Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ಜಮೀನು ಖಾತೆ ಮಾಡಿಸಿದ ಆರೋಪದ ಮೇಲೆ ತಹಶೀಲ್ದಾರ್, ಗ್ರಾಮಲೆಕ್ಕಿಗ ಹಾಗೂ ರೆವಿನ್ಯೂ ಇನ್ಸ್ ಪೆಕ್ಟರ್ ಸೇರಿ ಐವರ ವಿರುದ್ಧ ವರುಣಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಅನಿವಾಸಿ ಭಾರತೀಯ ರವಿ ಎಂಬುವವರ ತಂದೆಗೆ ಸೇರಿದ್ದ 1.08 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ಖಾತೆ ಮಾಡಿಸಿಕೊಂಡ ಆರೋಪದ ಮೇಲೆ ಮೈಸೂರು ತಾಲ್ಲೂಕು ವರುಣಾ ಹೋಬಳಿಯ ದೇವೇಗೌಡನಹುಂಡಿ ಗ್ರಾಮದ ನಿವಾಸಿ ಮರೀಗೌಡ, ಶಿವರಾಂ ಹಾಗೂ ಇವರಿಗೆ ಸಹಕರಿಸಿದ ಗ್ರಾಮಲೆಕ್ಕಿಗ ಮಹೇಶ್, ರೆವಿನ್ಯೂ ಇನ್ಸ್ ಪೆಕ್ಟರ್ ಹಾಗೂ ತಹಶೀಲ್ದಾರ್ ವಿರುದ್ಧ ವರುಣಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ . ಈ ಸಂಬಂಧ ವರುಣಾ ಪೊಲೀಸ್ ಠಾಣೆಗೆ ದೂರು ನೀಡಿದ್ಧ ರವಿ ಅವರು, ನಾನು ಅನಿವಾಸಿ ಭಾರತೀಯನಾಗಿದ್ದು ವೃತ್ತಿ ನಿಮಿತ್ತ ಸೌದಿ ಅರೇಬಿಯಾದಲ್ಲಿ, ನೆಲೆಸಿದ್ದೇನೆ. ಮೈಸೂರು ತಾಲ್ಲೂಕು ವರುಣ ಹೋಬಳಿ ಯಡಕೊಳ ದಾಖಲೆ ದೇವೆಗೌಡನಹುಂಡಿ ಗ್ರಾಮದಲ್ಲಿ, ನಮ್ಮ ಪೂರ್ವಜರ ಜಮೀನಿದ್ದು, ಅದು ಸರ್ವೆ ನಂಬರ್…
ಕಾಂಗ್ರೆಸ್ ಗೆ ಕುಕ್ಕರ್ ಬಾಂಬ್ ಮೇಲೆ ಪ್ರೀತಿ ಇದೆ. ಸಿಬಿಐ ಸಂಸ್ಥೆ ಮೇಲೆ ದ್ವೇಷವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಲೇವಡಿ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಸಿ.ಟಿ ರವಿ, ಭ್ರಷ್ಟಾಚಾರ ಮಾಡದಿದ್ದರೇ ಕಾಂಗ್ರೆಸ್ ಯಾಕೆ ಹೆದರಬೇಕು…? ಸಿಬಿಐ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಭ್ರಷ್ಟಾಚಾರ ಆಗಿದ್ದರೇ ತನಿಖೆ ಮಾಡುತ್ತಾರೆ. ಸಿಬಿಐ ಬಗ್ಗೆ ಕಾಂಗ್ರೆಸ್ ಗೆ ಯಾಕೆ ಭಯ. ಎಲ್ಲ ಸರಿ ಇದ್ದರೇ ಡಿ.ಕೆ ಶಿವಕುಮಾರ್ ಗೆ ಭಯವೇಕೆ..? ಎಂದು ಪ್ರಶ್ನಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾರಿನಲ್ಲೇ ಸಾಫ್ಟ್ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುರಬರಹಳ್ಳಿ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ವಿಜಯ್ಕುಮಾರ್(51) ಮೃತಪಟ್ಟ ಇಂಜಿನೀಯರ್ ಎಂದು ಗುರುತಿಸಲಾಗಿದೆ. ವಿಜಯ್ ಕುಮಾರ್ ಅವರು ಮಹಾಲಕ್ಷ್ಮೀ ಲೇಔಟ್ ನ ನಿವಾಸಿಯಾಗಿದ್ದು, ಕೆಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.. ಅನಾರೋಗ್ಯದಿಂದ ಬೇಸತ್ತು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಹೃದಯ ಸಂಬಂಧಿ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿ ಪತ್ನಿ ಜತೆ ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವ ವಿಷಯವನ್ನು ಪ್ರಸ್ತಾಪಿಸಿದ್ದರು ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : 1 ನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಸಂಬಂಧ ಮಹತ್ವದ ಮಾಹಿತಿ ನೀಡಿದ್ದು , 1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಆಗಿರಬೇಕು ಎಂದು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. 2025-26 ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಲೇಷ್ಯಾದ ತೆರೆಂಗಾನು ರಾಜ್ಯದಲ್ಲಿ ಹೊಸ ಕಾನೂನು ಜಾರಿಗೆ ಬಂದಿದೆ. ಅಲ್ಲಿ ವಾಸಿಸುವ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕಠಿಣ ಕಾನೂನುಗಳನ್ನು ಪರಿಚಯಿಸಲಾಯಿತು. ಪುರುಷರಂತೆ ಡ್ರೆಸ್ಸಿಂಗ್ ಮತ್ತು ವಿವಾಹವಿಲ್ಲದೆ ಗರ್ಭಿಣಿಯಾಗುವುದು ಕಠಿಣ ಶಿಕ್ಷೆಗೆ ಗುರಿಯಾಗುತ್ತದೆ. ಚಾವಟಿ ಮತ್ತು ದಂಡದೊಂದಿಗೆ ಗರಿಷ್ಠ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ. ಚಾವಟಿ ಮತ್ತು ದಂಡದೊಂದಿಗೆ ಗರಿಷ್ಠ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ. ಹೊಸ ಕಾನೂನುಗಳು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಮಾನತೆಯಂತಹ ಹಕ್ಕುಗಳನ್ನು ನಾಶಪಡಿಸುತ್ತಿವೆ ಎಂದು ಆಲ್ ವುಮೆನ್ಸ್ ಅಸೋಸಿಯೇಷನ್ ಮತ್ತು ಇತರ ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಆದರೆ ಹೊಸ ಕಾನೂನು ಮುಸ್ಲಿಮರಿಗೆ ಹೆಚ್ಚಿನ ಪ್ರಯೋಜನಗಳನ್ನು ತರುತ್ತದೆ ಎಂದು ಸರ್ಕಾರ ಹೇಳುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಈರುಳ್ಳಿ ರಸವು ಕೂದಲು ಉದುರುವಿಕೆಯನ್ನು ನಿಯಂತ್ರಿಸುತ್ತದೆ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ. ಈರುಳ್ಳಿ ರಸದಲ್ಲಿ ಗಂಧಕ ಹೆಚ್ಚಾಗಿರುತ್ತದೆ. ಇದು ನೆತ್ತಿಗೆ ರಕ್ತದ ಹರಿವನ್ನು ಹೆಚ್ಚಿಸುತ್ತದೆ ಮತ್ತು ಹೊಸ ಕೂದಲು ಬೆಳವಣಿಗೆಗೆ ಸಹಾಯ ಮಾಡುತ್ತದೆ. ಜೊತೆಗೆ ಸಲ್ಫರ್, ಫೋಲಿಕ್ ಆಮ್ಲ, ವಿಟಮಿನ್ ಸಿ, ಈರುಳ್ಳಿ ರಸವು ಕೂದಲಿಗೆ ತುಂಬಾ ಒಳ್ಳೆಯದು ಎಂದು ವಿವರಿಸಲಾಗಿದೆ ಏಕೆಂದರೆ ಇದರಲ್ಲಿ ಪೊಟ್ಯಾಸಿಯಮ್ ಮತ್ತು ಪ್ರೋಟೀನ್‌ನಂತಹ ಅಂಶಗಳಿವೆ. ಆದರೆ ವೈದ್ಯರ ಸಲಹೆಯಂತೆ ಬಳಸಲು ಶಿಫಾರಸು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 2400 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಳೆದ ಮೂರು ವರ್ಷಗಳಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ 2105 ಕೋಟಿ ರೂ.ಮಂಜೂರು ಮಾಡಲಾಗಿದೆ.2047 ಕೋಟಿ ರೂ.ವೆಚ್ಚ ಮಾಡಲಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 238 ಕೋಟಿ ರೂ. ಮಂಜೂರು ಮಾಡಲಾಗಿತ್ತು 300 ಕೋಟಿ ರೂ.ಖರ್ಚು ಮಾಡಲಾಗಿದೆ.ಬಿಡುಗಡೆಯಾಗಿರುವದಕ್ಕಿಂತ ಹೆಚ್ಚು ಅನುದಾನ ವೆಚ್ಚವಾಗಿದೆ.ಹಿಂದಿನ ವರ್ಷಗಳಲ್ಲಿ ಉಳಿಕೆಯಾಗಿರುವ ಅನುದಾನದಲ್ಲಿ ಇದನ್ನು ಸರಿದೂಗಿಸಲಾಗಿದೆ ಎಂದರು. ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ವಕ್ಫ್ ಆಸ್ತಿಗಳ ಸಂರಕ್ಷಣೆ,ದುರಸ್ತಿ ಮತ್ತು ಜೀರ್ಣೋದ್ಧಾರ ,ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಕಳೆದ ಮೂರು ವರ್ಷಗಳಲ್ಲಿ 88.75 ಕೋಟಿ ರೂ.ಅನುದಾನ ಮಂಜೂರು ಮಾಡಲಾಗಿದೆ.50.91 ಕೋಟಿ ರೂ.ಅನುದಾನ ವೆಚ್ಚವಾಗಿದೆ. ರಾಜ್ಯ ವಕ್ಫ್ ಮಹಿಳಾ ಅಭಿವೃದ್ಧಿ ಪ್ರತಿಷ್ಠಾನದಡಿ ಅಲ್ಪಸಂಖ್ಯಾತ ಮುಸ್ಲಿಂ ಮಹಿಳೆಯರು ಮತ್ತು ಹೆಣ್ಣು…
ಕೊರಟಗೆರೆ: ಪಟ್ಟಣದ ತಾಲ್ಲೂಕಿನ ಇರಕಸಂದ್ರ ಗ್ರಾಮದಲ್ಲಿ 300ಕ್ಕೂ ಹೆಚ್ಚು ಮನೆಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ಮಶಾನವೇ ಮರೀಚಿಕೆ ಆಗಿದ್ದು ಶವ ಸಂಸ್ಕಾರ ಮಾಡಲು ಜಾಗಕ್ಕೆ ಬಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ. ಇನ್ನೂ ಬೆಟ್ಟಗುಡ್ಡದಲ್ಲಿ ಶವವನ್ನು ಕಲ್ಲಿನಿಂದ ಮುಚ್ಚುವ ದುಸ್ಥಿತಿ ಎದುರಾಗಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ. ಸ್ಮಶಾನಕ್ಕಾಗಿ ಗ್ರಾಮ ಪಂಚಾಯಿತಿ ಮುಂದೆ ಶವವಿಟ್ಟು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದು, ಸಂಬಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಕೆರೆಯ ಅಂಗಳವೇ ಶವ ಸಂಸ್ಕಾರ ಮಾಡುವ ಜಾಗವಾಗಿದ್ದು, ಕೆರೆಯಲ್ಲಿ ನೀರು ತುಂಬಿದರೆ, ಬೆಟ್ಟಗುಡ್ಡವೇ ಗತಿ ಎಂಬಂತಾಗಿದೆ ಇಲ್ಲಿನ ನಿವಾಸಿಗಳ ಕಥೆ. ಇರಕಸಂದ್ರ ಕಾಲೋನಿಯಲ್ಲಿ ಯಾರೇ ಸತ್ತರೂ ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ. 300ಕ್ಕೂ ಅಧಿಕ ಕುಟುಂಬಗಳೂ ವಾಸವಿರುವ ಗ್ರಾಮ. ಗ್ರಾಮದ ಅರ್ಧ ಜನರಿಗೆ ಸ್ವಂತ ಜಮೀನು ಸಹ ಇಲ್ಲ. ಕೆರೆಯ ಅಂಗಳ, ಬೆಟ್ಟ ಗುಡ್ಡ, ರಾಜ್ಯ ಹೆದ್ದಾರಿ, ಹಳೆ ಚರಂಡಿ ಮತ್ತು ಅರಣ್ಯ ಪ್ರದೇಶದ ಸ್ಮಶಾನ ಜಾಗ. ಕೊರಟಗೆರೆ…
ಕೊರಟಗೆರೆ : ಪಟ್ಟಣದಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಇಂದಿನಿಂದಲೆ ಆರಂಭಗೊಂಡಿದ್ದು ಎಲ್ಲ ಪಕ್ಷದ ಅಭ್ಯರ್ಥಿಗಳು ಹಾಗೂ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರ ಸಂಚಾರದಲ್ಲಿ ತೊಡಗಿ ಜನರ ಮನಸ್ಸು ಗೆಲ್ಲುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಜೆಡಿಎಸ್ ಭದ್ರಕೋಟೆಯಾಗಿರುವ ಕೊರಟಗೆರೆ ಕ್ಷೇತ್ರವನ್ನು ಈ ಬಾರಿ ಬಿಜೆಪಿ ಪಕ್ಷ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹರಸಾಹಸ ಪಡುತ್ತಿದ್ದು, ಬಿಜೆಪಿ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ಅನಿಲ್ ಕುಮಾರ್ ರವರು ತಮ್ಮ ಕ್ಷೇತ್ರದ ತುಂಬಾ ಇಂದಿನಿಂದದಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಪ್ರತಿ ಹಳ್ಳಿಗೂ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹಾರ ಒದಗಿಸುವ ಮೂಲಕ ಜನಮನ್ನಣೆ ಗಳಿಸುತ್ತಿದ್ದಾರೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಹನುಮನಹಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಕತ್ತಿನಾಗೇನಹಳ್ಳಿ ಹಾಗೂ ಹನುಮೇನಹಳ್ಳಿ ಎರಡು ಗ್ರಾಮದಲ್ಲಿ ಸುಮಾರು 500 ಹೆಚ್ಚು ಜನರು ಅನ್ಯ ಪಕ್ಷಗಳನ್ನು ತೊರೆದು ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರಾಗಿ ಸೇರ್ಪಡೆಯಾಗಿದ್ದಾರೆ. ಇದು ನನಗೆ ತುಂಬಾ ಸಂತೋಷದ ವಿಷಯ, ಇದರ ಜೊತೆಗೆ ಬಹಳ ವರ್ಷಗಳಿಂದಲೂ…
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸುವಂತೆ ಒತ್ತಾಯಿಸಿ ಆನೇಕಲ್ ನ್ಯಾಯಾಲಯದ ಮುಂಭಾಗ ಆನೇಕಲ್ ವಕೀಲರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ನೂರಾರು ಮಂದಿ ವಕೀಲರು ಭಾಗಿಯಾಗಿದ್ದರು.ವಕೀಲರ ಸಂಘದ ಅಧ್ಯಕ್ಷ ರಮೇಶ್ ಮಾತನಾಡಿ, ವಕೀಲರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದೆ ಎಂದು ಕಾಯ್ದೆಗಾಗಿ ಒತ್ತಾಯಿಸಿದರು. ಕಾನೂನು ಸಚಿವ ಮಾಧುಸ್ವಾಮಿ ವಕೀಲರಿಗೆ ಸಂರಕ್ಷಣಾ ಕಾಯ್ದೆ ಬೇಕಾಗಿಲ್ಲ. ಎನ್ನುವಂತಹ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ.ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಯನ್ನು ಮಂಡನೆ ಮಾಡಿ ಕಾರ್ಯರೂಪಕ್ಕೆ ತರಬೇಕು.ವಕೀಲರ ಮೇಲೆ, ಹಲ್ಲೆ, ಕೊಲೆ ಬೆದರಿಕೆ ಹೀಗೆ ಅನೇಕ ದೌರ್ಜನ್ಯ ದಿನನಿತ್ಯ ನಡೆಯುತ್ತಲೇ ಇದೆ. ಆದ್ದರಿಂದ ಕಾಯ್ದೆಯನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸದೆ ಇದರೇ ರಾಜ್ಯಾದ್ಯಂತ ಎಲ್ಲಾ ವಕೀಲರು ಸೇರಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎನ್ನುವ ಎಚ್ಚರಿಕೆ ರವಾನಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy