Subscribe to Updates
Get the latest creative news from FooBar about art, design and business.
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
- ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
- ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
- ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
- ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
Author: admin
ಬೆಂಗಳೂರು: ಬಿಜೆಪಿಯವರಿಗೆ ಸಾವಿನ ಮನೆ ರಾಜಕಾರಣ ಮಾಡೋದು ಇನ್ನೂ ತಪ್ಪಿಲ್ಲ. ಅವರ ಪಕ್ಷದ ಕಾರ್ಯಕರ್ತರು ಅವರ ಮೇಲೆ ತಿರುಗಿ ಬಿದ್ದಿದರಿಂದ ಈಗ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಜನೋತ್ಸವ ಕಾರ್ಯಕ್ರಮ ರದ್ದು ಮಾಡಿದ್ದು ಅವರಿಗೆ ಬಿಟ್ಟಿದ್ದು. ಆದರೆ ಪ್ರಚೋದನಕಾರಿ ಹೇಳಿಕೆ ಕೊಟ್ಟು, ಕೊಟ್ಟು ಬಲಿ ತೆಗೆದುಕೊಂಡಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದರು. ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರ ಮನೆ ಮೇಲೆ ಅವರೇ ಕಲ್ಲು ಹೊಡೆದುಕೊಳ್ಳಬೇಕು. ಈ ಹಿಂದೆ ಈ ರೀತಿಯ ಸಾವು ಆಗಲಿ ಎಂದು ಕಾದು ಕುಳಿತಿದ್ದರು. ಹಿಂದೆ ವೈಯಕ್ತಿಕ ಸಾವುಗಳನ್ನು ರಾಜಕೀಯ ದ್ವೇಷದ ಸಾವುಗಳಾಗಿ ಮಾಡಿದ್ರು. ಹತ್ಯೆಗಳು ಎಲ್ಲಾ ಸರ್ಕಾರದಲ್ಲೂ ಆಗಿವೆ. ಆದರೆ ಹತ್ಯೆಗಳಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಅಂದುಕೊಂಡಂತೆಯೇ ‘ವಿಕ್ರಾಂತ್ ರೋಣ’ ಅದ್ದೂರಿಯಾಗಿ ರಿಲೀಸ್ ಆಗಿದೆ. ಕರ್ನಾಟಕ ಮಾತ್ರವಲ್ಲದೆ ವಿಶ್ವಾದ್ಯಂತ ಈ ಚಿತ್ರ ಅಬ್ಬರಿಸಲು ಶುರು ಮಾಡಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಯ ಪ್ರೇಕ್ಷಕರು ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ ಅವರ ಎಂಟ್ರಿ ಸೀನ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಎಲ್ಲ ಚಿತ್ರಮಂದಿರಗಳ ಎದುರಲ್ಲೂ ಸಡಗರ ಮನೆ ಮಾಡಿದೆ. ಪಟಾಕಿ ಹೊಡೆದು ಪ್ರೇಕ್ಷಕರು ಸಂಭ್ರಮಿಸುತ್ತಿದ್ದಾರೆ. ವಿಕ್ರಾಂತ್ ರೋಣ ಚಿತ್ರಕ್ಕೆ ಸಿನಿಪ್ರಿಯರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ವಿಶ್ವಾದ್ಯಂತ ಸಾವಿರಾರು ಸ್ಕ್ರೀನ್ ಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಶ್ರೀಶೈಲ ಚಿತ್ರಮಂದಿರ ಹಾಗೂ ಪುಷ್ಪಾಂಜಲಿ ಚಿತ್ರಮಂದಿರಗಳಲ್ಲಿ ವಿಕ್ರಾಂತ್ ರೋಣ ಚಿತ್ರ ಚಿತ್ರ ಬಿಡುಗಡೆಯಾಗಿದ್ದು, ಎರಡು ಚಿತ್ರ ಮಂದಿರಗಳಲ್ಲಿ ಚಿತ್ರ ಇದ್ದರೂ, ಟಿಕೆಟ್ ಖರೀದಿಗೆ ನೂಕು ನುಗ್ಗಲು ಕಂಡು ಬಂತು. ಕಿಚ್ಚ ಸುದೀಪ್ ಅಭಿನಯದ ವಿಕ್ರಂತ್ ರೋಣ ಸಿನಿಮಾ ವಿಶ್ವಾದ್ಯಂತ ಅನೇಕ ರಾಷ್ಟ್ರಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದು , ಮೊದಲ ದಿನದ…
ತುಮಕೂರು: ದಕ್ಷಿಣ ಕನ್ನಡದ ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರಿಗೆ ರಕ್ಷಣೆ ನೀಡದ ಬಿಜೆಪಿ ವಿಫಲವಾಗಿದೆ ಎಂದು ನಿನ್ನೆ ಅನೇಕ ಕಾರ್ಯಕರ್ತರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ತುಮಕೂರು ಜಿಲ್ಲೆಯಲ್ಲೂ ಬಿಜೆಪಿ ಮುಖಂಡರ ರಾಜೀನಾಮೆ ಮುಂದುವರಿದಿದ್ದು, ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟಕದ ಸದಸ್ಯರ ಸ್ಥಾನಕ್ಕೆ ಕಿರಣ್ ಹಾಗೂ ರಕ್ಷಿತ್ ರಾಜೀನಾಮೆ ನೀಡಿದ್ದಾರೆ. ಇನ್ನು ಪಕ್ಷದಲ್ಲಿ ಕಾರ್ಯಕರ್ತರಿಗೆ ರಕ್ಷಣೆಯಿಲ್ಲವೆಂದು ರೈತ ಮೋರ್ಚ ಪ್ರಧಾನ ಕಾರ್ಯದರ್ಶಿ ಹಾಲೇಗೌಡ ಕೂಡ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಚಿತ್ರದುರ್ಗ/ಹಿರಿಯೂರು: ಜನನ ಮತ್ತು ಮರಣ ನೋಂದಣಿ ತಿದ್ದುಪಡಿ ಕಾಯ್ದೆಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಬುಧವಾರ ಹಿರಿಯೂರು ತಾಲ್ಲೂಕಿನ ವಕೀಲರ ಸಂಘದ ಅಧ್ಯಕ್ಷರಾದ ಎನ್.ವಿ.ಅನಿಲ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಹಿರಿಯೂರು ತಾಲ್ಲೂಕಿನ ತಹಶೀಲ್ದಾರರಿಗೆ ಹಾಗೂ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶಿವು ಯಾದವ್ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಅಧಿಕಾರಿಗಳಿಗೆ ವಕೀಲರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು. ಈ ತಿದ್ದುಪಡಿಯು ಅಸಂವಿಧಾನಿಕ ಹಾಗೂ ಕಾನೂನು ಬಾಹಿರವಾಗಿರುವುದರಿಂದ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ತಕ್ಷಣವೇ ಈ ತಿದ್ದುಪಡಿಯನ್ನು ಹಿಂಪಡೆದು ಸಿವಿಲ್ ನ್ಯಾಯಾಲಯಕ್ಕೆ ಇರುವ ಅಧಿಕಾರವನ್ನುಉಳಿಸಬೇಕು ಎಂದು ಒತ್ತಾಯಿಸಿದರಲ್ಲದೇ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಚಿತ್ರದುರ್ಗ ಜಿಲ್ಲೆಯ ನ್ಯಾಯಾಲಯದ ಆವರಣದಿಂದ ಮೆರವಣಿಗೆ ಮೂಲಕ ಸಾಗಿದ ವಕೀಲರು ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡಿದರು. ಬಳಿಕ ತಾಲ್ಲೂಕು ಕಛೇರಿ ಮುಂಭಾಗದ ರಸ್ತೆಯಿಂದ ಒನಕ್ಕೆ ಓಬವ್ವ ವೃತ್ತಕ್ಕೆಆಗಮಿಸಿ ಮಾನವ ಸರಪಳೆ ನಿರ್ಮಿಸಿ ರಾಜ್ಯ ಸರ್ಕಾರದ ಗಮನ ಸೆಳೆದರು. ಹಿರಿಯೂರಿನಲ್ಲೂ…
ಬೆಂಗಳೂರು: ‘ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಹಾಗೂ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ 32ಕ್ಕೂ ಹೆಚ್ಚು ಇಂತಹ ಹತ್ಯೆಗಳು ನಡೆದಿವೆ. ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿಗೆ ಸರ್ಕಾರ ಅವಕಾಶ ಮಾಡಿಕೊಟ್ಟ ಪರಿಣಾಮ ಇಂತಹ ಪ್ರಕರಣಗಳು ಮರುಕಳಿಸುತ್ತಿವೆ. ಬಿಜೆಪಿ ಎಲ್ಲಾ ಪ್ರಕರಣಗಳಲ್ಲೂ ರಾಜಕೀಯ ಮಾಡಲು ಮುಂದಾಗುತ್ತದೆ. ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಇಂತಹ ಪ್ರಕರಣಗಳನ್ನು ಬಳಸಿಕೊಳ್ಳುತ್ತದೆ ಎಂದು ಆರೋಪಿಸಿದರು. ಈ ಹತ್ಯೆ ಖಾಸಗಿ ಕಾರಣದಿಂದ ನಡೆದಿದೆಯೋ ಅಥವಾ ರಾಜಕೀಯ ಕಾರಣದಿಂದ ನಡೆದಿದೆಯೋ ಎಂಬ ವಿಚಾರವಾಗಿ ಬಿಜೆಪಿ ಅಥವಾ ಎಸ್ಪಿ ಅವರು ಹೇಳಿಕೆ ನೀಡಬೇಕು. ಗೃಹ ಸಚಿವರು ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡಿ ಅಂಗೈ ತೋರಿಸಿ ಅವಲಕ್ಷಣ ಎನಿಸಿಕೊಳ್ಳುವಂತೆ ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಗೃಹ ಸಚಿವರ ಹೇಳಿಕೆಯನ್ನು ಪ್ರಮಾಣಿಕರಿಸಬೇಕಿದೆ. ಗೃಹಮಂತ್ರಿಯಾದವರು…
ತುರುವೇಕೆರೆ: ತಾಲೂಕು ದಂಡಿನ ಶಿವರ ಹೋಬಳಿ ಬೀಚನಹಳ್ಳಿ ಗ್ರಾಮದ ಆರ್ ಟಿ ಐ ಕಾರ್ಯಕರ್ತ ಕಿರಣ್ ಅಂತ್ಯಸಂಸ್ಕಾರ ಮಾಡಿದ ಒಂದುವರೆ ತಿಂಗಳ ಬಳಿಕ ಮೃತ ದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಕಳೆದ ಮೇ ತಿಂಗಳ 13ರಂದು ರಾತ್ರಿ ತಮ್ಮ ಸ್ವಂತ ಮನೆಯ ಬಾತ್ರೂಮಿನಲ್ಲಿ ಕಿರಣ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಬಳಿಕ ಸಂಬಂಧಿಕರು ಹೃದಯಾಘಾತದಿಂದ ಮರಣ ಹೊಂದಿದ್ದಾರೆ ಎಂದು ತೀರ್ಮಾನಿಸಿ ಯಾವುದೇ ಮರಣೋತ್ತರ ಪರೀಕ್ಷೆಗೆ ಒಳಪಡಿಸದೆ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದರು ಇದಾದ ಕೆಲ ದಿನಗಳ ನಂತರ ಕಿರಣ್ ಕುಮಾರ್ ರವರ ಕುಟುಂಬಸ್ಥರೊಬ್ಬರು ಅಸಹಜ ಸಾವು ಎಂದು ಅನುಮಾನಗೊಂಡು ದಂಡಿನ ಶಿವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರನ್ನು ಪರಿಗಣಿಸಿದ ದಂಡಿನ ಶಿವರ ಪೊಲೀಸ್ ಠಾಣೆಯ ಸಿಬ್ಬಂದಿ ತಿಪಟೂರು ಉಪವಿಭಾಗಾಧಿಕಾರಿ ಗಳ ಗಮನಕ್ಕೆ ತಂದು ಬಳಿಕ ಶವಸಂಸ್ಕಾರ ಮಾಡಿದ ಸಮಾಧಿಯ ಬಳಿ ಹತ್ತಾರು ದಿನಗಳವರೆಗೆ ಪೊಲೀಸ್ ಸಿಬ್ಬಂದಿಗಳನ್ನು ಕಾವಲು ಹಾಕಿ ಅಂತಿಮವಾಗಿ ಮಂಗಳವಾರ ಮಧ್ಯಾಹ್ನ ಉಪ ವಿಭಾಗ ಅಧಿಕಾರಿಗಳಾದ ಶಿಲ್ಪ ಶ್ರೀ…
