Subscribe to Updates
Get the latest creative news from FooBar about art, design and business.
- ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
- ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
- ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ
- ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
- ತುಮಕೂರು: ರಾಷ್ಟ್ರಪಕ್ಷಿ ನವಿಲುಗಳ ಸರಣಿ ಸಾವು; ಹಕ್ಕಿಜ್ವರದ ಆತಂಕ!
- ಹುಳಿಯಾರು: ಮಳೆ ಕೊರತೆಯಿಂದ ಕಂಗಾಲಾದ ರೈತರು; ಟ್ಯಾಂಕರ್ ನೀರಿಗೆ ಹೆಚ್ಚಿದ ಬೇಡಿಕೆ
- ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ
- ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
Author: admin
ಅನ್ವಯಿಕ ಗಣಿತಜ್ಞ, ವೇದ ಪಂಡಿತರೂ ಆಗಿದ್ದಂಥಹ ಪದ್ಮಶ್ರೀ ಪುರಸ್ಕೃತ ಪ್ರೊ. ಆರ್.ಕೆ.ಕಶ್ಯಪ್ ಅವರು ಇಂದು ಬೆಂಗಳೂರಿನಲ್ಲಿ ಸ್ವರ್ಗಸ್ಥರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು ಪರ್ ಡ್ಯೂ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾಗ, ಹಾರ್ವರ್ಡ್ ನ ಓರ್ವ ಪ್ರಾಧ್ಯಾಪಕರೊಂದಿಗೆ, ಮಾದರಿಗಳನ್ನು ಗುರುತಿಸುವ ಆಲ್ಗಾರಿದಂ (Ho-Kashyap rule) ಹೋ-ಕಶ್ಯಪ್ ಅನ್ನು ಅಭಿವೃದ್ಧಿಪಡಿಸಿದ ಕೀರ್ತಿ ಪಡೆದಿದ್ದರು. ಶ್ರೀಯುತರು ಸುಮಾರು ೫೦ ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಕಶ್ಯಪ್ ಅವರಿಗೆ ವೇದಗಳ ಬಗ್ಗೆ ಅತೀ ಆಸಕ್ತಿ ಇತ್ತು. ಯುಎಸ್‌ನಿಂದ ಹಿಂದಿರುಗಿದ ನಂತರ ಅವರು ಬೆಂಗಳೂರಿನ ಜಯನಗರದಲ್ಲಿ ೧೯೯೭ರಲ್ಲಿ ಸಾಕ್ಷಿ – ಶ್ರೀ ಅರಬಿಂದೋ ಕಪಾಲಿ ಶಾಸ್ತ್ರಿ ಇನ್ಸ್ಟಿಟ್ಯೂಟ್ ಆಫ್ ವೇದಿಕ್ ಕಲ್ಚರ್ ಅನ್ನು ಸ್ಥಾಪಿಸಿದರು. ಆ ಸಂಸ್ಥೆಯ ಮೂಲಕ ಅವರು ವೇದಗಳ ಅಧ್ಯಯನವನ್ನು ಕೈಗೊಂಡು, ಹಲವು ಪುಸ್ತಕಗಲನ್ನು ಸಂಪಾದಿಸಿ, ಪ್ರಕಟಿಸಿದರು. ಜೊತೆಗೆ ಶ್ರೀ ಅರಬಿಂದೊ ಅವರ ಕುರಿತು ಅಧ್ಯಯನ ನಡೆಸಿದರು. ನಾಲ್ಕೂ ವೇದಗಳನ್ನು ಆಂಗ್ಲ ಭಾಷೆಗೆ ತರ್ಜುಮೆ ಮಾಡಿದ ಕೀರ್ತಿಯೂ ಇವರಿಗೆ ಸಂದಿದೆ.…
ಕಾಲುಜಾರಿ ಹೊಂಡಕ್ಕೆ ಬಿದ್ದು ಬಾಲಕಿ ಮತ್ತು ಯುವತಿ ಸಾವನ್ನಪ್ಪಿರುವ ಘಟನೆ ಕಲಬುರುಗಿಯಲ್ಲಿ ನಡೆದಿದೆ. ಕಲಬುರುಗಿ ಜಿಲ್ಲೆ ಶಹಬಾದ್ ತಾಲ್ಲೂಕು ರಾಮಘಡ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು ಮಾಣಕಮ್ಮದಾಸರ(20), ಕೀರ್ತೀಕಾ(12) ಮೃತಪಟ್ಟವರು. ಮೃತರು ಬಟ್ಟೆ ತೊಳೆಯಲು ಹೊಂಡದ ಬಳಿ ಹೋಗಿದ್ದರು. ಈ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಅತ್ಯಾಚಾರಕ್ಕೊಳಗಾದ 13 ವರ್ಷದ ಸಂತ್ರಸ್ತೆಯ ಗರ್ಭಪಾತ ಮಾಡಿಸಲು ಹೈಕೋರ್ಟ್ ವಾಣಿವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ಗೆ ನಿರ್ದೇಶನ ನೀಡಿದೆ. ಅತ್ಯಾಚಾರಕ್ಕೊಳಗಾಗಿ ಗರ್ಭ ಧರಿಸಿದ್ದ ಅಪ್ರಾಪ್ತೆ ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ. ಆಸ್ಪತ್ರೆಯ ವೈದ್ಯರು ಸಂತ್ರಸ್ತೆಯನ್ನು ಪರಿಶೀಲನೆಗೊಳಪಡಿಸಿ ಅವರ ಜೀವಕ್ಕೆ ಹಾನಿಯಾಗುವಂತಿದ್ದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬಹುದು. ಒಂದು ವೇಳೆ ವೈದ್ಯರ ನಿರ್ಧಾರದಂತೆ ಗರ್ಭ ತೆಗೆಸಿದಲ್ಲಿ ತನಿಖೆಗೆ ನೆರವಾಗುವುದಕ್ಕಾಗಿ ಭ್ರೂಣದ ಡಿಎನ್‌ಎಯನ್ನು ವಿಧಿ ವಿಜ್ಞಾನ ಪ್ರಯೋಗದಲ್ಲಿ ಸಂಗ್ರಹಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ. ಅಲ್ಲದೆ, ವೈದ್ಯರ ಸೂಚನೆ ಮೇರೆಗೆ ಹೆಚ್ಚುವರಿ ಚಿಕಿತ್ಸೆಗೂ ಇದೇ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಬೇಕು. ಯಾವುದೇ ಕಾರಣಕ್ಕೂ ಸಂತ್ರಸ್ತೆಯಿಂದ ಪಡೆದುಕೊಳ್ಳಬಾರದು ಎಂದು ಸೂಚನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಕರೆತರಲಾಗಿದ್ದ ಆರೋಪಿಯೊಬ್ಬರು ಪೊಲೀಸರ ವಶದಲ್ಲಿದ್ದಾಗಲೇ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ. ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ(45) ಮೃತರು, ಗಾಂಜಾ ಪ್ರಕರಣದ ವಿಚಾರಣೆಗೆ ಈತನನ್ನು ಬೆಳಗಾವಿಗೆ ಕರೆತರುವಾಗ ಕಾಕತಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಅಗತ್ಯ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದೆವು. ಚೇತರಿಸಿಕೊಂಡ ನಂತರ, ಬೆಳಗಾವಿ ಗ್ರಾಮೀಣ ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದೆವು. ಈ ವೇಳೆ ಮತ್ತೆ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದೆವು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪತ್ನಿ ನೀಡಿದ ದೂರು ಆಧರಿಸಿ, ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ಒಪ್ಪಿಸಲಾಗುವುದು ಎಂದು ಡಿಸಿಪಿ ರವೀಂದ್ರ ಗದಾಡಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲ್ಲೂಕು ಆಡಳಿತ ವತಿಯಿಂದ ವೀರವನಿತೆ ಒನಕೆ ಓಬವ್ವ ಹಾಗೂ ಕನಕದಾಸರ ಜಯಂತಿಯನ್ನು ತಹಶೀಲ್ದಾರ್ ರವರ ಕಚೇರಿ ಆವರಣದಲ್ಲಿ ತಾಲ್ಲೂಕು ಕುರುಬ ಸಮುದಾಯದ ಸದಸ್ಯರು ಹಾಗೂ ಚಲವಾದಿ ಸಮುದಾಯದ ಸದಸ್ಯರೊಂದಿಗೆ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷಯೆ ವಹಿಸಿ ಮಾತನಾಡಿದ ತಹಶೀಲ್ದಾರ್ ನಾಹಿದಾ ಜಮ್ ಜಮ್, ನಮ್ಮ ನಾಡಿಗೆ ಕೀರ್ತಿ ತರುವ ಪಾತ್ರದಲ್ಲಿ ವೀರ ವನಿತೆಯರ ಪಾತ್ರವೂ ಬಹುಮುಖ್ಯವಾಗಿದೆ. ಅದರಲ್ಲೂ ವೀರವನಿತೆ ಒನಕೆ ಓಬವ್ವ ಎಂದ ಕೂಡಲೇ ನೆನಪಾಗುವುದು ಚಿತ್ರದುರ್ಗದ ಕೋಟೆ ಹೈದರಾಲಿಯ ಸೇನೆಯೊಂದಿಗೆ ಏಕಾಂಗಿಯಾಗಿ ಹೋರಾಡಿದ ವೀರವನಿತೆ ಒನಕೆ ಓಬವ್ವ ಆಕೆ ಸಾಹಸದ ಕಥೆಯನ್ನು ಮುಂದಿನ ಪೀಳಿಗೆಗೂ ಸಾರುವಂತದ್ದು. ಅಂತಹ ವೀರ ವನಿತೆಯರು ಜನಿಸಿರುವ ಈ ಭೂಮಿ ನಿಜಕ್ಕೂ ಪುಣ್ಯಭೂಮಿ ಎಂದರೆ ತಪ್ಪಾಗಲಾರದು. ಇಂತಹ ಮಹಾನ್ ವೀರ ವನಿತೆಯರ ಜಯಂತಿಯನ್ನು ಆಚರಿಸಲು ಸರಕಾರವು ಅನುವು ಮಾಡಿಕೊಟ್ಟ ಸಾರ್ವಜನಿಕರು ಮತ್ತು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ತಾಲ್ಲೂಕು ಕುರುಬ ಸಮುದಾಯದ ಅಧ್ಯಕ್ಷ ಮೈಲಾರಪ್ಪ ಮಾತನಾಡಿ, ಕನಕದಾಸರು ಕೇವಲ ಕುರುಬ ಸಮುದಾಯಕ್ಕೆ ಮಾತ್ರ ಸೇರಿದವರಲ್ಲ ನಾಡಿನ…
ನವದೆಹಲಿ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ಮರು ವಿಂಗಡಣೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮತ್ತು ಇತರೆ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಮತ್ತೆ 12 ವಾರಗಳ ಕಾಲ ಹೈಕೋರ್ಟ್ ಕಾಲಾವಕಾಶ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ಅನಿರುದ್ಧ್ ಬೋಸ್ ಅವರ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ರಾಜ್ಯ ಚುನಾವಣಾ ಆಯೋಗದ ಅರ್ಜಿಯನ್ನು ವಜಾಗೊಳಿಸಿದೆ. ಹೈಕೋರ್ಟ್ ನೀಡಿದ ಆದೇಶಕ್ಕೆ ತಡೆ ನೀಡಿ ಈ ಹಿಂದೆ ಆಯೋಗ ಹೊರಡಿಸಿದ ಆದೇಶದ ಪ್ರಕಾರ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಬೇಕೆಂದು ರಾಜ್ಯ ಚುನಾವಣಾ ಆಯೋಗದಿಂದ ಸುಪ್ರೀಂಕೋರ್ಟಿಗೆ ಮನವಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದರು. ನಂತರ ಸುಪ್ರೀಂ ಕೋರ್ಟ್ ಪೀಠ ಚುನಾವಣಾ ಆಯೋಗದ ಅರ್ಜಿಯನ್ನು ವಜಾಗೊಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ…
