Author: admin

ಬೆಂಗಳೂರು: ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಧರ್ಮ, ಭಾಷೆ ಜಾತಿ, ಸೌಹಾರ್ದ್ಯತೆ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆ ಬಿ.ವೈ. ವಿಜಯೇಂದ್ರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಶಿಕಾರಿಪುರ ವಿಧಾನಸಭಾಕ್ಷೇತ್ರದ ಶಾಸಕರು ಆಗಿರುವ ವಿಜಯೇಂದ್ರ ಹಾಗೂ ಬಿಜೆಪಿ ಎಕ್ಸ್ ಖಾತೆ ಉಸ್ತುವಾರಿ ವಹಿಸಿಕೊಂಡಿರುವವರ ವಿರುದ್ಧ ಗಾಂಧಿನಗರದ ಚುನಾವಣಾ ನೊಡೆಲ್ ಅಧಿಕಾರಿ ಅರ್ಜುನ್ ಆಯೂರ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕಾಂತಾರ ಸಿನಿಮಾ ಸೂಪರ್ ಹಿಟ್ ಆಗಿದ್ದು ಎಲ್ಲರಿಗೂ ಗೊತ್ತಿದೆ. ಭರ್ಜರಿಯಾಗಿ ಸದ್ದು ಮಾಡಿದ್ದ ಸಿನಿಮಾದ ಎರಡನೇ ಭಾಗವೂ ಆದಷ್ಟು ಬೇಗ ತೆರೆಗೆ ಬರುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ನಡುವೆ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಹೊರ ಬಿದ್ದ ಫಸ್ಟ್‌ ಲುಕ್‌ ಪೋಸ್ಟರ್‌ ದೇಶದ ಗಮನ ಸೆಳೆದಿತ್ತು. ಇದನ್ನೂ ಹೊಂಬಾಳೆ ಫಿಲ್ಮ್ಸ್‌ ನಿರ್ಮಿಸಲಿದ್ದು, ಅಂದಾಜು 125 ಕೋಟಿ ರೂ. ಬಜೆಟ್ ನಲ್ಲಿ ತಯಾರಾಗುತ್ತಿದೆ ಎನ್ನಲಾಗಿದೆ. ಈಗ ರಿಷಬ್ ಶೆಟ್ಟಿ ಅವರು ಮಲಯಾಳಂನ ಖ್ಯಾತ ನಟ ಮೋಹನ್​ ಲಾಲ್ ಅವರನ್ನು ಭೇಟಿ ಮಾಡಿದ್ದಾರೆ. ‘ಕಾಂತಾರ 2’ ಸಿನಿಮಾದಲ್ಲಿ ಮೋಹನ್​ ಲಾಲ್ ನಟಿಸಲಿದ್ದಾರಾ ಎಂಬ ಕುತೂಹಲ ಸಿನಿ ರಸಿಕರಲ್ಲಿ ಹೆಚ್ಚಾಗಿದೆ. “ಲೆಜೆಂಡರಿ ಮೋಹನ್ ​ಲಾಲ್ ಅವರನ್ನು ಭೇಟಿ ಮಾಡಿದ್ದು ಖುಷಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದೆ. ಈ ಮೊದಲು ರಿಷಬ್ ಶೆಟ್ಟಿ ಅವರು ಮಲಯಾಳಂ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ರಿಷಬ್…

Read More

ಪಾವಗಡ ಸುದ್ದಿ: ಪಾವಗಡ ಪಟ್ಟಣದಲ್ಲಿರುವ ಪಕ್ಷದ ಕಚೇರಿಗೆ ಇಂದು, ಕರ್ನಾಟಕ ಸರ್ಕಾರದ ಗೃಹಮಂತ್ರಿಗಳಾದ ಡಾ.ಜಿ. ಪರಮೇಶ್ವರ್ ರವರು ಭೇಟಿ ನೀಡಿದರು. ಮಾನ್ಯ ಶಾಸಕರಾದ ಹೆಚ್.ವಿ. ವೆಂಕಟೇಶ್ ರವರು, ಮಾಜಿ ಸಚಿವರಾದ ವೆಂಕಟರಮಣಪ್ಪ ನವರನ್ನು ಭೇಟಿ ಮಾಡಿ, ಚುನಾವಣಾ ತಯಾರಿಯ ಬಗ್ಗೆ ಮಾಹಿತಿ ಪಡೆದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಚಂದ್ರಪ್ಪ ನವರಿಗೆ ಈ ತಾಲ್ಲೂಕಿನಿಂದ ಅತೀ ಹೆಚ್ಚು ಮತಗಳನ್ನು ಕೊಡಿಸಿ ಗೆಲ್ಲಿಸಿಕೊಂಡು ಬರಬೇಕೆಂದು ಮಾನ್ಯ ಶಾಸಕರಲ್ಲಿ ಮನವಿ ಮಾಡಿದರು. ಈ ವೇಳೆ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಗೌಡ ರವರು, ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ನವರು, ವಕ್ತಾರರಾದ ನಿಕೇತ್ ರಾಜ್ ಮೌರ್ಯ ರವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುದೇಶ್ ಬಾಬು ರವರು, ರಾಮಾಂಜಿನಪ್ಪ ನವರು, ಮಾಜಿ ಜಿ.ಪಂ. ಸದಸ್ಯರಾದ ಫಜುಲುಲ್ಲ ಸಾಬ್ ರವರು, ಪುರಸಭಾ ಮಾಜಿ ಅಧ್ಯಕ್ಷರಾದ ಗುರ್ರಪ್ಪ ನವರು, ಕೆಪಿಸಿಸಿ ಸದಸ್ಯರಾದ ಕೆ.ಎಸ್. ಪಾಪಣ್ಣ ನವರು, ಶಂಕರ್ ರೆಡ್ಡಿ ರವರು, ಸದಸ್ಯರಾದ ರವಿ ರವರು ಸೇರಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ವರದಿ:…

Read More

ಬೇತುಲ್: ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯದ ನಂತರ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿದ್ದು, 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ. ಐವರು ಪೊಲೀಸರು ಮತ್ತು ಉಳಿದ ಗೃಹರಕ್ಷಕರು ಸೇರಿದಂತೆ ಒಟ್ಟು 40 ಸಿಬ್ಬಂದಿ ಹೊತ್ತ ಬಸ್ ಛಿಂದ್ವಾರಾದಲ್ಲಿ ಚುನಾವಣಾ ಕರ್ತವ್ಯದ ನಂತರ ರಾಜ್ ಗಢಕ್ಕೆ ತೆರಳುತ್ತಿದ್ದಾಗ ಭೋಪಾಲ್-ಬೇತುಲ್ ಹೆದ್ದಾರಿಯ ಬರೇತಾ ಘಾಟ್ ಬಳಿ ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಎಂಟು ಸಿಬ್ಬಂದಿಗೆ ಬೆತುಲ್ ‌ನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಣ್ಣಪುಟ್ಟ ಗಾಯಗೊಂಡವರಿಗೆ ಶಾಹಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹೆಚ್ಚಿನ ಸಿನಿಮಾ ನಟಿಯರು ಬ್ಲೌಸ್ ಇಲ್ಲದೆ ಫೋಟೋವನ್ನು ತೆಗೆಸುತ್ತಾರೆ. ಸೊಂಟದ ಮೇಲೆ ಕೈ ಅಡ್ಡ ಹಿಡಿದೋ, ಬಾಯಲ್ಲಿ ಬಟ್ಟಿ ಕಚ್ಚಿಕೊಂಡೋ ಹೀಗೆ ಹೊಸ ಹೊಸ ಅವತಾರಗಳಲ್ಲಿ ವಿವಿಧ ನಮೂನೆಯ ಪೋಟೋಗಳನ್ನು ಹರಿಬಿಡುತ್ತಾರೆ. ಇಂದು ಇದು ಹೊಸ ಟ್ರೆಂಡೇ ಆಗಿ ಹೋಗಿದೆ. ಅತಿಯಾಗಿ ಬೋಲ್ಡ್ ಆಗಿ ಕಾಣುವ ಆಸೆಯಿಂದಾಗಿ ಈ ಫ್ಯಾಷನ್ ಶುರುವಾಗಿದೆ ಎನ್ನಬಹುದು. ಅಂತೆಯೇ ಇದೀಗ, ಕನ್ನಡದ ನಟಿ ರೂಪ ರಾಯಪ್ಪ ಕೂಡ ಇದೇ ದಾರಿ ಹಿಡಿದಿದ್ದಾರೆ. ಹೌದು, ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ ರೂಪ ಕೆಜಿಎಫ್’ (KGF) ಚಿತ್ರದಲ್ಲಿ ಪುಟ್ಟ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಇದೀಗ ಹಾಟ್ ಆಗಿ ಕಾಣಿಸಿಕೊಂಡಿರುವ ನಟಿ ಮೈ ಮೇಲೆ ಪ್ಲ್ಯಾಸ್ಟಿಕ್ ಚಿಟ್ಟೆ ಅಂಟಿಸಿಕೊಂಡು ಟಾಪ್‌ ಲೆಸ್ ಆಗಿ ರೂಪಾ ಕಾಣಿಸಿಕೊಂಡಿದ್ದಾರೆ. ರೂಪಾಳ ಫೋಟೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆ ಆಕೆಯ ಲುಕ್‌ ಅನ್ನು ಬಾಲಿವುಡ್‌ ಬೆಡಗಿ ಉರ್ಫಿಗೆ ಹೋಲಿಸಿ ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ. ಒಟ್ಟಿನಲ್ಲಿ ಇದೀಗ ‘ಕೆಜಿಎಫ್’ ಬ್ಯೂಟಿ ರೂಪಾ ರಾಯಪ್ಪ…

Read More

ಸರಗೂರು: ಬಿ. ಮಟಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಮಟಕೆರೆ ಗ್ರಾಮದ ಕ್ರೈಸ್ತ ಧರ್ಮದ ಮುಖಂಡರನ್ನು ಮುಸ್ಲಿಂ ಸಮುದಾಯದ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ತಾಲ್ಲೂಕು ಅಧ್ಯಕ್ಷ ಜಲೀಲ್, ಇಬ್ರಾಹಿಂ, ಅಬುಲಾರ್ಕ್, ರವಿ, ಮುತ್ತಫ್, ಅಬ್ದುಲ್ ವಾಹದ್, ಬಾಷಾ, ರವಿಕುಮಾರ್, ರಾಜನಾಯಕ, ಶಿವಣ್ಣನಾಯಕ, ಮಹದೇವನಾಯಕ ಮತ್ತಿತರರಿದ್ದರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಕರ್ನಾಟಕದ ಜನರಿಗೆ ಕೊನೆಗೂ ಸಂತಸವಾಗಿದೆ. ಕರ್ನಾಟಕದಲ್ಲಿ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಶುಕ್ರವಾರ ಮಳೆಯಾಗಿದ್ದು, ಈ ಮಧ್ಯೆ, ಸಿಡಿಲು ಬಡಿದು ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ರಾಕೇಶ್ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಒಡಿಶಾ: ಒಡಿಶಾ ಮಹಾನದಿಯಲ್ಲಿ ದೋಣಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ದೋಣಿಯಲ್ಲಿ 50ಕ್ಕೂ ಹೆಚ್ಚು ಮಂದಿ ಪಯಣ ಮಾಡುತ್ತಿದ್ದ ವೇಳೆ ದೋಣಿ ಏಕಾಏಕಿ ಮಗುಚಿ ಬಿದ್ದು, ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು ಅವರ ಮೃತದೇಹ ಪತ್ತೆಯಾಗಿದೆ. ಮೂವರು ಮಕ್ಕಳು ಸೇರಿದಂತೆ ನಾಪತ್ತೆಯಾಗಿರುವ ಏಳು ಮಂದಿಯನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರಿದಿದೆ. ಇದುವರೆಗೆ 40ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ದೋಚಿ ಮಗುಚಿ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು, ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಆಗಮಿಸಿ ಕಾರ್ಯಾಚರಣೆಗೆ ಮುಂದಾಗಿದ್ದರು. ನಾವು ಇಲ್ಲಿಯವರೆಗೆ ಸುಮಾರು 47-48 ಜನರನ್ನು ರಕ್ಷಿಸಿದ್ದೇವೆ ಮತ್ತು ಅವರನ್ನು ಅವರ ಗ್ರಾಮಗಳಿಗೆ ಕಳುಹಿಸುತ್ತೇವೆ. 35 ವರ್ಷದ ಮಹಿಳೆಯ ಶವವನ್ನು ವಶಪಡಿಸಿಕೊಳ್ಳಲಾಗಿದೆ. ನಾಲ್ವರು ಮಹಿಳೆಯರು ಮತ್ತು ಮೂವರು ಮಕ್ಕಳು ಕಾಣೆಯಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು…

Read More

ಸಿಎಂ ರ್ಯಾಲಿಯಲ್ಲಿ ತಪ್ಪಿ ಹೋಗಿದ್ದ ಮಗುವನ್ನು ಪೊಲೀಸ್​ ಇನ್ಸ್ ​ಸ್ಪೆಕ್ಟರ್​ ಪೋಷಕರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಹೊಸಹಳ್ಳಿ ಪೋಲೀಸ್ ಸ್ಟೇಷನ್ ನ ರಾವ್ ಗಣೇಶ್ ಮಗುವನ್ನ ಪೋಷಕರ ಮಡಿಲಿಗೆ ಒಪ್ಪಿಸಿದ್ದಾರೆ. ನಿನ್ನೆ ಚಿಕ್ಕಬಳ್ಳಾಪುರದಲ್ಲಿ ಸಿಎಂ ಸಿದ್ದರಾಮಯ್ಯನವರ ರ್ಯಾಲಿ ನಡೆಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದರು. ಈ ವೇಳೆ ಭಾಗವಹಿಸಿದ್ದ ಪೋಷಕರ ಕೈಯಿಂದ 3 ವರ್ಷದ ಹೆಣ್ಣು ಮಗು ಅಲ್ಫಾ ತಪ್ಪಿಹೋಗಿತ್ತು. ತಪ್ಪಿ ಹೋದ ಮಗು ಹೊಸಹಳ್ಳಿ ಪೋಲೀಸ್ ಸ್ಟೇಷನ್ ನ ಇನ್ಸ್​ಸ್ಪೆಕ್ಟರ್ ರಾವ್ ಗಣೇಶ್ ​ಕಣ್ಣಿಗೆ ಬಿದ್ದಿತ್ತು. ಜನರ ನಡುವೆ ಕಣ್ಣೀರಿಡುತ್ತಿದ್ದ ಮಗುವನ್ನು ಗಣೇಶ್​ ಕಂಡಿದ್ದಾರೆ. ಮಗುವಿಗೆ ಸರಿಯಾಗಿ ಮಾತು ಕೂಡ ಬರುತ್ತಿರಲಿಲ್ಲ. ತಕ್ಷಣವೇ ಮಗುವನ್ನು ಸಂತೈಸಿಕೊಂಡು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಬಳಿಕ ಮಗುವಿನ ಬಳಿ ಮಾಹಿತಿ ಕಲೆ ಹಾಕಿ, ರ್ಯಾಲಿ ಮುಗಿದ ನಂತರ ಪೋಷಕರಿಗೆ ಒಪ್ಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಪ್ರಧಾನಿ ನರೇಂದ್ರ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನೋರ್ವನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಆರೋಪವೊಂದು ಕೇಳಿ ಬಂದಿದೆ. ರೋಹಿತ್‌ ಎಂಬಾತನ ಮೇಲೆ ಇವರು ಹಲ್ಲೆ ಮಾಡಿದ್ದಾರೆ. ಈ ಕುರಿತು ರೋಹಿತ್‌ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾನೆ. ಅಲ್ಲದೇ ಪಾಕಿಸ್ತಾನ ಹಾಗೇ ಅಲ್ಲಾಹ ಪರ ಘೋಷಣೆ ಕೂಗಲು ಒತ್ತಾಯ ಮಾಡಿದ್ದಾರೆ ಎಂದು ಹೇಳಿದ್ದು, “ನರೇಂದ್ರ ಮೋದಿ ಹಾಡು ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆಂದು” ಬೆದರಿಕೆ ಹಾಕಿರುವ ಕುರಿತು ರೋಹಿತ್‌ ಆರೋಪ ಮಾಡಿದ್ದಾರೆ. ದುಷ್ಕರ್ಮಿಗಳು ಬೆದರಿಕೆ ಜೊತೆಗೆ ಆತನಿಗೆ ಹಲ್ಲೆ ಮಾಡಿ, ಬಟ್ಟೆ ಹರಿದು ಹಾಕಿದ್ದಾರೆ. ಹಲ್ಲೆಗೊಳಗಾದ ಯುವಕ ನೇರವಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ. ನಂತರ ಪೊಲೀಸರೇ ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More