Subscribe to Updates
Get the latest creative news from FooBar about art, design and business.
- ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
- ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
- ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
- ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
- ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
- ಹುಯಿಲ್ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
- ತುಮಕೂರು: ಗಾಜಿನ ಮನೆಯಲ್ಲಿ ‘ಸಿರಿಧಾನ್ಯ ಖಾದ್ಯಗಳ’ ಘಮಲು!
- 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್ ಗೆ ಪದೋನ್ನತಿ
Author: admin
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಮಿಲಿಟರಿ ಸಂಘರ್ಷದ ಮಧ್ಯೆ, ಇಂದು ಶನಿವಾರ ಬೆಳಗಿನ ಜಾವ ಪಂಜಾಬ್ ನ ಪಠಾಣ್ ಕೋಟ್ ಜಿಲ್ಲೆಯಲ್ಲಿ ಸ್ಫೋಟದಂತಹ ಶಬ್ದಗಳು ಕೇಳಿಬಂದವು. ಇಂದು ನಸುಕಿನ ಜಾವ 5 ಗಂಟೆ ಸುಮಾರಿಗೆ ಸ್ಫೋಟದ ಶಬ್ದಗಳು ಕೇಳಿಬಂದವು. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ನಿನ್ನೆ ಶುಕ್ರವಾರ ರಾತ್ರಿ ಪಠಾಣ್ ಕೋಟ್ ನಲ್ಲಿ ಅಧಿಕಾರಿಗಳು ವಿದ್ಯುತ್ ಕಡಿತಗೊಳಿಸಿ ಜನರು ಮನೆಯೊಳಗೆ ಇರುವಂತೆ ಒತ್ತಾಯಿಸಿದ್ದರು. ನಿನ್ನೆ ಸಂಜೆ ಪಂಜಾಬ್ ನ ಫಿರೋಜ್ ಪುರ, ಪಠಾಣ್ ಕೋಟ್, ಫಜಿಲ್ಕಾ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಪಾಕಿಸ್ತಾನಿ ಡ್ರೋನ್ಗಳ ಬಹು ದಾಳಿಗಳನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫಿರೋಜ್ ಪುರದಲ್ಲಿ, ಕಳೆದ ರಾತ್ರಿ ಪಾಕಿಸ್ತಾನಿ ಡ್ರೋನ್ನಿಂದ ಡಿಕ್ಕಿ ಹೊಡೆದು ಖೈ ಫೆಮೆ ಕೆ ಗ್ರಾಮದಲ್ಲಿರುವ ಮನೆಯ ಮೇಲೆ ವಾಯುಪಡೆ ದಾಳಿಯಿಂದ ಒಂದೇ ಕುಟುಂಬದ ಮೂವರು ಸದಸ್ಯರು ಗಾಯಗೊಂಡರು, ಇದರಿಂದಾಗಿ ಕಟ್ಟಡ ಮತ್ತು ಒಂದು ಕಾರು ಸುಟ್ಟುಹೋಯಿತು. ಇಂದು ಬೆಳಗ್ಗೆ…
ಚಂಡೀಗಢ: ಪಾಕಿಸ್ತಾನವು ಶುಕ್ರವಾರ ರಾತ್ರಿ ಪಂಜಾಬ್ ನ ಗಡಿ ಜಿಲ್ಲೆಗಳಿಗೆ ಡ್ರೋನ್ ದಾಳಿ ನಡೆಸಿದ್ದು, ಪರಿಣಾಮವಾಗಿ ಫಿರೋಜ್ಪುರದ ಹಳ್ಳಿಯೊಂದರಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಗಾಯಗೊಂಡಿದ್ದಾರೆ. “ಫಿರೋಜ್ ಪುರದಲ್ಲಿ ಭಾರೀ ಡ್ರೋನ್ ದಾಳಿ ನಡೆದಿದ್ದು, ಡ್ರೋನ್ ಅನ್ನು ನಿಷ್ಕ್ರಿಯಗೊಳಿಸಲಾಗಿದೆ. ಅದು ಫಿರೋಜ್ ಪುರ ಬಳಿಯ ಖೈ ಫೆಮೆ ಕೆ ಗ್ರಾಮದಲ್ಲಿರುವ ಮನೆ ಮೇಲೆ ಬೆಂಕಿಯ ಉಂಡೆಯಾಗಿ ಬಿದ್ದಿದೆ. ಒಂದೇ ಕುಟುಂಬದ ಮೂವರು ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ ಸಮಯದಲ್ಲಿ ಆ ಮಹಿಳೆ ಅಡುಗೆ ಮಾಡುತ್ತಿದ್ದಳು ಮತ್ತು ಅವರಿಗೆ ಹೆಚ್ಚಿನ ಸುಟ್ಟ ಗಾಯಗಳಾಗಿವೆ. ಅಲ್ಲದೆ ಆಕೆಯ ಪತಿ ಮತ್ತು ಮಗನಿಗೂ ಕೂಡ ಸುಟ್ಟು ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗ್ರಾಮವು ಸೇನಾ ಕಂಟೋನ್ಮೆಂಟ್ ಗೆ ಹತ್ತಿರದಲ್ಲಿದೆ ಮತ್ತು ಡ್ರೋನ್ ದಾಳಿಯು ಬಹುಶಃ ಅಲ್ಲಿನ ಸೇನಾ ನೆಲೆಯನ್ನು ಹೊಡೆಯುವ ಟಾರ್ಗೆಟ್ ಹೊಂದಿರಬಹುದು. ಆದರೆ ಅದು ತಪ್ಪಿ ಗ್ರಾಮದಲ್ಲಿ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮೊದಲು, ಪಾಕಿಸ್ತಾನ ಸೇನೆಯು ಶುಕ್ರವಾರ ಸಂಜೆ ಈ…
ಬೆಂಗಳೂರು ಆಪರೇಷನ್ ಸಿಂಧೂರ ನಡೆಸಿದ ಭಾರತೀಯ ಸಶಸ್ತ್ರ ಪಡೆಗಳಿಗೆ ಬೆಂಬಲ ಸೂಚಿಸಲು ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ‘ಜೈ ಹಿಂದ್ ತಿರಂಗಾ ಯಾತ್ರೆ’ಯನ್ನು ಆಯೋಜಿಸಿತ್ತು. ‘ಜೈ ಹಿಂದ್–ಜೈ ಭಾರತ್–ಜೈ ತಿರಂಗಾ’, ‘ಭಾರತ ಜಿಂದಾಬಾದ್’, ‘ಭಾರತ ಮಾತಾ ಕಿ ಜೈ’ ಮತ್ತು ‘ನಮ್ಮ ಸೈನಿಕರು ನಮ್ಮ ಹೆಮ್ಮೆ’ ಎಂಬ ಘೋಷಣೆಗಳ ನಡುವೆ ಭಾರತೀಯ ತ್ರಿವರ್ಣ ಧ್ವಜವನ್ನು ಹಾರಾಡಿಸಲಾಯಿತು. ಕೆಆರ್ ವೃತ್ತದಿಂದ ಪ್ರಾರಂಭವಾಗಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಹಲವಾರು ಹಿರಿಯ ಸಚಿವರು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ರಾಜ್ಯದಲ್ಲಿ 8 ರಿಂದ 10ಮಂದಿ ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ದೇಶದಲ್ಲಿ ಸುಮಾರು 800 ಮಂದಿಯನ್ನು ಕಳುಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಲ್ಲಿ ಮಾತನಾಡಿದ ಅವರು, ಲಾಂಗ್ ಟರ್ಮ್ ವೀಸಾ ಹಾಗೂ ಡಿಪ್ಲೋಮೆಟಿಕ್ ವೀಸಾ ಪಡೆದವರು ಭಾರತದಿಂದ ವಾಪಸ್ ಪಾಕಿಸ್ತಾನಕ್ಕೆ ಹೋಗುವಂತಹ ತೀರ್ಮಾನದಿಂದ ರಿಲ್ಯಾಕ್ಸ್ ಮಾಡಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
12 ವರ್ಷಗಳಿಂದ ಪ್ರೀತಿಸಿದ ಹುಡುಗನನ್ನು ಇಂದು ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ವಿವಾಹವಾಗಿದ್ದಾರೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಚೈತ್ರಾ ಕುಂದಾಪುರ ತಾವು ಪ್ರೀತಿಸಿದ ಯುವಕ ಶ್ರೀಕಾಂತ್ ಕಶ್ಯಪ್ ಜೊತೆಗೆ ವಿವಾಹ ಬಂಧನಕ್ಕೆ ಜಾರಿದ್ದಾರೆ. ಚೈತ್ರಾ ಕುಂದಾಪುರ ಮದುವೆಗೆ ಆಗಮಿಸಿದ್ದ ಬಿಗ್ ಬಾಸ್ʼ ಸ್ಪರ್ಧಿ ರಜತ್ ಬುಜ್ಜಿ ಅಣ್ಣನ ಸ್ಥಾನದಲ್ಲಿ ನಿಂತು ಮದುವೆ ಶಾಸ್ತ್ರಗಳನ್ನು ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ತುಂಬಾ ಖುಷಿಯಾಗುತ್ತಿದೆ. ನಾನು ಸಾಮಾನ್ಯವಾಗಿ ಯಾವ ಹುಡುಗಿಯರಿಗೂ ಹೋಗಲೇ ಬಾರಲೇ ಅಂತ ಕರೆದಿಲ್ಲ. ಆದರೆ ಚೈತ್ರಾ ಮತ್ತು ನನ್ನ ಮಧ್ಯೆ ಅಣ್ಣ–ತಂಗಿ ಭಾಂದವ್ಯ ಬೆಳೆದು ಬಿಟ್ಟಿದೆ. ನಾವಿಬ್ಬರೂ ʻಬಿಗ್ ಬಾಸ್ʼನಿಂದಲೂ ಜಗಳವಾಡುತ್ತಲೇ ಬಂದಿದ್ದೇವೆ. ಅದು ಯಾವ ಋಣಾನುಬಂಧವೋ ಗೊತ್ತಿಲ್ಲ ಎಂದರು. ಫೋನ್ ಮಾಡಿ ಅಣ್ಣನ ಸ್ಥಾನದಲ್ಲಿ ನಿಂತು ನನ್ನ ಮದುವೆ ಮಾಡಿಕೊಡಿ ಎಂದಿದ್ದರು ತುಂಬಾನೇ ಖುಷಿಯಾಯ್ತು. ಅಣ್ಣನ ಜಾಗದಲ್ಲಿ ನಿಂತು ನಾನು ಕಾರ್ಯವನ್ನು ಮಾಡಿದ್ದು ನನಗೆ ಹೆಮ್ಮೆಯಾಯ್ತು. ಇನ್ನೊಂದು ಏನೆಂದರೆ ಫೈರ್‌ಬ್ರ್ಯಾಂಡ್ ಕಾಲಿಗೆ ಬಿತ್ತಲ್ವಾ ಅದೇ ಮಜಾ ಎಂದು…
ತುಮಕೂರು: ಒಳಮೀಸಲಾತಿ ಕಲ್ಪಿಸುವುದಕ್ಕಾಗಿ ರಾಜ್ಯದಲ್ಲಿ ನಡೆದಿರುವ ಸಮೀಕ್ಷೆಯಲ್ಲಿ ಮನೆಗೆ ಬರುವ ಸಮೀಕ್ಷೆ ಅಧಿಕಾರಿಗಳಿಗೆ ಜಿಲ್ಲೆಯ ಲಂಬಾಣಿ ಸಮುದಾಯದವರು ತಪ್ಪದೇ ಬಂಜಾರ (ಲಂಬಾಣಿ) ಎಂದು ನಮೂದಿಸಬೇಕು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಎನ್.ಜಯದೇವನಾಯ್ಕ ಮನವಿ ಮಾಡಿದರು. ಬಂಜಾರ ಭವನದಲ್ಲಿ ಗುರುವಾರ ನಡೆದ ಮುಖಂಡರ ಸಭೆಯಲ್ಲಿ ಸೇವಾಲಾಲ್ ಹಾಗೂ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಬಂಜಾರ ಸಮುದಾಯದವರು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದಾರೆ. ನಮಗೆ ನಿರ್ದಿಷ್ಟ ಕುಲಕಸುಬು ಇಲ್ಲ, ಕೂಲಿನಾಲಿ ನಂಬಿ ಬದುಕುತ್ತಿರುವವರು. ಈ ಪರಿಸ್ಥಿತಿಯಲ್ಲಿ ಸರ್ಕಾರದ ಮೀಸಲಾತಿ ಸೌಲಭ್ಯ ಪಡೆಯಲು ಸಮುದಾಯದವರು ತಮ್ಮದೇ ಸಮೀಕ್ಷೆಯಲ್ಲಿ ಭಾಗವಹಿಸಿ ನಿಖರವಾದ ಮಾಹಿತಿಯನ್ನು ನೋಂದಾಯಿಸುವಂತೆ ಕೋರಿದರು. ಹಿರಿಯ ನ್ಯಾಯವಾದಿ ಅನಂತ ನಾಯ್ಕ ಮಾತನಾಡಿ, ಈ ತಿಂಗಳ 5ರಿಂದ 17ರವರೆಗೆ ಮನೆಮನೆಗೆ ಬಂದು ಸಮೀಕ್ಷೆ ನಡೆಸಲಾಗುತ್ತದೆ. ಇದಕ್ಕಾಗಿ ಸುಮಾರು 58 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರಲ್ಲಿ ಶೇಕಡ 50 ರಷ್ಟು ಮಂದಿ ಇನ್ನೂ ಕೆಲಸ ಆರಂಭಿಸಿಲ್ಲ ಎಂದು ತಿಳಿದು ಬಂದಿದೆ. ಜೊತೆಗೆ…
ತುಮಕೂರು: ಜಿಲ್ಲೆಯಲ್ಲಿ 265 ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿದ್ದು, ಎಲ್ಲ ಅಂಗನವಾಡಿ ಕೇಂದ್ರಗಳಿಗೂ ಕಡ್ಡಾಯವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಅವರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯ ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಉರ್ದು ಭಾಷೆ ಬಲ್ಲ ಕಾರ್ಯಕರ್ತೆಯರನ್ನು ನೇಮಕ ಮಾಡಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಸಮುದಾಯದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಬೇಕು. 1ನೇ ತರಗತಿಗೆ ದಾಖಲಾದ ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣ ಮುಂದುವರೆಸಿ 10ನೇ ತರಗತಿವರೆಗೂ ವ್ಯಾಸಂಗ ಮಾಡುತ್ತಿರುವ ಬಗ್ಗೆ ನಿಗಾವಹಿಸಬೇಕು ಎಂದು ಡಿಡಿಪಿಐಗಳಾದ ಮನಮೋಹನ ಹಾಗೂ ಗಿರಿಜಮ್ಮ ಅವರಿಗೆ ನಿರ್ದೇಶನ ನೀಡಿದರು. ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 4…
ತುಮಕೂರು: ಜಿಲ್ಲೆಯಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳಲ್ಲಿ 400 ರಿಂದ 500 ಜನ ರೈತರನ್ನು ಗುರುತಿಸಿ ಅವರಿಗೆ ವೈಯಕ್ತಿಕ ಕಾಮಗಾರಿಗಳನ್ನು ನೀಡುವ ಮೂಲಕ ಪ್ರಸಕ್ತ ಆರ್ಥಿಕ ವರ್ಷದಲ್ಲಿ 1 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಗುರಿಯನ್ನು ತಲುಪಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ತಾಂತ್ರಿಕ ಸಿಬ್ಬಂದಿಗಳೊಂದಿಗೆ ನರೇಗಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ವರ್ಷ ಮಾನವ ದಿನಗಳ ಸೃಜನೆಯಲ್ಲಿ ಜಿಲ್ಲೆಯು ಮೊದಲ ಸ್ಥಾನ ಪಡೆದಿದೆ. ಈ ವರ್ಷವೂ ಮೊದಲ ಸ್ಥಾನವನ್ನು ಯಥಾರೀತಿ ಕಾಪಾಡಿಕೊಳ್ಳಬೇಕು ಎಂದು ನಿರ್ದೇಶಿಸಿದರು. ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿಗಳನ್ನು ಪ್ರಾರಂಭಿಸಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಬೇಕು. ರೈತರು ತಮ್ಮ ಜಮೀನುಗಳಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ…
ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಮೇ 19 ರಿಂದ 30 ದಿನಗಳ ಉಚಿತ ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಗ್ರಾಮೀಣ ನಿರುದ್ಯೋಗಿ ಯುವಕರು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9380162042, 9380220884, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ: ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಪದವಿ ಪೂರ್ವ ಕಾಲೇಜು, ಉನ್ನತೀಕರಣಗೊಂಡ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು/ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿ.ಯು.ಸಿ. ತರಗತಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಈ ಪೈಕಿ ವಿಕಲಚೇತರಿಗೆ ಶೇ.4ರಷ್ಟು ಪ್ರವೇಶ ಮೀಸಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿದ್ದು, ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು. ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರಬೇಕು. ಆಸಕ್ತ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಮೊರಾರ್ಜಿ…