Author: admin

ಕೊರಟಗೆರೆ : ರಾಜ್ಯ ಹೆದ್ದಾರಿ ಸಮೀಪದ ಎಲೈಟ್ ಫ್ಯಾಮಿಲಿ ರೇಸಾರ್ಟ್ ನಲ್ಲಿ ನಡೆಯುತ್ತಿದ್ದ ಹೈಟೆಕ್ ಜೂಜು ಅಡ್ಡೆಯ ಮೇಲೆ ಮಧುಗಿರಿ ಡಿವೈಎಸ್ಪಿ ರಾಮಕೃಷ್ಣಯ್ಯ ಮತ್ತು ಕೊರಟಗೆರೆ ಸಿಪಿಐ ಸಿದ್ದರಾಮೇಶ್ವರ ನೇತೃತ್ವದ ಪೊಲೀಸರ ತಂಡದದಿಂದ ದಾಳಿ ನಡೆದಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಹಂಚಿಹಳ್ಳಿ ಗ್ರಾ.ಪಂ. ವ್ಯಾಪ್ತಿಯ ರಾಜ್ಯ ಹೆದ್ದಾರಿಗೆ ಹೊಂದಿಕೊಡಿರುವ ಎಲೈಟ್  ಫ್ಯಾಮಿಲಿ ರೆಸಾರ್ಟ್ ನಲ್ಲಿ ಅಕ್ರಮವಾಗಿ ಜೂಜು ಆಟ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊರಟಗೆರೆ ಪೊಲೀಸರ ತಂಡ ದಾಳಿ ನಡೆಸಿ 15 ಜನ ಹೈಟೆಕ್ ಜೂಜು ಆಟಗಾರರನ್ನು ಬಂಧಿಸಿದ್ದಾರೆ. ಎಲೈಟ್ ಫ್ಯಾಮಿಲಿ ರೆಸಾರ್ಟ್ ನಲ್ಲಿ ಇಸ್ಪಿಟ್ ಆಟ ಆಡುತ್ತಿದ್ದ ಬೆಂಗಳೂರು, ತುಮಕೂರು, ಮಧುಗಿರಿ ಮತ್ತು ಕೋಳಾಲದ ಹೈಟೇಕ್ ಜೂಜು ಕೋರರಿಂದ 7 ಲಕ್ಷದ 650 ರೂ. ನಗದು, 15 ಮೊಬೈಲ್ ಮತ್ತು 4 ಕಾರುಗಳನ್ನು ಕೊರಟಗೆರೆ ಪೊಲೀಸರ ತಂಡ ವಶಕ್ಕೆ ಪಡೆದು 15 ಜನ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಎಲೈಟ್ ಫ್ಯಾಮಿಲಿ ರೇಸಾರ್ಟ್ ಮೇಲೆ ನಡೆದ ದಾಳಿಯಲ್ಲಿ…

Read More

ಕುಣಿಗಲ್: ದೇವರ ದರ್ಶನ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾರು ಮಗುಚಿ ಬಿದ್ದು ಎರಡೂವರೆ ವರ್ಷ ವಯಸ್ಸಿನ ಮಗು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನ ರಾಷ್ಟ್ರೀಯ ಹೆದ್ದಾರಿ 75ರ ನಾಗೇಗೌಡನ ಪಾಳ್ಯ ಗೇಟ್ ಬಳಿ ನಡೆದಿದೆ. ಸಮರ್ಥ(2) ಮೃತಪಟ್ಟ ಮಗುವಾಗಿದ್ದು, ಕಾರಿನಲ್ಲಿದ್ದ ಮಗುವಿನ ತಂದೆ –ತಾಯಿ  ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಾಗಡಿ ತಾಲೂಕಿನ ಕುದೂರು ಹೋಬಳಿಯ ನಾರಸಂದ್ರ ಗ್ರಾಮದ ಪರಮೇಶ್ ಹಾಗೂ ರಮ್ಯ ದಂಪತಿ ಇಂದು ಬೆಳಗ್ಗೆ ಎಡೆಯೂರು ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ಹೋಗಿ ದರ್ಶನ ಮುಗಿಸಿ ಕಾರಿನಲ್ಲಿ ವಾಪಸ್ ಆಗುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನಲ್ಲಿದ್ದ ಎರಡುವರೆ ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಅಮೃತೂರು ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಕೊರಟಗೆರೆ : ತಾಲ್ಲೂಕ್ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಕಳವು ಮಾಡಲಾಗಿದ್ದ 10 ಜಾನುವಾರುಗಳ ಜಾಡು ಹಿಡಿದ ಕೊರಟಗೆರೆ ಪೊಲೀಸ್ ತಂಡ 3 ಜನ ಅಂತರ್ ಜಿಲ್ಲಾ ಕಳ್ಳರನ್ನು ಎಡಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕೋಳಾಲ ಸರಹದ್ದಿನ ಗೋಕುಲ ಗ್ರಾಮದ ದಿನೇಶ್ ಎಂಬ ರೈತನ 2 ಸೀಮೆ ಹಸುಗಳು, ಮಧ್ಯ ವೆಂಕಟಾಪುರ ರಾಜು ಎಂಬುವರ 2 ಸೀಮೆ ಹಸುಗಳು, ಲಕ್ಕೈನ್ ಪಾಳ್ಯದ ಲಕ್ಷ್ಮಯ್ಯನ 1 ಹಸು, ಮೂಡ್ಲುಪಾಳ್ಯ ಸುಬ್ರಾಯನ 1 ಹಸು, ತಿಮ್ಮಸಂದ್ರ ಹರ್ಷವರ್ಧನನ 2 ಹಸುಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ರೈತರ ಜಾನುವಾರುಗಳು ಇತ್ತೀಚೆಗೆ ಸರಣಿ ಕಳ್ಳತನ ಕೊರಟಗೆರೆ ಪೊಲೀಸ್ ನವರಿಗೆ ತಲೆ ನೋವಾಗಿ ಪರಿಣಮಿಸಿ ಅದರ ಜಾಡು ಹಿಡಿದು ಹೊರಟ ತಂಡ 2.5 ಲಕ್ಷರು ನಗದು ಹಾಗೂ ಅದಕ್ಕೆ ಬಳಸುತ್ತಿದ್ದ ಇನ್ನಿತರ ವಸ್ತುಗಳನ್ನು ಮಾಲು ಸಹಿತ ಸೆರೆಹಿಡಿದಿದ್ದಾರೆ. ಕೊರಟಗೆರೆ ತಾಲೂಕ್ ಕೋಳಾಲ ಸರಹದ್ದಿನಲ್ಲಿ ಇತ್ತೀಚಿಗೆ ರೈತರ ರಾಸುಗಳು ರಾತ್ರಿ ವೇಳೆ ಸರಣಿ ಕಳ್ಳತನ ನಡೆಯುತಿದ್ದದ್ದು ಪೊಲೀಸ್ ನವರಿಗೆ…

Read More

ಪ್ರೇಯಸಿಯೇ ಪ್ರಿಯಕರನ ಬರ್ಬರ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಅಷ್ಟೇ ಅಲ್ಲ, ಕೊಲೆಯ ನೇರ ದೃಶ್ಯಾವಳಿಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ಪ್ರೇಯಸಿ ತನ್ನ ಮತ್ತೊಬ್ಬ ಪ್ರಿಯಕರನಿಗೆ ಕಳುಹಿಸಿದ್ದಾಳೆ. ಜೂನ್ ೨೪ರಂದು ನಗರದ ಹೊರವಲಯದ ವಾಜಪೇಯಿ ಬಡಾವಣೆಯ ಬಳಿ ಆಳಂದ ತಾಲೂಕಿನ ಶುಕ್ರವಾಡಿ ಗ್ರಾಮದ ದಯಾನಂದ ಲಾಡವಂತಿ(೨೪) ಎಂಬ ಯುವಕನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ಬಂಧಿಸಿದರು. ಆದರೆ, ತನಿಖೆಯ ಸಂದರ್ಭದಲ್ಲಿ ಕೊಲೆಯ ಹಿನ್ನೆಲೆ ಕೇಳಿ ಪೊಲೀಸರೇ ಅರೆಕ್ಷಣ ದಂಗಾದರು. ದಯಾನಂದ ದುಬೈನಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ತನ್ನೂರಿಗೆ ಬಂದು ಮತ್ತೆ ಮರಳಿ ದುಬೈ ಹೋಗಲು ಸಿದ್ಧತೆ ನಡೆಸಿದ್ದ. ಈ ನಡುವೆ ಕಲಬುರಗಿಯ ಬಸವೇಶ್ವರ ಕಾಲೋನಿ ನಿವಾಸಿ ಅಂಬಿಕಾ ಎಂಬ ವಿವಾಹಿತ ಮಹಿಳೆಯಿಂದ ದಯಾನಂದರ ಮೊಬೈಲ್‌ಗೆ ಕರೆಬಂದಿದೆ. ಮಿಸ್ ಆಗಿ ಬಂದಿದ್ದ ಮೊಬೈಲ್ ಕರೆ ದಯಾನಂದನಿಗೆ ಅಂಬಿಕಾಳ ಮೇಲೆ ಪ್ರೀತಿ ಹುಟ್ಟುವಂತೆ ಮಾಡಿತ್ತು. ಇನ್ನೂ ಮದುವೆಯಾಗದ ಆತ ಮೂರೇ ದಿನಗಳಲ್ಲಿ ಸಂಪೂರ್ಣವಾಗಿ ಆಕೆಯ…

Read More

ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೇ ಅವರ ಮೇಲೆ ಆಗುಂತಕನೊಬ್ಬ ಗುಂಡು ಹಾರಿಸಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಮಾಜಿ ಪ್ರಧಾನಿ ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಸಾರ್ವಜನಿಕ ಕಾರ್ಯಕ್ರಮಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಆಗುಂತಕನೊಬ್ಬ ಶಿಂಜೆ ಅಬೆ ಅವರ ಮೇಲೆ ಗುಂಡು ಹಾರಿಸಿದ ಪರಿಣಾಮ ಕುತ್ತಿಗೆ ಮತ್ತು ಎದೆ ಭಾಗದಲ್ಲಿ ತೀವ್ರ ರಕ್ತಸ್ತ್ರಾವವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ೬೭ ವರ್ಷದ ಅಬೆ ಮೃತಪಟ್ಟಿದ್ದಾರೆ ಎಂದು ಮತ್ತೊಂದು ಮೂಲಗಳು ತಿಳಿಸಿವೆ. ಘಟನೆ ಸಂಬಂಧ ೪೧ ವರ್ಷದ ಯಮಗಮಿ ಹುವಾ ಎನ್ನುವ ಆಗುಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಳಿ ಇದ್ದ ಬಂದೂಕು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಂಜೊ ಅಬೆ ಭಾಷಣದ ಸಮಯದಲ್ಲಿ ಗುಂಡು ಹಾರಿಸಿದ್ದು ಗುಂಡೇಟಿಗೆ ತಕ್ಷಣ ಕುಸಿದುಬಿದ್ದರು.ಅವರ ಕುತ್ತಿಗೆಯಿಂದ ರಕ್ತಸ್ರಾವವಾಗಿತ್ತು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಈ ಮೂಲಗಳು ತಿಳಿಸಿವೆ. ಜಪಾನ್ ನಾರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ…

Read More

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸಿ ಸುರಿಯುತ್ತಿರುವುದರಿಂದ ಪ್ರವಾಹ ಉಂಟಾಗಿ ಸಾವು-ನೋವು ಸಂಭವಿಸಿ, ಮನೆ-ಬೆಳೆಗೆ ಹಾನಿಯಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ನೆರವಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಚು ಮಳೆಯಾಗುತ್ತಿರುವ ೧೩ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಓಗಳ ಜತೆ ವೀಡಿಯೊ ಸಂವಾದ ನಡೆಸಿ ಪ್ರತಿ ಜಿಲ್ಲೆಯ ಮಳೆಯ ಪರಿಸ್ಥಿತಿ, ಆಗಿರುವ ಹಾನಿ, ಕೈಗೊಂಡಿರುವ ಪರಿಹಾರ ಕಾರ್ಯಗಳು ಬಗ್ಗೆ ಮಾಹಿತಿ ಪಡೆದುಕೊಂಡರು. ಮಳೆ ಹೆಚ್ಚಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರ ಸುರಕ್ಷತೆಗೆ ಕ್ರಮಕೈಗೊಂಡು ಅಗತ್ಯವಿರುವ ಕಡೆ ಪರಿಹಾರ ಶಿಬಿರಗಳನ್ನು ಆರಂಭಿಸಿ ಮಳೆಯಿಂದ ತೊಂದರೆಗೊಳಗಾಗಿರುವವರ ನೆರವಿಗೆ ಅಗತ್ಯ ಕ್ರಮಕೈಗೊಳ್ಳಿ ಎಂದು ಸೂಚಿಸಿದರು. ಮಳೆ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಪಡೆಗಳನ್ನು ನಿಯೋಜಿಸಲಾಗಿದೆ. ಜೀವಹಾನಿಯಾಗದಂತೆ ಎಚ್ಚರ ವಹಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಪರಿಹಾರ ಕಾರ್ಯಗಳಿಗೆ ಹಣದ ಕೊರತೆ ಇಲ್ಲ, ಡಿಸಿಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಹಣ ಇದೆ. ಹೆಚ್ಚಿನ…

Read More

ಶಾಲಾ ವಿದ್ಯಾರ್ಥಿಗಳಿಗೆ ಬಟ್ಟೆ, ಶೂ, ಸಾಕ್ಸ್ ಕೊಡುವ ಅಗತ್ಯವಿಲ್ಲ ಎಂಬ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದು, ಸರ್ಕಾರದ ಬಳಿ ಹಣ ಇಲ್ಲದಿದ್ದರೆ ಹೇಳಿ, ಕಾಂಗ್ರೆಸ್ ಪಕ್ಷ ಭಿಕ್ಷೆ ಬೇಡಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಕೊಡಲು ಸಿದ್ಧ ಎಂದಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ನಾಗೇಶ್‌ರವರ ಹೇಳಿಕೆ ಸರಿಯಾದುದಲ್ಲ, ಇದು ಅಗೌರವದ ಹೇಳಿಕೆ. ಇದು ಮಾನವೀಯತೆಗೆ ಮಾಡಿದ ಅವಮಾನ ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಕೊಡಲು ಹಣ ಇಲ್ಲ ಎಂದರೆ ಹೇಳಿ, ವಿವಿಧ ಕಂಪನಿಗಳ ಸಿಎಸ್‌ಆರ್ ಫಂಡ್‌ನ್ನು ಬಳಕೆ ಮಾಡಿ, ಭಿಕ್ಷೆ ಎತ್ತಿ ಮಕ್ಕಳಿಗೆ ಎಲ್ಲವನ್ನೂ ಕೊಡುತ್ತೇವೆ ಎಂದು ಸಿಟ್ಟಿನಿಂದ ಹೇಳಿದರು. ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ದೊಡ್ಡ ದೊಡ್ಡ ಸ್ಥಾನಕ್ಕೆ ಹೋಗಿದ್ದಾರೆ. ಪೋಷಕರು ಮಕ್ಕಳಿಗೆ ಒಳ್ಳೆ ಬಟ್ಟೆ ಕೊಟ್ಟು, ಒಳ್ಳೆ ಶಾಲೆಯಲ್ಲಿ ಓದಿಸಲು ಬಯಸುತ್ತಾರೆ. ಸರ್ಕಾರಿ ಶಾಲೆ ಮಕ್ಕಳಿಗೂ ಯಾವುದೇ ಕೊರತೆಯಾಗಬಾರದು…

Read More

ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದ ಆವರಣದಲ್ಲಿರುವ ಉದ್ಯಾನವನ ನಿರ್ವಹಣೆ ಮಾಡುವಲ್ಲಿ ಯಾರು ಗಮನ ಹರಿಸಿಲ್ಲ,  ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿರ್ಲಕ್ಷ ತೋರಿದ್ದಾರೆ. ಈ ಪ್ರವಾಸಿ ಮಂದಿರಕ್ಕೆ ಪ್ರತಿನಿತ್ಯ ಹಾಲಿ ಶಾಸಕರು ಮಾಜಿ ಶಾಸಕರು ಸುಮಾರು ಜನ ರಾಜಕೀಯ ದ ವ್ಯಕ್ತಿಗಳು ಸಮಾಜದ ಗಣ್ಯ ವ್ಯಕ್ತಿಗಳು, ಅನೇಕ ಉನ್ನತ ಅಧಿಕಾರಿಗಳು ಬಂದು ಹೋಗುತ್ತಿದ್ದಾರೆ. ಆದರೆ ಇದರ ನಿರ್ವಹಣೆ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಉದ್ಯಾನವನದ ಬಗ್ಗೆ ಕಾಳಜಿಯನ್ನು ತೋರಿಸುತ್ತಿಲ್ಲ. ಇನ್ನಾದರೂ ಇದರ ಬಗ್ಗೆ ಸಂಬಂಧಪಟ್ಟವರು  ಅಧಿಕಾರಿಗಳ ಗಮನ ಸೆಳೆದು ನಿರ್ವಹಣೆ ಬಗ್ಗೆ ಕಾಳಜಿ ವಹಿಸಿ ಪ್ರವಾಸಿ ಮಂದಿರದ ಉದ್ಯಾನವನ ಸುಂದರವಾಗಿ ಕಾಣುವಂತೆ ಹಾಗೂ ಮಾದರಿ ಆಗುವಂತೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ವರದಿ: ಸುರೇಶ್ ಬಾಬು , ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮೈಸೂರು: ಸಾಹಿತಿ ದೇವನೂರು ಮಹಾದೇವ ಅವರ ಆರೆಸ್ಸೆಸ್  ಆಳ ಮತ್ತು ಅಗಲ ಎನ್ನುವ ಕಿರು ಹೊತ್ತಿಗೆಗೆ ರಾಜ್ಯಾದ್ಯಂತ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಬಿಡುಗಡೆಯಾಗಿ ನಾಲ್ಕೇ ದಿನದಲ್ಲಿ ದಾಖಲೆಯ ಪುಸ್ತಕ ಮಾರಾಟವಾಗಿದೆ. ನಾಲ್ಕು ದಿನಗಳಲ್ಲಿ 9 ಸಾವಿರಕ್ಕೂ ಅಧಿಕ ಪುಸ್ತಕಗಳು ಮಾರಾಟವಾಗಿದ್ದು, ಇನ್ನೂ ಕೂಡ ರಾಜ್ಯದಲ್ಲಿ ಪುಸ್ತಕಕ್ಕೆ ಭಾರೀ ಬೇಡಿಕೆ ಕೇಳಿ ಬಂದಿದೆ. ದೇವನೂರು ಮಹಾದೇವ ತಮ್ಮ ಪಠ್ಯ ಕೈ ಬಿಡುವಂತೆ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆದಿದ್ದರು. ಅಲ್ಲದೇ ಪಠ್ಯ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಸಾಮಾಜಿಕ ಜಾಲತಾಣಗಳನ್ನು ಬಳಸಿ ಜನರನ್ನು ಜಾಗೃತಗೊಳಿಸುತ್ತೇನೆ ಎಂದು ಸಿಎಂಗೆ ಬರೆದ ಪತ್ರದಲ್ಲಿಯೂ ತಿಳಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೇವನೂರರ ಪುಸ್ತಕ ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿರುವುದೇ ಅಲ್ಲದೇ, ಪುಸ್ತಕದ ಪಿಡಿಎಫ್ ಪ್ರತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುರುವೇಕೆರೆ: ತಾಲೂಕಿನ ದೊಡ್ಡ ಶೆಟ್ಟಿ ಕೆರೆ ಶ್ರೀರಂಗನಾಥ ಸ್ವಾಮಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆ ವತಿಯಿಂದ ದೊಡ್ಡ ಶೆಟ್ಟಿ ಕೆರೆ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸಹಾಯಧನದ ಚೆಕ್ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಗ್ರಾಮಾಂತರ ಯೋಜನಾಧಿಕಾರಿಗಳಾದ ಅನಿತಾ ಶೆಟ್ಟಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮೋಹನ್ ಕುಮಾರಿ ಮತ್ತು ಕಾರ್ಯದರ್ಶಿ  ಶೀಲ ರವರಿಗೆ ಒಂದು ಲಕ್ಷದ ಸಹಾಯಧನದ ಚೆಕ್ಕನ್ನು ಹಸ್ತಾಂತರಿಸಿದರು ಇನ್ನು ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಗ್ರಾಮದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು ಇದರ ಮಧ್ಯೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಮಧು ಸೇವಾ ಪ್ರತಿನಿಧಿ ಗಿರೀಶ್ ಮಹಿಳಾ ಹಾಲು ಸಹಕಾರ ಸಂಘದ ನಿರ್ದೇಶಕರುಗಳು ಶ್ರೀ ಧರ್ಮಸ್ಥಳ ಸಂಸ್ಥೆಯ ವಿವಿಧ ಸಂಘಗಳ ಸದಸ್ಯರುಗಳು ಹಾಜರಿದ್ದರು ವರದಿ: ಸುರೇಶ್ ಬಾಬು ತುರುವೇಕೆರೆ…

Read More