Author: admin

ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಮರಿಗೇರಿ- ಇಟಗಾ ಗ್ರಾಮದಲ್ಲಿ ನಡೆದಿದೆ. ಇನ್ನೂ ಮೂವರು ಪರಾರಿಯಾಗಿದ್ದಾರೆ. ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್ ಬುಟ್ಟಿಗಳನ್ನು ಮಾರಲು ಆರು ಜನ ವಾಹನದಲ್ಲಿ ಬಂದಿದ್ದರು. ಈ ವೇಳೆ ರಸ್ತೆ ಬದಿ ಸೈಕಲ್ ಓಡಿಸುತ್ತಿದ್ದ ಬಾಲಕನನ್ನು ವಾಹನದಲ್ಲಿ ಹತ್ತಿಸಿಕೊಳ್ಳಲು ಯತ್ನಿಸಿದರು. ಇದರಿಂದ ಕಿರುಚಿದ 12 ವರ್ಷದ ಬಾಲಕ ಮನೆಗೆ ಓಡಿದ. ಇದನ್ನು ಕಂಡು ಊರಿನ ಜನ ಗುಂಪಾಗಿ ಸೇರಿದರು. ತನ್ನನ್ನು ಎಳೆದುಕೊಂಡು ಹೋಗಲು ಯತ್ನಿಸಿದರು ಎಂದು ಬಾಲಕ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಜನಸೇರಿರುವುದನ್ನು ಕಂಡು ಮೂವರು ಪರಾರಿಯಾಗಿದ್ದು, ಮೂವರನ್ನು ಜನ ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ, ತಾವು ಉತ್ತರ ಪ್ರದೇಶದಿಂದ ವ್ಯಾಪಾರ ಮಾಡುತ್ತ ಊರೂರು ಅಲೆಯುವುದಾಗಿ ಆರೋಪಿಗಳು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ : ಗಣಪತಿ ವಿಸರ್ಜನೆ ವೇಳೆ ಯುವಕನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಅರ್ಜುನಗೌಡ ಪಾಟೀಲ್ (20) ಹತ್ಯೆ ಮಾಡಲಾಗಿದೆ. ಅರ್ಜುನಗೌಡ ಪಾಟೀಲ್ ಕುಸಿದು ಬೀಳುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮುರುಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದಾಗಿ ಚರ್ಚಿಸಲಾಗಿತ್ತು. ಆ ಚರ್ಚೆಯಂತೆ ಈ ಬಾರಿ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಉದ್ಘಾಟಿಸಲು ಆಹ್ವಾನಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಮೈಸೂರು ದಸರಾವನ್ನು ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು :ಶೀಘ್ರದಲ್ಲೇ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ.ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಸಿ. ಹೊರಕೇರಪ್ಪ ಹಾಗೂ ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಕರೆನ್ಸಿ ಮೀಟರ್ ಅಳವಡಿಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆ.ಸಿ.ಹೊರಕೇರಪ್ಪ, ರಾಜ್ಯದ ಎಲ್ಲಾ ಸರ್ಕಾರಗಳು ರೈತರ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಸುತ್ತಿತ್ತು. ಪ್ರಸ್ತುತ ರೈತರು ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಇಳಿಕೆ, ಬೆಳೆಗಳಿಗೆ ಸಾಂಕ್ರಾಮಿಕ ರೋಗ ತಗುಲಿ ಬೆಳೆನಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ಕರೆನ್ಸಿ ಮೀಟರ್ ಅಳವಡಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಗಾಗಲೇ ರೈತರು ಬೆಳೆದಿರುವ ಬೆಳೆದಿರುವ ಬೆಳೆಗಳಿಗೆ ಸೂಕ್ತ ಬೆಳೆಗಳು ಸಿಗದೇ ರೈತರು ನಷ್ಟ ಅನುಭವಿಸುತ್ತಿದ್ದಾರೆ. ರೈತರು ಸಾಲಗಾರರಾಗುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಏಕಾಏಕಿ ವಿದ್ಯುತ್ ಖಾಸಗೀಕರಣ ಮಾಡುವ ಮುಖಾಂತರ ರೈತರ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಹಾಕಲು…

Read More

ಪಾವಗಡ: ತಾಲ್ಲೂಕು ಸಿ ಕೆ ಪುರ ಕ್ಲಸ್ಟರ್ ಪಾವಗಡ ತಾಲೂಕು ನಿಡಗಲ್ಲು ಹೋಬಳಿ ವ್ಯಾಪ್ತಿಯ ಹರಿಹರಪುರ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೊತ್ತೂರು ಗ್ರಾಮದ ರತ್ನಮ್ಮ ಕೊಂಡಪ್ಪ, ಈ ಶಾಲೆಯಲ್ಲಿ 135 ಜನ ಮಕ್ಕಳಿದ್ದು, ಇವರಿಗೆ ನಮ್ಮ ಗ್ರಾಮ ಪಂಚಾಯತಿ ಪಿಡಿಓ, ನಾವು ನಮ್ಮ ಸದಸ್ಯರೆಲ್ಲರೂ ಸೇರಿ ಪರಿಶುದ್ಧ ಕುಡಿಯುವ ನೀರು ಒದಗಿಸುತ್ತೇನೆ ಇಂದು ಭರವಸೆ ನೀಡಿದರು. ಈ ಶಾಲೆಯ ಕ್ಲಸ್ಟರ್ ಸಿ ಆರ್ ಪಿ ಮೂರ್ತಿ ಎಲ್. ಮಾತನಾಡಿ, ನಮ್ಮ ಕ್ಲಸ್ಟರ್’ನ ಎಲ್ಲಾ ಶಾಲೆಗಳಿಗೂ ಕುಡಿಯುವ ನೀರು ಕಲ್ಪಿಸಿ ಕೊಡಬೇಕು. ನಮ್ಮ ಕ್ಲಸ್ಟರ್ನ’ನ ಉತ್ತಂಡಪ್ಪನ ಪಾಳ್ಯ ಗ್ರಾಮದಲ್ಲಿ ಶಾಲೆಯಿದ್ದು, 12 ಜನ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳಿಗೆ ಓದುವುದಕ್ಕೆ ತುಂಬಾ ಅನಾನುಕೂಲವಾಗಿದೆ. ಇಲ್ಲಿ ಕೇವಲ ಎರಡು ಕೊಠಡಿಗಳಿದ್ದು ಒಂದು ಕೊಠಡಿ ಚೆನ್ನಾಗಿದ್ದು ಇನ್ನೊಂದು ಕೊಠಡಿ ಬಿದ್ದು ಹೋಗಿದೆ. ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಮುಖ್ಯೋಪಾಧ್ಯಾಯರಾದ ರಮೇಶ್…

Read More

ಗುಬ್ಬಿ: ಇತ್ತೀಚೆಗೆ ಜಿಲ್ಲಾದ್ಯಂತ ಅತ್ಯಧಿಕ ಮಳೆ ಬೀಳುತ್ತಿದ್ದು ಸಾಕಷ್ಟು ಕೆರೆಗಳು ತುಂಬಿ ತುಳುಕುತ್ತಿವೆ ಇದರ ನಡುವೆ ಹೇಮಾವತಿ ನಾಲೆಯ ಸಾಕಷ್ಟು ಭಾಗದಲ್ಲಿ ಕುಸಿತ ಕಾಣುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ಎಂ.ಡಿ.ಶಂಕರಗೌಡ ಗುಬ್ಬಿ ತಾಲೂಕಿನ ಹಲವು ಭಾಗಗಳಿಗೆ ಭೇಟಿ ಪರಿಶೀಲನೆ ನಡೆಸಿದರು. ತಾಲೂಕಿನ, ಎಂಎನ್ ಕೋಟೆ, ಸಾಗರನಹಳ್ಳಿ, ಇಡಕನಹಳ್ಳಿ ಗ್ರಾಮಗಳಲ್ಲಿ ಹೇಮಾವತಿ ನಾಲೆ ಪರಿಶೀಲನೆ ಮಾಡಿದರು. ಬಳಿಕ ಮಾತನಾಡಿದ ಅವರು, ಸಾಕಷ್ಟು ಮಳೆ ಬೀಳುತ್ತಿದ್ದು ಭೂಕುಸಿತ ವಾಗುತ್ತಿದೆ. ಇಂದು ಮೈಸೂರಿನಿಂದ ತಾಂತ್ರಿಕ ಡಿಸೈನರ್ಸ್ ಆಗಮಿಸಿದ್ದು, ನವೆಂಬರ್, ಡಿಸೆಂಬರ್ ವರೆಗೂ ನಾಲೆಯಲ್ಲಿ ನೀರು ಹರಿಯುತ್ತದೆ. ತದನಂತರವೇ ಕಾಮಗಾರಿಯನ್ನು ಮಾಡಲು ಸಾಧ್ಯವಾಗುತ್ತದೆ. ಸರ್ಕಾರದಲ್ಲಿ ಅನುದಾನಕ್ಕೆ ಸಮಸ್ಯೆ ಇಲ್ಲ ಮತ್ತೆ ಕುಸಿಯದ ರೀತಿಯಲ್ಲಿ ಶಾಶ್ವತವಾಗಿ ನಾಲೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ತಾಲೂಕಿನ ಅಡಗೂರು ಕೆರೆ ಕೋಡಿ ಹೊಡೆದಿದ್ದು, ಅದರ ಮರುನಿರ್ಮಾಣಕ್ಕೆ 98 ಲಕ್ಷ ಹಣವನ್ನು ಬಿಡುಗಡೆ ಮಾಡಲಾಗಿದೆ. ಅದನ್ನು ಸಹ ತುರ್ತುಗಿ ಸರಿ ಪಡಿಸಲಾಗಿದೆ. ಕೆ.ಜಿ ಟೆಂಪಲ್ ಬಳಿಯ ನಾಲೆ ಮುಚ್ಚಿದ್ದು, ಅದಕ್ಕೂ…

Read More

ತಿಪಟೂರು: ನಗರದ ಸರ್ಕಾರಿ ನೌಕರ ಭವನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ಭಾರತ್ ಜೋ ಡೋ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಷಡಕ್ಷರಿ ಅವರು ಉದ್ದೇಶಿಸಿ ಮಾತನಾಡಿದರು. ಮುಂಬರುವ ಚುನಾವಣೆಯಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಜನತೆ ತೀರ್ಮಾನಿಸಿದ್ದಾರೆ. ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬರುವ ಮೊದಲು ನೀಡಿದ ಯಾವುದೇ ಆಶ್ವಾಸನೆಗಳನ್ನು ಈಡೇರಿಸಿಲ್ಲ ಎಂದು ಅವರು ಆರೋಪಿಸಿದರು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ, ಇರುವ ಉದ್ಯೋಗಗಳನ್ನು ಕಿತ್ತು ಹಾಕುತ್ತಿದೆ. ಅಂಬಾನಿ ಅದಾನಿಯವರಿಗೆ ಬಿಜೆಪಿ ಸಹಾಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಪಾದಯಾತ್ರೆ ನಡೆಸಲಿ ಎಂದು ಇದೇ ವೇಳೆ ಅವರು ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮರಿ ಚೆನ್ನಮ್ಮ ತಾಲ್ಲೂಕು ಅಧ್ಯಕ್ಷ ಕಾಂತರಾಜು, ನೇಕೇನಹಳ್ಳಿ ಸುರೇಶ್, ಆರ್. ಡಿ.ಬಾಬು, ಟಿ.ಎನ್.…

Read More

ಕೌಶಂಬಿ: ಭಕ್ತನೊಬ್ಬ ತನ್ನ ನಾಲಿಗೆಯನ್ನು ಬ್ಲೇಡ್ನಿಂದ ಕತ್ತರಿಸಿ ದೇವರಿಗೆ ಅರ್ಪಿಸಿದ ವಿಚಿತ್ರ ಘಟನೆ ಉತ್ತರ ಪ್ರದೇಶದ ಕೌಶಂಬಿ ನಗರದ ಮಾ ಶೀಟ್ಲಾ ದೇವಸ್ಥಾನದಲ್ಲಿ ನಡೆದಿದೆ ನಾಲಿಗೆ ಕತ್ತರಿಸಿದ ಕೌಶಂಬಿ ನಿವಾಸಿ ಸಂಪತ್ (38) ಎಂಬ ಭಕ್ತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಸಂಪತ್ ಪತ್ನಿ ಬನ್ನೋ ದೇವಿ ದೇವಸ್ಥಾನಕ್ಕೆ ಬಂದು ಗಂಗಾ ನದಿಯಲ್ಲಿ ಸ್ನಾನ ಮಾಡಿದ ನಂತರ ಪೂಜೆ ಸಲ್ಲಿಸಿದರು. ದೇವಾಲಯದ ಪ್ರದಕ್ಷಿಣೆ ಪೂರ್ಣಗೊಳಿಸಿದ ನಂತರ, ನಾಲಿಗೆಯನ್ನು ಬ್ಲೇಡ್‌ನಿಂದ ಕತ್ತರಿಸಿ ದೇವಾಲಯದ ಬಾಗಿಲಿನ ಚೌಕಟ್ಟಿನಲ್ಲಿ ಇಟ್ಟಿದ್ದಾರೆ. ರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡುವ ಇಚ್ಛೆಯನ್ನು ಪತಿ ವ್ಯಕ್ತಪಡಿಸಿದ್ದರು ಎಂದು ಬನ್ನೋ ದೇವಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಚಿಕ್ಕಮಗಳೂರು : ನಗರದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕನೊಬ್ಬ ಬಲಿಯಾಗಿದ್ದು, ಸಿಟ್ಟಿಗ್ಗೆದ್ದ ಜನರು ಆತನ ಮೃತದೇಹವಿಟ್ಟು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಕೆಲಸದಿಂದ ಮನೆಗೆ ತೆರಳುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿ ಸ್ಥಳದಲ್ಲಿ 45 ವರ್ಷ ಅರ್ಜುನ್‌ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಸಿಟ್ಟಿಗೆದ್ದ ಜನರು ಪೊಲೀಸ್‌ ವಾಹನ ಪಲ್ಟಿ ಮಾಡೋದಕ್ಕೆ ಮುಂದಾಗಿದ್ದು, ಘಟನಾ ಸ್ಥಳದಲ್ಲಿ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಕಾಡಾನೆ ದಾಳಿಯನ್ನು ತಡೆಗಟ್ಟಲು ಅರಣ್ಯ ಇಲಾಖೆ ಮುಂದಾಗುತ್ತಿಲ್ಲ. ಜತೆ ಅಧಿಕಾರಿಗಳು ಕೂಡಾ ತಲೆಗೆಡಿಸಿಕೊಳ್ಳುತ್ತಿಲ್ಲ. ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More