Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಆರೋಪದ ಮೇಲೆ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ನಾಲ್ವರು ವಿದ್ಯಾರ್ಥಿಗಳನ್ನ ಅಮಾನತು ಮಾಡಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಧರಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಭಾರಿ ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೆ ಕಾಲೇಜು ಆಡಳಿತ ಮಂಡಳಿ ಡ್ಯಾನ್ಸ್ ಮಾಡಿದ ನಾಲ್ವರನ್ನ ಅಮಾನತು ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ಪ್ರದೇಶದ ಚರಂಡಿಯಲ್ಲಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಮೃತದೇಹ ಸಿಕ್ಕಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದವಾಗಿ ಸೂಟ್ಕೇಸ್ವೊಂದು ಬಿದ್ದಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ಆ ಸೂಟ್ಕೇಸ್ನಿಂದ ದುರ್ವಾಸನೆ ಬರುತ್ತಿರುವುದಾಗಿ ಕರೆ ಮಾಡಿದವರು ತಿಳಿಸಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ ಸ್ಥಳೀಯ ಡೈವರ್‌ಗಳ ಸಹಾಯದಿಂದ ಚರಂಡಿಯಿಂದ ಸೂಟ್ಕೇಸ್ ಅನ್ನು ಹೊರತೆಗೆದು ಪರಿಶೀಲಿಸಿದಾಗ ತೀರಾ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಆ ಮಹಿಳೆಯ ವಯಸ್ಸು28ರಿಂದ 30 ವರ್ಷ ಎಂದು ಅಂದಾಜಿಸಲಾಗಿದ್ದು, ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭಾರತ ತಂಡದ ನಾಯಕ, ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 500 ಸಿಕ್ಸರ್ ಬಾರಿಸಿದ, ಭಾರತದ ಮೊದಲ ಹಾಗೂ ವಿಶ್ವದ ಎರಡನೇ ಆಟಗಾರ ಎಂಬ ದಾಖಲೆ ಬರೆದರು. ವೆಸ್ಟ್ಇಂಡೀಸ್ನ ದೈತ್ಯ ಬ್ಯಾಟ್ಸ್ಮ್ಯಾನ್ ಕ್ರಿಸ್ ಗೇಲ್ 553 ಸಿಕ್ಸರ್ ಸಿಡಿಸಿದ ಮೊದಲಿಗರಾಗಿದ್ದು, ಈ ದಾಖಲೆ ಮುರಿಯಲು ರೋಹಿತ್ ಇನ್ನೂ 54 ಸಿಕ್ಸರ್ ಬಾರಿಸಬೇಕಿದೆ. ಬಾಂಗ್ಲಾ ವಿರುದ್ಧ ನಡೆದ 2ನೇ ಏಕದಿನ ಪಂದ್ಯದಲ್ಲಿ ಗಾಯದ ಮಧ್ಯೆಯೂ ಕೊನೆಯಲ್ಲಿ ಮೈದಾನಕ್ಕಿಳಿದ ಹಿಟ್ಮ್ಯಾನ್, 3 ಬೌಂಡರಿ 5 ಸಿಕ್ಸರ್ ಸಮೇತ 51 ರನ್ ಗಳಿಸಿದರೂ ಭಾರತ ಪಂದ್ಯ ಸೋಲು ಕಂಡಿತು. ರೋಹಿತ್ ಈ ಪಂದ್ಯದಲ್ಲಿ 3ನೇ ಸಿಕ್ಸರ್ ಬಾರಿಸಿದಾಗ 500 ಸಿಕ್ಸರ್ ದಾಖಲೆ ಬರೆದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಜೊತೆ ಜೊತೆಯಲಿ ವಿವಾದದಿಂದ 2 ವರ್ಷ ಕಿರುತೆರೆಯಿಂದ ನಿಷೇಧಕ್ಕೆ ಒಳಗಾಗಿದ್ದ ನಟ ಅನಿರುದ್ಧ್ ಇದೀಗ ಕಿರುತೆರೆಗೆ ಮರಳುವ ಮೂಲಕ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ನಟ ಅನಿರುದ್ಧ್ರಿಗೆ ಯಾವುದೇ ವಾಹಿನಿಗಳು ಕೂಡ ಕೆಲಸ ಕೊಡದಂತೆ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ, ಚಿತ್ರಣ ಬೇರೆ ರೀತಿಯಲ್ಲೇ ಬದಲಾಗಿದೆ. ನಿರ್ಮಾಪಕರ ಸಂಘ ಮಾಡಿಕೊಂಡಿದ್ದ ಮನವಿಯನ್ನು ಉದಯ ವಾಹಿನಿ ತಳ್ಳಿಹಾಕಿದೆ. ಪರಿಣಾಮ ಸೂರ್ಯವಂಶ ಧಾರಾವಾಹಿಗೆ ಅನಿರುದ್ಧ ಅವರನ್ನು ಪ್ರಮುಖ ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ಅನಿರುದ್ಧ ಅವರೇ ಸ್ಪಷ್ಟ ಪಡಿಸಿದ್ದಾರೆ. ತಾವು ಉದಯ ವಾಹಿನಿಯಲ್ಲಿ ಪ್ರಸಾರ ಕಾಣಲಿರುವ ಸೂರ್ಯವಂಶ ಧಾರಾವಾಹಿಯಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಫೇಸ್ ಬುಕ್ನಲ್ಲಿ ಬರೆದುಕೊಂಡಿರುವ ಅವರು, ಅತ್ಯಂತ ಸಂತೋಷದಿಂದ ತಮ್ಮೆಲ್ಲರ ಜೊತೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳುತ್ತಾ ಇದ್ದೇನೆ. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಧಾರಾವಾಹಿಯಲ್ಲಿ ನಟಿಸುತ್ತಿದ್ದೇನೆ ಎಂದು ಘೋಷಿಸಿದ್ದಾರೆ. S.ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಾನು ಪ್ರಮುಖ ಪಾತ್ರದಲ್ಲಿ…
ಹುಬ್ಬಳ್ಳಿ : ಖ್ಯಾತ ವಿ ಆರ್ ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ್ ಜೀವನಧಾರಿತ ಸಿನಿಮಾ ವಿಜಯಾನಂದ ಇಂದು (ಡಿ. 9) ರಂದು ಬಿಡುಗಡೆಯಾಗಿದ್ದು, ಭಾರತದ 1000 ಹಾಗೂ ವಿದೇಶದ 200 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಪ್ರದರ್ಶನಗೊಳ್ಳಲಿದೆ. ಕನ್ನಡಿಗರೊಬ್ಬರ ಮೊಟ್ಟಮೊದಲ ಪಾನ್ ಇಂಡಿಯಾ ಬಯೋಪಿಕ್ ಎಂಬ ಹೆಗ್ಗಳಿಕೆಗೆ ವಿಜಯಾನಂದ ಚಿತ್ರ ಪಾತ್ರವಾಗಿದ್ದು, ಕೇವಲ ಒಂದು ಟ್ರಕ್ ನಿಂದ ಆರಂಭವಾದ ವಿ ಆರ್ ಎಲ್ ಲಾಜಿಸ್ಟಿಕ್ ಇಂದು ದೇಶದ ಅತಿ ದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾಗಿ ಬೆಳೆದ ಯಶೋಗಾಥೆಯನ್ನು ಪ್ರೇಕ್ಷಕರ ಮುಂದೆ ತೆರೆದಿಡಲಿದೆ. ಈ ಚಿತ್ರದಲ್ಲಿ ಹಿರಿಯ ನಟ ಅನಂತನಾಗ್, ರವಿಚಂದ್ರನ್, ವಿನಯ ಪ್ರಸಾದ್, ಪ್ರಕಾಶ್ ಬೆಳವಾಡಿ, ನಿಹಾಲ್, ಸಿರಿ ಪ್ರಹ್ಲಾದ್, ಶೈನ್ ಶೆಟ್ಟಿ, ಭರತ್ ಬೋಪಣ್ಣ, ಅರ್ಚನಾ ಕೊಟ್ಟಿಗೆ, ರಮೇಶ್ ಭಟ್, ದಯಾಳ್ ಪದ್ಮನಾಭ ಸೇರಿದಂತೆ ಹಲವು ದಿಗ್ಗಜರು ನಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೆಂಗಳೂರು: ವಿಧಾನಪರಿಷತ್ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ ಬಳಿಕ, ಆ ಸ್ಥಾನ ತೆರವಾಗಿತ್ತು. ಹೀಗಾಗಿ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಈ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ನಿಯಮ7ರ ಉಪ ನಿಯಮ(1)ರಂತೆ ದಿನಾಂಕ ಡಿಸೆಂಬರ್ 12ರಂದು ಸಭಾಪತಿಯವರ ಚುನಾವಣೆಯನ್ನು ನಡೆಸಲು ದಿನಾಂಕ ನಿಗದಿ ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ದಿನಾಂಕ ಡಿಸೆಂಬರ್ ರಂದು ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವಂತ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾವಗಡ: ಪಟ್ಟಣದಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪಾವಗಡ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಆಚರಣೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಪ್ರಾಂಶುಪಾಲರಾದ ಬಸಲಿಂಗಪ್ಪ, ಉಪನ್ಯಾಸಕರಾದ ನರಸಿಂಹಮೂರ್ತಿ,ಸುಲಕ್ಷ ಎಬಿವಿಪಿ ಕಾರ್ಯಕರ್ತರಾದ ಪ್ರದೀಪ್ ಕುಮಾರ್, ಕಲ್ಯಾಣ್ ಮನೋಜ್, ಹಳೆಯ ಎಬಿವಿಪಿ ಕಾರ್ಯಕರ್ತರಾದ ನಂದೀಶ್ ನಾಯ್ಕ ಪಿ ಹಾಗೂ ರಾಮಕೃಷ್ಣ ನಾಯ್ಕ ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸರಗೂರು: ಮಾದಿಗ ಸಮುದಾಯ ಜನರಿಗೆ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಡಿ.11 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಹಮ್ಮಿಕೊಂಡಿರುವ ಬೃಹತ್ ಸಮಾವೇಶದಲ್ಲಿ ತಾಲೂಕಿನ ಪರಿಶಿಷ್ಟರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸುವಂತೆ ಬಾಬು ಜಗಜೀವನರಾಂ ವಿಚಾರ ವೇದಿಕೆ ಅಧ್ಯಕ್ಷ ಕಲ್ಲಂಬಾಳುನಾಗಣ್ಣ ಮನವಿ ಮಾಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎ ಜೆ ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಸುಮಾರು ವರ್ಷಗಳಿಂದ ಮಾದಿಗ ಜನಾಂಗದವರಾದ ನಾವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ರಾಜಕೀಯವಾಗಿ ವಂಚಿತರಾಗಿದ್ದು, ನಮ್ಮ ಸೌಲಭ್ಯಕ್ಕಾಗಿ ವಿವಿಧ ರೀತಿಯಲ್ಲಿ ಹಲವಾರು ಪ್ರತಿಭಟನೆಗಳನ್ನು ಸರ್ಕಾರದ ವಿರುದ್ಧ ಕೈಗೊಂಡರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದರು. ಬಾಬು ಜಗಜೀವನರಾಂ ವಿಚಾರ ವೇದಿಕೆ ಉಪಾಧ್ಯಕ್ಷ ಮತ್ತು ಗ್ರಾಪಂ ಸದಸ್ಯ ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕುರ್ಣೆಗಾಲ…
ಹೆಚ್.ಡಿ.ಕೋಟೆ: ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಬಾರ್ ಗಳು ತೆರೆಯುವುದಕ್ಕೂ ಮೊದಲೇ ಅಕ್ರಮ ಮದ್ಯ ಮಾರಾಟಗಾರರು ಫೀಲ್ಡಿಗಿಳಿಯುತ್ತಿದ್ದು, ಬೆಳಗ್ಗೆ 6 ಗಂಟೆಯಿಂದಲೇ ಮದ್ಯ ಮಾರಾಟ ಆರಂಭಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆ ಕುಡುಕರು ಮದ್ಯ ಖರೀದಿಗಾಗಿ ಮುಗಿ ಬೀಳುತ್ತಿರುವ ದೃಶ್ಯ ಕಂಡು ಬಂದಿದೆ. ತಾಲೋಕು ಕೇಂದ್ರ ಸ್ಥಾನದ ಬಸ್ ನಿಲ್ದಾಣದ ಎದುರಿನಲ್ಲೇ ಇಂತಹ ದೃಶ್ಯ ಕಂಡು ಬಂದರೆ, ಹಳ್ಳಿಗಳಲ್ಲಿ ಏನು ಸ್ಥಿತಿ ಇರಬಹುದು ಅನ್ನೋ ಮಾತುಗಳು ಘಟನೆಯ ಬೆನ್ನಲ್ಲೇ ಕೇಳಿ ಬಂದಿದೆ. ಅಕ್ರಮ ಮದ್ಯ ಮಾರಾಟವನ್ನು ಕಂಡೂ ಕಾಣದಂತೆ ಅಬಕಾರಿ ಇಲಾಖೆ ಕುಳಿತಿದೆ ಅನ್ನೋ ಮಾತುಗಳು ಕೇಳಿ ಬಂದಿವೆ. ಖಾಸಗಿ ವಾಹನಗಳ ನಿಲ್ದಾಣ ಬದಿಯಲ್ಲಿರುವ ರಸ್ತೆ ಬದಿ ಹೋಟೆಲ್ ಆಸುಪಾಸಿನಲ್ಲೇ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಈ ಬಗ್ಗೆ ಅಬಕಾರಿ ಅಧಿಕಾರಿಗಳು, ಪೊಲೀಸರಿಗೆ ಮಾಹಿತಿ ನೀಡಿದರೂ ಕ್ರಮಕೈಗೊಳ್ಳುತ್ತಿಲ್ಲ ಅನ್ನೋ ಆರೋಪ ಕೇಳಿ ಬಂದಿದೆ. ವರದಿ: ಮಲಾರ ಮಹದೇವಸ್ವಾಮಿ, ಹೆಚ್.ಡಿ.ಕೋಟೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ನೂತನ ಕಟ್ಟಡವು ಲೋಕಾರ್ಪಣೆಗೊಳ್ಳಲು ಸಜ್ಜಾಗಿದೆ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯ ಮುಖ್ಯ ಅಧಿಕಾರಿಗಳ ನೇತೃತ್ವದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ.ಜಿ.ಪರಮೇಶ್ವರ್ ಉಪಸ್ಥಿತಿಯಲ್ಲಿ ಶ್ರೀ ಇಂದಿರಾ ಗಾಂಧಿ ವಸತಿ ಶಾಲೆಯ ನೂತನ ಕಟ್ಟಡವು ಇಂದು ಉದ್ಘಾಟನೆಗೊಳ್ಳಲಿದೆ. ಈ ಸಂದರ್ಭದಲ್ಲಿ ಗೃಹ ಸಚಿವ ಹಾಗೂ ತುಮಕೂರು ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ, ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಜಿ ಪರಮೇಶ್ವರ್, ತುಮಕೂರು ಲೋಕಸಭಾ ಸದಸ್ಯರಾದ ಜಿ.ಎಸ್. ಬಸವರಾಜ್, ಸಚಿವರಾದ ಬಿ.ಸಿ.ನಾಗೇಶ್ ಮಾಧುಸ್ವಾಮಿ, ಜಿಲ್ಲಾಧಿಕಾರಿಗಳಾದ ವೈ.ಎಸ್. ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಕುಮಾರಿ, ಕೊರಟಗೆರೆ ತಹಸೀಲ್ದಾರ್ ನಾಹೀದಾ ಜಮ್…