Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ಕೊರಟಗೆರೆ: ಕ್ಯಾಂಟರ್ ಹಾಗೂ ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರ ಸಹಿತ ಮೂವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಶಾಪುರ ಗೇಟ್ ಸಮೀಪದ ಮುಖ್ಯರಸ್ತೆಯಲ್ಲಿ ನಡೆದಿದೆ. ಕೊರಟಗೆರೆಯಿಂದ ಗೌರಿಬಿದನೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಭೀಕರ ಅಪಘಾತ ನಡೆದಿದೆ. ಅರಸಾಪುರ ಮತ್ತು ಕಾಶಾಪುರ ಗೇಟ್ ಬಳಿ ಈಗಾಗಲೇ ಅಪಘಾತ ವಲಯ ಎಂದು ಗುರುತಿಸಲಾಗಿದೆ. ಇದೇ ಪ್ರದೇಶದಲ್ಲಿ ಇದೀಗ ಅಪಘಾತ ಸಂಭವಿಸಿದ್ದು, ಮೂರು ಜೀವಗಳು ಬಲಿಯಾಗಿದೆ. ಕೊರಟಗೆರೆ ಪಟ್ಟಣದ ನಿವಾಸಿಯಾದ ಮೀಲಾನಿ(25), ಜೈರಾಭಿ(70), ಆಟೋ ಚಾಲಕ ಕಲಂದರ್(36) ಮೃತಪಟ್ಟವರಾಗಿದ್ದು, ಆಟೋ ಚಾಲಕ ಕಲಂದರ್ ಅವರ ಮಕ್ಕಳಾದ ಅರ್ಪ(5), ಅಸೀತಾ(3) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಸಾರ್ವಜನಿಕರು ರಸ್ತೆ ಸುರಕ್ಷತೆಯ ನಿರ್ಲಕ್ಷ್ಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ತಿರುವಿನಲ್ಲಿ…
ತುರುವೇಕೆರೆ: ತಾಲೂಕಿನ ಸೂಳೆಕೆರೆ ಗ್ರಾಮ ಮತ್ತು ಸೂಳೆಕೆರೆ ಪಾಳ್ಯ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಂಘದ ಸದಸ್ಯರು ಇಂದು ಗ್ರಾಮದಲ್ಲಿರುವ ಶ್ರೀ ಗಣಪತಿ ದೇವಾಲಯದ ಆವರಣದಲ್ಲಿ ಹೆಚ್ಚುವರಿ ಷೇರು ಸಂಗ್ರಹ ಅಭಿಯಾನವನ್ನು ಹಮ್ಮಿಕೊಂಡಿದ್ದರು. ಮಹಿಳಾ ಮುಖ್ಯ ಪ್ರವರ್ತಕರಾದ ರಾಧಮ್ಮ ಎಂ.ಆರ್. ಲೋಕೇಶ್ ಈ ಸಂದರ್ಭದಲ್ಲಿ ಮಾತನಾಡಿ, ಸೂಳೆಕೆರೆ ಮತ್ತು ಸೂಳೆಕೆರೆ ಪಾಳ್ಯದ ಈ ಮಹಿಳಾ ಹಾಲು ಉತ್ಪಾದಕರ ಸಂಘದ ಶೇರುದಾರರು ಇಲ್ಲಿಯವರೆಗೂ 160 ಜನ ಷೇರುದಾರರಿದ್ದು, ಇನ್ನೂ ನಮ್ಮ ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶೇರುದಾರರಾಗಿ ಈ ಹಾಲು ಒಕ್ಕೂಟ ಆರಂಭಿಸಲು ಸಹಕಾರಿಯಾಗಬೇಕು ಎಂದು ತಿಳಿಸಿದರು. ಶೇರುದಾರರಾದ ಮಹಾಲಕ್ಷ್ಮಿ ರುದ್ರೇಶ್ ಮಾತನಾಡಿ , ಸೂಳೆಕೆರೆ ಗ್ರಾಮದಲ್ಲಿ ಈ ಹಾಲು ಉತ್ಪಾದಕರ ಸಂಘ ಅಧಿಕೃತವಾಗಿ ಪ್ರಾರಂಭವಾಗಿರುವುದು ನಮ್ಮೆಲ್ಲರಿಗೂ ಖುಷಿ ತಂದಿರುವ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಹಿಳೆಯರು ಈ ಹಾಲು ಉತ್ಪಾದಕರ ಸಂಘಕ್ಕೆ ಶೇರುದಾರರಾಗಿ ಈ ಒಕ್ಕೂಟ ಪ್ರಾರಂಭಿಸಲು ಸಹಕಾರಿಯಾಗಬೇಕು. ನಮ್ಮ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ಮಹಾಲಿಂಗಯ್ಯ ಅವರು ಈ ಹಾಲು…
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಮಧ್ಯರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಯನ್ನು ತಡೆದ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರದಲ್ಲಿ ಈ ಘಟನೆ ನಡೆದಿದೆ. ರಾತ್ರಿ ವೇಳೆ ಮುಸ್ಲಿಮ್ ಯುವಕರೊಂದಿಗೆ ತಿರುಗಾಡುತ್ತಿದ್ದ ಹಿಂದೂ ಯುವತಿಯರನ್ನು ನಿಲ್ಲಿಸಿದ ಬಜರಂಗದಳದ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಇಲ್ಲಿ ಏನು ಮಾಡುತ್ತಿದ್ದೀರಿ ಎಂದು ಕಾರ್ಯಕರ್ತರು ಪ್ರಶ್ನಿಸಿದಾಗ, ಹೊಟೇಲ್‌ಗೆ ಊಟಕ್ಕೆ ಬಂದಿರೋದಾಗಿ ಜೋಡಿಗಳು ಹೇಳಿದ್ದಾರೆ. ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಹೇಳಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಬಳಿಕ ಜೋಡಿ ಪೊಲೀಸ್ ಠಾಣೆಗೆ ತೆರಳಿದ್ದು, ವಿಚಾರಣೆಯ ಬಳಿಕ ಮನೆಗೆ ಕಳುಹಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಲಕ್ನೋ: ಬೀದಿನಾಯಿಗಳು ಕಚ್ಚಿದ ಪರಿಣಾಮ 40 ವರ್ಷದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ನೋದ ಜಾನಕಿಪುರಂ ಎಕ್ಸ್ಟೆನ್ಷನ್ ಪ್ರದೇಶದಲ್ಲಿ ನಡೆದಿದೆ. ಶ್ರೀಸ್ತಿ ಅಪಾರ್ಟ್ಮೆಂಟ್ ನಿವಾಸಿ ರಿಹಾನ್ನಾ ಆಸಿಫ್ ರಾತ್ರಿ 9 ಗಂಟೆಗೆ ತನ್ನ ಮಾವನೊಂದಿಗೆ ವಾಯುವಿಹಾರಕ್ಕೆ ತೆರಳಿದ್ದು, ಬಳಿಕ ಅಲ್ಲೇ ಇದ್ದ ಬೆಂಚಿನ ಮೇಲೆ ಕುಳಿತುಕೊಂಡಿದ್ದರು. ಈ ವೇಳೆ ಸುಮಾರು 6 ನಾಯಿಗಳು ಅವರ ಮೇಲೆ ದಾಳಿ ನಡೆಸಿದ್ದು, ಈ ವೇಳೆ ನಾಯಿಗಳು ಮಹಿಳೆಯ ದೇಹದಿಂದ ಮಾಂಸವನ್ನು ಕಿತ್ತು ಹಾಕಲು ಪ್ರಯತ್ನಿಸಿದ್ದು, ತೀವ್ರವಾದ ದಾಳಿ ನಡೆಸಿದೆ. ಈ ವೇಳೆ ಮಹಿಳೆಯ ಮಾವ ಸ್ಥಳಕ್ಕೆ ಓಡಿ ಬಂದು ನಾಯಿಗಳನ್ನು ಸ್ಥಳದಿಂದ ಬೆದರಿಸಿ ಓಡಿಸಿ ಮಹಿಳೆಯನ್ನು ಕಾಪಾಡಿದ್ದಾರೆ. ರಿಹಾನ್ನಾ ಎಂಬ ಮಹಿಳೆ ನಾಯಿಯಿಂದ ಕಡಿತಕ್ಕೊಳಗಾದ ಮಹಿಳೆಯಾಗಿದ್ದು, ತನ್ನ ಮಾವ ರಕ್ಷಣೆಗೆ ಬಾರದೇ ಇದ್ದಿದ್ದರೆ, ನಾಯಿಗಳು ನನ್ನನ್ನು ಕಚ್ಚಿ ಸಾಯಿಸುತ್ತಿದ್ದವು ಎಂದು ಮಹಿಳೆ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಡಾ.ರಾಜ್‌ಕುಮಾರ್ ಕುಟುಂಬದ ಕುಡಿ, ನಟ ವಿನಯ್ ರಾಜ್‌ಕುಮಾರ್ ಅಭಿನಯದ ’10’ ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ಈ ಬಗ್ಗೆ ಪುಷ್ಕರ್ ಫಿಲ್ಮ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಡಿಸೆಂಬರ್ 16ರಂದು ಥಿಯೇಟರ್‌ಗಳಿಗೆ ಬರಲು ಸಿದ್ಧವಾಗಿದೆ. ಛಾಯಾಗ್ರಾಹಕ ಕರ್ಮ್ ಚಾನ್ಹಾ ಅವರೇ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ವೃತ್ತಿಪರ ಬಾಕ್ಸರ್ ಪಾತ್ರವನ್ನು ವಿನಯ್ ನಿರ್ವಹಿಸಿದ್ದಾರೆ. ಈ ಪಾತ್ರಕ್ಕಾಗಿ ಒಂದೂವರೆ ಗಂಟೆ ಬಾಕ್ಸಿಂಗ್ ತರಬೇತಿ ಪಡೆದಿದ್ದೆ ಎಂದು ವಿನಯ್ ಹೇಳಿದ್ದಾರೆ. ಕಟ್ಟುನಿಟ್ಟಿನ ಆಹಾರ ಕ್ರಮವನ್ನೂ ಅನುಸರಿಸಿದ್ದೇನೆ. ಇದೆಲ್ಲವೂ ನನ್ನನ್ನು ಪರಿವರ್ತಿಸಲು ಸಹಾಯ ಮಾಡಿತು ಎಂದು ಹೇಳಿದ್ದರು. ಅನುಷಾ ರಂಗನಾಥ್ ಕಾಣಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
1931: ಭಾರತೀಯ ಆಧ್ಯಾತ್ಮಿಕ ಗುರು ಓಶೋ ಜನನ 1935: ಭಾರತದ 13ನೇ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಜನನ 1994: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಕವಿ ಕುವೆಂಪು ನಿಧನ ಅಂತರರಾಷ್ಟ್ರೀಯ ಪರ್ವತ ದಿನ * 2004: ಕರ್ನಾಟಕ ಸಂಗೀತಗಾರ್ತಿ ಮತ್ತು ಗಾಯಕಿ ಎಂ.ಎಸ್.ಸುಬ್ಬಲಕ್ಷ್ಮಿ ನಿಧನ – UNICEF ಸಂಸ್ಥಾಪನಾ ದಿನ, ಅಂತರಾಷ್ಟ್ರೀಯ ಪರ್ವತ ದಿನ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಗು ಹುಟ್ಟುವ ಮೊದಲೇ ದತ್ತು ಸ್ವೀಕಾರಕ್ಕೆ ಒಪ್ಪಂದ ಮಾಡಿಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ. ಹಿಂದೂ ದಂಪತಿ ಮಗುವನ್ನು ಮುಂದೆ ಸಾಕಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಮುಸ್ಲಿಂ ದಂಪತಿಗೆ ದತ್ತು ನೀಡಲು ಒಪ್ಪಂದ ಮಾಡಿಕೊಂಡ ಉಡುಪಿ ಪ್ರಕರಣ ವಿಚಾರಣೆ ವೇಳೆ ‘ಗರ್ಭದಲ್ಲಿರುವ ಮಗುವಿಗೆ ತನ್ನದೇ ಬದುಕು-ಹಕ್ಕು ಇದ್ದು, ಅದು ಜನ್ಮ ತಾಳುವ ಮೊದಲೇ ದತ್ತು ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಜತೆಗೆ ಮುಸ್ಲಿಂ ಧರ್ಮ ಕಾನೂನಿನಲ್ಲಿ ದತ್ತು ಸ್ವೀಕಾರಕ್ಕೆ ಮಾನ್ಯತೆಯಿಲ್ಲ’ ಎಂದು ಪೀಠ ತಿಳಿಸಿದೆ. ಪೋಷಕರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪ್ರಧಾನಿ ನರೇಂದ್ರ ಮೋದಿ ಇಂದು ಮಹಾರಾಷ್ಟ್ರ, ಗೋವಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಹಾರಾಷ್ಟ್ರದಲ್ಲಿ ಸುಮಾರು 75,000 ಕೋಟಿ ರೂ. ಯೋಜನೆಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ ನೆರವೇರಿಸಲಿದ್ದಾರೆ. ಶಿರಡಿ ಸಂಪರ್ಕಿಸುವ ಬಹುನಿರೀಕ್ಷಿತ 701 ಕಿಮೀ. ನಾಗುರ-ಮುಂಬಯಿ ಎಕ್ಸ್‌ಪ್ರೆಸ್ ಉದ್ಘಾಟಿಸುತ್ತಾರೆ. ನಾಗುರ ಮೆಟ್ರೋ ಮೊದಲ ಹಂತ, ನಾಗುರ-ಬಿಲಾಸ್‌ಪುರ ವಂದೇ ಭಾರತ್, ನಾಗುರ ಏಮ್ಸ್‌ಗೆ ಚಾಲನೆ ನೀಡುತ್ತಾರೆ. ಜತೆಗೆ ಗೋವಾದ 2ನೇ ಏರ್‌ಪೋರ್ಟ್ ಮೊಪದಲ್ಲಿ ಉದ್ಘಾಟಿಸಲಿದ್ದಾರೆ. ಉಭಯ ರಾಜ್ಯಗಳಲ್ಲಿ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಗೋವಾದ ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಈ ಏರ್‌ಪೋರ್ಟ್ ಅನ್ನು ಉನ್ನತ ದರ್ಜೆಯ ತಂತ್ರಜ್ಞಾನಗಳನ್ನು ಅಳವಡಿಸಿ ನಿರ್ಮಿಸಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.
ಹಿರಿಯ ನಟ ಶರತ್ ಕುಮಾರ್ ತೀವ್ರ ಅಸ್ವಸ್ಥ ಜನಪ್ರಿಯ ನಟ ಶರತ್ ಕುಮಾರ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅತಿಸಾರದಿಂದ ನಿರ್ಜಲೀಕರಣಕ್ಕೆ ಒಳಗಾಗಿದ್ದ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ಹೀಗಾಗಿ, ಪ್ರಸ್ತುತ ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿ ರಾಧಿಕಾ ಮತ್ತು ಮಗಳು ವರಲಕ್ಷ್ಮಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅವರು ಕನ್ನಡದ ಸಾರಥಿ, ಮೈನಾ, ಸಂತೆಯಲ್ಲಿ ನಿಂತ ಕಬೀರ, ಪುನೀತ್ ರಾಜ್‌ಕುಮಾರ್ ಅಭಿನಯದ ರಾಜಕುಮಾರ, ಸೀತಾರಾಮ ಕಲ್ಯಾಣ ಚಿತ್ರಗಳಲ್ಲಿ ನಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಪುಣೆಯ ಕಾರ್ಯಕ್ರಮಕ್ಕೆ ತೆರಳುವ ವೇಳೆ ತೆರಳುತ್ತಿರುವಾಗ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ವ್ಯಕ್ತಿಯೊಬ್ಬರು ಮಸಿ ಎರಚಿದ ಘಟನೆ ನಿನ್ನೆ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಪುಣೆ ಮಹಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಮಹಾತ್ಮಾ ಪುಲೆ, ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಚಂದ್ರಕಾಂತ ಪಾಟೀಲ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಈ ಸಂಬಂಧ ಉದ್ಧವ್ ಠಾಕ್ರೆ ಅವರ ಶಿವಸೇನೆ ಗುಂಪು ಕೂಡ ಕಾರ್ಯಕ್ರಮದ ಸ್ಥಳದ ಬಳಿ ಪ್ರತಿಭಟನೆ ನಡೆಸಿ ಚಂದ್ರಕಾಂತ್ ಪಾಟೀಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಈ ಪ್ರತಿಭಟನೆಯಲ್ಲಿದ್ದ ಯುವಕನೋರ್ವ ಪಕ್ಕದಲ್ಲೇ ಬೆಂಗಾವಲು ಸಿಬ್ಬಂದಿಯಿದ್ದರೂ ಚಂದ್ರಕಾಂತ ಪಾಟೀಲರ ಮುಖಕ್ಕೆ ಮಸಿ ಎರಚಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿದ್ದ ಪೊಲೀಸರು ಯುವಕ ಹಾಗೂ ಪ್ರತಿಭಟನೆಯಲ್ಲಿದ್ದು ಕೃತ್ಯದಲ್ಲಿ ಜೊತೆಗಿದ್ದ ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy