Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ವಿಜಯನಗರ : ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ನಗರದ ಬಿಜೆಪಿ ಜಿಲ್ಲಾ ಭವನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಅವರು, ವಿಜಯನಗರ ನೆಲದ ಗುಣವೇ ವಿಶೇಷವಾಗಿದೆ. ಗತವೈಭವ ಸಾರಿದ ನಾಡು ಇದು. ಆದ್ದರಿಂದ ಉತ್ತರ ಕರ್ನಾಟಕ ರಾಜ್ಯವಾದರೆ ನೂತನ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಇಂದು ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ತಲಾ 5000 ರೂ. ಹಣ ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಕೈಮಗ್ಗ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ತಲಾ 5000 ರೂ.ನಂತೆ 23.43 ಕೋಟಿ ರೂ. ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಿದ್ದಾರೆ. ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ನೆರವಾಗಲು ನೇಕಾರ ಸಮ್ಮಾನ್ ಯೋಜನೆಯನ್ನು ಮುಖ್ಯಮಂತ್ರಿಗಳು 2020 -21ನೇ ಸಾಲಿನಿಂದ ಅನ್ವಯವಾಗುವಂತೆ ಘೋಷಣೆ ಮಾಡಿದ್ದು, ಕೈಮಗ್ಗ ನೇಕಾರರಿಗೆ ಇದು ನೆರವಾಗಲಿದೆ ಎಂದು ಕೈಮಗ್ಗ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ತಾಲ್ಲೂಕಿನ ವಜ್ಜನಕುರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಜಿ.ಕಂಬದಹಳ್ಳಿ ಗ್ರಾಮದಲ್ಲಿ ರಂಗರಾಜು ಎಂಬ ರೈತನ ಎಡವಟ್ಟಿನಿಂದ ಇಡಿ ಗ್ರಾಮವೇ ಅಪಾಯಕ್ಕೀಡಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಅದೃಷ್ಟವಶಾತ್ ಯಾವುದೇ ಅಂತಹ ಘಟನೆಗಳು ಸಂಭವಿಸದೇ ಗ್ರಾಮಸ್ಥರು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಪಕ್ಕದ ಜಮೀನಿನ ಮಾಲೀಕ ಸರ್ಕಾರಿ ಭೂಮಿಯನ್ನು ಉಳುಮೆ ಮಾಡಿ ಒತ್ತುವರಿ ಮಾಡುವ ಭರದಲ್ಲಿ ರಸ್ತೆ ಪಕ್ಕದಲ್ಲಿ ವಿದ್ಯುತ್ ಕಂಬವಿದ್ದರು ಸಹ ರೈತ ರಂಗರಾಜುವಿನ ದುರಾಸೆಗೆ ಮಣ್ಣು ತೆಗೆಸಿ ಭೂ ಸ್ವಾಧೀನ ಮಾಡಿಕೊಂಡು ವಿದ್ಯುತ್ ಕಂಬವನ್ನು ನೆಲಕ್ಕುರುಳಿಸಿದ್ದಾನೆ. ಆದ್ದರಿಂದ ಇಂತಹ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬೆಸ್ಕಾಂ ಇಲಾಖೆ ನಿರ್ಲಕ್ಷ್ಯ: ಕಳೆದ ಎರಡು ತಿಂಗಳ ಹಿಂದೆಯೇ ಕಂಬ ಬೀಳುವ ಸಾಧ್ಯತೆ ಕಂಡುಬಂದಿತ್ತು. ಇದನ್ನು ಕಂಡ ಸ್ಥಳೀಯರು ತೀತಾ ಬೆಸ್ಕಾಂ ಇಲಾಖೆಯ ಗಮನಕ್ಕೆ ಅರ್ಜಿ ನೀಡಿ ಬೇರೆಡೆಗೆ ಕಂಬ ಸ್ಥಳಾಂತರಿಸಿ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಲು ತಿಳಿಸಿದ್ದರು . ಆದರೆ ಇವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡದೆ ಅರ್ಜಿಯನ್ನು…
ಕೊರಟಗೆರೆ : 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸ್ಮಮೇಳನವನ್ನು 2023ರ ಜ.6 ರಿಂದ 8 ರವರೆಗೆ ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಸಮ್ಮೇಳನವನ್ನು ವಿಶೇಷವಾಗಿ ಆಚರಿಸಲು ಕನ್ನಡ ಜ್ಯೋತಿ ರಥ ಯಾತ್ರೆಯು ರಾಜ್ಯಾದ್ಯಾಂತ ಸಂಚರಿಸುತ್ತಿರುವುದು ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರೂ ಭಾಗವಹಿಸಬೇಕು ಎಂದು ಕನ್ನಡ ಪರ ಸಂಘಟನೆಗಳು ಮನವಿ ಮಾಡಿವೆ. ಡಿ.13ರ ಮಂಗಳವಾರ ಕೊರಟಗೆರೆ ಪಟ್ಟಣಕ್ಕೆ ಆಗಮಿಸಿದ ಕನ್ನಡದ ಭುವನೇಶ್ವರಿ ರಥವನ್ನು ಬಹಳ ಅದ್ಧೂರಿಯಾಗಿ ವಿವಿಧ ವಾದ್ಯ ಗೋಷ್ಟಿಗಳೊಂದಿಗೆ ಭಕ್ತಿ ಪೂರ್ವಕವಾಗಿ ನಗರದ ಪ್ರಮುಖ ರಸ್ತೆಯಲ್ಲಿ ತಾಲ್ಲೂಕು ಆಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ, ಕನ್ನಡಪರ ಸಂಘಟನೆಗಳು ಕನ್ನಡ ಜ್ಯೋತಿ ರಥವನ್ನು ಮೆರವಣೆಗೆಯೊಂದಿಗೆ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕೊರಟಗೆರೆ ತಾಲೂಕು ಆಡಳಿತ ವತಿಯಿಂದ ತಹಶೀಲ್ದಾರ್ ನಾಹಿದಾ ಜಮ್ ಜಮ್, ಪ.ಪಂ ಅಧ್ಯಕ್ಷೆ ಕಾವ್ಯರಮೇಶ್, ಸದಸ್ಯರಾದ ಎ.ಡಿ.ಬಲರಾಮಯ್ಯ, ಕೆ.ಆರ್.ಓಬಳರಾಜು, ಕರವೇ ಅಧ್ಯಕ್ಷ ನಟರಾಜು,ಕರ್ನಾಟಕ ರಣಧೀರರ ವೇದಿಕೆ ಮಂಜುಸ್ವಾಮಿ.ಎಂ.ಎನ್. ದೇವರಾಜು ಕೆ ಎನ್, ಕರವೇ ಹರೀಶ್ ಬಾಬು ಪ್ರದೀಪ್ಕುಮಾರ್, ಗೋವಿಂದರಾಜು, ರಂಗನಾಥ್, ಪ.ಪಂ ಮುಖ್ಯಾಧಿಕಾರಿ…
ಮಾಜಿ ಸಚಿವ ಜನಾರ್ದನರೆಡ್ಡಿ ನಮ್ಮ ಜೊತೆಯಲ್ಲೇ ಇರ್ತಾರೆ. ಪಕ್ಷ ಬಿಟ್ಟು ಎಲ್ಲೂ ಹೋಗಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಇಂದು ಈ ಕುರಿತು ಮಾಧ್ಯಮದವರೊಡನೆ ಮಾತಾಡಿದ ಬಿಎಸ್ ಯಡಿಯೂರಪ್ಪ, ಜನಾರ್ಧನ ರೆಡ್ಡಿ ಅವರ ಪರ ಬ್ಯಾಟ್ ಬೀಸಿದರು. ಜನಾರ್ಧನ ರೆಡ್ಡಿ ಪಕ್ಷವನ್ನು ಬಿಟ್ಟು ಎಲ್ಲೂ ಹೋಗಲ್ಲ, ಅವರು ಗಂಗಾವತಿಯಲ್ಲಿ ಮನೆಕಟ್ಟಿದ್ದಾರೆ ಅಂದಮಾತ್ರಕ್ಕೆ ಹೊಸಪಕ್ಷ ಕಟ್ಟುತ್ತಾರೆ ಅಂತ ಅರ್ಥ ಕಲ್ಪಿಸಬಾರದು. ರೆಡ್ಡಿಯವರು ಪಕ್ಷದಲ್ಲಿರುವುದು ಎಷ್ಟು ಮಹತ್ವ ಅನ್ನೋದನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡುತ್ತೇನೆ, ರಾಜ್ಯದಲ್ಲಿ ಪಕ್ಷದ ಸಂಘಟನೆಯಲ್ಲಿ ಅವರು ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. ಎಲ್ಲಾ ಕೇಸ್ ಇತ್ಯರ್ಥಪಡಿಸಿಕೊಂಡು ಬಿಜೆಪಿಗೆ ರೆಡ್ಡಿ ಮರಳುತ್ತಾರೆ. ರೆಡ್ಡಿ ಅವರ ಜೊತೆ ಮಾತನಾಡಿದ್ದೇನೆ ಎಂದರು. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧಿಸುತ್ತಾರೆ ಎಂದಿದ್ದೇನೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ ಎಂದು ಬಿಎಸ್ ವೈ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಈ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ವಾದ, ಆರೋಪ ಪ್ರತ್ಯಾರೋಪಗಳು ಮುಂದುವರೆದಿದೆ. ಈ ಮಧ್ಯೆ ತೋಟಗಾರಿಕೆ ಸಚಿವ ಮುನಿರತ್ನ, ಬಿಜೆಪಿಗೆ ಬರಲು 22 ಶಾಸಕರು ಸಿದ್ಧರಿದ್ದಾರೆ ಎಂದು ಹೊಸಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಬಿಜೆಪಿ ಬರಲು 22 ಶಾಸಕರು ಸಿದ್ದರಿದ್ದಾರೆ. ಅದರಲ್ಲಿ 10 ಶಾಸಕರನ್ನ ಆಯ್ಕೆ ಮಾಡಿಕೊಳ್ಳುತ್ತೀವಿ. ನಮ್ಮ ಹಳೆಯ ಮಿತ್ರ 10 ಶಾಸಕರನ್ನ ಕರೆತರುತ್ತಿದ್ದಾರೆ. 10 ಕಾಂಗ್ರೆಸ್ ಶಾಶಕರ ಟೀಮ್ ಬಿಜೆಪಿಗೆ ಬರುತ್ತಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸ್ಟಾನ್ ಸ್ವಾಮಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಎನ್ ಐಎ ಮೌನ ವಹಿಸಿರುವ ಬೆನ್ನಲ್ಲೇ, ಈ ಕುರಿತು ಪ್ರತಿಪಕ್ಷಗಳು ತಂದಿರುವ ತುರ್ತು ನಿರ್ಣಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲು ಕೇಂದ್ರ ಸಿದ್ಧವಾಗಿಲ್ಲ. ಇಂದೂ ಕೂಡ ಸಂಸತ್ತಿನ ಒಳಗೆ ಮತ್ತು ಹೊರಗೆ ನಕಲಿ ದಾಖಲೆಗಳ ಆಧಾರದಲ್ಲಿ ಭಯೋತ್ಪಾದನೆ ಪ್ರಕರಣ ದಾಖಲಿಸಿರುವ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಅಮೆರಿಕದ ವಿಧಿವಿಜ್ಞಾನ ಪ್ರಯೋಗಾಲಯದ ಸಂಶೋಧನೆಗಳ ಸುದ್ದಿ ಆಧರಿಸಿ ಫಾದರ್ ಸ್ಟಾನ್ ಸ್ವಾಮಿ ವಿರುದ್ಧದ ಪಿತೂರಿ ತನಿಖೆಗೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರು ಮತ್ತು ವಿವಿಧ ಸಂಘಟನೆಗಳು ಇದೀಗ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ಈ ಪ್ರತಿಭಟನೆಯನ್ನು ಪ್ರತಿಬಿಂಬಿಸಿದ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದವು. ಲೋಕಸಭೆಯಲ್ಲಿ ಕೇರಳದ ಎ.ಎಂ.ಆರಿಫ್ ಅವರು ತುರ್ತು ಪ್ರಸ್ತಾವನೆ ನೋಟಿಸ್ ನೀಡಿದ್ದರು. ಆದರೆ ಅದನ್ನು ಮಂಡಿಸಲು ಪೀಠ ಅನುಮತಿ ನೀಡಲಿಲ್ಲ. ಫಾದರ್ ಸ್ಟಾನ್ ಸ್ವಾಮಿ ಅವರ ಲ್ಯಾಪ್‌ಟಾಪ್‌ಗೆ 40 ಕ್ಕೂ ಹೆಚ್ಚು ದಾಖಲೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಯುಎಸ್…
ಕ್ರಿಸ್‌ಮಸ್ ಸ್ವಾಗತಕ್ಕೆ ವಿಶ್ವವೇ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಹಲವೆಡೆ ಸಂಭ್ರಮಾಚರಣೆ ಆರಂಭವಾಗಿದೆ. ಹಬ್ಬದ ರಾತ್ರಿಗಳು ಬಂದಿರುವುದರಿಂದ ಮಕ್ಕಳು ವಯಸ್ಕರಿಗಿಂತ ಹೆಚ್ಚು ಉತ್ಸುಕರಾಗಿದ್ದಾರೆ. ತಂದೆ-ತಾಯಿಯನ್ನು ಹೊರತುಪಡಿಸಿ ಈಗ ಸಾಂತಾಕ್ಲಾಸ್‌ನಿಂದ ಹಣ ಪಡೆಯುವ ಕನಸು ಕಾಣುತ್ತಿದ್ದಾರೆ. ವಿದೇಶಗಳಲ್ಲಿ ಕ್ರಿಸ್ಮಸ್ ಸಂಪ್ರದಾಯದ ಭಾಗವಾಗಿ, ಮಕ್ಕಳು ಸಾಂಟಾ ಕ್ಲಾಸ್ಗೆ ಪತ್ರಗಳನ್ನು ಬರೆಯುತ್ತಾರೆ. ಇದೀಗ 8 ವರ್ಷದ ಬಾಲಕಿಯ ಪತ್ರವೊಂದು ಸಾಮಾಜಿಕ ಜಾಲತಾಣಗಳ ಮನ ಗೆಲ್ಲುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದೇಶಾದ್ಯಂತ 1,472 ಐಎಎಸ್, 864 ಐಪಿಎಸ್ ಮತ್ತು 1,057 ಐಎಫ್‌ಎಸ್ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಪ್ರಕಟಿಸಿದೆ. ಜನವರಿ 1, 2022 ರ ವೇಳೆಗೆ ದೇಶದಲ್ಲಿ 6,789 ಐಎಎಸ್ ಹುದ್ದೆಗಳು, 4,984 ಐಪಿಎಸ್ ಹುದ್ದೆಗಳು ಮತ್ತು 3,191 ಐಎಫ್‌ಎಸ್ ಹುದ್ದೆಗಳಿವೆ ಎಂದು ಕೇಂದ್ರ ಸಿಬ್ಬಂದಿ ವ್ಯವಹಾರಗಳ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಬುಧವಾರ ಲೋಕಸಭೆಗೆ ತಿಳಿಸಿದರು. ಪ್ರಸ್ತುತ 5,371 ಐಎಎಸ್, 4,120 ಐಪಿಎಸ್ ಮತ್ತು 2,134 ಐಎಫ್ಎಸ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುವುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಿಜೆಪಿ ಪಕ್ಷದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನ ಕಡೆಗಣಿಸಲಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಬವವಾಗಿದ್ದು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ಸಂಬಂಧ ಸ್ವತಃ ಬಿ.ಎಸ್ ಯಡಿಯೂರಪ್ಪ ಅವರೇ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ರಾಜಕೀಯವಾಗಿ ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ಬಿಜೆಪಿಯಲ್ಲಿ ನನಗೆ ನನ್ನದೇ ಆದ ಶಕ್ತಿ ಇದೆ. ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕಕ್ಕೆ ತರೋಕೆ ಶ್ರಮ ವಹಿಸಿದ್ದೇನೆ. ಇದು ಇಡೀ ರಾಜ್ಯದ ಜನರಿಗೆ ಗೊತ್ತಿದೆ . ಅದನ್ನೇ ಮುಂದುವರೆಸುತ್ತೇನೆ. ಬಿಜೆಪಿ ಪಕ್ಷ ಅದಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ ಎಂದರು. ಹಾಗೆಯೇ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy