Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ವಿಡಿಯೋ ಕಾಲ್ ಮೂಲಕ ವೈದ್ಯರ ಸಲಹೆಯಂತೆ ಹೆರಿಗೆ ಮಾಡಿಸಲು ಹೋಗಿ ಹೆಚ್ಚುಕಮ್ಮಿಯಾದ ಕಾರಣ ತಾಯಿ, ಮಗು ಮೃತಪಟ್ಟ ದಾರುಣ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಮಹಿಳೆಗೆ ಹೆರಿಗೆ ನೋವು ಬಂದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆ ವೇಳೆ ಪ್ರಸೂತಿ ತಜ್ಞರು ಲಭ್ಯವಿರಲಿಲ್ಲ. ನೋವು ಹೆಚ್ಚಾದ ಕಾರಣ ಸಿಬ್ಬಂದಿ ವೈದ್ಯರಿಗೆ ಕರೆ ಮಾಡಿ ತಿಳಿಸಿದ್ದಾರೆ. ವೈದ್ಯರು ವಿಡಿಯೋಕಾಲ್‌ನಲ್ಲಿ ಗೈಡ್ ಮಾಡ್ತಿನಿ, ಆಪರೇಷನ್ ಮಾಡಿ ಎಂದಿದ್ದಾರೆ. ಈ ವೇಳೆ ಏನೋ ಅನಾಹುತವಾಗಿ ತಾಯಿ & ಮಗುವಿನ ಪ್ರಾಣ ಹೋಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಡಿಸೆಂಬರ್ 19 ರಿಂದ 30 ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯಲಿದೆ. ಈ ಅಧಿವೇಶನವು 15ನೇ ವಿಧಾನಸಭೆಯ ಕೊನೆಯ ಅಧಿವೇಶನವಾಗಿದ್ದು, ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.ಈ ಸಿದ್ಧತೆಗಳನ್ನು ವಿಧಾನಸಭೆಯ ಸಭಾಪತಿಗಳಾದ ವಿಶ್ವನಾಥ್ ಹೆಗಡೆ ಕಾಗೇರಿ ಅವರು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಇದು 8ನೇ ಅಧಿವೇಶನ. ಒಟ್ಟು ಬೆಳಗಾವಿಯಲ್ಲಿ ಹತ್ತು ಅಧಿವೇಶನಗಳು ಜರುಗಿದ್ದು, ಅದರಲ್ಲಿ ಎರಡು ಅಧಿವೇಶನ ಕೆ .ಎಲ್ .ಇ .ಜೆ ಎಂ ಸಿ ಮೆಡಿಕಲ್ ಕಾಲೇಜಿನಲ್ಲಿ ಅಧಿವೇಶನ ನಡೆಸಲಾಗಿತ್ತು. ಬಿಜೆಪಿ ಸರಕಾರದ ಅವಧಿಯಲ್ಲಿ ನಡೆಯುವ 5ನೇ ವರ್ಷದ ಹಾಗೂ ಕೊನೆಯ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು. ಈ ಅಧಿವೇಶನದಲ್ಲಿ ಒಟ್ಟು 6 ವಿಧೇಯಕಗಳು ಮಂಡಿಸಲಾಗುವುದು. ಸಮಯ ಇರುವರಿಂದ ಹೆಚ್ಚಿನ ವಿಧೇಯಕಗಳು ಸರ್ಕಾರಗಳಿಂದ ಪ್ರಸ್ತಾವನೆಯ ನಿರೀಕ್ಷೆಯಲ್ಲಿ ನಾವಿದ್ದೇವೆ. 6 ವಿಧೇಯಕಗಳಲ್ಲಿ ಮೊದಲನೇ ವಿಧೇಯಕ ಅಭಿವೃದ್ಧಿ ವಿದಾಯಕವಾಗಿದ್ದು, ಇದು ಈಗಾಗಲೇ ಸದನದಲ್ಲಿ ಮಂಡನೆಯಾಗಿದ್ದು, ಆದರೆ…
ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಯಿದೆ ಎಂದು ಈ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಸದ್ಯ ಈ ವಿಚಾರವಾಗಿ ಬೆಳಗಾವಿಯಲ್ಲಿ ಶಾಸಕ ಬಸನಗೌಡ ಯತ್ನಾಳ್ ಮಾತನಾಡಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ. ಎಲ್ಲವನ್ನೂ ಬೊಮ್ಮಾಯಿ ಅವರೇ ಇಟ್ಟುಕೊಳ್ಳಲಿ. ಮೂರ್ನಾಲ್ಕು ತಿಂಗಳಲ್ಲಿ ಏನು ಅಭಿವೃದ್ಧಿ ಮಾಡಲು ಆಗುತ್ತೆ? ಹೊಸ ಸರ್ಕಾರದಲ್ಲಿ ಮಂತ್ರಿ ಆಗಬೇಕೆಂದು ಎಲ್ಲರೂ ಸುಮ್ಮನಿದ್ದಾರೆ ಎಂದು ಖಡಕ್ ಆಗಿ ಹೇಳಿದ್ದಾರೆ. ಗುಜರಾತ್ ಮಾದರಿಯಲ್ಲೇ ಹೊಸಬರಿಗೆ ಅವಕಾಶ ನೀಡಬೇಕು. ಈ ಬಾರಿ ಕರ್ನಾಟಕದಲ್ಲಿ ಬಹಳಷ್ಟು ಬದಲಾವಣೆ ಮಾಡ್ತಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಜಿಲ್ಲೆಯ ಬಿಎಸ್ ಎಫ್ ಯೋಧ ಸದ್ದಾಂ ಜಮಾದಾರ್ ಅನಾರೋಗ್ಯದಿಂದ ಕರ್ತವ್ಯದಲ್ಲಿ ಇದ್ದಾಗಲೇ ಗುಜರಾತ್‌ನ ಬುಜ್‌ನಲ್ಲಿ ನಿಧನರಾಗಿದ್ದಾರೆ. ಸದ್ದಾಂ ಅವರು ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದವರು. ಇತ್ತೀಚಿಗೆ ರಜೆ ಪಡೆದು ಊರಿಗೆ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸದ್ದಾಂ ಜಮಾದಾರ್ ಅವರಿಗೆ ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆದರೆ ಅಕಾಲಿಕವಾಗಿ ನಿಧನ ಹೊಂದಿದ್ದು, ಅತೀವ ದುಃಖ ಉಂಟಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಅಣ್ಣತಮ್ಮಂದಿರನ್ನು ಅಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂತಾರ ಸಿನಿಮಾದ ಯಶಸ್ಸಿನ ಬಳಿಕ ಕಾಂತಾರ- 2 ಸಿನಿಮಾ ಮಾಡಲು ನಿರ್ದೇಶಕ ರಿಷಭ್ ಶೆಟ್ಟಿ ಪ್ಲ್ಯಾನ್ ಮಾಡಿದ್ದಾರೆ ಎಂಬ ವಿಚಾರವೊಂದು ಹರಿದಾಡುತ್ತಿತ್ತು. ಅದಕ್ಕೆ ಇದೀಗ ಸ್ಪಷ್ಟನೆ ದೊರೆತಂತಿದೆ. ನಟ ರಿಷಬ್ ಶೆಟ್ಟಿ ಅನುಮತಿ ಪಡೆದ ಬಗ್ಗೆ ದೈವ ನರ್ತಕ ಉಮೇಶ್ ಗಂಧಕಾಡು ಮಾತನಾಡಿ, ರಿಷಭ್ ಶೆಟ್ಟಿಯವರು ಕೆಲವು ದಿನಗಳ ಹಿಂದೆ ಅಣ್ಣಪ್ಪ ಪಂಜುರ್ಲಿ ಸೇವೆ ಮಾಡಬೇಕೆಂದು ಕೇಳಿಕೊಂಡಿದ್ದರು. ಅದಕ್ಕಾಗಿ ನಗರದ ಬಂದಲೆಯ ಮಡಿವಾಳಬೆಟ್ಟು ದೈವಸ್ಥಾನದಲ್ಲಿ ನಾನೇ ಅಣ್ಣಪ್ಪ ಪಂಜುರ್ಲಿ ದೈವದ ನರ್ತನ ಸೇವೆ ಮಾಡಿದ್ದೆ. ದೈವದ ನೇಮದ ವೇಳೆ ಹೇಳುವ ನುಡಿ ನರ್ತಕ ಹೇಳುವುದಲ್ಲ ಬದಲಾಗಿ ದೈವವೇ ಹೇಳುವುದು. ಅದು ದೈವ ನರ್ತಕರಾದ ನಮಗೆ ಗೊತ್ತಾಗದೇ ಆಗುವಂತದ್ದು ಎಂದರು. ಅಣ್ಣಪ್ಪ ಪಂಜುರ್ಲಿಯ ನೇಮದ ವೇಳೆ ಪುಷ್ಪ ಪ್ರಶ್ನೆಯಲ್ಲಿ ದೈವದ ಬಳಿ ಕಾಂತಾರ-2 ಸಿನಿಮಾ ಮಾಡಲು ಅರಿಕೆ ಮಾಡಿದ್ದ ವೇಳೆ ಶುಭ ಶಕುನ ಬಂದಿದೆ. ಕಾಂತಾರ-2 ಸಿನಿಮಾ ಬಹಳ ಶುದ್ಧಾಚಾರದಿಂದ ಮಾಡಬೇಕು. ಧರ್ಮಸ್ಥಳಕ್ಕೆ ತೆರಳಿ ಅಣ್ಣಪ್ಪ ಪಂಜುರ್ಲಿ ದೈವದ ಬಳಿ ಪ್ರಾರ್ಥನೆಯೂ ಮಾಡಬೇಕು…
ಹೆಚ್.ಡಿ.ಕೋಟೆ: ಪಟ್ಟಣದ ಪುರಸಭೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಸರ್ಕಾರದ ತೆರಿಗೆ ಹಣ ದುರುಪಯೋಗವಾಗಿದೆ, ಅಕ್ರಮ ಖಾತೆ ಮಾಡಿದ್ದಾರೆ, ಅಧಿಕಾರಿಗಳು ಅಕ್ರಮದಲ್ಲಿ ತೊಡಗಿದ್ದಾರೆ ಎಂದು ಪೌರ ಆಡಳಿತ ಸಚಿವಾಲಯಕ್ಕೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಕಳೆದ ಒಂಬತ್ತು ತಿಂಗಳ ಹಿಂದೆ ದೂರು ನೀಡಿ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದರು ಕೂಡ ಯಾವುದೇ ಕ್ರಮ ಆಗಿಲ್ಲ ಎಂದು ಆರೋಪಿಸಿ ಪುರಸಭಾ ಸದಸ್ಯ ಮಿಲ್ ನಾಗರಾಜು ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದಾರೆ. ಪುರಸಭಾ ಮುಂಭಾಗ ಏಕಾಂಗಿಯಾಗಿ ಉಪವಾಸ ಆರಂಭಿಸಿರುವ ಅವರು, ಸದಸ್ಯರು, ಅಧಿಕಾರಿಗಳ ಮೇಲೆ ಕ್ರಮ ಆಗುವವರೆಗೂ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದು, ಇವರಿಗೆ ಹಲವು ಪ್ರಗತಿಪರ ಸಂಘಟನೆಯ ಮುಖಂಡರು ಬೆಂಬಲ ವ್ಯಕ್ತಪಡಿಸಿದರು. ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದ ಸದಸ್ಯ ಮಿಲ್ ನಾಗರಾಜು, ಕಳೆದ ನಾಲ್ಕು ವರ್ಷದ ಹಿಂದೆ ಪುರಸಭೆಗೆ ಚುನಾಯಿತರಾದ ನಂತರ ಸಾರ್ವಜನಿಕವಾಗಿ ಪುರಸಭೆ ವತಿಯಿಂದ ಅಭಿವೃದ್ಧಿ ಕೆಲಸ ಕಾರ್ಯ ಮಾಡಿಕೊಡಲು ನಮ್ಮಿಂದ ಸಾಧ್ಯವಾಗಿಲ್ಲ, ಕಾರಣ ಅಧಿಕಾರಿಗಳು ನಮಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು. ಸಾಮಾನ್ಯ ಸಭೆಯಲ್ಲಿ ಆಡಳಿತ…
ಮಂಜುಸ್ವಾಮಿ.ಎಂ.ಎನ್, ಕೊರಟಗೆರೆ. ಕೊರಟಗೆರೆ: ಜನ ಸ್ನೇಹಿ ತಹಶೀಲ್ದಾರ್ ಎಂದೇ ಹೆಸರು ಪಡೆದಿರುವ ತುಮಕೂರು ಜಿಲ್ಲೆ ಕೊರಟಗೆರೆಯ ತಹಶೀಲ್ದಾರ್ ನಾಹೀದಾ ಜಮ್ ಜಮ್ ಅವರು, ಮಾರುವೇಷದಲ್ಲಿ ರಹಸ್ಯ ಕಾರ್ಯಾಚರಣೆ ನಡೆಸಿದ್ದು, 108 ತುರ್ತು ಸೇವೆಯ ನಿರ್ವಹಣೆ ವೈಫಲ್ಯವನ್ನು ಬಯಲು ಮಾಡಿದ್ದಾರೆ. ಚಿರತೆ ದಾಳಿಯಿಂದ ಗಾಯಗೊಂಡು ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತರು ಮತ್ತು ಮಕ್ಕಳ ಆರೋಗ್ಯ ವಿಚಾರಣೆಗೆ ಬಂದ ನಾಹಿದಾ ಅವರ ಬಳಿ ತುರ್ತು ಆರೋಗ್ಯ ಸೇವೆ 108 ಕುರಿತು ದೂರು ನೀಡಿದ್ದರು. ಚಿರತೆ ದಾಳಿ ಸಂದರ್ಭದಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಕುರಿತು ವಿವರಿಸಿ ಕಣ್ಣೀರು ಹಾಕಿದ್ದರು. ಈ ಹಿನ್ನೆಲೆಯಲ್ಲಿ 108 ಕ್ಕೆ ರಾಮಕ್ಕನ ಹೆಸರಿನಲ್ಲಿ ವಡ್ಡಗೆರೆ ಕ್ರಾಸ್ ಬಳಿ ಅಪಘಾತ ಆಗಿದೆ ಎಂದು ತಹಶೀಲ್ದಾರ್ ಕರೆ ಮಾಡ್ತಾರೆ. 2 ನಿಮಿಷ 108 ಗ್ರಾಹಕ ಸೇವಾಕೇಂದ್ರದ ಸಿಬ್ಬಂದಿ ಮಾಹಿತಿ ಪಡೆಯುತ್ತಾರೆ. ನಂತರ ಕರೆಯು ಆಂಬ್ಯುಲೆನ್ಸ್ ಸಿಬ್ಬಂದಿಗೆ ವರ್ಗಾವಣೆ ಆಗುತ್ತದೆ. ಆಂಬ್ಯುಲೆನ್ಸ್ ಸಿಬ್ಬಂದಿ ಉಮಾದೇವಿಯ ಜೊತೆ 8 ನಿಮಿಷ ತಹಶೀಲ್ದಾರ್ ಮಾತನಾಡುತ್ತಾರೆ.…
ಈ ವರ್ಷದ ಆಗಸ್ಟ್ ತಿಂಗಳಿಂದ ರಾಜ್ಯಾದ್ಯಂತ ಅನೇಕ ಅಂಗನವಾಡಿ ಕೇಂದ್ರಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಮಕ್ಕಳು ಹಾಗೂ ಗರ್ಭಿಣಿಯರಿಗೆ ‘ತಾಂತ್ರಿಕ’ ಕಾರಣಗಳಿಂದಾಗಿ ಮೊಟ್ಟೆಗಳನ್ನು ಹಂಚಿಕೆ ಮಾಡುವಲ್ಲಿ ತೊಂದರೆ ಅನುಭವಿಸುತ್ತಿವೆ. ಮಕ್ಕಳು ಹಾಗೂ ಮಹಿಳೆಯರಲ್ಲಿ ಅಪೌಷ್ಠಿಕತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಅಂಗನವಾಡಿ ಮಕ್ಕಳಿಗೆ ವಾರದಲ್ಲಿ ಮೂರು ಮೊಟ್ಟೆಗಳು ಹಾಗೂ ಗರ್ಭಿಣಿಯರಿಗೆ ವಾರದಲ್ಲಿ ಆರು ಮೊಟ್ಟೆಗಳನ್ನು ಹಂಚಿಕೆ ಮಾಡುತ್ತಿದೆ. ಆದರೆ ಹಣಕಾಸು ಇಲಾಖೆಯ ಸಮಗ್ರ ಹಣಕಾಸು ನಿರ್ವಹಣಾ ವ್ಯವಸ್ಥೆ ಖಜಾನೆ-|| ವತಿಯಿಂದ ಹಣ ಬಿಡುಗಡೆಯಲ್ಲಿ ಆಗಿರುವ ತೊಂದರೆಯಿಂದಾಗಿ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಸಿಬ್ಬಂದಿಗಳೇ ತಮ್ಮ ಸ್ವಂತ ಖರ್ಚಿನಿಂದ ಮೊಟ್ಟೆಗಳ ಬಿಲ್ಲುಗಳನ್ನು ಪಾವತಿಸುತ್ತಿದ್ದಾರೆ, ಹಾಗೂ ಹಣ ಇಲ್ಲದಿರುವವರು ಫಲಾನುಭವಿಗಳಿಗೆ ಮೊಟ್ಟೆಗಳ ಹಂಚಿಕೆಯನ್ನು ನಿಲ್ಲಿಸಿದ್ದಾರೆ. ಗದಗ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಕನಿಷ್ಠ ಮೂರು ಅಂಗನವಾಡಿ ಕೇಂದ್ರಗಳಲ್ಲಿ ಹಣಕಾಸಿನ ಕೊರತೆಯಿಂದಾಗಿ ಮಕ್ಕಳಿಗೆ ಮೊಟ್ಟೆಗಳನ್ನು ಕೊಡುವುದು ಸಾಧ್ಯವಾಗುತ್ತಿಲ್ಲವಂತೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತರೆಯರ ಮತ್ತು ಸಹಾಯಕಿಯರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಎಂ. ಜಯಮ್ಮ ಅವರ ಪ್ರಕಾರ…
ಬೆಂಗಳೂರು : ಮತ್ತೆ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಡಿಸೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಅಂದೇ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನಲಾಗಿದೆ. ವಿಧಾನಸಭೇ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟದಿಂದ ಕೈಬಿಡಲಾಗಿದ್ದ ನಾಯಕರನ್ನು ಮತ್ತೆ ಸಂಪುಟಕ್ಕೆ ಸೇರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಮಾಜಿ ಸಚಿವರಾದ ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚೆನ್ನೈ: ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆಯಿಂದ ದೂರವಾಗಿರುವ ನಾಯಕರು ಮತ್ತೆ ಒಂದಾಗಲಿದ್ದಾರೆಯೇ? ಲೋಕಸಭೆ ಚುನಾವಣೆಗೆ ಒಟ್ಟಿಗೆ ಸ್ಪರ್ಧಿಸುತ್ತಾರಾ? ಅಥವಾ 1987 ರ ಬಿಕ್ಕಟ್ಟು ಎರಡು ರಾಷ್ಟ್ರಗಳ ಚಿಹ್ನೆಯ ನಷ್ಟಕ್ಕೆ ಕಾರಣವಾಗಬಹುದೇ? ಈ ಪ್ರಶ್ನೆಗಳಿಗೆ ಉತ್ತರ ತಿಳಿಯದ ರಾಷ್ಟ್ರೀಯ ಪಕ್ಷ ಬಿಜೆಪಿ ಗೊಂದಲಕ್ಕೆ ಸಿಲುಕಿದೆ ಎಂದರೆ ಅತಿಶಯೋಕ್ತಿಯಲ್ಲ. ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದ ನಂತರ ನಾಲ್ಕು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಮತ್ತು ಪ್ರಸ್ತುತ ಪ್ರಮುಖ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿರುವ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್) ಅವರು ಭಿನ್ನಮತೀಯ ನಾಯಕರನ್ನು ಸೇರಿಸಿಕೊಳ್ಳುವ ಉದ್ದೇಶವನ್ನು ಪಕ್ಷ ಹೊಂದಿಲ್ಲ ಎಂದು ಹೇಳುತ್ತಾರೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಪನ್ನೀರಸೆಲ್ವಂ ಅವರು ಇಪಿಎಸ್ ನೇತೃತ್ವದಲ್ಲಿ ನಡೆದ ಸಾಮಾನ್ಯ ಸಭೆ ಸಿಂಧುವಾಗಿದೆ ಎಂಬ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಮೇಲ್ಮನವಿ ಸೋಮವಾರ ವಿಚಾರಣೆಗೆ ಬರಲಿದೆ. ಇಪಿಎಸ್ ಮತ್ತು ಒಪಿಎಸ್ ಇದನ್ನು ವಿರೋಧಿಸಿ ಅಫಿಡವಿಟ್ ಸಲ್ಲಿಸುತ್ತಿದ್ದಾರೆ. ಮೇಲ್ಮನವಿಯ ವಿಚಾರಣೆಯ ನಂತರ…