Subscribe to Updates
Get the latest creative news from FooBar about art, design and business.
- ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
- ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
- ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
- ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
- ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
- ಹುಯಿಲ್ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
- ತುಮಕೂರು: ಗಾಜಿನ ಮನೆಯಲ್ಲಿ ‘ಸಿರಿಧಾನ್ಯ ಖಾದ್ಯಗಳ’ ಘಮಲು!
- 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್ ಗೆ ಪದೋನ್ನತಿ
Author: admin
ತುಮಕೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಹಿಂದೂಗಳ ಹತ್ಯೆಗೆ ಪ್ರತ್ಯುತ್ತರವಾಗಿ ಭಾರತ ಪಾಕಿಸ್ತಾನದ ಮೇಲೆ ಆರಂಭಿಸಿರುವ ʼಆಪರೇಷನ್ ಸಿಂಧೂರʼಕ್ಕೆ ತುಮಕೂರು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ನಗರದ ಶ್ರೀ ಸೋಮೇಶ್ವರ ದೇಗುಲದಲ್ಲಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ವಿಶೇಷ ಗಣ ಹೋಮ ನಡೆಸಲಾಯಿತು. ಅಲ್ಲದೆ ಶ್ರೀ ಸೋಮೇಶ್ವರ ಸ್ವಾಮಿ ಗರ್ಭಗುಡಿಯಲ್ಲಿ ವಿಶೇಷ ಅರ್ಚನೆ ಹಾಗೂ ಮಂಗಳಾರತಿ ನಡೆಸಲಾಯಿತು. ದೇಶದ ಪ್ರಧಾನಮಂತ್ರಿ ಸೇರಿದಂತೆ ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಪ್ರತಿಯೊಬ್ಬ ಸೈನಿಕರಿಗೂ ಆಯಸ್ಸು ಹಾಗೂ ಆರೋಗ್ಯ ಹಾಗೂ ಹೋರಾಡುವ ಶಕ್ತಿ ಕರುಣಸಲಿ ಎಂದು ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಮಹಾಸಭಾದ ಜಿಲ್ಲಾಧ್ಯಕ್ಷರಾದ ಡಾ.ಎಸ್.ಪರಮೇಶ್, ವೀರಶೈವ ಸಮಾಜದ ಅಧ್ಯಕ್ಷ ಚಂದ್ರಮೌಳಿ, ದೇಶಪ್ರೇಮಿಗಳು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಶ್ರೀ ವೀರನಾಗಮ್ಮ ದೇವಾಲಯ ಟ್ರಸ್ಟ್ ಸದಸ್ಯರು ಬಂಗಾರ, ಬೆಳ್ಳಿ, ಅಕ್ಕಿ ಮತ್ತು ಹಣದ ವಹಿವಾಟಿನಲ್ಲಿ ಭಾರೀ ಗೋಲ್ ಮಾಲ್ ನಡೆಸಿರುವ ಆರೋಪ ಕೇಳಿ ಬಂದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಪ್ರಶ್ನೆಗಳಿಗೆ ಟ್ರಸ್ಟಿಗಳ ಮೌನವೇ ಉತ್ತರವಾಯಿತು. ಬೆಳ್ಳಿ, ಬಂಗಾರ, ಬ್ಯಾಂಕ್ ಪುಸ್ತಕ ಮತ್ತು ದಾಖಲೆಗಳೆಲ್ಲ ಸೀಜ್ ಮಾಡಲಾಗಿದ್ದು, ಟ್ರಸ್ಟ್ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ಖಡಕ್ ಆದೇಶ ಮಾಡಿದ್ದಾರೆ. ಕೊರಟಗೆರೆ ತಾಲೂಕು ಕಸಬಾ ಹೋಬಳಿ ವಡ್ಡಗೆರೆಯ ಇತಿಹಾಸ ಪ್ರಸಿದ್ಧ ಶ್ರೀವೀರನಾಗಮ್ಮ ದೇವಾಲಯದ ಕಥೆ ಇದು. ಮುಜರಾಯಿ ಇಲಾಖೆ ಆದೇಶದಂತೆ 2006 ರಲ್ಲಿ ಆರಂಭ ಶ್ರೀ ವೀರನಾಗಮ್ಮ ದೇವಾಲಯ ಸಮಿತಿ ಕಾಲಕ್ರಮೇಣ ಟ್ರಸ್ಟ್ ಆಗಿ ಬದಲಾಗಿದೆ. 19 ವರ್ಷಗಳ ದಾಖಲೆಗಳೇ ಮಾಯವಾಗಿವೆ. ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಕೇಳುವ 20ಕ್ಕೂ ಅಧಿಕ ಪ್ರಶ್ನೆಗಳಿಗೆ ಮೌನವೇ ಉತ್ತರವಾಗಿ ಅಕ್ರಮ ನಡೆದಿರೋದು ಸಾಬೀತಾಗಿದೆ. ಶ್ರೀ ವೀರನಾಗಮ್ಮ ದೇವಾಲಯದ ಟ್ರಸ್ಟ್ ಮಾಹಿತಿ ಮುಜರಾಯಿ…
ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ನನ್ನ ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಅಂದು ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯತಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು ಎಂದು ಡಿ.ಕೆ.ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ವಿನಂತಿ ಮಾಡಿದ್ದಾರೆ. ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ಲಖನೌ: ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಕೊಟ್ವಾಲಿಯಲ್ಲಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಅನ್ವರ್ ಜಮೀಲ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ವಿಡಿಯೋ ಕಾಣಿಸಿಕೊಂಡ ನಂತರ ಜಮೀಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ವಿಡಿಯೋ ಪ್ರಸಾರವಾದ ನಂತರ ಅನ್ವರ್ ಜಮೀಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಾವು ಪ್ರಸ್ತುತ ಬಂಧಿತ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಅಧಿಕಾರಿ ರಾಜುಕುಮಾರ್ ಸವ್ಸಾಯಿದ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಈ ವಿಡಿಯೋ ಹಳೆಯ ವಿಡಿಯೋವಾಗಿದ್ದು, ತನ್ನ ಸ್ನೇಹಿತನೊಂದಿಗೆ ನಡೆದ ಬೆಟ್ಟಿಂಗ್ನಲ್ಲಿ ತಾನು ಈ ಘೋಷಣೆಗಳನ್ನು ಕೂಗಿದ್ದೆ ಎಂದು ಆರೋಪಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆ ಸಹಜ ಸ್ಥಿತಿಗೆ ಮರಳುವವರೆಗೆ ಪೊಲೀಸರಿಗೆ ರಜೆ ನೀಡುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಶನಿವಾರ ತಿಳಿಸಿದ್ದಾರೆ. ಸಿದ್ಧತೆಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಇಂದು ಸಂಜೆ ವಿಶೇಷ ಸಭೆ ನಡೆಸಲಿದ್ದಾರೆ. ಈ ಸಮಯದಲ್ಲಿ ಪೊಲೀಸರ ಯಾವುದೇ ರಜೆಯನ್ನು ನಾವು ಅನುಮೋದಿಸುವುದಿಲ್ಲ. ಏಕೆಂದರೆ, ಸಾಮಾನ್ಯ ಸ್ಥಿತಿ ಯಾವಾಗ ಮರಳುತ್ತದೆ ಎಂಬುದು ನಮಗೆ ತಿಳಿದಿಲ್ಲ. ಸಾಮಾನ್ಯ ಸ್ಥಿತಿ ಯಾವಾಗ ಮರಳುತ್ತದೆ ಎಂದು ಕೇಂದ್ರವು ನಮಗೆ ತಿಳಿಸುತ್ತದೆ. ಅಲ್ಲಿಯವರೆಗೆ ನಾವು ಜಾಗರೂಕರಾಗಿರಬೇಕು ಎಂದು ಅವರು ತಿಳಿಸಿದರು. ರಾಜ್ಯ ಸರ್ಕಾರವು ಎಲ್ಲೆಡೆ, ವಿಶೇಷವಾಗಿ ಕರಾವಳಿ ಪ್ರದೇಶದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ. ಯುದ್ಧದ ಸಮಯದಲ್ಲಿ ನಮ್ಮ ಹಿಂದಿನ ಅನುಭವದಿಂದ ಕಲಿತಿದ್ದೇವೆ. ಹೀಗಾಗಿ, ಕರಾವಳಿ ಪ್ರದೇಶಗಳಲ್ಲಿ ಭದ್ರತೆ ಬಲವಾಗಿರಬೇಕು. ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದವರೆಗೆ ನಾವು ಸಂಪೂರ್ಣ ಕರಾವಳಿ ರೇಖೆಯ ಉದ್ದಕ್ಕೂ ಜಾಗರೂಕರಾಗಿರಬೇಕು ಎಂದು ಸಚಿವರು ಸೂಚನೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು , ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ: ರಾಜ್ಯದ ಜನರ ರಕ್ಷಣೆಗೆ ಮೊದಲ ಆದ್ಯತೆ ನೀಡುವಂತೆ ಸೂಚನೆ ನೀಡಿದರು, ಪ್ರಮುಖ ಸ್ಥಳಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಿದ ಅವರು, ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು ಎಂದರು. ಭಾರತ ಮತ್ತು ಪಾಕಿಸ್ತಾನದ…
ಬೆಂಗಳೂರು: ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣದ ಭಾಗ್ಯ ನೀಡಿದೆ. ಇದರ ನಡುವೆಯೇ ಈ ಬಾರಿ ಕೆಎಸ್ ಆರ್ ಟಿಸಿ ಟಿಕೆಟ್ ಪಡೆಯದೇ ಪ್ರಯಾಣಿಸಿದ ಪ್ರಯಾಣಿಕರಿಗೆ ಭಾರೀ ದಂಡ ವಿಧಿಸಿದೆ. ಟಿಕೆಟ್ ಫ್ರೀ ಎಂಬ ಕಾರಣಕ್ಕೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಟಿಕೆಟ್ ಪಡೆಯದೇ ಯಾವುದೇ ಮಹಿಳೆಯರು ಪ್ರಯಾಣಿಸುವಂತಿಲ್ಲ. ಒಂದು ವೇಳೆ ಪರಿಶೀಲನೆ ನಡೆಸುವ ವೇಳೆ ಟಿಕೆಟ್ ಇಲ್ಲವಾದರೆ ಭಾರೀ ದಂಡವನ್ನೇ ಪಾವತಿಸಬೇಕಾಗುತ್ತದೆ. ಪುರುಷರು ಕೂಡ ಟಿಕೆಟ್ ಪಡೆದೇ ಕಡ್ಡಾಯವಾಗಿ ಪ್ರಯಾಣಿಸಬೇಕು. ಈ ಬಾರಿ ಸಾರಿಗೆ ಬಸ್ಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುವ ಪ್ರಯಾಣಿಕರಿಂದ ಕೆಎಸ್ ಆರ್ಟಿಸಿ ಭರ್ಜರಿ ದಂಡವನ್ನು ವಸೂಲಿ ಮಾಡಿದೆ. ಕೆಎಸ್ ಆರ್ ಟಿಸಿ (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ಏಪ್ರಿಲ್ ತಿಂಗಳಲ್ಲಿ 3,780 ಟಿಕೆಟ್ ರಹಿತ ಪ್ರಯಾಣಿಕರಿಗೆ 7,32,495 ರೂಪಾಯಿಗಳ ದಂಡವನ್ನು ವಿಧಿಸಿದೆ. ಅಷ್ಟೇ ಅಲ್ಲದೇ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮಗಳನ್ನು ಜರುಗಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಪಾವಗಡ: ಅಂತರಾಷ್ಟ್ರೀಯ ಸಂಬಂಧಗಳಲ್ಲಿ ಅಲಿಪ್ತ ನೀತಿಯನ್ನು ಸಾರಿದ ರಾಷ್ಟ್ರ ನಮ್ಮದು, ವಿದೇಶಾಂಗ ನೀತಿಯಲ್ಲಿಯೂ ಸಹ ಭಾರತ ಉತ್ತಮ ಸ್ಥಾನ ಪಡೆದಿದೆ, ನಾವಿಂದು ಅನಿವಾರ್ಯ ಕಾರಣಗಳಿಂದ ಭಾರತ ಅಶಾಂತಿ ಸಂಘರ್ಷಕ್ಕೆ ಇಳಿಯಬೇಕಾಗಿದೆ ಎಂದು ತುಮಕೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲ ಸಚಿವ ಪ್ರಸನ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಪಾವಗಡ ಪಟ್ಟಣದ ಶಿರಾ ರಸ್ತೆ ಮಾರ್ಗದಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜಾನಪದ ಉತ್ಸವವನ್ನು ಕುರುಬರಹಳ್ಳಿ ಗೇಟ್ ನಿಂದ ಕಾಲೇಜಿನವರಿಗೂ ವಿವಿಧ ಕಲಾತಂಡಗಳ ಮೆರವಣಿಗೆಯೊಂದಿಗೆ ಆಗಮಿಸಿ ನಂತರ ವೇದಿಕೆಯಲ್ಲಿ ವಾದ್ಯ ಬಾರಿಸುವುದರ ಮೂಲಕ ಚಾಲನೆ ನೀಡಿದ ನಂತರ ಅವರು ಮಾತನಾಡಿದರು. ರಾಜ್ಯದಲ್ಲಿ 140ಕ್ಕೂ ಅಧಿಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, ರಾಷ್ಟ್ರೀಯ ಐಕ್ಯತೆ ಮೂಡಿಸುವ ಉದ್ದೇಶದಿಂದ ಜನಪದ ಉತ್ಸವಗಳನ್ನು ಆಯೋಜಿಸಲಾಗುತ್ತಿದೆ, ನಾಡು ನುಡಿ, ಕಲೆ, ಸಂಸ್ಕೃತಿಯನ್ನು ಉಳಿಸಿ ರಾಷ್ಟ್ರೀಯ ಭಾವೈಕ್ಯತೆ ಯನ್ನು ಬೆಳೆಸುವ ಮತ್ತು ಗ್ರಾಮೀಣ ಸೊಗಡನ್ನು ಉಳಿಸುವ ಉದ್ದೇಶದಿಂದ ಈ ಒಂದು ಜನಪದ ಉತ್ಸವ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.…
ತುಮಕೂರು: ಭಾರತ ಪಾಕ್ ನಡುವಿನ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ತುಮಕೂರು ರೈಲ್ವೆ ನಿಲ್ದಾಣದಲ್ಲಿ ವಿದ್ವಂಸಕ ಕೃತ್ಯ ತಪಾಸಣಾ ತಂಡವು ನಿರಂತರವಾಗಿ ಮುಂಜಾಗ್ರತಾ ಕ್ರಮವಾಗಿ ಪರಿಶೀಲನೆ ನಡೆಸುತ್ತಿದೆ. ಅಲ್ಲದೆ ತುಮಕೂರು ನಗರದ ಪ್ರಮುಖ ಜನನಿ ಬಿಡ ಪ್ರದೇಶಗಳಾದ ಪ್ರವಾಸಿ ಮಂದಿರ, ಬಸ್ ನಿಲ್ದಾಣ, ಮಾಲ್ ಗಳು ಸೇರಿದಂತೆ ಅನೇಕ ಕಡೆಗಳಲ್ಲಿ ನೆನ್ನೆಯಿಂದ ನಿರಂತರವಾಗಿ ತಪಾಸಣೆ ನಡೆಸುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ತಂಡ ಜನರ ಬಳಿ ಜಾಗೃತಿ ಮೂಡಿಸುತ್ತಿದೆ. ವಿದ್ವಂಸಕ ಕೃತ್ಯಗಳ ಕುರಿತು ಸುಳಿವು ದೊರೆತರೆ ತಕ್ಷಣ ಸಮೀಪದ ಪೊಲೀಸ್ ಸಿಬ್ಬಂದಿಗಳಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಅಲ್ಲದೆ ಕಟ್ಟೆಚ್ಚರ ವಹಿಸುವಂತೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಮುಂದಾಗ ಬೇಕಿದೆ ಎಂದು ಹೇಳುತ್ತಿದ್ದಾರೆ. ನಿನ್ನೆಯಿಂದ ನಿರಂತರವಾಗಿ ತುಮಕೂರು ನಗರದಲ್ಲಿಡೆ ಪೊಲೀಸ್ ಸಿಬ್ಬಂದಿಗಳು ಭಾರೀ ಅಲರ್ಟ್ ಆಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಇಸ್ಲಾಮಾಬಾದ್: ಇಂದು ಶನಿವಾರ ಮುಂಜಾನೆ ಪಾಕಿಸ್ತಾನದ ಮೂರು ವಾಯುನೆಲೆಗಳ ಮೇಲೆ ಭಾರತೀಯ ಕ್ಷಿಪಣಿ ಮತ್ತು ಡ್ರೋನ್ ಗಳು ಗುರಿಯಾಗಿಸಿ ದಾಳಿ ನಡೆಸಿವೆ. ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಇಸ್ಲಾಮಾಬಾದ್ ನಲ್ಲಿ ಆತುರದಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು. ಪಾಕಿಸ್ತಾನ ವಾಯುಪಡೆಯ ನೂರ್ ಖಾನ್ (ಚಕ್ಲಾಲಾ, ರಾವಲ್ಪಿಂಡಿ), ಮುರಿಯ್ (ಚಕ್ವಾಲ್) ಮತ್ತು ರಫೀಕಿ (ಜಾಂಗ್ ಜಿಲ್ಲೆಯ ಶೋರ್ಕೋಟ್) ವಾಯುನೆಲೆಗಳನ್ನು ಭಾರತ ಗುರಿಯಾಗಿಸಿ ದಾಳಿ ಮಾಡಿದೆ ಎಂದು ಅವರು ಹೇಳಿದ್ದಾರೆ. ವಾಯುಪಡೆಯ ಎಲ್ಲಾ ಸ್ವತ್ತುಗಳು ಸುರಕ್ಷಿತವಾಗಿವೆ ಎಂದು ಅವರು ಹೇಳಿದ್ದಾರೆ. ಭಾರತವು ತನ್ನ ಜೆಟ್ ಮೂಲಕ ಗಾಳಿಯಿಂದ ಮೇಲ್ಮೈಗೆ ಕ್ಷಿಪಣಿಗಳನ್ನು ಹಾರಿಸಿದೆ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಯು ಹಲವಾರು ಕ್ಷಿಪಣಿಗಳನ್ನು ತಡೆಹಿಡಿದಿದೆ ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೆ ಆತುರಾತುರವಾಗಿ ಪತ್ರಿಕಾಗೋಷ್ಠಿ ಮುಗಿಸಿ ಅವರು ತೆರಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…