ಚೆನ್ನೈ: ನಳಿನಿ ಶ್ರೀಹರನ್ ಸೇರಿದಂತೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸ್ವಾಗತಿಸಿದ್ದಾರೆ. ‘ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ, ಜನರಿಂದ ಆಯ್ಕೆಯಾದ ಸರ್ಕಾರದ ನಿರ್ಧಾರಗಳು ಮತ್ತು ನಿರ್ಧಾರಗಳನ್ನು ರಾಜ್ಯಪಾಲರು ನೇಮಿಸಿದ ಸ್ಥಾನಗಳಲ್ಲಿ ಕೈಬಿಡಬಾರದು ಎಂಬುದಕ್ಕೆ ಸುಪ್ರೀಂ ಕೋರ್ಟ್‌ನ ಈ ತೀರ್ಪು ಸಾಕ್ಷಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಶ್ರೀಹರನ್ ಮತ್ತು ಇತರ ಐವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಜೈಲಿನಲ್ಲಿ ಅವರ ಉತ್ತಮ ನಡತೆ ಹಿನ್ನೆಲೆಯಲ್ಲಿ ಅವರನ್ನು ಸುಪ್ರೀಂ ಬಿಡುಗಡೆಗೊಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಚಿತ್ರದುರ್ಗ: ಶ್ರೀ ಆಂಜನೇಯ ವಿದ್ಯಾ ಸಂಸ್ಥೆ ಚಿತ್ರದುರ್ಗ, ಶ್ರೀ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಹಿರೇಗುಂಟನೂರು, ಶ್ರೀ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 1988-89ನೇ ಸಾಲಿನಿಂದ 2022-23ನೇ ಸಾಲಿ ನ ವರೆಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಂದ ಗುರುವಂದನ ಕಾರ್ಯಕ್ರಮವು ಹಿರೇಗುಂಟನೂರು ಕಾಲೇಜಿನ ಆವರಣದಲ್ಲಿ ನವೆಂಬರ್ 12ರಂದು ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರದುರ್ಗದ ಮದಕರಿ ನಾಯಕ ವಿದ್ಯಾ ಸಂಸ್ಥೆ ಅಧ್ಯಕ್ಷ ಎಸ್. ಸಂದೀಪ್, ಚಿತ್ರದುರ್ಗ ಶ್ರೀ ಆಂಜನೇಯ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ದಿವ್ಯ ಸರಸ್ವತಿ ಎಸ್. ಸಂದೀಪ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಅಧೀಕ್ಷಕರಾದ ಡಾ. ಕವಿತ ಬಿ.ಟಿ, ಐ.ಪಿ.ಎಸ್., ಚಿತ್ರದುರ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎನ್.ರಾಜು, ತ್ರದುರ್ಗಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಬಿ.ಮಲ್ಲೇಶ್ , ಹಿರೇಗುಂಟನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಟಿ. ಜ್ಯೋತಿ ಚಂದ್ರಶೇಖರ್, ಹಿರೇಗುಂಟನೂರು ಪಿ.ಡಿ.ಓ. ವನಜಾಕ್ಷಿ ಬಿ., ಶ್ರೀ ದ್ಯಾಮಲಾಂಬ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ವಸಂತ್…
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಣದಲ್ಲಿ ವಂದೇ ಭಾರತ ಎಕ್ಸ್‌ಪ್ರೆಸ್ ಮತ್ತು ಭಾರತ ಗೌರವ್ ಕಾಶಿ ದರ್ಶನ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಇಂದು ಬೆಂಗಳೂರಿನ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪ್ರಧಾನಿ ಮೋದಿ ಅವರು, ಕನಕದಾಸರು ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ವಿಧಾನಸೌಧದಿಂದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ, ವಂದೇ ಭಾರತ ಎಕ್ಸ್‌ಪ್ರೆಸ್ ಹಾಗೂ ಭಾರತ ಗೌರವ್ ಕಾಶಿ ದರ್ಶನ ರೈಲ್ವೆಗೆ ಚಾಲನೆ ನೀಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ , ಸಿಎಂ ಬಸವರಾಜ ಬೊಮ್ಮಾಯಿ, ಕೇಂಧ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿಗೆ ಸಚಿವೆ ಶಶಿಕಲಾ ಜೊಲ್ಲೆ ಕಾಮದೇನು ಸ್ಮರಣಿಕೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ತಮ್ಮ 32 ವರ್ಷಗಳ ಸೇವಾ ಅವಧಿಯಲ್ಲಿ ಅಗ್ನಿಶಾಮಕ ದಳದಲ್ಲಿ ಜನರ ಪ್ರಾಣ ಜನ ರಕ್ಷಣೆ,ಆಸ್ತಿಪಾಸ್ತಿ ರಕ್ಷಣೆ ಸೇರಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಸಂಕೇಶ್ವರದ ಅಗ್ನಿಶಾಮಕ ನಿವೃತ್ತ ಠಾಣಾಧಿಕಾರಿ ಮಹಾಲಿಂಗಪ್ಪ ಮುಧೋಳ ಅವರು ಈ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದುಕೊಂಡಿದ್ದಾರೆ. ಇತ್ತೀಚಿಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ನಡೆದ ಪದಕ ಪ್ರಧಾನ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪದಕ ಪ್ರಧಾನ ಮಾಡಿ ಗೌರವಿಸಿದರು.ಗೃಹ ಸಚಿವ ಅರಗ ಜ್ಞಾನೇಂದ್ರ ಉಪಸ್ಥಿತರಿದ್ದರು. ಜುಲೈ 13,1988ರಿಂದ ಅಗ್ನಿ ಶಾಮಕ ಇಲಾಖೆಯಲ್ಲಿ ಸೇವೆಗೆ ಸೇರಿದ ಮಹಾಲಿಂಗಪ್ಪ ಮುಧೋಳ ತಮ್ಮ 32ವರ್ಷಗಳ ಸುಧೀರ್ಘ ಅವಧಿಯಲ್ಲಿ ಪ್ರಮುಖ ಅಗ್ನಿಶಾಮಕ, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ, ಅಗ್ನಿಶಾಮಕ ಠಾಣಾಧಿಕಾರಿಯಾಗಿ ಇತ್ತೀಚಿಗೆ ನಿವೃತ್ತಿಯಾಗಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿ ಜನರ ಪ್ರಾಣ, ಆಸ್ತಿಪಾಸ್ತಿ ರಕ್ಷಣೆ ಮಾಡಿ ಅತ್ಯುತ್ತಮ ಕೆಲಸ ನಿರ್ವಹಿಸಿದ್ದಾರೆ.ಇವರ ನಿಸ್ವಾರ್ಥ ಸೇವೆ ಗುರ್ತಿಸಿ ಈ ಪದಕಪ್ರಧಾನ ಮಾಡಲಾಗಿದೆ.ಪದಕ ಪಡೆದ ಮಹಾಲಿಂಗಪ್ಪ ಮುಧೋಳ್ ಗೆ ಅಗ್ನಿಶಾಮಕ…