Author: admin

ಮೃತ್ಯು ಪತ್ರ ಯಾರು ಬರೆಯಬಹುದು ..? ಮೃತ್ಯು ಪತ್ರ ರದ್ದು ಪಡಿಸಬಹುದೆ..? ಯಾವ ವ್ಯಕ್ತಿ ಯಾವ ಆಸ್ತಿಯ ಉಯಿಲು ಮಾಡಬಹುದು..? ಯಾರು ವಿಶೇಷ ಮೃತ್ಯ ಪತ್ರ ಬರೆಯಬಹುದು..? ಮನಸ್ಸಿದ್ದಲ್ಲಿ ಮಾರ್ಗ, ಉಯಿಲಿದ್ದಲ್ಲಿ ನೆಂಟ.’ ಇದು ಹಿರಿಯರ ಮಾತು. ಒಬ್ಬ ವ್ಯಕ್ತಿ, ತಾನು ಸಂಪಾದಿಸಿದ ಆಸ್ತಿಯನ್ನು, ತನ್ನ ಮರಣಾನಂತರ ಅದು ಯಾರಿಗೆ ಹೋಗಬೇಕು ಎಂದು ಮನಸ್ಸು ಮಾಡಿ ನಿರ್ಧಾರ ತಾಳಿ, ಮನಸ್ಸಿನ ಆ ನಿರ್ಧಾರದಂತೆ ಬರೆದಿಡುವ ಒಂದು ದಾಖಲೆ ಮೃತ್ಯು ಪತ್ರವನ್ನು ಅಥವಾ ಉಯಿಲು ಪತ್ರ ಎಂತಲೂ ಕರೆಯುತ್ತಾರೆ ಆಂಗ್ಲ ಭಾಷೆಯಲ್ಲಿ will deed ಎಂತಲೂ ಕರೆಯುತ್ತಾರೆ ಒಬ್ಬ ವ್ಯಕ್ತಿಯು ತಾನು ಮರಣಾನಂತರ ತನ್ನ ಆಸ್ತಿಯ ವಿಲೇವಾರಿಗೆ ಸಂಬಂಧಿಸಿದಂತೆ ಇರುವ ತನ್ನ ಅಪೇಕ್ಷೆಯನ್ನು ಅಥವಾ ಇಚ್ಛೆಯನ್ನು ತಿಳಿಸಿ ಕಾನೂನಿನನ್ವಯ ಮಾಡುವ ಘೋಷಣೆಯೇ ಉಯಿಲು ಅಥವಾ ಮೃತ್ಯುಪತ್ರ ಎಂಬುದಾಗಿ ಭಾರತೀಯ ವಾರಸಾ ಅಧಿನಿಯಮ, 1925 Indian Succession Act, 1925 ದ ಕಲಂ 2ಎಚ್ ರ ಅಡಿಯಲ್ಲಿ ವ್ಯಾಖ್ಯಾನಿಸಲಾಗಿದೆ. ಇದರ ಅನ್ವಯ ಉಯಿಲು(ಮೃತ್ಯು ಪತ್ರ)…

Read More

ತುಮಕೂರು: ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣವಾಗಿ ನೆಲಕಚ್ಚಿದ್ದು, ಈ ಮೂಲಕ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಮಳೆಗೆ ನಾಶವಾದ ಬೆಳೆಗಳಲ್ಲಿ ಅಳಿದುಳಿದ ಬೆಳೆಗಳ ಕಟಾವಿನಲ್ಲಿ ರೈತರು ತೊಡಗಿದ್ದಾರೆ. ಆದರೆ, ವರ್ಷಪೂರ್ತಿ ಜಾನುವಾರುಗಳಿಗೆ ಸಾಕಾಗುವಷ್ಟು ಮೇವು ಮಾತ್ರ ರೈತರಿಗೆ ಸಿಗುತ್ತಿಲ್ಲ. ಇದರ ನಡುವೆ ಒಣ ಮೇವಿನ ಬೆಲೆಯಲ್ಲಿ ಏರಿಕೆಯಾಗಿದೆ ಎನ್ನಲಾಗಿದೆ. ಮೇವಿನ ಕೊರತೆಯಿಂದಾಗಿ ಹಳ್ಳಿಗಳಿಂದ ನಗರಕ್ಕೆ ಮೇವು ತಂದು ಮಾರಾಟ ಮಾಡಿ ಅದರಿಂದಲೇ ಬದುಕು ಸಾಗಿಸುತ್ತಿದ್ದವರ ಜೀವನ ಅತಂತ್ರವಾಗಿದೆ. ಹೀಗಾಗಿ ಕೇವಲ ಗ್ರಾಮೀಣ ಪ್ರದೇಶದಲ್ಲಿ ಮಾತ್ರವಲ್ಲದೇ ನಗರ ಪ್ರದೇಶಗಳಲ್ಲಿಯೂ ಜಾನುವಾರು ಸಾಕಣೆ ನಡೆಸುತ್ತಿರುವವರಿಗೆ ಇದೊಂದು ಸಮಸ್ಯೆಯಾಗಿ ಪರಿಣಮಿಸಲಿದೆ ಎಂದು ಹೇಳಲಾಗುತ್ತಿದೆ. ಸದ್ಯ ಎಲ್ಲೆಡೆ ಎದುರಾದ ಅಕಾಲಿಕ ಮಳೆಗೆ ಅಲ್ಪ  ಪ್ರಮಾಣದಲ್ಲಿರುವ ಜಾನುವಾರುಗಳಿಗೆ ಮೇವು ಒದಗಿಸಲು ಆಗದ ಪರಿಸ್ಥಿತಿಯಲ್ಲಿ ರೈತರು ಬದುಕು ಸಾಗಿಸುತ್ತಿದ್ದಾರೆ. ಇತ್ತ ಬೆಳೆದ ಫಸಲು ಕೈ ಸೇರಲಿಲ್ಲ. ಅತ್ತ ಜಾನುವಾರುಗಳಿಗೆ ಮೇವು ಸಿಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಶುಸಂಗೋಪನೆ ಮತ್ತು ಕೃಷಿ ಇಲಾಖೆ ರೈತರ ನೆರವಿಗೆ ನಿಲ್ಲುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಮೇವಿಗೆ…

Read More

ತುಮಕೂರು: ನಗರದಲ್ಲಿ ಸುಮಾರು 14 ಎಕರೆ ವಕ್ಫ್ ಆಸ್ತಿ ಖಾಲಿ ಇದೆ. ಅದರಲ್ಲಿ ಬೃಹತ್ ಶಿಕ್ಷಣ ಸಂಸ್ಥೆ ಪ್ರಾರಂಭಿಸಿ, ಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ರಾಜ್ಯ ವಕ್ಫ್ ಬೋರ್ಡ್‌ ಅಧ್ಯಕ್ಷ ಮೌಲಾನಾ ಶಾಫಿ ಸಆದಿ ಹೇಳಿದರು. ರಾಜ್ಯ ಮುಸ್ಲಿಂ ಜಮಾಆತೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಯಾವುದೇ ಪ್ರತಿಭಾನ್ವಿತ ಮಗು, ಶುಲ್ಕದ ವಿಚಾರದಲ್ಲಿ ಉನ್ನತ ಶಿಕ್ಷಣದಿಂದ ವಂಚಿತವಾಗಬಾರದು. ಸಮುದಾಯದ ಸಮಗ್ರ ಅಭಿವೃದ್ದಿಯ ಕನಸು ಹೊತ್ತಿರುವ ರಾಜ್ಯ ವಕ್ಫ್ ಬೋರ್ಡ್, ಪ್ರಮುಖವಾಗಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದರು. ವಕ್ಫ್ ಬೋರ್ಡ್‌ನಿಂದ ಬೆಂಗಳೂರಲ್ಲಿ ಅತ್ಯಾಧುನಿಕ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಆರಂಭಿಸಿ ಐಎಎಸ್, ಐಪಿಎಸ್ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ರೂ. 10 ಕೋಟಿ ಮೀಸಲಿರಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಕ್ಫ್ ಬೋರ್ಡ್‌ ಕಾರ್ಯದರ್ಶಿ ಆರೀಫ್ ರಾಜ, ಮುಖಂಡರಾದ ಎಸ್.ಷಫಿ ಅಹಮದ್, ಇಕ್ಬಾಲ್ ಅಹಮದ್, ಜಮಾಲ್,…

Read More

ಪಾವಗಡ: 3  ಕೃಷಿ ಕಾಯ್ದೆಗಳನ್ನು ಹಿಂಪಡೆದು, ರೈತರು ಪ್ರತಿಭಟನೆ ಕೈಬಿಟ್ಟ ಹಿನ್ನಲೆಯಲ್ಲಿ ರೈತ ಸಂಘ, ಪ್ರಗತಿಪರ ಸಂಘಟನೆ ಪದಾಧಿಕಾರಿಗಳು ಶನಿವಾರ ಪಟ್ಟಣದ ಅಂಬೇಡ್ಕರ್ ವಿಗ್ರಹಕ್ಕೆ ಮಾಲಾರ್ಪಣೆ ಮಾಡಿ ವಿಜಯೋತ್ಸವ ಆಚರಿಸಿದವು. ಈ ವೇಳೆ ಮಾತನಾಡಿದ ಪ್ರಗತಿಪರ ವೇದಿಕೆ ಮುಖಂಡ ರಾಮಾಂಜಿನಪ್ಪ, ಕೇಂದ್ರ ಸರ್ಕಾರ ರೈತರ ಮೇಲೆ ಬಲವಂತವಾಗಿ ಹೇರಲು ಹೊರಟಿದ್ದ ಕೃಷಿ ಕಾಯ್ದೆ ಹಿಂಪಡೆದಿರುವುದು ರೈತರ ಹೋರಾಟಕ್ಕೆ ಸಿಕ್ಕ ಜಯ ಎಂದರು. ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಮಾತನಾಢಿ, ವರ್ಷದಿಂದ ದೆಹಲಿಯಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡು, ಸುಮಾರು 700 ರೈತರು ಬಲಿದಾನ ಮಾಡಿದ್ದಾರೆ. ಇವರ ತ್ಯಾಗದ ಫಲವಾಗಿ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಹಿಂಪಡೆದಿದೆ. ವಿಶ್ವದ ಹಸಿವು ತಣಿಸುವ ರೈತರ ಬಗ್ಗೆ ಸರ್ಕಾರಗಳು ತಾತ್ಸಾರ ಮಾಡಬಾರದು ಎಂದರು. ಈ ಸಂದರ್ಭದಲ್ಲಿ ಮುಖಂಡ ಕೃಷ್ಣಮೂರ್ತಿ, ಮಂಜುನಾಥ್, ಸತ್ಯಲೋಕೇಶ್, ನೇರಳೆಕುಂಟೆ ನಾಗೇಂದ್ರ ಕುಮಾರ್ ಅಭಿಮಾನಿ ಬಳಗದ ಕಿರಣ್ ಮಾತನಾಡಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ:…

Read More

ತುಮಕೂರು: ಶಾಲಾ ಮಕ್ಕಳಿಗೆ ಬಿಸಿಯೂಟದ ಜತೆ ಮೊಟ್ಟೆ ಕೊಡುವ ಯೋಜನೆಯನ್ನು ಸರ್ಕಾರ ಕೈಬಿಡಬಾರದು. ಯಾರ ಒತ್ತಡಕ್ಕೂ ಮಣಿಯಬಾರದು ಎಂದು ಬಹುಜನ ಸಮಾಜ ಪಕ್ಷ (ಃSP) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಗುರುಮೂರ್ತಿ ಇಲ್ಲಿ ಶನಿವಾರ ಆಗ್ರಹಿಸಿದ್ದಾರೆ. ಅಪೌಷ್ಟಿಕತೆ ಇರುವ ಮಕ್ಕಳಿಗೆ ಮೊಟ್ಟೆ ನೀಡುವುದು ಕಡ್ಡಾಯವಾಗಿದೆ. ಆದರೆ ಕೆಲ ಮಠಾಧೀಶರು ಮತ್ತು ಮನುವಾದಿಗಳು ಮಕ್ಕಳಿಗೆ ಮೊಟ್ಟೆ ಕೊಡುವುದನ್ನು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ತರುತ್ತಿರುವುದು ಖಂಡನೀಯ ಎಂದು ಅವರು ಹೇಳಿದರು. ಕೇವಲ ಮೊಟ್ಟೆ ಮಾತ್ರವಲ್ಲ, ಜತೆಗೆ ವಾರಕ್ಕೆ ಎರಡು ದಿನ ಮಾಂಸ ನೀಡಬೇಕು. ಒತ್ತಡಕ್ಕೆ ಮಣಿದು ಮೊಟ್ಟೆ ಕೊಡುವುದನ್ನು ನಿಲ್ಲಿಸಿದರೆ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು ಬಿಎಸ್ಪಿ ರಾಜ್ಯ ಘಟಕದ ಖಜಾಂಚಿ ಕೆ.ಸಿ.ಹನುಮಂತರಾಯಪ್ಪ, ರುದ್ರಪ್ಪ, ರಾಜ್ಯ ಘಟಕದ ಕಾರ್ಯದರ್ಶಿ ಸೂಲಯ್ಯ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಂಗಧಾಮಯ್ಯ, ಮುಖಂಡರಾದ ಸಿದ್ಧಲಿಂಗಯ್ಯ, ರಂಗಯ್ಯ, ಮಂಜುನಾಥ್ ಉಪಸ್ಥಿತರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417…

Read More

ಗುಂಡ್ಲುಪೇಟೆ: ತಾಲೂಕಿನ ಗೋಪಾಲಪುರ ಗ್ರಾಮದ ಕಬ್ಬಿಣ ಕೋಲೇಶ್ವರ ಮಠದ ಕಿರಿಯ ಮಠಾಧೀಶ ಇಮ್ಮಡಿ ಗುರುಮಲ್ಲಸ್ವಾಮೀಜಿ ಅವರು ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ನಡೆದಿದೆ. ಮಠದ ಜಮೀನಿನಲ್ಲಿ ಕೃಷಿ ಕಾರ್ಮಿಕರೊಂದಿಗೆ ಕಳೆ ಕೀಳುತ್ತಿದ್ದಾಗ ಹಾವು ಶ್ರೀಗಳ ಪಾದದ ಬಳಿ ಕಚ್ಚಿದೆ. ಚಿಕಿತ್ಸೆ ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ವಾಮೀಜಿಗಳ ನಿಧನಕ್ಕೆ ಶಾಸಕ ಸಿ.ಎಸ್.ನಿರಂಜನಕುಮಾರ್, ಕಾಂಗ್ರೆಸ್ ಮುಖಂಡ ಹೆಚ್.ಎಂ.ಗಣೇಶಪ್ರಸಾದ್, ಚಾಮುಲ್ ಅಧ್ಯಕ್ಷ ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಹೆಚ್.ಎಸ್.ನಂಜಪ್ಪ ಸೇರಿದಂತೆ ಇನ್ನಿತರ ಸಂತಾಪ ಸೂಚಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಳಗಾವಿ: ಡಿಸೆಂಬರ್ 13ರಿಂದ(ನಾಳೆ) ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು,  ಈ ಸಂಬಂಧ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಕೋವಿಡ್ ಮಾರ್ಗಸೂಚಿಯಂತೆ ಅಧಿವೇಶನ ನಡೆಯಲಿದೆ. ಸುಗಮವಾಗಿ ಕಲಾಪ ನಡೆಯುವ ವಿಶ್ವಾಸವಿದ್ದು, ಎಲ್ಲಾ ಶಾಸಕರು ಕಲಾಪದಲ್ಲಿ ಭಾಗವಹಿಸಲು ಎಂದು ಹೇಳಿದ್ದಾರೆ. ನಿಯಮಾನುಸಾರ ಎಲ್ಲರಿಗೂ ಮಾತನಾಡಲು ಅವಕಾಶ ನೀಡಲಾಗುತ್ತದೆ. ಎಲ್ಲ ಶಾಸಕರು ಅಧಿವೇಶನದಲ್ಲಿ ಭಾಗಿಯಾಗಬೇಕೆಂದು ಎಲ್ಲ ಪಕ್ಷಗಳ ಶಾಸಕರಿಗೆ ಸ್ಪೀಕರ್ ಮನವಿ ಮಾಡಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಗುಬ್ಬಿ:  ತಾಲೂಕಿನ ಜಿಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೆರೆ ಗ್ರಾಮದ ಎ.ಕೆ.ಕಾಲೋನಿಯಲ್ಲಿ ಇರುವ ವಿದ್ಯುತ್ ಪರಿವರ್ತಕವನ್ನು ಬೇರೆಡೆಗೆ ವರ್ಗಾಯಿಸುವಂತೆ ಇಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ. ಸುಮಾರು 15 ವರ್ಷಗಳಿಂದ ಬಹಳಷ್ಟು ಸಾರಿ ಈ ಬಗ್ಗೆ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಈ ಪರಿವರ್ತಕ ಜನ ವಸತಿ ಪ್ರದೇಶದಲ್ಲಿಯೇ ಇದ್ದು, ಇದಕ್ಕೆ  ಯಾವುದೇ ತಡೆಗೋಡೆ ಇಲ್ಲ. ಇದೇ ಪ್ರದೇಶದಲ್ಲಿ ಸ್ಥಳೀಯ ಮಕ್ಕಳು ಆಟವಾಡುತ್ತಿರುತ್ತಾರೆ. ಜನರು ಇದೇ ಪ್ರದೇಶದಲ್ಲಿ ಸುತ್ತಾಡುತ್ತಿರುತ್ತಾರೆ. ನಾಳೆ ಯಾವುದಾದರೂ ಪ್ರಾಣ ಹಾನಿಯಾದರೆ ಯಾರು ಜವಾಬ್ದಾರಿ ಎಂದು ಇಲ್ಲಿನ ನಿವಾಸಿಗಳು ಪ್ರಶ್ನಿಸುತ್ತಿದ್ದಾರೆ. ಈ ವಿದ್ಯುತ್ ಪರಿವರ್ತಕವನ್ನು ಬೇರೆಡೆಗೆ ವರ್ಗಾಯಿಸುವಂತೆ ಬೆಸ್ಕಾಮ್ ಅಧಿಕಾರಿಗಳಿಗೆ ಸುಮಾರು 15 ವರ್ಷಗಳಿಂದ ಬಹಳಷ್ಟು ಸಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಪರಿವರ್ತಕಕ್ಕೇ ಯಾವುದೇ ತಡೆಗೋಡೆ ಇಲ್ಲದೆ ಬಲಿಗಾಗಿ ಕಾಯುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಈ ಪರಿವರ್ತಕ ಬದಲಾಯಿಸದೆ ಇದ್ದರೆ,  ಗ್ರಾಮಸ್ಥರ ಜೊತೆಗೂಡಿ ಬೆಸ್ಕಾಂ ಕಚೇರಿ ಮುಂದೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ…

Read More

ಬೆಳಗಾವಿ: ಕಳೆದ ಎರಡು ವರ್ಷಗಳ‌ ನಂತರ ನಡೆಯುತ್ತಿರುವ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಬರದ ಸಿದ್ದತೆ ನಡೆದಿದ್ದು, ನಗರ ಸ್ವಚ್ಚತೆಗೆ ಮಹಾನಗರ ಪಾಲಿಕೆ ತೊಡಗಿಸಿಕೊಂಡಿದೆ. ಜೊತೆಗೆ ಪೊಲೀಸ್ ಇಲಾಖೆ ಕೂಡಾ ಸಕಲ ಸಿದ್ದತೆ ಮಾಡಿಕೊಂಡಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದೆ. ನಗರದ ಸುವರ್ಣಸೌಧದಲ್ಲಿ ನಡೆಯಲಿರುವ ಅಧಿವೇಶನಕ್ಕೆ ಈಗಾಗಲೇ ಬೆಂಗಳೂರಿನ ಸಚಿವಾಲಯಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಬೆಳಗಾವಿಗೆ ಸ್ಥಳಾಂತರವಾಗುತ್ತಿದ್ದು ಜಿಲ್ಲಾ ಮಟ್ಟದಲ್ಲಿಯೂ ಹಲವು ಏರ್ಪಾಡು ಮಾಡಿಕೊಳ್ಳಲಾಗುತ್ತಿದೆ. ಸಂಪೂರ್ಣ ಅಧಿವೇಶನಕ್ಕೆಂದು ರಾಜ್ಯದ ವಿವಿಧ ಭಾಗಗಳಿಂದ ಮೂರು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಎಲ್ಲಾ ಅಧಿಕಾರಿಗಳಿಗೆ ಉಳಿದುಕೊಳ್ಳಲು ಟೆಂಟ್ ಹಾಕಲಾಗಿದೆ. ಜೊತೆಗೆ ಪೊಲೀಸರಿಗೆ ಊಟ, ವಸತಿ ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಅಧಿವೇಶನ ಹಿನ್ನಲೆಯಲ್ಲಿ ಈಗಾಗಲೇ ನಗರದ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಗುತ್ತಿದ್ದು ವಿವಿಧ ವೃತ್ತಗಳಿವೆ ಬಣ್ಣ ಬಳಿಯುವ ಕಾರ್ಯ ನಡೆಯುತ್ತಿದೆ. ರಾಜ್ಯದ ನಾನಾ ಭಾಗಗಳಿಂದ ಜನರು ಬೆಳಗಾವಿಗೆ ಆಗಮಿಸಲಿರುವ ಹಿನ್ನಲೆಯಲ್ಲಿ ನಗರವನ್ನು ಸ್ವಚ್ಚವಾಗಿಡಲು ಮಹಾನಗರ ಪಾಲಿಕೆ ಶ್ರಮಿಸುತ್ತಿದೆ.  ಅಷ್ಟೇ ಅಲ್ಲದೇ ಅಧಿವೇಶನಕ್ಕೆ ಆಗಮಿಸುವ ಸಚಿವರು,…

Read More

ತಿಪಟೂರು: ನಗರದ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿಣಿ ಸಮಿತಿಯ ಚುನಾವಣೆ ಇಂದು ಸರ್ಕಾರಿ ಗರ್ಲ್ಸ್ ಕಾಲೇಜು ನಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ ಐದರವರೆಗೆ ನಡೆಯುತ್ತಿದೆ. ಒಕ್ಕಲಿಗರ ಸಂಘದ ಚುನಾವಣೆಯಲ್ಲಿ  ಪ್ರಮುಖ ವ್ಯಕ್ತಿಗಳು ಸ್ಪರ್ಧೆ ಮಾಡಿದ್ದು, ಮತದಾರರು ಬೆಳಗ್ಗಿನಿಂದಲೇ ಮತವನ್ನು ಹಾಕಲು ಕಾಲೇಜು ಕಡೆಗೆ ಬಂದಿದ್ದಾರೆ. ಬುಧವಾರ ಅಂತಿಮವಾಗಿ ಮತ ಎಣಿಕೆ ನಡೆಯಲಿದ್ದು, ಒಕ್ಕಲಿಗರ ಸಂಘದ ಸಾರಥಿಯನು ಕಾದುನೋಡಬೇಕಾಗಿದೆ. ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More