Author: admin

ನಾಯಿ ಕಚ್ಚಿದರೆ ಸಂತ್ರಸ್ತರ ಚಿಕಿತ್ಸೆಗೆ ನಾಯಿ ಮಾಲೀಕರು 10 ಸಾವಿರ ರೂ. ನೀಡಬೇಕು ಎಂದು ನೋಯ್ಡಾದಲ್ಲಿ ಆದೇಶಿಸಲಾಗಿದೆ. ಮಾರ್ಚ್ 1, 2023ರಿಂದ ಅನ್ವಯ ಆಗುವಂತೆ ನೋಯ್ಡಾ ಪ್ರಾಧಿಕಾರ ಈ ಆದೇಶ ಹೊರಡಿಸಿದೆ. ನಗರದಲ್ಲಿ ನಾಯಿ ದಾಳಿ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ನೋಯ್ಡಾ ಪ್ರಾಧಿಕಾರ ಈ ಆದೇಶ ಹೊರಡಿಸಿದೆ. ಶನಿವಾರ ನಡೆದ ನೋಯ್ಡಾ ಪ್ರಾಧಿಕಾರ ಸಭೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಗಂಬೀರ ಚರ್ಚೆ ನಡೆಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಶಾಲೆಗಳಲ್ಲಿ ಹಿಜಾಬ್, ಪಠ್ಯ ಪರಿಷ್ಕರಣೆ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಶುರುವಾಗಿದ್ದು, ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಬಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಶಿಕ್ಷಣ ಇಲಾಖೆ ಹೊಸದಾಗಿ 7000ಕ್ಕೂ ಅಧಿಕ ಶಾಲಾ ಕಾಲೇಜು ಕೊಠಡಿಗಳಿಗೆ ಸ್ವಾಮಿ ವಿವೇಕಾನಂದರ ನೆನಪಿನಲ್ಲಿ ವಿವೇಕ ಶಾಲೆ ಎಂದು ಹೆಸರಿಡಲು ಮುಂದಾಗಿದ್ದು, ಈ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಸಲು ಚಿಂತನೆ ನಡೆಸಿದೆ. ಇಲಾಖೆಯ ಈ ನಡೆ ಮುಸ್ಲಿಂ ಮುಖಂಡರಿಂದ ಖಂಡನೆ ವ್ಯಕ್ತವಾಗಿದೆ. ಶಿಕ್ಷಣ ಇಲಾಖೆ ವಿವೇಕಾನಂದರ ಹೆಸರನ್ನ ಉಪಯೋಗಿಸಿಕೊಂಡು ಶಾಲೆಗಳನ್ನ ಕೇಸರಿಮಯ ಮಾಡಲು ಮುಂದಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯ ನಂತರ ಎರಡನೇ ಸುತ್ತಿನ ಕೇಸರೀಕರಣ ಶುರು ಮಾಡಿದೆ ಎಂದು ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ ಎಂದು ಜಮೀನು ವ್ಯಾಜ್ಯದಲ್ಲಿ ಹಲ್ಲೆ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಆತ್ಮ ರಕ್ಷಣೆಗಾಗಿ ಪ್ರತಿ ದಾಳಿ ನಡೆಸುವ ಸಂದರ್ಭದಲ್ಲಿ ಹಲ್ಲೆ ನಡೆಸಲು ಮುಂದಾದರೆ ಅದು ಅಪರಾಧವಾಗುವುದಿಲ್ಲ ಎಂದು ಹೇಳಿದ ಹೈಕೋರ್ಟ್, ಸಹೋದರ ಸಂಬಂಧಿಗಳ ಮೇಲೆ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಆರೋಪದಿಂದ ಮೂವರನ್ನು ಖುಲಾಸೆಗೊಳಿಸಿದೆ. ನಾಗೇಶ್, ರಾಮಕೃಷ್ಣ ಮತ್ತು ಜಯರಾಮ್ ಅವರು ಶಿಕ್ಷೆ ವಿಧಿಸಿದ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಆತ್ಮ ರಕ್ಷಣೆಯಿಂದ ಪ್ರತಿದಾಳಿ ನಡೆಸಿರುವುದು ಸಾಬೀತಾದರೆ ನ್ಯಾಯಾಲಯಕ್ಕೆ ಅದನ್ನು ಪರಿಗಣಿಸಲು ಮುಕ್ತ ಅವಕಾಶವಿದೆ. ವೈಯಕ್ತಿಕ ರಕ್ಷಣೆ ಹಕ್ಕು ಚಲಾವಣೆ ಯಾವುದೇ ಅಪರಾಧವಾಗುವುದಿಲ್ಲ ಎಂದು ಭಾರತೀಯ ದಂಡ ಸಮಿತಿ ಸೆಕ್ಷನ್ 99 ಸ್ಪಷ್ಟವಾಗಿ ಹೇಳುತ್ತದೆ. ಈ ಪ್ರಕರಣದಲ್ಲಿ ಅರ್ಜಿದಾರರ ವೈಯಕ್ತಿಕ ರಕ್ಷಣೆ ಹಕ್ಕನ್ನು ಪರಿಗಣಿಸುವಲ್ಲಿ ಅಧೀನ ಕೋರ್ಟ್ ಗಳು ವಿಫಲವಾಗಿವೆ…

Read More

ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತವಾದ ಹಿನ್ನೆಲೆ ಸರ್ಕಾರ ಟಿಪ್ಪು ಜಯಂತಿ ಆಚರಣೆಯನ್ನೇ ರದ್ಧು ಮಾಡಿದೆ. ಕೆಲವರು ಟಿಪ್ಪು ಸುಲ್ತಾನ್ ದೇಶ ಭಕ್ತ ಎಂದರೇ ಕೆಲವರು ಮತಾಂಧ ಎಂದು ಟೀಕಿಸುತ್ತಿದ್ದಾರೆ. ಈ ನಡುವೆಯೇ 100 ಅಡಿ ಎತ್ತರದ ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ಮಾಡುವುದು ಖಚಿತ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಶಾಸಕ ತನ್ವೀರ್ ಸೇಠ್, 100 ಅಡಿ ಎತ್ತರದ ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ಖಚಿತ . ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡಲಾಗುತ್ತದೆ.  ಚು ಅಥವಾ ಪಂಚಲೋಹ ಪ್ರತಿಮೆ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಮಾಡುತ್ತೇವೆ ಎಂದರು. ಇಂದಿನ ಪರಿಸ್ಥಿತಿಯಲ್ಲಿ ಪ್ರತಿಮೆ ನಿರ್ಮಾಣ ಅನಿವಾರ್ಯವಾಗಿದೆ. ಪ್ರತಿಮೆಗೆ ಸ್ಥಾಪನೆಗೂ  ಮುನ್ನವೇ ಕೆಡಹುವುದಾಗಿ  ಹೇಳಿಕೆಗಳು ಬಂದಿವೆ. ಯಾರ ವಿರೋಧಕ್ಕೂ ನಾವು ಬಗ್ಗುವುದಿಲ್ಲ ಎಂದು ತನ್ವೀರ್ ಸೇಠ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಪಾರಂಪರಿಕ ನಗರಿ ಮೈಸೂರಲ್ಲಿ ಸೂಕ್ತ ನಿರ್ವಹಣೆ ಕೊರತೆ ಕಾರಣ ಪಾರಂಪರಿಕ ಕಟ್ಟಡಗಳು ಶಿಥಿಲಗೊಂಡು ನೆಲಕ್ಕುರುಳುತ್ತಿದೆ. ಈ ನಡುವೆ ಸೆಸ್ಕಾಂ ಇಲಾಖೆ ಸಿಬ್ಬಂದಿಗಳ ಬೇಜವಾಬ್ದಾರಿಗೆ ನೂರಾರು ಮರಗಳು ರೆಂಬೆ, ಕೊಂಬೆ ಕಳೆದುಕೊಂಡು ಬೋಳಾಗಿವೆ. ಒಂದೆಡೆ ಪರಿಸರ ಸಂರಕ್ಷಣೆಗಾಗಿ ಅರಣ್ಯ ಇಲಾಖೆ ಸಸಿಗಳನ್ನು ಬೆಳೆಸಲು ಶ್ರಮಿಸುತ್ತಿದ್ದರೆ, ಮತ್ತೊಂಡೆದೆ ವಿದ್ಯುತ್ ಕಂಬದ ತಂತಿಗೆ ಮರದ ಎಲೆಗಳು ತಾಗುತ್ತವೆ ಎಂದು ಮರಗಳ ರೆಂಬೆ, ಕೊಂಬೆಯನ್ನೇ ಕಡಿದು ಹಾಕಿ ಚೆಸ್ಕಾಂ ಸಿಬ್ಬಂದಿ ಬೇಜಾವಬ್ದಾರಿ ಮೆರೆದಿದ್ದಾರೆ. ಮೈಸೂರಿನ ಆರ್.ಟಿ. ನಗರ ಬಡಾವಣೆಯ ಟ್ರಾಕ್ವಿಲ್ ಲೇಔಟ್ ನಲ್ಲಿ ಕಳೆದ ಕೆಲ ವರ್ಷಗಳಿಂದ ಬೆಳೆಸಲಾಗಿದ್ದ ಮರದ ರೆಂಬೆ, ಕೊಂಬೆಗಳು ಇದೀಗ ಸೆಸ್ಕಾಂ ಸಿಬ್ಬಂದಿಯಿಂದ ನೆಲಕ್ಕುರುಳಿ ಬೋಳಾಗಿವೆ.ಪರಿಸರದ ಬಗ್ಗೆ ಕನಿಷ್ಠ ಜ್ಞಾನವಿಲ್ಲದ ಸೆಸ್ಕಾಂ ಸಿಬ್ಬಂದಿಗಳ ಈ ನಡೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ರ್ಯಾಕ್ವಿಲ್ ಬಡಾವಣೆಯಲ್ಲಿ ಕಳೆದ ೮ ವರ್ಷಗಳ ಹಿಂದೆ ಸಸಿ ಹಾಕಿ ಅದಕ್ಕೆ ನೀರುಣಿಸಿ ಮರವನ್ನಾಗಿ ಬೆಳೆಸಲಾಗಿತ್ತು. ಆದರೆ ಸೆಸ್ಕಾಂ ಸಿಬ್ಬಂದಿ ಏಕಾಏಕಿ ಈಗ ಬಡಾವಣೆಯ ನೂರಾರು ಮರಗಳ ರೆಂಬೆ, ಕೊಂಬೆಗಳನ್ನೇ ಕಡೆದು…

Read More

ಕಾಂಗ್ರೆಸ್ ಕಾರ್ಯಕರ್ತರನ್ನು ಕೆಣಕಿದ್ರೆ ಸುಮ್ಮನಿರಲ್ಲ. ನಾವು ಮನಸ್ಸು ಮಾಡಿದ್ರೆ ಒಬ್ಬನೇ ಒಬ್ಬ BJP ಮುಖಂಡನನ್ನು ಓಡಾಡಲು ಬಿಡುವುದಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಿಯಾಂಕ್​​ ಖರ್ಗೆ ಕಾಣೆಯಾಗಿದ್ದಾರೆ ಎಂದು BJP ಕಾರ್ಯಕರ್ತರು ಕಲಬುರಗಿಯಾದ್ಯಂತ ಪೋಸ್ಟರ್​ ಅಂಟಿಸಿದ್ರು. ಈ ವಿಚಾರವಾಗಿ ಕೋಪಗೊಂಡಿದ್ದ ಪ್ರಿಯಾಂಕ್​​ ಖರ್ಗೆ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ. ವಾಡಿ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಚಿತ್ತಾಪುರ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರನ್ನು ವಿನಾ ಕಾರಣ ಬಿಜೆಪಿಗರು ಕೆಣಕಿದ್ರೆ ನಾನು ಸುಮ್ಮನಿರುವುದಿಲ್ಲ. ನನ್ನ ಮರ್ಯಾದೆ ಚೌಕಟ್ಟು ದಾಟಿ ಪಾಠ ಕಲಿಸುವೆ ಎಂದು ವಾರ್ನಿಂಗ್ ನೀಡಿದ್ದಾರೆ. ನಮ್ಮ ಕುಟುಂಬದ ಮೇಲೆ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ. ಖರ್ಗೆ ಸಾಹೇಬರಿಗೆ ಆರು ಸಲ ಹಾಗೂ ನನಗೆ 3 ಸಲ ಜೀವ ಬೆದರಿಕೆ ಕರೆ ಬಂದಿದ್ದವು. ಆದರೂ ನಾವು ಸುಮ್ಮನಿದ್ದೆವು. ಇದೀಗ ನಮ್ಮ ಕಾರ್ಯಕರ್ತರ ಮೇಲೆ ದಾಳಿ ನಡೆದಾಗ ಸುಮ್ಮನಿರಲ್ಲ ಎಂದು ಖರ್ಗೆ ಸಿಡಿದೆದ್ದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಆನ್ ಲೈನ್‌ ನಲ್ಲಿ ಮೋಸ ಹೋದ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ. ನವೆಂಬರ್ 9 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಆರತಿ ಕನಾಟೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ. ಮೃತ ಆರತಿ ಅವರು ಆನ್ ಲೈನ್‌ನಲ್ಲಿ ಬಂಡವಾಳ ಮಾಡಿ 2.5 ಲಕ್ಷ ರೂ. ಕಳೆದುಕೊಂಡಿದ್ದರು. ಸಾಲ ಮಾಡಿಕೊಂಡು ಆನ್ ಲೈನ್‌ ನಲ್ಲಿ ಇನ್ವೆಸ್ಟ್ ಮಾಡಿದ್ದರು ಎನ್ನಲಾಗಿದೆ. ಹಣ ವಾಪಸಾಗುವ ಯಾವುದೇ ಲಕ್ಷಣಗಳು ಕಂಡು ಬಾರದ ಹಿನ್ನೆಲೆಯಲ್ಲಿ ಮನನೊಂದು ಆರತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್ ಬರೆದಿಟ್ಟು ಉಪನ್ಯಾಸಕಿ ಆರತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ರಾಜ್ಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆಯು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡು ನರಳುತ್ತಿದ್ದ 10 ಜನರನ್ನು ಕೊರಟಗೆರೆ ಪಿಎಸೈ ಚೇತನ್‌ ಗೌಡ ಸ್ಥಳೀಯರ ಸಹಾಯದಿಂದ ತಮ್ಮ ಪೊಲೀಸ್ ವಾಹನದಲ್ಲೇ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂ ವ್ಯಾಪ್ತಿಯ ಜಿ.ನಾಗೇನಹಳ್ಳಿ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಭೀಕರ ಅಪಘಾತವಾಗಿದೆ. ಅಪಘಾತಕ್ಕೆ ರಭಸಕ್ಕೆ ರಾಜ್ಯ ಹೆದ್ದಾರಿಯಿಂದ ಇಳಿಜಾರಿನ ಪ್ರದೇಶಕ್ಕೆ ಹಾರಿಹೋಗಿ ಪೆಟ್ರೋಲ್ ಟ್ಯಾಂಕು ಸಿಡಿದು ಬೆಂಕಿಯು ಆವರಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಮಾನವೀಯತೆ ಮೆರೆದ ಕೊರಟಗೆರೆ ಪಿಎಸೈ ಚೇತನ್ ಗೌಡ ಅಪಘಾತದಲ್ಲಿ ಕೈಕಾಲು ಮುರಿದುಕೊಂಡು ರಸ್ತೆಯಲ್ಲಿ ನರಳುತ್ತಿದ್ದ 10 ಜನರನ್ನು ಕೊರಟಗೆರೆ ಪಿಎಸೈ ಚೇತನ್‌ ಗೌಡ ತಮ್ಮ ಪೊಲೀಸ್ ವಾಹನದಲ್ಲಿಯೇ ಸಿಬ್ಬಂದಿಯ ಸಹಾಯದಿಂದ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಂತರ ಧಗಧಗನೇ ಉರಿಯುತ್ತಿದ್ದ ಕಾರಿನ ಸಮೀಪವೇ ಬಿದ್ದಿದ್ದ ಮಹಿಳೆಯ ಮೃತದೇಹವನ್ನು ಇಳಿಜಾರಿನಿಂದ ತಾವೇ…

Read More

ಪ್ರಿಯಕರನ ಜೊತೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ರಾಕೇಶ್ ತೋಮಂಗ ಕೊಲೆಯಾದ ದುರ್ದೈವಿ. ಪತ್ನಿ ದೇಬಿತಂಬಾಗ್ ಹಾಗೂ ಆಕೆಯ ಪ್ರಿಯಕರ ಬಾಬು ಅಲಿ ಬಂಧಿತ ಆರೋಪಿಗಳು. ಪತ್ನಿ ದೇಬಿತಂಬಾಗ್ ಹಾಗೂ ಆಕೆಯ ಪ್ರಿಯಕರ ಬಾಬು ಅಲಿ ನಡುವೆ ಅನೈತಿಕ ಸಂಬಂಧ ಇತ್ತು. ಈ ವಿಚಾರ ತಿಳಿದ ರಾಕೇಶ್ ತೋಮಂಗ ಪ್ರಶ್ನೆ ಮಾಡಿದ್ದ. ಈ ವೇಳೆ ಪತ್ನಿ ಮತ್ತು ಪ್ರಿಯಕರ ಸೇರಿ ತೋಮಂಗನನ್ನು ನವೆಂಬರ್ 6ರಂದು ಕೊಲೆ ಮಾಡಿದ್ದರು. ಸದ್ಯ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು : ಭಾರತೀಯ ಜನೌಷಧ ಯೋಒಜನೆ ಅತ್ಯುತ್ತಮವಾಗಿ ಜಾರಿಯಾಗಿದ್ದು, ಈ ವರೆಗೆ ರಾಜ್ಯದಲ್ಲಿ 1052 ಜನೌಷಧ ಮಳಿಗೆಗಳನ್ನು ತೆರೆಯಲಾಗಿದೆ. ಶೀಘ್ರವೇ ಮತ್ತೆ 500 ಜನೌಷಧ ಮಳಿಗೆಗಳನ್ನು ತೆರೆಯಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1,052 ಮಳಿಗೆಗಳು ಜೆನೆರಿಕ್ ಔಷಧಿಗಳನ್ನು ಸಬ್ಸಿಡಿ ದರದಲ್ಲಿ ಮಾರಾಟ ಮಾಡುತ್ತಿದ್ದು, ಉತ್ತರ ಪ್ರದೇಶದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇರಳ ಮೂರನೇ ಸ್ಥಾನದಲ್ಲಿದೆ ಎಂದರು. ಫೆಬ್ರವರಿಯಿಂದ 300 ಮಳಿಗೆಗಳನ್ನು ತೆರೆದಿದೆ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ 40 ಸೇರಿದಂತೆ ಇನ್ನೂ 500 ಮಳಿಗೆಗಳನ್ನು ತೆರೆಯಲು ಬ್ಯೂರೋ ಆಫ್ ಫಾರ್ಮಾ ಪಿಎಸ್ಯುಸ್ ಇನ್ ಇಂಡಿಯಾನಿಂದ ಅನುಮತಿ ಪಡೆಯಲು ಯೋಜಿಸಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯಲು ಸರ್ಕಾರ ಯೋಜಿಸುತ್ತಿದೆ ಮತ್ತು ಉತ್ತರ ಕರ್ನಾಟಕ ಮತ್ತು ಹಳೆ ಮೈಸೂರು ಪ್ರದೇಶಗಳಿಂದ ಬೇಡಿಕೆ ಇದೆ ಎಂದು ಅವರು ಹೇಳಿದರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More