Author: admin

ಬೆಳಗಾವಿ: ಸಬ್ಸಿಡಿ ಹಣ ಬಿಡುಗಡೆಗೆ 50,000 ರೂಪಾಯಿ ಲಂಚ ಪಡೆಯುತ್ತಿದ್ದ ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಮತ್ತು ಸಹಾಯಕ ನಿರ್ದೇಶಕರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ನಗರದ ಗಿರೀಶ ಕುಲಕರ್ಣಿ ಅವರಿಗೆ ಉದ್ಯಮ ಸ್ಥಾಪನೆಗಾಗಿ ಸಹಾಯಧನ ಯೋಜನೆ ಅಡಿಯಲ್ಲಿ ಸಬ್ಸಿಡಿ ಹಣ ಬಿಡುಗಡೆ ಮಾಡಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಕೊಡದಿದ್ದರೆ ಸಬ್ಸಿಡಿ ಹಣ ಬಿಡುಗಡೆ ಮಾಡುವುದಿಲ್ಲವೆಂದು ಹೇಳಿದ್ದರು. ಈ ಕುರಿತು ಗಿರೀಶ ಕುಲಕರ್ಣಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ನಿನ್ನೆ 50,000 ರೂ. ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಪುತ್ರಪ್ಪ ಮತ್ತು ಸಹಾಯಕ ಜಂಟಿ ನಿರ್ದೇಶಕ ಪದ್ಮಾಕಾಂತ ಅವರನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿವಿಧ ಜಿಲ್ಲೆಯಲ್ಲಿ 25 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇಂದು ಸಿಐಡಿ ಅಧಿಕಾರಿಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಸಿಐಡಿ ಎಸ್ಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಸಿಐಡಿ ಪೊಲೀಸರು ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ 4 ಗಂಟೆಯಿಂದ 30 ತಂಡಗಳ 100ಕ್ಕೂ ಹೆಚ್ಚು ಸಿಐಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಇಂದಿನ ಕಾರ್ಯಾಚರಣೆಯಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮ ಸಂಬಂಧ 25 ಜನರನ್ನು ಸಿಐಡಿ ವಿಭಾಗ ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ : ಡಾಲರ್ ಎದುರು ರೂಪಾಯಿ ಮೌಲ್ಯ 83 ರೂಪಾಯಿಗಿಂತ ಕಡಿಮೆಯಾಗಿ, ಇತಿಹಾಸದಲ್ಲಿ ಮೊದಲ ಬಾರಿಗೆ ಪಾತಾಳಕ್ಕೆ ಕುಸಿದಿದೆ. ಮಾರುಕಟ್ಟೆಯ ಮುಕ್ತಾಯದ ವೇಳೆಗೆ, ರೂಪಾಯಿ 66 ಪೈಸೆ ಅಥವಾ ಶೇಕಡಾ 0.8 ರಷ್ಟು ಕುಸಿತದೊಂದಿಗೆ 83.02 ರೂಪಾಯಿಗೆ ಕೊನೆಗೊಂಡಿದೆ. ಮಂಗಳವಾರ ಕೂಡ ಡಾಲರ್ ಎದುರು ರೂಪಾಯಿ ಮೌಲ್ಯ 83ರ ಗಡಿ ದಾಟಿತ್ತು.ಆದಾಗ್ಯೂ, ಈ ಅಂಕಿ ವ್ಯವಹಾರದ ಸಮಯದಲ್ಲಿ ಮತ್ತು ನಂತರ ಚೇತರಿಕೆ ಕೂಡ ಬಂದಿತು. ಯಂತ್ರೋಪಕರಣಗಳು ಸೇರಿದಂತೆ ಅನೇಕ ಔಷಧಿಗಳನ್ನು ಭಾರತವು ಬೃಹತ್ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತದೆ. ರುಪಾಯಿ ಮೌಲ್ಯ ಹೀಗೆ ಕುಸಿಯುತ್ತಾ ಹೋದರೆ ಆಮದು ದುಬಾರಿಯಾಗುತ್ತದೆ ಮತ್ತು ನಾವು ಹೆಚ್ಚು ಖರ್ಚು ಮಾಡಬೇಕಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಈ ಆದೇಶ ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ವಾಹನ ಚಾಲಾಯಿಸುವ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಸೀಟ್ ಬೆಲ್ಟ್ ಅನ್ನು ಧರಿಸದೇ ವಾಹನವನ್ನು ಚಲಾಯಿಸಿದ್ರೇ ಅಂತವರಿಗೆ 1 ಸಾವಿರ ದಂಡ ವಿಧಿಸಲಾಗುತ್ತದೆ ಎಂದಿದ್ದಾರೆ. ವಾಹನ ಚಲಾಯಿಸುವ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸದೇ ಇದ್ದರೇ ಅಪಘಾತವಾದಂತ ಸಂದರ್ಭದಲ್ಲಿ ಏರ್ ಬ್ಯಾಗ್ ಓಪನ್ ಆಗುವುದಿಲ್ಲ. ಹೀಗೆ ಏರ್ ಬ್ಯಾಗ್ ಓಪನ್ ಆಗದೇ ಇದ್ದಾಗ ಅಪಘಾತದ ವೇಳೆಯಲ್ಲಿ ಸಾವು ನೋವು ಸಂಭವಿಸಿವೆ. ಈ ಹಿನ್ನಲೆಯಲ್ಲಿಯೇ ಕೇಂದ್ರ ಸರ್ಕಾರ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸೋ ಕರಡನ್ನು ಪ್ರಕಟಿಸಿತ್ತು. ಈ ಆದೇಶದಂತೆ ರಾಜ್ಯದಲ್ಲಿಯೂ ಸೀಟ್ ಬೆಲ್ಟ್ ಕಡ್ಡಾಯ ಗೊಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ದೀಪಾವಳಿ ಹಬ್ಬದ ಬಲಿಪಾಡ್ಯಮಿಯಂದು ರಾಜ್ಯ ಸಾರ್ಕಾರದ ಅಧೀನದಲ್ಲಿ ಬರುವಂತಹ ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸುವಂತೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ. ಈ ಕುರಿತು ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಬಲಿಪಾಡ್ಯಮಿಯಂದು ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗೋಪೂಜೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದ್ದು, ಗೋವುಗಳ ಮಹತ್ವ ಮತ್ತು ಅವುಗಳ ರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸಬೇಕಿದೆ. ಹಾಗಾಗಿ ಬಲಿಪಾಡ್ಯಮಿಯ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಸಲು ಸಚಿವೆ ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಆಜಾದಿ ಕಾ ಅಮೃತ್ ಮಹೋತ್ಸವದ ನಿಮಿತವಾಗಿ ಇಂದು ಬೆಳಗಾವಿ ನಗರದ ಅಶೋಕ್ ಸ್ಥಬದಿಂದ ಚೆನ್ನಮ್ಮ ಸರ್ಕಲ್ ಅವರಿಗೆ ಫಿಟ್ ಇಂಡಿಯಾ ರನ್ ಕಾರ್ಯಕ್ರಮವನ್ನು ಬೆಳಗಾವಿ ನಗರಾಭಿವೃದ್ಧಿಮತ್ತು ಬೆಳಗಾವಿ ಸ್ಮಾರ್ಟ್ ಸಿಟಿ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ದೇಶವಾಗಿ ಫಿಟ್ ಇಂಡಿಯಾ ದೇಶದ ಜನರು ಆರೋಗ್ಯಕರವಾಗಿರಬೇಕು. ಆರೋಗ್ಯವೇ ಭಾಗ್ಯ ಎಂಬ ಘೋಷವಾಕ್ಯದಿಂದ ಕಾಲೇಜ್ ವಿದ್ಯಾರ್ಥಿಗಳು , ಬೆಳಗಾವಿ ನಾಗರಿಕರು, ಬೆಳಗಾವಿ ನಗರದ ಅಶೋಕ ಸ್ತಂಭದಿಂದ ಚೆನ್ನಮ್ಮ ವೃತ್ತದದಿಂದ ಓಡುವ ಮೂಲಕ ಫಿಟ್ ಇಂಡಿಯಾ ಸಂದೇಶವನ್ನು ಸಾರಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಮಾರ್ಟ್ ಸಿಟಿ ನಿರ್ದೇಶಕರಾದ ಪ್ರವೀಣ್ ಬಾಗೇವಾಡಿ, ಆಜಾದಿಕಾ ಅಮೃತ್ ಮಹೋತ್ಸವ ನಿಮಿತವಾಗಿ ಇಂದು ಬೆಳಗಾವಿಯಲ್ಲಿ ಕಾಲೇಜ್ ವಿದ್ಯಾರ್ಥಿಗಳು, ನಾಗರಿಕರು ಮತ್ತು ಸ್ಮಾರ್ಟ್ ಸಿಟಿ ಮತ್ತು ನಗರ ಅಭಿವೃದ್ಧಿ ಇಲಾಖೆಗಳ ಸಿಬ್ಬಂದಿ ಭಾಗವಹಿಸಿದ್ದರು. ಸ್ಮಾರ್ಟ್ ಸಿಟಿ ವತಿಯಿಂದ ಆರೋಗ್ಯವೇ ಭಾಗ್ಯ ಎಂಬ ಸಂದೇಶವನ್ನು ನೀಡುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಗುಬ್ಬಿ: ಅರ್ಚಕನೋರ್ವ ತನ್ನ ಪತ್ನಿ ಹಾಗೂ ತನ್ನ 6 ವರ್ಷ ವಯಸ್ಸಿನ ಮಗನನ್ನು ಹಾರೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರ್ಚಕ ಮೋಹನ್(ಸ್ವಾಮಿ) ಎಂಬಾತ ಈ ದುಷ್ಕೃತ್ಯ ನಡೆಸಿದ ವ್ಯಕ್ತಿಯಾಗಿದ್ದು, ಈತನ ಪತ್ನಿ ಕಾವ್ಯಾ(25) ಹಾಗೂ ಮಗ ಜೀವನ್(6) ಬರ್ಬರವಾಗಿ ಹತ್ಯೆಗೀಡಾದವರಾಗಿದ್ದಾರೆ. ಹಲವು ವರ್ಷಗಳಿಂದ ಬೇರೆಯಾಗಿದ್ದ ಇವರು ಒಂದೂವರೆ ತಿಂಗಳಿನಿಂದ ಜೊತೆಯಾಗಿ ವಾಸಿಸಲು ಆರಂಭಿಸಿದ್ದರು ಎನ್ನಲಾಗಿದೆ. ಆದರೆ, ಇದೀಗ ತನ್ನ ಪತ್ನಿ ಹಾಗೂ ಬಾಳಿ ಬದುಕಬೇಕಾದ ಮಗುವನ್ನು ಮೋಹನ್ ಬಲಿ ಪಡೆದಿದ್ದಾನೆ. ಘಟನೆಯ ಬಳಿಕ ಆರೋಪಿ ಮೋಹನ್ ನನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಬೆಳಗ್ಗೆ  6:30ರ ಸುಮಾರಿಗೆ ಆರೋಪಿಯು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಕಾರಣಗಳೇನು ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಹೈವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ಬಳಿಕ ಕೃತ್ಯಕ್ಕೆ ಕಾರಣಗಳೇನು ಅನ್ನೋದು ತಿಳಿದು ಬರಬೇಕಿದೆ. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಮನೆಯವರ ವಿರೋಧದ ನಡುವೆ ಮದುವೆ ಆಗಿದ್ದ ಪ್ರೇಮಿಗಳನ್ನು ಮತ್ತೆ ಒಂದು ಮಾಡುವುದಾಗಿ ಕರೆಸಿ ಯುವತಿಯ ಮನೆಯವರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ಬೇವಿನಮಟ್ಟಿ ಗ್ರಾಮದ ವಿಶ್ವನಾಥ್ ನೆಲಗಿ (24) ಹಾಗೂ ರಾಜೇಶ್ವರಿ (18) ಹತ್ಯೆಯಾದ ಪ್ರೇಮಿಗಳಾಗಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳಾದ ರವಿ ಹುಲ್ಲನ್ನವರ, ಹನುಮಂತ ಮಲ್ಲಾಡದ, ಬೀರಪ್ಪ ದಳವಾಯಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಹಾಗೂ ಹತ್ಯೆಯಾದ ಪ್ರೇಮಿಗಳ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ವಿಶ್ವನಾಥ್ ಹಾಗೂ ರಾಜೇಶ್ವರಿ ಸುಮಾರು ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ರಾಜೇಶ್ವರಿಯ ಮನೆಯವರಿಗೆ ತಿಳಿದು ವಿಶ್ವನಾಥ್ ಮೇಲೆ 2 ಹಲ್ಲೆ ಮಾಡಿದ್ದರು. ಆದರೆ ಇಬ್ಬರು ಒಂದಾಗಿದ್ದರು. ವಿಶ್ವನಾಥ್‌ ಕೂಲಿ ಕೆಲಸಕ್ಕೆಂದು ಕೇರಳದ ಕಾಸರಗೋಡಿಗೆ ಹೋಗಿದ್ದ. ಆದರೆ ರಾಜೇಶ್ವರಿಯ ತಂದೆ ಪರಸಪ್ಪ ಕರಡಿ ಇಬ್ಬರನ್ನೂ ಒಂದು ಮಾಡಿಸುವುದಾಗಿ ನಂಬಿಸಿ, ಊರಿಗೆ ಬರುವಂತೆ ಹೇಳಿ ಕಳುಹಿಸಿದ್ದಾರೆ. ಆದರೆ ವಿಶ್ವನಾಥ್ ನರಗುಂದ ಬಳಿ ಬರುತ್ತಿದ್ದಂತೆ ಆತನನ್ನು ಬೊಲೆರೊ ವಾಹನದಲ್ಲಿ ಅಪಹರಿಸಿದ್ದಾರೆ.…

Read More

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಿನ ವಾರ ದೆಹಲಿಗೆ ತೆರಳುವ ಸಾಧ್ಯತೆ ಇದ್ದು, ವರಿಷ್ಠರ ಬಳಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸುವ ಸಾಧ್ಯತೆ ಇದೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ರಮೇಶ್ ಜಾರಕಿಹೊಳಿ, ಸಿ.ಪಿ. ಯೋಗೇಶ್ವರ್ ಅವರು ಭೇಟಿಯಾಗಿದ್ದು, ಸಂಪುಟ ಸೇರ್ಪಡೆ ಬಗ್ಗೆ ವರಿಷ್ಠರ ಜೊತೆಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಗೋಧಿ ಮತ್ತು ಬಾರ್ಲಿ ಸೇರಿದಂತೆ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನ ಕೇಂದ್ರ ಸರ್ಕಾರ ಹೆಚ್ಚಿಸಿದೆ. 2023-24 ರ ಮಾರ್ಕೆಟಿಂಗ್ ಋತುವಿಗಾಗಿ ಎಲ್ಲಾ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ಕೇಂದ್ರ ಸಂಪುಟ ಅನುಮೋದಿಸಿದೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ , ಪ್ರತಿ ಕ್ವಿಂಟಾಲ್‌ ಗೆ 500 ರೂ.ಗೆ ಬೇಳೆ (ಮಸೂರ್) ಗೆ ಎಂಎಸ್‌ ಪಿಯಲ್ಲಿ ಸಂಪೂರ್ಣ ಗರಿಷ್ಠ ಹೆಚ್ಚಳವನ್ನು ಅನುಮೋದಿಸಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More