆ ಅನುಭವಿಸುತ್ತಿರುವ ತಾಲ್ಲೂಕಿನ ರೈತರಿಗೆ ಗಾಯದ ಮೇಲೆ ಬರೆ ಎಂಬಂತೆ ಜೀವನಾಡಿ ರಾಸುಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ರಾಸುಗಳಿಗೆ ಚರ್ಮಗಂಟು ರೋಗ  ಕಾಣಿಸಿಕೊಂಡಿರುವುದು ತಾಲ್ಲೂಕಿನ ರೈತಾಪಿ ವರ್ಗಕ್ಕೆ ಮತ್ತೊಂದು ಆಘಾತವಾಗಿದೆ. ಕೊರಟಗೆರೆ ಪಶುಪಾಲನಾ ಇಲಾಖೆಯ ಮಾಹಿತಿಯಂತೆ ಅ-22 ರ ದೈನಂದಿನ ಮಾಹಿತಿ ಪ್ರಕಾರ ರೋಗ ಕಂಡುಬಂದ ಗ್ರಾಮಗಳ ಒಟ್ಟು ಸಂಖ್ಯೆ 51, ರೋಗಕ್ಕೆ ತುತ್ತಾದ ಜಾನುವಾರುಗಳ ಸಂಖ್ಯೆ 100, ಚಿಕಿತ್ಸೆಯಿಂದ ಗುಣಮುಖ ಹೊಂದಿದ ಜಾನುವಾರುಗಳ ಸಂಖ್ಯೆ 26, ರೋಗದಿಂದ ಮರಣ ಹೊಂದಿದ ಜಾನುವಾರುಗಳ ಸಂಖ್ಯೆ 4 , ಇದುವರೆಗೆ IAH  ಹಾಗೂ VB ಯಿಂದ ಸರಬರಾಜಾದ ಲಸಿಕೆ ಪ್ರಮಾಣ ಸಂಖ್ಯೆ  ( ಡೋಸ್ ) 7.000 , ಲಸಿಕೆ ಹಾಕಿದ ಜಾನುವಾರುಗಳ ಸಂಖ್ಯೆ 5899  ಆಗಿದೆ .ಎಂದು ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರಾದ ಡಾ.ಸಿದ್ದನಗೌಡ ಮಾಹಿತಿ ನೀಡಿದ್ದಾರೆ.  ರೋಗದ ಲಕ್ಷಣಗಳು ಕಂಡುಬರುವುದು ಹೇಗೆ? ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು…

Read More

ಎನರ್ಜಿ ಡ್ರಿಂಕ್ ಕಂಪನಿ ರೆಡ್ ಬುಲ್‌ ಸಂಸ್ಥಾಪಕ ಡೈಟ್ರಿಚ್ ಮಾಟೆಸ್ಚಿಟ್ಜ್ (78) ನಿವಾರ ಕೊನೆಯುಸುರೆಳೆದಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ (ಕ್ಯಾನ್ಸರ್‌) ಬಳಲುತ್ತಿದ್ದ ಡೀಟ್ರಿಚ್ ಅವರು ಶನಿವಾರ ನಿಧನರಾಗಿದ್ದಾರೆ. ಸ್ಟೈರಿಯನ್ ಮೂಲದ ಉದ್ಯಮಿ ಡೈಟ್ರಿಚ್ ರೆಡ್ ಬುಲ್ ಸುತ್ತಲೂ ಜಾಗತಿಕ ಸಾಮ್ರಾಜ್ಯವನ್ನು ನಿರ್ಮಿಸಿದರು ಮತ್ತು ಆಸ್ಟ್ರಿಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂದು ಪರಿಗಣಿಸಲ್ಪಟ್ಟರು. ಮಾಟೆಸ್ಚಿಟ್ಜ್ ಸಂಪತ್ತು ಸುಮಾರು 25 ಬಿಲಿಯನ್ ಯುರೋಗಳು ($24.65 ಬಿಲಿಯನ್) ಎಂದು ಅಂದಾಜಿಸಲಾಗಿದೆ. ಇದು ವಿಶ್ವದ ಶ್ರೀಮಂತ ವ್ಯಕ್ತಿಗಳ ಫೋರ್ಬ್ಸ್ ಪಟ್ಟಿಯಲ್ಲಿ 51 ನೇ ಸ್ಥಾನದಲ್ಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇಂದು ಮೂರನೇ ಅವಧಿಗೆ ಅಧಿಕಾರವನ್ನು ಪಡೆದು ಐತಿಹಾಸಿಕ ಮೈಲಿಗಲ್ಲು ಬರೆದಿದ್ದಾರೆ. ಕ್ಸಿ ಜಿನ್‌ಪಿಂಗ್ ಮತ್ತೆ ಆಡಳಿತ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದಾರೆ. ಸಂಸ್ಥಾಪಕ ಮಾವೋ ಝೆಡಾಂಗ್ ನಂತರ ರಾಷ್ಟ್ರದ ಅತ್ಯಂತ ಪ್ರಭಾವಶಾಲಿ ನಾಯಕರಾಗಿದ್ದಾರೆ. ಕ್ಸಿ ಜಿನ್‌ಪಿಂಗ್ ಅವರು ರೆಕಾರ್ಡ್-ಬ್ರೇಕಿಂಗ್ ಮೂರನೇ ಅವಧಿಗೆ ತಮ್ಮ ಮುಖ್ಯ ಪೋಷಕ ತಂಡವನ್ನು ಅನಾವರಣಗೊಳಿಸಿದ್ದಾರೆ. ನಮ್ಮ ಮೇಲೆ ಇಟ್ಟಿರುವ ನಂಬಿಕೆಗಾಗಿ ನಾನು ಇಡೀ ಪಕ್ಷಕ್ಕೆ ಪ್ರಾಮಾಣಿಕವಾಗಿ ಧನ್ಯವಾದ ಹೇಳಲು ಬಯಸುತ್ತೇನೆ. ನಮ್ಮ ಪಕ್ಷ ಮತ್ತು ನಮ್ಮ ಜನರ ದೊಡ್ಡ ನಂಬಿಕೆಗೆ ಅರ್ಹರೆಂದು ಸಾಬೀತುಪಡಿಸಲು ಶ್ರದ್ಧೆಯಿಂದ ಕೆಲಸ ಮಾಡಲಿದೆ ಎಂದು ಕ್ಸಿ ಜಿನ್‌ಪಿಂಗ್ ಭರವಸೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕಬ್ಬು ದರ ನಿಗದಿ ರಾಜ್ಯ ಸರ್ಕಾರದ ವಿಳಂಬ ನೀತಿ ವರ್ತನೆ ಖಂಡಿಸಿ ರಾಜ್ಯಾದ್ಯಂತ 27 ರಂದು ರಸ್ತೆ ತಡೆ ಚಳವಳಿ ನಡೆಸಲಾಗುತ್ತದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಕಬ್ಬಿನ ಎಫ್ ಆರ್ ಪಿ ದರಕ್ಕೆ ಹೆಚ್ಚುವರಿ ದರ ನಿಗದಿಪಡಿಸಲು ಮಂತ್ರಿಗಳು ನಾಲ್ಕು ಸಭೆಗಳನ್ನು ನಡೆಸಿ ಯಾವುದೇ ತೀರ್ಮಾನ ಕೈಗೊಳ್ಳದೆ ಮುಂದೂಡುತ್ತಿದ್ದಾರೆ. ಇದು ಕಬ್ಬು ಬೆಳೆದ ರೈತರಿಗೆ ಬಗೆದ ದ್ರೋಹವಾಗಿದೆ. ರಾಜ್ಯದ ಕಬ್ಬು ಬೆಳೆಗಾರ ರೈತರು ನಾಲ್ಕು ತಿಂಗಳಿಂದಲೂ ಹೋರಾಟ ನಡೆಸುತ್ತಿದ್ದರು ಯಾವುದೇ ಎಂಎಲ್ಎ, ಎಂಪಿ ,ಮಂತ್ರಿಗಳು, ಈ ಬಗ್ಗೆ ಮಾತನಾಡದೆ ಇರುವುದು ಅನುಮಾನ ಉಂಟು ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 30 ಲಕ್ಷ ಕಬ್ಬು ಬೆಳೆಗಾರರ 40,000 ಕೋಟಿ ವೈಹಿವಾಟು ನಡೆಸುವ ಈ ಉದ್ಯಮ ಸರ್ಕಾರಕ್ಕೆ ಲಾಭ ತರುತ್ತಿಲ್ಲವೇ? 5000 ಕೋಟಿ ವ್ಯವಹಾರ ನಡೆಸುವ ಅಡಿಕೆ ಬೆಳೆಗಾರರ ಬಗ್ಗೆ ಕೇಂದ್ರಕ್ಕೆ ನಿಯೋಗ ಹೋಗಿ ಮನವಿ ಮಾಡುವ ರಾಜ್ಯದ ಗೃಹ ಸಚಿವರಿಗೆ ಹಾಗೂ ಎಂಪಿಗಳಿಗೆ…

Read More

ಭಾರತೀಯ ನೋಟುಗಳ ಮೇಲೆ ಮಹಾತ್ಮಗಾಂಧೀಜಿ ಭಾವಚಿತ್ರದ ಬದಲು ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಫೋಟೊ ಹಾಕಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಆಗ್ರಹಿಸಿದೆ. ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಸುಭಾಷ್‌ ಚಂದ್ರ ಬೋಸ್‌ ಅವರ ಪಾತ್ರ ಮಹಾತ್ಮಾ ಗಾಂಧೀಜಿಗಿಂತ ಕಡಿಮೆ ಏನಿಲ್ಲ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಅವರಿಗಂತ ಸುಭಾಷ್‌ ಚಂದ್ರ ಬೋಸ್‌ ಅವರ ಹೋರಾಟ ಕಡಿಮೆ ಏನಿಲ್ಲ. ಹಾಗಾಗಿ ಅವರ ಭಾವಚಿತ್ರವನ್ನು ನೋಟುಗಳ ಮೇಲೆ ಮುದ್ರಿಸುವ ಮೂಲಕ ಅವರಿಗೂ ಗೌರವ ಸಲ್ಲಿಸಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಪಶ್ಚಿಮ ಬಂಗಾಳದ ರಾಜ್ಯ ಕಾರ್ಯಧ್ಯಕ್ಷ ಚಂದ್ರಚೂಡ್‌ ಗೋಸ್ವಾಮಿ ತಿಳಿಸಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾದ ಹೊಸ ವಾದಕ್ಕೆ ಕಾಂಗ್ರೆಸ್‌ ಮತ್ತು ತೃಣಮೂಲ ಕಾಂಗ್ರೆಸ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಜನರ ದಿಕ್ಕು ತಪ್ಪಿಸಲು ಇಂತಹ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಆಸ್ತಿ ಕಬಳಿಸುವ ಉದ್ದೇಶದಿಂದ ಗ್ಯಾಂಗ್ ರೇಪ್ ಕತೆ ಕಟ್ಟಿದ ಮಹಿಳೆ ಹಾಗೂ ಮೂವರು ಸಹಚರರನ್ನು ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಮೂಲದ ಮಹಿಳೆ ಹಾಗೂ ಆಕೆಗೆ ಸಹಕರಿಸಿದ ಆಜಾದ್, ಅಫ್ಜಲ್ ಮತ್ತು ಗೌರವ್ ಬಂಧಿತರು. ಐವರು ನನ್ನನ್ನು ಅಪಹರಿಸಿ ಎರಡು ದಿನಗಳ ಕಾಲ ಗ್ಯಾಂಗ್ ರೇಪ್ ಮಾಡಿದರು ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ಭೇದಿಸಿದ ಪೊಲೀಸರು ಮಹಿಳೆಯ ಮೇಲೆ ವಂಚನೆ ಹಾಗೂ ನಕಲಿ ಸಹಿ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. 36 ವರ್ಷದ ಮಹಿಳೆ ಬ್ಯಾಗ್ ನಲ್ಲಿ ಕೈಕಾಲು ಕಟ್ಟಿದ ಪರಿಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಗುಪ್ತಾಂಗಕ್ಕೆ ರಾಡ್ ಇರಿಸಲಾಗಿತ್ತು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಳಿವಾಳ್ ಹೇಳಿದ್ದರು. ಆದರೆ ಪೊಲೀಸರು ಅವರ ಹೇಳಿಕೆಯನ್ನು ತಿರಸ್ಕರಿಸಿದ್ದಾರೆ. ಮಹಿಳೆ ಆರೋಪ ಮಾಡಿದ ನಾಲ್ವರ ವಿರುದ್ಧ ಕ್ಲೀನ್ ಚಿಟ್ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಅವರ ವಿರುದ್ಧ ಯಾವುದೇ…

Read More

ಕೊರಟಗೆರೆ: ಠಾಣೆಗೆ ಬಂದ ಖಚಿತ ಮಾಹಿತಿ ಆಧಾರದ ಮೇಲೆ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ  ಸಿದ್ದರಾಜುರವರ ಜಮೀನಿನ ಬಳಿ ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು  ಬಂಧಿಸಿದ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಸುಮಾರು ಏಳರಿಂದ ಎಂಟು ಜನ‌ ಆರೋಪಿಗಳು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟು ಎಲೆಗಳ ಸಹಾಯದಿಂದ ಅಂದರ್ ಬಾಹರ್ ಎಂದು ಗುಂಪು ಗೂಡಿಕೊಂಡು ಜೂಜಾಟವಾಡುತ್ತಿದ್ದವರ  ಮೇಲೆ ಶನಿವಾರ ಸಂಜೆ 3 ಗಂಟೆಯ ಸಮಯದಲ್ಲಿ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದ ಅಸಾಮಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಅಖಾಡದಲ್ಲಿದ್ದ ಮಾಲುಗಳಾದ 10140 ನಗದು ಹಣ, 8 ಮೊಬೈಲ್ ಪೋನ್, 6 ದ್ವಿಚಕ್ರ ವಾಹನನ, 52  ಇಸ್ಪೀಟು ಕಾರ್ಡ್ಸ್, 1 ಪ್ಲಾಸ್ಟಿಕ್ ಪೇಪರ್ ನ್ನು ವಶಪಡಿಸಿಕೊಳ್ಳುವಲ್ಲಿ ಪಿಎಸ್ಐ ಚೇತನ್ ಕುಮಾರ್.ಜಿ ಅವರ ತಂಡ ಸದಸ್ಯರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದ್ದು, ಸಿಪಿಐ ಸುರೇಶ್ ಕೆ. ಹಾಗೂ ಪಿಎಸ್ ಐ ಚೇತನ್ ಕುಮಾರ್ ಜಿ., ಹೆಚ್ಚಿನ ತನಿಖೆ…

Read More

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಕಪಾಳಕ್ಕೆ ಹೊಡೆದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸಮಯದ ಬೆಲೆ ಗೊತ್ತಿಲ್ಲದ ಸಚಿವ ಸಂಜೆ ವಿ. ಸೋಮಣ್ಣ 6:30 ಕ್ಕೆ ಸಚಿವರು ಆಗಮಿಸಿದ್ದಾರೆ. ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ತನ್ನ ಸಮಸ್ಯೆ ಹೇಳಿಕೊಳ್ಳಲು ಮಹಿಳೆ ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳ ಹೊಡೆದಿದ್ದಾರೆ. ಘಟನೆ ನಂತರ ಪರಿಸ್ಥಿತಿಯನ್ನ ಪೊಲೀಸರು ತಿಳಿಗೊಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ದಾವಣಗೆರೆ: ಅರ್ಚಕರೊಬ್ಬರು ದೇವರಿಗೆ ವಿಚಿತ್ರ ಪೂಜೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಶಾಸಕ ಎಂಪಿ. ರೇಣುಕಾಚಾರ್ಯ ಕ್ಷೇತ್ರ ಹೊನ್ನಾಳಿ ತಾಲೂಕು ಕತ್ತಿಗೆ ಗ್ರಾಮದಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ. ದೇವರ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುವ ಮೂಲಕ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ಮಹೇಶ್ವರಯ್ಯ ಎಂಬ ಅರ್ಚಕ ವಿಚಿತ್ರ ಪೂಜೆಯಿಂದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೇಡರ ಕಣ್ಣಪ್ಪ ಶಿವನಿಗೆ ಒಂದು ಕಣ್ಣು ದಾನ ಕೊಟ್ಟು ಇನ್ನೊಂದು ಕಣ್ಣು ಕೊಡಲು ಶಿವಲಿಂಗದ ಮೇಲೆ ಕಾಲಿಡುವಂತೆ ಈ ಅರ್ಚಕ ಮಹೇಶ್ವರಯ್ಯ, ಆಂಜನೇಯ ಸ್ವಾಮೀ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುತ್ತಾರೆ. ಅರ್ಚಕನ ಪೂಜೆ ವಿಧಾನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಅನೇಕರು ಆಕ್ರೋಶ ಹೊರ ಹಾಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More