Author: admin

ಗದಗ: ಗಣೇಶ ವಿಸರ್ಜನೆ ವೇಳೆ ದುಷ್ಕರ್ಮಿಗಳು ಚಾಕು ಇರಿತಕ್ಕೆ ಯುವಕ ಸಾವನ್ನಪ್ಪಿರುವಂತಹ ಘಟನೆ ಗದಗ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಸುದೀಪ್ ಮುಂಡೆವಾಡಿ(22) ಕೊಲೆಯಾದ ದುರ್ದೈವಿ. ಸ್ನೇಹಿತರೇ ಚಾಕು ಇರಿದಿರುವ ಆರೋಪ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಯಲ್ಲಿ ಸುದೀಪ್ ಸಾವನ್ನಪ್ಪಿದ್ದಾನೆ. ಸುದೀಪ್​​ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಭಾರೀ ಮಳೆಯಿಂದಾಗಿ, ಕಪಿಲೇಶ್ವರ ವಿಸರ್ಜನ ಕೆರೆಗೆ ಕಸ ಮತ್ತು ಕಲುಷಿತ ನೀರು ಸೇರಿತ್ತು, ಆದ್ದರಿಂದ ಇಂದು ಮತ್ತೊಮ್ಮೆ ಕೆರೆಯನ್ನು ಸ್ವಚ್ಛಗೊಳಿಸಲಾಯಿತು. ಶಾಸಕ ಅನಿಲ ಬೆನಕೆ ಅಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರಿಂದ ನಿನ್ನೆ ರಾತ್ರ್ರಿ ಹಾಗೂ ಇಂದು ಬೆಳಗ್ಗೆ ಕೆರೆಯ ಕಲುಷಿತ ನೀರು, ಕಸ ತೆಗೆದು ಪುನ: ಶುದ್ಧ ನೀರನ್ನು ಕಾಮಗಾರಿ ಕೈಗೆತ್ತಿಕೊಳ್ಳಲಾಯಿತ್ತು. ಇದರಿಂದಾಗಿ ಇಂದು ಹಾಗೂ ನಾಳೆ ಬರುವ ಅನಂತ ಚತುರ್ದಶಿ ಎಂದು ಕಪಿಲೆಶ್ವರ ಕೆರೆ ಶೀ ಗಣೇಶನ ವಿಸರ್ಜನಕ್ಕೆ ಪುನ: ಲಭ್ಯವಾಗಿದೆ. ಈ ಸಂದರ್ಭದಲ್ಲಿ ಶಾಸಕರೊಂದಿಗೆ ಕಾರ್ಪೊರೇಟರ ಭಾತಕಾಂಡೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮಂಜುಶ್ರೀ, ಸಿದ್ದಾರ್ಥ ಭಾತಕಾಂಡೆ, ಮಹಾನಗರ ಪಾಲಿಕೆ ಸಿಬ್ಬಂದಿಗಳು ಹಾಗೂ ಮಹಾದೇವ ಎಲ್&ಟಿ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕುಣಿಗಲ್:  ಲಾರಿ ಹಾಗೂ ಬೊಲೆರೋ ವಾಹನದ ನಡುವೆ ನಡೆದ ಅಪಘಾತದಲ್ಲಿ  ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಪಿ.ಹೊನಮಾಚನಹಳ್ಳಿ ಬಳಿ ನಡೆದಿದೆ. 30 ವರ್ಷದ ವಯಸ್ಸಿನ ಸಲೀಂ ಪಾಷಾ ಮೃತಪಟ್ಟವರು  ಎಂದು ಗುರುತಿಸಲಾಗಿದೆ. ಕುಣಿಗಲ್ ಮಾರ್ಗವಾಗಿ ಮದ್ದೂರಿಗೆ ಹೋಗುತ್ತಿದ್ದ ಲಾರಿ ಹುಲಿಯೂರುದುರ್ಗದಿಂದ ಪಶು ಆಹಾರ ಸಾಗಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಲಿಯೂರುದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ  ಮಾಹಿತಿ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ವಿವಿಧ ಬಗೆಯ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ದೇವಸಂದ್ರದ ಮೊಹಮ್ಮದ್ ಅಜೀಮುದ್ದಿನ್ ಬಂಧಿತ ಆರೋಪಿ. ಈ ಮೂಲಕ ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಿಂಗ್ಪಿನ್ ಸಂಜು ಭಂಡಾರಿ ಹಾಗೂ ಬೆಳಗಾವಿಯ ಇತರರಿಗೆ ಆರೋಪಿ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ. ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಏಳು ಮಾಸ್ಕ್, 41 ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಬನಿಯನ್, 445 ಎಲೆಕ್ಟ್ರಾನಿಕ್ ಇಯರ್ ಪೀಸ್, 554 ವಿವಿಧ ಬಗೆಯ ಚಾರ್ಜಿಂಗ್ ಕೇಬಲ್, 6 ವಾಕಿಟಾಕಿಯನ್ನು ಬೆಳಗಾವಿ ಪೊಲೀಸರ ಜಪ್ತಿ ಮಾಡಿದ್ದಾರೆ. ಪರೀಕ್ಷೆಗಳಲ್ಲಿ ಅಕ್ರಮ ಎಸಗಲು ಎಲೆಕ್ಟ್ರಾನಿಕ್ ಉಪಕರಣಗಳ ಪೂರೈಕೆ ಆರೋಪ ಮಾಡಿದ್ದು, ಬೆಂಗಳೂರಿನ ಎಸ್ಪಿ ರಸ್ತೆಯಲ್ಲಿ ಸ್ಪೈ ಜೋನ್ ಎಲೆಕ್ಟ್ರಾನಿಕ್ ಮಳಿಗೆಯನ್ನು ಆರೋಪಿ ಹೊಂದಿದ್ದಾನೆ. ಮಳಿಗೆ ಸೀಜ್ ಮಾಡಿ ಆರೋಪಿಯನ್ನು ಪೊಲೀಸರು ಬೆಳಗಾವಿಗೆ ಕರೆತಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ತಿಪಟೂರು: ಧಾರ್ಮಿಕ ನಾಡು ಎಂದು ಹೆಸರಾಗಿರುವ ಹಾಲ್ಕುರ್ಕಿ ಕೆರೆ ಕೋಡಿ ಹೊಡೆದ ಪರಿಣಾಮ ಕಂಬಿ ಕಟ್ಟೆ, ಎರೆಪಟ್ಟೆ, ಅಮ್ಮನಹಾಳು, ಶೆಟ್ಟಿಕೆರೆ ದೊಡ್ಡಿಕಟ್ಟೆ, ಮಾಕುವಳ್ಳಿ, ಕಡೆಗೆ ಹೋಗುವ ರೈತರು ಮತ್ತು ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ಉಂಟಾಗಿದೆ. ಬಹುತೇಕ ಜನರು ತೋಟದ ಮನೆಗಳಲ್ಲಿ ವಾಸಿಸುವ ಕಾರಣ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ವೇಳೆಗೆ ಹಾಲನ್ನು ಡೈರಿಗೆ ಹಾಕಲು ಇದೇ ಮಾರ್ಗವಾಗಿ ಕ್ರಮಿಸಬೇಕಾಗುತ್ತದೆ ಆದರೆ ಈಗಿರುವ ಪರಿಸ್ಥಿತಿಯಲ್ಲಿ ಕೇವಲ ನೂರು ಅಡಿ ದಾಟಲು ಸಾಧ್ಯವಿಲ್ಲದೆ 6 ರಿಂದ 7 ಕಿಲೋಮೀಟರ್ ಸುತ್ತುವರೆದು ಹಾಲ್ಕುರ್ಕೆಗೆ ಬರುವ ಪರಿಸ್ಥಿತಿ ಅನಿವಾರ್ಯವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ರೈತರು ಮತ್ತು