Author: admin

ಬೆಂಗಳೂರು : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪಿಎಫ್‌ಐ ಬ್ಯಾನ್‌ಗೆ ವಿರೋಧವಿಲ್ಲ, ಆರ್ ಎಸ್ ಎಸ್ ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನಿನ ವಿರುದ್ಧ ಇರುವವರ ಮೇಲೆ ಕ್ರಮ ತೆಗೆದುಕೊಂಡರೆ ನಮ್ಮ ವಿರೋಧ ಇಲ್ಲ. ಆರ್‌ಎಸ್‌ಎಸ್‌ ನಿಷೇಧಕ್ಕೂ ಸರ್ಕಾರ ಮುಂದಾಗಲಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ದವೂ ಕ್ರಮ ಕೈಗೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನೋಡಿರದ ಗ್ರಾಮೀಣ ಜನತೆಗೆ ದಸರಾ ವೀಕ್ಷಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹಮ್ಮಿಕೊಂಡಿರುವ “ದಸರಾ ದರ್ಶನ” ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ಬಾವುಟ ತೋರುವ ಮೂಲಕ ಚಾಲನೆ ನೀಡಿದರು. ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಎದರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಮೈಸೂರು ಜಿಲ್ಲೆಯ 9 ತಾಲ್ಲೂಕಿನ ಮಹಿಳೆಯರು, ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಗ್ರಾಮೀಣ ಜನತೆಯನ್ನು ಕರೆತಂದು ದಸರಾವನ್ನು ದರ್ಶನ ಮಾಡಿಸುತ್ತಿರುವುದು ನಿಜಕ್ಕೂ ಉತ್ತಮ ಕಾರ್ಯ ಎಂದು ಹೇಳಿದರು. ಇಂದಿನಿಂದ 3 ದಿನಗಳ ಕಾಲ ನಿಗಮದ 81 ವಾಹನಗಳಲ್ಲಿ ಸುಮಾರು 4455 ಜನತೆಯನ್ನು ಕರೆತಂದು ಅರಮನೆ, ಮೃಗಾಲಯ, ಜೆ.ಕೆ.ಗ್ರೌಂಡ್ಸ್ ನಲ್ಲಿ ನಡೆಯುವ ಮಹಿಳಾ ಮತ್ತು ಮಕ್ಕಳ ದಸರಾ ವೀಕ್ಷಿಸಲು ಮತ್ತು ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನವನ್ನು ಪಡೆಯಲು…

Read More

ಮೈಸೂರು ದಸರಾ 2022ರ ನಾಡ ಹಬ್ಬದ ವೀಕ್ಷಣೆಗಾಗಿ ವಿದೇಶಿ-ದೇಶಿ ಪ್ರವಾಸಿಗರು/ಸಾರ್ವಜನಿಕರ ಅನುಕೂಲಕ್ಕಾಗಿ “ಗೋಲ್ಡ್ ಕಾರ್ಡ್ ಸೌಲಭ್ಯವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಇದರಿಂದ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. “ಗೋಲ್ಡ್ ಕಾರ್ಡ್” ಖರೀದಿಯನ್ನು ಆನ್ ಲೈನ್ ಮುಖಾಂತರ ಮಾಡಬಹುದಾಗಿದೆ. ಇದರ ಬೆಲೆ ರೂ.4,999/- ಮಾಡಲಾಗಿದೆ. ಗೋಲ್ಡ್ ಕಾರ್ಡ್ ಲಭ್ಯತೆ ಅನುಗುಣವಾಗಿ ಆನ್ ಲೈನ್ ಮೂಲಕ www.mysoredasara.gov.in ವೆಬ್‌ ಸೈಟ್‌ನಲ್ಲಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಬಾರಿಗೆ ಗರಿಷ್ಟ ಎರಡು “ಗೋಲ್ಡ್ ಕಾರ್ಡ್” ಖರೀದಿಸಬಹುದಾಗಿದೆ. ಒಮ್ಮೆ ಆನ್‌ ಲೈನ್ ಪಾವತಿ ದೃಢೀಕರಿಸಿದ ನಂತರ ಪ್ರವಾಸಿಗರು “ಗೋಲ್ಡ್ ಕಾರ್ಡ್” ಅನ್ನು ದಿನಾಂಕ: 29-09-2022 ಕೆಎಸ್‌ಡಿಟಿಸಿ (ಪ್ರವಾಸೋದ್ಯಮ ಇಲಾಖೆ) ಮಯೂರ ಹೋಟೆಲ್ ಹತ್ತಿರ ಮೈಸೂರು ಇಲ್ಲಿ ಬೆಳಿಗ್ಗೆ 11.00 ರಿಂದ ಸಂಜೆ 5.30 ರವರೆಗೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಗೋಲ್ಡ್ ಕಾರ್ಡ್ ಪಡೆದುಕೊಳ್ಳುವಾಗ ಪಾವತಿ, ನಂತರ ಸ್ವೀಕೃತವಾಗುವ ಇಮೇಲ್ ಪ್ರತಿ ಹಾಗೂ ಯಾವುದಾದರೂ ಒಂದು ಐಡಿ ಪ್ರೂಫ್ ಅನ್ನು ಹಾಜರುಪಡಿಸುವುದು ಕಡ್ಡಾಯವಾಗಿರುತ್ತದೆ. ಗೋಲ್ಡ್ ಕಾರ್ಡ್ ವಿಶೇಷತೆಗಳು ಹೀಗಿವೆ ನೋಡಿ.…

Read More

ವಿಜಯನಗರ: ಗಂಡನೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನ ಬ್ಯಾಸಿಗಿದೇರಿ ಗ್ರಾಮದಲ್ಲಿ ನಡೆದಿದೆ. ದೀಪಾ (22) ಕೊಲೆಯಾದವರು. ಬ್ಯಾಸಿಗಿದೇರಿ ಗ್ರಾಮದ ನಿವಾಸಿ ರವಿ (27) ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಕಳೆದ 10 ತಿಂಗಳ ಹಿಂದೆ ವಿವಾಹವಾಗಿದ್ದ ಈ ದಂಪತಿ ನಡುವೆ ಆಗಾಗ ಮನಸ್ತಾಪ ಉಂಟಾಗುತಿತ್ತು. ಪತ್ನಿ ತಮ್ಮ ಸಂಬಂಧಿಯೊಬ್ಬನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಪತಿ ಪತ್ನಿ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ. ಮಧ್ಯಾಹ್ನ ಜಗಳ ತಾರಕಕ್ಕೇರಿದ ಪರಿಣಾಮ, ಪತ್ನಿಯ ಕತ್ತು ಹಿಸುಕಿ ಪತಿಯೇ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ನಂತರ ತನ್ನ ಬೈಕ್‌ನಲ್ಲಿ ಮೃತದೇಹವನ್ನು ನಂದಿಪುರದ ಸಂಬಂಧಿಗಳ ಮನೆ ಮುಂದೆ ಇಟ್ಟು ಬಂದಿದ್ದಾನೆ. ಆರೋಪಿ ರವಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ಅಬಕಾರಿ ಇಲಾಖೆಯಿಂದ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಮಧ್ಯ ಬಿಯರ್ ಸೇಂದಿಯನ್ನು ಹಾಗೂ  ಮುಂತಾದ ವಸ್ತುಗಳನ್ನು ಪಟ್ಟಣದ ಹೊರವಲಯದಲ್ಲಿರುವ ಪುರಸಭಾ ಕಸ ವಿಲೇವಾರಿ ಘಟಕದಲ್ಲಿ ನಾಶಪಡಿಸಲಾಯಿತು. ಈ ವೇಳೆ ಅಬಕಾರಿ ನಿರೀಕ್ಷರಾದ  ರಾಮಮೂರ್ತಿ ಮಾಧ್ಯಮದೊಂದಿಗೆ ಮಾತನಾಡಿ, ಒಟ್ಟು 32 ಪ್ರಕರಣಗಳಲ್ಲಿ 638 ಲೀಟರ್ ಮಧ್ಯ, 78 ಲೀಟರ್ ಬಿಯರ್, 123 ಲೀಟರ್ ಸೇಂದಿ ಹಾಗೂ ಒಂದು ಪ್ಲಾಸ್ಟಿಕ್ ಡ್ರಮ್ ಅನ್ನು  ವಶಪಡಿಸಲಾಗಿತ್ತು. ಮರುಬಳಕೆಗೆ  ಅವಕಾಶ ಇಲ್ಲದಿರುವುದರಿಂದ ಅಬಕಾರಿ ಉಪಆಯುಕ್ತರ ಆದೇಶದ ಮೇರೆಗೆ ಇಂದು ಪಟ್ಟಣದ ಹೊರವಲಯದಲ್ಲಿರುವ ಪುರಸಭೆ ಕಸವಿಲೇವಾರಿ ಘಟಕದಲ್ಲಿ ನಾಶ ಪಡಿಸಿದ್ದೇವೆ ಎಂದು ತಿಳಿಸಿದರು. ಈ ವೇಳೆ ಕೆ.ಎಸ್. ಬಿ.ಸಿ.ಎಲ್ ಡಿಪೋ ಮ್ಯಾನೇಜರ್ ವೀರಾರೆಡ್ಡಿ,  ಅಬಕಾರಿ ಉಪನಿರೀಕ್ಷಕರ ಸುರೇಶ ಆರ್,  ಗ್ರೇಟ್-2 ತಾಸಿಲ್ದಾರ್ ತಿಪ್ಪೇಸ್ವಾಮಿ,  ಇನ್ಸ್’ಪೆಕ್ಟರ್ ನಾಗರಾಜು, ಹಾಗೂ ಅಬಕಾರಿ ಸಿಬ್ಬಂದಿ ಹಾಜರಿದ್ದರು. ವರದಿ: ಅಬಿದ್ ಮಧುಗಿರಿ  ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಹೆಚ್. ಡಿ.ಕೋಟೆ ತಾಲ್ಲೂಕಿನಲ್ಲಿ ಗ್ರಾಮೀಣ ದಸರಾ ಪ್ರಯುಕ್ತ ಕೆಸರುಗದ್ದೆ ಓಟ ಆಯೋಜನೆ ಮಾಡಲಾಗಿತ್ತು. ಕೆಸರು ಗದ್ದೆ ಓಟದ ಉಸ್ತುವಾರಿ ವಹಿಸಿದ್ದ  ಕೃಷಿ ಅಧಿಕಾರಿ ರಂಗಸ್ವಾಮಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಕೆಸರು ಗದ್ದೆ ಓಟದಲ್ಲಿ ಹಲವಾರು ಉತ್ಸಾಹಿ ರೈತರು ಮತ್ತು ರೈತ ಮಹಿಳೆಯರು ಭಾಗವಹಿಸಿ ತಮ್ಮ ಕ್ರೀಡಾ ಆಸಕ್ತಿಯನ್ನು ಪ್ರದರ್ಶನ ಗೊಳಿಸಿದ್ದಾರೆ. ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಒದಗಿಸಿ ಕೊಟ್ಟಿರುವುದು ಸಂತೋಷವನ್ನುಂಟು ಮಾಡಿದೆ ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಕೆಸರು ಗದ್ದೆ ಓಟದ ಸ್ಪರ್ದೆಯಲ್ಲಿ  ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.  ತಾಲ್ಲೂಕು ಆಡಳಿತ ಆಯೋಜನೆ ಮಾಡಿದ್ದ ಎಲ್ಲಾ ಕ್ರೀಡಾಕೂಟಗಳಿಗಿಂತ, ವಿಭಿನ್ನವಾಗಿ ಕೃಷಿ ಅಧಿಕಾರಿ ರಂಗಸ್ವಾಮಿ ಕೆಸರುಗದ್ದೆ ಓಟವನ್ನು ಆಯೋಜನೆ ಮಾಡಿರುವುದು ವಿಶೇಷವಾಗಿ ಗಮನ ಸೆಳೆಯಿತು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುರುವೇಕೆರೆ: ತಾಲೂಕಿನಲ್ಲಿರುವ ಪ್ರವಾಸಿ ಮಂದಿರಕ್ಕೆ ಇಂದು ಲೋಕಾಯುಕ್ತ ಇನ್ಸ್’ಪೆಕ್ಟರ್ ರಾಮರೆಡ್ಡಿ ಹಾಗೂ ತಂಡ ಭೇಟಿ ನೀಡಿ, ಸಾರ್ವಜನಿಕರ ಅಹವಾಲು, ರೈತರ ವಿವಿಧ ಬೇಡಿಕೆಗಳನ್ನು ಆಲಿಸಿದರು. ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಲೋಕಾಯುಕ್ತರ ಬರುವಿಕೆಗಾಗಿ ತಾಲೂಕಿನ ಸರ್ಕಾರಿ ಅಧಿಕಾರಿಗಳು ಕಾಯುತ್ತಿದ್ದರು. ಸಭಾಂಗಣದ ಒಳಗಡೆ ಲೋಕಾಯುಕ್ತರು  ಪ್ರವೇಶಿಸಿದ ತಕ್ಷಣವೇ,  “ನಾವು ಯಾವುದೇ ತರಹದ ಸರ್ಕಾರಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಲು ಬಂದಿಲ್ಲ ನಮ್ಮ ಭೇಟಿ ಏನಿದ್ದರೂ ರೈತರು ಸಾರ್ವಜನಿಕರ ಮತ್ತು ಪತ್ರಕರ್ತರು ಜೊತೆಗೆ ಮಾತ್ರ” ಎಂದು ಹೇಳಿದರಲ್ಲದೇ, ಸಭಾಂಗಣದಲ್ಲಿದ್ದ ತಾಲೂಕಿನ ಸರ್ಕಾರಿ ಮೇಲಾಧಿಕಾರಿಗಳನ್ನು  ತಮ್ಮ ತಮ್ಮ ಜವಾಬ್ದಾರಿಯುತ ಕೆಲಸಗಳಿಗೆ ಮರಳಲು ಸೂಚಿಸಿದರು. ತದ ನಂತರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಅವರು,  ಸುಮಾರು ನಾಲ್ಕು ಗಂಟೆಗಳ ಕಾಲ ಸಾರ್ವಜನಿಕರ, ರೈತರ ವಿವಿಧ ಸಮಸ್ಯೆಗಳನ್ನು ಆಲಿಸಿದರು.  ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಇನ್ನೂ ಮುಂದೆ ಯಾವುದೇ ತರಹದ ಅಕ್ರಮಗಳಾಗಲಿ, ಅಧಿಕಾರಿಗಳ ಬೇಜವಾಬ್ದಾರಿಯಗಲಿ, ರೈತರನ್ನು ಪದೇಪದೇ ವಿನಾಕಾರಣ ಅಲೆಸಿ ತೊಂದರೆ ಕೊಡುವುದು, ಸರಿಯಾದ ಸಮಯಕ್ಕೆ ಸರ್ಕಾರಿ ಅಧಿಕಾರಿಗಳು ಬಾರದೇ ಇರುವುದು,…

Read More

ಮಧುಗಿರಿ: ತಾಲೂಕು ಕಸಬಾ ಹೋಬಳಿ ಸಿದ್ದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮುಂಭಾಗದಲ್ಲಿ ಪಂಚಾಯತಿ ವತಿಯಿಂದ ಕಸದ ತೊಟ್ಟಿಯನ್ನು ಇಟ್ಟಿದ್ದು, ಇದರಿಂದ ಶಾಲೆಯ ಸ್ವಚ್ಛ ಆವರಣಕ್ಕೆ ಧಕ್ಕೆಯಾಗುತ್ತಿರುವ ಕುರಿತು ನಮ್ಮತುಮಕೂರು ಮಾಧ್ಯಮ  ಸವಿವರವಾದ ವರದಿಯನ್ನು ಮಾಡಿತ್ತು. ಇದೀಗ ಗ್ರಾಮ  ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮಕೈಗೊಂಡಿದ್ದಾರೆ. ಇದೀಗ ಶಾಲೆಯ ಮುಂಭಾಗದಲ್ಲೇ ಇದ್ದ ಕಸದ ತೊಟ್ಟಿಯನ್ನು ತೆರವುಗೊಳಿಸಲಾಗಿದ್ದು, ಜೊತೆಗೆ ಶಾಲಾ ಮಕ್ಕಳಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದ ತುಕ್ಕು ಹಿಡಿದ ಪೈಪ್ ಲೈನ್ ನ್ನು ಕೂಡ ತೆರವುಗೊಳಿಸುವ ಮೂಲಕ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮಕೈಗೊಳ್ಳಲಾಗಿದೆ. ಹಲವು ಸಮಯಗಳಿಂದ ಬಗೆ ಹರಿಯದೇ ಉಳಿಸಿದ್ದ ಸಮಸ್ಯೆ ನಮ್ಮ ತುಮಕೂರು ವರದಿಯಿಂದ ಕೆಲವೇ ದಿನಗಳಲ್ಲಿ ಬಗೆ ಹರಿದಿದ್ದು, ನಮ್ಮತುಮಕೂರು ಮಾಧ್ಯಮದ ವರದಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಸಮಸ್ಯೆ ಬಗೆ ಹರಿದ ಹಿನ್ನೆಲೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕ, ಹಾಗೂ ಸಹಶಿಕ್ಷರು  ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರಿಗೆ ಅಭಿನಂದನೆಗಳು ತಿಳಿಸಿ ಮುಂದಿನ…

Read More

ಗುಬ್ಬಿ: ವಾಲ್ಮೀಕಿ ಜನಾಂಗದ ಮೀಸಲಾತಿಗಾಗಿ ಮಹಾಸ್ವಾಮಿಗಳು ಹೋರಾಡುತ್ತಿದ್ದು, ಇಂದಿಗೆ 231 ದಿನಗಳ ಕಳೆದರೂ ಈವರೆಗೆ ಸರ್ಕಾರ ಮೀಸಲಾತಿ ಹೆಚ್ಚಿಸದೇ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ವಾಲ್ಮೀಕಿ ಸಮುದಾಯದ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಸ್ ಸಿ, ಎಸ್ ಟಿ ಸಮುದಾಯಗಳು ಮತ್ತು ತಳ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ, ಗುಬ್ಬಿ ಪಟ್ಟಣದ ತಾಲೂಕು ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದ ಮುಖಂಡರು, ಸರ್ಕಾರದ ನಿರ್ಲಕ್ಷ್ಯದ ಧೋರಣೆಯನ್ನು ಖಂಡಿಸಿದರು. ಸ್ವಾಮೀಜಿಗಳು ಆಹೋ ರಾತ್ರಿ ಧರಣಿ ಮಾಡುತ್ತಿದ್ದರೂ, ಸರ್ಕಾರ ಸೌಜನ್ಯಕ್ಕಾದರೂ ಅವರನ್ನು ಭೇಟಿ ಮಾಡುವ ಕೆಲಸ ಮಾಡಿಲ್ಲ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವರದಿ: ಮಂಜುನಾಥ್ ಗುಬ್ಬಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್‌ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ-ಶಿರಗಾಂವ ರಸ್ತೆಯಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ್ (21) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತ ದುರ್ದೈವಿಗಳು. ಇವರಿಬ್ಬರೂ ಶಿರಗಾಂವ ಗ್ರಾಮಕ್ಕೆ ತೆರಳುತ್ತಿದ್ದರು. ಬೈಕ್‍ನಲ್ಲಿ ವೇಗವಾಗಿ ಹೋಗುತ್ತಿದ್ದ ವೇಳೆ ರಸ್ತೆ ಬದಿ ಟ್ರ್ಯಾಕ್ಟರ್ ನಿಲ್ಲಿಸಿರುವುದನ್ನು ಗಮನಿಸದೇ ಡಿಕ್ಕಿ ಹೊಡೆದಿದ್ದಾರೆ. ಇಬ್ಬರ ತಲೆಗೂ ಗಂಭೀರವಾಗಿ ಪೆಟ್ಟು ಬಿದ್ದಿತ್ತು. ಕೂಡಲೇ ಸ್ಥಳೀಯರು ಆಂಬುಲೆನ್ಸ್‌ ಕರೆಸಿ ಆಸ್ಪತ್ರೆಗೆ ರವಾನಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವನ್ನಪ್ಪಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More