Author: admin

ಜೆಡಿಎಸ್ ಜೊತೆ ಮುನಿಸಿಕೊಂಡು ಪಕ್ಷದ ತೊರೆಯಲು ಮುಂದಾಗಿದ್ಧ ಶಾಸಕ ಜಿಟಿ ದೇವೇಗೌಡರನ್ನ ನಿನ್ನೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಖುದ್ಧು ಅಖಾಡಕ್ಕಿಳಿದು ಮನವೊಲಿಸಿದ್ದಾರೆ. ಈ ಮಧ್ಯೆ ನಿನ್ನೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ನಡೆಸಿದ ಸಂದಾನ ಯಶ್ವಸಿಯಾಗಿದ್ದು ಜಿಟಿ ದೇವೇಗೌಡರು ಜೆಡಿಎಸ್ ನಲ್ಲೇ ಉಳಿದಿದ್ದಾರೆ. ಇನ್ನೂ ಮೈಸೂರು ಚುನಾವಣಾ ಉಸ್ತುವಾರಿಯನ್ನ ಜಿ.ಟಿ ದೇವೇಗೌಡರಿಗೆ ನೀಡಲಾಗಿದೆ. ಈ ನಡುವೆ ಇಂದು ಚಾಮುಂಡಿ ಬೆಟ್ಟದಲ್ಲಿ ಶಾಸಕ ಜಿ.ಟಿ ದೇವೇಗೌಡರು ಮೈಸೂರು ಭಾಗದ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಘೋಷಿಸಿದ್ದಾರೆ ಎನ್ನಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಜಿಟಿ ದೇವೇಗೌಡರು, ಹುಣಸೂರು ಕ್ಷೇತ್ರದಿಂದ ಹರೀಶ್ ಗೌಡ, ಕೆಆರ್ ನಗರ ಶಾಸಕ ಸಾ.ರಾ ಮಹೇಶ್. ಪಿರಿಯಾಪಟ್ಟಣ ಕೆ.ಮಹದೇವ್ , ಟಿ.ನರಸೀಪುರದಿಂದ ಅಶ್ವಿನ್, ಹೆಚ್.ಡಿ ಕೋಟೆಯಿಂದ ಜಯಪ್ರಕಾಶ್ ಸ್ಪರ್ಧೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮೈಸೂರು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಏಕಕಾಲದಲ್ಲಿ ಏಳು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರಿಂದ ದಾಳಿಯಾಗಿದೆ. ಸಣ್ಣ ನೀರಾವರಿ ಇಲಾಖೆ ಜೆಇ‌ ರಫೀಕ್ ಮನೆ ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಮೂರು ಕಡೆಗಳಲ್ಲಿ ದಾಖಲೆಗಳ ಪರಿಶೀಲನೆಯಲ್ಲಿ ನಿರತರಾಗಿದ್ದಾರೆ. ರಫೀಕ್ ಮಡಿಕೇರಿಯ ಸಣ್ಣ ನೀರಾವರಿ ಇಲಾಖೆಯಲ್ಲಿ ಜೆಇ ಆಗಿದ್ದಾರೆ. ಮಡಿಕೇರಿ ‌ಪಿಡಬ್ಲ್ಯೂಡಿ ಇಇ ನಾಗರಾಜ್ ಮನೆ ಮೇಲೂ ದಾಳಿಯಾಗಿದ್ದು, ಮೈಸೂರಿನಲ್ಲಿರುವ ನಿವಾಸದಲ್ಲಿ ಲೋಕಾಯುಕ್ತ ಪೊಲಿಸರು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೆಯೇ ಕುಶಾಲನಗರ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಮನೆ ಮೇಲೂ ದಾಳಿಯಾಗಿದೆ. ಇನ್ಸ್ ಪೆಕ್ಟರ್ ಮಹೇಶ್ ಇಂಟೆಲಿಜೆನ್ಸಿ‌‌ ವಿಭಾಗಕ್ಕೆ‌ ವರ್ಗಾವಾದರೂ ಹೋಗದೆ ಇದ್ದರು ಎನ್ನಲಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿಯಾಗಿದ್ದು, ಡಿವೈಎಸ್ ಪಿ ಮಾಲತೇಶ್, ಪವನ್, ಸಣ್ಣ ತಮ್ಮಪ್ಪ ಒಡೆಯರ್, ಕೃಣ್ಣಯ್ಯ ನಾಲ್ವರು ಡಿವೈಎಸ್ ಪಿ ಇನ್ಸ್ ಪೆಕ್ಟರ್ ಲೋಕೇಶ್ವರ, ರವಿಕುಮಾರ್, ಶಶಿಕುಮಾರ್, ಉಮೇಶ್, ಜಯರತ್ನ,…

Read More

ನವದೆಹಲಿ: ಆಂಡ್ರಾಯ್ಡ್ ಮೊಬೈಲ್ ಡಿವೈಸ್​ನ ಪರಿಸರ ವ್ಯವಸ್ಥೆಯ ಮಾರುಕಟ್ಟೆಗಳಲ್ಲಿ ಪ್ರಾಬಲ್ಯವನ್ನು ದುರುಪಯೋಗಪಡಿಸಿಕೊಂಡ ಕಾರಣಕ್ಕಾಗಿ ಟೆಕ್​ ದೈತ್ಯ ಸಂಸ್ಥೆಯಾದ ಗೂಗಲ್‌ಗೆ ಸ್ಪರ್ಧಾ ಆಯೋಗವು 1,337.76 ಕೋಟಿ ರೂಪಾಯಿಗಳ ದಂಡ ವಿಧಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸ್ಪರ್ಧಾ ಆಯೋಗ , ಗೂಗಲ್​ ಪ್ಲೇ ಸ್ಟೋರ್​ಗೆ ಸಂಬಂಧಿಸಿದ ಮೊಬೈಲ್ ಅಪ್ಲಿಕೇಶನ್ ವಿತರಣಾ ಒಪ್ಪಂದ ಮತ್ತು ಆಂಟಿ ಫ್ರಾಗ್ಮೆಂಟೇಶನ್ ಅಗ್ರಿಮೆಂಟ್ ಉಲ್ಲಂಘನೆಗಾಗಿ ದಂಡ ಹಾಕಲಾಗಿದೆ. ಜೊತೆಗೆ, ಗೂಗಲ್ ತನ್ನ ನಡವಳಿಕೆಯನ್ನು ನಿರ್ದಿಷ್ಟ ಸಮಯದೊಳಗೆ ಬದಲಿಸಿಕೊಳ್ಳುವಂತೆಯೂ ಸೂಚಿಸಿದೆ. ಮೊಬೈಲ್ ಅಪ್ಲಿಕೇಶನ್ ವಿತರಣಾ ಒಪ್ಪಂದ ಅಡಿಯಲ್ಲಿ ಗೂಗಲ್ ಮೊಬೈಲ್ ಸೂಟ್ ಅನ್ನು ಕಡ್ಡಾಯವಾಗಿ ಮೊದಲೇ ಇನ್​​ಸ್ಟಾಲ್​ ಮಾಡಬೇಕು. ಅದನ್ನು ಅನ್-ಇನ್ಸ್ಟಾಲ್ ಮಾಡಲು ಯಾವುದೇ ಆಯ್ಕೆಯಿಲ್ಲ. ಆದರೆ, ಸ್ಪರ್ಧಾ ಕಾನೂನನ್ನು ಗೂಗಲ್​ ಉಲ್ಲಂಘಿಸುತ್ತಿದೆ ಎಂದು ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಆರು ಜನ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಜಿಲ್ಲೆಯ ಗೋಕಾಕ್ ತಾಲೂಕಿನ ಬಗರನಾಳ ಗ್ರಾಮದ ಈರಣ್ಣ ಬಂಕಾಪೂರ(26), ಶಿವಾನಂದ ಕುಮೋಜಿ(22) ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಆದಿಲ್ ಶಾ ತಾಸೇವಾಲೆ(23), ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದ ಮಹಾಂತೇಶ ಹೊಸಾಪೂರ(22), ನಾಗನೂರ ಗ್ರಾಮದ ಮಹಾಲಿಂಗ ಕುರಿ(30) ಹಾಗೂ ಸವದತ್ತಿ ತಾಲೂಕಿನ ಸುಂದರ ಬಾಳಿಕಾಯಿ(23) ಅಂತ ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ: ವಿಕಲಚೇತನರು ದೇವರ ಮಕ್ಕಳಿದ್ದಂತೆ ಅವರನ್ನು ನಾವು ನಮ್ಮ ಕುಟುಂಬದವರಂತೆ ಕಾಣುವ ಮುಖೇನ ಅವರ ಏಳಿಗೆಗಾಗಿ ಶ್ರಮಿಸಬೇಕು ಎಂದು ಬೆಳಗಾವಿ ಗ್ರಾಮಿಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು. ಅವರು ತಮ್ಮ ಗೃಹ ಕಚೇರಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೂವರು ವಿಕಲಚೇತನರಿಗೆ ಕ್ಷೇತ್ರದ ವಿವಿಧ ಗ್ರಾಮಗಳ ಮುಖಂಡರ ಸಮ್ಮುಖದಲ್ಲಿ ತ್ರಿಚಕ್ರ ವಾಹನಗಳನ್ನು ಹಸ್ತಾಂತರಿಸಿ ಮಾತನಾಡಿದರು. ವಿಕಲಚೇತನರ ಬಗ್ಗೆ ಅವರವರ ಪೋಷಕರಿಗೆ ವಿಶೇಷ ಕಾಳಜಿಯಿರಬೇಕು, ವಿಕಲಚೇತನರ ಅನುಕಂಪದ ಜೊತೆಗೆ ಅವರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ನೀಡಿ ಸಮಾಜದಲ್ಲಿ ಎಲ್ಲರಂತೆ ಮುಂದೆ ಬರಲು ನಾವೆಲ್ಲರೂ ಸೇರಿ ಅನುವು ಮಾಡಿಕೊಡಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ನಾಗೇಶ ದೇಸಾಯಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ, ಬಾಗಣ್ಣ ನರೋಟಿ ಹಾಗೂ ವಿವಿಧ ಗ್ರಾಮಗಳ ಮುಖಂಡರು, ಪಕ್ಷದ ಕಾರ್ಯಕರ್ತರು, ಆಪ್ತ ಸಹಾಯಕರು ಉಪಸ್ಥಿತರಿದ್ದರು.

Read More

ಪಶ್ಚಿಮಬಂಗಾಳ: ಮೊಬೈಲ್ ಖರೀದಿಸಲು ಹಣ ಬೇಕೆಂದು 18 ವರ್ಷದ ಹುಡುಗಿಯೊಬ್ಬಳು ರಕ್ತವನ್ನು ಮಾರಾಟ ಮಾಡಲು ಹೋದ ಆಘಾತಕಾರಿ ಘಟನೆ ದಕ್ಷಿಣ ದಿನಾಜ್‍ ಪುರದ ತಪನ್ ಪೊಲೀಸ್ ಠಾಣೆಯ ಕರ್ದಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿ 12ನೇ ತರಗತಿ ಓದುತ್ತಿದ್ದಾಳೆ. ಆಕೆ ಆನ್‍ ಲೈನ್‍ಲ್ಲಿ 9,000 ರೂ. ಮೌಲ್ಯದ ಸ್ಮಾರ್ಟ್‍ಫೋನ್ ಅನ್ನು ಆರ್ಡರ್ ಮಾಡಿದ್ದಳು. ಆದರೆ ಆಕೆಯ ಬಳಿ ಅಷ್ಟೊಂದು ಹಣವಿರಲಿಲ್ಲ. ಇದರಿಂದಾಗಿ ಆಕೆ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತವನ್ನು ಕೊಡಲು ನಿರ್ಧರಿಸಿದ್ದಾಳೆ. ಈ ಹಿನ್ನೆಲೆಯಲ್ಲೇ ಆಕೆ ಆಸ್ಪತ್ರೆಗೆ ತೆರಳಿ ಅಲ್ಲಿ, ರಕ್ತ ನೀಡುತ್ತೇನೆ ಅದರ ಬದಲು ಎಷ್ಟು ಹಣ ನೀಡುತ್ತೀರಿ ಎಂದು ಕೇಳಿದ್ದಾಳೆ. ಇದರಿಂದ ಅಲ್ಲಿನ ಉದ್ಯೋಗಿಗಳು ಅನುಮಾನಗೊಂಡಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ಚೈಲ್ಡ್ ಕೇರ್ ಇಲಾಖೆಗೆ ತಿಳಿಸಿದ್ದಾರೆ. ವಿಚಾರಣೆ ನಡೆಸಿದಾಗ ನಿಜವಾದ ಸತ್ಯ ಬೆಳಕಿಗೆ ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬಾಗಲಕೋಟೆ: ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬೇವಿನಕಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಕಾಂತ ತಿಮ್ಮಾಪುರೆ ಹಾಗೂ ರಾಂಪುರ ಗ್ರಾಮ ಪಂಚಾಯಿತಿ ಪಿಡಿಒ ಮುದಕಪ್ಪ ತೇಜಿ ಲೋಕಾಯುಕ್ತ ಬಲೆಗೆ ಬಿದ್ದವರು. ಎನ್ ಎ ಫ್ಲ್ಯಾಟ್ ಎಂಟ್ರಿ ಮಾಡಿಕೊಡಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹೊನ್ನಾಕಟ್ಟೆಯ ವಾಸು ಜಾಧವ್ ಎಂಬುವವರಿಂದ ಹಣ ಪಡೆಯುತ್ತಿದ್ದಾಗ ಇಬ್ಬರು ಪಿಡಿಒಗಳು ಸಿಕ್ಕಿ ಬಿದ್ದಿದ್ದಾರೆ. ಬಾಗಲಕೋಟೆ ಲೋಕಾಯುಕ್ತ ಡಿವೈ ಎಸ್ ಪಿ ಪುಷ್ಪಲತಾ ಹಾಗೂ ಸಿಪಿಐ ಮಲ್ಲಪ್ಪ ಬಿದರಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಮಾರಕಾಸ್ತ್ರದಿಂದ ಇರಿದು, ಬಳಿಕ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ‌ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಶಿವಾಜಿ ನಗರಥ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಕೊಲೆಯಾದ ದುರ್ದೈವಿ. ವಿದ್ಯಾರ್ಥಿ ನಾಪತ್ತೆಯಾದ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಈತನ ಧರಿಸಿದ್ದ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅರೆಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ದೊರೆತಿದೆ. ನಿನ್ನೆ ರಾತ್ರಿಯೇ ಕೊಲೆ ಮಾಡಿರುವ ಶಂಕೆ ಇದೆ. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ್ ಹಾಗೂ ಶ್ವಾಸನಾಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು : ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕಾಯ್ದೆಗೆ ಅನುಮೋದನೆ ನೀಡಿದ ಬಳಿಕ, ಬೆಳಗಾವಿಯಲ್ಲಿ ನಡೆಯಲಿರುವಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕವನ್ನು ಸರ್ಕಾರ ಮಂಡಿಸಲಿದೆ ಎನ್ನಲಾಗಿದೆ. ಈ ಬಳಿಕ ಅಧಿಕೃತವಾಗಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಆದೇಶ ಹೊರ ಬೀಳಲಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತಿಪಟೂರು: ನಗರದ ತುಮಕೂರು ಜಿಲ್ಲಾ ಕೆಪಿಸಿಸಿ ವಾ ರೂಮ್ ಜಿಲ್ಲಾ ಸಂಚಾಲಕರಾಗಿರುವ ತಿಪಟೂರು ಟುಡ ಶಶಿಧರ್ ಕಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಿಪಟೂರು ಕ್ಷೇತ್ರ ಸಂಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಶಿಧರ್, ಕ್ಷೇತ್ರದ ಜನರ ಸಮಸ್ಯೆಗಳಿಗೆ ಧ್ವನಿಯಾಗುವುದು, ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವುದು ಕ್ಷೇತ್ರ ಸಂಚಾರದ ಪ್ರಮುಖ ಉದ್ದೇಶ ಎಂದರು. ಮುಂದಿನ ಎರಡು ತಿಂಗಳು ನಿರಂತರವಾಗಿ ಕ್ಷೇತ್ರ ಸಂಚರಿಸುತ್ತೇನೆ. ಜನರ ಕಷ್ಟಗಳನ್ನು ಅರಿತು ತಾಲೂಕಿನ ಸಮಸ್ಯೆ ಬಗ್ಗೆ ಅವರ ಧ್ವನಿ ಆಗುತ್ತೇನೆ. ಬಿಜೆಪಿ ಸರ್ಕಾರ 40% ಸರ್ಕಾರ ಎಂದು ಖ್ಯಾತಿ ಪಡೆದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದುವರೆಗೂ ನೀಡಿದ ಯಾವುದೇ ಆಶ್ವಾಸನೆಯನ್ನು ಜನರ ಸಮಸ್ಯೆಗಳನ್ನು ಈಡೇರಿಸಲಿಲ್ಲ. ಬೆಲೆ ಏರಿಕೆಯಿಂದ ಜನ ತತ್ತರಿಸಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಜನ ನಿತ್ಯ ಉಪಯೋಗಿಸುವ ಆಹಾರ ಪದಾರ್ಥಗಳ ಮೇಲೆ ಜಿಎಸ್‌ ಟಿ ವಿಧಿಸಲಾಗಿದೆ ಎಂದರು. ಈ ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ  ತ್ರೀ ಬಂಕ ಯೂತ್…

Read More