Subscribe to Updates
Get the latest creative news from FooBar about art, design and business.
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
- ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
- ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
- ತಿಂಗಳ ಅಂತರದಲ್ಲಿ ಹುಲಿ ದಾಳಿಗೆ ಮೂವರು ಬಲಿ: ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?
- ಬೀದರ್ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ
- ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
Author: admin
ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದನು. ಬೆಳ್ಳಾರೆ ಪೇಟೆಯಲ್ಲಿ ಇಂದು ತನ್ನ ಕೋಳಿ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಮೃತದೇಹದ ಮರಣೋತ್ತರ ಪುತ್ತೂರಿನಲ್ಲಿ ನಡೆಸಲಾಗಿದ್ದು, ಮೃತದೇಹವನ್ನು ಪ್ರವೀಣ್ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಿಂದ ಪ್ರವೀಣ್ ಮೃತದೇಹವನ್ನು ಹುಟ್ಟೂರು ನೆಟ್ಟಾರು ಕಡೆಗೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದ್ದು, ಮೆರವಣಿಗೆಯಲ್ಲಿ…
ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ಸಾಧನಾ ಸಮಾವೇಶ ಜನೋತ್ಸವವಾಗಿ ಆಚರಿಸಲು ತೀರ್ಮಾನಿಸಿದೆ. ಆದರೆ ಇದು ಜನೋತ್ಸವವಲ್ಲ, ‘ಭ್ರಷ್ಟೋತ್ಸವ’ ಎಂದು ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯ ಮಾಡಿದೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಸರ್ಕಾರ ಜನರಿಗೆ ದ್ರೋಹ ಎಸಗಿದೆ. ಭ್ರಷ್ಟಾಚಾರ ಮುಗಿಲುಮುಟ್ಟಿದೆ’ ಎಂದು ವಾಗ್ದಾಳಿ ನಡೆಸಿದರು. ‘ಬೊಮ್ಮಾಯಿ ಸರ್ಕಾರದ ಆಡಳಿತ ನೋಡಿ ಸಂಪೂರ್ಣ ಭ್ರಮನಿರಸನವಾಗಿದೆ. ಗುತ್ತಿಗೆದಾರರಿಗೆ ಶೇ.40ರಷ್ಟು ಲಂಚ ಕೊಡಬೇಕಾದ ಪರಿಸ್ಥಿತಿ ಬಂದಿರುವುದು ಇದೇ ಮೊದಲು. ಗುತ್ತಿಗೆದಾರ ಸಂತೋಷ್ ಪಾಟೀಲ ಈ ಲಂಚದ ಹಣ ನೀಡಲಾಗದೆ ಆತ್ಮಹತ್ಯೆ ಮಾಡಿಕೊಂಡರು. ಇದಕ್ಕೆ ಕಾರಣರಾದ ಮಂತ್ರಿ, ನಮ್ಮ ಹೋರಾಟಗಳಿಗೆ ಮಣಿದು ರಾಜೀನಾಮೆ ನೀಡಿದರೂ ಇದೀಗ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದರು. ರಾಜ್ಯ ಸರ್ಕಾರ ಕಾರ್ಯವೈಖರಿಯಿಂದಾಗಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಅಂಕಿಅಂಶಗಳ ಸಹಿತ ವಿವರಿಸಿದ…
ತಿಪಟೂರು: ಕಾಂಗ್ರೆಸ್ ಪಕ್ಷಕ್ಕೆ 130 ವರ್ಷಗಳ ಇತಿಹಾಸವಿದೆ. ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಾಗ ಬಿಜೆಪಿ ನಾಯಕರು ಎಲ್ಲಿದ್ದರು ಎಂದು ಮಾಜಿ ಶಾಸಕ ಕೆ ಷಡಕ್ಷರಿ ಪ್ರಶ್ನಿಸಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸ್ವಾತಂತ್ರ್ಯೋತ್ಸವದ 75ನೇ ಅಮೃತ ಮಹೋತ್ಸವ ಪ್ರಯುಕ್ತ ಆಗಸ್ಟ್ ಒಂದರಿಂದ ಏಳು ದಿನ ಓ ಹಮ್ಮಿಕೊಂಡಿರುವ ಪಾದಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಈ ದೇಶದಲ್ಲಿರುವ ಅಂದಾಜು 18 ರಿಂದ 20 ಕೋಟಿ ಮುಸಲ್ಮಾನರ ಮತಗಳು ಬೇಕಿಲ್ಲ ಎಂದು ಹೇಳುವ ಮೂಲಕ ಹಿಂದೂ ಮತ ಪಡೆಯುವ ಗಿಮಿಕ್ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಇದೇ ವೇಳೆ ಅವರು ಟೀಕಿಸಿದರು. ಇನ್ನೂ ಪಕ್ಷದ ನಾಯಕತ್ವಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷಕ್ಕೆ ಜೈಕಾರವಿರಲಿ ನಾಯಕರಿಗೆ ಬೇಡ ಎಂದು ಹೇಳಿದರು ಕಾಂಗ್ರೆಸ್ ಮುಖಂಡ ಲೋಕೇಶ್ವರ್ ಮಾತನಾಡಿ, ಚಡ್ಡಿ ಸುಡುವ ಮೂಲಕ ಕೇವಲ ಸಾಂಕೇತಿಕ ಪ್ರತಿಭಟನೆ ಮಾಡಿದ ಎನ್ ಎಸ್ ಯು ವಿದ್ಯಾರ್ಥಿಗಳು ದೇಶದ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ. ಅವರನ್ನು ದೆಹಲಿಗೆ…
ಬೆಂಗಳೂರು : ರಾಜ್ಯದ ಉಪ ನೋಂದಣಾಧಿಕಾರಿ ಕಚೇರಿಗಳ ನೌಕರರಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಿ ನೋಂದಣಿ ಮಹಾನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ’ ಎಂದು ತಿಳಿಸಿದ್ದಾರೆ. ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿನ ನ್ಯೂನತೆಗಳ ಬಗ್ಗೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಿದ್ದಾರೆ. ಅನಧಿಕೃತ ವ್ಯಕ್ತಿಗಳನ್ನು ಕಚೇರಿಗಳಿಂದ ಹೊರಗಿಡಲು ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ನಗದು ಘೋಷಣೆ ಮತ್ತು ಕಚೇರಿಯಿಂದ ಹೊರಬರುವಾಗ ಅಧಿಕಾರಿಗಳು ಮತ್ತು ಸಿಬ್ಬಂದಿಯ ದಾಖಲಿಸುವ ಬಗ್ಗೆ ನಿರ್ದೇಶನಗಳನ್ನು ನೀಡಲಾಗಿದೆ’ ಎಂದು ಅಶೋಕ ಹೇಳಿದರು. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು:75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರು ವತಿಯಿಂದ ಕಾಲೇಜು ಹಂತದ ಚಿತ್ರಕಲಾ ಸ್ಪರ್ಧೆ—2022 ಪೈಂಟಿಂಗ್ ಹಾಗೂ ಪೋಸ್ಟರ್ ವರ್ಣ ಚಿತ್ರ ರಚನಾ ಸ್ಪರ್ಧೆಯನ್ನು ಸೋಮವಾರ ಆಯೋಜಿಸಲಾಗಿತ್ತು. ತುಮಕೂರು ಜಿಲ್ಲಾ ಸ್ವಾತಂತ್ರ ಹೋರಾಟಗಾರರ ಸಂಘದ ಕಾರ್ಯದರ್ಶಿ ತು.ಮ.ಬಸವರಾಜು ಅವರು ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ತುಮಕೂರು ಜಿಲ್ಲೆಯಾದ್ಯಂತ ಹಲವಾರು ಗ್ರಾಮೀಣ ಭಾಗಗಳಲ್ಲೂ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಇದ್ದರು. ಈಗ ಅವರಲ್ಲಿ ಬೆರಳೆಣಿಕೆಯಷ್ಟು ಜನರು ಮಾತ್ರ ಬದುಕಿದ್ದಾರೆ. ಅವರೆಲ್ಲರ ದೇಶಾಭಿಮಾನ, ತ್ಯಾಗ ಬಲಿದಾನಗಳನ್ನು ಹಾಗೂ ಅವರ ಜೀವನ ಚರಿತ್ರೆಗಳನ್ನು ಇಂದಿನ ಯುವ ಜನತೆಗೆ ಪರಿಚಯಿಸಬೇಕು. ಈ ಮೂಲಕ ಅವರ ಸೇವೆಗಳನ್ನು ಗೌರವಿಸಿ ಸ್ಮರಿಸುತ್ತಿರಬೇಕು. ಆಗ ಅವರ ಆತ್ಮಕ್ಕೆ ಸ್ವಲ್ಪವಾದರೂ ಸಮಾಧಾನ ನೀಡಿದಂತಾಗುತ್ತದೆ ಎಂದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರ್ಕಾರಿ ಚಿತ್ರಕಲಾ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು, ನಮ್ಮತುಮಕೂರು ಮಾಧ್ಯಮದ ಪ್ರಧಾನ ಸಂಪಾದಕರಾದ ಜಿ.ಎಲ್.ನಟರಾಜು ಮಾತನಾಡಿ, ಈ ಕಾಲೇಜಿನ ಉಳಿವು ಮತ್ತು…
ಚಿತ್ರದುರ್ಗ: ಚಿತ್ರದುರ್ಗ ಗೊಲ್ಲಗಿರಿ ಮಠದ ಯಾದವಾನಂದಶ್ರೀಗಳು ಜಿಲ್ಲೆಯದಾದ್ಯಂತ ದಶಕಗಳಿಂದ ಎಸ್ಟಿ ಮೀಸಲಾತಿ ಹೋರಾಟ ನಡೆಸಿಕೊಂಡು ಬರುತ್ತಿರುವ ಕಾಡುಗೊಲ್ಲರ ಹೋರಾಟದ ನೇತೃತ್ವವಹಿಸಲಿ, ಇಲ್ಲವಾದರೆ ಮಠದ ಪೀಠತ್ಯಾಗ ಮಾಡಲು ಸಿದ್ಧರಾಗಿ ಎಂದು ಕಾಡುಗೊಲ್ಲ ಮುಖಂಡರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಕಾಡುಗೊಲ್ಲ ಒಳಪಂಗಡ ಮೀಸಲಾತಿ ಬೆಂಬಲವಿಲ್ಲ ಎಂಬ ಶ್ರೀಗಳ ಹೇಳಿಕೆಯನ್ನು ಖಂಡಿಸಿ, ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಕಾಡುಗೊಲ್ಲ ಮುಖಂಡರು ನಡೆಸಿದ ಸಭೆಯಲ್ಲಿ ಈ ಆಗ್ರಹ ಕೇಳಿ ಬಂದಿದೆ. ಕಾಡುಗೊಲ್ಲ ಸಮಾಜ ಒಂದು ಉಪಜಾತಿಯಲ್ಲ, ಪ್ರತ್ಯೇಕ ಅಸ್ಮಿತೆ ಹೊಂದಿರುವ ಜಾತಿಯಾಗಿದ್ದು, ನಾವು ಒಳಮೀಸಲಾತಿ ಕೇಳುತ್ತಿಲ್ಲ, ಕಾಡುಗೊಲ್ಲರೇ ಬೇರೆ, ಊರುಗೊಲ್ಲರೇ ಬೇರೆಯಾಗಿದ್ದು ನಮ್ಮ ಆಚರಣೆಗೂ ಅವರ ಆಚರಣೆಗಳಿಗೆ ಬಹಳ ವ್ಯತ್ಯಾಸವಿದೆ. ಇದನ್ನು ಸ್ವಾಮೀಜಿಯವರು ಅರ್ಥಮಾಡಿಕೊಳ್ಳಬೇಕು ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಮಧ್ಯ ಕರ್ನಾಟಕದಲ್ಲಿ ಕಾಡುಗೊಲ್ಲರು ಹೆಚ್ಚಾಗಿ ಇರುವುದರಿಂದ ಮುರುಘಾ ಶರಣರು ಜಾಗವನ್ನು ನೀಡಿ ಮಠ ಸ್ಥಾಪನೆಗೆ ಕೈಜೋಡಿಸಿದರು. ಕಾಡುಗೊಲ್ಲರು ದೇಣಿಗೆ ಸಂಗ್ರಹಿಸಿ ಯಾದವಾನಂದ ಸ್ವಾಮೀಜಿಗೆ…
ನೊಬೆಲ್ ಪ್ರಶಸ್ತಿ ವಿಜೇತ, ಪ್ರಸಿದ್ದ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ಅವರಿಗೆ ಪಶ್ಚಿಮ ಬಂಗಾಳದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಂಗಾಬಿಭೂಷಣ’ ಘೋಷಣೆ ಮಾಡಲಾಗಿದೆ. ಆದರೆ ವಿವಿಧ ಕಾರಣಗಳಿಂದಾಗಿ ಪ್ರಶಸ್ತಿ ಸ್ವೀಕರಿಸದಿರಲು ಅಮಾರ್ತ್ಯ ಸೇನೆ ನಿರ್ಧರಿಸಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸದ್ಯ ಕುಟುಂಬದ ಸದಸ್ಯರ ಜೊತೆ ಯೂರೋಪ್‌ನಲ್ಲಿ ಅಮಾರ್ತ್ಯ ಸೇನ್ ಇದ್ದಾರೆ ಎಂದು ಮೂಲಗಳು ತಿಳಿಸಿದ್ದು ಬಂಗಾಳ ಸರ್ಕಾರದ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಹಲವು ಪ್ರಶಸ್ತಿಗಳೊಂದಿಗೆ ಗೌರವಿಸಲ್ಪಡುವ ಅದೃಷ್ಟವನ್ನು ಹೊಂದಿದ್ದು. ‘ಬಂಗಾಬಿಭೂಷಣ’ ಪ್ರಶಸ್ತಿಯನ್ನು ಇತರರಿಗೆ ನೀಡಬೇಕೆಂದು ತಮದೆ ಬಯಸಿದ್ದಾರೆ ಎಂದು ಅಮಾರ್ತ್ಯ ಸೇನ್ ಅವರ ಪುತ್ರಿ ಅಂತರಾ ದೇವ್ ಸೇನ್ ತಿಳಿಸಿದ್ದಾರೆ. ಪ್ರಶಸ್ತಿ ಸ್ವೀಕಾರ ಮಾಡಬೇಕು ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ಮನವಿ ಮಾಡಿದ ಸಂದರ್ಭದಲ್ಲಿ ತಾವು ಭಾರತದಲ್ಲಿ ಇರುವುದಿಲ್ಲ ಎಂದು ಸೇನ್ ಹೇಳಿದ್ದರು. ಇಂದು ಕೋಲ್ಕತ್ತಾದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಬಂಧನದ ಹಿನ್ನೆಲೆಯಲ್ಲಿ ಟಿಎಂಸಿ ಸರ್ಕಾರ ನೀಡಿರುವ ಪ್ರಶಸ್ತಿ…
ಉತ್ತರ ಕನ್ನಡ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಲ್ಲಿನ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪೂರ್ಣ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನ ನಡೆಸುತ್ತಿರುವ ಹೋರಾಟದಲ್ಲಿ ನಮ್ಮ ಪಕ್ಷ ನಿಲ್ಲುತ್ತದೆ. ವರ್ಷಗಳ ಕಾಲದ ಈ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಖುದ್ಧು ಕ್ರಮ ವಹಿಸಿ ಆದ್ಯತೆ ಮೇರೆಗೆ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಅವರು ಟ್ವೀಟರ್‌ನಲ್ಲಿ ಒತ್ತಾಯಿಸಿದ್ದಾರೆ. ರಾಜ್ಯದ ಕೆಲವೆಡೆ ಮಾತ್ರ ಸುಸರ್ಜಿತ ಆಸ್ಪತ್ರೆಗಳಿವೆ. ತುರ್ತು ಚಿಕಿತ್ಸೆ ಬೇಕೆಂದರು ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಗೆ ಹೋಗಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ. ಉತ್ತರ ಕರ್ನಾಟಕ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಿ…
ಮಧುಗಿರಿ: ಪಟ್ಟಣದ ಪಾವಗಡ ಸರ್ಕಲ್ ಬಳಿ ಇರುವ ಅಂಬೇಡ್ಕರ್ ಪುತ್ಥಳಿಯ ಆವರಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಇವರ ಸಹಕಾರದೊಂದಿಗೆ ಹೊರಗುತ್ತಿಗೆ ಕಾರ್ಮಿಕರು ಬೃಹತ್ ಅಮರಣಾಂತಿಕ ಹೋರಾಟ ಆರಂಭಿಸಿದ್ದಾರೆ. ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಅಲ್ಪಸಂಖ್ಯಾತರ ಇಲಾಖೆ ವಿದ್ಯಾರ್ಥಿ ನಿಲಯಗಳ ಹೊರಗುತ್ತಿಗೆ ಕಾರ್ಮಿಕರಿಂದ ಬೃಹತ್ ಅಮರಣಾಂತಿಕ ಹೋರಾಟ ನಡೆಯತಿದೆ. ಹೋರಾಟವನ್ನುದ್ದೇಶಿಸಿ ಮಾತನಾಡಿದ ಡಾ. ದೊಡ್ಡೇರಿ ಕಣಿಮಯ್ಯ, ವಿವಿಧ ಇಲಾಖೆಗಳ ಒಳಗೊಂಡ ಡಾಟಾ ಎಂಟ್ರಿ ಆಪರೇಟರ್, ಚಾಲಕರು, ಸಹಾಯಕರು ಸೇರಿದಂತೆ ‘ಸಿ’ ಮತ್ತು ‘ಡಿ’ ವೃಂದದ ಹುದ್ದೆಗಳಿಗೆ ಏಜೆನ್ಸಿಗಳ ಮೂಲಕ ಹೊರಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳುತ್ತಿವೆ. ಆದರೆ, ಈ ಇಲಾಖೆಗಳು ನೌಕರರನ್ನು ಜೀತದಾಳುಗಳಂತೆ ದುಡಿಸಿಕೊಂಡರೆ, ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ನೀಡದೆ, ಏಜೆನ್ಸಿಗಳು ಶೋಷಿಸುತ್ತಿವೆ ಎಂದು ಆರೋಪಿಸಿದರು. ಹೊರ ಗುತ್ತಿಗೆ ನೌಕರರಿಗೂ ಸರ್ಕಾರಿ ಖಜಾನೆ ಮೂಲಕ ವೇತನ ಪಾವತಿಸಲು ಖಜಾನೆ ಮತ್ತು ಆರ್ಥಿಕ ಇಲಾಖೆ ಕ್ರಮ ತೆಗೆದುಕೊಳ್ಳಬೇಕು.…
ತುಮಕೂರು: ತೋಟದ ಕೆಲಸಕ್ಕೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಚೌಡೇನಹಳ್ಳಿಯಲ್ಲಿ ನಡೆದಿದೆ. ಕರಿಯಣ್ಣ (50) ಕರಡಿ ದಾಳಿಗೆ ಒಳಗಾದ ರೈತನಾಗಿದ್ದು, ಇಂದು ಬೆಳಗ್ಗೆ 6 ಗಂಟೆ ಸಮಯದಲ್ಲಿ ತೋಟದ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಹಲಸಿನ ಮರದಲ್ಲಿದ್ದ ಕರಡಿ ರೈತನ ಮೇಲೆ ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ. ಕರಡಿ ದಾಳಿಯಿಂದ ಗಂಭೀರ ಗಾಯಗೊಂಡ ಕರಿಯಣ್ಣ ತಪ್ಪಿಸಿಕೊಂಡು ರಕ್ತದ ಮಡುವಿನಲ್ಲೇ ರಸ್ತೆ ಬದಿ ಕುಳಿತಿದ್ದರು. ಕೂಡಲೇ ಸ್ಥಳೀಯರು ರೈತನ ಸಹಾಯಕ್ಕೆ ಬಂದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಸತತ 1 ಗಂಟೆಯಿಂದ ಆಂಬುಲೆನ್ಸ್ ಗೆ ಕರೆ ಮಾಡಿದರೂ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಪಂದಿದ ಕಾರಣ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ತೀವ್ರ ಸಮಸ್ಯೆ ಉಂಟಾಗಿದ್ದು, ತುರ್ತು ಸೇವೆಗೆ ಸಿಗಬೇಕಾದ ಆಂಬುಲೆನ್ಸ್ ಊಟಕಿಲ್ಲದ ಉಪ್ಪಿನಕಾಯಿಯಂತಾಗಿದೆ ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…