Subscribe to Updates
Get the latest creative news from FooBar about art, design and business.
- ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
- ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
- ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
- ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
- ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
- ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್ ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
- ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
- ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್ ಗಳ ಕ್ಯೂ!
Author: admin
ಕೊರಟಗೆರೆ: ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣದ ಬೈಪಾಸ್ ನ ವಡ್ಡಗೆರೆ ಕ್ರಾಸ್ ನ ಬಳಿ ದುರ್ಘಟನೆ ಜರುಗಿದ್ದು, ಪಟ್ಟಣದ ನಿವಾಸಿಯಾದ ಬಸವರಾಜು ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮೃತ ಬಸವರಾಜು ವಡ್ಡಗೆರೆ ಮಾರ್ಗವಾಗಿ ಕೊರಟಗೆರೆಗೆ ಬರುವಾಗ ಬೈಪಾಸ್ ನಲ್ಲಿ ರಸ್ತೆ ದಾಟುವ ಸಂದರ್ಭದಲ್ಲಿ ಕಾರು ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸವರಾಜುವಿಗೆ ಗಂಭೀರವಾಗಿ ಗಾಯವಾಗಿದ್ದು, ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ನೆಲಮಂಗಲ: ರಾಜ್ಯ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಲಾವಣ್ಯ ಜಿ.ಎನ್.ರವರನ್ನು ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರ ಆದೇಶದಂತೆ ಹಾಗೂ ಸಭೆಯ ಒಮ್ಮತದ ನಿರ್ಣಯದಂತೆ ರಾಜ್ಯಾಧ್ಯಕ್ಷರು ಆದೇಶ ಪತ್ರ ನೀಡಿ ನೇಮಕ ಮಾಡಿದರು. ನೆಲಮಂಗಲದ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಮಿತಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷೆಯಾಗಿ ಲಾವಣ್ಯ ಜಿ.ಎನ್. ಅವರಿಗೆ ಆದೇಶ ಪತ್ರ ನೀಡಲಾಯಿತು. ರಾಜ್ಯ ಮಹಿಳಾ ಘಟಕದ ಅಧಿಕಾರ ವಹಿಸಿಕೊಂಡು ನೊಂದವರ ಧ್ವನಿಯಾಗಿ ಸಂಘಟನೆಯ ಜವಾಬ್ದಾರಿಯನ್ನು ವೇದಿಕೆಯ ತತ್ವ ಸಿದ್ದಂತಾಗಳಾಡಿಯಲ್ಲಿ ಕೆಲಸ ಮಾಡುವಂತೆ ಇದೇ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ಕೆ.ಆರ್.ರವರು ಮಾರ್ಗದರ್ಶನ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯ ಸಾಮಾಜಿಕ ಜಾಲತಾಣದ ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ಹೆಚ್.ಜಿ.ಗೌಡ, ರಾಜ್ಯ ಸಾಮಾಜಿಕ ಜಾಲತಾಣದ ಘಟಕದ ಸಂಘಟನಾ ಕಾರ್ಯದರ್ಶಿಯಾದ ಮಹೇಶ್ ಜಿ.ಗೌಡ ಹಾಗೂ ನೆಲಮಂಗಲ ತಾಲ್ಲೂಕು ಅಧ್ಯಕ್ಷರಾದ ಕಾಂತ್ ಕುಮಾರ್, ಉಪಾಧ್ಯಕ್ಷರಾದ ಗಂಗಾಧರ್, ಇನ್ನಿತರ ರಾಜ್ಯ ಸಮಿತಿಯ ಕಾರ್ಯಕರ್ತರು ಹಾಗೂ…
ಬೆಳಗಾವಿ: ಚಿನ್ನದ ವ್ಯಾಪಾರಿಯನ್ನು ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ನಿಪ್ಪಾಣಿ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಕಾಂಬಳೆ(25), ಅವಧೂತ ಕೋಳಿ(25), ಅಕ್ಷಯ್ ಕೊಂಡಗೇರಿ(29), ಪಂಕಜ್ ಕೋಳಿ(25) ಎಂಬ ಬಂಧಿತ ಆರೋಪಿಗಳು. ಬಂಧಿತರಿಂದ ಸುಲಿಗೆ ಮಾಡಿದ 75 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ಸಹಿತ ಕೃತ್ಯಕ್ಕೆ ಬಳಸಿದ 2 ಬೈಕ್ಗಳು, 4 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ನಲ್ಲಿ ದೋಂಡಿರಾಮ್ ವಿಷ್ಣು ಕಾಂಬಳೆ ಎಂಬುವರಿಂದ ಚಿನ್ನ-ಬೆಳ್ಳಿ ಕದ್ದು ಆರೋಪಿಗಳು ಪರಾರಿಯಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇಸ್ರೇಲ್ ನಲ್ಲಿ ಭಾರತದ ಯುವಕನನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸಲಾಗಿತ್ತು. ಇವರೆಲ್ಲರೂ 13 ರಿಂದ 15 ವರ್ಷದೊಳಗಿನವರು. 18 ವರ್ಷದ ಯೊಯೆಲ್ ಲೆಹಿಂಗ್ಹಾಲ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಚಾಕು ಹೊಡೆದಾಟಕ್ಕೆ ಬಲಿಯಾಗಿದ್ದಾನೆ. ಇಸ್ರೇಲ್‌ನ ಕಿರ್ಯಾತ್ ಸೊಮೊನಾ ನಗರದಲ್ಲಿ ಈ ಘಟನೆ ನಡೆದಿದೆ. ಯೊಯೆಲ್ ಒಂದು ವರ್ಷದ ಹಿಂದೆ ತನ್ನ ಕುಟುಂಬದೊಂದಿಗೆ ಭಾರತದಿಂದ ಇಸ್ರೇಲ್‌ಗೆ ವಲಸೆ ಬಂದಿದ್ದ. ಅವರು ನೋಫ್ ಹಗಲಿಲ್ ಎಂಬ ಊರಿನಲ್ಲಿದ್ದಾರೆ. ಹುಟ್ಟುಹಬ್ಬದ ಸಮಾರಂಭದಲ್ಲಿ ಸುಮಾರು 20 ಯುವಕರು ಪರಸ್ಪರ ಹಲ್ಲೆ ನಡೆಸಿದ್ದಾರೆ. ಯೊಯೆಲ್ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಬಿನೈ ಮಿನಾಶೆ ಯಹೂದಿ ಸಮುದಾಯವು ಭಾರತದ ಮಣಿಪುರ ಮತ್ತು ಮಿಜೋರಾಂ ಪ್ರದೇಶದಲ್ಲಿ ನೆಲೆಗೊಂಡಿದೆ. ಈ ಗುಂಪಿಗೆ ಸೇರಿದ ಜನರು ಕಳೆದ ಎರಡು ದಶಕಗಳಿಂದ ಇಸ್ರೇಲ್‌ಗೆ ವಲಸೆ ಬರುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಹೊರವಲಯದ ಕೋಲಾರಮ್ಮ ಕೆರೆ ಬಳಿ ಈ ಘಟನೆ ನಡೆದಿದೆ. ಶಬ್ಬಿ ಉಲ್ಲಾ ಬೇಗ್( 41) ಇರ್ಷಾದ್ ಉಲ್ಲಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಬ್ಬರು ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲ ನಿವಾಸಿಗಳಾಗಿದ್ದಾರೆ. ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಕೋಲಾರ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಚೆನ್ನೈನ ಮೈಲಾಪುರ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನುಖರೀದಿಸುವ ವೀಡಿಯೊವನ್ನು ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಚೆನ್ನೈ ಭೇಟಿಯ ವೇಳೆ ವಿತ್ತ ಸಚಿವೆ ನಿರ್ಮಾಲಾ ಅವರು ಮೈಲಾಪುರ ಮಾರುಕಟ್ಟೆಗೆ ತೆರಳಿದ್ದಲ್ಲದೆ ಕೆಲವು ಮಾರಾಟಗಾರರು, ಗ್ರಾಹಕರೊಂದಿಗೆ ಮಾತನಾಡಿದ್ದರು. ಭಾರತದಲ್ಲಿ ಹಣದುಬ್ಬರದಲ್ಲಿ ಒಳಪಟ್ಟಿರುವ ಪ್ರಮುಖ ವಸ್ತುಗಳಲ್ಲಿ ತರಕಾರಿ ಕೂಡ ಒಂದು. ಇದು ನಿರ್ಮಲಾ ಸೀತಾರಾಮನ್ ಅವರಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಒಂದಾಗಿದೆ. ವೀಡಿಯೋದಲ್ಲಿ ಅವರು ಮಾರುಕಟ್ಟೆಯಲ್ಲಿ ಕೆಲವು ಸಿಹಿ ಗೆಣಸುಗಳನ್ನು ಆಯ್ದುಕೊಳ್ಳುತ್ತಿರುವುದು ಕಂಡುಬಂತು. ಜತೆಗೆ ಅದರ ದರದ ಕುರಿತು ವಿಚಾರಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
2024ರ ಮೊದಲು ರಾಜ್ಯದ ರಸ್ತೆಗಳನ್ನು ಅಮೆರಿಕಕ್ಕಿಂತ ಉತ್ತಮಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇಂಡಿಯನ್ ರೋಡ್ ಕಾಂಗ್ರೆಸ್ 81 ನೇ ಅಧಿವೇಶನದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಚಿವರು ತಮ್ಮ ಭಾಷಣದಲ್ಲಿ ಉತ್ತರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಅನ್ನು ಘೋಷಿಸಿದ್ದಾರೆ. 8,000 ಕೋಟಿ ಮೌಲ್ಯದ ರಸ್ತೆ ಯೋಜನೆಗಳನ್ನು ಉತ್ತರ ಪ್ರದೇಶಕ್ಕೆ ಉಡುಗೊರೆಯಾಗಿ ನೀಡಿದ್ದು, 2024 ರ ಮೊದಲು ರಾಜ್ಯದ ರಸ್ತೆಗಳನ್ನು ಅಮೆರಿಕಕ್ಕಿಂತ ಉತ್ತಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಮೋದಿ ಸರ್ಕಾರವು ಮುಂಬರುವ ದಿನಗಳಲ್ಲಿ ಯುಪಿಗೆ ಐದು ಲಕ್ಷ ಕೋಟಿ ರೂಪಾಯಿಗಳನ್ನು ಅನುಮೋದಿಸಲಿದೆ. ಪ್ರಸ್ತುತ ಎಂಟು ಸಾವಿರ ಕೋಟಿ ರೂಪಾಯಿಗಳ ಯೋಜನೆಗಳನ್ನು ಇಂದು ನೀಡಲಾಗುತ್ತಿದೆ ಎಂದು ಗಡ್ಕರಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
2022 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರು ಆಯ್ಕೆಯಾಗಿದ್ದಾರೆ. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ. ಸಾಮಾಜಿಕ ಕ್ಷೇತ್ರದಿಂದ ಬೆಂಗಳೂರಿನ ಎನ್ ಮುನಿಸ್ವಾಮಿ, ಕೃಷಿ ಕ್ಷೇತ್ರದಿಂದ ಚಿಕ್ಕಬಳ್ಳಾಪುರದ ಜಿ.ಎನ್.ನಾಗಪ್ಪ, ಬೆಳಗಾವಿಯ ಸಮಾಜ ಸೇವಕ ನಾಗಪ್ಪ ಎಚ್.ಕೋಣಿ, ಕಲಬುರಗಿಯ ರಂಗ ಕಲಾವಿದೆ ಪಿ.ಪದ್ಮಾ, ಮೈಸೂರಿನ ಸಮಾಜ ಸೇವಕ ಎಸ್. ಎಚ್ ಸುಭಾಷ್, ಕಲೆ ಮತ್ತು ಸಮಾಜ ಸೇವೆ ಕ್ಷೇತ್ರದಿಂದ ಬಳ್ಳಾರಿಯ ಉಷಾರಾಣಿ ಅವರನ್ನು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇನ್ನು ರಾಜ್ಯ ಸರ್ಕಾರವು ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಮೂಲಕ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳ ಅಸಮಾಧಾನ ಶಮನಗೊಳಿಸಿದೆ. ಇಂದು ವಿಧಾನಸೌಧದಲ್ಲಿ ಸ್ವಾಮೀಜಿಗಳ ಉಪಸ್ಥಿತಿಯಲ್ಲೇ ಅದ್ಧೂರಿ ಮಹರ್ಷಿ ವಾಲ್ಮೀಕಿ ಜಯಂತಿ ನಡೆಸಲು ಸಜ್ಜಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್ ಎಸ್‌ಎಲ್ ಸಿ ಮಾದರಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವ ಉದ್ದೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್ ಎಸ್‌ಎಲ್ ಸಿ ಮಾದರಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವ ಉದ್ದೇಶವಿಲ್ಲ. ಆದರೆ ಪರ್ಯಾಯ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ. ಪರ್ಯಾಯವಾಗಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಇದು ಎಸ್‌ಎಸ್ ಎಲ್ ಸಿ ಮಾದರಿಯ ಬೋರ್ಡ್ ಪರೀಕ್ಷೆ ಆಗಿರುವುದಿಲ್ಲ. ಅಕ್ಟೋಬರ್ 13 ರಂದು ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಾಮುಂಡಿ ಬೆಟ್ಟದಲ್ಲಿ ಇಂದು ಚಾಮುಂಡೇಶ್ವರಿ ದೇವಿಯ ದಿವ್ಯ ರಥೋತ್ಸವ ಸಂಭ‍್ರಮದಿಂದ ನಡೆದಿದ್ದು ಆಶ್ವಯುಜ ಶುಕ್ಲ ಪೂರ್ಣಮಿ ಉತ್ತರ ಭಾದ್ರ ನಕ್ಷತ್ರ ಬೆಳಗ್ಗೆ 7.50 ರಿಂದ 8.10 ರ ಒಳಗೆ ಸಲ್ಲುವ ಶುಭ ಮಹೂರ್ತದಲ್ಲಿ ರಥಾರೋಹಣ ಮಂಟಪೋತ್ಸವ ನಡೆಯಿತು. ಸಾವಿರಾರು ಭಕ್ತರು ಪಾಲ್ಗೊಂಡು ದೇವಿ ದರ್ಶನ ಪಡೆದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಎಸ್.ಎ.ರಾಮದಾಸ್ ಇತರರು ಭಾಗವಹಿಸಿದ್ದರು. ಇನ್ನು ಧಾರ್ಮಿಕ ದತ್ತಿ ಇಲಾಖೆ ಹಾಗೂ ಚಾಮುಂಡೇಶ್ವರಿ ದೇವಸ್ಥಾನದ ವತಿಯಿಂದ ಈ ಸಾಲಿನಲ್ಲಿ ಅ. 8 ರಿಂದ 14 ರವರೆಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಮಹಾ ರಥೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಭಾಗವಾಗಿ ಶನಿವಾರ ದೇವಿಯ ದೇವಾ ಲಯದಲ್ಲಿ ಬೆಳಗ್ಗೆಯಿಂದಲೇ ಆಶ್ವಯುಜ ಶುಕ್ಲ ಚತುರ್ದಶಿ ಪೂರ್ವಭಾದ್ರ ನಕ್ಷತ್ರ, ಕಳಶಾರೋಹಣದ, ಗಜಾರೋಹಣ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮ ನಡೆದಿದ್ದವು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…