ಕಾರ್ಯಕರ್ತರನ್ನು ಉಳಿಸಿಕೊಳ್ಳಲಾಗದ ಬಿಜೆಪಿ ಜನರನ್ನು ಹೇಗೆ ರಕ್ಷಿಸುತ್ತದೆ: ಜೆಡಿಎಸ್ ಮುಖಂಡ ಪ್ರವೀಣ್ ಕುಮಾರ್ ಪ್ರಶ್ನೆ
ಹಾಸನ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಹತ್ಯೆಯನ್ನು ಜೆಡಿಎಸ್ ಯುವ ಮುಖಂಡ ಪ್ರವೀಣ್ ಕುಮಾರ್ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯು ಖಂಡಿನೀಯವಾದದ್ದು, ಪ್ರವೀಣ್ ಹತ್ಯೆಯ ಆರೋಪಿಗಳನ್ನು ಶೀಘ್ರವೇ ಬಂಧಿಸಿ, ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಅವರು ಒತ್ತಾಯಿಸಿದರು. ಬಿಜೆಪಿ ಆಡಳಿತದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದ್ದು, ಇನ್ನು ಜನಸಾಮಾನ್ಯರ ಪರಿಸ್ಥಿತಿ ಏನು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬಿಜೆಪಿ ಆಡಳಿತದಿಂದ ಬೇಸತ್ತು ಕಾರ್ಯಕರ್ತರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಪ್ರವೀಣ್ ಕುಮಾರ್ ಹೇಳಿದರು. ಹರ್ಷ ಹತ್ಯೆಯಾದಾಗಲೇ ಬಿಜೆಪಿ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಆದರೆ, ಮೇಲ್ನೋಟಕ್ಕೆ ಕಾರ್ಯಕರ್ತರ ಕಣ್ಣಿಗೆ ಮಣ್ಣೆರಚಿದ ಬಿಜೆಪಿ ನಾಯಕರು, ಬಳಿಕ ನಿರ್ಲಕ್ಷ್ಯ ವಹಿಸಿದ್ದರು. ಹರ್ಷ ಆರೋಪಿಗಳು ಜೈಲಿನಲ್ಲಿ ವಿಡಿಯೋ ಕಾಲ್ ಮಾಡಿಕೊಂಡು ಮಜಾ ಮಾಡುತ್ತಿರುವ ವಿಡಿಯೋಗಳು ಹೊರ ಬಂದಿದ್ದವು. ಇದರ ಬಗ್ಗೆ ವಿಚಾರಿಸಲು ಹೋದ ಹರ್ಷ ಅವರ ಸಹೋದರಿಗೆ ಗೃಹ ಸಚಿವರು ಬೈದು ಕಳಿಸಿದ್ದರು.…
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ನಾಳೆ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದೆ. ಈ ಹಿನ್ನೆಲೆ ಬೆಂಗಳೂರಿನ ವಿಜಯನಗರದ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿರುವ ಕಿಚ್ಚ ಸುದೀಪ್ ಅಭಿಮಾನಿಗಳು, ಬೃಹತ್ ಮೆರವಣಿಗೆ ನಡೆಸಿದ್ದಾರೆ. 101 ಕಳಶಗಳನ್ನ ಹೊತ್ತು ಮಹಿಳಾ ಅಭಿಮಾನಿಗಳು ಮೆರವಣಿಗೆ ಮಾಡಿದ್ದು,ಈ ವೇಳೆ ಡೋಳ್ಳು ಕುಣಿತ , ಚಂಡೆವಾದ್ಯ , ಪ್ರಚಾರದ ಟ್ಯಾಬ್ಲೋ ಜೊತೆಗೆ ಅಭಿನಯ ಚಕ್ರವರ್ತಿ ಬಾವುಟ ಹಿಡಿದು ಅದ್ಧೂರಿಯಾಗಿ ಮೆರವಣಿಗೆ ಮಾಡಿದ್ದಾರೆ. ಮಾತ್ರವಲ್ಲದೆ ಕಿಚ್ಚನ ಕಟೌಟ್ ಗೆ ಹಾರಹಾಕಿ ಪಟಾಕಿ ಸಿಡಿಸಿದ್ದು, ಬೆಂಗಳೂರಿನ ಮಾಗಡಿ ರಸ್ತೆಯ ವಿರೇಶ ಚಿತ್ರಮಂದಿರದ ಮೆರವಣಿಗೆ ಮಾಡಿರುವ ಕಿಚ್ಚನ ಫ್ಯಾನ್ಸ್ ಎಲ್ಲರ ಗಮನ ಸೆಳೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದು, ಬೆಳ್ಳಾರೆ ಬಸ್ ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕೆ ಆಗಮನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ ಅವರ ಕಾರಿಗೆ ಹಿಂದೂ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಚಿವ ಸುನಿಲ್ ಕುಮಾರ್ ಸೇರಿದಂತೆ ಹಲವು ನಾಯಕರು ಸ್ಥಳಕ್ಕೆ ಭೇಟಿ ನೀಡಿ ಮೃತ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲು ಯತ್ನಿಸಿದರು. ಈ ವೇಳೆ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶಗೊಂಡು ನಳಿನ್ ಕುಮಾರ್ ಕಾರಿನ ಮೇಲೆ ಮುಗಿಬಿದ್ದರು. ಕಾರನ್ನು ಪಲ್ಟಿ ಮಾಡಲೂ ಯತ್ನಿಸಿದ್ದು ಕಾರಿನ ಟೈರ್ ನಿಂದ ಗಾಳಿ ಹೊರಬಿಟ್ಟರು. ಪೊಲೀಸರೊಂದಿಗೆ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ‘ಬೇಕೇ ಬೇಕು, ನ್ಯಾಯ ಬೇಕು’ ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂಗಡಿಗಳನ್ನು ಮುಚ್ಚಿಸುತ್ತಿರುವ ಪೊಲೀಸರು ಗುಂಪು ಸೇರಿದ್ದ ಕಾರ್ಯಕರ್ತರನ್ನುಮೇಲೆ ಲಾಠಿ ಬೀಸಿದ್ದಾರೆ.ಪುತ್ತೂರು ಡಿಪೋಗೆ ಸೇರಿದ ಬಸ್…
ಮನಿಲಾ: ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು,ರಾಜಧಾನಿ ಮನಿಲಾ ಸೇರಿದಂತೆ ಕೆಲವು ಪ್ರದೇಶದಲ್ಲಿ ಕಟ್ಟಡಡಗಳು ಉರುಳಿದ್ದು ಭಾರಿ ಹಾನಿ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ 7.3 ತೀವ್ರತೆಯ ಭೂಕಂಪವು ಪರ್ವತ ಪ್ರದೇಶದ ಅಬ್ರಾ ಪ್ರಾಂತ್ಯದ ಸುತ್ತಲೂ ಸುಮಾರು 25 ಕಿಲೋಮೀಟರ್ ಆಳದಲ್ಲಿ ಕೇಂದ್ರೀಕೃತವಾಗಿತ್ತು ಮತ್ತು ಹಲವಾರು ಬಾರಿ ಭೂಮಿ ಕಂಪಿಸಿದೆ ಎಂದು ಫಿಲಿಪೈನ್ ಜ್ವಾಲಾಮುಖಿ ಮತ್ತು ಭೂಕಂಪನಶಾಸ್ತ್ರ ಸಂಸ್ಥೆ ತಿಳಿಸಿದೆ. ಪ್ರಬಲವಾದ ಕಂಪನದಿಂದಾಗಿ ಕಟ್ಟಡಗಳು ಮತ್ತು ಮನೆಗಳಲ್ಲಿ ಬಿರುಕು ಉಂಟಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ಖಿ.ಖ. ಭೂವೈಜ್ಞಾನಿಕ ಸಮೀಕ್ಷೆಯು ಭೂಕಂಪದ ಬಲವನ್ನು 7.0 ಮತ್ತು ಆಳವನ್ನು 10 ಕಿಲೋಮೀರ್ಟ (6 ಮೈಲುಗಳು) ನಲ್ಲಿ ಅಳೆಯಿತು. ಆಳವಿಲ್ಲದ ಭೂಕಂಪಗಳು ಹೆಚ್ಚು ಹಾನಿಯನ್ನುಂಟು ಮಾಡಿದೆ. ನೂರಾರು ಮಂದಿ ಗಾಯಗೊಂಡಿದ್ದು ತಕ್ಷಣಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಕಾರಿಗಳು ತಿಳಿಸಿದ್ದಾರೆ. ಈ ಹಿಂದೆ 1990 ರಲ್ಲಿ 7.7 ತೀವ್ರತೆಯ ಭೂಕಂಪನ ಸಂಭವಿಸಿ ಸುಮಾರು 2,000 ಜನರು ಸಾವನ್ನಪ್ಪಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…