Subscribe to Updates
Get the latest creative news from FooBar about art, design and business.
- ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
- ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್.ಕೃಷ್ಣಮೂರ್ತಿ
- ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
- ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
- ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
- ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
- 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
- ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
Author: admin
ನವದೆಹಲಿ: ಪೌರತ್ವ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳು ಸೇರಿದಂತೆ 200 ಕ್ಕೂ ಹೆಚ್ಚು ಪಿಐಎಲಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ ಎನ್ನಲಾಗಿದೆ . ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಸಿಎಎಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾದ ವ್ಯವಹಾರಗಳ ಪಟ್ಟಿಯ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅವರನ್ನು ಒಳಗೊಂಡ ಪೀಠವು ಸಿಎಎ ವಿರುದ್ಧ ಇಂಡಿಯನ್ ಯೂನಿಯನ್ ಆಫ್ ಮುಸ್ಲಿಂ ಲೀಗ್ನ ಪ್ರಮುಖ ಅರ್ಜಿ ಸೇರಿದಂತೆ 220 ಅರ್ಜಿಗಳನ್ನು ವಿಚಾರಣೆಗೆ ಮುಂದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು, ರಾಜ್ಯ ಸರ್ಕಾರದ ಮೇಲಿನ 40% ಕಮಿಷನ್ ಭ್ರಷ್ಟಾಚಾರ ವಿರುದ್ಧ ಪ್ರಸ್ತಾಪಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಇದೇ ವೇಳೆ ಸಿದ್ದರಾಮಯ್ಯ ಅವಧಿಯಲ್ಲಿನ ಅಕ್ರಮಗಳ ಪ್ರಸ್ತಾಪಿಸಲು ಬಿಜೆಪಿ ತಯಾರಾಗಿದೆ ಅತಿವೃಷ್ಟಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಪಠ್ಯಪುಸ್ತಕ ಪರಿಷ್ಕರಣೆ ಎಡವಟ್ಟು, ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ, ಕಾನೂನು ಸುವ್ಯವಸ್ಥೆ ಸೇರಿದಂತೆ ಬಿಜೆಪಿ ಸರ್ಕಾರದ ವಿವಿಧ ಲೋಪಗಳನ್ನು ಎತ್ತಿ ಹಿಡಿಯಲು ಕಾಂಗ್ರೆಸ್ ಸಜ್ಜಾಗಿದೆ. ಇದಕ್ಕೆ ತಿರುಗೇಟು ನೀಡಲು ಬಿಜೆಪಿ ಕೂಡ ಸಿದ್ಧತೆ ಮಾಡಿಕೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸಪ್ಟೆಂಬರ್ 11 ರಂದು ಪ್ರತಿ ವರ್ಷ ಅರಣ್ಯ ಹುತಾತ್ಮ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ ಅರಣ್ಯ ಅಧಿಕಾರಿಗಳು ಕರ್ತವ್ಯದಲ್ಲಿ ಹುತಾತ್ಮರಾದವರಿಗೆ ಅವರಿಗೆ ಗೌರವಾರ್ಥ ಆಚರಣೆ ಮಾಡಲಾಗುತ್ತದೆ. ಈ ವೇಳೆ ಅರಣ್ಯ ಇಲಾಖೆಯಲ್ಲಿ ಹುತಾತ್ಮರಾದ ಸಿಬ್ಬಂದಿಗಳಿಗೆ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ವೃತ್ತದ ಮುಖ್ಯ ಸಂರಕ್ಷಣಾಧಿಕಾರಿಗಳು ಮಂಜುನಾಥ್ ಚೌವ್ಹಾಣ್, ಜಿಲ್ಲಾಧಿಕಾರಿ ನಿತೀಶ್ ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್. ದರ್ಶನ್ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಬೆಳಗಾವಿ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಖಾನಾಪುರ್ ಉಪ ವಿಭಾಗ ವತಿಯಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಚವ್ಹಾಣ್ ಹಾಗೂ ವಲಯ ಕವಿತಾ ಈರನಟ್ಟಿ, ಲೋಡಾ ವಲಯ ಅರಣ್ಯ ಅಧಿಕಾರಿ ನಾಗರಾಜ್ ಭೀಮ್ ಗೋಳ, ಕಣಕುಂಬಿ ವಲಯ ಅರಣ್ಯ. ಅಧಿಕಾರಿ, ಗಣೇಶ ಶೆಟ್ಟರ್ ಮತ್ತು ನಾಗರಗಾಳಿ ಉಪ ವಿಭಾಗ ವತಿಯಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರುದ್ರಪ್ಪ ಕಬ್ಬಡಿಗಿ, ನಾಗರಗಾಳಿ ವಲಯದ ಅರಣ್ಯ ಅಧಿಕಾರಿ ರತ್ನಾಕರ್ ಓಬನ್ನವರ್ , ವರಗೋಲಿ ಹಳ್ಳಿ ವಲಯ ಅಧಿಕಾರಿ ವಾಣಿಶ್ರೀ…
ಹಿರಿಯೂರು: ತಾಲ್ಲೂಕಿನ ತಾಲ್ಲೂಕು ತಹಶೀಲ್ದಾರರಾದ ಪ್ರಶಾಂತ ಕೆ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಾಣಿಕಾಲೇಜಿನ ಪ್ರಾಂಶುಪಾಲ ಡಿ. ಧರೇಂದ್ರಯ್ಯ, ಕೇರಳದ ಸಮಾಜದ ಸಮಾಜಸುಧಾರಕರಾದ ಬ್ರಹ್ಮಶ್ರೀ ನಾರಾಯಣ ಗುರು ನಾರಾಯಣ ಗುರುಗಳು ವೈಕಂ ಚಳುವಳಿಯ ಪ್ರತಿಪಾದಕರಾಗಿದ್ದು, ಭೂ ರಹಿತ ರೈತರಿಗೆ ಭೂಚಳುವಳಿಯ ಮೂಲಕ ಭೂಮಿ ಕೊಡಿಸಲು ಹೋರಾಡಿದರು, ನಾರಾಯಣ ಗುರುಗಳ ಮಹಾನ್ ವ್ಯಕ್ತಿಗಳ ಆದರ್ಶಗಳು ಇಂದಿನ ಯುವಕರಿಗೆ ದಾರಿದೀಪವಾಗಿದೆ. ನಾರಾಯಣ ಗುರುಗಳು ಸಮಾಜದ ಪಿಡುಗುಗಳಾದ ಮೂಢನಂಬಿಕೆ, ಜಾತೀಯತೆ, ಅಸ್ಪೃಶ್ಯತೆ, ದೇವದಾಸಿ ಪದ್ಧತಿ, ಬೆತ್ತಲೆ ಸೇವೆ, ಬಾಲ್ಯವಿವಾಹ, ಗುಲಾಮಗಿರಿ, ಜೀತ ಪದ್ಧತಿ, ಜಮೀನ್ದಾರಿ ಪದ್ಧತಿಗಳ ತೊಡೆದು ಹಾಕಲು ಹೋರಾಡಿದರು ಎಂದರು. ತಹಶೀಲ್ದಾರ್ ಪ್ರಶಾಂತ ಕೆ. ಪಾಟೀಲ ಅವರು ಮಾತನಾಡಿ, ಹಿಂದುಳಿದ ವರ್ಗದವರಿಗೆ ದೇವಸ್ಥಾನ ಪ್ರವೇಶ ದೊರಕಿಸಿ ಕೊಡಲು ಹೋರಾಡಿದ ಅವರು ಮಹಾನ್ ಮಾನವತಾವಾದಿಯಾಗಿದ್ದು, ಅಂತರ್ ಜಾತಿಯ ವಿವಾಹಕ್ಕೆ ಒತ್ತು ನೀಡಿದ ಇವರು ಸರ್ವಜನರಲ್ಲೂ ಭ್ರಾತೃತ್ವವನ್ನು ಬೆಳೆಸಲು ಹೋರಾಡಿದರು, ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದ…
ಶ್ರೀ ವಿನಾಯಕ ಯುವಕರ ಸಂಘ ಅರಕೆರೆ ತುಮಕೂರು ಜಿಲ್ಲೆ ಕಸಬಾ ಹೊಬಳಿ ಯುವಕರ ಸಂಘದ ವತಿಯಿಂದ ಅದ್ದೂರಿ ಗಣೇಶ ವಿಸರ್ಜನೆ ನಡೆಯಿತು. ಎಲ್ಲಾ ಮುಂಜಾಗ್ರತೆ ವಹಿಸಿಕೊಂಡು ಗಣೇಶ ವಿಸರ್ಜನೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಅರಕೆರೆ ಟಿ.ಅರ್.ರವೀಶ್ ಹಾಗೂ ಅರಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಲ್ಮಾ ಆರಿಫ್, ಉಪಾಧ್ಯಕ್ಷರಾದ ನಾಗರತ್ನಮ್ಮ ಮತ್ತು ಸದಸ್ಯರಾದ ಅನಿಲ್ ಪಾಟೀಲ್, ಶಿವಕುಮಾರ್, ನರಸಿಂಹರಾಜು, ನವೀನ್, ಕುಮಾರಣ್ಣ, ಸಂಜೀವಮ್ಮ, ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಗ್ರಾಮದ ಯುವಕರು, ಮಹಿಳೆಯರು, ಪುಟ್ಟ ಮಕ್ಕಳು, ಹಿರಿಯರು ತುಂತುರು ಮಳೆಯನ್ನು ಲೆಕ್ಕಿಸದೆ ವಾದ್ಯಕ್ಕೆ ತಕ್ಕಂತೆ ನೃತ್ಯ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು : ಹುತಾತ್ಮ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಹಾರವನ್ನು 50 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹುತಾತ್ಮ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಹಾರ ಮೊತ್ತವನ್ನು 50 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಯಡಿಯೂರಪ್ಪ ಅವರು 30 ಲಕ್ಷ ರೂ.ಗೆ ಏರಿಸಿದ್ದರು. ಇದೀಗ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. ನೇಮಕಾತಿ ಸಂಬಂಧಿ ಎಲ್ಲಾ ಕೆಲಸಗಳು ಸುಲಭ ಮಾಡುತ್ತೇವೆ. ಅರಣ್ಯವನ್ನು ನೀವು ರಕ್ಷಣೆ ಮಾಡಿ, ನಾವು ನಿಮ್ಮನ್ನು ರಕ್ಷಣೆ ಮಾಡುತ್ತೇವೆ. ಹೊಸ ವಿಧಾನದ ನೈಸರ್ಗಿಕ ಸಂಪತ್ತು ಆಕರ್ಷಿಸುವ ಕೆಲಸ ಆಗುತ್ತಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಎಸಿಬಿ ರದ್ದುಗೊಳಿಸಿ, ಅಧಿಕೃತವಾಗಿ ಆದೇಶಿಸಿತ್ತು. ಈ ಬೆನ್ನಲ್ಲೇ ಎಸಿಪಿಯಲ್ಲಿನ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸುವಂತೆ ಅಧಿಕೃತವಾಗಿ ಆದೇಶಿಸಿದೆ. ಈ ಸಂಬಂಧ ಎಸಿಬಿಯ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದು, ಎಸಿಬಿಯ ಎಲ್ಲಾ ತನಿಖೆ, ಪ್ರಕರಣಗಳ ಕಡತಗಳನ್ನು ಸಂಪೂರ್ಣವಾಗಿ ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸುವಂತೆ ಸೂಚಿಸಿದ್ದಾರೆ. ಎಲ್ಲಾ ಕಡತಗಳನ್ನು ವರ್ಗಾಯಿಸಿ, ಸ್ವೀಕೃತಿ ಪಡೆಯುವಂತೆ ಹೇಳಿದ್ದಾರೆ. ಇದಲ್ಲದೇ ಸೆಪ್ಟೆಂಬರ್ 12ರ ಸಂಜೆ 5 ಗಂಟೆಯೊಳಗೆ ಪಾಲನಾ ವರದಿಯನ್ನು ಸಲ್ಲಿಸುವಂತೆ ಎಸಿಬಿಯ ಆಡಳಿತ ವಿಭಾಗದ ಎಸ್ಪಿಗೆ, ಕಡತ ವರ್ಗಾವಣೆಯ ಮೇಲುಸ್ತುವಾರಿ ನೀಡಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ವಲಯಗಳ ಕಡತ ಪಡೆದ ವರದಿ ಸಲ್ಲಿಸುವಂತೆಯೂ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮೈಸೂರು: ಪ್ರಸ್ತುತ ಹೃದಯಸಂಬಂಧಿಗೆ ಕಾಯಿಲೆಗೆ ಭಾರತದಲ್ಲಿ ಶೇ.30 ರಷ್ಟು ಜನ ಮೃತಪಡುತ್ತಿದ್ದಾರೆ. ಉಳಿದಂತೆ ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್, ಸ್ಟ್ರೋಕ್ ಕೂಡ ಮಾನವನನ್ನು ಕಾಡುತ್ತಿದೆ. ಬೇರೆ ದೇಶಕ್ಕೆ ಹೋಲಿಸಿದರೆ 15 ವರ್ಷಗಳಿಗಿಂತ ಮುಂಚಿತವಾಗಿಯೇ ಹೃದಯ ಸಂಬಂಧಿ ಕಾಯಿಲೆ ಭಾರತೀಯರಲ್ಲಿ ಕಾಡುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತರೂ ಆದ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಯುವಕರಲ್ಲಿ ಹೃದಯಾಘಾತ ಹೆಚ್ಚುತ್ತಿದೆ. 45 ವರ್ಷ ಕಡಿಮೆ ಇರುವ ಶೇ.8ರಷ್ಟು ಮಹಿಳೆಯರಿಗೆ ಹೃದಯಾಘಾತ ಆಗುತ್ತಿದೆ. ಸ್ಮೋಕಿಂಗ್, ಅಧಿಕ ರಕ್ತದೊತ್ತಡ ಹೃದಯಾಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದರು. ನಮ್ಮ ಸುತ್ತಮುತ್ತಲಿನ ವಾತಾವರಣ ಹಾಗೂ ಜೀವನಶೈಲಿ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ. ಭಾರತದಲ್ಲಿ ವಾಯು ಮಾಲಿನ್ಯದಿಂದ 20 ಲಕ್ಷ ಜನ ನಾನಾ ಕಾಯಿಲೆಗೆ ತುತ್ತಾಗಿ ಮೃತ ಪಟ್ಟಿದ್ದಾರೆ. 45 ವರ್ಷದಿಂದ 60 ವರ್ಷದವರಲ್ಲಿ ಹೃದಯ ಸಂಬಂಧಿ…
ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಡ್ಯಾಂ ಕಾಲುವೆ ಬಳಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕ್ರೇನ್ ಪಲ್ಟಿಯಾಗಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. 35 ಅಡಿ ಎತ್ತರದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಶನಿವಾರ ರಾತ್ರಿ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ತುಂಗಭದ್ರಾ ಡ್ಯಾಂ ಕಾಲುವೆ ಬಳಿ ಗಣೇಶ ಮೂರ್ತಿ ಇದ್ದ ಕ್ರೇನ್ ಪಲ್ಟಿಯಾಗಿದೆ. ತುಂಗಭದ್ರಾ ಡ್ಯಾಂನ ಇವಿ ಕ್ಯಾಂಪ್ ನಿವಾಸಿ ಅಶೋಕ್ (18) ಮೃತಪಟ್ಟವರು. ನಿಖಿಲ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿಯೂ ಗಂಭೀರವಾಗಿದೆ. ಹೊಸಪೇಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ 35 ಅಡಿ ಅತ್ತರದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಶನಿವಾರ ನಡೆದಿತ್ತು. ಟಿಬಿ ಡ್ಯಾಂ ಕಾಲುವೆಯಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ಸಕಲ ತಯಾರಿ ನಡೆದಿತ್ತು. ವಾಹನದಿಂದ ಗಣೇಶ ಮೂರ್ತಿಯನ್ನು ಕ್ರೇನ್ ಮೂಲಕ ಎತ್ತಿ ಕಾಲುವೆಗೆ ಇಳಿಸುವಾಗ ಕ್ರೇನ್ ಪಲ್ಟಿಯಾಗಿದೆ. ಆಗ ಇಬ್ಬರು ಯುವಕರು ಅದರ ಅಡಿ ಸಿಲುಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಯುಪಿಯ ಲಕ್ನೋದಿಂದ ಕೃಷ್ಣನಗರದಲ್ಲಿ ಸಾಕು ನಾಯಿಯೊಂದು ಯುವಕ (23) ಮೇಲೆ ದಾಳಿ ಮಾಡಿದ ಭಯಾನಕ ಘಟನೆ ಬೆಳಕಿಗೆ ಬಂದಿದೆ. ದಾಳಿ ವೇಳೆ ಯುವಕನ ಖಾಸಗಿ ಅಂಗಕ್ಕೆ ನಾಯಿ ಕಚ್ಚಿದೆ ಎನ್ನಲಾಗಿದೆ. ಗಾಯಗೊಂಡ ಯುವಕನನ್ನು ಚಿಕಿತ್ಸೆಗಾಗಿ ಕೆಜಿಎಂಯುಗೆ ದಾಖಲಿಸಲಾಗಿದ್ದಾನೆ. 2 ದಿನಗಳ ನಂತರ ಕೆಜಿಎಂಯುನಿಂದ ಬಿಡುಗಡೆಯಾದ ನಂತರ, ಸಂತ್ರಸ್ತ ಕೃಷ್ಣನಗರ ಪೊಲೀಸ್ ಠಾಣೆಗೆ ಬಂದು ನಾಯಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz