Subscribe to Updates
Get the latest creative news from FooBar about art, design and business.
- ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
- ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
- ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
- ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
- ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್ ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
- ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
- ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್ ಗಳ ಕ್ಯೂ!
- ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
Author: admin
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದ್ದು ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೆ ಸಚಿವಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಗೊತ್ತು ಎಂದರು. ಈ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಕೇಂದ್ರ ನಾಯಕರು ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರಕ್ಕೆ ನಾನು ಬದ್ಧ. ಸಚಿವ ಸ್ಥಾನ ಕೊಟ್ಟರೆ ತೆಗೆದುಕೊಳ್ಳುತ್ತೇನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ ತರೂರು ವಿರುದ್ದ ನೇರ ಹಣಾಹಣಿ ಏರ್ಪಟ್ಟಿದೆ. 20 ವರ್ಷಗಳ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಗಾಂಧಿಯೇತರ ಅಧ್ಯಕ್ಷನನ್ನು ಹೊಂದಲು ಸಜ್ಜಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಮತದಾನ ನಡೆಯಲಿದ್ದು, ಅಕ್ಟೋಬರ್ 19ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಕರ್ನಾಟಕದವರೇ ಆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸರಿಸುಮಾರು 9,000 ಕ್ಕೂ ಅಧಿಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳು ಮತ ಚಲಾವಣೆ ಮಾಡುವ ಅರ್ಹತೆ ಪಡೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಮ್ಮ ಪಕ್ಷದ ನಾಯಕರಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಬಿಜೆಪಿ ಪಕ್ಷದ ಹೇಳಿಕೆಯಾಗಿಲ್ಲ. ಯತ್ನಾಳ್ ಅಲ್ಪಸಂಖ್ಯಾತ ಮೀಸಲಾತಿ ಬಗ್ಗೆ ಹೇಳಿದ್ದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದರು. ಈಗಾಗಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುವ ಸಂಬಂಧ ನೋಟಿಸ್ ನೀಡಲಾಗಿತ್ತು. ಅವರಿಂದ ಉತ್ತರವನ್ನು ಪಡೆಯಲಾಗಿದೆ. ಅವರ ಸ್ವಭಾವವೇ ಹಾಗೆ ಆಗಿದ್ದು, ಅದಕ್ಕೆ ಏನೂ ಮಾಡೋದಕ್ಕೆ ಆಗೋದಿಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಗುಬ್ಬಿ: ತಾಲೂಕಿನ ಕಡಬ ಹೋಬಳಿ ಕಲ್ಲೂರು ಗ್ರಾಮದ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ನಟರಾಜು ಹಾಗೂ ಹನುಮಂತು ನೀರುಪಾಲಾಗಿದ್ದರು. ಈ ಪೈಕಿ ಓರ್ವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳ ಭಾನುವಾರ ಪೂರ್ತಿ ಕೆರೆಯ ನೀರಿನಲ್ಲಿ ಹುಡುಕಿತ್ತು. ಆದರೆ ಇಂದು ಬೆಳಗ್ಗೆ 9 ಗಂಟೆಯ ವೇಳೆಗೆ ಬಿಳಿ ನಂದಿಯ ಬಳಿ ನಟರಾಜ್ ಅವರ ಶವ ಪತ್ತೆಯಾಗಿದೆ. ಆದರೆ ಹನುಮಂತು ಅವರ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಹನುಮಂತ ಅವರ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅಗ್ನಿಶಾಮಕ ದಳ ಪೊಲೀಸ್ ಇಲಾಖೆ ನಿರಂತರ ಪ್ರಯತ್ನದಲ್ಲಿದೆ. ವರದಿ: ಮಂಜುನಾಥ್ ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುರುವೇಕೆರೆ: ತಾಲೂಕಿನ ಸುತ್ತಮುತ್ತ ಗ್ರಾಮದಲ್ಲಿ ಕೊಬ್ಬರಿ ಕಳ್ಳತನ ಹೆಚ್ಚಾಗಿದ್ದು, ರಾತ್ರಿ ಆಗೋದನ್ನೇ ಕಾಯುವ ಕಳ್ಳರು, ವ್ಯವಸ್ಥಿತವಾಗಿ ಕಳ್ಳತನ ನಡೆಸುತ್ತಿದ್ದು, ಕಳ್ಳತನಕ್ಕೂ ಮೊದಲು ಸಿಸಿ ಕ್ಯಾಮರಾಗಳ ಕೇಬಲ್ ಕಟ್ ಮಾಡಿ, ಸಾಕ್ಷಿ ನಾಶ ನಡೆಸುತ್ತಿದ್ದಾರೆ. ಕಳ್ಳರ ಹಾವಳಿಯಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಇನ್ನು ಇದೇ ತಿಂಗಳ 13ನೇ ತಾರೀಕಿನಂದು ತಾಲೂಕಿನ ಗೋಣಿ ತುಮಕೂರು ಗ್ರಾಮದ ವಾಸಿಯಾದ ರವೀಂದ್ರ ಕುಮಾರ್ ಅವರ ಮನೆಯಲ್ಲಿ ರಾತ್ರಿ 2 ಗಂಟೆಯ ಸುಮಾರಿಗೆ 1.68 ಲಕ್ಷ ರೂಪಾಯಿ ಬೆಲೆ ಬಾಳುವ 48 ಚೀಲ ಕೊಬ್ಬರಿಯನ್ನು ಕಳವು ಮಾಡಲಾಗಿದೆ. ಕಳ್ಳತನಕ್ಕೂ ಮೊದಲು ಸಿಸಿ ಟಿವಿಯ ಕೇಬಲ್ ಕಟ್ ಮಾಡಿರೋದೇ ಅಲ್ಲದೇ ಸಿಸಿ ಕ್ಯಾಮರಾದ ಕಣ್ಣಿಗೆ ಸೆಗಣಿ ಮೆತ್ತಿ, ಮನೆಗೆ ಹೊರಗಿನಿಂದ ಚಿಲಕ ಹಾಕಿ ಮನೆಯಿಂದ ಯಾರೂ ಹೊರಗೆ ಬಾರದಂತೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಕಳ್ಳತನಕ್ಕೂ ಮೊದಲು ಅಶೋಕ್ ಲೈಲ್ಯಾಂಡ್ ಎಂಬ ಗೂಡ್ಸ್ ವಾಹನ ಮನೆಯ ಪಕ್ಕದ ರಸ್ತೆ ಬದಿಯಲ್ಲಿ ಸುಮಾರು ಹೊತ್ತಿನವರೆಗೆ ನಿಂತಿತ್ತು. ಇದೇ ವಾಹನ ರಸ್ತೆಯಲ್ಲಿ ಚಲಿಸುತ್ತಿರುವ ದೃಶ್ಯ ಸಿಸಿ…
ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಅವರಿಂದು 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇವರು ಲೆಜೆಂಡರಿ ಸ್ಪಿನ್ನರ್. ದಶಕಗಳ ಕಾಲ ಟೀಮ್ ಇಂಡಿಯಾವನ್ನು ಆಳಿದ್ದ ಕುಂಬ್ಳೆ, 1999ರ ಫೆ.7ರಂದು ಪಾಕ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಮಾಡಿದ 10 ವಿಕೆಟ್ ಗಳ ದಾಖಲೆಯನ್ನು ಯಾರಾದರೂ ಮರೆಯಲು ಸಾಧ್ಯವೇ? ಇವರು ಲೆಗ್ ಸ್ಪಿನ್‌ಗೆ ವೇಗ & ಬೌನ್ಸ್ ಸೇರಿಸಿ ಬ್ಯಾಟ್ಸ್‌ಮನ್‌ಗಳನ್ನು ಒತ್ತಡಕ್ಕೆ ಸಿಲುಕಿಸುತ್ತಿದ್ದರು. ಹೀಗಾಗಿ ಸ್ಪಿನ್ ಮಾಂತ್ರಿಕನಿಗೆ ‘ಜಂಬೋ’ ಎನ್ನುವ ಅಡ್ಡಹೆಸರೂ ಇದೆ. 1970ರ ಅಕ್ಟೋಬರ್ 17ರಂದು ಅನಿಲ್ ಕೃಷ್ಣಸ್ವಾಮಿ ಕುಂಬ್ಳೆ ಬೆಂಗಳೂರಿನಲ್ಲಿ ಜನಿಸಿದ್ದರು. ಇವರ ತಂದೆ ಕೃಷ್ಣಸ್ವಾಮಿ ಹಾಗೂ ತಾಯಿ ಸರೋಜ. ಪೋಷಕರು ಮೂಲತಃ ಕಾಸರಗೋಡು ಮೂಲದವರು. ಕುಂಬ್ಳೆ ಲೆಗ್ ಸ್ಪಿನ್ನರ್, ಇವರು ತಮ್ಮದೇ ಆದ ಬೌಲಿಂಗ್ ಶೈಲಿಗೆ ಹೆಸರುವಾಸಿಯಾಗಿದ್ದರು. ಚೇತನಾ ಅವರನ್ನು ಕುಂಬ್ಳೆ ವಿವಾಹವಾಗಿದ್ದು, ದಂಪತಿಗೆ ಪುತ್ರ ಮಯಾಸ್, ಪುತ್ರಿ ಸ್ವಸ್ತಿ ಹಾಗೂ ಆರುಣಿಯನ್ನು ದತ್ತು ಪುತ್ರಿಯನ್ನಾಗಿ ಪಡೆದಿದ್ದಾರೆ. ಜುಂಬೋ ಜೆಟ್ ಎಂದೇ ಹೆಸರಾಗಿದ್ದ ಅನಿಲ್ ಕುಂಬ್ಳೆ ಕ್ರಿಕೆಟ್ ಲೋಕದ ಅದ್ಭುತ…
ಹೆಚ್.ಡಿ.ಕೋಟೆ: ಧಾರಾಕಾರ ಮಳೆಯಿಂದಾಗಿ ಹೆಚ್.ಡಿ.ಕೋಟೆ ತಾಲ್ಲೂಕಿನ ಮಲಾರ ಕಾಲೋನಿಗೆ ಸಂಪರ್ಕಕಲ್ಪಿಸುವ ರಸ್ತೆ ಜಲಾವೃತವಾಗಿದೆ. ಕಾಲುವೆಗೆ ತಡೆಗೋಡೆ ಇಲ್ಲದೆ ಇರುವುದರಿಂದ ಕಾಲುವೆಯ ನೀರು ರಸ್ತೆಗೆ ನುಗ್ಗಿ ಜನ ಜಾನುವಾರಗಳಿಗೆ ಸಂಕಷ್ಟ ಸೃಷ್ಟಿಯಾಗಿದೆ. ರಸ್ತೆಯಲ್ಲಿ ನೀರು ಹರಿಯುತ್ತಿರೋದ್ರಿಂದಾಗಿ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಗಿದೆ. ಶಾಸಕರು ಹಾಗೂ ಅಧಿಕಾರಿಗಳು ಇತ್ತ ಗಮನ ಹರಿಸುವಂತೆ ಇಲ್ಲಿನ ನಾಗರಿಕರು ಒತ್ತಾಯಿಸಿದ್ದಾರೆ. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೆಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಯ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ಇದುವರೆಗೂ ಪಿಂಚಣಿ ಕಾಣದ ಒಂದೇ ಗ್ರಾಮದ 25 ಜನ ವೃದ್ಧರಿಗೆ ಸ್ಥಳದಲ್ಲಿಯೇ ಪಿಂಚಣಿ ಮಂಜೂರಾತಿ ಪತ್ರವನ್ನು ತಹಶೀಲ್ದಾರ್ ನಹಿದಾ ಜಮ್ ಜಮ್ ನೀಡಿದರು. ಬಳಿಕ ಮಾತನಾಡಿದ ಅವರು, ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಈ ಬಾರಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೆಪಾಳ್ಯ ಗ್ರಾಮದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ನಿಮ್ಮ ಈ ಗ್ರಾಮದಲ್ಲಿ ಇರುತ್ತಾರೆ. ಸ್ಥಳೀಯ ಸಾರ್ವಜನಿಕರ ಕುಂದು ಕೊರತೆಗಳ ಸಮಸ್ಯೆಗಳನ್ನು ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ. ಇದರಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟಂತೆ ಸುಮಾರು 47 ಅರ್ಜಿಗಳು ನಮ್ಮ ಬಳಿ ಸಾರ್ವಜನಿಕರು ಕೊಟ್ಟಿದ್ದಾರೆ. ಕೂಡಲೇ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಜತೆಗೆ ಇದೇ ಗ್ರಾಮದ 25 ವೃದ್ಧರಿಗೆ ಪಿಂಚಣಿ ಪ್ರಮಾಣ ಪತ್ರವನ್ನು…
ದೇಶದಲ್ಲಿ ಕೇಂದ್ರದ ಗೃಹ ಸಚಿವರು ಹಲವಾರು ಭಾಷೆಗಳ ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ. ಹೀಗಾಗಿ ಈ ಬಗ್ಗೆ ಈಗಾಗಲೇ ತಮಿಳುನಾಡಿನ ಸಿಎಂ ಪ್ರತಿಭಟನೆ ಮಾಡಿದ್ದಾರೆ. ಪಶ್ಚಿಮ ಬಂಗಾಳ, ಕೇರಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಭಾಷೆಗಳನ್ನು ನಾಶ ಮಾಡಿ ಒಂದು ರಾಷ್ಟ್ರ ಕಟ್ಟೋಕೆ ಹೇಗೆ ಸಾಧ್ಯ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ, ಇನ್ನೊಂದು ಕಡೆ ಭಾಷೆಯ ದಬ್ಬಾಳಿಕೆ ಪ್ರಾರಂಭ ಆಗಿದೆ. ಒಂದು ರಾಷ್ಟ್ರ ಮಾಡಬೇಕು ಎಂದು ಬಿಜೆಪಿ ಹೇಳ್ತಿದ್ದಾರೆ. ಭಾಷೆಗಳನ್ನು ನಾಶ ಮಾಡಿ ಒಂದು ರಾಷ್ಟ್ರ ಕಟ್ಟೋಕೆ ಹೇಗೆ ಸಾಧ್ಯ? ಕೇಂದ್ರದ ಧೋರಣೆ ಸಂಪೂರ್ಣವಾಗಿ ಸ್ಥಗಿತಗೊಳಿಸಿ. ದೇಶದಲ್ಲಿ ಇರುವ ಸಮಸ್ಯೆ ಬಗೆಹರಿಸಿ ಎಂದು ಕಿಡಿಕಾರಿದರು. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು ದೇಶಕ್ಕೆ ಮಾರಕ. ಒಂದೇ ನಾಣ್ಯದ ಎರಡೂ ಮುಖ. ದಕ್ಷಿಣ ಭಾರತದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಬಾಗಿಲು ಹಾಕಿದ್ದಾರೆ. ಕರ್ನಾಟಕದಲ್ಲೂ ಅದು ಬಹಳ…
ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಇಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿದಂತೆ 332 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ 166 ಸಿವಿಲ್, 3 ಮೆಕ್ಯಾನಿಕಲ್ ಹುದ್ದೆಗಳ ಬರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರ ಹುದ್ದೆಗಳು, 58 ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುವುದು. ಅಕ್ಟೋಬರ್ 19 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 17 ಕೊನೆಯ ದಿನವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಕನ್ನಡ ಕಡ್ಡಾಯ ಪರೀಕ್ಷೆ ಬರೆಯಬೇಕಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ತೊಂದರೆಯಾದಲ್ಲಿ 18005728707 ಸಂಪರ್ಕಿಸುಬಹುದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…