Subscribe to Updates
Get the latest creative news from FooBar about art, design and business.
- ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
- ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ
- ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ
- ತುಮಕೂರು: ಮತ್ತೆ ಮೂರು ನವಿಲುಗಳು ಸಾವು
- ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ
- ಮೇ 9ರಂದು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ತುಮಕೂರಿನಿಂದ 50 ಸಾವಿರ ಜನ
- ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
- ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
Author: admin
ತುರುವೇಕೆರೆ: ಶಾಲಾ ಮಕ್ಕಳ ಶೌಚಾಲಯದ ಗುಂಡಿ ಕುಸಿದು ಬಿದ್ದು ವರ್ಷಗಳು ಕಳೆದರೂ ಅಧಿಕಾರಿಗಳು ಹಾಗೂ ಸಂಬಂಧ ಪಟ್ಟವರು ಈ ಕಡೆಗೆ ಗಮನ ಹರಿಸದೇ ನಿರ್ಲಕ್ಷಿಸಿದ್ದು ಮಕ್ಕಳ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಹೊಂದಿಕೊಂಡಂತೆ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳು ಬಳಸುತ್ತಿರುವ ಶೌಚಾಲಯದ ಗುಂಡಿ ವರ್ಷಗಳ ಹಿಂದೆ ಕುಸಿದು ಬಿದ್ದಿದೆ. ಆದರೆ ಈವರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಲಿ, ಪಟ್ಟಣ ಪಂಚಾಯತಿ ಅಧಿಕಾರಿಗಳಾಗಲಿ, ಶಾಲಾ ಶಿಕ್ಷಕ ಸಿಬ್ಬಂದಿಯಾಗಲಿ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗದೇ ಮಕ್ಕಳ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಶಾಲೆಯ ಮುಂಭಾಗದಲ್ಲಿ ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ ಎಂಬ ಬರಹ ಕಾಣುತ್ತದೆ. ಆದರೆ, ದೇಗುಲದಂತೆ ಕಾಣಬೇಕಿದ್ದ ಶಾಲೆಯನ್ನು ಶಿಕ್ಷಕ ವರ್ಗ, ಸಿಬ್ಬಂದಿ ವರ್ಗ ಇಷ್ಟೊಂದು ನಿರ್ಲಕ್ಷಿಸಿದ್ದಾದರೂ ಯಾಕೆ ಅನ್ನೋ ಪ್ರಶ್ನೆಗಳು ಕೇಳಿ ಬಂದಿವೆ. ಶೌಚಾಲಯದ ಗುಂಡಿ ಕುಸಿದು ತೆರೆದುಕೊಂಡ ಸ್ಥಿತಿಯಲ್ಲಿದೆ. ಈ ಗುಂಡಿಗೆ ಯಾರಾದ್ರೂ ಮಕ್ಕಳು…
ಕಾರ್ತಿಕ ಸೋಮವಾರ ಹಿನ್ನಲೆ ಹುಟ್ಟೂರು ಹರದನಹಳ್ಳಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಭೇಟಿ ನೀಡಿದ್ದಾರೆ. ಮನೆ ದೇವರಾದ ದೇವೇಶ್ವರ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಮಹಾ ರುದ್ರಾಭಿಷೇಕ ಪೂಜೆಯಲ್ಲಿ ಗೌಡರ ಕುಟುಂಬ ಸದಸ್ಯರಾದ ಪತ್ನಿ ಚನ್ನಮ್ಮ, ಮಗ ಹೆಚ್.ಡಿ ರೇವಣ್ಣ, ಸೊಸೆ ಭವಾನಿ ರೇವಣ್ಣ ಭಾಗಿಯಾಗಿದ್ದರು. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿರೋ ದೇವೇಶ್ವರ ದೇವಾಲಯಕ್ಕೆ ಕಳೆದ ಒಂದು ವರ್ಷದಿಂದ ಇದೇ ಮೊದಲ ಬಾರಿಗೆ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಬ್ಬು ಬೆಳೆಗೆ ಬೆಲೆ ನಿಗದಿ ಪಡಿಸಲು ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭೇಟಿಯಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ವಿಧಾನಸಭೆಯಲ್ಲೂ ಪ್ರಸ್ತಾಪ ಮಾಡಿ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ಸಿದ್ದರಾಮಯ್ಯ ರೈತರಿಗೆ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರು ಈ ಹಿಂದೆ ಹಲವು ಬಾರಿ ಕಬ್ಬು ಸೇರಿದಂತೆ ಎಲ್ಲ ಬಗೆಯ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಪಡಿಸುವಂತೆ ಹಾಗೂ ರೈತರ ನಾನಾ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಸರಕಾರಕ್ಕೆ ಪತ್ರ ಬರೆದಿದ್ದರು. ಈ ಬಗ್ಗೆ ಅನೇಕ ವಿವರಗಳನ್ನು ಆಗಾಗ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದರು. ಕಬ್ಬು ಮತ್ತೆ ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ರೈತರು ಕಳೆದ ಒಂದು ವಾರದಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಪ್ರತಿಭಟನಾನಿರತ ರೈತರ ಭೇಟಿ ವೇಳೆ ಮಾಜಿ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಆತ್ಮಾನಂದ ಮತ್ತಿತರರು ಸಿದ್ದರಾಮಯ್ಯ…
ರಾಜ್ಯಾದ್ಯಂತ ಮಾತ್ರವಲ್ಲದೆ ದೇಶದ ಗಮನ ಸೆಳೆದ ಪೇ ಸಿಎಂ ಅಭಿಯಾನ ಜೋರಾಗುತ್ತಿದೆ. ಕಲಬುರಗಿ ಜಿಲ್ಲೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮನ ಹಿನ್ನೆಲೆ ಕಲಬುರಗಿಯಲ್ಲಿ ಪೇ ಸಿಎಂ ಪೋಸ್ಟರ್ ಗಳು ರಾರಾಜಿಸುತ್ತಿವೆ. ಸಂಗಮೇಶ್ವರ ನಗರ, ಟ್ಯಾಂಕ್ ಬಂಡ್ ರಸ್ತೆ ಸೇರಿದಂತೆ ಅನೇಕ ಕಡೆ ಪೇ ಸಿಎಂ ಪೋಸ್ಟರ್ ಗಳು ರಾರಾಜಿಸುತ್ತಿವೆ. ತಡರಾತ್ರಿ ಪೇ ಸಿಎಂ ಪೋಸ್ಟರ್ ಅಂಟಿಸಿರೋ ಕೈ ಕಾರ್ಯಕರ್ತರು ಅಭಿಯಾನ ತೀವ್ರಗೊಳಿಸಿದ್ದಾರೆ. ವಾರದ ಹಿಂದೆ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಅಂತ ಬಿಜೆಪಿ ಮುಖಂಡರು ಪೋಸ್ಟರ್ ಅಂಟಿಸಿದ್ದರು. ಈ ಘಟನೆ ಚಿತ್ತಾಪುರ ಕ್ಷೇತ್ರ ಹಾಗೂ ಕಲ್ಬುರ್ಗಿಯಲ್ಲಿ ನಗರದಲ್ಲೂ ಹಲವಾರು ಗಲಾಟೆಗಳಿಗೆ ಕಾರಣವಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ಕೂಡ ದಾಖಲಾಗಿದೆ. ಕಾಂಗ್ರೆಸ್ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡ್ತೀನಿ ಎಂಬ ವಿವಾದಾತ್ಮಕ ಹೇಳಿಕೆ ಕೇಳಿಬಂದಿತ್ತು. ಹಾಗಾಗಿ, ಬಿಜೆಪಿ ನಾಯಕರಿಗೆ ಟಕ್ಕರ್ ಕೊಡಲು ಕೈ ಕಾರ್ಯಕರ್ತರು ಪೇ ಸಿಎಂ ಪೋಸ್ಟರ್ ಅಂಟಿಸಿದ್ದಾರೆ. ಈ ಹಿಂದೆ ಸಿಎಂ ನಿವಾಸದ…
ಮದುವೆ ಆಗಲು ಒಪ್ಪಲಿಲ್ಲ ಅಂತ ಲಿವ್ ಒನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಯಸಿಯನ್ನು ಪ್ರಿಯಕರ 35 ತುಂಡುಗಳಾಗಿ ಕತ್ತರಿಸಿ ಕೊಂದು 18 ದಿನಗಳ ನಂತರ ಕಾಡಿನಲ್ಲಿ ಬಿಸಾಡಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಅಫ್ತಾಬ್ ಅಮಿನ್ ಪೂನವಾಲಾ(28) ಪ್ರೇಯಸಿ ಶ್ರದ್ಧಾ ಎಂಬಾಕೆಯನ್ನು ಮೇ 18 ರಂದು ಹತ್ಯೆಗೈದು ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪ್ರೇಯಸಿಯನ್ನು ಕೊಚ್ಚಿ ಕೊಲೆ ಮಾಡಿದ್ದೂ ಅಲ್ಲದೇ ಆಕೆಯನ್ನು ತುಂಡು ತುಂಡಾಗಿ ಕತ್ತರಿಸಿ ಪ್ರತಿ ದಿನ ರಾತ್ರಿ 2 ಗಂಟೆಗೆ ಕಾಡಿಗೆ ಹೋಗಿ ಬಿಸಾಡುತ್ತಿದ್ದ. ಶ್ರದ್ಧಾಳ ತುಂಡರಿಸಿದ ದೇಹವನ್ನು ಫ್ರಿಡ್ಜ್ ನಲ್ಲಿ ಕಾಯ್ದಿರಿಸಿದ್ದ ಅಪ್ತಾಬ್, ಮೆಹ್ರುಲ್ ಕಾಡಿನಲ್ಲಿ ದಿನಕ್ಕೊಂದು ಜಾಗದಲ್ಲಿ ದೇಹದ ತುಂಡುಗಳನ್ನು ಬಿಸಾಡುತ್ತಿದ್ದ. 26 ವರ್ಷದ ಶ್ರದ್ಧಾ ಮುಂಬೈನಲ್ಲಿ ಬಹುರಾಷ್ಟ್ರೀಯ ಕಂಪನಿಯಲ್ಲಿ ಕಾಲ್ ಸೆಂಟರ್ ನಲ್ಲಿ ಕೆಲಸಕ್ಕೆ ಸೇರಿದ್ದು ಅಲ್ಲಿ ಅಫ್ತಾಬ್ ಪರಿಚಯವಾಗಿದೆ. ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿದ್ದು ಮನೆಯಲ್ಲಿ ಮದುವೆ ಪ್ರಸ್ತಾಪ ಮಾಡಿದ್ದಾರೆ. ಮನೆಯಲ್ಲಿ ಈ ಸಂಬಂಧಕ್ಕೆ ಒಪ್ಪಿಗೆ ದೊರೆಯದ ಕಾರಣ ಇಬ್ಬರೂ ದೆಹಲಿಯಲ್ಲಿ…
ಮುಂಬೈ: 32 ಕೋಟಿ ಮೌಲ್ಯದ 61 ಕಿಲೋ ಚಿನ್ನವನ್ನ ವಶಪಡಿಸಿಕೊಂಡು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಏಳು ಜನರನ್ನು ಬಂಧಿಸಿದ ಘಟನೆ ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಕತಾರ್ ಏರ್ ವೇಸ್ ವಿಮಾನದಲ್ಲಿ ಮುಂಬೈಗೆ ಬಂದಿದ್ದರು. ಭಾರತಕ್ಕೆ ಚಿನ್ನ ತರುವುದಾಗಿ ಹಣದ ಆಮಿಷ ಒಡ್ಡಲಾಗಿದ್ದು, ಅವರಿಗೆ ಭಾರತದಲ್ಲಿನ ಕಸ್ಟಮ್ಸ್ ಕಾನೂನುಗಳ ಬಗ್ಗೆ ತಿಳಿದಿರಲಿಲ್ಲ. ಹಾಗಾಗಿ ಇವರೆಲ್ಲರೂ ಅಷ್ಟೊಂದು ಚಿನ್ನವನ್ನ ತಂದರು ಎನ್ನಲಾಗ್ತಿದೆ. ಇನ್ನು ಎಲ್ಲಾ ಆರೋಪಿಗಳನ್ನ ಪೊಲೀಸರು ಬಂಧಿಸಿದ ನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ: ಗೋವಿನಜೋಳ ಮಷಿನ್ ಚಕ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಬಾಗಲಕೋಟೆ ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ. ರೇಣುಕಾ ಮಾದರ (45) ಮೃತ ದುರ್ದೈವಿ. ಕೂಲಿ ಕೆಲಸ ಬಂದಿದ್ದ ರೇಣುಕಾ, ಕೆಲಸ ಮಾಡುವಾಗ ಗೋವಿನಜೋಳ ಮಷಿನ್ ಚಕ್ರಕ್ಕೆ ಸೀರೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕಾಲೇಜು ಹಂತದಲ್ಲಿಯೂ ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರ 2021ನೇ ಸಾಲಿನ ಆಗಸ್ಟ್ 7ರಂದು ಹೊರಡಿಸಿದ್ದ ಎರಡು ಆದೇಶಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಡಿ ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ ಕಲಿಕೆ ಕಡ್ಡಾಯಗೊಳಿಸಲಾಗಿತ್ತು. ಆದರೆ ಇದಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರ ಕನ್ನಡ ಕಲಿಕೆ ಕಡ್ಡಾಯಕ್ಕೆ ಅಡ್ಡಗಾಲು ಹಾಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊಲ್ಲಾಪುರ: ಅಪಘಾತದಲ್ಲಿ ಮರಾಠಿ ನಟಿ ಕಲ್ಯಾಣಿ ಕುರಾಳೆ ಸಾವನ್ನಪ್ಪಿದ ಘಟನೆ ಸಾಂಗ್ಲಿ-ಕೊಲ್ಹಾಪುರ ಹೆದ್ದಾರಿಯ ಹಾಲೊಂಡಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. 32 ವರ್ಷದ ಕಲ್ಯಾಣಿ ಪ್ರಯಾಣಿಸುತ್ತಿದ್ದ ಮೋಟಾರ್ ಸೈಕಲ್ ಗೆ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ತುಜ್ಯಹತ್ ಜೀವ್ ರಂಗಾ ಟಿವಿ ಧಾರಾವಾಹಿಯಲ್ಲಿ ಕಾಣಿಸಿಕೊಂಡಿರುವ ಕಲ್ಯಾಣಿ ಕುರಾಳೆ ಜಾಧವ್ ಅವರು ಶನಿವಾರ ಸಂಜೆ ಮನೆಗೆ ತೆರಳುತ್ತಿದ್ದಾಗ ಗಾಯಗೊಂಡ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತಲುಪಿದಾಗ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಲಬುರಗಿ : ಶಾಸಕ ಪ್ರಿಯಾಂಕ್ ಖರ್ಗೆಯನ್ನ ಶೂಟ್ ಮಾಡುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ನೀವು ಶೂಟ್ ಮಾಡಿ ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ ಎಂದು ಮಣಿಕಂಠ ರಾಠೋಡ್ ಹೇಳಿದರು. ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಣಿಕಂಠ ಬಂಧನಕ್ಕಾಗಿ ಕಾಂಗ್ರೆಸ್ ಕೂಡ ಆಗ್ರಹಿಸಿತ್ತು. ಕಲಬುರಗಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿತ್ತು. ಭಾನುವಾರ ಮಧ್ಯರಾತ್ರಿ ಹೈದರಾಬಾದ್ ನಲ್ಲಿ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy