Subscribe to Updates
Get the latest creative news from FooBar about art, design and business.
- ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
- ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
- ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
- ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
- ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
- ಹುಯಿಲ್ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
- ತುಮಕೂರು: ಗಾಜಿನ ಮನೆಯಲ್ಲಿ ‘ಸಿರಿಧಾನ್ಯ ಖಾದ್ಯಗಳ’ ಘಮಲು!
- 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್ ಗೆ ಪದೋನ್ನತಿ
Author: admin
ಕೊಪ್ಪಳ: ಮುಸ್ಟೂರು ಗ್ರಾಮ ಪಂಚಾಯತಿಯ ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿಯಾದ ಪರಿಣಾಮ 31 ಜನ ಗಾಯಗೊಂಡಿರುವ ಘಟನೆ ಕಾರಟಗಿ ತಾಲೂಕಿನ ಬರಗೂರು ಕ್ರಾಸ್ ಬಳಿ ನಡೆದಿದೆ. ಬರಗೂರು ಕ್ರಾಸ್ ಬಳಿ ವಾಹನ ಪಲ್ಟಿಯಾಗಿದೆ. ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದು, 28 ಜನರಿಗೆ ಸಣ್ಣಪುಟ್ಟಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿ ಹಾಗೂ ಕೊಪ್ಪಳದ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಇನ್ನುಳಿದವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ. ವಿಷಯ ತಿಳಿದು ಸಚಿವ ಶಿವರಾಜ ತಂಗಡಗಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಕಾರ್ಮಿಕರ ಆರೋಗ್ಯ ವಿಚಾರಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ಪಾಮಾದಲ್ಲಿ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್ ಉಗ್ರರನ್ನು ಹತ್ಯೆ ಮಾಡಿದೆ. ಪುಲ್ವಾಮಾ ಜಿಲ್ಲೆಯ ಉಪನಗರವಾದ ಅವಂತಿಪೋರಾದ ನಾಡರ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಮೂವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ಕಳೆದ ಮೂರು ದಿನಗಳಲ್ಲಿ ನಡೆದ 2ನೇ ಎನ್ ಕೌಂಟರ್ ಇದಾಗಿದೆ. ಹತ್ಯೆಗೀಡಾದ ಮೂವರು ಜೈಶ್ ಎ ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂದು ಉನ್ನತ ಮೂಲಗಳು ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳವಾರು ಗ್ರಾಮದ ಅಝರುದ್ದೀನ್ ಅಲಿಯಾಸ್ ಅಝರ್ ಯಾನೆ ಅಜ್ಜು (29), ಉಡುಪಿ ಜಿಲ್ಲೆಯ ಬೆಳಪು ಗ್ರಾಮದ ಪ್ರಸಕ್ತ ಬಜ್ಜೆಯಲ್ಲಿ ವಾಸವಾಗಿರುವ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24), ಫರಂಗಿಪೇಟೆ ಕುಂಪನಮಜಲಿನ ಪ್ರಸಕ್ತ ಹಾಸನ ಜಿಲ್ಲೆ ಕೆ.ಆರ್.ಪುರಂ ನಿವಾಸಿ ನೌಷಾದ್ ಅಲಿಯಾಸ್ ವಾಮಂಜೂರು ನೌಷಾದ್ (39) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗಳ ಪೈಕಿ ಅಝರುದ್ದೀನ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನಿಬ್ಬರನ್ನು ಹೆಚ್ಚಿನ ವಿಚಾರಣೆ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ರಾಮನಗರ: ವಿಕಲಚೇತನ ಬಾಲಕಿಯ ಮೃತದೇಹ ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಸಮೀಪದ ರೈಲು ಹಳಿಯ ಬಳಿ ಪತ್ತೆಯಾಗಿದ್ದು, ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ ವಿಕಲಚೇತನ ಬಾಲಕಿ ಖುಷಿ (14) ನಾಪತ್ತೆಯಾಗಿದ್ದಳು. ಸೋಮವಾರ ಮೇ 12ರಂದು ಆಕೆಯ ಮೃತದೇಹ ಭದ್ರಾಪುರ ಗ್ರಾಮದ ರೈಲು ಹಳಿ ಬಳಿಯಲ್ಲಿ ಪತ್ತೆಯಾಗಿತ್ತು. ಘಟನೆ ಸಂಬಂಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ನಡೆಸಲಾಗಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕೆಲ ಸಾಕ್ಷ್ಯಗಳನ್ನ ಎಫ್ ಎಸ್ ಎಲ್ ಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಅಲ್ಲದೆ, ಕೆಲವು ಸಂಶಯಾಸ್ಪದ ವ್ಯಕ್ತಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭದಲ್ಲಿ ಹಜ್ ಯಾತ್ರಿಗಳಿಗೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ನಂತರ ಅದನ್ನು ಕ್ಯಾನ್ಸಲ್ ಮಾಡಲಾಗಿದೆ ಎಂದು ಹಜ್ ಖಾತೆ ಸಚಿವ ರಹೀಮ್ ಖಾನ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು. ಯಾತ್ರಿಕರಿಗೆ ಮಾಹಿತಿ ನೀಡುವ ಕೆಲಸಕ್ಕೆ ಮಾತ್ರ ರಾಜ್ಯ ಸರ್ಕಾರದಿಂದ ಅವರಿಗೆ ಸಹಾಯ ಸಿಗಲಿದೆ. ದೇಶದಿಂದ ಲಕ್ಷಾಂತರ ಜನ ಏಕಕಾಲದಲ್ಲಿ ಬರೋದರಿಂದ ಸ್ವಲ್ಪ ಸಮಸ್ಯೆಯಾಗಿದೆ. ಹಜ್ ಯಾತ್ರಿಗಳ ಬಗ್ಗೆ ಕೇಂದ್ರ ಸರ್ಕಾರವೇ ಅವರ ಯೋಗ ಕ್ಷೇಮ ನೋಡಿಕೊಳ್ಳಲಿದೆ. ಮುಂದಿನ ದಿನಗಳಲ್ಲಿ ಹಜ್ ಯಾತ್ರಿಗಳಿಗೆ ರಾಜ್ಯ ಸರ್ಕಾರದಿಂದ ಸಬ್ಸಡಿ ಯೋಜನೆ ಇಲ್ಲ ಎಂದು ಅವರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ತುಮಕೂರು: ಕುಣಿಗಲ್ ನ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್ ಪಡೆದುಕೊಂಡಿದ್ದು, ಸಿಸಿಟಿವಿಯಲ್ಲಿ ನಾಗೇಶ್ ಸಾವಿನ ಅಸಲಿ ಕಹಾನಿ ಬೆಳಕಿಗೆ ಬಂದಿದೆ. ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಅಸಹಜ ಸಾವಲ್ಲ, ಬದಲಾಗಿ ಅದು ಕೊಲೆ ಎಂಬುದು ಪತ್ತೆಯಾಗಿದೆ. ಹೆಬ್ಬೂರಿನ ತಿಮ್ಮಸಂದ್ರ ಗ್ರಾಮದ ನಿವಾಸಿಯಾಗಿದ್ದ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕ ನಾಗೇಶ್ (58) ತನ್ನದೇ ಫ್ಯಾಕ್ಟರಿಯಲ್ಲಿ ಸಾವನ್ನಪ್ಪಿದ್ದರು. ವಿದ್ಯುತ್ ಅವಘಡದಿಂದ ಈ ಸಂಭವಿಸಿದೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಸಿಸಿ ಕ್ಯಾಮರಾ ದೃಶ್ಯಗಳಿಂದ ಇದೊಂದು ಮರ್ಡರ್ ಎನ್ನುವುದು ಬಯಲಾಗಿದೆ. ಮೇ 10ರಂದು ಈ ಘಟನೆ ನಡೆದಿತ್ತು. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ನಾಗೇಶ್ ಹತ್ಯೆ ಸಂಗತಿ ಬಯಲಾಗಿದೆ. ಮಗನಿಂದಲೇ ಹತ್ಯೆ ನಡೆದಿದೆಯಾ ಎಂಬ ಶಂಕೆ ಸದ್ಯ ಪೊಲೀಸರಲ್ಲಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫ್ಯಾಕ್ಟರಿಯಲ್ಲಿ ಇಟ್ಟಿದ್ದ ಹಣವನ್ನು ತಂದೆಗೆ ಕಾಣದಂತೆ ಹಣವನ್ನು ಮಗ ಸೂರ್ಯ ತೆಗೆದುಕೊಳ್ಳುತ್ತಿದ್ದನು. ಇದು ನಾಗೇಶ್ ಗೆ ಗೊತ್ತಾದ ಬಳಿಕ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ನಡೆಯಲಿದೆ. ಸಮಾವೇಶಕ್ಕೂ ಮುನ್ನ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಚಿವರು ರಾಜ್ಯ ಪ್ರವಾಸದಲ್ಲಿ ನಿರತರಾಗಿದ್ದಾರೆ. ಸಿದ್ದರಾಮಯ್ಯ ಸಂಪುಟದ ಎಲ್ಲಾ ಹಿರಿಯ ಸಚಿವರಿಗೆ ತಾಂಡಾಗಳು ಮತ್ತು ಹಾಡಿಗಳಲ್ಲಿ ವಾಸಿಸುವ ಹಿಂದುಳಿದ ಜನರನ್ನು ಗುರುತಿಸುವ ಕಾರ್ಯವನ್ನು ನೀಡಲಾಗಿದೆ. ಮೇ 20 ರಂದು, ತಾಂಡಾಗಳು ಮತ್ತು ಹಾಡಿಗಳಲ್ಲಿ ವಾಸಿಸುತ್ತಿರುವವರಿಗೆ ಕಂದಾಯ ಗ್ರಾಮಗಳಾಗಿ ಗುರುತಿಸುವುದರ ಜೊತೆಗೆ ಅವರ ಆಸ್ತಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗುತ್ತದೆ. ಸಚಿವರು ಮತ್ತು ಹಿರಿಯ ಶಾಸಕರಿಗೆ 64 ವಿಧಾನಸಭಾ ಕ್ಷೇತ್ರಗಳಲ್ಲಿ ಫಲಾನುಭವಿಗಳು, ಅಧಿಕಾರಿಗಳು ಮತ್ತು ನಾಯಕರೊಂದಿಗೆ ಸಂವಹನ ನಡೆಸುವ ನಿರ್ದಿಷ್ಟ ಕಾರ್ಯವನ್ನು ನೀಡಲಾಗಿದೆ. ರಾಜ್ಯಾದ್ಯಂತ ಸುಮಾರು ಒಂದು ಲಕ್ಷದಷ್ಟು ಇರುವ ಈ ಅವಕಾಶ ವಂಚಿತ ಜನರಿಗೆ ಸರ್ಕಾರದ ಎರಡು ವರ್ಷಗಳ ವಾರ್ಷಿಕೋತ್ಸವವನ್ನು ಗುರುತಿಸಲು ಆಸ್ತಿ ಹಕ್ಕುಪತ್ರಗಳನ್ನು ನೀಡಲಾಗುವುದು ಎಂದು ವರದಿಯಗಳಿಂದ ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ನವದೆಹಲಿ: ಇತ್ತೀಚೆಗೆ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾರೆ. ಏಪ್ರಿಲ್ ನಲ್ಲಿ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ ಕುಮಾರ್ ಶಾನನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಪೂರ್ಣಮ್ ಕುಮಾರ್ ಶಾ ಅವರನ್ನು ಅಮೃತಸರದ ಅಟ್ಟಾರಿಯಲ್ಲಿರುವ ಜಂಟಿ ಚೆಕ್ ಪೋಸ್ಟ್ ಮೂಲಕ ಬೆಳಿಗ್ಗೆ 10.30 ರ ಸುಮಾರಿಗೆ ಹಸ್ತಾಂತರಿಸಲಾಯಿತು ಎಂದು ಬಿಎಸ್ಎಫ್ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಕೊಡ್ಲಾಪುರ ಗ್ರಾಮ ಪಂಚಾಯಿತಿಯ ಪಿ ಡಿ ಓ ಪುಂಡಲೀಕ ಬೊಮಗೊಂಡ ಮತ್ತು ಬಿಲ್ ಕಲೆಕ್ಟರ್ ಹನುಮಂತರಾಯಪ್ಪ ಈ ಇಬ್ಬರು ವೀರನಾಗೇನಹಳ್ಳಿ ಮಜರೆ ವಡ್ಡರಹಟ್ಟಿ ಗ್ರಾಮದ ಕೆ.ಎಚ್.ಆನಂದ್ ಕುಮಾರ್ ಎಂಬ ವ್ಯಕ್ತಿಗೆ ಸೇರಿದ್ದ ಆಸ್ತಿಯ ಇ — ಖಾತೆ ಮಾಡಿಕೊಡಲು 500/- ರೂಗಳ ಸರ್ಕಾರಿ ಶುಲ್ಕದ ಜೊತೆಗೆ 6000/- ಸಾವಿರ ರೂ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ದೂರುದಾರ ಕೆ.ಎಚ್.ಆನಂದ್ ಕುಮಾರ್ ಲಂಚದ ಹಣ ಕೊಡಲು ಇಷ್ಟವಿಲ್ಲದೆ ದಿನಾಂಕ:- 09/05/2025 ರಂದು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ ಮೇರೆಗೆ ಪೊಲೀಸ್ ಇನ್ಸ್ಪೆಕ್ಟರ್ ಶಿವರುದ್ರಪ್ಪ ಮೇಟಿ ಮೊ. ನಂ: 03/2025 ಕಲಂ –7(a) ಭ್ರಷ್ಟಾಚಾರ ಪ್ರತಿಬಂಧಕ ಅಧಿನಿಯಮ 1988 (ತಿದ್ದುಪಡಿ 2018) ರಂತೆ ಪ್ರಕರಣ ದಾಖಲಿಸಿಕೊಂಡು ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿದ್ದರು. ಮಂಗಳವಾರ ಮಧ್ಯಾಹ್ನ 2:30 ರ ಸಮಯದಲ್ಲಿ ಪಿಡಿಓ ಪುಂಡಲೀಕ ಬೊಮಗೊಂಡ ಮತ್ತು ಬಿಲ್ ಕಲೆಕ್ಟರ್ ಹನುಮಂತರಾಯಪ್ಪ ದೂರುದಾರ ಕೆ.ಎಚ್.ಆನಂದನಿಂದ 6,500/-…
ತುಮಕೂರು: : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಕ್ಷಯ ಬಯೋಟೆಕ್, ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಹಾಗೂ ಶ್ರೀ ರಾಮ್ ಲೈಫ್ ಇನ್ಸುರೆನ್ಸ್ ಪ್ರೈ.ಲಿಮಿಟೆಡ್ ಸಂಸ್ಥೆಯ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮೇ 16ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಸಂದರ್ಶನವು ಅಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ. ಡಿಪ್ಲೊಮಾ(ಯಾವುದೇ ಟ್ರೇಡ್) ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488, ಮೊ.ಸಂ. 9071021143/ 9513136642 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————