ಸಾರ್ವಜನಿಕರು ಯಾವುದೇ ತೊಂದರೆ ಇಲ್ಲದ ರೀತಿಯಲ್ಲಿ ಸಂಚರಿಸಲು ಸುಸಜ್ಜಿತವಾದ ಸೇತುವೆ ನಿರ್ಮಾಣ ಮಾಡಬೇಕೆಂದು ಹಾಲ್ಕುರ್ಕೆ ಮತ್ತು ಅಕ್ಕಪಕ್ಕದ ಗ್ರಾಮಸ್ಥರು ಮನವಿ ಮಾಡಿದ್ದಾರೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಬ್ರಿಟನ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ಗುರುವಾರ(ಸೆ.8)ದಂದು ನಿಧನರಾಗಿದ್ದಾರೆ. ಬ್ರಿಟನ್ ರಾಣಿ ನಿಧನದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಣಿಯ ನಿಧನದ ಸುದ್ದಿಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ. ಬ್ರಿಟನ್ ಗೆ ಸುದೀರ್ಘ ಸೇವೆ ಸಲ್ಲಿಸಿದ್ದ ಎರಡನೇ ಎಲಿಜಬೆತ್ 70 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದರು. ಇದೀಗ ತನ್ನ 96ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಸರಗೂರು: ತಾಲ್ಲೂಕಿನ ಬಿ ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಕವಾಡಿ ಗ್ರಾಮದಲ್ಲಿ ಒಂದು ತಿಂಗಳು ಹಿಂದೆ ನಾಟಿ ಮಾಡಿದ ಭತ್ತವನ್ನು ಕಾಡಾನೆಗಳು ನಾಶಪಡಿಸಿದ್ದು, ಆನೆಗಳನ್ನು ಕಾಡಿಗೆ ಓಡಿಸಲು ಹೋದಾಗ ರೈತರನ್ನು ಹಿಂಬಾಲಿಸಿಕೊಂಡು ಬಂದು ಭೀತಿ ಸೃಷ್ಟಿಸಿರುವ ಘಟನೆ ಬಂಕವಾಡಿ ಗ್ರಾಮದಲ್ಲಿ ನಡೆದಿದೆ. ತಿಂಗಳುಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿವ ರೈತರು ಯಾವುದೇ ಬೆಳೆಗಳನ್ನು ಬೆಳೆಯಲಾಗದೇ ಕಂಗೆಟ್ಟಿದ್ದಾರೆ.ಈ ನಡುವೆ ಕಾಡಿನಿಂದ ಬರುತ್ತಿರುವ  ಆನೆಗಳು ಜಮೀನುಗಳಲ್ಲಿ ಬೆಳೆದಿರುವ ಫಸಳಿಗೆ  ಬಂದ ಬೆಳೆಗಳನ್ನು ನಾಶ ಮಾಡುತ್ತಿದ್ದು,  ಇದರಿಂದಾಗಿ 2 ರಿಂದ 3 ಲಕ್ಷಾಂತರ ನಷ್ಟವಾಗಿದೆ ಎಂದು ಪ್ರಕಾಶ್ ಗೌಡ  ಎಂಬವರು ಅಳಲು ತೋಡಿಕೊಂಡಿದ್ದಾರೆ. ಆನೆ ದಾಳಿ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೆ, ನಾವು ಅಲ್ಲಿದ್ದೇವೆ, ಇಲ್ಲಿದ್ದೇವೆ ಎಂಬ ನೆಪ ಹೇಳಿ ಸಮಸ್ಯೆಗಳಿಂದ ಜಾರಿಕೊಳ್ಳುತ್ತಿದ್ದಾರೆ. ಒತ್ತಡ ಹಾಕಿದರೆ, ಉಡಾಫೆ ಮಾತುಗಳನ್ನಾಡತ್ತಾರೆ ಎಂದು  ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಮೋಳೆಯೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಳು ಬಂದಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಸೇರಿಕೊಂಡು ಮನವಿ…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಪ್ರವಾಸಿ ಮಂದಿರದಲ್ಲಿ ಶಾಸಕರಾದ ಕೆ.ಪೂರ್ಣಿಮಾ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಸರ್ಕಾರಿ ಅಧಿಕಾರಿಗಳ ತುರ್ತು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಮಾತನಾಡಿದ ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕಳೆದ ಎರಡು ವರ್ಷಗಳಿಂದ ಕೋವಿಡ್ ಹಾಗೂ ಒಮಿಕ್ರೋನ್ ನಿಂದ ತತ್ತರಿಸಿದ ಜನ ಇದೀಗ ಅತಿಯಾದ ಮಳೆ ಗಾಳಿಯಿಂದ ರೈತರು ಬೆಳೆದ ಬೆಳೆಗಳು ನಷ್ಟವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಆದರಿಂದ ಮಳೆಯಿಂದ ಬೆಳೆ ಹಾನಿಯಾಗಿರುವ ಮನೆ ಮತ್ತು ಬೆಳೆಗಳನ್ನು ಶೀಘ್ರದಲ್ಲೇ ಸರ್ವೇ ಮಾಡಿ ಸರ್ಕಾರದ ಪರಿಹಾರಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ರೈತರು ಬೆಳೆಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಅಧಿಕಾರಿಗಳು ಯಾವುದೇ ನೆಪ ಹೇಳದೆ ಹಗಲು ರಾತ್ರಿ ಹಾಗೂ ರಜಾ ದಿನಗಳಲ್ಲೂ ಕರ್ತವ್ಯ ನಿರ್ವಹಿಸಿ ರೈತರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಅವರು ಮನವಿ ಮಾಡಿದರು. ತಾಲ್ಲೂಕಿನಲ್ಲಿ ರೈತರು ಬೆಳೆದಿರುವಂತಹ ಅಡಿಕೆ, ತೆಂಗು, ಬಾಳೆ, ಈರುಳ್ಳಿ ಹತ್ತಿ, ದಾಳಿಂಬೆ, ಪಪ್ಪಾಯಿ, ಶೇಂಗಾ ಮುಂತಾದ ಬೆಳೆಗಳಿಗೆ ಮಳೆಯಿಂದ ಹಾನಿಯಾಗಿದ್ದು, ಈ ಕೂಡಲೇ ಹೋಬಳಿವಾರು…

Read More

ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲಪನಹಳ್ಳಿ ಗ್ರಾಮದಲ್ಲಿ ಜಯಮಂಗಲಿ ನದಿಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ವಿ ಹೋಗಿದ್ದ ಟಾಟಾ ಏಸ್ ವಾಹನ ಸಮೇತ ನದಿಯಲ್ಲಿ ಕೊಚ್ಚಿ ಹೋಗಿದ್ದ ಚಾಲಕನ ಮೃತದೇಹ ಬುಧವಾರ ಪತ್ತೆಯಾಗಿದೆ. ಘಟನೆ ಬಳಿಕ ಸತತ 24 ಗಂಟೆಯಿಂದ ಸ್ಥಳದಲ್ಲೇ ಬೀಡುಬಿಟ್ಟಿದ್ದ ಅಗ್ನಿಶಾಮಕ ಸಿಬ್ಬಂದಿ ಚಾಲಕ ಮತ್ತು ವಾಹನ ಹುಡುಕಾಟದಲ್ಲಿ ತೊಡಗಿದ್ದರು. ಕೊನೆಗೂ ಟಾಟಾ ಎಸ್ ವಾಹನ ಮತ್ತು ಮೃತ ಚಾಲಕನ‌ ಶವ‌ ಪತ್ತೆಯಾಗಿದೆ. ಕೊರಟಗೆರೆ ತಾಲ್ಲೂಕಿನ ವಡ್ಡಗೆರೆ  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಪ್ಪನಹಳ್ಳಿ ಗ್ರಾಮದ ಜಯಮಂಗಲಿ ನದಿಯಲ್ಲಿ ಟಾಟಾ ಏಸ್ ವಾಹನ ಚಲಾಯಿಸಿಕೊಂಡು ಹೋಗಿದ್ದ  ಚಾಲಕ  ನೀರಿನಲ್ಲಿ ಕೊಚ್ಚಿ ಹೋಗಿದ್ದ. ಕಾರ್ಯಾಚರಣೆಗೆ ಅಗ್ನಿಶಾಮಕ ಸಿಬ್ಬಂದಿಗೆ ಕೊರಟಗೆರೆ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು  ಸಾಥ್ ನೀಡಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು: ಗಂಗಾಮತ ಬೆಸ್ತರ ಕುಲದೇವತೆಯಾದ ಗಂಗಾಮಾತೆಯನ್ನು ಕೇಳಲಾಗದ ಭಾಷೆಯಲ್ಲಿ ಬರೆದು ಅವಮಾನ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾ ಗಂಗಾಮತಸ್ಥ ಸಮಾಜದ ವತಿಯಿಂದ ಸಾಹಿತಿ ಬರಗೂರು ರಾಚಂದ್ರಪ್ಪ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಲ್ಲೂರು ಗಂಗಾಮತ ಕ್ಷೇಮಾಭಿವೃದ್ಧಿ ಅಧ್ಯಕ್ಷರಾದ ಕೆ.ಟಿ.ಸೋಮಶೇಖರ್, ಬರಗೂರು ರಾಮಚಂದ್ರಪ್ಪನವರು ನಮ್ಮ ತುಮಕೂರು ಜಿಲ್ಲೆಯ ಕೀರ್ತಿಯನ್ನೂ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಸ್ಥಾನ ಮಾನ ಪಡೆದ ವ್ಯಕ್ತಿ ಇವರ ಸಾಧನೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಆದರೆ ಇವರು ಬರೆದ ‘ಭರತ ನಗರಿ’ ಕಾದಂಬರಿಯಲ್ಲಿ ಗಂಗೆಯನ್ನು ಅವಮಾನಿಸಿರುವುದನ್ನು ಖಂಡಿಸುತ್ತೇವೆ ಎಂದರು. ತುಮಕೂರು ಜಿಲ್ಲೆಯ ಗಂಗಾಮತಸ್ಥ ಬೆಸ್ತರ ಸಮಾಜದ ಜಿಲ್ಲಾ ಅಧ್ಯಕ್ಷರಾದ ನಾಗರಾಜ್ ಮಾತನಾಡಿ, ಬರಗೂರು ರಾಮಚಂದ್ರಪ್ಪನವರು ತಪ್ಪು ಒಪ್ಪಿಕೊಂಡು ರಾಜ್ಯದ ಗಂಗಾಮತ ಸಮಾಜದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಉಪಾಧ್ಯಕ್ಷರಾದ ದಿವಾಕರ್ ಮಾತನಾಡಿ, ಬರಗೂರು ತಮ್ಮ ಕಾದಂಬರಿಯಲ್ಲಿ ಗಂಗೆಯನ್ನು ಹಾದರದ ಗಂಗೆ ಎಂದು ಮೂಲವನ್ನು ತಿರುಚಿ ಬರೆದಿದ್ದಾರೆ. ಬರಗೂರುರವರು ವಿಚಾರವಂತರು ವಾಘ್ಮೀಗಳು ತಿಳಿದವರು ಹೀಗೆ ಮೂಲವನ್ನು ತಿರುಚಿ…

Read More