Subscribe to Updates
Get the latest creative news from FooBar about art, design and business.
- ಶ್ರವಣೂರು: ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮದ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಘಟನೆಗಳು
- ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
- ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
- ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
- ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
- ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
- ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
- ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
Author: admin
ಬೆಳಗಾವಿ: ಏಳನೇ ತರಗತಿಯ ವಿದ್ಯಾರ್ಥಿನಿಯನ್ನು ಕಬ್ಬಿನ ತೋಟಕ್ಕೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ. ನವೆಂಬರ್.23ರಂದು ಬಾಲಕಿ ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಪ್ರಮುಖ ಆರೋಪಿ ಮಣಿಕಾಂತ್ ದಿನ್ನಿಮಣಿ ಮತ್ತು ಈರಣ್ಣ ಸಂಕಮ್ಮನವರ್ ಎಂಬುವವರು ಆಕೆಯನ್ನು ಅಡ್ಡಗಟ್ಟಿದ್ದು, ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಕೃತ್ಯ ಬೆಳಕಿಗೆ ಬರುವುದು ತಡವಾಗಿದೆ. ಏತನ್ಮಧ್ಯೆ ವಿಚಾರ ತಿಳಿದ ಪೋಷಕರು ಡಿಸೆಂಬರ್ 1ರಂದು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ: ರಾಜ್ಯದ ಗೃಹ ಸಚಿವರ ಆದೇಶದಂತೆ ತಾಲೂಕಿನ 6 ಹೋಬಳಿಯ ಕೇಂದ್ರಗಳನ್ನ ಸಮಗ್ರ ಅಭಿವೃದ್ಧಿಗಾಗಿ ತಲಾ ಎರಡುವರೆ ಕೋಟಿ ಅನುದಾನ ನೀಡಿದ್ದು, ರಸ್ತೆ ಅಗಲಿಕರಣ ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ತುಮಕೂರು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಭು ಜಿ. ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಕೋಳಾಲ ಹೋಬಳಿ ಕೇಂದ್ರದ ಗ್ರಾ.ಪಂ.ಯಲ್ಲಿ ಸದಸ್ಯರ ಸಭೆ ಮಾಡಿ ನಂತರ ಕಾಮಗಾರಿ ನಡೆಯುವ ಸ್ಥಳವನ್ನ ಪರಿಶೀಲಿಸಿ ಮಾತನಾಡಿದರು. ಈಗಾಗಲೇ ಶಾಸಕರ ನಿಧಿಯಾಗಿ ಮುಖ್ಯಮಂತ್ರಿಗಳು 50 ಕೋಟಿ ರೂ ಅನುದಾನವನ್ನ ಬಿಡುಗಡೆ ಮಾಡಿದ್ದು, ಗೃಹ ಸಚಿವರ ಮಾರ್ಗದರ್ಶನ ಹಾಗೂ ಅವರ ಆದೇಶದಂತೆ ತಾಲೂಕಿನ ಹೊಳವನಹಳ್ಳಿ, ಕೋಳಾಲ, ಕಸಬಾ, ಪುರವಾರ, ತೋವಿನಕೆರೆ, ಚಿಕ್ಕತೊಟ್ಲುಕೆರೆ ಹೋಬಳಿ ಕೇಂದ್ರಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಪುಟ್ಪಾತ್, ರಸ್ತೆ ಮಧ್ಯ ವಿನ್ಯಾಸವಾದ ವಿದ್ಯುತ್ ದೀಪ ಅಳವಡಿಸಿ ಪಟ್ಟಣದ ಮಾದರಿಯಂತೆ ಮಾಡಲು ಈಗಾಗಲೇ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. 50 ಕೋಟಿ ಅನುದಾನದಲ್ಲಿ ರಸ್ತೆ,…
ಬೀದರ್ : ಬೇಡ ಜಂಗಮ ಜಾತಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ರವೀಂದ್ರ ಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗಾಗಿ ಅವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಅವರನ್ನು ಬೀದರ್ ಜಿಲ್ಲೆಯಿಂದ ಗಡೀಪಾರು ಮಾಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಮಾರುತಿ ಬೌದ್ಧೆ ಆಗ್ರಹಿಸಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾರುತಿ ಬೌದ್ಧೆ, 2016ರಲ್ಲಿ ನಗರಸಭೆಯ ಮಾಜಿ ಸದಸ್ಯ ರವೀಂದ್ರ ಸ್ವಾಮಿ ಅವರು ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದರು. ಆದರೆ ಅದನ್ನು 2019ರಲ್ಲಿ ಅಂದಿನ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿರಸ್ಕರಿಸಿದ್ದರು. ಆಗ ಜಿಲ್ಲಾಧಿಕಾರಿಗಳ ಆದೇಶದ ವಿರುದ್ಧ ರವೀಂದ್ರ ಸ್ವಾಮಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಆ ಸಂದರ್ಭದಲ್ಲಿ ಕೋರ್ಟ್ ಅರ್ಜಿ ಪರಿಶೀಲನೆಗೆ ಆದೇಶಿಸಿತು. ನಂತರ ಅಧಿಕಾರಿಗಳು ಆದೇಶವನ್ನು ಅಪಾರ್ಥ ಮಾಡಿಕೊಂಡು ಎಸ್ಸಿ ಜಾತಿ ಪ್ರಮಾಣ ವಿತರಿಸಿದ್ದರು ಎಂದು ಆರೋಪಿಸಿದರು. ನಂತರ ನ್ಯಾಯಾಲಯ ಎಸ್ ಸಿ ಸರ್ಟಿಫಿಕೇಟ್ ರದ್ದು ಮಾಡಿತ್ತು.…
ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ರಾಮಶೆಟ್ಟಿಹಳ್ಳಿ ಗ್ರಾಮದ ಕುರಿಗಾಹಿ ರಾಜಣ್ಣ ಎಂಬವರ ಮೇಲೆ, ಹೊಲದಲ್ಲಿ ಕುರಿ ಮೇಯಿಸುವಾಗ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ. ಕೈ ಮತ್ತು ಕೆಲವು ಅಂಗಾಂಗಗಳ ಮೇಲೆ ಕಚ್ಚಿ ಚಿರತೆ ಗಾಯಗೊಳಿಸಿದ್ದು, ಈ ವೇಳೆ ಕುರಿಗಾಹಿ ಕೂಗಿಕೊಂಡಾಗ ಚಿರತೆ ಸ್ಥಳದಿಂದ ಪರಾರಿಯಾದ ಕಾರಣ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾರ್ವಜನಿಕರ ಆಕ್ರೋಶ: ಪದೇಪದೇ ನಮ್ಮ ಗ್ರಾಮ ಮತ್ತು ಜಮೀನುಗಳಲ್ಲಿ ಓಡಾಡಲು ತುಂಬಾ ಕಷ್ಟವಾಗುತ್ತಿದೆ, ಹಗಲು ಮತ್ತು ರಾತ್ರಿ ವೇಳೆ ಚಿರತೆಗಳ ದಾಳಿ ಮುಂದುವರೆದಿದ್ದು, ಅರಣ್ಯ ಇಲಾಖೆಗೆ ತಿಳಿಸಿದರು, ಯಾವುದೇ ಕ್ರಮ ಜರುಗಿಸುತ್ತಿಲ್ಲ ಎಂದು ಗ್ರಾಮಸ್ಥರ ಆಕ್ರೋಶವಾಗಿದೆ. ವರದಿ: ಆನಂದ, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಉಡುಪಿ: ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಘಟಕವಾಗಿರುವ ಟಿ.ಎ.ಪೈ. ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಅವರು ತಮ್ಮ ಚಾತುರ್ಯ, ಸಮಯ ಪ್ರಜ್ಞೆ ಮತ್ತು ಧೈರ್ಯಶಾಲಿ ಮಹತ್ಕಾರ್ಯಕ್ಕಾಗಿ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರದಾನ ಮಾಡಿತು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಐಸಿಡಿಎಸ್ ಗೋಲ್ಡನ್ ಜ್ಯೂಬಿಲಿ ಸಮಾರಂಭದಲ್ಲಿ, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ, 2025ರ ನವೆಂಬರ್ 28ರಂದು, ಶುಕ್ರವಾರ, ಈ ಗೌರವವನ್ನು ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ಸರ್ಕಾರವು ಮಕ್ಕಳ ಧೈರ್ಯ, ಸಮಯಪ್ರಜ್ಞೆ ಮತ್ತು ತ್ವರಿತ ನಿರ್ಧಾರಶಕ್ತಿಗೆ ನೀಡುವ ಅತ್ಯುನ್ನತ ಗೌರವಗಳಲ್ಲಿ ಹೊಯ್ಸಳ ಶೌರ್ಯ ಪ್ರಶಸ್ತಿಯು ಪ್ರಮುಖವಾಗಿದೆ. ಈ ಪ್ರಶಸ್ತಿ ದೊರೆತ ದೀಪೇಶ್ ಅವರು ಅಕಾಡೆಮಿ ಆಫ್…
ಸರಗೂರು: ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಅವಕಾಶ ಸಿಕ್ಕಾಗ ಪ್ರಬುದ್ಧತೆಯ ಪ್ರದರ್ಶನಕ್ಕೆ ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಬೇಕೆಂದು ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್ ಹೇಳಿದರು. ತಾಲೂಕಿನ ಕೆ.ಬೆಳತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪದನಿಮಿತ್ತ ಕ್ಷೇತ್ರ ಸಮನ್ವಯಾಧಿಕಾರಿಗಳ ಸಹಾಯದೊಂದಿಗೆ ಕೆ.ಬೆಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 25–26 ನೇ ಸಾಲಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಪ್ರತಿಭೆ ಅಡಗಿರುತ್ತದೆ. ಅವನ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಭೆ ಗುರುತಿಸಿ, ವೇದಿಕೆಗಳಲ್ಲಿ ಪ್ರದರ್ಶನಕ್ಕೆ ಉತ್ತೇಜನ ನೀಡಿ, ಹೊರ ಜಗತ್ತಿಗೆ ತಿಳಿಸುವ ಪ್ರಯತ್ನ ಮಾಡಬೇಕು. ಶಾಲಾ ಮಟ್ಟದಲ್ಲಿ ಇಂತಹ ಪ್ರತಿಭೆಗಳನ್ನು ಗುರುತಿಸಿದರೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲೂ ಭಾಗವಹಿಸುವ ಅವಕಾಶವಿದೆ. ಇದರಿಂದ ಅವರು ಜೀವನದಲ್ಲಿ ಮತ್ತಷ್ಟು ಸಂಶೋಧನೆ–ಪ್ರಯೋಗಗಳನ್ನು ಮಾಡುತ್ತಾರೆಂದು ಹೇಳಿದರು. ನಂತರ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಾಜುರವರು ವಿದ್ಯಾರ್ಥಿಗಳು ಶಿಕ್ಷಣದಷ್ಟೇ ಆರೋಗ್ಯದ ಬಗ್ಗೆ ಗಮನ ಕೊಟ್ಟು ಯೋಗಾಭ್ಯಾಸ…
ಕೊರಟಗೆರೆ: ತಾಲ್ಲೂಕಿನಾದ್ಯಂತ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಲ್ಲಿ ಹನುಮ ಜಯಂತಿಯನ್ನು ಹಲವು ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಆಚರಿಸಿದ್ದು, ಪಟ್ಟಣದ ಉದ್ಭವ ಮೂರ್ತಿ ಇತಿಹಾಸವುಳ್ಳ ಶ್ರೀ ಗುಂಡಾಂಜನೇಯ ಸ್ವಾಮಿ ದೇಗುಲದಲ್ಲಿಯೂ ಹನುಮ ಜಯಂತಿಯನ್ನು ವಿಶೇಷವಾಗಿ ಆಚರಿಸಿ ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು. ಹನುಮ ಜಯಂತಿ ಅಂಗವಾಗಿ ಶ್ರೀ ಗುಂಡಾಂಜನೇಯ ಸ್ವಾಮಿ ದೇವಾಲಯವನ್ನು ಹಸಿರು ತೋರಣ, ಹೂಗಳಿಂದ ಅಲಂಕೃತಗೊಳಿಸಿದ್ದು, ಸ್ವಾಮಿಗೆ ಮುಂಜಾನೆಯಿಂದಲೇ ಗಂಗಾಪೂಜೆ, ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಮಹಾ ಮಂಗಳಾರತಿ, ಸ್ವಾಮಿ ಉತ್ಸವ ಈಗೇ ಅನೇಕ ಧಾರ್ಮಿಕ ಪೂಜೆಗಳು ಜರುಗಿದ್ದು, ದರ್ಶನ ಪಡೆದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಅರ್ಚಕ ಕಸ್ತೂರಿ ಹನುಮ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪ್ರತಿ ವರ್ಷ ಭಕ್ತರ ಸಹಕಾರದಿಂದ ಹನುಮ ಜಯಂತಿಯನ್ನು ಹಲವು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಜಯಂತಿ ಅಂಗವಾಗಿ ಮುಂಜಾನೆಯಿಂದಲೇ ವಿಶೇಷ ಪೂಜೆಗಳು ನಡೆದಿವೆ, ಭಕ್ತರು ಸಹ ಕುಟುಂಬ ಸಮೇತ ಹೆಚ್ಚಿನ ಸಂಖೈಯಲ್ಲಿ ಆಗಮಿಸಿ ಸ್ವಾಮಿ ದರ್ಶನ ಪಡೆದು…
ತುಮಕೂರು: ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಆಚರಣೆ ಅದ್ದೂರಿಯಾಗಿ ನೆರವೇರಿತು. ಇದೇ ವೇಳೆ ಡಾ.ಜಿ.ಪರಮೇಶ್ವರ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ದಲಿತ ಸಮುದಾಯದ ಭಕ್ತರು 101 ತೆಂಗಿನಕಾಯಿ ಹೊಡೆದು ಪೂಜೆ, ಅನ್ನ ಸಂತರ್ಪಣೆ, ಹಾಗೂ ಉರುಳು ಸೇವೆ ನೆರವೇರಿಸಿದರು. ಹನುಮ ಜಯಂತಿಯ ಪ್ರಯುಕ್ತ ಬೆಳಿಗ್ಗೆ ಸುಮಾರು 7 ಗಂಟೆಯಿಂದಲೇ ಭಕ್ತರು ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಪರಮೇಶ್ವರ್ ಅವರ ಅಭಿಮಾನಿಗಳು, ದಲಿತ ಮುಖಂಡರು ತಮ್ಮ ಮೆಚ್ಚಿನ ನಾಯಕನಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿ ಎಂದು ಹಾರೈಸಿದರು. ಪೂಜೆ ನಂತರ ಸುಮಾರು 500ಕ್ಕೂ ಹೆಚ್ಚು ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ದೇವಾಲಯದ ಮುಂಭಾಗದಲ್ಲಿ ವಿಶೇಷ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದ್ದು, ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಡಾ.ಜಿ.ಪರಮೇಶ್ವರ್ ಅವರು ಸಿಎಂ ಆಗಲೆಂದು ಇದೇ ವೇಳೆ ದಲಿತ ಮುಖಂಡರು ಮತ್ತು ಯುವಕರು ಉರುಳು ಸೇವೆ ನಡೆಸಿದರು. ದೇವಾಲಯದ ಬಾಗಿಲಿನಿಂದ ಕೋಟೆ ವೃತ್ತದವರೆಗೆ…
ತುಮಕೂರು: ತಾಲೂಕಿನ ದೇವರಹಟ್ಟಿ ಹಾಗೂ ಕೆಬ್ಬೆಪಾಳ್ಯ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಳಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ನಡೆಸಿದರು. ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಹೆಸರಿನಲ್ಲಿ ರಾಜ್ಯದ 40,000 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹಾಗೂ ತುಮಕೂರು ತಾಲೂಕಿನ ದೇವರಹಟ್ಟಿ ಮತ್ತು ಕೆಬ್ಬೇಪಾಳ್ಯ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಳಿಸಬೇಕು ಎಂದು ಗ್ರಾಮದ ಪೋಷಕರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿಯಾದ ಲಕ್ಕಪ್ಪ ಮಾತನಾಡಿ, ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಡಿಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸಿದೆ, ಒಟ್ಟು ರಾಜ್ಯದಲ್ಲಿ 40,000 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ಯೋಜನೆ ಇದಾಗಿದೆ. ಈ ಯೋಜನೆಯಂತೆ ತುಮಕೂರು ತಾಲೂಕಿನ ಸಮುದ್ರನಹಳ್ಳಿಯನ್ನ ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಿದ್ದು, ಈ ಶಾಲೆಗೆ ಇದರ ಸುತ್ತಮುತ್ತ ಬರುವ ಹಳ್ಳಿಗಳಾದ ಕೆಬ್ಬೆಪಾಳ್ಯ, ದೇವರಹಟ್ಟಿ,…
ತುಮಕೂರು: ಡಿ.29ರಂದು ತುಮಕೂರು ನಗರದ ಗಾಜಿನ ಮನೆಯಲ್ಲಿ ನಡೆಯಲಿರುವ 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಿ.11ರ ಬುಧವಾರದಂದು 10 ಗಂಟೆಯಿಂದ ಕನ್ನಡ ಭವನ ಅಮಾನಿಕರೆ ರಸ್ತೆ ಇಲ್ಲಿ ಕನ್ನಡ ನೆಲ ಜಲಭಾಷೆ ಕುರಿತಾದ ಈ ಕೆಳಕಂಡ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕನ್ನಡ ನಾಡು ನುಡಿಯ ಕುರಿತಾದ ಭಾವಗೀತೆಗಳು ಹೆಸರು ನೋಂದಾಯಿಸಲು ಸಂಪರ್ಕಿಸಿ: ಪಾರ್ವತಮ್ಮ ರಾಜಕುಮಾರ್–9845536081, ಶೈಲಜ– 9740347080. ಕನ್ನಡ ಮತ್ತು ಕರ್ನಾಟಕದ ಕವಿ ಮತ್ತು ಕವಯತ್ರಿಯರ ವೇಷಭೂಷಣ ಸ್ಪರ್ಧೆ ಹೆಸರು ನೋಂದಾಯಿಸಲು ಸಂಪರ್ಕಿಸಿ: ಗಂಗಲಕ್ಷ್ಮೀ.ಬಿ.: 8431728439, ಮುಮ್ತಾಜ್-9986569356 ಕನ್ನಡ ನಾಡು ನುಡಿಗೆ ಸಂಬಂಧಿಸಿದ ಜನಪದ ನೃತ್ಯ (ಚಲನಚಿತ್ರ ಗೀತೆಗಳನ್ನು ಹೊರತು ಪಡಿಸಿ) ಹೆಸರು ನೋಂದಾಯಿಸಲು ಸಂಪರ್ಕಿಸಿ: ಚಂದ್ರಶೇಖರ್ –6361234348, ಅಮ್ಮಾಜಕ್ಕೆ ಎಲ್, ಎಮ್.9741080241 ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯುತ್ತದೆ. ರಿಯ ವಿಭಾಗ: 12–20 ವರ್ಷ, ಹಿರಿಯ ವಿಭಾಗ: 21–40 ವರ್ಷ, 40 ವರ್ಷ ಮೇಲ್ಪಟ್ಟವರು. ಒಬ್ಬರು ಒಂದೇ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸ್ಪರ್ಧೆಯಲ್ಲಿ ಮಕ್ಕಳು, ಮಹಿಳೆಯರು ಪುರುಷರು ಭಾಗವಹಿಸಬಹುದು. ಹೆಚ್ಚಿನ…