Author: admin

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ಮದರಸಾಗಳಲ್ಲೂ ಆಗಸ್ಟ್ 11 ರಿಂದ 17 ರವರೆಗೆ ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾರತ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ  ಮದರಸಾಗಳಲ್ಲಿ ಧ್ವಜಾರೋಹಣದ ಅಭಿಯಾನದ ಜೊತೆಗೆ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ, ಸ್ಮರಣೆಯ ಗೀತೆ, ಗಾಯನ, ಕ್ವಿಚ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುರುವೇಕೆರೆ: ಪಟ್ಟಣದ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ತುಳ್ಳು ಗಾಡಿಯಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬಡ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಿ ಬಾಣಸಂದ್ರ ರಸ್ತೆಯಲ್ಲಿರುವ ಸಂತೆ ಮೈದಾನಕ್ಕೆ ಸ್ಥಳಾಂತರಿಸುವ ಪಟ್ಟಣ ಪಂಚಾಯಿತಿಯ ನಿರ್ಧಾರದ ವಿರುದ್ಧ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಾರುತಿ,.  ಸಿ ಐ ಟಿ ಯು ನ ತಾಲೂಕು ಕಾರ್ಯದರ್ಶಿ ಸತೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ನೂರಾರು ಬೀದಿ ಬದಿ ವ್ಯಾಪಾರಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರಿಸಿ ಮೌನ ಪ್ರತಿಭಟನೆ ಮೂಲಕ ತುರುವೇಕೆರೆ ತಾಲೂಕು ಕಾರ್ಯನಿರ್ವ ಹಣಾಧಿಕಾರಿಗಳಿಗೆ ತಾಲೂಕು ದಂಡಾಧಿಕಾರಿಗಳಿಗೆ ,  ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಗಳಿಗೆ, ಹಾಗೂ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಿ ಐ ಟಿ ಯು  ಸತೀಶ್,   ಬೀದಿ ಬದಿ ವ್ಯಾಪಾರಿ ಗಳನ್ನು ಸ್ಥಳಾಂತರ ಮಾಡುತ್ತಿರುವ ಜಾಗದಲ್ಲಿ ಸರಿಯಾದ ಸೌಕರ್ಯಗಳನ್ನು ಮಾಡಿಕೊಡಿ, ಸಂಪೂರ್ಣವಾಗಿ ತಾರತಮ್ಯವಿಲ್ಲದಂತೆ ಎಲ್ಲಾ ತರಹದ ಬೀದಿ ಬದಿಯ ವ್ಯಾಪಾರಿಗಳನ್ನು ಸ್ಥಳಾಂತರಿಸಬೇಕು. ಇಲ್ಲವಾದರೆ ಯಾವುದೇ ಕಾರಣಕ್ಕೂ ನಾವು ಈಗ ವ್ಯಾಪಾರ…

Read More

ನವದೆಹಲಿ: ಅದಾನಿ ವಿಲ್ಮರ್ ಕಂಪನಿ ಫಾರ್ಚೂನ್ ಅಡುಗೆ ಎಣ್ಣೆ ದರವನ್ನು ಲೀಟರ್ ಗೆ 30 ರೂಪಾಯಿಯಷ್ಟು ಇಳಿಕೆ ಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಖಾದ್ಯ ತೈಲ ಬೆಲೆ ಇಳಿಕೆ, ಕೇಂದ್ರ ಸರ್ಕಾರ ಆಮದು ಸುಂಕ ಶೇಕಡ 5ರಷ್ಟು ಕಡಿತಗೊಳಿಸಿದ ಪರಿಣಾಮ ಫಾರ್ಚೂನ್ ವಿವಿಧ ಮಾದರಿಯ ಖಾದ್ಯ ತೈಲದ ಬೆಲೆಯನ್ನು 5 ರೂಪಾಯಿಯಿಂದ 30 ರೂಪಾಯಿವರೆಗೆ ಕಡಿಮೆ ಮಾಡಿದೆ. ಸೋಯಾ ಎಣ್ಣೆ ದರ 195 ರೂ. ನಿಂದ 165 ರೂ., ಸೂರ್ಯಕಾಂತಿ ಎಣ್ಣೆ ದರ 210 ರೂ. ನಿಂದ 199 ರೂ., ಶೇಂಗಾ ಎಣ್ಣೆ ದರ 220 ರೂ. ನಿಂದ 210 ರೂ.ಗೆ ಇಳಿಕೆಯಾಗಿದೆ. ಫಾರ್ಚೂನ್ ಖಾದ್ಯ ತೈಲದರ 30 ರೂ.ವರೆಗೆ ಇಳಿಕೆ ಆಗಿರುವುದರಿಂದ ಉಳಿದ ಕಂಪನಿಗಳು ಇದೇ ರೀತಿ ದರ ಇಳಿಕೆ ಮಾಡಲಿವೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಗುಬ್ಬಿ:  ತಾಲ್ಲೂಕಿನಲ್ಲಿ ಶಾಸಕನ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜ್ ನೇರ ವಾಗ್ದಾಳಿ. ಗುಬ್ಬಿ ತಾಲ್ಲೂಕಿನಲ್ಲಿ 20ವರ್ಷಗಳಿಂದ ಶಾಸಕರಾಗಿರುವ ನೀನು ತಾಲ್ಲೂಕಿನ ಯಾವ ಅಭಿವೃದ್ಧಿ ಮಾಡಿದ್ದೀರಿ ಎಂಬುದನ್ನು ತೋರಿಸು ನೋಡೋಣ, ಕೇವಲ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು  ಅಧಿಕಾರಿಗಳನ್ನು ಬಳಸಿಕೊಂಡು ಭ್ರಷ್ಟಾಚಾರಕ್ಕೆ ನೇರ ಕಾರಣ ಶಾಸಕ ಎಸ್.ಆರ್.ಶ್ರೀನಿವಾಸ್ ಎಂದು ನೇರ ಆರೋಪ ಮಾಡಿದರು. ಗುಬ್ಬಿ ಪಟ್ಟಣದ ತಾಲೂಕು ಕಛೇರಿಯ ಮುಂಭಾಗದಲ್ಲಿ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿರುವ ಭೂಹಗರಣವನ್ನು ಸಿಒಡಿ ತನಿಖೆಗೆ ವಹಿಸುವಂತೆ ಆಗ್ರಹಿಸಿ ಇಂದು ಆಯೋಜಸಿದ್ದ ಪ್ರತಿಭಟನೆಯಲ್ಲಿ  ಭಾಗವಹಿಸಿ ಮಾತನಾಡಿದ ಅವರು, ಶಾಸಕರೇ ನಾನಂತು ಬಗರುಕುಂ ಸಾಗುವಳಿ ಮತ್ತು 50.53 ಬಗ್ಗೆ ಪಿಹೆಚ್ ಡಿ ಪದವಿ ಮಾಡಿಲ್ಲ. ನೀವು ಬಗರುಕುಂ ಸಮಿತಿ ಅಧ್ಯಕ್ಷರಾಗಿರುವವರು. ಸಾಗುವಳಿ ವಿತರಣೆಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವ ರೈತರಿಗೆ ಅನ್ಯಾಯ ಮಾಡಲು ಮುಂದಾಗಬೇಡಿ.  ಇಂದು ರೈತರ ಜಮೀನು ಕಬಳಿಸಲು ಮುಂದಾಗಿರುವ ಭ್ರಷ್ಟ ಅಧಿಕಾರಿಗಳು ಮತ್ತು ತಮ್ಮ ಬೆಂಬಲಿಗರಿಗೆ ರೈತರಿಗೆ ಸಿಗಬೇಕಾದ ಜಮೀನಿನಲ್ಲಿ ಪ್ರಭಾವಿಗಳ…

Read More

ತುಮಕೂರಿನ ದಾನಾ ಪ್ಯಾಲೇಸ್ ಬಳಿ ಕಳೆದ ಶನಿವಾರ ಮಧ್ಯಾಹ್ನ ಮಳೆ ನೀರಿಗೆ ಕೊಚ್ಚಿಹೋಗಿದ್ದ ಆಟೋ ಚಾಲಕ ಅಮ್ಜದ್ ಮೃತದೇಹ ಕೊನೆಗೆ ಪತ್ತೆಯಾಗಿದೆ. ಎನ್.ಡಿ.ಆರ್.ಎಫ್ ಸಿಬ್ಬಂದಿ, ಪೊಲೀಸರು ಮತ್ತು ಆಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ಶೋಧ ಕಾರ್ಯಾಚರಣೆ ಯಶಸ್ವಿಯಾಗಿದೆ. ತುಮಕೂರು ನಗರದ ದಾನ ಪ್ಯಾಲೇಸ್ ಸಮೀಪದ ರೈಲ್ವೆ ಬ್ರಿಡ್ಜ್ ಬಳಿ ಆಟೋ ಚಾಲಕ ಅಮ್ಜದ್ ನಿರ್ವಹಣೆಯಿಲ್ಲ ರಾಜಗಾಲುವೆಯಲ್ಲಿ ಕೊಚ್ಚಿ ಹೋಗಿದ್ದ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಅಮ್ದಜ್ ಪತ್ತೆಗಾಗಿ ಶೋಧಕಾರ್ಯ ನಡೆಸಿದ್ದರು. ಆದರೆ ಯಶಸ್ವಿಯಾಗಿರಲಿಲ್ಲ. ಹೀಗಾಗಿ ಭಾನುವಾರ ಬೆಂಗಳೂರಿನಿಂದ ಎನ್.ಡಿ.ಆರ್.ಎಫ್ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯ ಕೈಗೊಂಡಿದ್ದರು. ಸತತ ಮೂರು ದಿನಗಳು ನಡೆಸಿದ ಶೋಧಕಾರ್ಯದಿಂದ ಅಮ್ಜದ್ ಮೃತದೇಹವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆಟೋ ಚಾಲಕ ಕೊಚ್ಚಿ ಹೋಗಿದ್ದ ದಾನ ಪ್ಯಾಲೇಸ್ ಸಮೀಪದ ರೈಲ್ವೆ ಬ್ರಿಡ್ಜ್ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಹ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದರು. ಎರಡು ಕಿಲೋ ಮೀಟರ್ ದೂರದವರೆಗೆ ಶೋಧ ಕಾರ್ಯ ನಡೆದಿತ್ತು. ಭೀಮಸಂದ್ರ ಕೆರೆಗೂ…

Read More

ತುಮಕೂರು: ಬಹಿರ್ದೆಸೆಗೆ ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಮಾಡ್ಗಾನಹಟ್ಟಿಯಲ್ಲಿ ನಡೆದಿದೆ. ಶೆಟ್ಟಿಹಳ್ಳಿ ತಾಂಡಾದ 22 ವರ್ಷ ವಯಸ್ಸಿನ ಕುಮಾರ್ ಮೃತ ಯುವಕ ಎಂದು ಗುರುತಿಸಲಾಗಿದ್ದು, ಮನೆಯಿಂದ ಹೊರಗೆ ಹೋಗಿದ್ದ ಯುವಕ ಸಾಕಷ್ಟು ಹೊತ್ತಿನವರೆಗೂ ವಾಪಸ್ ಬಾರದೇ ಇದ್ದ ವೇಳೆ ಕುಟುಂಬಸ್ಥರು ಹುಟುಕಾಟ ನಡೆಸಿದ್ದಾರೆ. ಈ ವೇಳೆ ಕೆರೆ ದಡ್ಡದಲ್ಲಿ ಮೃತನ ಚಪ್ಪಲಿ ಪತ್ತೆಯಾಗಿದ್ದು, ಅನುಮಾನಗೊಂಡು ಕೆರೆ ನೀರಿನಲ್ಲಿ ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಸೋಮವಾರದಿಂದ ಆರಂಭವಾಗಲಿರುವ ಸಂಸತ್ತಿನ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಒಗ್ಗೂಡಿ ಹೋರಾಟ ಮಾಡಲು ನಿರ್ಧರಿಸಿವೆ. ಮೋದಿ ಸರ್ಕಾರದ ವಿರುದ್ಧ ಒಗ್ಗೂಡಿ ಹೋರಾಟ ಮಾಡುವ ಕುರಿತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜೊತೆ ಮಾತುಕತೆ ನಡೆಸಿದ್ದಾರೆ. ನಾಳೆ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೂ ಮುನ್ನ ಚಂದ್ರಶೇಖರ್ ರಾವ್ ಅವರು ಸಂಸತ್ತಿನ ಮುಂಗಾರು ಅಧಿವೇಶನಲ್ಲಿ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಆಡಳಿತ ಪಕ್ಷದ ವಿರುದ್ಧ ಪ್ರತಿಪಕ್ಷಗಳ ದಾಳಿ ತೀವ್ರಗೊಳಿಸಲು ಮತ್ತು ಕಾರ್ಯತಂತ್ರವನ್ನು ಬಲಪಡಿಸಲು ಇತರ ರಾಜ್ಯಗಳಲ್ಲಿನ ತಮ್ಮ ಸಹವರ್ತಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷದ ನಾಯಕರು ಒಗ್ಗೂಡಿ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ, ಚಂದ್ರಶೇಖರ ರಾವ್ ಅವರು ದೇಶದಲ್ಲಿ ಪರ್ಯಾಯ ರಾಜಕೀಯ ಗುಂಪಾಗಿ…

Read More

ರೈತ ಕುಟುಂಬವೊಂದು ತುಂಬಿ ಹರಿಯುತ್ತಿರುವ ನದಿಯನ್ನು ಎತ್ತಿನಗಾಡಿಯಲ್ಲಿ ದಾಟಿ ಕೃಷಿ ಕೆಲಸ ಮುಗಿಸಿಕೊಂಡು ವಾಪಾಸ್ಸಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ತುಂಬಿ ಹರಿಯುವ ನದಿಯಲ್ಲಿ ಎತ್ತಿನಗಾಡಿ ದಾಟಿಸಿಕೊಂಡು ಜಮೀನಿಗೆ ರೈತ ಕುಟುಂಬವೊಂದು ಕೃಷಿ ಕೆಲಸಕ್ಕೆ ಹೋಗಿ ಬಂದ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಬಳಿ ಇರುವ ಕುಮುದ್ವತಿ ನದಿಯಲ್ಲಿ ಈ ಕುಟುಂಬ ಹರಸಾಹಸ ಮಾಡಿದೆ. ಎತ್ತಿನಬಂಡಿಯಲ್ಲಿ ಏಳು ಜನ, ಬಂಡಿಯ ಮುಂದೆ ಒಬ್ಬ ಹೋಗಿ ಈ ಕುಟುಂಬ ಕೃಷಿ ಕೆಲಸ ಮಾಡಿದೆ ಎಂದು ತಿಳಿದು ಬಂದಿದೆ. ಮಾಸೂರು-ಮೇದೂರು ಗ್ರಾಮದ ನಡುವೆ ತುಂಬಿ ಹರಿಯುತ್ತಿರುವ ಕುಮುದ್ವತಿಯಲ್ಲಿ ಎತ್ತಿನಬಂಡಿ ಮುಳುಗೋ ಹಂತದಲ್ಲಿದ್ರೂ ಈ ರೈತ ಕುಟುಂಬ ಪ್ರಯಾಣ ಬೆಳಸಿದೆ. ಜೀವದ ಹಂಗು ತೊರೆದು ಜಮೀನು ಕೆಲಸಕ್ಕೆ ಹೋಗಿ ಬಂದ ರೈತ ಕುಟುಂಬ ಸಾಹಸಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ವಲ್ಪವೇ ಯಾಮಾರಿದರೂ ಈ ಎಂಟು ಜನ ನೀರು ಪಾಲಾಗ್ತಿದ್ದರು. ನದಿಯಲ್ಲಿ ದಾಟಿಕೊಂಡು ಹೋಗದಂತೆ ಸ್ಥಳೀಯರು ಹೇಳಿದರೂ ಸಹ ಅವರ ಮಾತಿಗೆ…

Read More

ಮುಂಬೈನಲ್ಲಿ ಭಾನುವಾರ ರಾತ್ರಿ ಬಿಜೆಪಿ ನಾಯಕಿ ಸುಲ್ತಾನಾ ಖಾನ್ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ನಡೆದ ವೇಳೆ, ಸುಲ್ತಾನಾ ಪತಿಯೊಂದಿಗೆ ವೈದ್ಯರನ್ನು ಭೇಟಿ ಮಾಡಲು ಹೋಗುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕಾರನ್ನು ತಡೆದು ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲ ಸುಲ್ತಾನಾ ಅವರ ಪತಿಯ ಜೊತೆ ವಾಗ್ವಾದ ಕೂಡಾ ನಡೆಸಿದ್ದಾರೆ. ಈ ದಾಳಿಯಲ್ಲಿ ಸುಲ್ತಾನಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೀರಾ ರೋಡ್ ಪ್ರದೇಶದಲ್ಲಿ ರಾತ್ರಿ 11.15 ರ ಸುಮಾರಿಗೆ ತನ್ನ ಪತ್ನಿಯೊಂದಿಗೆ ವೈದ್ಯರನ್ನು ಭೇಟಿಯಾಗಲು ತೆರಳುತ್ತಿದ್ದುದ್ದಾಗಿ ಸುಲ್ತಾನಾ ಖಾನ್ ಪತಿ ತಿಳಿಸಿದ್ದಾರೆ. ಆ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬೈಕ್ ಎದುರಿಗೆ ತಂದು ಕಾರನ್ನು ಅಡ್ಡಗಟ್ಟಿದ್ದಾರೆ. ನಂತರ ಪತ್ನಿ ಸುಲ್ತಾನ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ವಿವರಿಸಿದ್ದಾರೆ. ದಾಳಿ ಬಳಿಕ ದುಷ್ಕರ್ಮಿಗಳು ಪರಾರಿ : ಸುಲ್ತಾನ ಖಾನ್ ಮೇಲೆ ದಾಳಿ ನಡೆಯುತ್ತಿದ್ದಂತೆ, ದುಷ್ಕರ್ಮಿಗಳು ಮತ್ತು ಸುಲ್ತಾನ ಅವರ ಪತಿ ಮಧ್ಯೆ ಜಗಳ ನಡೆದಿದೆ. ಈ ವೇಳೆ…

Read More

ಪಂಜಾಬ್ ಸ್ಟೇಟ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗ ಮಾಡಲು ಬಯಸುವ ಯುವಕರಿಗೆ ಗುಡ್ ನ್ಯೂಸ್ ಇದೆ. ಪಂಜಾಬ್ ಸ್ಟೇಟ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಪಿಎಸ್‌ಪಿಸಿಎಲ್) 1690 ಅಸಿಸ್ಟೆಂಟ್ ಲೈನ್‌ಮ್ಯಾನ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸಲ್ಲಿಸುವ ಮೊದಲು ಅರ್ಜಿದಾರರು ಅಧಿಸೂಚನೆಯನ್ನು ಓದುವುದು ಅವಶ್ಯಕ. ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಜುಲೈ 31, 2022 ರಿಂದ ಈ ಕೆಲಸಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಅಭ್ಯರ್ಥಿಗಳು ಪಂಜಾಬ್ ಸ್ಟೇಟ್ ಪವರ್ ಕಾರ್ಪೊರೇಷನ್ ಲಿಮಿಟೆಡ್, pspcl.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ, ಅಧಿಸೂಚನೆಯಲ್ಲಿ ನೀಡಲಾದ ಸೂಚನೆಗಳನ್ನು ಅವರು ನೆನಪಿನಲ್ಲಿಟ್ಟುಕೊಳ್ಳಬೇಕು. 10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು: 10 ನೇ ತರಗತಿ ಪಾಸ್ ಆದವರು, ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ / ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು. ಪರೀಕ್ಷೆಯ ಆಧಾರದ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಶುಲ್ಕವಾಗಿ ಅಭ್ಯರ್ಥಿಗಳು 944…

Read More