Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ವಿವಾಹೇತರ ಸಂಬಂಧ ಯುವಕನೊಬ್ಬನ ಜೀವವನ್ನೇ ಬಲಿ ತೆಗೆದುಕೊಂಡಿದೆ. ಆಂಧ್ರಪ್ರದೇಶದ ವೈಎಸ್ ಆರ್ ಜಿಲ್ಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ರಾಜುಪಾಳಂ ನಿವಾಸಿ ಪರ್ಲಪಾಡು ನರಸಮ್ಮ ಅವರು ಕೆಲ ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಅವರಿಗೆ ಒಬ್ಬ ಮಗಳು ಮತ್ತು ಒಬ್ಬ ಮಗ ಇದ್ದಾರೆ. ಎಸ್‌ಸಿ ಕಾಲೋನಿಯ ಛಾಯಾಗ್ರಾಹಕ ಮಿಠೆ ಪೇಠಾಸ್ತಗಿರಿಯೊಂದಿಗೆ ಮಗಳ ಮದುವೆ ನಡೆದಿದೆ. ತಾಯಿ ಮಾಪುಣ್ಣಿ ಹಾಗೂ ಕಿರಿಯ ಸಹೋದರ ದಸ್ತಗಿರಿ (28) ಅವರನ್ನು ಅಗಲಿದ್ದಾರೆ. ಕೆಲವು ವರ್ಷಗಳ ಹಿಂದೆ ತಂದೆ ತೀರಿಕೊಂಡರು. ಈ ವೇಳೆ ನರಸಮ್ಮ ಹಾಗೂ ಅಳಿಯನ ಸೋದರ ಮಾವ ದಸ್ತಗಿರಿ ನಡುವೆ ವಿವಾಹೇತರ ಸಂಬಂಧ ಏರ್ಪಟ್ಟಿತ್ತು. ಟೈಲರ್ ಆಗಿದ್ದ ಚಿನ್ನ ದಸ್ತಗಿರಿ ಇತ್ತೀಚೆಗಷ್ಟೇ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದ. ಈ ಸ್ಥಿತಿಯಲ್ಲಿ ಶುಕ್ರವಾರ ಸಂಜೆ ನರಸಮ್ಮ ಮನೆಗೆ ಬಂದು ನೀನು ಬೇರೆ ಮದುವೆಯಾಗುವುದು ಹೇಗೆ ಎಂದು ಜಗಳವಾಡಿದ್ದಾಳೆ. ಕೋಪದ ಭರದಲ್ಲಿ ಚಾಕು ತೆಗೆದು ಪುಟ್ಟ ದಸ್ತಗಿರಿಗೆ ಇರಿದಿದ್ದಾನೆ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೊಲೆಯಾದ ವ್ಯಕ್ತಿಯ ತಾಯಿ ಮಿಥೆ…
ಮೂಲ ನಿವಾಸಿ ಅಂಬೇಡ್ಕರ್ ಸಂಘ (ರಿ) ರಾಜ್ಯಾಧ್ಯಕ್ಷರು – ಸಂಸ್ಥಾಪಕರು ಡಾll ಬಿ ಎಂ ಮುನಿಮಾರಪ್ಪ ರಾಜ್ಯಾಧ್ಯಕ್ಷರು ಪ್ರಚಾರ ಘಟಕ ಜೈ ಭೀಮ್ Cನ ಯುವ ಸೈನ್ಯ ಪತ್ರಿಕೆ ಸಂಸ್ಥಾಪಕರು ಧನರಾಜ್ ಈ ಮೂರು ವ್ಯಕ್ತಿ ಕಳೆದ ಎರಡು ವರ್ಷ ಹಿಂದೆ ಮೂಲ ನಿವಾಸಿ ಅಂಬೇಡ್ಕರ್ ಸೈನ್ಯ ಹುಟ್ಟು ಹಾಕಿರುತ್ತಾರೆ ಮೂರು ಜನ ಶ್ರಮ ಇವತ್ತಿಗೆ ಆಲದ ಮರವಾಗಿ ಬೆಳೆದಿದೆ ಆ ಸಂಘದ ಹೆಸರು ಮೂಲ ನಿವಾಸಿ ಅಂಬೇಡ್ಕರ್ ಸಂಘ (ರಿ) ಕರ್ನಾಟಕದಲ್ಲಿ ಮೂಲೆ ಮೂಲೆಯಲ್ಲೂ ವಿಚಾರ ಕೆಲಸ ಮಾಡುತ್ತಾ ಬರುತ್ತಿದೆ ಪ್ರಚಾರ ಬಿಟ್ಟು ವಿಚಾರದ ಕಡೆ ಡಾll ಬಾಬಾ ಸಾಹೇಬ್ ಅಂಬೇಡ್ಕರ್ ವಿಚಾರಗಳನ್ನು ತಿಳಿಸುವ ಪ್ರಮುಖ ಕೆಲಸ ಮಾಡುತ್ತಿದೆ ರಾಜ ಸಮಿತಿ ಜಿಲ್ಲಾ ಸಮಿತಿ ಎಲ್ಲಾ ಕ್ಷೇತ್ರದ ಸಮಿತಿ ಸದ್ಯಸರು ಪದಾಧಿಕಾರಿಗಳು ಹೆಚ್ಚು ಕೆಲಸ ಮಾಡುತ್ತಿದ್ದಾರೆ ಮೂಲ ನಿವಾಸಿ ಅಂಬೇಡ್ಕರ್ ಸಂಘ ವತಿಯಿಂದ (ರಿ) ಒಂದು ವರ್ಷದ ಹಿಂದೆ ಇಂದಿನ ನಗರ ಬಿನ್ನಮಂಗಳ ಅಂಬೇಡ್ಕರ್ ಪುತ್ತಳಿಯನ್ನು ಉದ್ಘಾಟ ಸಮಾರಂಭವನ್ನು ಮಾಡಲಾಯಿತು…
ಬೆಂಗಳೂರು : ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಚಳಿ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು, 25 ತೊಲೆ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ. ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿದ್ದ 25 ತೊಲೆ ಬಂಗಾರ, 20 ತೊಲೆ ಬೆಳ್ಳಿ ಹಾಗೂ 4 ಸಾವಿರ ರೂ. ನಗದನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಗೋಕಾಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹುಬ್ಬಳ್ಳಿ : ಮೀಸಲಾತಿ ಶೇ.50 ಕ್ಕಿಂತ ಹೆಚ್ಚಳ ಅಸಾಧ್ಯ ಎಂದು ಕೇಂದ್ರ ಸರ್ಕಾರ ಯಾವ ಹಿನ್ನೆಲೆಯಲ್ಲಿ ಲಿಖಿತ ಉತ್ತರ ನೀಡಿದೆ ಎಂದು ಪರಿಶೀಲಿಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಈ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ, ಎಸ್ಟಿ ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬದ್ಧವಾಗಿವೆ ಎಂದು ಸ್ಪಷ್ಟಪಡಿಸಿದರು. ಮೀಸಲಾತಿ ಹೆಚ್ಚಳವನ್ನು ರಾಜ್ಯ ಸರ್ಕಾರ ನಿಯಮಬದ್ಧವಾಗಿ ಮಾಡಿದೆ. ಹೀಗಾಗಿ ಮೀಸಲಾತಿ ಹೆಚ್ಚಳ ಕೈಬಿಡಲಿದೆ ಎಂಬ ಆತಂಕ ಬೇಡ. ಅವರ ಮೀಸಲಾತಿ ಹೆಚ್ಚಳ ಸರ್ಕಾರ ಹಾಗೂ ನಮ್ಮ ಪಕ್ಷದ ಬದ್ಧತೆಯಾಗಿದೆ. ಆದರೆ ಕೇಂದ್ರ ಸರ್ಕಾರದ ನೀಡಿರುವ ಲಿಖಿತ ಉತ್ತರ ಯಾವ ಹಿನ್ನೆಲೆಯಲ್ಲಿ ಹೇಳಲಾಗಿದೆ ಎಂದು ಮಾಹಿತಿ ಪಡೆದು ಸ್ಪಷ್ಟವಾಗಿ ತಿಳಿಸುತ್ತೇನೆಂದರು. ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿ, ಅವರು ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಟ್ಟಿರುವ ವಿಚಾರ. ಈ ಕುರಿತು ರಾಷ್ಟ್ರ ನಾಯಕರು ಯಾವ ಸೂಚನೆ ನೀಡುತ್ತಾರೋ…
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿವೆ. ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ತೊಡಗಿದ್ದರೇ, ಜೆಡಿಎಸ್ ಪಂಚರತ್ನ ರಥಯಾತ್ರೆಯನ್ನು ಕೈಗೊಂಡಿದೆ. ಇನ್ನೂ ಕಾಂಗ್ರೆಸ್ ಪಕ್ಷದಿಂದ ವಿಪಕ್ಷ ನಾಯಕ ಸಿದ್ಧರಾಮಯ್ಯ ಬಸ್ ಯಾತ್ರೆಯನ್ನು ಆರಂಭಿಸಲಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ಕೈಗೊಂಡಿರೋದು, ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಿದೆ ಎನ್ನಲಾಗುತ್ತಿದೆ. ಇನ್ನೂ ಹೀಗೆ ರೆಡಿಯಾಗಿರುವಂತ ಪಟ್ಟಿಯಲ್ಲಿ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಫಿಕ್ಸ್ ಎನ್ನಲಾಗಿದೆ. ಅಲ್ಲದೇ ಮೂರ್ನಾಲ್ಕು ಹಾಲಿ ಶಾಸಕರಿಗೆ ಟಿಕೆಟ್ ಮಿಸ್ ಸಾಧ್ಯತೆಯನ್ನು ಹೊರತು ಪಡಿಸಿ, ಬಹುತೇಕರು ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ ಎನ್ನಲಾಗಿದೆ. ಅಂದಹಾಗೇ ಕೆಪಿಸಿಸಿಯಿಂದ ಆಹ್ವಾನಿಸಿದ್ದಂತ ಟಿಕೆಟ್ ಅರ್ಜಿಯ ವೇಳೆಯಲ್ಲಿ ಒಂದೊಂದು ಕ್ಷೇತ್ರಕ್ಕೂ ನಾಲ್ಕೈದು, 10, 15 ಅರ್ಜಿಗಳನ್ನು ಟಿಕೆಟ್ ಆಕಾಂಕ್ಷಿತರು ಸಲ್ಲಿಸಿದ್ದಾರೆ ಎನ್ನಲಾಗಿದೆ. ಹೀಗೆ ಸಲ್ಲಿಸಿದ್ದಂತ ತೀವ್ರ ಪೈಪೋಟಿಯ ನಡುವೆಯೂ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಸಂಭವನೀಯ ಪಟ್ಟಿಯನ್ನು ಸಿದ್ಧ ಮಾಡಿಟ್ಟುಕೊಂಡಿದೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ ಟಿಕೆಟ್ ಫೈನಲ್ ಎನ್ನುವ…
ವಿಜಯಪುರ: ವಸಂತ ಕಾಲ ಬರಲಿ, ವಸಂತ ಬಂದಾಗಲೇ ಕಾಗೆ ಯಾವುದು ಕೋಗಿಲೆ ಯಾವುದು ಗೊತ್ತಾಗುವುದು ಎಂದು ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕಾಗೆ ಎಂದು ಟೀಕಿಸಿದರು. ಬ್ರೋಕರ್ ಸ್ವಾಮಿ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಹರಿಹರ ಪೀಠದ ವಚನಾನಂದ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ. ಹರಿಹರ ಪೀಠದ ಸ್ವಾಮೀಜಿ ಬ್ರೋಕರ್ ಸ್ವಾಮಿ ಆಗಿದ್ದಾರೆ. ಹಣ ವಸೂಲಿ ಮಾಡೋದು, ಮಂತ್ರಿ ಮಾಡಿ ಎಂದು ಹಣ ಕೇಳೋ ಕೆಲಸ ಮಾಡುತ್ತಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರಿಂದ ಹರಿಹರ ಶ್ರೀಗಳು 10 ಕೋಟಿ ರೂ. ಹಣ ವಸೂಲಿ ಮಾಡಿದ್ದಾರೆ. ಮಠದ ಹಣದ ವಿಚಾರದಲ್ಲಿ ಬಹಳ ಅವ್ಯವಹಾರ ಮಾಡಿದ್ದಾರೆ. ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಅವ್ಯವಹಾರದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು ಎಂದು ಯತ್ನಾಳ್ ಆರೋಪಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಹೀಗಾಗಿ ಇದೀಗ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದೆ. ದೆಹಲಿಗೆ ಬರುವಂತೆ ಸೂಚನೆ ಬಂದಿದ್ದು, ನಾಳೆ ತೆರಳಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರಚಾರ ಸಮಿತಿಯ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ, ರಾಮಲಿಂಗಾ ರೆಡ್ಡಿ, ಧ್ರುವ ನಾರಾಯಣ್ ಮತ್ತಿತರರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಚುನಾವಣೆಗೆ ರಣತಂತ್ರ ರೂಪಿಸುವ ಕುರಿತು ರಾಜ್ಯ ನಾಯಕರ ಜತೆ ಮಹತ್ವದ ಮಾತುಕತೆ ನಡೆಸಲಿರುವ ಹೈಕಮಾಂಡ್, ಅಭ್ಯರ್ಥಿಗಳ ಆಯ್ಕೆ ವಿಚಾರ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಜಯಪುರ: ಸಾಮಾಜಿಕ ಜಾಲ ತಾಣಗಳಲ್ಲಿ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದ ಕುರಿತು ವದಂತಿ ಹರಡಿಸಲಾಗಿದೆ. ನಗರದ ಜ್ಞಾನ ಯೋಗಾಶ್ರಮದ ಪೀಠಾಧಿಪತಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದ ಕುರಿತು ವದಂತಿ ಹರಡಿದೆ. 83 ವರ್ಷದ ಶ್ರೀ ಸಿದ್ದೇಶ್ವರ ಶ್ರೀಗಳು ಸದ್ಯ ವಿಜಯಪುರ ನಗರದ ಜ್ಞಾನ ಯೋಗಾಶ್ರಮದಲ್ಲಿಯೇ ಇದ್ದಾರೆ. ನಿತ್ಯ ಎಂದಿನಂತೆ ಸ್ನಾನ ಪೂಜೆ ಮಾಡಿರುವ ಶ್ರೀಗಳು ಇಂದೂ ಸಹ ಭಕ್ತರಿಗೆ ದರ್ಶನ ಭಾಗ್ಯ ನೀಡಿದ್ದಾರೆ. ಚಳಿಗಾಲವಿರುವ ಕಾರಣ ಸಹಜವಾದ ನೆಗಡಿ ಕೆಮ್ಮು ಶ್ರೀಗಳನ್ನು ಬಾಧಿಸುತ್ತಿದೆ. ನೆಗಡಿ ಕೆಮ್ಮು ಬಿಟ್ಟು ಇತರೆ ಯಾವುದೇ ಆರೋಗ್ಯ ಸಮಸ್ಯೆ ನಡೆದಾಡುವ ದೇವರಿಗೆ ಇಲ್ಲ. ಹೀಗಾಗಿ ಅವರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ತಾಲೂಕಿನ ಇರಕಸಂದ್ರ ಕಾಲೋನಿ ಬಳಿ ಚಿರತೆ ದಾಳಿಯಿಂದ ಗಾಯಗೊಂಡವರು ದಾಖಲಾಗಿರುವ ಆಸ್ಪತ್ರೆಗೆ, ಮಾಜಿ ಡಿಸಿಎಂ, ಶಾಸಕ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಇರಕಸಂದ್ರಕಾಲೋನಿಯ ಗ್ರಾಮದಲ್ಲಿ ಕಳೆದ ಶನಿವಾರ ಬೆಳಿಗ್ಗೆ ಚಿರತೆಯೊಂದು ಬಸ್ ನಿಲ್ದಾಣದ ಸಮೀಪ ಶ್ರೀನಿವಾಸ(60), ರಾಜು(46) ಎನ್ನುವರ ಮೇಲೆ ದಾಳಿ ನಡೆಸಿ, ನಂತರ ಕೆಂಪರಾಜು ಎಂಬುವರ ದನದ ಕೊಟ್ಟಿಗೆಗೆ ನುಗ್ಗಿ ಅಲ್ಲಿ ಹಾಲು ಕರೆಯುತ್ತಿದ್ದ ಚೇತನ್ (15) ಹಾಗೂ ಧನುಷ್ (13) ಎಂಬ ಬಾಲಕರ ಮೇಲೆ ದಾಳಿ ಮಾಡಿತ್ತು. ಈ ಘಟನೆ ನಡೆದ ಸಂದರ್ಭದಲ್ಲಿ ಶಾಸಕ ಡಾ.ಜಿ.ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರ ಅಭಿನಂದನಾ ಕಾರ್ಯಕ್ರಮಕ್ಕೆ ಕಲಬುರ್ಗಿಗೆ ಹೋಗಿದ್ದರು, ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಬಂದ ಶಾಸಕರು ಹಿಂದೆಯೇ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯ ಗೊಂಡ ಇಬ್ಬರು ಬಾಲಕರ ಮತ್ತು ವೃದ್ದರ ಆರೋಗ್ಯ ವಿಚಾರಿಸಿದರು ಇದೇ ವೇಳೆ ತಮ್ಮ ವೈಯಕ್ತಿಕ ಹಣದಿಂದ ಬಾಲಕರ ತಂದೆಗೂ ಹಾಗೂ…