Subscribe to Updates
Get the latest creative news from FooBar about art, design and business.
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
- ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
- ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
- ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
- ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
Author: admin
ಕರ್ತವ್ಯದಲ್ಲಿರುವ ಪೊಲೀಸರು ಹಾಗೂ ಠಾಣೆಗಳ ಮೇಲೆ ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಬಳಸಿ ದಾಳಿ ಮಾಡಿರುವುದು ‘ಭಯೋತ್ಪಾದನಾ ಕೃತ್ಯ’ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ದಾಳಿ ಪ್ರಕರಣದಲ್ಲಿ ಭಾಗಿಯಾಗಿರುವ ಅತೀಕ್ ಅಹ್ಮದ್ ಇನ್ನಿತರರು ಜಾಮೀನು ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಹಾಗೂ ಶಿವಶಂಕರ್ ಅಮರಣ್ಣವರ್ ಅವರಿದ್ದ ಹೈಕೋರ್ಟ್ ನ ವಿಭಾಗೀಯ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಉದ್ರಿಕ್ತರುಗಳು ಪೊಲೀಸ್ ಠಾಣೆಯ ಮುಂದೆ ಗುಂಪು ಗೂಡುವುದು, ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಯ ಮೇಲೆ ಕಬ್ಬಿಣದ ರಾಡ್, ಪೆಟ್ರೋಲ್ ತುಂಬಿದ ಬಾಟಲ್‌ಗಳು ಸೇರಿದಂತೆ ಮಾರಕಾಸ್ತ್ರಗಳಿಂದ ದಾಳಿ ನಡೆಸುವುದು, ಗಲಭೆ ಉಂಟು ಮಾಡುವುದು ಇವೆಲ್ಲವೂ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಮಾಡಿದ ಭಯೋತ್ಪಾದನಾ ಚಟುವಟಿಕೆಗಳು ಎನಿಸುತ್ತದೆ ಎಂದು ತಿಳಿಸಿದ್ದಾರೆ. ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣ ಕುರಿತು ರಾಷ್ಟ್ರೀಯ ತನಿಖಾ ದಳ( ಎನ್‌ಐಎ) ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿರುವಂತೆ ಆರೋಪಿಗಳು ಭಯೋತ್ಪದನಾ ಕೃತ್ಯ ಎಸಗುವ…
ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಮನೆಯ ಮೇಲೆ ಮರ ಬಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಸಂಭವಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆ ಅಬ್ಬರದಿಂದಾಗಿ ಭೀಮಾ ನದಿಯಲ್ಲಿ ದತ್ತಾತ್ರೇಯ ದೇವರ ಭಕ್ತ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಮನೆಯ ಗೋಡೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ಶಿಗ್ಗಾವಿ ತಾಲ್ಲೂಕಿನ ಕುನ್ನೂರು ಗ್ರಾಮದಲ್ಲಿ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಮುಸ್ತಾಕ್ ಎರಗುಪ್ಪಿ ಎಂದು ಗುರುತಿಸಲಾಗಿದೆ. ಮಳೆಯಿಂದಾಗಿ ಗೋಡೆ ಶಿಥಿಲಗೊಂಡಿದ್ದರಿಂದ ಗೋಡೆ ಕುಸಿದು ಬಿದ್ದು, ಈ ದುರ್ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮುಸ್ತಾಕ್‌ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮುಸ್ತಾಕ್ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೂಡಿಗೆರೆ, ಕಳಸಾ ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್‌ಕತ್ತಿ ಭೇಟಿ ನೀಡಿ…
ಕೇಂದ್ರ ವಿಭಾಗದ ಶೇಷಾದ್ರಿಪುರಂ, ಕಬ್ಬನ್’ಪಾರ್ಕ್, ಹಲಸೂರು ಗೇಟ್, ವಿಲ್ಸನ್ ಗಾರ್ಡನ್, ಎಸ್’ಜೆ ಪಾರ್ಕ್ ಮತ್ತು ವೈಯ್ಯಾಲಿಕಾವಲ್ ಠಾಣೆ ಪೊಲೀಸರು ವಿವಿಧ ಪ್ರಕರಣಗಳಲ್ಲಿ 24 ಮಂದಿ ಆರೋಪಿಗಳನ್ನು ಬಂಧಿಸಿ 30 ಪ್ರಕರಣಗಳನ್ನು ಪತ್ತೆಹಚ್ಚಿ ನಗದು ಸೇರಿದಂತೆ 1.32 ಕೋಟಿ ಬೆಲೆಬಾಳುವ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಕಬ್ಬನ್’ಪಾರ್ಕ್ ಠಾಣೆ ಪೊಲೀಸರು 74 ಹಾಗೂ ಶೇಷಾದ್ರಿಪುರಂ ಠಾಣೆ ಪೊಲೀಸರು 13 ಮೊಬೈಲ್‍ಗಳು ಸೇರಿದಂತೆ ಒಟ್ಟು 87 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 7.80 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಶೇಷಾದ್ರಿಪುರಂ ಠಾಣೆ ಪೊಲೀಸರು 14, ಕಬ್ಬನ್ ಪಾರ್ಕ್ 4, ಎಸ್ ಜೆ ಪಾರ್ಕ್ 4 ಹಾಗೂ ವಯ್ಯಾಲಿಕಾವಲ್ ಠಾಣೆ ಪೊಲೀಸರು 5 ದ್ವಿಚಕ್ರ ವಾಹನ ಸೇರಿ 27 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 13.50 ಲಕ್ಷ ರೂ.ಗಳಾಗಿದೆ. ಚಿನ್ನಾಭರಣ ಕಳ್ಳತನ ಪ್ರಕರಣದಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು 296 ಗ್ರಾಂ ಹಾಗೂ ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು…
ಮತಕ್ಷೇತ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್‍ನ್ನು ಮಂಜೂರು ಮಾಡಿಸಿ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಗೊಳಿಸಿದರು. ಟವರ್ ಇಲ್ಲದ ಕಾರಣ ಸುಮಾರು ಏಳರಿಂದ ಎಂಟು ಕಿಮೀ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನತೆ ಎದುರಿಸುತ್ತಿದ್ದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರವಾಗಿದ್ದು, ಸಮಸ್ಯೆಗೆ ಪರಿಹಾರ ಒದಗಿಸಿದ ಸಚಿವರಿಗೆ, ಗ್ರಾಮಸ್ಥರು, ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ದೂರವಾಣಿ ಯ ಮೂಲಭೂತ ಸೌಕರ್ಯವನ್ನು ಒದಗಿಸುವುದರ ಮೂಲಕ, ಈ ಭಾಗದ ಜನತೆಗೆ ಅತ್ಯಗತ್ಯ ವಾದ ಸೌಲಭ್ಯ ದೊರಕಿದೆ ಹಾಗೂ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದು ತಿಳಿಸಿದರು. ಕಳೆದ ನಾಲ್ಕು ವರ್ಷದಲ್ಲಿ ನೆರಟುರು ಪಂಚಾಯ್ತಿ ವ್ಯಾಪ್ತಿ ಯಲ್ಲಿ ಸುಮಾರು 6.8 ಕೋಟಿ ರೂ. ವಿವಿಧ ಅಭಿವೃದ್ದಿ ಕಾರ್ಯ ಗಳಿಗೆ ಮಂಜೂರಾಗಿದ್ದು, ಎಲ್ಲಾ ಕಾಮಗಾರಿಗಳು ಪೂರ್ಣ ಗೊಂಡಿವೆ. ಈ ಮೂಲಕ ಗ್ರಾಮಸ್ಥರು ನಮ್ಮ ಮೇಲೆ ಇರಿಸಿದ ವಿಶ್ವಾಸಕ್ಕೆ ಋಣಿಯಾಗಿದ್ದೇನೆ ಹಾಗೂ ಅದನ್ನು ತೀರಿಸಲು ಕತಿಬದ್ದನಾಗಿದ್ದೇನೆ ಎಂದು…
ವಿದೇಶದಿಂದ ಅಕ್ರಮವಾಗಿ ವಿಮಾನದಲ್ಲಿ ಚಿನ್ನ ಸಾಗಣೆ ಮಾಡಿಕೊಂಡು ಬಂದ ಇಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, 90 ಲಕ್ಷ ಮೌಲ್ಯದ 1.7 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಥಾಯ್ಲೆಂಡ್ ದೇಶದ ಫುಕೆಟ್ ನಿಂದ ವಿಮಾನದಲ್ಲಿ ಬೆಂಗಳೂರು ನಿಲ್ದಾಣಕ್ಕೆ ಬಂದಿಳಿದ 28 ವರ್ಷದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತ ಧರಿಸಿದ ಬಟ್ಟೆಯೊಳಗೆ ಚಿನ್ನದ 18 ಬಿಸ್ಕತ್‍ಗಳು ಪತ್ತೆಯಾಗಿದೆ. ಬಟ್ಟೆಯೊಳಗೆ ಮರೆಮಾಚಿ ಚಿನ್ನವನ್ನಿಟ್ಟು ನಂತರ ಹೊಲಿಗೆ ಹಾಕಿ ಅಕ್ರಮ ಚಿನ್ನ ಸಾಗಣೆಗೆ ಮುಂದಾಗಿದ್ದ. ಬಂಧಿತ ಆರೋಪಿಯಿಂದ 63 ಲಕ್ಷ ಮೌಲ್ಯದ 1.199 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಬಹ್ರೈನ ದೇಶದ ಮನಮದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಈತನ ಅನುಮಾನಾಸ್ಪದ ನಡಿಗೆಯಿಂದ ಸಂಶಯಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಪಾಸಣೆ ನಡೆಸಿದಾಗ ವಿಲಕ್ಷಣವಾದ ಒಳ ಉಡುಪಿನಲ್ಲಿ ಚಿನ್ನ ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯಿಂದ 27 ಲಕ್ಷ…
ಕೇಂದ್ರ ವಿಭಾಗದ ಶೇಷಾದ್ರಿಪುರಂ, ಕಬ್ಬನ್‍ಪಾರ್ಕ್, ಹಲಸೂರು ಗೇಟ್, ವಿಲ್ಸನ್ ಗಾರ್ಡನ್, ಎಸ್‍ಜೆ ಪಾರ್ಕ್ ಮತ್ತು ವೈಯ್ಯಾಲಿಕಾವಲ್ ಠಾಣೆ ಪೊಲೀಸರು ವಿವಿಧ ಪ್ರಕರಣಗಳಲ್ಲಿ 24 ಮಂದಿ ಆರೋಪಿಗಳನ್ನು ಬಂಧಿಸಿ 30 ಪ್ರಕರಣಗಳನ್ನು ಪತ್ತೆಹಚ್ಚಿ ನಗದು ಸೇರಿದಂತೆ 1.32 ಕೋಟಿ ಬೆಲೆಬಾಳುವ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು 74 ಹಾಗೂ ಶೇಷಾದ್ರಿಪುರಂ ಠಾಣೆ ಪೊಲೀಸರು 13 ಮೊಬೈಲ್‍ಗಳು ಸೇರಿದಂತೆ ಒಟ್ಟು 87 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 7.80 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಶೇಷಾದ್ರಿಪುರಂ ಠಾಣೆ ಪೆÇಲೀಸರು 14, ಕಬ್ಬನ್‍ಪಾರ್ಕ್ 4, ಎಸ್‍ಜೆ ಪಾರ್ಕ್ 4 ಹಾಗೂ ವಯ್ಯಾಲಿಕಾವಲ್ ಠಾಣೆ ಪೊಲೀಸರು 5 ದ್ವಿಚಕ್ರ ವಾಹನ ಸೇರಿ 27 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 13.50 ಲಕ್ಷ ರೂ.ಗಳಾಗಿದೆ. ಚಿನ್ನಾಭರಣ ಕಳ್ಳತನ ಪ್ರಕರಣದಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು 296 ಗ್ರಾಂ ಹಾಗೂ ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು 44 ಗ್ರಾಂ…
ಚಾಮರಾಜಪೇಟೆ ಮೈದಾನದ ವಿವಾದ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮೈದಾನದಲ್ಲಿ ಗಣೇಶ ಹಬ್ಬ ಸೇರಿದಂತೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ನೀಡಲಾಗದು ಎಂದು ಹೇಳಿಕೆ ನೀಡಿರುವ ಶಾಸಕ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಹಿಂದೂಪರ ಸಂಘಟನೆಗಳು ಮುಗಿಬಿದ್ದಿವೆ. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವದಂತಹ ರಾಷ್ಟ್ರೀಯ ಮತ್ತು ರಾಜ್ಯ ಹಬ್ಬಗಳನ್ನು ಚಾಮರಾಜಪೇಟೆ ಮೈದಾನದಲ್ಲಿ ಅದ್ಧೂರಿಯಾಗಿ ಆಚರಿಸಲು ಅವಕಾಶವಿದೆ. ಆದರೆ, ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ನೀಡಲಾಗದು. ಇದಕ್ಕೆ ನಮ್ಮ ಸಮ್ಮತಿಯೂ ಇಲ್ಲ ಎಂದು ಶಾಸಕರು ಹೇಳಿಕೆ ನೀಡಿರುವುದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ. ನಿನ್ನೆ ಮೈದಾನಕ್ಕೆ ಶಾಸಕರು ಭೇಟಿ ನೀಡಿದ್ದಾದರೂ ಏಕೆ, ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಯ ಪರಿಶೀಲನೆ ಎಂದು ಹೇಳಿ ಬೇರೆ ವಿಚಾರಕ್ಕೆ ಬಂದಿದ್ದರಾ ಎಂಬ ಹಲವು ಅನುಮಾನಗಳು ಕಾಡುತ್ತಿದ್ದು, ಸರ್ಕಾರಿ ಜಾಗದಲ್ಲಿ ಅನುಮತಿ ಇಲ್ಲ ಎನ್ನಲು ಅವರ್ಯಾರು, ಮೈದಾನವೇನಾದರೂ ಅವರ ಸ್ವಂತ ಆಸ್ತಿಯೇ, ಅವರೇ ಗಳಿಸಿದ್ದಾ ಅಥವಾ ಅವರ ಪೂರ್ವಿಕರ ಆಸ್ತೀನಾ ಎಂದು ಹಿಂದೂಪರ ಸಂಘಟನೆಗಳ ಮುಖಂಡರು ಕೆಂಡ ಕಾರಿದ್ದಾರೆ. ಆ.15ರಂದೇ…
ಹಣಕಾಸಿನ ತೊಂದರೆಯಿಂದಾಗಿ ಚಿತ್ರೀಕರಣ ತಡವಾಗಿದ್ದಕ್ಕೆ ನಿರ್ಮಾಪಕನಿಗೆ ಖ್ಯಾತ ನಟರೊಬ್ಬರು ಬೆದರಿಕೆ ಹಾಕಿದ್ದು, ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್‍ಸಿಆರ್ ದಾಖಲಾಗಿದೆ. ನಿರ್ಮಾಪಕ ಭರತ್ ವಿಷ್ಣುಕಾಂತ್ ಎಂಬುವರು ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಎಂಬ ಚಿತ್ರ ನಿರ್ಮಿಸುತ್ತಿದ್ದು, ಈ ಚಿತ್ರದಲ್ಲಿ ಧ್ರುವನ್ ಎಂಬುವರು ನಾಯಕ ನಟನಾಗಿ ನಟಿಸುತ್ತಿದ್ದಾರೆ. ಹಣಕಾಸಿನ ತೊಂದರೆಯಿಂದಾಗಿ ಭರತ್ ಅವರು ಈ ಚಿತ್ರದ ಚಿತ್ರೀಕರಣವನ್ನು ತಡವಾಗಿ ಮಾಡುತ್ತಿರುವುದರಿಂದ ಬೇಸರಗೊಂಡ ಧ್ರುವನ್ ಈ ಬಗ್ಗೆ ನಟ ದರ್ಶನ್ ಅವರ ಬಳಿ ಹೋಗಿ ಹೇಳಿಕೊಂಡು ಅವರಿಂದ ಭರತ್‍ಗೆ ಫೋನ್ ಮಾಡಿಸಿದ್ದಾರೆ. ದರ್ಶನ್ ಅವರು ಕರೆ ಮಾಡಿ ಬೆದರಿಕೆ ಹಾಕಿದ್ದು, ಈ ಬಗ್ಗೆ ಭರತ್ ಅವರು ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದರ್ಶನ್ ಅವರು ಧ್ರುವನ್ ಮೊಬೈಲ್‍ನಿಂದಲೇ ಭರತ್‍ಗೆ ಕರೆ ಮಾಡಿರುವುದು ಗೊತ್ತಾಗಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…
ಬಿಬಿಎಂಪಿಯ 243 ವಾರ್ಡ್‍ಗಳಿಗೆ ಕಲ್ಪಿಸಿರುವ ಮೀಸಲಾತಿಗೆ ಆಕ್ಷೇಪಣೆ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು, ಈಗಾಗಲೇ ಸಾವಿರಾರು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಇಂದು ಸಂಜೆವರೆಗೆ ಸಲ್ಲಿಕೆಯಾಗುವ ಆಕ್ಷೇಪಣೆಗಳನ್ನು ಪರಿಗಣಿಸಿ ಮೂರ್ನಾಲ್ಕು ದಿನಗಳ ಒಳಗೆ ಮೀಸಲಾತಿ ಅಂತಿಮ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ. 7 ದಿನಗಳ ಹಿಂದೆ ಪ್ರಕಟಿಸಿದ್ದ ಮೀಸಲಾತಿಗೆ ಸಾವಿರಾರು ಆಕ್ಷೇಪಣೆಗಳು ಸಲ್ಲಿಕೆಯಾಗಿರುವುದರಿಂದ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ತೀವ್ರ ವಿರೋಧ ವ್ಯಕ್ತವಾಗಿರುವ ವಾರ್ಡ್‍ಗಳ ಮೀಸಲು ಬದಲು ಮಾಡುವ ಸಾಧ್ಯತೆಗಳಿವೆ. ಸರ್ಕಾರ ಸೂಚಿಸಿರುವ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅಂತಿಮ ಅಧಿಸೂಚನೆ ಹೊರಡಿಸಿದ ನಂತರ ಕಾನೂನು ಹೋರಾಟ ನಡೆಸಲಾಗುವುದು ಎಂದು ಆ ಪಕ್ಷದ ಹಲವಾರು ಮುಖಂಡರು ತಿಳಿಸಿದ್ದಾರೆ. ಹೀಗಾಗಿ ಮೀಸಲಾತಿಯಲ್ಲಿ ಕೆಲ ಸಣ್ಣಪುಟ್ಟ ಬದಲಾವಣೆ ಮಾಡಿ ಯಥಾವತ್ ಮೀಸಲು ಕಲ್ಪಿಸಿದರೆ ಕಾಂಗ್ರೆಸ್ ಮುಖಂಡರು ಮತ್ತೆ ನ್ಯಾಯಾಲಯದ ಕದ ತಟ್ಟುವ ಸಾಧ್ಯತೆಗಳಿವೆ. ಫ್ರೀ ಪ್ಲಾನ್: ಸುಪ್ರೀಂ ಕೋರ್ಟ್ ಎಂಟು ವಾರಗಳ ಒಳಗೆ ವಾರ್ಡ್ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಸ್ಪಷ್ಟ ಸೂಚನೆ…
ಬೆಳ್ಳಂಬೆಳಗ್ಗೆ ಒಂಟಿ ಸಲಗವೊಂದು ಮಹಿಳೆ ಮೇಲೆ ದಾಳಿ ಮಾಡಿ ತುಳಿದು ಸಾಯಿಸಿರುವ ಘಟನೆ ಚೆನ್ನಮ್ಮನ ಹೊಸ ಹಳ್ಳಿ ಬಳಿ ನಡೆದಿದೆ. ಸಿದ್ದಪ್ಪಾಜಿ ದೇವಾಲಯ ಅರ್ಚಕ ಚೆನ್ನಪ್ಪ ಅವರ ಪತ್ನಿ ಚೆನ್ನಮ್ಮ(65) ಆನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ಮಹಿಳೆ. ಎಂದಿನಂತೆ ಇಂದು ಬೆಳಗಿನ ಜಾವ 5.30ರ ಸುಮಾರಿನಲ್ಲಿ ಚೆನ್ನಮ್ಮ ಅವರು ತೋಟಕ್ಕೆ ಹೋಗಿ ಹಸುವಿನ ಹಾಲು ಕರೆಯುತ್ತಿದ್ದಾಗ ಏಕಾಏಕಿ ಅವರ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿ ತುಳಿದಿದೆ. ಮಹಿಳೆಯ ಕೂಗಾಟ, ಚೀರಾಟ ಕೇಳಿ ಅಕ್ಕ-ಪಕ್ಕದವರು ಸ್ಥಳಕ್ಕೆ ಬಂದು ಆನೆಯನ್ನು ಓಡಿಸುವಷ್ಟರೊಳಗೆ ಚೆನ್ನಮ್ಮ ಮೃತಪಟ್ಟಿದ್ದರು. ಆನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿರುವ ವಿಷಯ ತಿಳಿದು ಸುತ್ತ-ಮುತ್ತಲ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದರು. ಮಹಿಳೆಯ ಕುಟುಂಬಸ್ಥರ ರೋದನ ಹೇಳತೀರದಾಗಿತ್ತು. ಸುದ್ದಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದಾಗ ಗ್ರಾಮಸ್ಥರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭರವಸೆಯಾಗಿಯೇ ಉಳಿದ ಆಶ್ವಾಸನೆ: ಕಳೆದ ಐದು ವರ್ಷಗಳಿಂದಲೂ ಆನೆಗಳ ಉಪಟಳದಿಂದ ಇದುವರೆಗೂ ಲಕ್ಷಾಂತರ ರೂ. ಬೆಲೆ ಹಾನಿಯಾಗಿ ರೈತರು ಕಂಗಾಲಾಗಿದ್ದಾರೆ.…