Author: admin

ತಿಪಟೂರು: ತಾಲ್ಲೂಕಿನ ಹಾಲೇನಹಳ್ಳಿ ಗ್ರಾಮದಲ್ಲಿ  ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿ ಡಾ.ವೈ.ಎಸ್ ಪಾಟೀಲ್ ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಮಾತನಾಡಿ, ಸರ್ಕಾರಿ ಕೆಲಸಕ್ಕಿಂತ ಸ್ವಯಂ ಉದ್ಯೋಗ ಉತ್ತಮ. ಜ್ಞಾನಕ್ಕಾಗಿ ನಾವು ಓದಬೇಕು, ಸರ್ಕಾರಿ ಕೆಲಸ ಸಿಗುತ್ತದೆಂದು ಓದಿ ನಿರಾಶರಾಗದೇ ಸ್ವಂತ ಉದ್ಯಮ, ಕೃಷಿಯಲ್ಲಿ ತೊಡಗಿಸಿಕೊಂಡು ಸಮೃದ್ಧಿಹೊಂದಿ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಕರೆನೀಡಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳು ಅಭಿನಯ ಗೀತೆ ಹಾಡಿದ್ದು, ಎಲ್ಲರ ಕಣ್ಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ವಿದ್ಯಾಕುಮಾರಿ ತಾಲ್ಲೂಕು ಉಪ ವಿಭಾಗಾಧಿಕಾರಿ ಕಲ್ಪಶ್ರೀ ತಹಶೀಲ್ದಾರ್ ಚಂದ್ರಶೇಖರ್ ನಗರಸಭೆ ಪೌರಾಯುಕ್ತ ಉಮಾಕಾಂತ್ ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು  ಅಧಿಕಾರಿ ದಿನೇಶ್ ಮತ್ತಿತರರು ಭಾಗಿಯಾಗಿದ್ದರು .  ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದ್ದು, ಬಿಎಸ್ ವೈ ವಿರುದ್ಧ ಲೋಕಾಯುಕ್ತದಲ್ಲಿ ಎಫ್​ಐಆರ್​ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದ ಮೇರೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಶಶಿಧರ ಮರಡಿ, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ವಿರುಪಾಕ್ಷಪ್ಪ, ಕೆ.ರವಿ ಅವರ ವಿರುದ್ಧ ಎಫ್​ಐಆರ್ ದಾಖಲಾಗಲಿದೆ. ಬಿಎಸ್​ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗಳನ್ನು ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಾಂತರ ರೂಪಾಯಿ ನಗದು ಪಡೆದಿದ್ದಾರೆ. ಜೊತೆಗೆ ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ಖಾಸಗಿ ದೂರು ದಾಖಲಿಸಿದ್ದರು. ಆದರೆ ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ಜನಪ್ರತಿನಿಧಗಳ ವಿಶೇಷ ನ್ಯಾಯಾಲಯ ದೂರನ್ನ ವಜಾಗೊಳಿಸಿತ್ತು. ಬಳಿಕ ಟಿ.ಜೆ.ಅಬ್ರಾಹಂ ಇದನ್ನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಎಫ್​​ಐಆರ್ ದಾಖಲಿಸಲು ಹೈಕೋರ್ಟ್ ಸೂಚಿಸಿತ್ತು.…

Read More

ಮೇಕೆದಾಟು ಪಾದಯಾತ್ರೆ ಇದೀಗ ಭಾರತ್ ಜೋಡೋ ಯಾತ್ರೆ ಮೂಲಕ ಕಾಂಗ್ರೆಸ್ ನಾಯಕರು ಪಕ್ಷವನ್ನ ಸಂಘಟಿಸುತ್ತಿದ್ದು ಈ ಮಧ್ಯೆ ಕೆಲಸ ಮಾಡದ ಶಾಸರಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಶಾಸಕರು ಏನು ಮಾಡಬೇಕೆಂದು ಟಾರ್ಗೆಟ್ ನೀಡಲಾಗಿದೆ. ರಣದೀಪ್ ಸುರ್ಜೇವಾಲ ಟಾರ್ಗೆಟ್ ನೀಡಿದ್ದಾರೆ. ಕೆಲಸ ಮಾಡಿದವರಿಗೆ ಯಾಕ್ರಿ ಟಿಕೆಟ್..? ನನಗೆ ನಂಬರ್ ಬೇಕು ನಮ್ಮ ಸರ್ಕಾರ ಬರಬೇಕು. ಶಾಸಕರು ಕೇವಲ ಮದುವೆಗೆ ಅಟೆಂಡ್ ಆಗೋದಲ್ಲ. ಟೇಪ್ ಕಟ್ ಮಾಡಿಕೊಂಡು ಹೋದರೆ ಆಗಲ್ಲ. ಬೂತ್ ಮಟ್ಟದಲ್ಲಿ ಹೋಗ ಕೆಲಸ ಮಾಡಬೇಕು ಹಾಗೆಯೇ ಕೆಲಸ ಮಾಡಿದರೇ ಮಾತ್ರ ಪಕ್ಷ ಸಂಘಟನೆ ಆಗುತ್ತದೆ ಎಂದು ಡಿ.ಕೆ ಶಿವಕುಮಾರ್ ಶಾಸಕರಿಗೆ ಸಲಹೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾಂಡವಪುರ ಚಂದ್ರೆ ಗ್ರಾಮದಲ್ಲಿ 35 ಅಡಿ ಆಳದ ನೀರಿಲ್ಲದ ತೆರದ ಬಾವಿಯಲ್ಲಿ ನವಜಾತ ಶಿಶು ಪತ್ತೆಯಾಗಿತ್ತು. ಗಂಡು ಮಗು ಜೀವಂತವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವಜಾತ ಶಿಶುಗೆ ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್‌ಗೆ ಕಳುಹಿಸಿಕೊಟ್ಟಿದೆ. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಮಿಮ್ಸ್ ಐಸಿಯುನಲ್ಲಿರುವ ಮಗುವಿನ ಆರೋಗ್ಯದ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಮಂಡ್ಯ ಜಿಲ್ಲಾಧಿಕಾರಿ ಎಸ್. ಅಶ್ವತಿ ಸಹ ಸಚಿವರ ಜೊತೆ ಆಸ್ಪತ್ರೆಗೆ ಭೇಟಿ ನೀಡಿದ್ದು, ಜಿಲ್ಲಾಡಳಿತದ ವತಿಯಿಂದ ಮಗುವಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅಧಿಕಾರಿಗಳು ಸ್ಥಳೀಯ ವ್ಯಕ್ತಿಯೊಬ್ಬನನ್ನು ಬಾವಿಗೆ ಇಳಿಸಿ ಮಗು ರಕ್ಷಣೆ ಮಾಡಿದ್ದರು. ಆಗ ಮಗುವಿನ ಪಕ್ಕದಲ್ಲಿ ಹಾವು ಸಹ ಇತ್ತು. ಗ್ರಾಮದ ಮಹಿಳೆಯೊಬ್ಬರು ಮಗುವಿಗೆ ಎದೆಹಾಲು ಉಣಿಸಿ ಮಾನವೀಯತೆ ಮೆರೆದಿದ್ದದ್ದರು. ಬಳಿಕ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳಿಸಲಾಗಿತ್ತು.…

Read More

ತುಮಕೂರು: ಚಲಿಸುತ್ತಿದ್ದ ಕಾರಿನ ಟಯರ್ ಒಡೆದು 6 ಜನರು ಪ್ರಯಾಣಿಸುತ್ತಿದ್ದ ಫಾರ್ಚುನರ್ ಕಾರು ಮಗುಚಿ ಬಿದ್ದ ಘಟನೆ ಯಡಿಯೂರು ಬ್ರಿಡ್ಜ್ ಸಮೀಪ  ಭಾನುವಾರ ನಡೆದಿದೆ. ಮೈಸೂರಿನಿಂದ ಯಡಿಯೂರಿಗೆ ಬರುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದ್ದು, ಸುಮಾರು 50 ಮೀಟರ್ ಗಳವರೆಗೆ ಕಾರು ರಸ್ತೆಯಲ್ಲಿ ಉಜ್ಜಿಕೊಂಡು ಹೋಗಿದೆ. ಅಪಘಾತಕ್ಕೀಡಾದ ಕಾರಿನಲ್ಲಿ 2 ವರ್ಷದ ಮಗು ಸೇರಿದಂತೆ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ವರದಿ: ಶಿವಕುಮಾರ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದಿದೆ. 23 ವರ್ಷದ ಜಮೀರ್ ಕೊಲೆಯಾದ ಯುವಕ. ಕಲಬುರ್ಗಿಯ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಯಾಗಿರುವ ಜಮೀರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಳೆವೈಷಮ್ಯದದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿಕ್ಕಬಳ್ಳಾಪುರ : ಮಕ್ಕಳಿಲ್ಲ ಎಂಬ ಕೊರಗಿನಿಂದ ಮನನೊಂದು ದಂಪತಿಯ ಒಂದೇ ಸೀರೆಯಲ್ಲಿ ನೇಣಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೂಲಕುಂಟೆ ಗ್ರಾಮದಲ್ಲಿ ನಡೆದಿದೆ. ಎರಡು ವರ್ಷಗಳಿಂದ ಮಕ್ಕಳಾಗಿಲ್ಲವೆಂದು ನೋಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರನ್ನು ಚಂದ್ರು (32), ಶಶಿಕಲಾ (25) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಧಾರವಾಡ: ಬ್ಯೂಟಿಷಿಯನ್ ಜೊತೆ ಕಾಂಗ್ರೆಸ್ ಮುಖಂಡ ಅನುಚಿತವಾಗಿ ವರ್ತಿಸಿದ ಘಟನೆ ಜಿಲ್ಲೆಯ ವಿದ್ಯಾಗಿರಿ ಬಡಾವಣೆಯಲ್ಲಿ ನಡೆದಿದೆ. ಸ್ಪಾ ಮಾಲೀಕ ಮನೋಜ್ ಕರ್ಜಗಿ (54) ಬಂಧಿತ ಆರೋಪಿ. ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕನಾಗಿದ್ದ ಈತ, ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಎಂದು ಹೇಳಲಾಗಿದೆ. ತನ್ನದೇ ಸ್ಪಾದ‌ಲ್ಲಿ ಕೆಲಸಕ್ಕಿದ್ದ 19 ವರ್ಷದ ಬ್ಯೂಟಿಷಿಯನ್ ಜತೆ ಅನುಚಿತವಾಗಿ ವರ್ತಿಸಿದ್ದು, ಯುವತಿ ಕೂಗಿಕೊಂಡು ಹೊರಬಂದಿದ್ದಳು. ಬಳಿಕ ಸ್ನೇಹಿತರ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ವಿದ್ಯಾಗಿರಿ ಪೊಲೀಸರು ಕರ್ಜಗಿಯನ್ನು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಡಿಸೆಂಬರ್ ಚಳಿಗಾಲ ಅಧಿವೇಶನದ ವೇಳೆಯಲ್ಲಿ ಮಲ್ಟಿ ಸೂಪರ್’ಸ್ಪೆಷಾಲಿಟಿ ಆಸ್ಪತ್ರೆಯ ಎರಡು ಮಹಡಿಗಳನ್ನು ಉದ್ಘಾಟನಾ ಮಾಡಲಿದ್ದೇವೆ ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಶನಿವಾರ ಭಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಅವರ ಜೊತೆ ಸಭೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಆ ವೇಳೆ ಬೆಳಗಾವಿ ನಗರದಲ್ಲಿ ಪ್ರಗತಿ ಹಂತದಲ್ಲಿ ಇರುವ ಮಲ್ಟಿ ಸೂಪರ ಸ್ಪೆಷಾಲಟಿ ಆಸ್ಪತ್ರೆ ಉದ್ಘಾಟನೆ ಆಗಲಿದೆ ಎಂದು ತಿಳಿಸಿದರು.‌ ಸದ್ಯದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಕಾಮಗಾರಿ ನಡೆಯಲಿದೆ ಎಂದು ತಿಳಿಸಿದರು. ‌ ಬಳ್ಳಾರಿ ಆಸ್ಪತ್ರೆಯಲ್ಲಿ ಆಗಿರುವ ಸಮಸ್ಯೆ ನಮ್ಮ ಜಿಮ್ಸ್ ಆಸ್ಪತ್ರೆಯಲ್ಲಿ ಆಗಬಾರದು. ಆಕ್ಸಿಜನ್ ತೊಂದರೆ ಆಗದಂತೆ ನೋಡಿಕೋಳ್ಳಬೇಕು, ವಿದ್ಯುತ್ ಸಮಸ್ಯೆ ಎದುರಾದಾಗ ಆಕ್ಸಿಜನ್ ಸಪ್ಲೈ ಮಾಡಲು ಜನರೇಟರ್ ರೇಡಿ ಇರಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇದಕ್ಕಿಂತ ಮುಂಚೆ ಭಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಅವರ ಜೊತೆ…

Read More

ಮಧುಗಿರಿ: ತಾಲೂಕು ದಂಡಾಧಿಕಾರಿಗಳ ಕಚೇರಿಯ ಸುತ್ತಮುತ್ತ ಬೆಳೆದಿದ್ದ ಗಿಡಗಂಟಿಗಳನ್ನು ತಹಶೀಲ್ದಾರ್ ಸುರೇಶ್ ಆಚಾರ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ಈ ಸ್ವಚ್ಛತಾ ಕಾರ್ಯದಲ್ಲಿ ಕಚೇರಿ ಸಿಬ್ಬಂದಿ ಹಾಗೂ ಪುರಸಭೆಯ ಪೌರ ಕಾರ್ಮಿಕರು ಭಾಗಿಯಾಗುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಐ.ಡಿಹಳ್ಳಿ ಆರ್.ಐ ನಾರಾಯಣಪ್ಪ, ಕಸಬಾ ವಿ.ಎ ಪರಮೇಶ್, ಸಿಬ್ಬಂದಿಗಳಾದ ಸುನಿಲ್, ರವಿ, ಶಿವಶಂಕರ್ ನಾಯಕ್, ಮತ್ತು ಪುರಸಭಾ ಹೆಲ್ತ್ ಇನ್ಸ್ಪೆಕ್ಟರ್ ಬಾಲಾಜಿ ಮತ್ತು ಗ್ರಾಮ ಸಹಾಯಕರು ಹಾಗೂ ಪುರಸಭೆ ಪೌರ ಕಾರ್ಮಿಕರು ಈ ಸಂದರ್ಭ ಇದ್ದರು. ವರದಿ: ಅಬಿದ್, ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More