Author: admin

ತಿಪಟೂರು: ಗುಬ್ಬಿ ತಾಲ್ಲೂಕು ‘ತುಮಕೂರು ಮಿತ್ರ’ ದಿನಪತ್ರಿಕೆ ವರದಿಗಾರ ರಮೇಶ್ ಗೌಡರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಕೃತ್ಯ ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಿಪಟೂರು ತಾಲೂಕು ಶಾಖೆಯಿಂದ ವತಿಯಿಂದ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ವಸ್ತುನಿಷ್ಠ ವರದಿ ನೀಡುವ ಪತ್ರಕರ್ತರ ಮೇಲೆ ಹಲ್ಲೆ ದೌರ್ಜನ್ಯ ಪ್ರಕರಣಗಳು ನಿರತವಾಗಿ ನಡೆಯುತ್ತಿವೆ. ಸರ್ಕಾರ ಪತ್ರಕರ್ತರ ರಕ್ಷಣೆಗೆ ಕಠಿಣ ಕಾನೂನು ರೂಪಿಸಿ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕಿದೆ ಎಂದು ಇದೇ ವೇಳೆ ಒತ್ತಾಯಿಸಲಾಯಿತು ವಸ್ತುನಿಷ್ಠ ಪ್ರಾಮಾಣಿಕ ಮಾಧ್ಯಮರಂಗ ಉಳಿಯಬೇಕಾದರೆ ಸರ್ಕಾರ ಪತ್ರಕರ್ತರಿಗೆ ಸೂಕ್ತ ಕಾನೂನು ರಕ್ಷಣೆ ನೀಡಬೇಕು ಎಂದು ಒತ್ತಾಯಿಸಲಾಯಿತು. ಈ ಸಂದರ್ಭ ತಾಲೂಕು ಅಧ್ಯಕ್ಷ  ಬಿ.ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ  ಮಂಜುನಾಥ ಹಾಲ್ಕುರಿಕೆ  ನಿರ್ದೇಶಕರಾದ ರಾಜಣ್ಣ ಉಪಸ್ಥಿತರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಂಗಳೂರು: ಎಐಸಿಸಿ ಶಿಸ್ತು ಸಮಿತಿಯ ಸದಸ್ಯರಾಗಿ ಮಾಜಿ ಉಪ ಮುಖ್ಯಮಂತ್ರಿ ಕಾಂಗ್ರೆಸ್ ನ ಹಿರಿಯ ನಾಯಕರಾದ ಡಾ.ಜಿ.ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ಅವರು, ಎಐಸಿಸಿ ಶಿಸ್ತು ಸಮಿತಿಯ ಸದಸ್ಯರಾಗಿ ಡಾ.ಜಿ.ಪರಮೇಶ್ವರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಶಿಸ್ತು ಸಮಿತಿಯ ಅಧ್ಯಕ್ಷರಾಗಿ ಎ.ಕೆ.ಆಂಟೋನಿ ನೇಮಕಗೊಂಡಿದ್ದಾರೆ. ಜಿ.ಪರಮೇಶ್ವರ್ , ಅಂಬಿಕಾ ಸೋನಿ, ತರೀಖ್ ಅನ್ವರ್, ಜೈ ಪ್ರಕಾಶ್ ಅಗ್ಗಾರ್ ವಾಲ್ ಶಿಸ್ತು ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ, ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಕ್ರಮವನ್ನು ಕೈಗೊಳ್ಳುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಆದೇಶಿಸಿದೆ. 2021—22ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪೂರ್ವ ಪ್ರಾಥಮಿಕ ಹಾಗೂ 1ರಿಂದ 10ನೇ ವರೆಗಿನ ತರಗತಿಗಳು ಕೊವಿಡ್ 19 ನಂತರ  ಭೌತಿಕವಾಗಿ ಆರಂಭವಾಗಿದೆ. ಈ ನಡುವೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಪರಿಸ್ಥಿತಿಗಳನ್ನು ಗಮನಿಸಿಕೊಂಡು ರಜೆ ನೀಡುವಂತೆ ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಆರ್. ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಕೊರಟಗೆರೆ:  ಬೆಲೆ ಏರಿಕೆಗೆ ಸಂಬಂಧಿಸಿದಂತೆ  ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಿಳುವಳಿಕೆ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಈ ಬಗ್ಗೆ ಜನರಿಗೆ ತಿಳುವಳಿಕೆ ನೀಡುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕಾಂಗ್ರೆಸ್ ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಕಾರ್ಯಕರ್ತರಿಗೆ ಕರೆ ನೀಡಿದರು. ಕಾಂಗ್ರೆಸ್ ಜನಜಾಗೃತಿ ಅಭಿಯಾನದ ಪೂರ್ವ ಭಾವಿ ಸಮಾವೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷದ ಸಾಧನೆ ಹಾಗೂ ಕಾಂಗ್ರೆಸ್ ನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನ ಸಾಮಾನ್ಯರಿಗೆ ಮನಮುಟ್ಟುವಂತೆ  ಮಾಹಿತಿ ನೀಡುವಂತೆ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರವು ಜನ ಸಾಮಾನ್ಯರಿಗೆ ಸಂಕಷ್ಟ ಉಂಟಾಗುವಂತೆ ತಿಂಗಳಿಗೊಮ್ಮೆ ಬೆಲೆ ಏರಿಕೆ ಮಾಡುತ್ತಲೇ ಇದೆ. ಈಗಾಗಲೇ ಕಾಂಗ್ರೆಸ್, ಪೆಟ್ರೋಲ್, ಡೀಸೆಲ್ ಬೆಲೆಯ ವಿರುದ್ಧ ಹೋರಾಡಿ ಸರ್ಕಾರಕ್ಕೆ ಮನವರಿಕೆ ಮಾಡುತ್ತಲೇ ಬಂದಿದೆ. ಮುಂದಿನ ದಿನಗಳಲ್ಲಿ ಜನರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದರು. ಇದೇ…

Read More

ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ(81) ಇಂದು ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ರುದ್ರಪ್ಪ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಎರಡು ದಿನದ ಹಿಂದೆ ದುನಿಯಾ ವಿಜಯ್, ಅಪ್ಪನನ್ನ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಇಂದು ಬೆಳಗ್ಗೆ 7.30ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ರುದ್ರಪ್ಪ ಮೃತಪಟ್ಟಿದ್ದಾರೆ. ಈ ಸಂಬಂಧ ವಿಜಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಅಪ್ಪನ ಫೋಟೋ ಹಾಕಿ ‘ಮಿಸ್ ಯೂ ಅಪ್ಪ’ ಎಂದು ಬರೆದುಕೊಂಡಿದ್ದಾರೆ. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ವಿಜಯ್ ತಂದೆಯ ಅಂತ್ಯಕ್ರಿಯೆ ನಡೆಯಲಿದೆ. ಕೆಲವು ತಿಂಗಳು ಹಿಂದೆ ದುನಿಯಾ ವಿಜಯ್ ಅವರ ತಾಯಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಂಗಳೂರು: ಇಂದು ರಾಜ್ಯ ಬಿಜೆಪಿ ವತಿಯಿಂದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಲ್ಕು ತಂಡಗಳಿಂದ ಆಯೋಜಿಸಲಾಗಿರುವ ಜನ ಸ್ವರಾಜ್ ಯಾತ್ರೆಗೆ ಕೊಪ್ಪಳದಲ್ಲಿ ವಿಜಯದ ಕಹಳೆ ಊದುವ ಮೂಲಕ ಚಾಲನೆ ನೀಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಉದ್ದೇಶಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದರು. ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಮುರುಗೇಶ್ ನಿರಾಣಿ ಹಾಲಪ್ಪ ಆಚಾರ್ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರೆ ಜನಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಯಾದಗರಿ: ಉಪ್ಪಿಟ್ಟು ಸೇವಿಸಿ 50 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗರಿ ಜಿಲ್ಲೆಯ ಅಬ್ಬೆತುಮಕೂರಿನ ವಿಶ್ವರಾದ್ಯ ವರ್ಧಕ ಹಾಸ್ಟೆಲ್‌ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸದ್ಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ಸಲುವಾಗಿ ದಾಖಲು ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ಘಟನ ಸ್ಥಳಕ್ಕೆ ಆಗಮಿಸಿದ್ದು, ಉಪಾಹಾರದಲ್ಲಿ ಹಾವಿನ ಮರಿ ಇತ್ತು ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಕೊರಟಗೆರೆ: ತಾಲೂಕಿನಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2022 ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು ಮತದಾರರು ತಮ್ಮ ಹಕ್ಕು ಮತ್ತು ಅಕ್ಷೇಪಣೆಗಳನ್ನು ತಿದ್ದುಪಡಿ ಸೇರ್ಪಡೆ ಮಾಡಲು ಆಥವಾ ತೆಗೆದುಹಾಕಲು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಅವಕಾಶವಿರುವುದಾಗಿ ಗ್ರೇಡ್ 2 ತಹಶೀಲ್ದಾರ್ ತಿಳಿಸಿದ್ದಾರೆ. ಪತ್ರಿಕಾ ತಾಲೂಕು ಕಛೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದಿನಾಂಕ 21-11-2021 ಮತ್ತು 28-11-2021 ರಂದು ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಮತದಾರರ ನೋಂದಾಣಾಧಿಕಾರಿ, ವಾರ್ಡ್ ಕಛೇರಿ ಮತ್ತು ಹತ್ತಿರದ ಮತಗಟ್ಟೆಗಳಿಗೆ ಬೇಟಿ ನೀಡಿ ತಮ್ಮ ಹಕ್ಕು ಮತ್ತು ಅಕ್ಷೇಪಣೆಗಳನ್ನು ತಿದ್ದುಪಡಿ, ಸೇರ್ಪಡೆ ಮಾಡಲು ಅಥವಾ ತೆಗೆದುಹಾಕಲು ಅಗತ್ಯ ದಾಖಲಾತಿಗಳೊಂದಿಗೆ ನೀಡಬಹುದಾಗಿದೆ ಹಾಗೂ ತಮ್ಮ ಹೆಸರು ಇರುವುದನ್ನು ಪರಿಶೀಲಿಸಬಹುದಾಗಿದೆ ಎಂದರು. ದಿನಾಂಕ 13-1-2022 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗುವುದು, ಸಾರ್ವಜನಿಕರು ಆನ್‍ ಲೈನ್‍ ನಲ್ಲೂ ಸಹ ತಮ್ಮ ಹಕ್ಕು ಮತ್ತು ಅಕ್ಷೇಪಣೆಗಳನ್ನು ಅಗತ್ಯ ದಾಖಲಾಗಿಗಳೊಂದಿಗೆ ಸಲ್ಲಿಸಬಹುದಾಗಿದೆ, ದಿನಾಂಕ 01-01-2004ಕ್ಕೆ ಮುಂಚೆ…

