Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ಕಲ್ಯಾಣ ಕರ್ನಾಟಕ ಭಾಗದಲ್ಲಿ, ತೊಗರಿ ಬೆಳೆ ನೆಟೆರೋಗದಿಂದ ಸಂಪೂರ್ಣವಾಗಿ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಾತ್ರ ಯಾವುದೇ ಸಮೀಕ್ಷೆಯನ್ನು ನಡೆಸದೆ, ಪರಿಹಾರವನ್ನು ನೀಡದೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಸರ್ಕಾರ ನೆಟೆರೋಗದಿಂದ ಹಾನಿಗೊಳಗಾದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಪ್ರತಿ ಎಕರೆ ಪ್ರದೇಶಕ್ಕೆ 25,000 ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಇಡೀ ಏಷ್ಯಾ ಖಂಡದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿರುವುದರಿಂದ ಈ ಜಿಲ್ಲೆಗೆ ತೊಗರಿಯ ಕಣಜ ಎಂದೇ ಕರೆಯಲಾಗುತ್ತಿದೆ. ಈ ಭಾಗದ ರೈತರ ಪ್ರಮುಖ ಬೆಳೆಯಾದ ತೊಗರಿ ಇಲ್ಲಿನ ಜಮೀನಿಗಳಲ್ಲಿ ಹೆಚ್ಚಾಗಿ ಬಿತ್ತನೆ ಮಾಡಲಾಗುತ್ತಿದ್ದು, ಕಲಬುರಗಿ ಜಿಲ್ಲೆಯ ತೊಗರಿ ದೇಶದ ನಾನಾ ಭಾಗಗಳಿಗೆ ರವಾನೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ಎರಡು ವರ್ಷಗಳಿಂದ ಮಳೆ ಹೆಚ್ಚಿನ ಪ್ರಮಾಣದಲ್ಲಿ ಬೀಳುತ್ತಿರುವುದರಿಂದಾಗಿ ನಿರೀಕ್ಷಿತ…
ತುಮಕೂರು : ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಪಿಡಿಒ ಸೇರಿ ಮೂವರನ್ನು ಬಂಧಿಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ. ಎರಡು ತಲೆ ಹಾವಿನಿಂದ ಐಶ್ವರ್ಯ ವೃದ್ಧಿಸುತ್ತದೆ. ಈ ಹಾವು ಕೋಟ್ಯಂತರ ಬೆಲೆ ಬಾಳುತ್ತದೆ ಎಂದು ಸುಳ್ಳು ಹೇಳಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಮೂವರನ್ನೂ ಬಂಧಿಸಿ, ಹಾವನ್ನು ವಶಕ್ಕೆ ಪಡೆದಿದ್ದಾರೆ. ನಾಗರಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಕಾಂತರಾಜು ಹಾಗೂ ಸಹಚರರಾದ ಶೇಕ್ ಹುಸೇನ್, ಮೊಹ್ಮದ್ ಆರೀಫ್ ಎಂಬುವವರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕರ್ನಾಟಕ ವಿಧಾನಮಂಡಲಗಳ 148ನೇ ಅಧಿವೇಶನವನ್ನು ಉತ್ತರ ಕರ್ನಾಟಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕಾರಣಕ್ಕೆ ಸಹ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲಾಗುತ್ತದೆ.ಅಂತೆಯೇ ಉತ್ತರ ಕರ್ನಾಟಕ ಭಾಗದ ಹತ್ತಾರು ಸಮಸ್ಯೆ ಸವಾಲುಗಳ ಬಗ್ಗೆ ವಿಶೇಷ ಚರ್ಚೆಗೆ ಅವಕಾಶ ಮಾಡಿಕೊಡಲು ಎರಡು ದಿನ ಮೀಸಲಿಡಬೇಕು ಎಂದು ಇದೆ ವೇಳೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್ ಅವರು ಸಭಾಪತಿಗಳಿಗೆ ಕೋರಿದರು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅವಕಾಶ ಮಾಡಿಕೊಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಪರಿಷತ್ ಸಭಾ ನಾಯಕ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.ಗಡಿ ಪ್ರದೇಶದಲ್ಲಿನ ಸಾರ್ವಜನಿಕ ಹಿತರಕ್ಷಣೆ ಉದ್ದೇಶದಿಂದಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ-2022ಕ್ಕೆ ವಿಧಾನ ಪರಿಷತ್ತ್ತಿನಲ್ಲಿ ಇಂದು ಅನುಮೋದನೆ ದೊರೆಯಿತು. ರಾಜ್ಯ ಸರ್ಕಾರವು ನೆಲ ಜಲ ಸಂರಕ್ಷಣೆ ವಿಷಯದಲ್ಲಿ, ಕನ್ನಡಿಗರು ಮತ್ತು ಕನ್ನಡಿಗರ ಬದುಕಿನ ರಕ್ಷಣಗೆ ಸರ್ಕಾರ ಬದ್ಧವಾಗಿದೆ. ಅವಶ್ಯಕತೆ ಇದೆ ಎಂಬುದು ಕಂಡುಬಂದಲ್ಲಿ ತಾಲೂಕಿನ ಹೆಸರನ್ನು ಸೇರಿಸುವ ರಚನೆಗೆ ಅವಕಾಶವಿದೆ. ಅಂಗೀಕಾರ ರೂಪದಲ್ಲಿರುವ ಕಾಯಿದೆಯನ್ನುಪರ್ಯಾಲೋಚಿಸಬೇಕು…
ಭೂ ಪರಿವರ್ತನೆಗೆ ಮತ್ತಷ್ಟು ಸರಳೀಕರಣ ಮಾಡುವ ಉದ್ದೇಶದ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ-2022ಕ್ಕೆ ವಿಧಾನ ಪರಿಷತ್ತ್ತಿನಲ್ಲಿ ಅನುಮೋದನೆ ಸಿಕ್ಕಿತು. ತಿದ್ದುಪಡಿ ವಿಧೇಯಕವನ್ನು ವಿಧಾನ ಪರಿಷತ್‍ನಲ್ಲಿ ಪರ್ಯಾಲೋಚಿಸಿ ಕೋರಿ ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿದರು. 2021-2022ರ ವರ್ಷದ ಆಯವ್ಯಯ ಭಾಷಣದಲ್ಲಿ ಮಾಡಿದ ಪ್ರಸ್ತಾವನೆಗಳನ್ನು ಜಾರಿ ತಂದು ಕೃಷಿಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆಯನ್ನು ಸರಳಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 (1964ರ ಕರ್ನಾಟಕ ಅಧಿನಿಯಮ 12)ರ 95ನೇ ಮತ್ತು 96ನೇ ಪ್ರಕರಣವನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ ವಿಧೇಯಕ ಜಾರಿ ಮಾಡಲಾಗುತ್ತದೆ. ಭೂಪರಿವರ್ತನೆಗಾಗಿ ಅರ್ಜಿ ಸಲ್ಲಿಸಿದಾಗ ಅಧಿಕಾರಿಗಳು ಜನರನ್ನು ಕಚೇರಿಗೆ ಅಲೆಸುತ್ತಾರೆ. ಇದನ್ನು ತಪ್ಪಿಸಲು 7 ದಿನಗಳೊಳಗಡೆ ಭೂಪರಿವರ್ತನೆ ಮಾಡಲು ಅನುಕೂಲವಾಗುವ ಹಾಗೆ ಕಾಯ್ದೆಯಲ್ಲಿ ತಿದ್ದುಪಡಿ ತರಲಾಗಿದೆ ಎಂದರು. ಈ ವೇಳೆ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಭೂ ತಿದ್ದುಪಡಿ ಕಾಯ್ದೆ ಬಡಜನರ ಪರವಾಗಿಲ್ಲ. ಇದು ಭೂ ಮಾಫಿಯಾ ಪರವಾಗಿದೆ. ಜನಹಿತ ದೃಷ್ಟಿಯಿಂದ ಈ ಕಾಯಿದೆಗೆ…
ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಯ ಮೀಸಲು ಪ್ರಮಾಣವನ್ನು ಶೇ. 15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ. 3 ರಿಂದ 7ಕ್ಕೆ ಹೆಚ್ಚಿಸುವ 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಿಗೆ ಶೈಕ್ಷಣ ಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಹಾಗೂ ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಮತ್ತು ಹುದ್ದೆಗಳಲ್ಲಿ ಮೀಸಲಾತಿ ವಿಧೇಯಕಕ್ಕೆ ವಿಧಾನ ಸಭೆಯಲ್ಲಿ ಇಂದು ಸರ್ವಾನುಮತದ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಮಂಡಿಸಿದ ವಿಧೇಯಕಕ್ಕೆ ಆಡಳಿತ ಹಾಗೂ ಪ್ರತಿಪಕ್ಷಗಳ ಎಲ್ಲಾ ಸದಸ್ಯರ ಒಕ್ಕೋರಲಿನ ಸಹಮತ ವ್ಯಕ್ತಪಡಿಸಿ ಸರ್ವಾನುಮತದ ಬೆಂಬಲ ಸೂಚಿಸಿದರು.ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧೇಯಕವು ಸರ್ವಾನುಮತದಿಂದ ಅಂಗೀಕಾರಗೊಂಡು ಅನುಮೋದನೆ ಪಡೆದಿದೆ ಎಂದು ಪ್ರಕಟಿಸಿದರು. ಇದಕ್ಕೂ ಮುನ್ನ ನಿಯಮ 69 ರಡಿ ನಡೆದ ಚರ್ಚೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಸದಸ್ಯರಾದ ಹೆಚ್.ಕೆ. ಪಾಟೀಲ, ಬಂಡೆಪ್ಪ ಕಾಶೆಂಪುರ, ಡಾ. ಕೆ. ಅನ್ನದಾನಿ, ಕೆ.ಎಂ. ಶಿವಲಿಂಗೇಗೌಡ,…
ಕರಾವಳಿಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ವಿಚಾರವಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕೇಳಿದ ಪ್ರಶ್ನೆಗೆ ಸಚಿವ ಮಾಧುಸ್ವಾಮಿ ಉತ್ತರಿಸಿದರು. ಇದು ನೈತಿಕ ಪೊಲೀಸ್ ಗಿರಿಯೋ ಅನೈತಿಕ ಪೊಲೀಸ್ ಗಿರಿಯೋ ಅನ್ನೋದು ಗೊತ್ತಿಲ್ಲ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ, ಅದಕ್ಕೆ ಕಡಿವಾಣ ಹಾಕುವ ಕೆಲಸ ಮಾಡ್ತೇವೆ ಎಂದು ಮಾಧುಸ್ವಾಮಿ ಉತ್ತರಿಸಿದರು. ನಾವು ಯಾರಿಗೂ ಫ್ರೀ ಹ್ಯಾಂಡ್ ಕೊಟ್ಟಿಲ್ಲ, ನೀವು ಹೋಗಿ ಮಾಡ್ಕೊಂಡು ಬರಬಹುದು ಅಂತ. ಪೊಲೀಸ್ ಯಾವಾಗಲೂ ಪೊಲೀಸ್, ಮೋರಲ್ ಪೊಲೀಸ್ ಅಂತ ಒಂದು ಇರಕ್ಕಾಗಲ್ಲ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಬಂಜಾರ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು ಆದರೆ ಇಂದಿನ ಬಿಜೆಪಿ ಸರ್ಕಾರ ಬಂಜಾರ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ನಮ್ಮ ಕರ್ನಾಟಕ ರಾಜ್ಯದ ಬಂಜಾರ ಸಮುದಾಯದ ತಾಂಡಗಳಲ್ಲಿರುವ ಅರ್ಚಕರಿಗೆ ಮಾಸಿಕ ರೂ. 10,000/- ಗಳಂತೆ ಗೌರವಧನ ನೀಡಬೇಕು ಎಂದು ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರಿಗೆ ಪತ್ರ ಬರೆದಿದ್ದೇನೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ, ತೆಲಂಗಾಣ ರಾಜ್ಯ ಸರ್ಕಾರವು ಅಲ್ಲಿನ ಬಂಜಾರ ಸಮುದಾಯದವರ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಂಡು ತಾಂಡಗಳಲ್ಲಿನ ವಿವಿಧ ದೇವಾಲಯಗಳ ಆರ್ಚಕರಿಗೆ “ಧೂಪ, ದೀಪ, ನೈವೇದ್ಯಮ್” ಯೋಜನೆ ರೂಪಿಸಿ ಮಾಸಿಕ ಗೌರವಧನ ನೀಡಲಾಗುತ್ತಿದೆ. ಅದೇ ರೀತಿ ನಮ್ಮ ಕರ್ನಾಟಕ ರಾಜ್ಯದಲ್ಲಿರುವ ಸಾವಿರಾರು ಬಂಜಾರ ತಾಂಡಾಗಳ ಆರಾಧ್ಯ ದೇವರುಗಳ ದೇವಸ್ಥಾನಗಳಲ್ಲಿ ಪೂಜೆ, ಅರ್ಚನೆ, ಭಜನೆ ಮುಂತಾದ ಧಾರ್ಮಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಆದರೆ ಇಲ್ಲಿನ ತಾಂಡಾಗಳ ಅರ್ಚಕರುಗಳು ಸೌಲಭ್ಯ ವಂಚಿತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಕರ್ನಾಟಕ ಸರ್ಕಾರವು…
ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಬಿಜೆಪಿ ಸರ್ಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ವಿಧಾನಸಭೆಯ ಎಲ್ಲಾ ಶಾಸಕರ ಘನತೆ ಮತ್ತು ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಶೃಂಗೇರಿಗೆ ಅನುದಾನ ನೀಡುವಾಗ ಜೀವರಾಜ್ ಅವರ ಹೆಸರು ಉಲ್ಲೇಖಿಸಿರುವುದು ಸರಿಯಲ್ಲ. ಜೀವರಾಜ್ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಸೋತ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಒಂದು ಕೆಟ್ಟ ಸಂಪ್ರದಾಯ. ಅದು ಯಾವುದೇ ಪಕ್ಷದ ಅಭ್ಯರ್ಥಿಯಾಗಿರಲಿ. ಬಜೆಟ್ ಗೆ ಅನುಮೋದನೆ ನೀಡುವವರು ಯಾರು? ಚುನಾವಣೆಯಲ್ಲಿ ಸೋತವರು ಬಂದು ಚರ್ಚಿಸಿ ಬಜೆಟ್ ಪಾಸ್ ಮಾಡಿ ಕೊಡುತ್ತಾರ? ಸೋತವರ ಹೆಸರಿಗೆ ಅನುದಾನ ನೀಡಿ, ಅವರಿಗೆ ಜನರ ಜೊತೆ ಹೋಗಿ ಕೆಲಸ ಮಾಡಿ ಎನ್ನುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಇದನ್ನು ಪ್ರತಿಷ್ಠೆ ಮಾಡಿಕೊಳ್ಳಬಾರದು, ಇದು ಮುಂದುವರೆಲೂಬಾರದು. ಸೋತವರು ಮತ್ತೆ ಗೆದ್ದು ಬಂದು ಜನರ ಜೊತೆ ನಿಂತು ಕೆಲಸ ಮಾಡಲಿ ಎಂದು ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ…
ವಿಶ್ವಕ್ಕೆ ಭಯವನ್ನು ತೋರಿಸಲು ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವುದಾಗಿ ರಷ್ಯಾ ಘೋಷಿಸಿದೆ. ಇದಾದ ನಂತರ ವಿಶ್ವ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ತೀವ್ರವಾಗಿ ಏರಿಕೆಯಾಗಿದೆ. ತರುವಾಯ, ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 2.94 ಡಾಲರ್ಗಳಷ್ಟು ಹೆಚ್ಚಾಗಿದೆ ಮತ್ತು $ 83.72 ಕ್ಕೆ ಮಾರಾಟವಾಗುತ್ತಿದೆ. ಕಳೆದ ತಿಂಗಳು $80 ರ ಸಮೀಪದಲ್ಲಿದ್ದ ಪೆಟ್ರೋಲ್ ಬೆಲೆಗಳು ರಷ್ಯಾದ ಘೋಷಣೆಯಿಂದಾಗಿ ಮತ್ತೆ ಏರಲು ಪ್ರಾರಂಭಿಸಿವೆ. ತಜ್ಞರ ಪ್ರಕಾರ, ಈ ಘೋಷಣೆಯಿಂದ ಭಾರತದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದರು. ವಿಧಾನಸಭಾ ಕಲಾಪದಲ್ಲಿ ಮೀಸಲಾತಿ ವಿಚಾರ ಚರ್ಚೆಯಾಯಿತು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನೀವು ಅವರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದೀರಾ…? ಮೀಸಲಾತಿ ಹೆಚ್ಚಳದ ಬಗ್ಗೆ ಈವರೆಗೆ ಕೇಂದ್ರದ ಮೇಲೆ ಒತ್ತಡ ಹಾಕಿಲ್ಲ. ಮೀಸಲಾತಿ ಪ್ರಮಾಣ ಹೆಚ್ಚಳದ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹಾಕಿ. ಎಸ್.ಸಿ ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ನಮ್ಮ ಬೆಂಬಲವಿದೆ. ಕಾಂಗ್ರೆಸ್ ಪಕ್ಷ ಮೀಸಲಾತಿ ಹೆಚ್ಚಳದ ಪರ ಇದೆ ಎಂದು ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy