Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ಮತ್ತೆ ತಾರಕಕ್ಕೇರಿದ್ದು ಇದೀಗ ಮಹಾರಾಷ್ಟ್ರದಲ್ಲಿ ಮತ್ತೆ ಉದ್ದಟತನ ತೋರಲಾಗಿದೆ. ನವನಿರ್ಮಾಣ ಸೇನೆ ಕಾರ್ಯಕರ್ತರು ಕರ್ನಾಟಕ ಬ್ಯಾಂಕ್ ಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರದಲ್ಲಿ ನಾಸೀಕ್ ನಲ್ಲಿ ರಾಜ್ ಠಾಕ್ರೆ ನೇತೃತ್ವದ ನವ ನಿರ್ಮಾಣ ಸೇನೆ ಕಾರ್ಯಕರ್ತರು ಭಗವಾ ಧ್ವಜ ಹಿಡಿದು ಕರ್ನಾಟಕ ಬ್ಯಾಂಕ್ ಬಾಗಿಲು ಮತ್ತು ಬೋರ್ಡ್ ಗೆ ಮಸಿ ಬಳಿದು ಕಿಡಿಗೇಡಿತನ ಪ್ರದರ್ಶಿಸಿದ್ದಾರೆಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಸಿಧದುರ್ಗ ಜೆ.ಕುಡಾಲ ಬಸ್ ನಿಲ್ದಾಣದ ಬಳಿ ಎಂಎನ್ ಎಸ್ ಕರ್ನಾಟಕದ ಸರ್ಕಾರಿ ಬಸ್ ಗಳಿಗೆ ಮಸಿ ಬಳಿದು ಪುಂಡಾಟ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರೂಪಾ ಸಾವಿನ ಸುತ್ತ ಅನುಮಾನಗಳು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ರೂಪಾ ಅವರ ಪತಿ ಆರಂಭದಲ್ಲಿ ತಲೆಗೆ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆಂದು ಹೇಳಿದ್ದರು. ಆದರೆ ಪೋಸ್ಟ್ ಮಾರ್ಟಂ ವರದಿ ಪ್ರಕಾರ ತಲೆಗೆ ಗುಂಡು ತಗುಲಿ ಮೃತಪಟ್ಟಿದ್ದಾರೆ. ಹೀಗಾಗಿ ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ ಪೊಲೀಸ್ ತನಿಖೆ ಆರಂಭಗೊಂಡಿದೆ. ರೂಪಾ ಪತಿ ಡಾ.ಕೆ.ಜಿ.ರವಿ ನಡೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಸಹಜ ಸಾವು ಎಂಬಂತೆ ಅವರು ಬಿಂಬಿಸಲು ಮುಂದಾದ ರೀತಿ ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯ ಮನೆಯಲ್ಲಿ ಡಾ.ರೂಪಾ ಸೋಮವಾರ ಅನುಮಾಸ್ಪದವಾಗಿ ಮೃತಪಟ್ಟಿದ್ದರು. ವಿಷಯ ತಿಳಿದ ರವಿ ಕೂಡಲೇ ತುರುವನೂರು ರಸ್ತೆಯ ಆಸ್ಪತ್ರೆಗೆ ಮೃತದೇಹ ಸಾಗಿಸಿದ್ದಾರೆ. ಮನೆಯಲ್ಲಿ ಕಾಲುಜಾರಿ ಬಿದ್ದು ತಲೆಗೆ ಪೆಟ್ಟುಬಿದ್ದು ಮೃತಪಟ್ಟಿದ್ದಾಗಿ ರವಿ ಮಾಹಿತಿ ನೀಡಿದ್ದರು. ಆದರೆ ರೂಪಾ ಅವರ ಸಹೋದ್ಯೋಗಿಗಳು ಹಾಗೂ ಆಸ್ಪತ್ರೆಯ ವೈದ್ಯರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ತಲೆಯಲ್ಲಿ ರಂಧ್ರವಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಿತ್ರದುರ್ಗ…
ಆಂಟೋನಿ ಬೇಗೂರು ಈ ಧ್ವಜ ದಿನದಂದು, ದೇಶದ ನಿಜವಾದ ವೀರರಾದ ರಕ್ಷಣಾ ಪಡೆಗಳ ತ್ಯಾಗವನ್ನು ಎಲ್ಲರೂ ಗೌರವಿಸುತ್ತಿದ್ದಾರೆ. ಅದೇ ಸಮಯದಲ್ಲಿ, ಅವರು ತಮ್ಮ ಕುಟುಂಬಗಳಿಗೆ ಸಹಾಯ ಮಾಡಲು ಈ ದಿನದಂದು ನೇರವಾಗಿ ಕೊಡುಗೆ ನೀಡುತ್ತಿದ್ದಾರೆ. ನಮ್ಮ ದೇಶವನ್ನು ಹಗಲಿರುಳು ರಕ್ಷಿಸುವ ಮೂರು ಸಶಸ್ತ್ರ ಪಡೆಗಳ ತ್ಯಾಗವನ್ನು ಗೌರವಿಸಲು ಪ್ರತಿ ವರ್ಷ ಡಿಸೆಂಬರ್ 7 ಅನ್ನು ಹಿರಿಯರ ಧ್ವಜ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವೆಟರನ್ಸ್ ಧ್ವಜ ದಿನವನ್ನು 1949 ರಿಂದ ಆಚರಿಸಲಾಗುತ್ತದೆ. ಬಿಸಿಲು, ಹಿಮ ಮತ್ತು ಮಳೆಯನ್ನು ಲೆಕ್ಕಿಸದೆ ಅತ್ಯಂತ ಆಧುನಿಕ ತಂತ್ರಜ್ಞಾನದೊಂದಿಗೆ ಗಡಿಗಳು, ಸಮುದ್ರ ಮತ್ತು ಆಕಾಶದ ಉದ್ದವನ್ನು ಹೊಂದಿರುವ ಮೂರು ಸಶಸ್ತ್ರ ಪಡೆಗಳ ಕುಟುಂಬಗಳ ಹಿತಾಸಕ್ತಿಗಳನ್ನು ರಕ್ಷಿಸುವುದು ನಮ್ಮ ಸಾಮಾಜಿಕ ಕರ್ತವ್ಯವಾಗಿದೆ. ಧ್ವಜ ದಿನದಂದು ಧ್ವಜ ಮಾರಾಟ ಮತ್ತು ದೇಣಿಗೆ ಮೂಲಕ ಸಂಗ್ರಹವಾದ ಹಣವನ್ನು ಅಂಗವಿಕಲರ ಪುನರ್ವಸತಿ ಮತ್ತು ಮಾಜಿ ಸೈನಿಕರ ಅಭಿವೃದ್ಧಿಗೆ ಬಳಸಲಾಗುತ್ತದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ…
ಗುಜರಾತ್, ಹಿಮಾಚಲ ಪ್ರದೇಶದ ಮಾದರಿಯಂತೆ ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿರಿಯರಿಗೆ ಟಿಕೆಟ್ ನೀಡುವುದಿಲ್ಲ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆಯಂತೆ. ಗುಜರಾತ್ ಚುನಾವಣೆ ಮುಗಿದ ಬಳಿಕ ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಭಾಗಿಯಾಗಿದ್ದರು. ಮಾಜಿ ಸಿಎಂ ಯಡಿಯೂರಪ್ಪ ಅವರಂತೆ ಹಿರಿಯ ನಾಯಕರು ಅವರೇ ಸ್ವಯಂ ನಿವೃತ್ತಿ ಘೋಷಿಷಿಕೊಳ್ಳಬೇಕು. ಹಿರಿಯ ಸಚಿವರಿಗೆ ಮನವರಿಕೆ ಮಾಡಿಕೊಡುವಂತೆ ಕೆಲವು ನಾಯಕರಿಗೆ ನಿರ್ದೇಶನ ನೀಡಬೇಕು. ಸ್ವಯಂ ನಿವೃತ್ತಿ ನಿರ್ಧಾರ ತಮ್ಮದೇ, ಪಕ್ಷದಿಂದ ಮಾಡಿಸಿದ್ದಲ್ಲ. ಪಕ್ಷಕ್ಕೂ ತಮ್ಮ ನಿರ್ಧಾರಕ್ಕೂ ಸಂಬಂಧ ಇಲ್ಲ ಎಂಬುದನ್ನು ಸ್ಪಷ್ಟವಾಗಿ ಘೋಷಿಸಬೇಕು. ಕಾರ್ಯಕರ್ತರ ವಲಯ ಹಾಗೂ ನಿಮ್ಮ ಕ್ಷೇತ್ರಗಳಲ್ಲಿ ಗೊಂದಲ ಆಗದಂತೆ ನಿಗಾ ವಹಿಸಬೇಕು. ಈ ಸಂದೇಶವನ್ನು 73 ವರ್ಷದ ಮೀರಿದ ಹಿರಿಯರಿಗೆ ತಲುಪಿಸುವಂತೆ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ಗೆ ಹೈಕಮಾಂಡ್ ಸೂಚನೆ ನೀಡಿದೆ. ಬೂತ್ ಮಟ್ಟದಲ್ಲಿ…
ಬೆಳಗಾವಿ: ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 8 ರಿಂದ 12 ಕರವೇ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿತ್ತು. ಮಹಾರಾಷ್ಟ್ರ ನೋಂದಣಿಯ ಲಾರಿಯ ಮೇಲೆ ಕಲ್ಲು ತೂರಿ ಗಾಜು ಪುಡಿ ಪುಡಿ ಮಾಡಲಾಗಿತ್ತು. ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಆದ್ರೆ ಐಪಿಸಿ ಸೆಕ್ಷನ್ 143, 147, 341, 427, 149 ಅಡಿ 12 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಿರೇಬಾಗೇವಾಡಿ ಠಾಣೆಯಲ್ಲಿ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1100 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ಖಾಲಿ ಇರುವ 1000 ಅಬಕಾರಿ ಪೇದೆ, 100 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಬಕಾರಿ ಇಲಾಖೆಯಿಂದ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಹೊಸ ಮದ್ಯ ತಯಾರಿಕೆಗೆ ಉದ್ಯಮಿಗಳು ಮುಂದೆ ಬಂದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿ ಅನುಮೋದನೆ ನೀಡಲಿದ್ದು, ಇದರಿಂದ ರಾಜ್ಯದಲ್ಲಿ ಉದ್ಯೋಗ ಸೃಜನೆಯಾಗುತ್ತದೆ ಎಂದು ತಿಳಿಸಿದ್ದಾರೆ, ಮದ್ಯದ ದರ ಪರಿಷ್ಕರಣೆ ವಿಚಾರ ಸರ್ಕಾರದ ಮುಂದಿಲ್ಲ. ನಿರೀಕ್ಷೆಗೂ ಮೀರಿ ಆದಾಯ ಸಂಗ್ರಹವಾಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಾಮರಾಜನಗರ: ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಹಾಸನೂರು ಬಳಿ ಕಾಡಾನೆಗೆ ತಿನ್ನಲು ಕಬ್ಬು ನೀಡಿದ ಮೈಸೂರು ಮೂಲದ ಲಾರಿ ಚಾಲಕನಿಗೆ ಅರಣ್ಯ ಇಲಾಖೆ 75 ಸಾವಿರ ರೂಪಾಯಿ ದಂಡ ವಿಧಿಸಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ನಂಜನಗೂಡು ತಾಲೂಕಿನ ಸಿದ್ದರಾಜು ಎನ್ನುವ ಲಾರಿ ಚಾಲಕ, ಡಿಸೆಂಬರ್ 3 ರಂದು ಕಬ್ಬು ತುಂಬಿಕೊಂಡು ತಮಿಳುನಾಡಿಗೆ ಹೋಗುತ್ತಿದ್ದ. ಆ ವೇಳೆ ಗಡಿ ಭಾಗದ ತಮಿಳುನಾಡಿನ ಹಾಸನೂರು ಬಳಿ ಕಾಡಾನೆಗೆ ಕಬ್ಬು ನೀಡಿದ್ದಾನೆ. ಇದನ್ನು ನೋಡಿ ಅರಣ್ಯಧಿಕಾರಿಗಳು ಚಾಲಕನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ 75,000 ರೂ. ದಂಡ ಕಟ್ಟಿಸಿಕೊಂಡಿದ್ದಾರೆ. ಕರೆಪಳ್ಳಂ ಚೆಕ್ಪೋಸ್ಟ್ನಿಂದ ಮೂರು ಕಿಲೋಮೀಟರ್ ದೂರದಲ್ಲಿ ಕಬ್ಬು ತುಂಬಿದ್ದ ಲಾರಿ ನಿಂತಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಲಾರಿ ಚಾಲಕ ರಾಷ್ಟ್ರೀಯ ಹೆದ್ದಾರಿ ಬಳಿ ಇದ್ದ ಕಾಡಾನೆಗೆ ತಿನ್ನಲು ಕಬ್ಬು ತೆಗೆದುಕೊಂಡು ಹೋಗುತ್ತಿದ್ದನ್ನು ನೋಡಿದ್ದಾರೆ. ಬಳಿಕ ವಿಚಾರಣೆ ವೇಳೆ ಆನೆಗೆ ಕಬ್ಬು ನೀಡಿದ್ದನ್ನು ಲಾರಿ ಚಾಲಕ ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ 75 ಸಾವಿರ…
ನವದೆಹಲಿ : ಇಂದಿನಿಂದ ಡಿ.29 ರವರೆಗೆ 17 ದಿನಗಳ ಕಾಲ ಸಂಸತ್ತಿನ ಚಳಿಗಾಲದ ಅಧಿವೇಶನದ ಕಲಾಪ ನಡೆಯಲಿದೆ. ಈಗಾಗಲೇ 16 ಮಸೂದೆಗಳು ಮಂಡನೆಗೆ ಸಿದ್ಧವಾಗಿದೆ. ಡಿಸೆಂಬರ್ 7 ರಿಂದ ಹಾಲಿ ಕಟ್ಟಡದಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸಲು ಸಿದ್ಧತೆಗಳು ಭರದಿಂದ ಸಾಗಿವೆ. ಇನ್ನು ಅಧಿವೇಶನದಲ್ಲಿ ಕೋವಿಡ್ ಹೊರತುಪಡಿಸಿ ರಷ್ಯಾ-ಉಕ್ರೇನ್ ಯುದ್ಧವು ಸಾಗರೋತ್ತರ ವಿತರಣೆಗಳ ಮೇಲೆ ಪರಿಣಾಮ ಬೀರುವುದು ಸೇರಿದಂತೆ ಹಲವು ಮುಖ್ಯ ವಿಚಾರಗಳ ಕುರಿತಂತೆ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾವಗಡ: ತಾಲ್ಲೂಕಿನ ನಲ್ಲದಿಗಬಂಡೆ ತಾಂಡ ಗ್ರಾಮದಲ್ಲಿ ಗೋರ್ಸಿ ಕೋಡಿ ತಾಲೂಕು ಘಟಕ ವತಿಯಿಂದ ನಾಯಕಿರ್ಧನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯವನ್ನು ಸಂತ ಶ್ರೀ ಸೇವಾಲಾಲ್ ಭೋಕರ್ಯದ ಮೂಲಕ ಪ್ರಾರಂಭಿಸಲಾಯಿತು. ಪ್ರಾಸ್ತಾವಿಕ ನುಡಿ ರಮೇಶ್ ಬಾಬು ರಾತೋಡ್, ಈ ನಾಯಕಿರ್ಧನ್ ವಿಶೇಷತೆಯ ಬಗ್ಗೆ ತಿಳಿಸಿಕೊಟ್ಟರು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಸಂತ್ ರಾವ್ ನಾಯಕ್ ರಾಥೋಡ್ 12 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿರುವ ನೆನಪಿಗೋಸ್ಕರ ದೇಶಾದ್ಯಂತ ಈ ದಿನವನ್ನು ನಾಯಕೀರ್ ಧನ್ ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ತಾಂಡಾದ ನಾಯಕ್ ಕಾರ್ಬಾರಿ ಶಂಕ್ರನಾಯಕ್ ಡಾವ ಪುಟ್ಟ ನಾಯಕ್, ಗೋರ್ಸಿಕ್ವಾಡಿ ತುಮಕೂರು ಜಿಲ್ಲಾ ಸಂಯೋಜಕರಾದ ವೆಂಕಟೇಶ್ ಚೌಹಾನ್, ಭೀಮಾಸತ್ತಿ ಗ್ರಾಮೀಣಾಭಿವೃದ್ಧಿ ಅಧ್ಯಕ್ಷರು ಹಾಗೂ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿಯಾದ ರಮೇಶ್ ಬಾಬು ರಾತೋಡ್, ಗೋರ್ಸೇನಾ ಪಾವಗಡ ತಾಲ್ಲೂಕು ಘಟಕ ಅಧ್ಯಕ್ಷರಾದ ಜಗದೀಶ್ ನಾಯಕ್ ಗೌರಾಧ್ಯಕ್ಷರಾದ ಗೋವಿಂದ ನಾಯಕ್, ಗೋರ್ಸಿಕ್ವಾಡಿ ತಾಲೂಕು ಸಂಚಾಲಕರಾದ ಪ್ರಕಾಶ್ ನಾಯಕ್, ತಾಲೂಕು ಅಕ್ಷರ ದಾಸೋಹ ಅಧಿಕಾರಿಯಾದ ಶಂಕ್ರಾಯಕ್ ,ತಾಂಡಾದ ಗ್ರಾಪಂ…
ಧಾರವಾಡ: ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿರುವಾಗಲೇ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡಲು ಮುಂದಾಗಿದ್ದರು. ಆದರೆ ಕೊನೇ ಕ್ಷಣದಲ್ಲಿ ಅವರ ಭೇಟಿ ರದ್ದಾಗಿದೆ. ಯಾವುದೇ ಕಾರಣಕ್ಕೂ ಮಹಾ ಸಚಿವರಿಗೆ ರಾಜ್ಯ ಪ್ರವೇಶ ಮಾಡಲು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಧಾರವಾಡದಲ್ಲಿ ಪ್ರತಿಕ್ರಿಯಿಸಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ, ಮಹಾರಾಷ್ಟ್ರ ಸಚಿವರಿಗೆ ಉತ್ತರಿಸಲೆಂದೇ 100 ವಾಹನಗಳಲ್ಲಿ ನಾವು ಬೆಳಗಾವಿಗೆ ಹೊರಟಿದ್ದೇವೆ. ಬೆಳಗಾವಿಯಲ್ಲಿ 1000 ಕನ್ನಡ ಬಾವುಟ ಹಾರಿಸುತ್ತೇವೆ. ಅದ್ಯಾರು ನಮ್ಮನ್ನು ತಡೆಯುತ್ತಾರೆ ನೋಡೋಣ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಸಚಿವರು ಪದೇ ಪದೇ ಕರ್ನಾಟಕವನ್ನು ಅವಮಾನಿಸುತ್ತಿದ್ದಾರೆ. ಅವರ ಹೇಳಿಕೆಗಳು ಕನ್ನಡಿಗರನ್ನು ಪ್ರಚೋದಿಸುತ್ತಿದೆ. ಬೆಳಗಾವಿಯಲ್ಲಿರುವ ಮರಾಠಿಗರನ್ನೂ ಪ್ರಚೋದಿಸುತ್ತಿದೆ. ಇದೆಲ್ಲದಕ್ಕೂ ಉತ್ತರ ಕೊಡಬೇಕಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy