Author: admin

ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ನೆಲ್ಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಗ್ಗಾವೆ ಗ್ರಾಮದ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಗಿಡಗಂಟೆಗಳ ಮಧ್ಯೆ ಮುಚ್ಚಿ ಹೋದ ಸ್ಥಿತಿಯಲ್ಲಿದ್ದ ಬಗ್ಗೆ ‘ನಮ್ಮ ತುಮಕೂರು.ಕಾಂ’ ವರದಿ ಪ್ರಕಟಿಸಿತ್ತು. ವರದಿ ಪ್ರಕಟಿಸಿ ಕೇವಲ ಎರಡೇ ದಿನದಲ್ಲಿ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತ್ ಅಧಿಕಾರಿಗಳು ಗಿಡಗಂಟಿಗಳಿಂದ ಅಂಬೇಡ್ಕರ್ ಭವನಕ್ಕೆ ಮುಕ್ತಿ ನೀಡಿದ್ದಾರೆ. “ಗಿಡಗಂಟಿಗಳ ಮಧ್ಯೆ ‘ಕಾಣದಂತೆ ಮಾಯವಾದ ಅಂಬೇಡ್ಕರ್ ಭವನ’” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ ಇಲ್ಲಿನ ಅಂಬೇಡ್ಕರ್ ಭವನದ ದುಸ್ಥಿತಿಯನ್ನು ತೆರೆದಿಟ್ಟಿದ್ದು, ಈ ವರದಿ ಪ್ರಕಟಗೊಂಡ ತಕ್ಷಣವೇ ಎಚ್ಚೆತ್ತುಕೊಂಡ ಅಧಿಕಾರಿಗಳು ಜೆಸಿಬಿ ಮೂಲಕ ಗಿಡಗಂಟಿಗಳನ್ನು ತೆರವುಗೊಳಿಸಿ, ಸಾರ್ವಜನಿಕ ಉಪಯೋಗಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಾ.ಎನ್.ಮೂರ್ತಿ ಸ್ಥಾಪಿತ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಗ್ಗಾವೆ ಪುಟ್ಟಸ್ವಾಮಿ, ನ್ಯಾಯದ ಪರವಾಗಿ ಹೋರಾಟ ಮಾಡಿ, ಅಧಿಕಾರಿಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದ ನಮ್ಮ ತುಮಕೂರು.ಕಾಂ ಮಾಧ್ಯಮಕ್ಕೆ ನಮ್ಮ ಸಮುದಾಯ ಹಾಗೂ ಸಂಘಟನೆ ಎಂದೆಂದಿಗೂ ಆಭಾರಿಯಾಗಿದ್ದೇವೆ ಎಂದು ಧನ್ಯವಾದಗಳನ್ನು ತಿಳಿಸಿದರು. ವರದಿ: ಮಂಜು…

Read More

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಬಳಿ ಹಾದು ಹೋಗುವ ಚಾಮರಾಜನಗರ , ಜೀವರ್ಗಿ ರಾಷ್ಟ್ರೀಯ ಹೆದ್ದಾರಿ 150 A ರಲ್ಲಿ ಮಾಯಸಂದ್ರ, ಟಿ.ಬಿ.ಕ್ರಾಸ್ ನ ಮಧ್ಯದಲ್ಲಿ  ಚೆಕ್ ಪೋಸ್ಟ್ ನಿಂದ ಟಿ.ಬಿ.ಕ್ರಾಸ್  ಕಾಲುವೆಯವರೆವಿಗೂ  ಆಳೆತ್ತರದ ಗಿಡಗಂಟಿ  ಬೆಳೆದು ನಿಂತಿದ್ದು, ಸಾರ್ವಜನಿಕರ ಹಿತಾ ದೃಷ್ಟಿಯಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಮತ್ತು ಸದಸ್ಯರು ಸ್ವಂತ ಖರ್ಚಿಯಿಂದ ದುರಸ್ತಿಗೊಳಿಸಿದ್ದಾರೆ. ಗಿಡಗಂಟಿಗಳು ಬೆಳೆದು ನಿಂತ ಪರಿಣಾಮ ಎದುರಿನಿಂದ ಬರುತ್ತಿರುವ ವಾಹನಗಳು ಕಾಣದೇ ಇಲ್ಲಿ ಸಾಕಷ್ಟು ಸಾವು ನೋವುಗಳು ಸಂಭವಿಸಿದ್ದವು. ಈ ಸಂಬಂಧ ಈ  ಭಾಗದ ಶಾಸಕರು,  ಜನಪ್ರತಿನಿಧಿಗಳಿಗೆ ಸಾರ್ವಜನಿಕರು ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಸಂಬಂಧ ಸ್ಥಳೀಯ ಸೊರವನಹಳ್ಳಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಜಾಬೀರ್ ಹುಸೇನ್ ಮತ್ತು ಉಪಾಧ್ಯಕ್ಷೆ ಶಶಿಕಲಾ  ಹನುಮೇಗೌಡ ಮತ್ತು ಸದಸ್ಯರೆಲ್ಲ ಒಟ್ಟುಗೂಡಿ ಸಮಾಲೋಚನೆ ನಡೆದಿ ಕೊನೆಗೆ ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು ಒಂದು ಕಿಲೋಮೀಟರ್ ಉದ್ದದ ರಸ್ತೆಯಲ್ಲಿ ಅಡ್ಡಲಾಗಿರುವ ಗಿಡಗಳನ್ನು ಹಿಟಾಚಿ ಸಹಾಯದಿಂದ …

Read More

ತುಮಕೂರು: ಕೆ.ಎಸ್.ಆರ್.ಟಿ.ಸಿ. ವಿಭಾಗದ ತುರುವೇಕೆರೆ ಘಟಕದ ಬಸ್ ನಿಲ್ದಾಣದಲ್ಲಿ ಸಂವಿಧಾನ ಶಿಲ್ಪಿ.ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪರಿನಿಬ್ಬಾಣ ದಿನ ನಮನ ಕಾರ್ಯಕ್ರಮ ನಡೆಸಲಾಯಿತು. ಬಸ್ ನಿಲ್ದಾಣದ ಮುಂಬಾಗಿಲಿನಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. ಕಾಯಕ್ರಮದಲ್ಲಿ ಘಟಕದ ವ್ಯವಸ್ಥಾಪಕರಾದ  ತಮ್ಮಯ್ಯ ಸಂಚಾರ ನಿರೀಕ್ಷಕರಾದ  ಶ್ವೇತ, ಘಟಕದ ಎಸ್ಸಿ, ಎಸ್ಟಿ ಅಧ್ಯಕ್ಷರಾದ ಗಂಗಾಧರ್ ಬಿ.ವಿಭಾಗಮಟ್ಟದ  ಪ್ರಧಾನಕಾರ್ಯದರ್ಶಿ ಡಿ.ಸಿ.ವನರಂಗಪ್ಪ,ಹಿರಿಯ ಉಪಾಧ್ಯಕ್ಷರಾದ ಜಗಣ್ಣ, ಜಂಟಿ ಕಾರ್ಯದರ್ಶಿಯಾದ ಚಂದ್ರಶೇಖರ್ ಹಾಗೂ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಚೆನ್ನೈ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್‌ ದುರಂತದಲ್ಲಿ ಸಿಡಿಎಸ್‌‌ ಬಿಪಿನ್‌ ರಾವತ್‌ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ವಾಯುಸೇನೆ ಅಧಿಕೃತವಾಗಿ ತಿಳಿಸಿವೆ. ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌‌, ಅವರ ಪತ್ನಿ ಹಾಗೂ ಇತರ 12 ಮಂದಿ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಎಂಐ-17 ಸೇನಾ ಹೆಲಿಕಾಪ್ಟರ್​ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡಿತ್ತು. ಘಟನೆಯಲ್ಲಿ ಬಿಪಿನ್‌ ರಾವತ್‌ ಸೇರಿದಂತೆ ಮೂವರನ್ನು ರಕ್ಷಿಸಲಾಗಿದೆ. ಉಳಿದ ಹನ್ನೊಂದು ಮಂದಿಯ ಶವವನ್ನು ಹೊರಕ್ಕೆ ತೆಗೆಯಲಾಗಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ, ಹೆಲಿಕಾಪ್ಟರ್‌ ದುರಂತದಲ್ಲಿ ಪೈಲಟ್‌ ಸೇರಿದಂತೆ ಎಲ್ಲಾ 14 ಮಂದಿ ಮೃತಪಟ್ಟಿದ್ದಾರೆ ಎಂದು ಸದ್ಯದ ವರದಿಗಳ ಪ್ರಕಾರ ತಿಳಿದು ಬಂದಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ನವದೆಹಲಿ: LPG ಸಿಲಿಂಡರ್‌ಗಳು ಭಾರವಾಗಿರುವುದರಿಂದ ಮತ್ತು ಅವುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ಕಷ್ಟವಾಗುವುದರಿಂದ, ಸರ್ಕಾರವು ಶೀಘ್ರದಲ್ಲೇ ಅವುಗಳ ತೂಕವನ್ನು ಕಡಿಮೆ ಮಾಡಬಹುದು. ಅದರಲ್ಲೂ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ ಮೇಲೆತ್ತಲು ಮತ್ತು ಸಾಗಿಸಲು ತೊಂದರೆಯಾಗುತ್ತಿದೆ. ಸಿಲಿಂಡರ್ ತೂಕ ಕಡಿಮೆಯಾದರೆ ಜನಸಾಮಾನ್ಯರು ಕೊಂಡೊಯ್ಯುವುದು ಸುಲಭ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಪುರಿ ಸಿಂಗ್ ಕಲಾಪದಲ್ಲಿ ತಿಳಿಸಿದರು. ಜನರ ಅನುಕೂಲಕ್ಕಾಗಿ ಗ್ಯಾಸ್ ಸಿಲಿಂಡರ್ ಹಗುರವಾಗಿರುವುದು ಅವಶ್ಯಕ. ಗ್ಯಾಸ್ ಸಿಲಿಂಡರ್ ಅನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಬೇಕಾದರೆ ಕೆಲವೊಮ್ಮೆ ಸಮಸ್ಯೆಯಾಗುತ್ತದೆ. ಆದಕ್ಕಾಗಿ ಶೀಘ್ರದಲ್ಲೇ ಸರ್ಕಾರ ಎಲ್‌ ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಬಹುದು ಎಂದು ಅವರು ಹೇಳಿದರು. 14.2 ಕೆಜಿ ಗೃಹಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೂಕವು ಅದರ ಸಾಗಣೆಯಲ್ಲಿ ಸಮಸ್ಯೆಗೆ ಕಾರಣವಾಗುತ್ತದೆ. ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ತನ್ನ ತೂಕವನ್ನು ಕಡಿಮೆ ಮಾಡಲು ವಿವಿಧ ಆಯ್ಕೆಗಳನ್ನು ಪರಿಗಣಿಸುತ್ತಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್…

Read More

ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್  ಹರ್ಭಜನ್ ಸಿಂಗ್ ಶೀಘ್ರದಲ್ಲೇ ಪ್ರಮುಖ ಘೋಷಣೆ ಮಾಡುವ ನಿರೀಕ್ಷೆಯಿದೆ. ಅಂತಾರಾಷ್ಟ್ರೀಯ ಕ್ರಿಕೆಟ್, ಐಪಿಎಲ್ ಜೊತೆಗೆ ಕ್ರಿಕೆಟ್ ನ ಎಲ್ಲಾ ಮಾದರಿಗಳಿಗೂ ವಿದಾಯ ಹೇಳಲು ಭಜ್ಜಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.  ಭಜ್ಜಿ ಕ್ರಿಕೆಟ್‌ ನಿಂದ ನಿವೃತ್ತಿಯಾದ ನಂತರ ಐಪಿಎಲ್‌ ನಲ್ಲಿ ಪ್ರಮುಖ ತಂಡದ ಬೌಲಿಂಗ್ ಕೋಚ್ ಅಥವಾ ಮೆಂಟರ್ ಆಗಿ ಕಾರ್ಯ ನಿರ್ವಹಿಸುವ ಸಾಧ್ಯತೆಗಳಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆ ಬಳಿಕ ಹರ್ಭಜನ್ ಸಿಂಗ್ ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರಂತೆ. ಮೂಲಗಳ ಪ್ರಕಾರ , ಭಜ್ಜಿ ಈ ಐಪಿಎಲ್ ನಿಂದಲೇ ಸೆಕೆಂಡ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಗಳಿವೆ. ಹರ್ಭಜನ್ ಸಿಂಗ್ ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್  ಫ್ರಾಂಚೈಸಿಗಳು ಭಾರಿ ಆಫರ್ ನೀಡಿವೆಯಂತೆ. ಮೆಗಾ ಹರಾಜು ಪ್ರಕ್ರಿಯೆ ಮುಗಿದ ಬಳಿಕ ಭಜ್ಜಿ ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಭಾರತದಲ್ಲಿ ಆಯೋಜಿಸಿದ್ದ 2021…

Read More

ಕಲಬುರಗಿ: ಮರಳಿನಲ್ಲಿ ಎರಡು ವರ್ಷದ ಬಾಲಕನ ಶವ ಪತ್ತೆಯಾಗಿರುವ ಘಟನೆ ನಗರದ ಫಿರ್ದೋಸ್ ನಗರ‌ ಬಡಾವಣೆಯ ಸುಣ್ಣದ ಬಟ್ಟಿಯ ಬಳಿಯ ನಿರ್ಮಾಣ ಹಂತದ ಕಟ್ಟಡದ ಬಳಿ ನಡೆದಿದೆ. 2 ವರ್ಷದ ಮಹ್ಮದ್ ಮುಝಾಮೀಲ್ ಮೃತ ದುರ್ದೈವಿ ಬಾಲಕ ಎಂದು ಗುರುತಿಸಲಾಗಿದೆ. ಮಹ್ಮದ್ ಮುಝಾಮೀಲ್ ನಿನ್ನೆ ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ. ಇಂದು ಬೆಳಿಗ್ಗೆ ಮರಳಿನ ಗುಡ್ಡೆಯಿಂದ ಕಾರ್ಮಿಕರು ಮರಳು ತೆಗೆಯುವ ವೇಳೆ ಬಾಲಕನ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹ ಇಲ್ಲಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಆಂಟೋನಿ, ಬೇಗೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಕೊರಟಗೆರೆ: ದೊಡ್ಡಬಳ್ಳಾಪುರ ಗಡಿ ಗ್ರಾಮದ ಬೆಂಗಳೂರು ನಗರದಿಂದ ಬರುವ ಕಸದ ವಿಲೇವಾರಿ ಘಟಕದ ತ್ಯಾಜ್ಯದ ನೀರು ಬರದಂತೆ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು ತ್ಯಾಜ್ಯ ಘಟಕವನ್ನು ಸ್ಥಳಾಂತರಿಸುವ ಬಗ್ಗೆ ಸರ್ಕಾರಕ್ಕೆ ಒತ್ತಡ ಹಾಕುತ್ತೇವೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಜಿ.ಪರಮೇಶ್ವರ್ ಹೇಳಿದರು. ಇಂದು ಮಾವತ್ತೂರು ಕೆರೆ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು, ಕ್ಷೇತ್ರದ ರೈತರ, ಜನರ ಹಿತಕ್ಕಾಗಿ ಸದಾ ಬದ್ಧವಾಗಿದ್ದು ಇದಕ್ಕಾಗಿ ಎಂತಹ ಹೋರಾಟಕ್ಕೂ ಸಿದ್ದ ಎಂದು ಅವರು ಹೇಳಿದರು. ದೊಡ್ಡಬಳ್ಳಾಪುರ ಗಡಿ ಗ್ರಾಮದ ಬೆಂಗಳೂರು ನಗರದಿಂದ ಬರುವ ಕಸದ ವಿಲೇವಾರಿ ಘಟಕದ ತ್ಯಾಜ್ಯದ ನೀರು ಬರದಂತೆ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ತ್ಯಾಜ್ಯ ಘಟಕವನ್ನು ಸ್ಥಳಾಂತರಿಸುವ ಬಗ್ಗೆ ಸರ್ಕಾರಕ್ಕೆ ಒತ್ತಡ ಹಾಕುತ್ತೇವೆ ಎಂದ ಅವರು ಒಂದು ವೇಳೆ ಈ ಬಗ್ಗೆ ಸರ್ಕಾರ ಸ್ಪಂದಿಸದೆ ಇದ್ದಲ್ಲಿ ರೈತರೊಂದಿಗೆ ಜೊತೆಗೂಡಿ ಹೋರಾಟ ಮಾಡುವುದಾಗಿ  ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:…

Read More

ಕೊಯಮತ್ತೂರು: ಉನ್ನತ ಸೇನಾ ಅಧಿಕಾರಿ ಬಿಪಿನ್ ರಾವತ್  ಸೇರಿದಂತೆ 4 ಹಿರಿಯ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದ್ದು,  ಹೆಲಿಕಾಫ್ಟರ್ ಬೆಂಕಿ ಹತ್ತಿಕೊಂಡು ಉರಿದು ಹೋಗಿದೆ. ಇಲ್ಲಿನ ಕೂನೂರು ಜಿಲ್ಲೆಯ ನೀಲಗಿರಿ ಗುಡ್ಡಗಾಡು ಬಳಿ ಬುಧವಾರ ಹೆಲಿಕಾಫ್ಟರ್ ಪತನಗೊಂಡಿದ್ದು, ಸೂಲೂರ್ ಐಎಎಫ್ ನೆಲೆಯಿಂದ ವೆಲ್ಲಿಂಗ್ಟನ್‌ ನಲ್ಲಿರುವ ಡಿಫೆನ್ಸ್ ಸರ್ವಿಸಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹೆಲಿಕಾಫ್ಟರ್ ಗೆ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದಿದೆ. ಸದ್ಯ ಯಾವುದೇ ಸಾವು ನೋವುಗಳ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಜೊತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡುವ ಬಗ್ಗೆ ನಾಳಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಈ ಸಂಬಂಧ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಔಪಾಚಾರಿಕವಾಗಿ ತಜ್ಞರ ಜೊತೆ ಚರ್ಚೆ ನಡೆಸಲಿದ್ದೇನೆ. ಓಮಿಕ್ರಾನ್ ಮತ್ತು ಕೋವಿಡ್ ಸೋಂಕಿನ ಬಗ್ಗೆ ಚರ್ಚೆ ಮಾಡಲಾಗುವುದು. ಕ್ಲಸ್ಟರ್‍ ಗೆ  ಮಾರ್ಗಸೂಚಿ ಹೊರಡಿಸುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ಕೈಗೊಳ್ಳುವುದಾಗಿ ತಿಳಿಸಿದರು. ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ಜನರ ಆರೋಗ್ಯ ಮತ್ತು ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧರಿಸುತ್ತೇವೆ ಎಂದರು. ತಜ್ಞರು ಯಾವೆಲ್ಲ ಸಲಹೆಗಳನ್ನು ನೀಡುತ್ತಾರೋ ನೋಡಬೇಕು ಎಂದರು. ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಕೋವಿಡ್ ಸೋಂಕು ಅಲ್ಲಲ್ಲಿ ಕಾಣಿಸಿಕೊಳ್ಳುತ್ತದೆ. ಇದನ್ನು ನಿಯಂತ್ರಿಸಲು ಯಾವೆಲ್ಲ ಪರಿಹಾರ ಕೈಗೊಳ್ಳಬೇಕೋ ಎಂಬುದರ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಇದೇ ವೇಳೆ ಅವರು ಭರವಸೆ ನೀಡಿದರು. ಸದ್ಯ ಸರ್ಕಾರ…

Read More