Read More

ತುಮಕೂರು:  ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಧುಗಿರಿ ಬೆಟ್ಟದ ಮೇಲಿನಿಂದ ಬೃಹತ್ ಬಂಡೆಯೊಂದು ಉರುಳಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ತುಮಕೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಮಧುಗಿರಿ ಏಕಾಶಿಲಾ ಬೆಟ್ಟದ ಮೇಲಿನಿಂದ ದೊಡ್ಡ ಬಂಡೆಯೊಂದು ಉರುಳಿ ಬಿದ್ದಿದೆ. ಬೃಹತ್ ಬಂಡೆ ಉರುಳಿ ಬಿದ್ದಿರುವುದನ್ನು ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಇಷ್ಟೊಂದು ದೊಡ್ಡ ಬಂಡೆ ಉರುಳಿದರೂ ಯಾರಿಗೂ ಅಪಾಯವಾಗದಿರುವುದಕ್ಕೆ ಮಧುಗಿರಿ ಶ್ರೀ ದಂಡಿನ ಮಾರಮ್ಮನ ಕೃಪೆಯೇ ಕಾರಣ ಎಂದು ಇಲ್ಲಿನ ಜನರು ಆತಂಕದಿಂದ ಮಾತನಾಡುತ್ತಿರುವ ದೃಶ್ಯ ಕಂಡು ಬಂತು.  ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 11,919 ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 470 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆ ತಿಳಿಸಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,44,78,517 ಏರಿಕೆಯಾಗಿದ್ದರೆ, ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 4,64,623ಕ್ಕೆ ಏರಿದೆ. ಪ್ರಸ್ತುತ 1,35,918 ಪ್ರಕರಣಗಳು  ಸಕ್ರಿಯವಾಗಿವೆ. ದೇಶದಲ್ಲಿ ಇದುವರೆಗೂ 114.46 ಕೋಟಿಗೂ  ಅಧಿಕ ಡೋಸ್ ‌ ಕೋವಿಡ್‌ ಲಸಿಕೆ  ನೀಡಲಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More