Subscribe to Updates
Get the latest creative news from FooBar about art, design and business.
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
- ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
- ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
- ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
- ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
Author: admin
ಸ್ಯಾಂಡಲ್ ವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಅದ್ಬುತ ಸಿನಿಮಾಗಳು ತೆರೆ ಮೇಲೆ ಅಬ್ಬರಿಸಲು ಸಿದ್ಧವಾಗಿದೆ. ಆಗಸ್ಟ್ ತಿಂಗಳಿನಲ್ಲಿ ಸಿನಿಮಾಭಿಮಾನಿಗಳಿಗೆ ಭರಪೂರ ಮನರಂಜನೆ ಸಿಕ್ಕಿದೆ. ಯಾಕಂದ್ರೆ ಸಾಲು ಸಾಲು ಒಳ್ಳೊಳ್ಳೆ ಸಿನಿಮಾಗಳು ತೆರೆಕಂಡಿದೆ ಜೊತೆ ರಿಲೀಸ್ ಆಗಲು ಬಾಕಿಯಿದೆ. ಡಾಲಿ ಧನಂಜಯ, ಡಿಂಪಲ್ ಕ್ವೀನ್ ರಚಿತಾ ರಾಮ್ ಮತ್ತು ಯಶ ಶಿವಕುಮಾರ್ ನಟನೆಯ “ಮಾನ್ಸೂನ್ ರಾಗ” ಸಿನಿಮಾ ಇದೇ ಆಗಸ್ಟ್ 19ರಂದು ತೆರೆಯ ಮೇಲೆ ರಂಗೇರಿಸಲು ಸಿದ್ಧವಾಗಿದೆ.”ಮಾನ್ಸೂನ್ ರಾಗ”ಸಿನಿಮಾದ ಟ್ರೀಲರ್ ಮತ್ತು ಹಾಡುಗಳಿಂದಲೇ ಜನಮನ ಗೆದ್ದಿದೆ. ‘ಸೆಕ್ಸ್ ವರ್ಕರ್’ ಪಾತ್ರದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಕಾಣಿಸಿಕೊಳ್ಳೋದ್ರ ಮೂಲಕ ವಿಭಿನ್ನ ಕಥೆಯನ್ನ ತೆರೆಯ ಮೇಲೆ ಹೇಳಲು ಹೊರಟಿದ್ದಾರೆ. ಈ ಸಿನಿಮಾದಲ್ಲಿ ಸೆಕ್ಸ್ ವರ್ಕರ್ ಪಾತ್ರದಲ್ಲಿ ಕಾಣಿಸಿಕೊಳ್ಳೋ ರಚಿತಾ ರಾಮ್ ಮೇಲೆ ಡಾಲಿಗೆ ಲವ್ ಆಗೋ ಸೂಚನೆ ಟ್ರೇಲರ್ ಮೂಲಕ ಸಿಕ್ಕಿದೆ. ಟ್ರೇಲರ್ ನೋಡಿದ್ರೆ ಅದ್ಬುತ ಸ್ಟೋರಿ ಈ ಚಿತ್ರದಲ್ಲಿ ಇರೋದು ಪಕ್ಕಾ ಆಗಿದೆ.ಸಿನಿಮಾದ ಟೈಟಲ್ ಹೇಳುವಂತೆ ಆಲ್ ಮೋಸ್ಟ್ ಸಿನಿಮಾ ಮಳೆಯಲ್ಲೇ…
ತುಮಕೂರು: ಕಳೆದ ಹಲವು ದಿನಗಳಿಂದ ತುಮಕೂರು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಸಾಕಷ್ಟು ಪ್ರದೇಶಗಳಲ್ಲಿ ಮನೆಗಳು ಕುಸಿದಿವೆ. ಹಲವಾರು ಮನೆಗಳು ಕುಸಿಯುವ ಹಂತದಲ್ಲಿದ್ದರೂ ಇನ್ನೂ ಅಧಿಕಾರಿಗಳು ಚಳಿ ಬಿಟ್ಟು ಕೆಲಸ ಮಾಡಲು ಮುಂದಾಗುತ್ತಿಲ್ಲ ಎಂದು ಮಳೆಯಿಂದ ಸಂಕಷ್ಟದಲ್ಲಿರುವ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ತಾಲ್ಲೂಕು ಮತ್ತು ಜಿಲ್ಲೆಯ ಹೆತ್ತೆನಹಳ್ಳಿ, ಗೂಳೂರು ಹೋಬಳಿಯಲ್ಲಿ ತೀವ್ರ ಮಳೆಯಿಂದಾಗಿ ಸುಮಾರು 10 ಮನೆಗಳು ಬೀಳುವ ಹಂತದಲ್ಲಿತ್ತು. ಈ ಬಗ್ಗೆ ಇಲ್ಲಿನ ನಿವಾಸಿಗಳು ಅಧಿಕಾರಿಗಳಿ ಸಾಕಷ್ಟು ಬಾರಿ ಹೇಳಿದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯರು ನಮ್ಮ ತುಮಕೂರು ಪ್ರತಿನಿಧಿಯೊಂದಿಗೆ ದೂರಿದ್ದಾರೆ. ಸಾರ್ವಜನಿಕರ ಹೇಳಿಕೆಯನ್ನು ದಾಖಲಿಸಿದ ನಮ್ಮ ಪ್ರತಿನಿಧಿ ಪಿಡಿಓ ಅವರನ್ನು ಸಂಪರ್ಕಿಸಿದ್ದು, ತಕ್ಷಣವೇ ಕಾರ್ಯಪ್ರವೃತರಾದ ಪಿಡಿಓ, ಸಂಕಷ್ಟದಲ್ಲಿದ್ದ ಜನರಿಗೆ ತಾತ್ಕಾಲಿಕವಾಗಿ ಉಳಿದುಕೊಳ್ಳಲು ಪಂಚಾಯತ್ ನ ಹಳೆಯ ಕಟ್ಟಡದಲ್ಲಿ ವ್ಯವಸ್ಥೆ ಮಾಡಿಸಿಕೊಟ್ಟಿದ್ದಾರೆ. ಪಿಡಿಓ ಅವರು ಕ್ಷಿಪ್ರವಾಗಿ ಕೈಗೊಂಡ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಏರಿಯಾದಲ್ಲಿ 10 ಮನೆಗಳಿಗೆ ಹಾನಿಯಾಗಿದ್ದು, ಇಲ್ಲಿ ವಾಸಿಸುತ್ತಿರುವ ಜನರು ಮುಂದಿನ ಜೀವನ ಹೇಗೆ…
ಕೊರಟಗೆರೆ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಮೂಡಲಪಣ್ಣೆಯ ಮಲ್ಲಮ್ಮ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ನವೀನ್ ಕುಮಾರ್(27) ಆತ್ಮಹತ್ಯೆ ಮಾಡಿಕೊಂಡ ಯುವಕ. ಟೀ ಅಂಗಡಿ ವ್ಯಾಪಾರಿ ಆಗಿರುವ ನವೀನ್ ರಾತ್ರಿ 8 ಗಂಟೆಯ ವೇಳೆ ಮನೆಯಿಂದ, ಅವರ ಅಕ್ಕಳನ್ನು ಬಸ್ ನಿಲ್ದಾಣದಿಂದ ಕರೆದುಕೊಂಡು ಬರುತ್ತೇನೆಂದು ಹೇಳಿ ಹೋಗಿದ್ದು, ಅಂಗಡಿಯ ಮೇಲಿರುವ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದ್ದು, ಪಿಎಸ್ ಐ ನಾಗರಾಜು. ಬಿ ಮುಖ್ಯಪೇದೆ ಪುರುಷೋತ್ತಮ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹಿರಿಯೂರು: ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಹಿರಿಯೂರು ನಗರ ಹಬ್ಬಕ್ಕೆ ಸಿದ್ಧವಾಗುತ್ತಿದ್ದು, ಖರೀದಿ ಭರಾಟೆಯೂ ಜೋರಾಗಿದೆ. ಇದರ ಜೊತೆಗೆ ಜನರ ಜೇಬಿಗೆ ಸಹ ಕತ್ತರಿ ಬೀಳುವಂತಿದೆ. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಖರೀದಿ ಜನರಿಗೆ ಕಗ್ಗಂಟಾಗಿದೆ. ವರಮಹಾಲಕ್ಷ್ಮೀ ಹಬ್ಬದಲ್ಲಿ ಲಕ್ಷ್ಮೀ ದೇವಿ ಪೂಜಿಸಿದರೆ ವರ ದೇವಿ ಕರುಣಿಸುತ್ತಾಳೆ ಎಂಬ ನಂಬಿಕೆ ಜನರಲ್ಲಿದೆ. ಈ ಹಬ್ಬ, ವ್ರತ ಆಚರಿಸಲು ಜನ ಸಡಗರದಿಂದ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹಬ್ಬದಲ್ಲಿ ಲಕ್ಷ್ಮೀಯ ಅನುಗ್ರಹಕ್ಕೆ ಜನರು ಸಂಭ್ರಮದಿಂದ ತಯಾರಿ ಮಾಡಿಕೊಳ್ಳುತ್ತಾರೆ. ಹೀಗಾಗಿ ಅಗತ್ಯ ವಸ್ತುಗಳ ಖರೀದಿ ಜೋರಾಗಿಯೇ ನಡೆಯುತ್ತದೆ. ರಸ್ತೆಗಳಲ್ಲಿ ವಾಹನ ದಟ್ಟಣೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಹಿರಿಯೂರು ನಗರದ ಗಾಂಧಿ ಸರ್ಕಲ್ ಬಳಿ ಇರುವಂತಹ ನೆಹರು ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಜೋರಾಗಿಯೇ ನಡೆದಿದೆ. ಮಾರುಕಟ್ಟೆಯಲ್ಲಿ ಜನಜಾತ್ರೆಯಂತೆ ಕಂಡು ಬಂತು. ಹಬ್ಬಕ್ಕಾಗಿ ವಸ್ತುಗಳನ್ನು ಕೊಳ್ಳಲು ಜನ ತರಾತುರಿಯಲ್ಲಿ ಹಳ್ಳಿಗಳಿಂದ ಹಿರಿಯೂರು ನಗರಕ್ಕೆ ಬೆಳ್ಳಂ ಬೆಳ್ಳಗೆ ಬರತೊಡಗಿದ್ದರು. ಇದೇ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಸ್ಥರು ನಮ್ಮ ತುಮಕೂರು ಮಾಧ್ಯಮದ…
ತುಮಕೂರು: ಜಿಲ್ಲೆ ತುರುವೇಕೆರೆ ತಾಲೂಕಿನ ಹೋಬಳಿ ಅರೆ ಮಲ್ಲೇನಹಳ್ಳಿ ಗ್ರಾಮದಲ್ಲಿರುವ ವಸತಿ ಶಿಕ್ಷಣ ಸಂಸ್ಥೆಗಳ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 2022 23ನೇ ಸಾಲಿನ ಶೈಕ್ಷಣಿಕ ವರ್ಷದ ಪೋಷಕರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಶಾಲೆಯಲ್ಲಿ ಓದುತ್ತಿರುವ ಎಲ್ಲಾ ಮಕ್ಕಳ ಪೋಷಕರು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಶಾಲೆಯ ಪ್ರಾಂಶುಪಾಲರಾದ ಪರಣ್ಣರವರು ಸಭೆಯಲ್ಲಿ ಹಾಜರಿದ್ದ ಮಕ್ಕಳ ಪೋಷಕರುಗಳಿಗೆ ಈ ಸಭೆಯನ್ನು ಕರೆದಿರುವ ಉದ್ದೇಶ ಹಾಗೂ ಮಕ್ಕಳಿಗೆ ಕೊಡ ಬೇಕಾದ ಊಟ ಉಪಚಾರ ನಮ್ಮ ಕಡೆಯಿಂದ ಮಕ್ಕಳಿಗೆ ಆಗಬೇಕಾದ ಅನುಕೂಲಗಳು ಪಾಠ ಪ್ರವಚನದ ಬಗ್ಗೆ ಕುಲಂಕುಶವಾಗಿ ತಿಳಿಸಿಕೊಟ್ಟರು. ಈ ಸಭೆಯಲ್ಲಿ ಶಿಕ್ಷಕರುಗಳಾದ ಡಿ ಪಿ ವೇಣುಗೋಪಾಲ್, ವಿನೋದ್ ಕುಮಾರ್, ಹರ್ಷವರ್ಧನ್, ಮಂಜುನಾಥ್, ರವಿಕಿರಣ್, ರಾಘವೇಂದ್ರ ಶಿಕ್ಷಕಿಯರುಗಳಾದ ಶಿಲ್ಪಾ ಶ್ರೀ, ಸಬಿ ಹಾಬಾನು, ಆಶಾ , ಶ್ಯಾಮ್ ಸುಂದರ್ ಮತ್ತಿತರರು ಭಾಗವಹಿಸಿದ್ದರು. ವರದಿ: ಸುರೇಶ್ ಬಾಬು ಎಂ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಸರಗೂರು: ತಾಲ್ಲೂಕಿನ ಬಸಾಪುರ ಗ್ರಾಮದಲ್ಲಿ ನೆರೆಯಿಂದಾಗಿ 15ಕ್ಕೂ ಹೆಚ್ಚು ಮನೆಗಳು ಕುಸಿತಗೊಂಡಿದ್ದು, ವಾಸಿಸಲು ಯೋಗ್ಯ ಮನೆ ಇಲ್ಲದೆ ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾದ ಕಂದಾಯ ಇಲಾಖಾಧಿಕಾರಿಗಳು ಮನಬಂದಂತೆ ಪರಿಹಾರ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಬಿನಿ ಜಲಾಶಯ ನಿರ್ಮಾಣಗೊಂಡ ಬಳಿಕ ಗ್ರಾಮವನ್ನು ಸ್ಥಳಾಂತರ ಮಾಡಲಾಗಿದ್ದು, ಗ್ರಾಮದಲ್ಲಿರುವ ಮನೆಗಳು ಸಂಪೂರ್ಣವಾಗಿ ಮಣ್ಣಿನಿಂದ ನಿರ್ಮಾಣಗೊಂಡಿರುವ ಮನೆಗಳಾಗಿವೆ. ಹೀಗಾಗಿ ಮಳೆಗೆ ಮಣ್ಣಿನ ಗೋಡೆಗಳು ಹಾಗೂ ಮೇಲ್ಛಾವಣಿ ಕುಸಿದಿದೆ. ಗ್ರಾಮದ ಸಣ್ಣಮ್ಮ ಬಸವನಾಯಕ, ಸಿದ್ದಮ್ಮ ಬಸವರಾಜು, ದೇವಮ್ಮ ಚಿಕ್ಕನಾಯಕ, ಕಾಳನಾಯಕ ತಿಮ್ಮನಾಯಕ, ಸುಧಾ ಶಿವಪ್ಪ, ನಾಗಮ್ಮ ಪುಟ್ಟಲಿಂಗನಾಯಕ, ದೇವಮ್ಮರಾಮನಾಯಕ, ಸವಿತಾ ರೇವಣ್ಣ, ಜಯಶ್ರೀ ಮಹೇಶ್, ಕಮಲಮ್ಮ ಇಂದ್ರನಾಯಕ ಅವರ ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು, ಕಂದಾಯ ಇಲಾಖಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡದೇ ಮೀನಾಮೇಷ ಎಣ ಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ದೇವಮ್ಮರಾಮನಾಯಕ ಅವರಿಗೆ ವಿಕಲಚೇತನ ಮಗನಿದ್ದು, ಜೀವನಕ್ಕಾಗಿ ಕೂಲಿನಾಲಿ ಮಾಡುತ್ತಿದ್ದಾರೆ. ಆದರೆ, ಕಂದಾಯ ಇಲಾಖೆ ಅಧಿಕಾರಿಗಳು ಕೇವಲ 5 ಸಾವಿರ ರೂ.…
ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಮಾವತ್ತೂರು ಗ್ರಾಮದ ದೊಡ್ಡಕೆರೆಗೆ ಬಿಜೆಪಿ ಮುಖಂಡರದ ಕೆ.ಎಂ.ಮುನಿಯಪ್ಪರವರು ರೈತರೊಂದಿಗೆ ತೆರಳಿ ತುಂಬಿದ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಬಳಿಕ ಮಾತನಾಡಿದ ಅವರು, 25 ವರ್ಷಗಳ ನಂತರ ಕೂಡಿಬಿದ್ದ ಮಾವತ್ತೂರು ಕೆರೆ ತುಂಬಿ, ಹರಿಯುತ್ತಿರುವ ನದಿಗಳು ಮತ್ತು ಕೆರೆಗಳಿಗೆ ಕೃತಜ್ಞತಾ ಅರ್ಪಣಾ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ರೈತರ ಬದುಕಿನಲ್ಲಿ ಜೀವನಾಡಿಯಾಗಿರುವ ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿದರೆ ಮುಂದಿನ ದಿನಮಾನಗಳಲ್ಲಿಯೂ ಕೆರೆಗಳು ನೀರಿನಿಂದ ತುಂಬಿರಲಿ ಎನ್ನುವ ಭಕ್ತಿ ಸಮರ್ಪಿಸಿದಂತಾಗಿದೆ ಎಂದು ಹೇಳಿದರು. ಬಯಲು ಸೀಮೆಯ ಭಾಗವಾದ ಕೊರಟಗೆರೆ ಕ್ಷೇತ್ರದಲ್ಲಿ ಕಳೆದ ಎರಡು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದ್ದು, ಅದರಲ್ಲೂ ಈ ಬಾರಿ ನಿರೀಕ್ಷೆಗೂ ಮೀರಿದ ಮಳೆಯಾಗಿ ಕೆರೆ ಕಟ್ಟೆಗಳಿಗೆ, ಹಳ್ಳಕೊಳ್ಳಗಳಿಗೆ, ನೀರು ತುಂಬಿರುವ ಹಿನ್ನೆಲೆಯಲ್ಲಿ ಕೆರೆಗಳನ್ನು ಪೂಜಿಸುವುದು ಕರ್ತವ್ಯವಾಗಿದೆ ಎಂದರು. ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ, ಪ್ರತಿ ವರ್ಷ ಕೆರೆಗಳು ತುಂಬುವ ಮೂಲಕ ರೈತರಿಗೆ ದಯೆ ತೋರಲಿ ಈ ನಿಟ್ಟಿನಲ್ಲಿ ಕ್ಷೇತ್ರದ ಅನ್ನದಾತರ ಬೆನ್ನೆಲುಬಾಗಿ…
ತುರುವೇಕೆರೆ: ತಾಲೂಕಿನ ಕೊಂಡಜ್ಜಿ ಕ್ರಾಸ್ ಬಳಿಯ ಸೊಪ್ಪನಹಳ್ಳಿ ಹಳ್ಳದಲ್ಲಿ ಮಾರುತಿ ಓಮ್ನಿ ಕಾರು ಸಹಿತ ಕೊಚ್ಚಿ ಹೋಗಿದ್ದ ವೃದ್ಧ ಪಟೇಲ್ ಕುಮಾರ್ ಎಂಬವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ತಾಲ್ಲೂಕಿನ ಕಲ್ಲೂರು ಕ್ರಾಸ್ ರಸ್ತೆಯಲ್ಲಿ ಕೊಂಡಜ್ಜಿ ಕ್ರಾಸ್ ಹತ್ತಿರ ಸೂಪ್ಪನಹಳ್ಳಿ ಹಳ್ಳದಲ್ಲಿ ಹರಿಯುತ್ತಿರುವ ನೀರಿನ ರಭಸಕ್ಕೆ ಮಾರುತಿ ಓಮ್ನಿ ಕಾರು ಕೊಚ್ಚಿ ಕೊಂಡು ಹೋದ ಘಟನೆ ನಡೆದಿತ್ತು. ಘಟನೆ ವೇಳೆ ಕಾರಿನಲ್ಲಿದ್ದ 70 ವರ್ಷ ವಯಸ್ಸಿನ ಪಟೇಲ್ ಕುಮಾರಯ್ಯ ಎಂಬವರು ನೀರು ಪಾಲಾಗಿ, ಚಾಲಕ ಸೇರಿದ್ದಂತೆ ಇಬ್ಬರನ್ನು ಪಾರಾಗಿದ್ದರು. ನಿನ್ನೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ಕೊಚ್ಚಿ ಹೋಗಿರುವ ವೃದ್ಧನ ಪತ್ತೆಗೆ ಶೋಧ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಇದೀಗ ರಾಜ್ಯ ವಿಪತ್ತು ದಳ (SDRF) ಕಾರ್ಯಾಚರಣೆ ಸುತ್ತಿದೆ. ಸ್ಥಳದಲ್ಲಿ ತಹಸೀಲ್ದಾರ್ ರೇಣುಕುಮಾರ್, ಪಿ ಎಸ್ ಐ ರಾಮಚಂದ್ರಪ್ಪ ಬಿಜೆಪಿ ಮುಖಂಡ ಕೊಂಡಜ್ಜಿ ವಿಶ್ವನಾಥ್ ಬೀಡು ಬಿಟ್ಟಿದ್ದಾರೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ತಿಪಟೂರು: ಉತ್ತಮ ಆಹಾರ ಪದ್ಧತಿಯಿಂದ ರೋಗಗಳಿಂದ ದೂರವಿರಬಹುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 25 ಲಕ್ಷ ವೆಚ್ಚದ 5 ಬೆಡ್ ಗಳ ಮರು ಆಧುನಿಕರಣ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ತಿಪಟೂರು ಸಾರ್ವಜನಿಕ ಆಸ್ಪತ್ರೆ ಜಿಲ್ಲೆಯಲ್ಲಿ ಅತ್ಯಾಧುನಿಕರಣ ಸೌಕರ್ಯ ಹೊಂದಿರುವ ಆಸ್ಪತ್ರೆಯಾಗಿದೆ ಎಂದಿಗೂ ಸಹಕಾರದಿಂದ ಆಧುನಿಕ ಯಂತ್ರಗಳ ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದರು. ತಿಪಟೂರು ತಾಲೂಕಿನಲ್ಲಿ ಡಯಾಲಿಸಿಸ್ ರೋಗಿಗಳು ಜಾಸ್ತಿ ಇದ್ದು, ಆಹಾರ ಪದ್ಧತಿಯಿಂದ ಜನರು ರೋಗವನ್ನು ದೂರವಿಡುವ ಪ್ರಯತ್ನ ಮಾಡಬೇಕು ಎಂದು ಇದೇ ವೇಳೆ ಸಲಹೆ ನೀಡಿದರು. ಮುಖ್ಯ ವೈದ್ಯಾಧಿಕಾರಿ ಡಾ. ಶಿವಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ರೈತರು ನಿಯಮತವಾಗಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ತಾವೇ ಬೆಳೆದ ಆಹಾರ ಉಪಯೋಗಿಸಬೇಕು. ನಗುವ ವ್ಯಾಯಾಮ ಮಾಡಬೇಕು ಎಂದರು. ಈ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚಂದ್ರಶೇಖರ್ ವೈದ್ಯರಾದ ರಕ್ಷಿತ ಗೌಡ ನೇತ್ರ ತಜ್ಞ ಡಾಕ್ಟರ್ ಸುರೇಶ್ ಬಿಸಲೇಹಳ್ಳಿ ಜಗದೀಶ್ ಮುಂತಾದವರು ಭಾಗವಹಿಸಿದ್ದರು. ವರದಿ:…
ತುಮಕೂರು: ವಜ್ಜನಕುರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರಗಾನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಕುರುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಮೋರಗಾನಹಳ್ಳಿ ಗ್ರಾಮದ ವಿಶ್ವಣ್ಣ ಎಂಬುವರಿಗೆ ಸೇರಿದ ಕರು. ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ಕರುವನ್ನು ಕಟ್ಟಲಾಗಿತ್ತು. ಗುರುವಾರ ತಡರಾತ್ರಿ ದಾಳಿ ನಡೆಸಿರುವ ಚಿರತೆ ಕರುವನ್ನು ಎತ್ತೊಯ್ಯಲಾಗದೆ ಇದ್ದ ಜಾಗದಲ್ಲೆ ತಿಂದು ಹಾಕಿದೆ. ಗ್ರಾಮದ ಮಧ್ಯ ಭಾಗದಲ್ಲಿನ ಕೊಟ್ಟಿಗೆಗೆ ಚಿರತೆ ದಾಳಿ ಮಾಡಿರುವುದರಿಂದ ಗ್ರಾಮದ ಜನ ಭಯಭೀತರಾಗಿದ್ದಾರೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy