Author: admin

ಕುಣಿಗಲ್: ಸುಳ್ಳು ಹೇಳುವುದರಲ್ಲಿ ಮತ್ತು ಅಳುವುದರಲ್ಲಿ  ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನಿಸ್ಸೀಮರು. ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಅವರು ಅಳುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ತಾಲ್ಲೂಕಿನ ಎಡೆಯೂರಿನಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜನಾಭಿಪ್ರಾಯವಿದ್ದರೆ ಅಧಿಕಾರದಲ್ಲಿರಬೇಕು. ಇಲ್ಲವಾದರೆ ಮನೆಯಲ್ಲಿರಬೇಕು. ಅದುಬಿಟ್ಟು ಸಭೆಯಲ್ಲಿ ಕಣ್ಣೀರು ಹಾಕುವುದು ಸರಿಯಲ್ಲ. ಜೆಡಿಎಸ್ ದೇವೇಗೌಡರ ಕುಟುಂಬದ ಪಕ್ಷವಾಗಿದ್ದು, ಅವಕಾಶವಾದಿ ರಾಜಕಾರಣ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು. ಕೋಮವಾದಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಜೆಡಿಎಸ್ ಜತೆ ಸೇರಿ ಸರ್ಕಾರ ರಚಿಸಲಾಗಿತ್ತು. ಆದರೆ ಶಾಸಕರು, ಸಚಿವರನ್ನು ಕುಮಾರಸ್ವಾಮಿ ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ‘ಆಪರೇಷನ್ ಕಮಲ’ಕ್ಕೆ ಸರ್ಕಾರ ಬಲಿಯಾಯಿತು. ಇದೀಗ ಸಿದ್ದರಾಮಯ್ಯ ಅವರಿಂದ ಸರ್ಕಾರ ಉರುಳಿತು ಎಂದು ಈಗ ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ಕಾಮಗಾರಿಗಳಲ್ಲಿ ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಸಂಬಂಧ ಮಾತನಾಡಿದ ಅವರು, ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪದ ಬಗ್ಗೆ ಹಾಲಿ ನ್ಯಾಯಮೂರ್ತಿ ಅಥವಾ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಿದರೆ, ಸತ್ಯ ಹೊರ ಬರಲಿದೆ ಎಂದು ಅವರು ಹೇಳಿದರು. ಕಾಮಗಾರಿಗಳಲ್ಲಿ ಶೇ.40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದವರು ಪ್ರಧಾನಿಗೆ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದರು. ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಜಲಸಂಪನ್ಮೂಲ ಇಲಾಖೆ ಮೇಲೂ ಕಮಿಷನ್ ಆರೋಪಗಳಿದ್ದು, ಅದೇ ಇಲಾಖೆ ಅಧಿಕಾರಿ ತನಿಖೆ ನಡೆದರೆ ಸತ್ಯ ಹೊರ ಬರುವುದೆ? ಎಂದು  ಡಿಕೆಶಿ ಪ್ರಶ್ನಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತಿಪಟೂರು: ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿ ಕೆರೆ ಸುಮಾರು 18 ವರ್ಷಗಳ ನಂತರ ತುಂಬಿ ಕೋಡಿ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರು, ಕೆರೆಗೆ ಗಂಗಾಪೂಜೆಯನ್ನು ಸಲ್ಲಿಸಿದರು. ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಸಹಕಾರ ಬ್ಯಾಂಕಿನ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ಕೆ.ಆರ್. ದೇವರಾಜ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಕುಮಾರಯ್ಯ ರವೀಶ್ ರವರು ಹಾಜರಿದ್ದರು. ಕಾರ್ಯಕ್ರಮದಲ್ಲಿ ನೂತನ ಹಾಲು ಉತ್ಪಾದಕರ ಸಂಘ ಕರಡಿ ಇದರ ಉಪಾಧ್ಯಕ್ಷರಾದ ರಂಗಸ್ವಾಮಿ ಮತ್ತು ಸುತ್ತಮುತ್ತಲಿನ ರೈತರುಗಳು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು. ವರದಿ: ಆನಂದ್ ತಿಪಟೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಮಧುಗಿರಿ: 15 ವರ್ಷಗಳ ನಂತರ ತುಂಬಿದ ಕೆರೆಯ ತೂಬಿನ ಸಮೀಪ ಬಿರುಕು ಬಿಟ್ಟಿದ್ದು ಸಮೀಪದ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ. ದೊಡ್ಡೇರಿ ಹೋಬಳಿಯ ಬಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆರೆಯು ಇತ್ತೀಚೆಗೆ ಸುರಿದ ಮಳೆಯಿಂದಾಗಿ  ಶನಿವಾರ ರಾತ್ರಿ ಕೆರೆ ಕೋಡಿ ಹರಿದಿದೆ. ಆದರೆ ಕೆರೆಯ ಸುತ್ತ ಮುತ್ತ ಸುಮಾರು 400 ಎಕರೆಯಷ್ಟು ಜಮೀನು ಇದ್ದು,  ಕೆರೆ ಒಡೆದರೆ, ಈ ಜಮೀನುಗಳ ಪರಿಸ್ಥಿತಿ ಏನು ಎಂದು ಜನ ಪ್ರಶ್ನಿಸುತ್ತಿದ್ದಾರೆ. ಗ್ರಾ.ಪಂ. ವತಿಯಿಂದ ಗ್ರಾಮಸ್ಥರ ಮನವಿ ಮೇರೆಗೆ ಬಡವನಹಳ್ಳಿ ಗ್ರಾಪಂ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಭೇಟಿ ನೀಡಿ ಮುಂದೆ ಆಗಬಹುದಾದ ಅನಾಹುತಕ್ಕೆ ಸ್ವಲ್ಪ ಕಡಿವಾಣ ಹಾಕಿದ್ದಾರೆ. ಆದರೆ, ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲರಾಗಿದ್ದಾರೆ. ಕೋಡಿಯ ಸಮೀಪ ಈ ಘಟನೆ ಸಂಭವಿಸಿದ್ದು, ಗ್ರಾ.ಪಂ. ರವರು ಸದ್ಯಕ್ಕೆ 50 ಕ್ಕೂ ಹೆಚ್ಚು ಮರಳು ಚೀಲಗಳನ್ನು ಹಾಕಿ ಭದ್ರಪಡಿಸಲು ಮುಂದಾಗಿದ್ದಾರೆ. ಆದರೆ, ಇದು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆಗಳು ಕೂಡ ಕೇಳಿ ಬಂದಿದೆ. ಈ ಕೆರೆ ಸಣ್ಣ…

Read More

ತಿಪಟೂರು: ರೈತರು ಆದಾಯ ಬರುವಂತ ಕೃಷಿ ಬೆಳೆಗಳು ಹಾಗೂ ನಮ್ಮಲ್ಲೆ ಬೆಳೆಯುವ ಆರೋಗ್ಯಕರವಾದ  ಸಿರಿಧಾನ್ಯಗಳನ್ನು ಬೆಳೆದು ಆರೋಗ್ಯ ಹಾಗೂ ಆದಾಯ ಎರಡನ್ನು ಸ್ವಯಂ ಕೃಷಿಯಿಂದ ಪಡೆಯುವಂತೆ ತೋಟಗಾರಿಕೆ ಇಲಾಖೆ ಆಧಿಕಾರಿಗಳಾದ  ಡಾ.ನವೀನ್ ಕುಮಾರ್ ತಿಳಿಸಿದರು. ಇತ್ತೀಚೆಗೆ ಕರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 20-21 ನೇ ಸಾಲಿನ ವಾರ್ಷಿಕ ಮಹಾ ಸಭೆಯಲ್ಲಿ  ಭಾಗವಹಿಸಿ ಡಾ.ನವೀನ್ ಕುಮಾರ್ ಮಾತನಾಡಿದರು. ನಗರಸಭೆ ಅಧ್ಯಕ್ಷರಾದ ರಾಮ್ ಮೋಹನ್ ಮಾತನಾಡಿ, ಸಹಕಾರ ಸಂಘಗಳು ರೈತರೊಂದಿಗೆ ಉತ್ತಮ ಬಾಂದವ್ಯವನ್ನು ಭೆಳೆಸಿಕೊಂಡು, ಸಂಘದ ಅಭಿವೃದ್ದಿಗೆ ಸಹಕಾರಿಯಾಗಬೇಕು. ಸಂಘವು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಇದೇ ರೀತಿ ಇನ್ನೂ ಅಭಿವೃದ್ದಿ ಹೊಂದಲು ಶ್ರಮಿಸುವಂತೆ ಕರೆ ನೀಡಿದರು. ಬಿಳಿಗೆರೆ ಪ್ರತಾಪ್ ಸಿಂಗ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ,  ಕೇಂದ್ರ ಸರ್ಕಾರದ  ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ ಲಕ್ಷಾಂತರ ರೈತರಿಗೆ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಜಮೆಯಾಗುತ್ತಿದ್ದು, ಇದರಿಂದಾಗಿ ರೈತರಿಗೆ ಅನುಕೂಲವಾಗುತ್ತಿದೆ, ಇದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಪರ ಯೋಜನೆಗಳನ್ನು ಸಂಬಂದಪಟ್ಟ…

Read More

ಮಧುಗಿರಿ:  ಎಂಎಸ್ ಜಿಪಿ ಕಸ ವಿಲೇವಾರಿ ಘಟಕದ ಕಾಮಗಾರಿಯಿಂದ ಅಂತರ್ಜಲ ಹಾಗೂ ಡ್ಯಾಂಗಳಿಗೆ ಸೇರುತ್ತಿರುವ ಮಳೆಯ ನೀರು ಕಲುಷಿತವಾಗುತ್ತಿದೆ ಎಂದು ಕರ್ನಾಟಕ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ ಆರೋಪಿಸಿದ್ದಾರೆ. ಬೆಂಗಳೂರಿನ ಬಿಬಿಎಂಪಿ ಮತ್ತು ಖಾಸಗಿ ಕಂಪನಿಯ ಸಹಭಾಗಿತ್ವದಲ್ಲಿ ಜಿಲ್ಲೆಯ ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ಗಡಿ ಗ್ರಾಮಕ್ಕೆ ಹೊಂದಿಕೊಂಡಿರುವ ದೊಡ್ಡಬಳ್ಳಾಪುರ ಗಡಿಯ ಬಳಿಯ ಖಾಸಗಿ ಕಂಪನಿಯೊಂದು ಕಸವಿಲೇವಾರಿ ಘಟಕವನ್ನು ಪ್ರಾರಂಭಿಸಿದೆ ಆದರೆ ಇತ್ತೀಚೆಗೆ ಸುರಿದ ಮಳೆಯ ನೀರಿನಿಂದಾಗಿ ತ್ಯಾಜ್ಯದಿಂದ ಕೂಡಿದ ವಿಷಯುಕ್ತ ನೀರು ಹಳ್ಳ ಕೊಳ್ಳಗಳ ಮೂಲಕ ಕೊರಟಗೆರೆಯ ಹಲವು ಪ್ರಮುಖ ಡ್ಯಾಂ ಮತ್ತು ಕೆರೆಕಟ್ಟೆಗಳಿಗೆ ಸೇರುತ್ತಿದ್ದು, ನೀರು ಕಲುಷಿತವಾಗುತ್ತಿದೆ. ಇಂತಹ ಘಟನೆಗಳಿಂದಾಗಿ ಜನರು ಸೇರಿದಂತೆ ಪ್ರಾಣಿ ಪಕ್ಷಿಗಳಿಗೂ ರೋಗ ರುಜಿನಗಳು ತಗಲುವ ಸಾಧ್ಯತೆಗಳು ಹೆಚ್ಚಿದೆ ಎಂದು ಆರೋಪಿಸಿದ್ದಾರೆ. ನಮ್ಮ ರೈತ ಸಂಘದ ಪದಾಧಿಕಾರಿಗಳೊಂದಿಗೆ ಘಟಕದ ಸ್ಥಳಕ್ಕೆ ಸದ್ಯದಲ್ಲಿಯೇ ಭೇಟಿ ನೀಡಲಾಗುವುದು ಹಾಗೂ ಶನಿವಾರ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಟೆಂಟ್ ಗಳನ್ನು ಪೊಲೀಸರು ಕಿತ್ತುಹಾಕಿ ಬಂಧಿಸಿರುವುದು ಪೊಲೀಸರ ಸರಿಯಾದ…

