Subscribe to Updates
Get the latest creative news from FooBar about art, design and business.
- ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
- ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
- ಔರಾದ್ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
- ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
- ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
- ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
- ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
- ಸೆ.30ರೊಳಗೆ ಔರಾದ್ ಬರಪೀಡಿತ ತಾಲೂಕು ಘೋಷಣೆ: ಡಾ.ಭೀಮಸೇನರಾವ ಶಿಂಧೆ ವಿಶ್ವಾಸ
Author: admin
ಬೆಂಗಳೂರಿನಲ್ಲಿ ಹೊಸ ವರ್ಷ ಮತ್ತು ಕ್ರಿಸ್‌ಮಸ್ ಪಾರ್ಟಿಗಳ ಆಯೋಜನೆಗೆ ಪೊಲೀಸರ ಅನುಮತಿಯನ್ನುಕಡ್ಡಾಯಗೊಳಿಸಲಾಗಿದೆ. ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಪೊಲೀಸ್ ಆಯುಕ್ತ ಸಿ ಹೆಚ್ ಪ್ರತಾಪ್ ರೆಡ್ಡಿ ಈ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷ ಮತ್ತು ಕ್ರಿಸ್‌ಮಸ್ ಪಾರ್ಟಿಗಳ ಆಯೋಜನೆಗೆ ಪೊಲೀಸರ ಅನುಮತಿ ಕಡ್ಡಾಯವಾಗಿದೆ. ಸಂಘಟಕರು, ಅನುಮತಿಗಳಿಗಾಗಿ ಅರ್ಜಿ ಸಲ್ಲಿಸುವಾಗ, ಅವರು ಹೋಸ್ಟ್ ಮಾಡುವ ಈವೆಂಟ್‌ಗಳ ಪ್ರಕಾರದ ಬಗ್ಗೆ ವಿವರವಾಗಿ ವಿವರಿಸಬೇಕು. ಅನುಮತಿ ಇಲ್ಲದ ಪಾರ್ಟಿಗಳಿಗೆ ಆಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸೂಚನೆ ನೀಡಿದ್ದಾರೆ. ತಪಾಸಣೆ, ಪರವಾನಗಿ ಪಡೆಯದಿರುವ ಶಸ್ತ್ರಾಸ್ತ್ರಗಳ ಮೇಲೆ ನಿಷೇಧ, ಹೈ ರೆಸಲ್ಯೂಶನ್ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ವಿದ್ಯುತ್ ಬ್ಯಾಕಪ್, ಸಾಕಷ್ಟು ಬೆಳಕು, ಭದ್ರತಾ ಸಿಬ್ಬಂದಿ ನೇಮಕ ಕುರಿತು ನಿರ್ದೇಶನ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಳ್ಳಾರಿ: ತಾಲ್ಲೂಕಿನ ಹಲಕುಂದಿ ಗ್ರಾಮದ ಬಳಿಯ ಕಲ್ಯಾಣ ಕೋಳಿ ಫಾರಂ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಹರಿದು ಮೂವರು ಜನ ಹಾಸ್ಟಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಡರಾತ್ರಿ ಸಂಭವಿಸಿದೆ. ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಬಸ್ ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮುರುಡಿಯ ಶಂಕರ್ (18) ಎಮ್ಮಿಗನೂರಿನ ಕನಕರಾಜ್ (19) ನಾಗೇನಹಳ್ಳಿಯ ಹೊನ್ನೂರ (22) ಎಂದು ಗುರುತಿಸಿದ್ದು ಇವರು ಬಳ್ಳಾರಿ ನಗರದ ಎಸ್ಎಸ್ಟಿ ಹಾಸ್ಟಲ್ ನ ವಿದ್ಯಾರ್ಥಿಗಳಾಗಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರವಾರ : 2023ರ ವಿಧಾನಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಶ್ರೀ ರಾಮ ಸೇನೆಯ ಕಾರ್ಯಕರ್ತರು ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮಸೇನೆಯಿಂದ ಐವರು ಸ್ವಾಮೀಜಿಗಳು ಸೇರಿದಂತೆ 25 ಕ್ಷೇತ್ರಗಳಲ್ಲಿ ಹಿಂದು ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ. ನಾನು ಕೂಡ ಕಾರ್ಕಳ ಅಥವಾ ತೇರದಾಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡಿದ ಬಿಜೆಪಿಗೆ ಮಾನವೀಯತೆ ಇದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಕರಣವನ್ನು ತಕ್ಷಣ ಮರುತನಿಖೆಗೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಸದನದೊಳಗೆ ವೀರ ಸಾವರ್ಕರ್ ಭಾವಚಿತ್ರವನ್ನು ಏಕೆ ಹಾಕಲಾಗುತ್ತದೆ. ಇಲ್ಲಿಯವರೆಗೆ ಸದನದಲ್ಲಿ ಸಾವರ್ಕರ್ ಫೋಟೋ ಹಾಕಿಲ್ಲ, ಈಗ ಏಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ ವಿಚಾರವಾಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸದನದಲ್ಲಿ ಸಾವರ್ಕರ್ ಫೋಟೋ ಅಳವಡಿಕೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ವೀರ ಸಾವರ್ಕರ್ ಮೊದಲೇ ವಿವಾದಾತ್ಮಕ ವ್ಯಕ್ತಿತ್ವ ಹೊಂದಿದವರು. ಗಾಂಧೀಜಿ ಸಾವಿನಲ್ಲಿ ಸಾವರ್ಕರ್ ಕೈವಾಡವಿದೆ ಎಂದರು. ಫೋಟೋ ಅಳವಡಿಕೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಬಂದಿಲ್ಲ. ಈ ವಿಚಾರವನ್ನು ಸರ್ವ ಸದಸ್ಯರ ಗಮನಕ್ಕೆ ತಂದಿಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. 10 ದಿನ ನಡೆಯುವ ರಾಜಕೀಯ ಮೇಲಾಟಕ್ಕೆ ಬೆಳಗಾವಿ ಸಜ್ಜಾಗಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜಾಗಿವೆ. ಇತ್ತ ತಿರುಗೇಟು ನೀಡಲು ಬಿಜೆಪಿ ಸರ್ಕಾರ ಕೂಡ ರೆಡಿಯಾಗಿದೆ. ಗಡಿ ವಿವಾದ, ಚಿಲುಮೆ ಸಂಸ್ಥೆ ಮತದಾರರ ಮಾಹಿತಿ ಸಂಗ್ರಹ, ನೇಮಕಾತಿ ಹಗರಣ, ಗ್ರಾಮ ಪಂಚಾಯಿತಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ವಿಳಂಬ, ಮಹದಾಯಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ವಿಪಕ್ಷಗಳ ಪ್ರಶ್ನೆಗಳಿಗೆ ಸಮರ್ಥವಾಗಿ ಉತ್ತರಿಸಲು ರಾಜ್ಯ ಸರ್ಕಾರ ಕೂಡ ಸಜ್ಜಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಂಜನಗೂಡು: ಕಾಡಿನಲ್ಲಿ ಜಿಂಕೆಗಳನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದ ವೇಳೆ ರೈತರನ್ನು ಕಂಡು ಬೇಟೆಗಾರರು ಪರಾರಿಯಾದ ಘಟನೆ ನಂಜನಗೂಡು ತಾಲೂಕಿನ ಕೋಣನೂರು-ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ತಪ್ಪಿಸಿಕೊಂಡು ಹೋಗುವ ಭರದಲ್ಲಿ ಬೇಟೆಗಾರರ ಜೀಪು ಮಗುಚಿ ಬಿದ್ದ ಘಟನೆಯೂ ನಡೆದಿದೆ. ಕೋಣನೂರು ಗ್ರಾಮದ ಹೊರವಲಯದ ಎತ್ತಿನ ಮುಂಟಿ ಎಂಬ ಸ್ಥಳದಲ್ಲಿ ರಾತ್ರಿಯ ಸಮಯದಲ್ಲಿ ಜಿಂಕೆಯನ್ನು ಬೇಟೆಯಾಡಿದ ಬೇಟೆಗಾರರು, ಮರಕ್ಕೆ ನೇತು ಹಾಕಿ, ಮಾಂಸ ಮಾಡುತ್ತಿದ್ದರು. ಈ ವೇಳೆ ಜಮೀನಿನಲ್ಲಿದ್ದ ರೈತರನ್ನು ಕಂಡು ಹೆದರಿ, ಜೀಪು ಹತ್ತಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಗಾಬರಿಯಿಂದ ತೆರಳುವ ಭರದಲ್ಲಿ ಜೀಪು ಪಲ್ಟಿಯಾಗಿದ್ದು, ಜೀಪನ್ನು ಸ್ಥಳದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಕೋಣನೂರು ಮತ್ತು ಚುಂಚನಹಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆಗಳು ಯಥೇಚ್ಛವಾಗಿವೆ, ಕುರುಚಲು ಅರಣ್ಯ ಪ್ರದೇಶವಾಗಿರುವ ಇಲ್ಲಿ ಸಾವಿರಾರು ಸಂಖ್ಯೆಯಲ್ಲಿರುವ ಜಿಂಕೆಗಳು ವಾಸಿಸುತ್ತಿವೆ. ಜೊತೆಗೆ ಕೃಷ್ಣಮೃಗಗಳು ಕೂಡ ವಾಸಿಸುತ್ತಿವೆ. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜಿಂಕೆಗಳು ಬೇಟೆಗಾರರಿಗೆ ಬಲಿಯಾಗುತ್ತಿವೆ ಎಂದು ಕೋಣನೂರು ಮತ್ತು ಚುಂಚನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ಪೊಲೀಸ್…
ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಧ್ವನಿ ಪಕ್ಷದ ಧ್ವನಿಯಾಗಬೇಕು ಎಂಬುದು ಈ ಸಮಿತಿಯ ತೀರ್ಮಾನವಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಇದುವರೆಗೂ ಬಂದಿರುವ ಅರ್ಜಿಗಳನ್ನು ಆಯಾ ಜಿಲ್ಲಾ ಕಾಂಗ್ರೆಸ್ ಗಳಿಗೆ ಕಳುಹಿಸಿಕೊಡುತ್ತೇವೆ. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ರಾಜ್ಯಮಟ್ಟದ ಚುನಾವಣಾ ಸಮಿತಿಯಿಂದ ಇಬ್ಬರು ಸದಸ್ಯರಿಗೆ ಒಂದೊಂದು ಜಿಲ್ಲೆಯ ಜವಾಬ್ದಾರಿಯನ್ನು ನೀಡಲಾಗುವುದು ಎಂದು ಅವರು ತಿಳಿಸಿದರು. ಪಕ್ಷದ 5 ಕಾರ್ಯಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿಗಳು, ಚುನಾವಣಾ ಸಮಿತಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸದಸ್ಯರು, ಪಕ್ಷದ ಪದಾಧಿಕಾರಿಗಳು ಎಲ್ಲರೂ ಸೇರಿ ಚರ್ಚೆ ಮಾಡುತ್ತಾರೆ. ಆದಷ್ಟು ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲಾ ಟಿಕೆಟ್ ಆಕಾಂಕ್ಷಿಗಳನ್ನು ಸೇರಿಸಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ಪ್ರತಿ ಕ್ಷೇತ್ರಗಳಲ್ಲಿ 1…
ತಿಪಟೂರು: ಕೊಬ್ಬರಿಗೆ ಬೆಂಬಲ ಬೆಲೆ ಕುರಿತು ರಾಜ್ಯಸಭೆಯಲ್ಲಿ ಚರ್ಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವಂತೆ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು. ಇತ್ತೀಚೆಗೆ ಕೊಬ್ಬರಿ ಬೆಲೆ ತುಂಬಾ ಕನಿಷ್ಠಕ್ಕೆ ಇಳಿದಿದ್ದು, ಪರಿಣಾಮವಾಗಿ ರೈತರಿಗೆ ತುಂಬಾ ನಷ್ಟ ಅನುಭವಿಸುವ ಸ್ಥಿತಿ ಉಂಟಾಗಿದೆ. ಆದ ಕಾರಣ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಕೆ.ಷಡಕ್ಷರಿ ಅವರ ಆದೇಶದಂತೆ ನಾ ಕೆನಹಳ್ಳಿ ಸುರೇಶ್ ಷಡಕ್ಷರಿ ಅವರ ಅಭಿಮಾನಿ ಬಳಗ ಮಲ್ಲಿಕಾರ್ಜುನ ಖರ್ಗೆ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಕಲ್ಪತರು ನಾಡಿನ ಕೊಬ್ಬರಿಗೆ ಕನಿಷ್ಠ ರೂ.15,000 ಬೆಂಬಲ ಬೆಲೆ ಘೋಷಿಸುವಂತೆ ನ್ಯಾಫೆಡ್ ಕೇಂದ್ರ ಸ್ಥಾಪಿಸುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ಪಟ್ಟಣದ ಕೋಟೆ ಬೀದಿಯ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿರುವ ಬೆಟ್ಟದಲ್ಲಿ ಮೇಯುತ್ತಿದ್ದ ಮೇಕೆಗಳ ಮೇಲೆ ಮೂರು ಚಿರತೆಗಳು ದಾಳಿ ನಡೆಸಿದೆ. ಚಿರತೆಗಳ ದಾಳಿಗೆ ಒಂದು ಮೇಕೆ ಬಲಿ: ವಿಷಯ ತಿಳಿದ ತಕ್ಷಣವೇ ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮೇಕೆ ಕಳೆದುಕೊಂಡ ರೈತನಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಹಲವು ತಿಂಗಳುಗಳಿಂದ ಒಂದೊಂದಾಗಿ ಮೇಕೆ ಹಾಗೂ ಸಾಕು ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಗೆ ಆಹಾರವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ಕುಡಿಯುವ ನೀರಿನ ಬಾವಿ ಇದ್ದು ಸಾರ್ವಜನಿಕರ ಪ್ರತಿನಿತ್ಯ ಅಲ್ಲಿಗೆ ಬರಬೇಕು. ರಾತ್ರಿ ಸಮಯದಲ್ಲಿ ವಿದ್ಯುತ್ ಕಂಬಗಳಲ್ಲಿ ಬೆಳಕು ಇಲ್ಲದ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಚಿರತೆಗಳು ದಾಳಿ ಮಾಡಿದರೆ, ಏನು ಮಾಡಬೇಕು? ಎಂದು ಆತಂಕ ವ್ಯಕ್ತಪಡಿಸಿರುವ ಸಾರ್ವಜನಿಕರು, ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕ್ರಮ ವಹಿಸಿ ಚಿರತೆಗಳನ್ನು ಹಿಡಿದು ಬೇರೆಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.…
ಬೆಂಗಳೂರು: ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಶಾಸಕಿ ಅನಿತಾ ಕುಮಾರಸ್ವಾಮಿಯವರು, ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು.ಇನ್ನೂ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ತೆರೆ ಎಳೆಯಬೇಕು ಎಂದು ಇವತ್ತು ನಿರ್ಧಾರ ಮಾಡಿದ್ದೇನೆ. ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy