Subscribe to Updates
Get the latest creative news from FooBar about art, design and business.
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
- ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
- ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
- ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
- ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
Author: admin
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ನೇ ವರ್ಷದ ಹುಟ್ಟುಹಬ್ಬ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಇತ್ತ ಸಿದ್ದರಾಮಯ್ಯನವರ ತವರೂರು ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿ ಜನರಿಲ್ಲದೆ ಬಣಗುಡುತ್ತಿದೆ. ಇಲ್ಲಿನ ಬಹುತೇಕರು ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದು, ಕಾಲು ನೋವಿನ ಕಾರಣಕ್ಕೆ ಸಿದ್ದರಾಮಯ್ಯನವರ ಸಹೋದರ ರಾಮೇಗೌಡ ಸಿದ್ದರಾಮನ ಹುಂಡಿಯಲ್ಲಿ ಉಳಿದುಕೊಂಡಿದ್ದಾರೆ. ಇನ್ನುಳಿದಂತೆ ಎಲ್ಲರೂ ಸಹ ದಾವಣಗೆರೆಗೆ ತೆರಳಿದ್ದಾರೆ. ತವರು ಗ್ರಾಮದ ಜನತೆಗಾಗಿ ದಾವಣಗೆರೆಯಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ಸವಿತಾ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ನೀಡ ಬೇಕು. ಜಾತಿ ನಿಂದಿಸುವವರ ವಿರುದ್ಧ ಸರ್ಕಾರಿ ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಸವಿತಾ ಸಮಾಜ ಮೀಸಲಾತಿ ಮತ್ತು ಹೋರಾಟ ಸಮಿತಿ ವತಿಯಿಂದ ಒತ್ತಾಯಿಸಿತು. ತಿಟೂರಿನಲ್ಲಿ ಈ ಸಂಬಂಧ ಸಂಘಟನೆಯ ರಾಜ್ಯಾಧ್ಯಕ್ಷ G. ನಾಗರಾಜ್ ಅವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ್, ಸವಿತಾ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ನೀಡಬೇಕು. ಹಾಗೂ ಜಾತಿ ನಿಂದಕರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಅವರು ಒತ್ತಾಯಿಸಿದರು. ಹೊರ ರಾಜ್ಯದಿಂದ ಮತ್ತು ಹೊರ ದೇಶದಿಂದ ಆಗಮಿಸಿರುವವರು ನಮ್ಮ ರಾಜ್ಯಕ್ಕೆ ಬಂದು ನೆಲೆಸಿ ನಮ್ಮ ವೃತ್ತಿಯನ್ನು ಪ್ರಾರಂಭಿಸಿದ್ದು, ನಮ್ಮ ಕುಲಕಸುವಾದ ಕ್ಷೌರಿಕ ವೃತ್ತಿಯನ್ನು ನಂಬಿಕೊಂಡು ಜೀವನ ಸಾಗಿಸುತ್ತಿರುವ ನಮ್ಮ ಕುಲಬಾಂಧವರ ಆದಾಯಕ್ಕೆ ಕತ್ತರಿ ಹಾಕುತ್ತಿದ್ದಾರೆ. ನಮ್ಮ ಜನಾಂಗದ ಒಳಿತಿಗಾಗಿ ನಾವು ಈ ಸಮಿತಿ ರಚಿಸಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಚಿತ್ರದುರ್ಗ: ಜಿಲ್ಲಾ ಮೂರನೇಯ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ನ್ಯಾಯಾಧೀಶರಾಗಿ ನೇಮಕಗೊಂಡಿರುವ ನ್ಯಾಯಾಧೀಶರಾದ ಸಹನಾ ಅವರನ್ನು ಜಿಲ್ಲಾ ವಕೀಲರ ಸಂಘದಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಸಿ.ಶಿವು ಯಾದವ್, ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಹಲವು ವರ್ಷಗಳಿಂದ ನ್ಯಾಯಾಧೀಶರು ನೇಮಕಗೊಂಡಿರಲಿಲ್ಲ. ಇದೀಗ ಸಹನಾರವರು ನ್ಯಾಯಾಧೀಶರಾಗಿ ಆಗಮಿಸಿರುವುದು ತುಂಬಾ ಸಂತೋಷದಾಯಕ ವಿಷಯವಾಗಿದೆ. ಅವರ ನ್ಯಾಯಾಧೀಶರ ವೃತ್ತಿಜೀವನವು ಚಿತ್ರದುರ್ಗದಿಂದ ಆರಂಭಿಸುತ್ತಿದ್ದಾರೆ. ಅವರ ಮುಂದಿನ ನ್ಯಾಯಾಧೀಶರ ವೃತ್ತಿಜೀವನವು ಸುಂದರವಾಗಿರಲಿ ಎಂದು ಹಾರೈಸಿದರು. ನ್ಯಾಯಾಧೀಶರಾದ ಸಹನರವರಿಗೆ ನ್ಯಾಯದಾನ ವಿಚಾರದಲ್ಲಿ ಎಲ್ಲಾ ರೀತಿಯಿಂದಲೂ ವಕೀಲರ ಸಂಘದಿಂದ ಸಹಕಾರ ನೀಡಲಾಗುವುದು. ತ್ವರಿತ ನ್ಯಾಯದಾನದಲ್ಲಿ ನ್ಯಾಯಾಧೀಶರ ಮತ್ತು ವಕೀಲರ ಪರಸ್ಪರ ಸಹಕಾರ ಅತ್ಯವಶ್ಯಕವಾಗಿರುತ್ತದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರೇಮವತಿ ಮನಗೂಳಿ ಅವರು ಮಾತನಾಡಿ, ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಸಹನಾರವರನ್ನು ನೇಮಕ ಮಾಡಿರುವುದು ಸಂತೋಷದಾಯಕ ವಿಷಯವಾಗಿದೆ. ತಮ್ಮ ಕೆಲಸ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಲಿ…
ಹಿರಿಯೂರು: ಶ್ರಾವಣ ಮಾಸದ ಮೊದಲ ಸೋಮವಾರ ಹಾಗೂ ನಾಗರ ಪಂಚಮಿ ಹಬ್ಬದ ಪ್ರಯುಕ್ತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ದಕ್ಷಿಣ ಕಾಶಿ ಎಂದೇ ಪ್ರಖ್ಯಾತ ವಾಗಿರುವ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವನಿಗೆ ಪೂಜೆಗಳು ಬಹಳ ವಿಜೃಂಭಣೆಯಿಂದ ನಡೆದವು. ನಾಗರ ಪಂಚಮಿಯಂದು ದೇವಸ್ಥಾನ ಹಾಗೂ ಹುತ್ತಗಳಿಗೆ ಭಕ್ತಾದಿಗಳು ವಿಶೇಷ ಪೂಜೆ ಮಾಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು, ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ . ಈ ಹಬ್ಬವನ್ನು ಅಣ್ಣ –ತಂಗಿಯರು ಸೇರಿಕೊಂಡು ಪೂಜಿಸುವುದು ಇನ್ನೊಂದು ವಿಶೇಷತೆಯಾಗಿದೆ. ಹಿರಿಯೂರು ತಾಲ್ಲೂಕಿನ ದಕ್ಷಿಣ ಕಾಶಿ ಶ್ರೀ ತೇರು ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಹೊರ ಭಾಗದಲ್ಲಿರುವ ನಾಗರ ಕಲ್ಲುಗಳಿಗೆ ಭಕ್ತಾದಿಗಳು ಹಾಲು ಸುರಿದು ಪೂಜೆ ಸಲ್ಲಿಸುವುದರ ಮುಖಾಂತರ ನಾಗರ ಪಂಚಮಿ ಹಬ್ಬವನ್ನು ಬಹಳ ವಿಶೇಷತೆಯಿಂದ ಆಚರಿಸಿದರು . ಇದೇ ಸಂದರ್ಭದಲ್ಲಿ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕರು ತೇರುಮಲ್ಲೇಶ್ವರ ಸ್ವಾಮಿಯ ಹಾಗೂ ದೇವಸ್ಥಾನದ ವೈಶಿಷ್ಟ್ಯಗಳ ಬಗ್ಗೆ ನಮ್ಮ…
ಪಾವಗಡ: ತಾಲೂಕಿನ ನಿಡಗಲ್ಲು ಹೋಬಳಿ ದೇವಲಕೆರೆ ಗ್ರಾಮದಲ್ಲಿ ನಿರ್ಮಾಣ ಹಂತದ ಮನೆಯಲ್ಲಿ ಕರಡಿಯೊಂದು ರಾತ್ರಿ ಕಳೆದಿದೆ. ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯಿಂದ ರಕ್ಷಣೆ ಪಡೆಯಲು ಕರಡಿ ಮಂಜುಳಾ ಪುಟ್ಟರಾಜು ಎಂಬುವರ ನಿರ್ಮಾಣ ಹಂತದ ಮನೆಗೆ ಕರಡಿ ನುಗ್ಗಿದೆ ಎನ್ನಲಾಗಿದೆ. ಬುಧವಾರ ಬೆಳಿಗ್ಗೆ ಮನೆ ಬಳಿ ಹೋದಾಗ ಮನೆಯಲ್ಲಿ ಕರಡಿ ಮಲಗಿರುವುದನ್ನು ಗಮನಿಸಿದ ಮನೆಯ ಮಾಲೀಕರು ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ಗ್ರಾಮಸ್ಥರ ಸಹಕಾರದೊಂದಿಗೆ ಕರಡಿಯನ್ನು ಓಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ 2022-23ನೇ ಸಾಲಿನ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು, ಪರಿಶಿಷ್ಟ ಜಾತಿ, ಪಂಗಡದ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತ 75ಯೂನಿಟ್ ವಿದ್ಯುತ್ ಸರಬರಾಜು ಮಾಡುವ ಯೋಜನೆ ರೂಪಿಸಿದ್ದು ಇಂಧನ ಇಲಾಖೆ ಅಧಿಕಾರಿಗಳು ಈ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕೆಂದು ಅವರು ಸೂಚಿಸಿದರು. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 20 ಸಾವಿರ ರೂ.ಗಳ ಘಟಕ ಯೋಜನೆಯ ಸಹಾಯಧನದಲ್ಲಿ ಸ್ವಚ್ಚ ಭಾರತ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಅವರು ತಿಳಿಸಿದರು. ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ವಿಶೇಷವಾಗಿ ಈ ಸಮುದಾಯಕ್ಕೆ ವಸತಿ ಯೋಜನೆ ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆ…
ಮಧುಗಿರಿ: ಆಗಸ್ಟ್ 15ರ ಸ್ವಾತಂತ್ರ ದಿನಾಚರಣೆ ಅಮೃತ ಮಹೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಸಭಾಂಗಣದಲ್ಲಿ ತಿಳಿಸಿದ್ದಾರೆ. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಂಘ-ಸಂಸ್ಥೆಗಳ ಪೂರ್ವಭಾವಿ ಸಭೆ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೂ ಮೂರು ದಿನಗಳ ಕಾಲ ಸರ್ಕಾರಿ ಕಚೇರಿಗಳ ಮೇಲೆ ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯ್ತಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕೆಂದು. ರಾಷ್ಟ್ರಧ್ವಜಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾಡಬಾರದು ಎಂದು ತಿಳಿಸಿದರು. ಸಂದರ್ಭದಲ್ಲಿ ಮಾಜಿ ಸೈನಿಕರಿಗೆ ಪೆರೇಡ್ ಮಾಡಲು ಅವಕಾಶ ನೀಡಲಾಗುವುದು ಮತ್ತು ಅವರಿಗೆ ಸನ್ಮಾನ ಮಾಡಲಾಗುವುದಿಲ್ಲ. ಸರ್ಕಾರಿ ನೌಕರರು ಕ್ರಿಯಾಶೀಲವಾಗಿ ಕೆಲಸ ಮಾಡಿದಾಗ ವಿಜೃಂಭಣೆಯಿಂದ ಆಚರಿಸಲು ಸಾಧ್ಯ ಎಂದರು. ಆಗಸ್ಟ್ 15ರ ಬೆಳಿಗ್ಗೆ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾತಂತ್ರೋತ್ಸವದ ದಿನಕ್ಕೆ ಚಾಲನೆ ನೀಡಲಾಗುವುದು ಅದೇ ರೀತಿ ಸರ್ಕಾರಿ ಕಛೇರಿಗಳು ಬ್ಯಾಂಕುಗಳು ಆಗಸ್ಟ್ 13ರಿಂದ ತಮ್ಮ ಕಚೇರಿಗಳ ಮೇಲೆ…
ಬಾಗಲಕೋಟೆ: ಆಗಸ್ಟ್ 3ರಂದು ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ. ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಮೃತ ವ್ಯಕ್ತಿ ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದವ ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೆರೂರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಶಿರಾ ತಾಲ್ಲೂಕಿನ ಚನ್ನನಕುಂಟೆ ಬಳಿ ಹಳ್ಳ ದಾಟುತ್ತಿದ್ದ ಶಿಕ್ಷಕ ಆರೀಫ್ ವುಲ್ಲಾ (55) ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ. ದಾವೂದ್ ಪಾಳ್ಯ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಶಾಲೆ ಮುಗಿಸಿಕೊಂಡು ಶಿರಾಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಶಿರಾದ ದೊಡ್ಡ ಕೆರೆಯ ಕೋಡಿ ನೀರು ಚನ್ನನಕುಂಟೆ ಹಳ್ಳದ ಮೂಲಕ ಹರಿದು ಹೋಗುತ್ತಿದ್ದು, ಅದನ್ನು ದಾಟಲು ಪ್ರಯತ್ನಿಸಿದಾಗ ನೀರಿನ ರಭಸಕ್ಕೆ ದ್ವಿಚಕ್ರ ವಾಹನ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಧುಗಿರಿ: ಅಂಗನವಾಡಿ ಕಾರ್ಯಕರ್ತೆಯ ಕಾರ್ಯನಿರ್ವಹಣೆಯ ಬಗ್ಗೆ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ತಾಲ್ಲೂಕಿನ ಐ ಡಿ ಹಳ್ಳಿ ಹೋಬಳಿಯ ಹೊಸ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಅಂಗನವಾಡಿ ಕಾರ್ಯಕರ್ತೆಯು ಮಕ್ಕಳ ಆಹಾರ ಸಾಮಗ್ರಿಗಳನ್ನು ಕೇಳಲು ಹೋದಾಗ ಉಡಾಫೆ ಉತ್ತರಕೊಡುತ್ತಿದ್ದು, ಗ್ರಾಮಸ್ಥರನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಪೋಷಕರಾದ ನಾಗಮಣಿ ಎಂಬವರು ಆಕ್ರೋಶ ವ್ಯಕ್ತಪಡಿಸಿದರು. ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಿಲ್ಲ, ಮೊಟ್ಟೆಯೂ ಕೊಡುತ್ತಿಲ್ಲ ಎಂದು ಸಾವಿತ್ರಮ್ಮ ಎಂಬವರು ಆರೋಪಿಸಿದರು. ಅಂಗನವಾಡಿ ಕಾರ್ಯಕರ್ತೆಯ ಪತಿ ಪೋಷಕರ ಮನೆ ಮುಂದೆ ಹೋಗಿ ಗಲಾಟೆ ಮಾಡುತ್ತಿದ್ದಾರೆ. ಅಕ್ಷರ ಕಲಿಸಬೇಕಾದ ಶಿಕ್ಷಕಿ ಏಕವಚನದಲ್ಲಿ ಬೈಯ್ಯುತ್ತಾರೆ. ಮುಗ್ದ ಜನಗಳ ಬಳಿ ದುರಹಂಕಾರದಿಂದ ಮಾತನಾಡುತ್ತಾರೆ. 3 ದಿನಗಳಿಂದ ಅನಾವಶ್ಯಕವಾಗಿ ಅಂಗನವಾಡಿಯ ಬಾಗಿಲು ತೆರೆದಿಲ್ಲ ಎಂದು ಗ್ರಾಮಸ್ಥರು ಆರೋಪಗಳ ಸುರಿಮಳೆ ಸುರಿಸಿದ್ದಾರೆ. ಈ ಭಾಗದ ಇಲಾಖೆಯ ಸಂಬಂಧಪಟ್ಟ ಮೇಲಧಿಕಾರಿಗಳು ಗಡಿ ಭಾಗಗಳಿಗೆ ಹೋಗಿ ಕುಂದುಕೊರತೆ ಸಭೆಗಳನ್ನು ನಡೆಸಿ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ನಮ್ಮ ಊರಲ್ಲಿ ಈ ಕಾರ್ಯಕರ್ತೆ ಕಾರ್ಯನಿರ್ವಹಿಸುವುದು ಬೇಡ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ: ಅಬಿದ್…