Subscribe to Updates
Get the latest creative news from FooBar about art, design and business.
- ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
- ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
- ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
- ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
- ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
- ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
- ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
- ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
Author: admin
ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ಅಧ್ಯಕ್ಷರುಗಳು, ಉಪಾಧ್ಯಕ್ಷರ ನೇಮಕ ತಮ್ಮ ದೆಹಲಿ ಭೇಟಿ ಯಾತ್ರೆಯ ಸಂದರ್ಭದಲ್ಲಿ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತಿಂಗಳ ೨೫ ಮತ್ತು ೨೬ ರಂದು ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಈ ಸಂದರ್ಭದಲ್ಲಿ ವರಿಷ್ಠರ ಜತೆ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳಿಗೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕ ಎಲ್ಲದರ ಬಗ್ಗೆಯೂ ಚರ್ಚೆ ನಡೆಸುತ್ತೇನೆ ಎಂದರು.ವರಿಷ್ಠರ ಅನುಮತಿ ಸಿಕ್ಕರೆ ದೆಹಲಿ ಭೇಟಿ ನಂತರ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ನೇಮಕಾತಿಗಳು ನಡೆಯಲಿವೆ ಎಂದು ಅವರು ಹೇಳಿದರು. ಮಾಜಿ ಸಚಿವ ಈಶ್ವರಪ್ಪನವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗ ಅವರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಸಲ್ಲಿಕೆಯಾಗುತ್ತಿದೆ. ಮುಂದೆ ನೋಡೋಣ ಎಂದರು. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ನಡೆದಿರುವ…
ಒಂದು ಸಮುದಾಯದಿಂದ ಯಾರೂ ಮುಖ್ಯಮಂತ್ರಿಯಾಗಲ್ಲ. ಒಕ್ಕಲಿಗ ಸಮುದಾಯದಂತೆ ನಮ್ಮ ಸಮುದಾಯ ಕೂಡ ದೊಡ್ಡದು. ಹಾಗಂತ ನಾನು ಮುಖ್ಯಮಂತ್ರಿಯಾಗಲು ಆಗುತ್ತದೆಯೇ, ಎಲ್ಲ ಸಮುದಾಯಗಳು ಸೇರಿ ಮುಖ್ಯಮಂತ್ರಿ ಮಾಡುವುದು ಎಂದು ಶಾಸಕ ಜಮೀರ್ ಅಹಮದ್ ಖಾನ್ ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಜನ ಬಯಸುತ್ತಿದ್ದಾರೆ. ನನ್ನ ವೈಯುಕ್ತಿಕ ಅಭಿಪ್ರಾಯವೂ ಇದೇ ಆಗಿದೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂಬ ವಿಚಾರವನ್ನು ಮತ್ತೆ ಪ್ರಸ್ತಾಪಿಸಿದ್ದಾರೆ. ಎಲ್ಲರಿಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇರುತ್ತದೆ. ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ. ಒಂದು ಸಮುದಾಯದಿಂದ ಯಾರೂ ಮುಖ್ಯಮಂತ್ರಿಯಾಗಲ್ಲ. ಎಲ್ಲ ಸಮುದಾಯ ಸೇರಿ ಮುಖ್ಯಮಂತ್ರಿ ಮಾಡುವುದು ಎಂದು ಹೇಳುವ ಮೂಲಕ ಒಕ್ಕಲಿಗ ಸಮುದಾಯ ಮುಖ್ಯಮಂತ್ರಿ ಹುದ್ದೆಗೆ ತಮ್ಮನ್ನು ಬೆಂಬಲಿಸಬೇಕು ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದರು. ಸಿದ್ದರಾಮಯ್ಯನವರ ಹುಟ್ಟುಹಬ್ಬವನ್ನು ಎಲ್ಲ ಅಭಿಮಾನಿಗಳು ಸೇರಿ ಮಾಡುತ್ತಿದ್ದೇವೆ. ಇದಕ್ಕೆ ನಾನಾ ಅರ್ಥ ಕಲ್ಪಿಸುವುದು ಬೇಡ…
ಯಾವುದೇ ಕಾರಣಕ್ಕೂ ಕಾಂಗ್ರೆಸ್‌ನವರು ಮುಖ್ಯಮಂತ್ರಿಯಾಗಲು ನಾವು ಬಿಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ಮಂಡ್ಯಕ್ಕೆ ತೆರಳುವ ಮುನ್ನ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದ ರೀತಿ ನಾನೇ ಸಿಎಂ, ನಾನೇ ಸಿಎಂ ಎನ್ನುತ್ತಿದ್ದಾರೆ. ಆದರೆ ಯಾವ ಕಾರಣಕ್ಕೂ ಅವರು ಸಿಎಂ ಆಗಲು ನಾವು ಬಿಡಲ್ಲ ಎಂದರು.ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ನಡೆದಿರುವ ಹೋರಾಟಕ್ಕೆ ಪ್ರತಿಕ್ರಿಯಿಸಿದ ಅವರು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಮುಂದಿನ ಬಾರಿಯೂ ಬಿಜೆಪಿಯವರೇ ಮುಖ್ಯಮಂತ್ರಿಯಾಗುತ್ತಾರೆ ಎಂದರು.ಮುಂದಿನ ಚುನಾವಣೆಯಲ್ಲಿ ೧೦೦ಕ್ಕೆ ೧೦೦ ರಷ್ಟು ಬಿಜೆಪಿ ಅಧಿಕಾರ ಹಿಡಿಯಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 25 ರಂದು ಎರಡನೇ ಸುತ್ತಿನ ವಿಚಾರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಇಂದು ಇಡಿ ಅಧಿಕಾರಿಗಳು ಕೊರೊನಾದಿಂದ ಚೇತರಿಸಿಕೊಂಡಿರುವ ಸೋನಿಯಾ ಗಾಂಧಿ ಅವರನ್ನು ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿತು. ಸೋನಿಯಾ ಗಾಂಧಿ ಅವರ ಮನವಿಯ ಮೇರೆಗೆ ಹೆಚ್ಚಿನ ವಿಚಾರಣೆಯನ್ನು ಎರಡನೇ ಸುತ್ತಿನವರೆಗೆ ತಡೆಹಿಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಸೋನಿಯಾ ಗಾಂಧಿ ಅವರನ್ನು ಇನ್ನು ಮುಂದೆ ಪ್ರಶ್ನಿಸುವುದಿಲ್ಲ ಮತ್ತು ಅವರು ಹೊರಹೋಗಬಹುದು ಎಂದು ಇಡಿ ಹೇಳಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವಿಟ್ ಮೂಲಕ ತಿಳಿಸಿದ್ದಾರೆ. AIIMS ವೈದ್ಯರ ಮೇಲ್ವಿಚಾರಣೆಯಲ್ಲಿ ವಿಚಾರಣೆ ಸೋನಿಯಾ ಗಾಂಧಿ ಅವರ ವಿಚಾರಣೆ ವೇಳೆ ಅವರ ಆರೋಗ್ಯ ಹದಗೆಟ್ಟರೆ ತಕ್ಷಣವೇ ಚಿಕಿತ್ಸೆ ನೀಡಲು ಇಬ್ಬರು ಏಮ್ಸ್ ವೈದ್ಯರು ಮತ್ತು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು, ಸೋನಿಯಾ ಅವರನ್ನು ಭೇಟಿ ಮಾಡಲು ಎರಡು ಬಾರಿ ಪ್ರಿಯಾಂಕಾ ಗಾಂಧಿ ವಿಚಾರಣೆ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರದ ಪ್ರಧಾನ ರಸ್ತೆಯಲ್ಲಿರುವ ನೆಹರು ಮೈದಾನದಲ್ಲಿ ನ್ಯೂಡೈಮಂಡ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಖೋಖೋ ಸಂಸ್ಥೆ ಬೆಂಗಳೂರು, ಚಿತ್ರದುರ್ಗ ಜಿಲ್ಲೆ ಖೋಖೋ ಸಂಸ್ಥೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಪುರುಷರ ಹಾಗೂ ಮಹಿಳೆಯರ ದೀಪಾಲಂಕೃತ ಖೋಖೋ ಅಸೋಸಿಯೇಷನ್ ಕಪ್-2022 ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಡದ ಸಾರಥ್ಯವನ್ನು ಕ್ಷೇತ್ರದ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ವಹಿಸಲಿದ್ದು, ರಾಜ್ಯ ಪ್ರವರ್ಗ-1ರ ಒಕ್ಕೂಟಗಳ ಅಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಜುಲೈ 22, ರಿಂದ 24 ರವರೆಗೆ 3 ದಿನಗಳ ಕಾಲ ಕ್ರೀಡಾಕೂಟ ನಡೆಸಲು ನೆಹರು ಕ್ರೀಡಾಂಗಣ ಸಿದ್ಧವಾಗುತ್ತಿದೆ. ಕ್ರೀಡಾಕೂಟದ ಹಿನ್ನೆಲೆಯಲ್ಲಿ ಡಿ.ಟಿ.ಶ್ರೀನಿವಾಸ್ ಹಾಗೂ ಕೆ.ಪೂರ್ಣಿಮಾ ಶ್ರೀನಿವಾಸ್ ಈ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕ್ರೀಡಾಕೂಟಕ್ಕೆ ಬರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸಿಬ್ಬಂದಿಗೆ ಸೂಚನೆ…
ಮಧುಗಿರಿ: ಭಾರತ ದೇಶದ ಗೌರವಾನ್ವಿತ ನೂತನ ರಾಷ್ಟ್ರಪತಿಯಾಗಿ ದ್ರೌಪತಿ ಮುರ್ಮು ರವರು ಆಯ್ಕೆಯಾದ ಹಿನ್ನೆಲೆಯಲ್ಲಿ ಮಧುಗಿರಿ ನಗರದ ಡೂಮ್ ಲೈಟ್ ಸರ್ಕಲ್ ನಲ್ಲಿ ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ ನೇತೃತ್ವದಲ್ಲಿ ಸಂಭ್ರಮಾಚರಿಸಲಾಯಿತು. ಈ ವೇಳೆ ಮಾತನಾಡಿದ ಮಹಿಳಾ ಮುಖಂಡರು, ಒಬ್ಬ ಆದಿವಾಸಿ ಮಹಿಳೆಗೆ ಯಾವ ಸರ್ಕಾರವು ನೀಡದ ಗೌರವವನ್ನು ಮೋದಿ ಸರ್ಕಾರ ನೀಡಿದೆ. ಮಹಿಳೆಯರಿಗೆ ಸಮಾನತೆ ಕೊಟ್ಟಿರುವುದು ನಮ್ಮೆಲ್ಲರಿಗೆ ಹೆಮ್ಮೆಯನ್ನುಂಟು ಮಾಡಿದೆ ಎಂದರು. ಇದೇ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ವಿಭಾಗದ ಸಂಘಟನಾ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ವಿಧಾನ ಪರಿಷತ್ ಶಾಸಕರಾದ ಕೆ.ಎಸ್.ನವೀನ್, ಜಿಲ್ಲಾಧ್ಯಕ್ಷರಾದ ಬಿ.ಕೆ. ಮಂಜುನಾಥ್, ಯುವ ಮುಖಂಡರಾದ ಹನುಮಂತೇಗೌಡ, ಮಧುಗಿರಿಯ ಮಾಜಿ ಶಾಸಕರಾದ ಗಂಗಹನುಮಯ್ಯ, ಸ್ಫೂರ್ತಿ ಚಿದಾನಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಣ್ಣ, ರವಿ ಪಾವಗಡ, ತಿಮ್ಮಜ್ಜ ಸೇರಿದಂತೆ ಎಲ್ಲಾ ಮಂಡಲಗಳ ಪ್ರಮುಖರು ಹಾಜರಿದ್ದರು. ವರದಿ: ದೊಡ್ಡೇರಿ ಮಹಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ತುರುವೇಕೆರೆ: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಇರುವ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಜನೌಷಧಿ ಮಾರಾಟ ಮಳಿಗೆ ಕಳೆದ ಎರಡು ವರ್ಷಗಳಿಂದ ಮುಚ್ಚಿಟ್ಟು ಮತ್ತೆ ಕಳೆದ ಮೂರು ತಿಂಗಳಿನಿಂದ ಎಂ.ಎಸ್.ಐ ಎಲ್ ನವರು ಮಾರಾಟ ಮಳಿಗೆಯನ್ನು ತೆರೆದಿದ್ದು ಮಾರಾಟ ಮಾಡಲು ಒಬ್ಬ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಮಾಡಿಕೊಂಡಿದೆ. ಈ ಸಿಬ್ಬಂದಿ ಎಂಆರ್ ಪಿ ಬೆಲೆಗಿಂತ ಹೆಚ್ಚು ಬೆಲೆ ತೆಗೆದುಕೊಳ್ಳುತ್ತಿದ್ದು, ಇಂದು ತಾಲೂಕಿನ ದಂಡಿನಶಿವರ ಹೋಬಳಿಯ ಬೀಚನಹಳ್ಳಿ ಗ್ರಾಮದ ವಾಸಿ ಸುನಿಲ್ ಬಿನ್ ಚನ್ನಯ್ಯ ಎಂಬುವರು ಸರ್ಕಾರಿ ಆಸ್ಪತೆಗೆ ತನ್ನ ಬಾಣಂತಿ ಹೆಂಡತಿಯನ್ನು ವೈದ್ಯರ ಬಳಿ ಪರೀಕ್ಷೆ ಮಾಡಿಸಿದ್ದಾರೆ. ವೈದ್ಯರು ಮೆಡಿಸನ್ ಮತ್ತು ಮಾತ್ರೆಯನ್ನು ಬರೆದಿದ್ದು, ಮಾತ್ರೆಕೊಳ್ಳಲು ಈ ಜನೌಷಧಿ ಮಳಿಗೆಗೆ ಹೋಗಿ ಕೊಂಡುಕೊಂಡು ಬೆಲೆಕೇಳಿದಾಗ ಹೆಚ್ಚುಪಟ್ಟು ಪಡೆದಿರುವುದು ಕಂಡು ಬಂದಿದೆ. ಈ ಮಾತ್ರೆಯ ಲೇಬಲ್ ಮೇಲೆ 18 ರೂ. ಇದ್ದು ಆದರೆ ಈ ಮಾರಾಟ ಸಿಬ್ಬಂದಿ ಮಾತ್ರೆ ಲೇಬಲ್ 118 ಆಗಿ ಮಾರ್ಕರ್ ಪೆನ್ನಿನಲ್ಲಿ ಬರೆದಿರುವುದು ಬೆಳಕಿಗೆ ಬಂದಿದೆ. ಇದನ್ನು ಮತ್ತೆ ಸಿಬ್ಬಂದಿ…
ಹರ್ಯಾಣ: ಮೊಬೈಲ್ ಚಾರ್ಜ್ ಮಾಡಿ ಜೇಬಿನಲ್ಲಿ ಹಾಕಿದ ಕೆಲವೇ ನಿಮಿಷಗಳಲ್ಲಿ ಮೊಬೈಲ್ ಬ್ಲಾಸ್ಟ್ ಆಗಿ ಯುವಕ ಗಾಯಗೊಂಡ ಘಟನೆ ಹರ್ಯಾಣದಲ್ಲಿ ನಡೆದಿದ್ದು, ಯುವಕನನ್ನು ಆಸ್ಪತ್ರೆಗೆ ದಾಖಲಾಗಿದೆ. ಸ್ಫೋಟಗೊಂಡ ಮೊಬೈಲನ್ನು ಯುವಕ ಬಹಳ ಸಮಯದಿಂದ ಬಳಸುತ್ತಿದ್ದರು ಎನ್ನಲಾಗಿದೆ. ಬುಧವಾರ ಫೋನ್ ನ ಬ್ಯಾಟರಿ ಖಾಲಿಯಾದ ಕಾರಣ ಮೊಬೈಲ್ ಚಾರ್ಜಿಂಗ್ ಗೆ ಹಾಕಿದ್ದರು. ಚಾರ್ಜ್ ಮಾಡಿದ ನಂತರ, ಸ್ವಲ್ಪ ಹೊತ್ತು ಬಳಸಿ, ಪ್ಯಾಂಟ್ನ ಜೇಬಿಗೆ ಹಾಕಿಕೊಂಡಿದ್ದು, ಈ ವೇಳೆ ಮೊಬೈಲ್ ಏಕಾಏಕಿ ಸ್ಫೋಟಗೊಂಡಿದೆ. ಫೋನ್ ಬ್ಲಾಸ್ಟ್ ಆದ ಪರಿಣಾಮ ಯುವಕನ ಕಾಲಿಗೆ ತೀವ್ರವಾದ ಸುಟ್ಟಗಾಯಗಳಾಗಿವೆ. ಸದ್ಯ ಯುವಕನನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಬಳಿಕ ವೈದ್ಯರು ಡಿಸ್ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವರು ಶುಭಾಶಯ ಕೋರಿದ್ದು ಬಿಜೆಪಿ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ದ್ರೌಪದಿ ಮುರ್ಮು ಅವರಿಗೆ 5,121 ಮತಗಳು ಬಿದ್ದಿವೆ. ಈ ಮತಗಳ ಒಟ್ಟು ಮೌಲ್ಯ 5,77,777 ಆಗಿದೆ. ಇನ್ನು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ 1,058 ಮತಗಳು ಬಿದ್ದಿದ್ದು ಇದರ ಮೌಲ್ಯ 2,61,062 ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಿಪಟೂರು: ಬೈಕ್ ಮೇಲೆ ಜಲ್ಲಿ ತುಂಬಿದ ಕ್ರಷರ್ ಲಾರಿ ಹರಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವನಿಗೆ ಗಂಭೀರವಾಗಿ ಗಾಯವಾದ ಘಟನೆ ಹುಚ್ಚನಟ್ಟಿ ಅಂಡರ್ ಪಾಸ್ ಬಳಿ ನಡೆದಿದೆ. ಹಳೇಪಾಳ್ಯದ ಪರಿಶಿಷ್ಟ ಜಾತಿ ಕಾಲೋನಿಯ 24 ವರ್ಷ ವಯಸ್ಸಿನ ರಂಗಸ್ವಾಮಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ರಂಗಸ್ವಾಮಿ ಅವರು ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ರಂಗಸ್ವಾಮಿ ಅವರು ಬೈಕ್ ನಲ್ಲಿ ಹಸುವಿಗೆ ಮೇವು ಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕ್ರಷರ್ ಲಾರಿ ಬೈಕ್ ಸವಾರನ ಮೇಲೆಯೇ ಹರಿದಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಡರ್ ಪಾಸ್ ನಲ್ಲಿ ಯಾವುದೇ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಅಂಡರ್ ಪಾಸ್ ರಸ್ತೆಗೆ ಕನಿಷ್ಟ ಹಂಪ್ ಗಳು ಕೂಡ ಮಾಡದೇ ಹಾಗೆಯೇ ಬಿಡಲಾಗಿದ್ದು, ವಾಹನಗಳು ಅಡ್ಡದಿಡ್ಡಿಯಾಗಿ ಚಲಿಸುತ್ತಿವೆ. ಇದೀಗ ಪ್ರಾಣವೊಂದು ಬಲಿಯಾಗಿದೆ. ನಿರ್ಲಕ್ಷ್ಯವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂಬ ಒತ್ತಾಯಗಳು ಘಟನೆಯ…