Read More

ಮಧುಗಿರಿ: ಸಾರ್ವಜನಿಕ ರುದ್ರಭೂಮಿಯನ್ನು ಎಲ್ಲಾ ಸಮುದಾಯಗಳ ಸಹಕಾರದೊಂದಿಗೆ ಅಭಿವೃದ್ದಿಪಡಿಸಲಾಗುವುದು ಎಂದು ಬಡವನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮೀ ತಿಳಿಸಿದರು. ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಗ್ರಾಮದ ಸಜ್ಜೇ ಹೊಸಹಳ್ಳಿ ಮಾರ್ಗದ ಸಮೀಪವಿರುವ  ಸಾರ್ವಜನಿಕ ರುದ್ರಭೂಮಿಯ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಹಾಗೂ ಪಂಚಾಯತಿ ಸಿಬ್ಬಂದಿ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಗ್ರಾಪಂ ವತಿಯಿಂದ ನರೇಗಾ ಯೋಜನೆಯಡಿಯಲ್ಲಿ ರಸ್ತೆ ಅಭಿವೃದ್ದಿಪಡಿಸಲಾಗುವುದು ಹಾಗೂ ಈಗಾಗಲೇ 39 ಗುಂಟೆ ಜಮೀನನ್ನು ಹೊಂದಿರುವ ರುದ್ರಭೂಮಿಯ ಅಭಿವೃದ್ದಿಯ ವಿಚಾರವಾಗಿ 10 ಲಕ್ಷ ರೂ.ಗಳ ಅನುವಾದವಿದೆ. ಮೃತದೇಹಗಳನ್ನು ಸುಡುವ ಪದ್ದತಿಯನ್ನು ಆಳವಡಿಸಿಕೊಂಡಿರುವ ಸಮುದಾಯದವರು ಗ್ರಾಪಂಗೆ ಛೇಂಬರ್ ಅಳವಡಿಸಿಕೊಡುವಂತೆ ಮನವಿ ನೀಡಿದ್ದಾರೆ. ಪ್ರತ್ಯೇಕ ವಾಗಿ  ಮಹಿಳೆಯರಿಗೂ ಮತ್ತು ಪುರುಷರಿಗೂ ಅನೂಕೂಲವಾಗುವಂತೆ ಸುಸಜ್ಜಿತ ಶೌಚಾಲಯ, ಕಾಂಪೌಂಡ್ ನಿರ್ಮಾಣ, ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗುವುದು ಹಾಗೂ ಪಂಚಾಯತಿ ವ್ಯಾಪ್ತಿಯ ಸಮುದಾಯಗಳ ಮುಖಂಡರ ಅಭಿಪ್ರಾಯಗಳನ್ನು ಪಡೆದು ಕೊಂಡು ಆದಷ್ಟು ಶೀಘ್ರ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು. ಲೋಕಪಯೋಗಿ ಇಲಾಖೆಯ ಅಭಿಯಂತರರಾದ ತಿಪ್ಪೇಸ್ವಾಮಿ ಮಾತನಾಡಿ, ರುದ್ರ ಭೂಮಿ ಅಭಿವೃದ್ಧಿಗೆ 10…

Read More

ತಿಪಟೂರು: ಗ್ರಾಮೀಣ ಭಾಗದ ಯುವಕ-ಯುವತಿಯರಲ್ಲಿ ಪ್ರತಿಭೆಗಳಿದ್ದರೂ, ಅದನ್ನೂ ತೋರ್ಪಡಿಸುವ ಕೌಶಲ್ಯವಿಲ್ಲ. ಇಂತಹ ಯುವಕ-ಯುವತಿಯರ ಅನುಕೂಲಕ್ಕಾಗಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ಶಾಂತಕುಮಾರ್ ಹೇಳಿದರು. ನಗರದಲ್ಲಿನ ಒಕ್ಕಲಿಗರ ಭವನದಲ್ಲಿ ಕೆ.ಟಿ.ಶಾಂತಕುಮಾರ್ ಅವರು ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿ, ಕಲ್ಪತರು ಜನತೆಯ ಒತ್ತಾಯದ ಮೇರೆಗೆ ಮೂರನೇ ಬಾರಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಕಳೆದ ಎರಡು ಉದ್ಯೋಗ ಮೇಳದಲ್ಲಿ ತಿಳಿದು ಬಂದಿದ್ದೇನೆಂದರೆ, ಗ್ರಾಮೀಣ ಭಾಗದ ಯುವಕ-ಯುವತಿಯರಲ್ಲಿ ಪ್ರತಿಭೆ ಇದೆ. ಆದರೆ ತೋರ್ಪಡಿಸುವ ಧೈರ್ಯ, ಕೌಶಲ್ಯವಿಲ್ಲ. ಯಾವ ಯಾವ ಕೋರ್ಸ್ ಗಳನ್ನು ತೆಗೆದುಕೊಂಡರೆ ಮುಂದೆ ಅನುಕೂಲವಾಗಲಿದೆ ಎಂಬ ಬಗ್ಗೆ ಯುವಕ ಯುವತಿಯರಿಗೆ ಗೊಂದಲವಿದೆ ಎಂದು ಅವರು ಹೇಳಿದರು. ಗ್ರಾಮೀಣ ಭಾಗದ ಯುವಕ-ಯುವತಿಯರ ಅನುಕೂಲಕ್ಕಾಗಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದೇವೆ. ಈ ಉದ್ಯೋಗ ಮೇಳದಲ್ಲಿ ಸುಮಾರು 80ಕ್ಕೂ ಅಧಿಕ ಕಂಪೆನಿಗಳು ಭಾಗಿಯಾಗಿವೆ ಎಂದು ಕೆ.ಟಿ.ಶಾಂತಕುಮಾರ್ ಇದೇ ವೇಳೆ ತಿಳಿಸಿದರು. ಇನ್ನೂ ಕೆರೆಗೋಡಿ…

Read More

ತಿಪಟೂರು: ನಗರದ ಸೀತಾರಾಮಯ್ಯ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾವಗೀತಾ ಮತ್ತು ಅಭಿನಂದನ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಉದ್ಘಾಟಿಸಿದರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಬಯಲುಸೀಮೆ ಸಾಮಾಜಿಕ ಸಾಂಸ್ಕೃತಿಕ  ಕಾರ್ಯಕ್ರಮದ ವತಿಯಿಂದ ಪ್ರತಿವರ್ಷ ಒಂದಲ್ಲಾ ಒಂದು ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಹಲವಾರು ತಾಲೂಕಿನ ಸಾಧಕರನ್ನು ಮತ್ತು ಪ್ರತಿಭೆಗಳ ಗುರುತಿಸಿ ಅವರಿಗೆ ಸನ್ಮಾನ ಸಮಾರಂಭ ಮಾಡುತ್ತಾ ಬರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಮ್ಮ  ಜಿಲ್ಲೆ ಮತ್ತು ತಾಲೂಕುಗಳಿಗೆ ಕೋಡಿಗಳನ್ನು ಕೊಟ್ಟಂತಹ ದೊಡ್ಡ ಪ್ರತಿಭೆಗಳು ಇದ್ದಾರೆ. ಗಾಯನದ ಮೂಲಕ ಎಲ್ಲರನ್ನು ರಂಜಿಸುತ್ತಿರುವ ಗಾಯಕರಿಗೆ ಅಭಿನಂದನೆ ಸಲ್ಲಿಸಿದ ನಾಗೇಶ್, ಹಲವಾರು ಪ್ರತಿಭೆಗಳನ್ನು ಸೃಷ್ಟಿಸುತ್ತಾ, ತಾಲೂಕಿನ ಸಾಧಕರಿರನ್ನು ಗುರುತಿಸಿ ಸನ್ಮಾನ ಮಾಡುತ್ತಿರುವ ಬಯಲುಸೀಮೆ ಸಾಮಾಜಿಕ ಸಂಘದ ಎಲ್ಲಾ ಮುಖ್ಯಸ್ಥರಿಗೆ ಇದೇ ವೇಳೆ ಅವರು ಧನ್ಯವಾದಗಳನ್ನು ಅರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಮಕ್ಕಳಿಂದ ಭಾವಗೀತೆಗಳ ಗಾಯನ ನಡೆಯಿತು.. ಈ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ದುಂಡುರಾಜ್, ಸಂಘದ ಅಧ್ಯಕ್ಷರು ಪ್ರಶಾಂತ್ ಸೇರಿದಂತೆ ಪ್ರಮುಖ ಕಲಾವಿದರು ಭಾಗಿಯಾಗಿದ್ದರು. ವರದಿ: ಮಂಜು ಗುರುಗದಹಳ್ಳಿ…

Read More

ಕುಣಿಗಲ್: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ಪರವಾಗಿ ಮತಯಾಚನೆ ಕಾರ್ಯಕ್ರಮ ಇಂದು ಕುಣಿಗಲ್ ನಗರದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಸಂಸದ ಡಿ.ಕೆ.ಸುರೇಶ್, ಶಾಸಕ ಡಾ.ರಂಗನಾಥ್, ತಿಪಟೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರು ನಮ್ಮ ನಾಯಕರಾದ  ಕೆ.ಷಡಕ್ಷರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ, ಹಿರಿಯ ಉಪಾಧ್ಯಕ್ಷ ಹನುಮಂತಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಪುರಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More