Subscribe to Updates
Get the latest creative news from FooBar about art, design and business.
- ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
- ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
- ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
- ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್ ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
- ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
- ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್ ಗಳ ಕ್ಯೂ!
- ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
- ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
Author: admin
ಕೊರಟಗೆರೆ: ತಾಲ್ಲೂಕಿನಲ್ಲಿ ತಡರಾತ್ರಿ ಸುರಿದ ಭಾrI ಮಳೆಯಿಂದ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕೇಗೌಡನಹಳ್ಳಿ ಗ್ರಾಮದ ಪಕ್ಕದಲ್ಲಿರುವ ಹೊಂಗೆ ಹಳ್ಳದಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಆಹಾರ ಅರಸಿ ಬಂದ ಕರಡಿ ಮರಿ ಹಳ್ಳ ದಾಟಲು ಸಾಧ್ಯವಾಗದೆ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಳೆದ 3 ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಎಲ್ಲ ಹಳ್ಳ ಕೊಳ್ಳಗಳು ಕೆರೆಗಳು ತುಂಬಿ ಹರಿಯುತ್ತಿವೆ. ಹಳ್ಳದ ಹೆಚ್ಚಿನ ನೀರಿನ ರಭಸಕ್ಕೆ ಕೊಚ್ಚಿ ಹೋದ ಕರಡಿ ಮರಿ ದಾರುಣವಾಗಿ ಸಾವನ್ನಪ್ಪಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ “ಕರಡಿ 2 ವರ್ಷದ ಮರಿಯಾಗಿರುವುದರಿಂದ ಈಜು ಬರದೆ ಮುಳುಗಿ ಸಾವನ್ನಪ್ಪಿದೆ” ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ದೂರದ ಬೆಟ್ಟದಲ್ಲಿ ಕರಡಿ ಮರಿ ಮೃತ ದೇಹವನ್ನ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಿಳಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಬೆಳಗಾವಿ : ಲಿಂಗಾಯತ ಸಂಸ್ಥೆ ಬೆಳೆಯಲು ಕೋರೆ ಅವರು ಪಟ್ಟಿರುವ ಶ್ರಮ ರಾಜಕೀಯದ ರಂಗಕ್ಕೆ ನೀಡಿದ್ದರೆ ದೊಡ್ಡ ನಾಯಕರಾಗಿ ಹೊರಹೊಮ್ಮುತ್ತಿದ್ದರು. ಆದರೆ ಅವರು ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅವರನ್ನು ದೊಡ್ಡವರನ್ನಾಗಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಡಾ. ಪ್ರಭಾಕರ ಕೋರೆ ಅವರು 75 ವರ್ಷದ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಕೋರೆ ಅವರು ಆದರ್ಶ ಜೀವನ ನಡೆಸಿದ್ದಾರೆ. ಕೆಎಲ್ ಇ ಸಂಸ್ಥೆ ಅವರ ಮುಂದಾಳತ್ವದಲ್ಲಿ ಗುಣಮಟ್ಟ ಉಳಿಸಿಕೊಂಡು ಮುನ್ನಡೆಸಿದರು. ಎಲ್ಲ ಸವಾಲುಗಳನ್ನು ಎದುರುರಿಸಿ ದೊಡ್ಡ ವಿಶ್ವ ವಿದ್ಯಾಲಯಯಾಗಿ ಕೆಎಲ್‍ಇಯನ್ನು ಪರಿವರ್ತಿಸಿದರು. ಗ್ರಾಮೀಣ ಭಾಗದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳನ್ನು ದೊಡ್ಡವರನ್ನಾಗಿ ಮಾಡಿದ್ದಾರೆ. ಕೆಎಲ್‍ಇ ಸಂಸ್ಥೆ ಸರಕಾರ ಮಾಡದ ಕೆಲಸ ಮಾಡುತ್ತಿದೆ. ಕೆಎಲ್‍ಇ ಸಂಸ್ಥೆಯ ಪ್ರೇರಣೆಯಿಂದ ಬೇರೆ ಜಿಲ್ಲೆಯಲ್ಲಿ ಬೇರೆ ಸಂಸ್ಥೆಗಳು ಕಾರ್ಯ ಮಾಡುತ್ತಿವೆ. ಅದಕ್ಕೆ ಕೆಎಲ್‍ಇ ಆದರ್ಶ ಕಾರಣ ಎಂದರು.…
ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ ದೊರೆಯಲಿದೆ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಶೀಘ್ರದಲ್ಲಿಯೇ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ. ಜನಸಂಕಲ್ಪ ಯಾತ್ರೆ ನಡುವೆಯೇ ದೆಹಲಿಗೆ ತೆರಳುತ್ತಿದ್ದೇನೆ. ಹೈಕಮಾಂಡ್ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುವುದು. ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಗಲಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಾರಾಷ್ಟ್ರ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ದೀಪಾಲಿ ಶೀತಲ್ ಖಂಗರ್ (28) ಮತ್ತು ಮೂರು ಹಾಗೂ ಎರಡು ವರ್ಷದ ಹೆಣ್ಣುಮಕ್ಕಳು ಎಂದು ಗುರುತಿಸಲಾಗಿದೆ. ಇವರು ಭಂಡಾರ ತಾಲೂಕಿನ ತಿದ್ದಿ ಗ್ರಾಮದ ನಿವಾಸಿಗಳು ಎಂದು ಗೊತ್ತಾಗಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದೀಪಾಲಿ ತಮ್ಮ ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನದಿಯಲ್ಲಿ ಶವಗಳು ತೇಲಿಬಂದಿದ್ದು, ಆಗ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ರಾಜಕೀಯ ಪಕ್ಷಗಳು ಜಿದ್ದಿಗೆ ಬಿದ್ದಂತೆ ಮತದಾರರ ಓಲೈಕೆಗೆ ಮುಂದಾಗಿದ್ದು, ಹೊಸ ಹೊಸ ಯೋಜನೆ, ಅಭಿಯಾನದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇದೀಗ ಜೆಡಿಎಸ್ ನಾಯಕರು ಮನೆ ಮನೆಗೆ ಕನ್ನಡ ಬಾವುಟ ಅಭಿಯಾನಕ್ಕೆ ಸಜ್ಜಾಗಿದ್ದು, ನವೆಂಬರ್ 1ರಿಂದ ರಾಜ್ಯಾದ್ಯಂತ 15 ದಿನಗಳ ಕಾಲ ಕನ್ನಡ ಬಾವುಟ ಅಭಿಯಾನ ನಡೆಯಲಿದೆ. ರಾಷ್ಟ್ರಪ್ರೇಮದ ಜೊತೆಗೆ ರಾಜ್ಯ ಪ್ರೀತಿ ಸಂದೇಶ ಸಾರುವುದೇ ನಮ್ಮ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹರ್ ಘರ್ ತಿರಂಗಾ ಅಭಿಯಾನದ ಮಾದರಿಯಲ್ಲೇ ಮನೆ ಮನೆಗೂ ಕನ್ನಡ ಬಾವುಟ ಅಭಿಯಾನ ಆರಂಭಿಸಲಾಗುತ್ತಿದೆ. ನವೆಂಬರ್. 1 ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಂದಿನಿಂದ ನ.15ರವರೆಗೆ ಮನೆ ಮನೆಗೆ ಕನ್ನಡ ಬಾವುಟ ವಿತರಿಸಲಾಗುವುದು ಎಂದು ಹೇಳಿದ್ದಾರೆ. ಒಂದು ರಾಷ್ಟ್ರ ಒಂದು ಭಾಷೆ ಎಂಬ ನಿಟ್ಟಿನಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಎಲ್ಲಾ ಭಾಷೆಗಳನ್ನು ನಾಶ ಮಾಡಿ ಒಂದು ಭಾಷೆ ಎಂದು ಮಾಡಲು ಹೊರಟಂತಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ದೇಶಕ್ಕೆ ಮಾರಕವಾಗಿವೆ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ…
ಕೊರಟಗೆರೆ : ಇಸ್ಲಾಂ ಧರ್ಮದ ಮುಸ್ಲಿಂ ಸಮುದಾಯದಲ್ಲಿರುವ ಉಪ ಜಾತಿಯಾದ ಪಿಂಜಾರ/ನದಾಫ್ ಜನಾಂಗದವರಿಗೆ ಪ್ರವರ್ಗ -1ರ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಕೊರಟಗೆರೆ ತಹಶೀಲ್ದಾರ್ ನಹಿದ ಜಂ ಜಂ ರವರಿಗೆ ಮನವಿ ಸಲ್ಲಿಸಲಾಯಿತು. ತುಮಕೂರು ಜಿಲ್ಲಾ ಪಿಂಜಾರ/ನದಾಫ್ ಸಂಘದ ಜಿಲ್ಲಾಧ್ಯಕ್ಷರಾದ ಬಶೀರ್ ಅಹಮದ್ ಮಾತನಾಡಿ, 1993-94ರ ಹಿಂದೆ ಧಾರ್ಮಿಕವಾಗಿ ಇಸ್ಲಾಂ ಧರ್ಮದ ಅನುಯಾಯಿಗಳು ಆಗಿರುವ ಪಿಂಜಾರ ನದಾಫ್ ಸಮುದಾಯದ ಸದಸ್ಯರುಗಳು ಶಾಲಾ ದಾಖಲಾತಿ ವೇಳೆ ಹಾಗೂ ಇತರೆ ದಾಖಲಾತಿಗಳನ್ನು ಪಡೆಯುವ ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರದಲ್ಲಿ ಉಪಜಾತಿ ಕಾಲಂ ಇಲ್ಲದೆ ಇದ್ದದ್ದರಿಂದ ಇಸ್ಲಾಂ ಅಥವಾ ಮುಸ್ಲಿಂ ಎಂದು ನಮೂದಿಸಿದ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗಳು ಮತ್ತು ಸರ್ಕಾರ ನಿರ್ವಹಿಸುತ್ತಿದ್ದು ಕಂಡುಬಂದಿದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಆದೇಶದಂತೆ ಪಿಂಜಾರ ನದಾಫ್ ಪಂಗಡದ ಸದಸ್ಯರು ಪ್ರವರ್ಗ -೧ರ ಜಾತಿ ಪ್ರಮಾಣ ಪತ್ರ ಪಡೆಯಲು ಅರ್ಹರಾಗಿರುತ್ತಾರೆ ಎಂದರು. ಸಮುದಾಯದ ಏಳಿಗೆಗಾಗಿ ಮತ್ತು ಅಭಿವೃದ್ಧಿಗಾಗಿ ಪಿಂಜಾರ/ನದಾಫ್ ಸಂಘದ ಹಾಗೂ ಸ್ಥಳೀಯ ಸಾಕ್ಷಿ ಮತ್ತು ಆಧಾರದ ಮೇರೆಗೆ…
ಕೊರಟಗೆರೆ: ಪಟ್ಟಣದ ಬೈಪಾಸ್ ರಸ್ತೆಯಲ್ಲಿ ರಾತ್ರಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬೈಕ್ ಸವಾರ ವೆಂಕಟರಮಣಪ್ಪ (38)ವರ್ಷ ಕೊರಟಗೆರೆಯ ಬೈಪಾಸ್ ರಸ್ತೆಯಲ್ಲಿರುವ ನವೀನ್ ಬಾರ್&ರೆಸ್ಟೋರೆಂಟ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಎದುರಿನಿಂದ ಬಂದ ಲಾರಿ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವೆಂಕಟರಮಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ . ಬೈಕ್ ಸವಾರ ಸಾವನ್ನಪ್ಪಿದ ಕೂಡಲೇ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ವಿಷಯ ತಿಳಿದ ತಕ್ಷಣವೇ ಘಟನೆ ನಡೆದ ಸ್ಥಳಕ್ಕೆ ಬಂದ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಕೊರಟಗೆರೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವೆಂಕಟರಮಣಪ್ಪನವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ…
ರಾಯಚೂರು : ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧ ವಿಚಾರವಾಗಿ ಸಚಿವ ಆರ್. ಆಶೋಕ್ ಮಾತನಾಡಿ ಕನ್ನಡ ಭವನ ಮಾಡೇ ಮಾಡುತ್ತೇವೆ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಸಚಿವ ಆರ್. ಆಶೋಕ್ ಮಾತನಾಡಿ, ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧವಿದೆ ಆದರೂ ಮಹಾರಾಷ್ಟ್ರದಲ್ಲಿ ಕನ್ನಡ ಭವನ ಮಾಡೇ ಮಾಡುತ್ತೇವೆ ಎಂದಿದ್ದಾರೆ. ನಮ್ಮ ರಾಜ್ಯದಲ್ಲಿ ಶಿವಾಜಿ ಮೂರ್ತಿಗಲು ಇವೆ. ಉತ್ತರ ಭಾರತದವರಿಗೂ ನಾನು ಇಲ್ಲಿ ಜಾಗ ಕೊಟ್ಟಿದ್ದೇವೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಣ ಮಾಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಾಸನ: ಕೆಎಸ್ಆರ್ ಟಿಸಿ ಬಸ್, ಟ್ಯಾಂಕರ್, ಟಿಟಿ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 9 ಜನ ಸಾವನ್ನಪ್ಪಿದ ಘಟನೆ ತಡರಾತ್ರಿಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಳ್ಳಿಕೆರೆ ಗ್ರಾಮದ ಬಳಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮಕ್ಕಳು ಸೇರಿದಂತೆ 9 ಜನ ಸಾವನ್ನಪ್ಪಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಿಟಿ ವಾಹನ ಟ್ಯಾಂಕರ್ ಓವರ್ ಟೇಕ್ ಮಾಡುವಾಗ ಎದುರಿನಿಂದ ಬಂದ ಕೆಎಸ್ಆರ್.ಟಿ.ಸಿ. ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ತಾಲ್ಲೂಕಿನಲ್ಲಿ ಸುಮಾರು 12 ವರ್ಷಗಳಿಂದ ಕರ್ನಾಟಕದ ರಕ್ಷಣಾ ವೇದಿಕೆ (ಟಿ.ಎ.ನಾರಾಯಣ ಗೌಡರ ಬಣ) ಕನ್ನಡ ಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ಕನ್ನಡ ಪರ ಹೋರಾಟಗಳಲ್ಲಿ ತೊಡಗಿದ್ದ ಕೆ.ಎನ್.ನಟರಾಜು ತಾಲ್ಲೂಕು ಅಧ್ಯಕ್ಷನಾಗಿ ಕನ್ನಡ ನಾಡಿನ ನೆಲ,ಜಲ,ಭಾಷೆ, ವಿಚಾರವಾಗಿ ಸತತ ಹೋರಾಟಗಳನ್ನು ನಡೆಸಿಕೊಂಡು ತಾಲ್ಲೂಕಿನಲ್ಲಿ ನೂರಾರು ಹೋರಾಟಗಳನ್ನು ಮಾಡಿ ನೊಂದವರ ಪರ ಧ್ವನಿಯಾಗಿ ಕನ್ನಡ ಪರ ಸಂಘಟನೆಗಳ ಹೋರಾಟಗಳಲ್ಲಿ ಮುಂಚೂಣಿ ನಾಯಕರಾಗಿ ತಾಲ್ಲೂಕಿನಲ್ಲಿ ಹೊರಹೊಮ್ಮಿದ್ದಾರೆ. ಆದರೆ, ಕೆಲವು ದಿನಗಳ ಹಿಂದೆ ರಾಜಕೀಯ ಪ್ರೇರಿತವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಕೆ ಎನ್ ನಟರಾಜು ರವರನ್ನು ಯಾವುದೋ ದುರುದ್ದೇಶಕ್ಕೆ ಅಧ್ಯಕ್ಷ ಸ್ಥಾನದಿಂದ ವಜಾಗೋಳಿಸಿರುವುದು ತಾಲ್ಲೂಕಿನ ಕರವೇ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ತುಮಕೂರು ಜಿಲ್ಲಾಧ್ಯಕ್ಷ ಮಂಜುನಾಥ್ ಗೌಡ ಕಾರಣರಾಗಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕಲಿಂ ವುಲ್ಲ, ಸುಮಾರು 12 ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಮತ್ತು ಕನ್ನಡಪರ ಕಾರ್ಯಕ್ರಮಗಳಲ್ಲಿ ನಿರಂತರವಾದ ಸೇವೆ ಸಲ್ಲಿಸಿಕೊಂಡು ಬಂದಿರುವ ಕರವೇ ಅಧ್ಯಕ್ಷ ಕೆ.ನಟರಾಜ್ ರವರನ್ನು…