Subscribe to Updates
Get the latest creative news from FooBar about art, design and business.
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
- ಖಮೇನಿ ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್ ಬಾಬು ಸೂಚನೆ
- ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
- ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
Author: admin
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ನೀಡಿದೆ. ಭಾರತ್ ಜೋಡೋ ಯಾತ್ರೆ ಹಿನ್ನೆಲೆ ನಾಳೆ ವಿಚಾರಣೆ ಹಾಜರು ಕುರಿತು ವಿನಾಯ್ತಿ ನೀಡುವಂತೆ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದರು. ಆದರೆ ವಿಚಾರಣೆಗೆ ವಿನಾಯ್ತಿ ನೀಡಲು ನಿರಾಕರಿಸಿರುವ ಇಡಿ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಡಿ.ಕೆ ಶಿವಕುಮಾರ್ ಗೆ ನೋಟಿಸ್ ನೀಡಿದೆ. ಈ ಕುರಿತು ನಾಗಮಂಗಲದಲ್ಲಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ನಾನು ಭಾರತ್ ಜೋಡೋ ಇನ್ ಚಾರ್ಚ್ ಆಗಿದ್ದೇನೆ. ಹೀಗಾಗಿ ನಾಳೆ ವಿಚಾರಣೆಗೆ ಹಾಜರಾಗಲು ಆಗಲ್ಲ. ವಿನಾಯಿತಿ ನೀಡುವಂತೆ ಮನವಿ ಮಾಡಿದ್ದೆ. ಆದರೆ ನಾಳೆಯೇ ಬರಬೇಕೆಂದು ಇಡಿ ಸಮನ್ಸ್ ನೀಡಿದೆ. ಈ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ನಾಯಕರು ಹೋಗು ಅಂದರೇ ಹೋಗುತ್ತೇನೆ. ಬೇಡ ಅಂದರೇ ಬಿಡ್ತೀನಿ. ಸಭೆ ಬಳಿಕ ಹೋಗಬೇಕೋ ಬೇಡವೋ ತೀರ್ಮಾನ ಮಾಡುತ್ತೇನೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಕಳೆದ ಎರಡು ತಿಂಗಳಿನಿಂದ ಸಂಬಳ ಆಗದ ಹಿನ್ನೆಲೆಯಲ್ಲಿ 108 ಆಂಬ್ಯುಲೆನ್ಸ್ ಚಾಲಕರು ಸರ್ಕಾರಕ್ಕೆ ಒಂದು ದಿನದ ಡೆಡ್ ಲೈನ್ ನೀಡಿದ್ದಾರೆ. ಸಂಬಳ ನೀಡದ ಹಿನ್ನೆಲೆ 108 ಆಂಬ್ಯುಲೆನ್ಸ್ ಚಾಲಕರು ಇಂದಿನಿಂದ ಮುಷ್ಕರಕ್ಕೆ ಕರೆ ನೀಡಲು ತೀರ್ಮಾನಿಸಿದ್ದರು. ಆದರೆ ದಸರಾ ರಜೆ ಹಿನ್ನೆಲೆ ಆರೋಗ್ಯ ಇಲಾಖೆ ಸಮಯ ಕೇಳಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಒಂದು ದಿನದ ಗಡುವು ನೀಡಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸಂಬಳ ಕುರಿತು ಸಭೆ ನಡೆಯಲಿದ್ದು, ಸಭೆಯಲ್ಲಿ ಇತ್ಯಾರ್ಥವಾಗದಿದ್ದರೇ ರಜೆ ಮೇಲೆ ತೆರಳಲು 108 ಆಂಬ್ಯುಲೆನ್ಸ್ ಚಾಲಕರು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಶಾಸಕ ಅರವಿಂದ್ ಬೆಲ್ಲದ್ ಅವರ ಚಿಕ್ಕಪ್ಪ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಧಾರವಾಡದ ಎಸ್.ಪಿ ಕಚೇರಿ ಎದುರು ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ ಶಾಸಕ ಅರವಿಂದ್ ಬೆಲ್ಲದ್ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ್(82) ಮೃತಪಟ್ಟವರು. ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಶಿವಣ್ಣ ಬೆಲ್ಲದ್ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ತಲುಪಿಸಿದರೂ, ವೈದ್ಯನ ನಿರ್ಲಕ್ಷ್ಯತನದಿಂದಾಗಿ ಎರಡು ಜೀವ ಬಲಿಯಾದ ಘಟನೆ ಕೊರಟಗೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಇರಕಸಂದ್ರ ಕಾಲೋನಿ ಬಳಿ ಕೆಎಸ್ ಆರ್ ಟಿ ಸಿ ಬಸ್ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿತ್ತು. ಪರಿಣಾಮವಾಗಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ತಕ್ಷಣವೇ ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ತುರ್ತಾಗಿ ಚಿಕಿತ್ಸೆ ನೀಡಬೇಕಾದ ವೈದ್ಯರು ನಿರ್ಲಕ್ಷ್ಯವಹಿಸಿದ್ದು, ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲು ಪ್ರಯತ್ನಿಸಲಾಯಿತಾದರೂ, ಆತ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು ಸರಿಯಾದ ಸಮಯಕ್ಕೆ ತಂದಿದ್ದರೂ, ತುರ್ತಾಗಿ ಚಿಕಿತ್ಸೆ ನೀಡುವ ಬದಲು ವೈದ್ಯ ನವೀನ್ ಕುಮಾರ್ ಸರಿಯಾಗಿ ಸ್ಪಂದಿಸದೇ ನಿರ್ಲಕ್ಷ್ಯವಹಿಸಿದ್ದು, ಇದರಿಂದಾಗಿ ಇಬ್ಬರ ಪ್ರಾಣ ಹೋಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇನ್ನೂ ವೈದ್ಯನ ನಿರ್ಲಕ್ಷ್ಯತನದ ಪ್ರದರ್ಶನವನ್ನು ವಿಡಿಯೋ ಮಾಡಲು ತೆರಳಿದ ಪ್ರಗತಿ ಟಿವಿ…
ರಾಯಚೂರು: ಆಯುಧ ಪೂಜೆ ಹಿನ್ನೆಲೆಯಲ್ಲಿ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ್, ಡಬಲ್ ಬ್ಯಾರೆಲ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ವೀಡಿಯೊ ವೈರಲ್ ಆಗಿದ್ದು, ಜನಪ್ರತಿನಿಧಿಯಾಗಿದ್ದುಕೊಂಡು ಈ ರೀತಿಯ ವರ್ತನೆ ಮಾಡಿರೋದು ವಿವಾದಕ್ಕೆ ಕಾರಣವಾಗಿದೆ. ಆಯುಧ ಪೂಜೆ ಸಂದರ್ಭದಲ್ಲಿ ಜನರು ವಾಹನಗಳು ಹಾಗೂ ತಮ್ಮ ಕೆಲಸ ಕಾರ್ಯಗಳ ಪರಿಕರಗಳಿಗೆ ಪೂಜೆ ಸಲ್ಲಿಸುತ್ತಿದ್ದರು. ಆದರೆ ಇದೀಗ ಮಾರಕಾಸ್ತ್ರಗಳಿಗೆ ಪೂಜೆ ಸಲ್ಲಿಸುವ ವಿವಾದಿತ ಘಟನೆಗಳು ನಡೆಯುತ್ತಿದ್ದು, ಸಾಮಾಜಿಕ ಜವಾಬ್ದಾರಿಯನ್ನು ಪಾಲಿಸಬೇಕಿದ್ದ ಶಾಸಕ ಶಿವನಗೌಡ ನಾಯಕ್ ನಾಡ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. 2—3 ಬಾರಿ ಶಿವನಗೌಡ ನಾಯಕ್ ಗುಂಡು ಹಾರಿಸುತ್ತಿರುವುದು ಕಂಡು ಬಂದಿದೆ. ತಮ್ಮ ಅರಕೇರಾದ ಮನೆಯಲ್ಲಿ ಗುಂಡು ಹಾರಿಸಿ, ಆಯುಧ ಪೂಜೆ ಆಚರಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಲಾರಿ ಹಿಂಬದಿ ಹಗ್ಗ ಕಟ್ಟುತ್ತಿದ್ದ ಲಾರಿ ಚಾಲಕ, ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ರಂಗಪ್ಪ ಗುರುಸಿದ್ದಪ್ಪ ಪಾಟೀಲ (30) ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ಯರಗಟ್ಟಿಯ ಬೀರೇಶ್ವರ ಬ್ಯಾಂಕ್ ಎದುರಿನ ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಬೆಳಗಾವಿಗೆ ಹೊರಟ್ಟಿದ್ದ ಕಾರು ವೇಗವಾಗಿ ಗುದ್ದಿದೆ. ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಕಾರಿನಲ್ಲಿದ್ದ ಅಮರೆಗೌಡ ಮಾಲಿಪಾಟೀಲ (58) ಗೌಡಪ್ಪಗೌಡ ಮಾಲಿಪಾಟೀಲ (25) ಗಾಯಗೊಂಡಿದ್ದು, ವೀರಭದ್ರಗೌಡ ಡಬಿ (32), ಹನುಮಂತ ಬೆಟಗೇರಿ (23) ಸಣ್ಣಪುಟ್ಟ ಗಾಯಗಳಾಗಿವೆ. ಇವರೆಲ್ಲ ರಾಯಚೂರ ಜಿಲ್ಲೆಯ ಸಿಂಧನೂರು ಪಟ್ಟಣದವರಾಗಿದ್ದಾರೆ. ಗಾಯಾಳುಗಳನ್ನು ಬೆಳಗಾವಿ ಕೆಎಲ್ ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಯರಗಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಧಾರವಾಡದ ಮಾಳಮಡ್ಡಿ ನಿವಾಸಿ, ನಟ, ನಿರ್ದೇಶಕ, ಕಿರುತೆರೆ ತಂತ್ರಜ್ಞ, ಅಂಕಣಕಾರ ಸುರೇಶ್ ಕುಲಕರ್ಣಿ (75) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕನ್ನಡದ ಖ್ಯಾತ ನಿರ್ದೇಶಕ, ನಾಟಕಕಾರ ದಿ.ಗಿರೀಶ್ ಕಾರ್ನಾಡ್ ಅವರೊಂದಿಗೆ ಚಿತ್ರರಂಗದಲ್ಲಿ ಸಹಾಯಕರಾಗಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದ ಇವರು, ಒಂದಾನೊಂದು ಕಾಲದಲ್ಲಿ ಸೇರಿ ಹಲವು ಚಿತ್ರಗಳ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದರು. ಕುಲಕರ್ಣಿಯವರು ರವಿ ಬೆಳಗೆರೆಯವರ ಆಪ್ತರೂ ಹೌದು, ಕೊನೆಯವರೆಗೂ ಅವಿವಾಹಿತರಾಗಿಯೇ ಉಳಿದಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಪಟ್ಟಣದಲ್ಲಿ ಸಮಾಜ ಸೇವಕ ಹಾಗೂ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸಂಭಾವ್ಯ ಅಭ್ಯರ್ಥಿಯಾದ ಕೆ.ಎಂ.ಮುನಿಯಪ್ಪನವರು ಸ್ಪರ್ಧಿಸಲಿದ್ದು, ತಮ್ಮ ಅಭಿಮಾನಿ ಗೆಳೆಯರ ಬಳಗದ ಹೋಬಳಿ ಮಟ್ಟದ ಕಚೇರಿಯನ್ನು ಉದ್ಘಾಟನೆ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಿಂದ ಕ್ಷೇತ್ರದಲ್ಲಿ ನಿರ್ಗತಿಕರ, ಬಡವರ, ರೈತರ ಪಾಲಿಗೆ ಕಾಮಧೇನುವಾಗಿ ನಿಷ್ಕಲ್ಮಶವಾದ ಮನಸ್ಸಿನಿಂದ ಕೆಲಸ ಮಾಡುತ್ತಿರುವ ಬಿಜೆಪಿ ಪಕ್ಷದ ಮುಖಂಡ ಕೆ.ಎಂ.ಮುನಿಯಪ್ಪ, ಬಿಜೆಪಿ ಪಕ್ಷದ ಸಂಘಟನೆ ಮಾಡಲು ಪಕ್ಷವನ್ನು ಇನ್ನಷ್ಟು ಬಲಿಷ್ಠ ಗೊಳಿಸಲು ಮತ್ತು ಅಭಿಮಾನಿ ಗೆಳೆಯರ ಬಳಗದ ಕಚೇರಿ ವತಿಯಿಂದ ರೈತರಿಗೆ ಅನುಕೂಲವಾಗುವಂತೆ ಮಿನಿ ಸೇವಾ ಕೇಂದ್ರವನ್ನು ತೆರೆಯುವುದರ ಮೂಲಕ ಬಡವರಿಗೆ ರೈತರಿಗೆ, ನಿರಾಶ್ರಿತರಿಗೆ ಹತ್ತಿರವಾಗುತ್ತಿದ್ದಾರೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಹೋಬಳಿ ಮಟ್ಟದಲ್ಲಿ ಕಚೇರಿ ಸ್ಥಾಪನೆ ಮಾಡಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಹಣಿ, ಎಮ್.ಆರ್., ಇ ಶ್ರಮ್ ಕಾರ್ಡ್, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಮತ್ತು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ನೀಡಿ ಜನರ…
ಮಂಡ್ಯ : ಕಾಂಗ್ರೆಸ್ ನ ಭಾರತ್ ಜೋಡೋ ಪಾದಯಾತ್ರೆ ಇಂದು ಮತ್ತೆ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಿಂದ ಪುನಾರಂಭಗೊಳ್ಳಲಿದ್ದು, ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಆರಂಭವಾದ ಯಾತ್ರೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಜ್ಜೆ ಹಾಕಲಿದ್ದಾರೆ. ಮಂಡ್ಯದ ಬೆಳ್ಳಾಳೆಯಿಂದ ಪಾದಯಾತ್ರೆ ಪ್ರಾರಂಭವಾಗಿದೆ. ರಾಹುಲ್ ಗಾಂಧಿ ಮತ್ತು ಜೊತೆ ಜೊತೆಗೆ ಹೆಜ್ಜೆ ಹಾಕಲಿದ್ದಾರೆ. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಿಂದ ವಾಟರ್‌ವುಡ್ ರೆಸಾರ್ಟ್ಗೆ ಬೋಟ್ ಮೂಲಕ ಪ್ರಯಾಣ ಬೆಳೆಸಿ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ . ಯಾತ್ರೆ ಬೆಳಗ್ಗೆ 11 ಗಂಟೆಗೆ ಖಾರದ್ಯಾ ಕೆರೆ ತಲುಪಲಿದೆ. ಸಂಜೆ 4 ಗಂಟೆವರೆಗೆ ನಾಯಕರು ವಿಶ್ರಾಂತಿ ಪಡೆಯಲಿದ್ದು ಸಂಜೆ 4 ಗಂಟೆಗೆ ಭಾರತ್ ಜೋಡೋ ಯಾತ್ರೆ ಪುನಾರಂಭವಾಗುತ್ತೆ. ಸಂಜೆ 7ಕ್ಕೆ ಬ್ರಹ್ಮದೇವರ ಹಳ್ಳಿಗೆ ತಲುಪಿ ರಾತ್ರಿ ವಿಸ್ಡಮ್ ಶಾಲೆಯಲ್ಲಿ ಕಾಂಗ್ರೆಸ್ ನಾಯಕರು ವಾಸ್ತವ್ಯ ಹೂಡಲಿದ್ದಾರೆ.…
ಬಾಗಲಕೋಟೆ: ಗಂಡು ಮೇಕೆ ಹಾಲು ಕೊಡುತ್ತಿರುವ ವಿಚಿತ್ರ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಪರಶುರಾಮ ಭಜಂತ್ರಿ ಎನ್ನುವವರಿಗೆ ಸೇರಿದ ಮೂರು ವರ್ಷದ ಗಂಡು ಮೇಕೆಯೊಂದು ನಿತ್ಯ ಹಾಲು ಕೊಡುತ್ತಿದೆ. ಪ್ರತಿನಿತ್ಯ ಒಂದು ಸಣ್ಣ ಬಟ್ಟಲಿನಷ್ಟು ಹಾಲನ್ನು ಕುರಿಗಾಹಿ ಪರಶುರಾಮ ಅವರು ಕರೆಯುತ್ತಿದ್ದಾರೆ. ಪರಶುರಾಮ ಅವರು ಗಂಡು ಮೇಕೆಯಿಂದ ಹಾಲು ಕರೆಯುತ್ತಿರುವ ದೃಶ್ಯ ವೈರಲ್ ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy