Author: admin

ಮಂಡ್ಯ: ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ನಾಲ್ಕುದಿನಗಳ ಕಾಲ ಶ್ರೀ ಮಲೆ ಮಹದೇಶ್ವರರ ಮಹಾ ಕುಂಭಮೇಳ ಮಹೋತ್ಸವ ನಡೆಯಲಿದ್ದು ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಈ ಕುರಿತು ಜೆ ಎಸ್ ಎಸ್ ಶಾಖಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಎಸ್ಎಸ್ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಅ.13 ರಿಂದ ಅ.16 ರವರೆಗೆ ತ್ರಿವೇಣಿ ಸಂಗಮದಲ್ಲಿ ಮಲೆ ಮಹದೇಶ್ವರರ ಮಹಾ ಕುಂಭಮೇಳ ಜರುಗುತ್ತಿದೆ. ನಾಲ್ಕು ದಿನಗಳ ಕಾಲ ಮಹಾ ಕುಂಭಮೇಳಕ್ಕೆ ರಾಜ್ಯ ಹೊರ ರಾಜ್ಯಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ಈ ಮಹಾ ಕುಂಭಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಮಹದೇಶ್ವರರ ಜೀವನ ಚರಿತ್ರೆ ಕುರಿತು ಅಲ್ಲಿ ವಿಚಾರ ಸಂಕಿರಣ ಕೂಡ ನಡೆಯಲಿದೆ. ಮೈಸೂರು, ಚಾಮರಾಜನಗರ ಭಾಗಗಳಿಂದಲೂ ಹೆಚ್ಚಿನ ಸಂಖ್ಯೆಯ ಭಕ್ತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, 2013ರ ಬಳಿಕ  9 ವರ್ಷಗಳ ಬಳಿಕ ಈ…

Read More

ಬೆಂಗಳೂರು : ಗ್ರಾಮಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಓಗಳಿಗೆ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯಿತಿ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತಂದು ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಮೊಟಕುಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಭೆ ತೀರ್ಮಾನ ಕೈಗೊಂಡಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ಅಂಕಿತ ಹಾಕಿದ್ದಾರೆ. ಇತ್ತೀಚೆಗೆ ಸಚಿವ ಬಿ.ಸಿ.ನಾಗೇಶ್ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದಿದ್ದರು. ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು. ಈ ಮೂಲಕ ಎಸ್​ ಎಸ್​ ಎಲ್ ​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿ ಜಾರಿಗೆ ತರಲು ನಿರ್ಧರಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಜಯಪುರ: ಬೈಕ್‌ ಗೆ ಹಿಂಬದಿಯಿಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದ ಮುತ್ತವ್ವ ಗಸ್ತಿ (40) ಮೃತ ಮಹಿಳೆ. ಅಪಘಾತದ ಬಳಿಕ ಬಸ್ ಬಿಟ್ಟು ಕಂಡಕ್ಟರ್, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಬಬಲೇಶ್ವರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಧಾರವಾಡ: ಹೆಂಡತಿ ಕೊಲೆ ಮಾಡಿದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ಶ್ರೀದೇವಿ ರಾಮಾಪುರ ಕೊಲೆಯಾದ ದುರ್ದೈವಿ. ರಾಜು ರಾಮಾಪುರ ಎಂಬಾತನೇ ಪತ್ನಿ ಕೊಂದು ಸಾವಿಗೆ ಶರಣಾದ ಪತಿ‌. ಪತ್ನಿ ಶ್ರೀದೇವಿಯನ್ನು ಹೊಲದಲ್ಲೇ ಕೊಡಲಿಯಿಂದ ಕೊಚ್ಚಿ ರಾಜು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಹೊಲದಲ್ಲೇ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಕೃಷಿ, ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆಗಳ ಸಚಿವಾಲಯ ಮಟ್ಟದ ಉನ್ನತ ಹಾಗೂ ಹಿರಿಯ ಶ್ರೇಣಿಯ ಎರಡು ಸಾವಿರ ಹುದ್ದೆಗಳನ್ನು ರದ್ದುಪಡಿಸಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ಶಿಫಾರಸು ಮಾಡಿದೆ. ವಿಧಾನಸೌಧದಲ್ಲಿ ಸಚಿವ ಆರ್. ಅಶೋಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವ ಸಂಪುಟದ ಉಸಮಿತಿಯು ಈ ನಿರ್ಣಯ ತೆಗೆದುಕೊಂಡಿದ್ದು, ಕೃಷಿ ಇಲಾಖೆಯಡಿ ಬರುವ ಮೈಸೂರು ತಂಬಾಕು ಕಂಪನಿ, ಕೃಷಿ ಕೈಗಾರಿಕೆ ನಿಗಮ, ಆಹಾರ ನಿಗಮ, ರೇಷ್ಮೆ ಬೆಳೆಯದ ಜಿಲ್ಲೆಗಳಲ್ಲಿನ ಜಿಲ್ಲಾ, ತಾಲೂಕುಮಟ್ಟದ ಅಧಿಕಾರಿಗಳ ಹುದ್ದೆಗಳು, ಕೆಳಹಂತದ ಸಿಬ್ಬಂದಿ ಕೃಷಿ ಇಲಾಖೆಗೆ ಹಸ್ತಾಂತರಿಸುವ ಕುರಿತು ಶಿಫಾರಸು ಮಾಡಲಾಗಿದೆ. ಯಾವುದೆಲ್ಲ ವಿಲೀನ?: ಶಿಕ್ಷಣ ಇಲಾಖೆಯಲ್ಲಿ ಮುದ್ರಣ, ಲೇಖನ ಸಾಮಗ್ರಿ, ಪ್ರಕಟಣೆ ಇಲಾಖೆ. ಪ್ರವಾಸೋದ್ಯಮ ಇಲಾಖೆಯಲ್ಲಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ. ಯಾವುದು ರದ್ದು?: ಮೈಸೂರು ತಂಬಾಕು ಕಂಪನಿ, ಕರ್ನಾಟಕ ಕೃಷಿ ಕೈಗಾರಿಕಾ ನಿಗಮ, ಕರ್ನಾಟಕ ಆಹಾರ ನಿಗಮ. ರೇಷ್ಮೆ ಬೆಳೆಯದ ಜಿಲ್ಲೆಗಳಲ್ಲಿನ ಜಿಲ್ಲಾ, ತಾಲೂಕುಮಟ್ಟದ ಅಧಿಕಾರಿಗಳ ಹುದ್ದೆಗಳು. ಕೆಳಹಂತದ ಸಿಬ್ಬಂದಿ ಕೃಷಿ ಇಲಾಖೆಗೆ…

Read More

ನವದೆಹಲಿ: ಶಿವಸೇನೆಯ ಏಕನಾಥ್ ಶಿಂಧೆ ಬಣಕ್ಕೆ ಎರಡು ಖಡ್ಗಗಳು ಮತ್ತು ಶೀಲ್ಡ್ ಚಿಹ್ನೆಯನ್ನು ಚುನಾವಣಾ ಆಯೋಗ ಹಂಚಿಕೆ ಮಾಡಿದೆ. ಅವರಿಗೆ ನಿನ್ನೆ ಬಾಳಾಸಾಹೇಬಂಚಿ ಶಿವಸೇನಾ ಎಂಬ ಹೆಸರನ್ನು ನೀಡಲಾಯಿತು. ಕೆಲ ದಿನಗಳ ಹಿಂದಷ್ಟೇ ಕೇಂದ್ರ ಚುನಾವಣಾ ಆಯೋಗದಿಂದ ಶಿವಸೇನೆಯ ಏಕನಾಥ್ ಶಿಂಧೆ ಹಾಗೂ ಉದ್ಧವ್ ಠಾಕ್ರೆ ಅವರಿಗೆ ನೀಡಲಾಗಿದ್ದಂತ ಬಿಲ್ಲು-ಬಾಣದ ಚಿನ್ಹೆಯನ್ನು ರದ್ದುಗೊಳಿಸಿತ್ತು. ಈ ಬಳಿಕ, ಏಕನಾಥ ಶಿಂಧೆಯಿಂದ ಹೊಸ ಚಿಹ್ನೆ ನೀಡೋದಕ್ಕೆ ಆಯೋಗಕ್ಕೆ ಮನವಿ ಮಾಡಲಾಗಿತ್ತು. ಈ ಬೆನ್ನಲ್ಲೇ ಇಂದು ಚುನಾವಣಾ ಆಯೋಗದಿಂದ ಶಿವಸೇನೆಯ ಏಕನಾಥ ಶಿಂಧೆ ಅವರ ಬಣಕ್ಕೆ ಎರಡು ಖಡ್ಗ ಗಳು ಮತ್ತು ಶೀಲ್ಡ್ ಚಿಹ್ನೆಯನ್ನು ಲಾಂಛನವಾಗಿ ಹಂಚಿಕೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಯಚೂರು: ಕಾಂಗ್ರೆಸ್ ಹಗರಣಗಳನ್ನು ಮುಂದಿನ ಅಧಿವೇಶನದಲ್ಲಿ ಬಯಲು ಮಾಡುತ್ತೇವೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಲ್ಲಿ ನಡೆದೆ ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ತನಿಖೆ ಮಾಡಿಸಿ ನಿಮ್ಮನ್ನು ಎಲ್ಲಿ ನಿಲ್ಲಿಸಬೇಕೋ ಅಲ್ಲಿಗೆ ನಿಲ್ಲಿಸುತ್ತೇವೆ. ನ್ಯಾಷನಲ್​ ಹೆರಾಲ್ಡ್​​​ ಹಗರಣ ಗೊತ್ತಿಲ್ಲವೇ.. ಹಗರಣವನ್ನೇ ಮಾಡದ ಪ್ರಧಾನಿ ಮೋದಿ ಬಗ್ಗೆ ಮಾತನಾಡ್ತೀರಾ. 25 ಲಕ್ಷ ಮೌಲ್ಯದ ಹ್ಯೂಬ್ಲೆಟ್​ ವಾಚ್​ ಕೊಟ್ಟಿದ್ಯಾರು ಗೊತ್ತಿಲ್ವಾ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದರು. ರಾಯಚೂರು ಜಿಲ್ಲೆಗೆ ಏಮ್ಸ್ ಕೊಡೊದಾಗಿ ಘೋಷಣೆ ಮಾಡುತ್ತೇವೆ. ಏಮ್ಸ್ ಕೊಟ್ಟರೆ, ಐದು ಕ್ಷೇತ್ರ ಗೆಲ್ಲಿಸಿ ಕೊಡತಿವಿ ಅಂತ ಹೇಳಿದ್ದಿರಾ. ಹಾಗೇನೆ ಇಂದೇ ರಾಯಚೂರಿಗೆ ಏಮ್ಸ್ ಘೋಷಣೆ ಮಾಡುತ್ತೇವೆ. ಮುಖ್ಯಮಂತ್ರಿ ಬೊಮ್ಮಾಯಿ ಏಮ್ಸ್ ಘೋಷಣೆ ಮಾಡಲಿದ್ದಾರೆ. 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ವಿಜಯಪುರ: ರಾಜಕೀಯವಾಗಿ ನನ್ನನ್ನು ಮುಗಿಸಲು ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಮಾತು ಕೇಳಿ ಕೆಲ ಮಾಧ್ಯಮಗಳು ವ್ಯವಸ್ಥಿವಾಗಿ ಅಪಪ್ರಚಾರ ಮಾಡಿದವು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ನನ್ನನ್ನು ಮುಗಿಸಲು, ಬಿಜೆಪಿ ಪಕ್ಷದ ಸನ್ಮಾನ್ಯ ಉಪಾಧ್ಯಕ್ಷ ವಿಜಯೇಂದ್ರನ ಮಾತು ಕೇಳಿ, ಕೊಟ್ಟ ಪ್ರಸಾದ ಸ್ವೀಕರಿಸಿ, ಕೇಂದ್ರದವರು 2500 ಕೋಟಿ ರೂ. ಕೇಳಿದ್ದಾರೆಂದು ನನ್ನ ಝೀರೋ ಮಾಡುವುದಕ್ಕಾಗಿ ಕೆಲ ದೃಶ್ಯಮಾಧ್ಯಮಗಳು ವ್ಯವಸ್ಥಿವಾಗಿ ಅಪಪ್ರಚಾರ ಮಾಡಿದವು ಎಂದರು. ದೆಹಲಿಯಿಂದ ಈಗಲೂ ಓರ್ವ ಸ್ವಾಮೀಜಿ 1,500 ಕೋಟಿ ರೂ. ಕೂಡಿಸಿಕೊಂಡು ದೆಹಲಿ ಬನ್ನಿ. ನಿಮ್ಮನ್ನು ಜೆ.ಪಿ.ನಡ್ಡಾ, ಮೋದಿ ಅವರ ಭೇಟಿಗೆ ಸಮಯ ನಿಗದಿ ಮಾಡುತ್ತೇನೆ ಅಂತೆಲ್ಲ ಹೇಳುತ್ತಾರೆ. ಇಂಥದ್ದನ್ನೆಲ್ಲ ನಂಬಬೇಡಿ ಎಂದಿದ್ದೇನೆ. ಇಂಥವರ ಮಾತು ನಂಬಿಕೊಂಡು ಹಲವರು ಭಾರಿ ಪ್ರಮಾಣದ ಹಣ ಕಳೆದುಕೊಂಡು ಸಂಕಷ್ಟ ಅನುಭವಿಸಿದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಸಿದ್ಧರಾಮಯ್ಯ ಹಿಂದುಳಿದ ವರ್ಗದವರ ಭಿಕ್ಷೆಯಲ್ಲಿ ಸಿಎಂ ಆದವರು. ಆದರೆ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಿಸಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ನಳೀನ್ ಕುಮಾರ್ ಕಟೀಲ್,  ಎರಡು ತಂಡವಾಗಿ ಜನ ಸಂಕಲ್ಪಯಾತ್ರೆ ಮಾಡುತ್ತೇವೆ.  ಸರ್ಕಾರ ಎರಡು ಸಮುದಾಯದ ಬೇಡಿಕೆ ಈಡೇರಿಸಿದೆ. ಸಿದ್ಧರಾಮಯ್ಯ   ಅಹಿಂದ ನಾಯಕ ಎನ್ನುತ್ತಾರೆ. ಆದರೆ  ಹಿಂದುವಳಿದ ವರ್ಗದವರ ನ್ಯಾಯ ಕೊಡಿಸಲಿಲ್ಲ. ಸಿದ್ಧರಾಮಯ್ಯ ಅವಧಿಯಲ್ಲಿ ಮೀಸಲಾತಿ ಕೊಡಲಿಲ್ಲ. ಈಗ ಮೀಸಲಾತಿ ವಿರೋಧಿಸುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಗೆ ಯಾವ ನೈತಿಕತೆ ಇದೆ ಎಂದು ಕುಟುಕಿದರು. ನಾವು  ಕೆಲಸ ಮಾಡಿದ್ದೇವೆ ಕ್ರೆಡಿಟ್ ತೆಗೆದುಕೊಳ್ಳುತ್ತೇವೆ. ಭ್ರಷ್ಟಾಚಾರ ಶುರು ಮಾಡಿದ್ದೇ.  ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್ ಎಂದು ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More