Author: admin

ಬೆಳಗಾವಿ : ತಾಲೂಕಿನ ಸಂತಿ ಬಸ್ತವಾಡ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದೇಮಣ್ಣ ನಾಯ್ಕ ಜಯ ಗಳಿಸಿದ್ದಾರೆ. ಮಂಗಳವಾರ ಅಧ್ಯಕ್ಷ ಸ್ಥಾನಕ್ಕೆ ನಡೆದ ತುರುಸಿನ ಸ್ಪರ್ಧೆಯಲ್ಲಿ ಒಟ್ಟು 15 ಮತಗಳ ಪೈಕಿ ದೇಮಣ್ಣ ನಾಯ್ಕ 8 ಮತ ಗಳಿಸಿ ಜಯ ಸಾಧಿಸಿದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಭರಮ ಗುದುಮ್ಕೇರಿ ಅವರು 7 ಮತ ಗಳಿಸಿ ಸೋಲನುಭವಿಸಿದರು. ಅಧ್ಯಕ್ಷ ಸ್ಥಾನಕ್ಕೇರಿದ ಕಾಂಗ್ರೆಸ್ ಅಭ್ಯರ್ಥಿ ದೇಮಣ್ಣ ನಾಯ್ಕ ಹಾಗೂ ಆಯ್ಕೆಯಾಗಲು ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ ಸಲ್ಲಿಸಿದ್ದಾರೆ. ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ: ಮುಧೋಳ ನಗರದಲ್ಲಿ ಏರ್ಪಡಿಸಲಾಗಿದ್ದ ವಿಧಾನ್​ ಪರಿಷತ್ ಸದಸ್ಯ, ಆರ್​ ಬಿ ತಿಮ್ಮಾಪುರ ಜನ್ಮದಿನೋತ್ಸವ ಕಾರ್ಯಕ್ರಮದ ವೇದಿಕೆ ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಗ್ಗರಿಸಿ ಬಿದ್ದಿದ್ದಾರೆ. ಸಿದ್ದರಾಮಯ್ಯ ಆಸನದ ಮೇಲೆ ಕೂರೋದಕ್ಕೆ ಬರುವ ವೇಳೆ ಎಡವಿ ಮುಗ್ಗಿರಿಸಿ ಟಿಪಾಯ್ ಮೇಲೆ ಬಿದ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಿದ್ದರಾಮಯ್ಯ ಆಪ್ತರು ಮೇಲೆಬ್ಬಿಸಿದ್ದಾರೆ. ಮಾಜಿ ಕೇಂದ್ರ ಸಚಿವ ದಿವಂಗತ ಸಿದ್ದು ನ್ಯಾಮಗೌಡ ಪುತ್ಥಳಿ ಅನಾವರಣ ಹಾಗೂ ಮಾಜಿ ಸಚಿವ ತಿಮ್ಮಾಪುರ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಗೆ ಆಗಮಿಸಿದ್ದರು. ಹೀಗಾಗಿ ಸಚಿವ ಮುರಗೇಶ್ ನಿರಾಣಿ, ಸಹೋದರ ಸಂಗಮೇಶ್ ನಿರಾಣಿ ಸಿದ್ದರಾಮಯ್ಯ ಅವರನ್ನು ಮನೆಗೆ ಆಹ್ವಾನಿಸಿದರು. ಮನೆಗೆ ತೆರಳಿ ಮನೆಯಲ್ಲಿ ಕಾಫೀ ಸೇವಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ  : ಶಾಲೆ ಮುಗಿದ ನಂತರ ಆಟೋದಲ್ಲಿ ಹಿಂದಿರುಗುತ್ತಿದ್ದ ವೇಳೆ ಆಟೋದಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಲಿಂಗೇನಹಳ್ಳಿ ಸಮೀಪ ಮಂಗಳವಾರ ಸಂಜೆ ನಡೆದಿದೆ. ಪಟ್ಟಣದ ವಿವೇಕಾನಂದ ವಿದ್ಯಾಮಂದಿರ ಶಾಲೆಯ ಮೂರನೇ ತರಗತಿಯ 9 ವರ್ಷದ ವಿದ್ಯಾರ್ಥಿ ಕುಶಲ್ ಮೃತಪಟ್ಟ ದುರ್ದೈವಿ. ಶಾಲೆ ಮುಗಿಸಿಕೊಂಡು ಬೆಂಕಿಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದಾಗ  ಮೂಡ್ಲಪ್ಪ ಹೋಟೆಲ್ ಬಳಿ ವಿದ್ಯಾರ್ಥಿ ಆಟೋದಿಂದ  ಇಳಿಯುವುದಕ್ಕೂ ಮುಂಚೆ ಆಟೋ ಮುಂದಕ್ಕೆ ಚಲಿಸಿದ್ದು, ಈ ವೇಳೆ ವಿದ್ಯಾರ್ಥಿ ಆಯಾ ತಪ್ಪಿ ಬಿದ್ದಿದ್ದು, ಆಟೋದ ಹಿಂಬದಿ ಚಕ್ರ ವಿದ್ಯಾರ್ಥಿಯ ತಲೆ ಮೇಲೆ ಹರಿದು ಸ್ಥಳದಲ್ಲೇ  ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯ ತಾಯಿ ಸರೋಜಮ್ಮ  ಮರುವೇಕೆರೆ ಗ್ರಾಮದ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ತಂದೆ ಅಶ್ವತಪ್ಪನ  ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹವನ್ನು ತಂದಾಗ ವಿದ್ಯಾರ್ಥಿಯ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿತು. ಈ ಘಟನೆಗೆ ಸಂಬಂಧಿಸಿ  ಮಧುಗಿರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ… ವರದಿ : ಅಬಿದ್…

Read More

ರಾಮನಗರ, ಸೆಪ್ಟೆಂಬರ್‌, 27: ಫೆಬ್ರವರಿ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಆರೋಗ್ಯ ಕವಚ 108ರ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿತ್ತು. ಈ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದರು. ಆರೋಗ್ಯ ಸಚಿವರು ಹೇಳಿಕೆ ನೀಡಿ 8 ತಿಂಗಳು ಕಳೆದಿದ್ದು, ಆರೋಗ್ಯ ಕವಚ ಯೋಜನೆಯ ಉನ್ನತೀಕರಣವೂ ಆಗಿಲ್ಲ. ಕಾಲ್ ಸೆಂಟರ್ ಸರ್ವರ್‌ ಸಮಸ್ಯೆಯಿಂದಾಗಿ ತುರ್ತು ಕರೆ ಕನೆಕ್ಟ್ ಆಗದೆ ಆರೋಗ್ಯ ಕವಚ ಹೆಸರಿನ 108 ಆ್ಯಂಬುಲೆನ್ಸ್ ಸೇವೆ ನೊಂದವರಿಗೆ ಸಿಗದೆ ಅನಾರೋಗ್ಯ ಪೀಡಿತವಾಗಿದೆ. ರಾಜ್ಯ ಮಟ್ಟದಲ್ಲಿ 108 ಆ್ಯಂಬುಲೆನ್ಸ್‌ ಉಚಿತ ಕರೆಯ ಸರ್ವರ್‌ ಸಮಸ್ಯೆ ಉಂಟಾಗಿದೆ. ಇದರಿಂದ ತುರ್ತು ಕರೆ ಸಂಪರ್ಕ‌ ಸಿಗದೆ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಹಿಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲೆಯ ವ್ಯಾಪ್ತಿಯಲ್ಲಿ ದಿನದ 24 ಗಂಟೆಗಳ ಕಾಲ ತುರ್ತು ಕರೆಗಳನ್ನು ಸ್ವೀಕರಿಸಲು ಕಂಟ್ರೋಲ್‌ ರೂಂ ಸ್ಥಾಪಿಸಿದೆ. 90363 96689 ಹಾಗೂ 88800…

Read More

ಗೋವಾ ಪೊಲೀಸರು ಗೂಡ್ಸ್​ ವಾಹನಗಳು ರಾಜ್ಯಕ್ಕೆ ಪ್ರವೇಶಿಸಿದಂತೆ ಕರ್ನಾಟಕ-ಗೋವಾ ಗಡಿಯಲ್ಲಿ ತಡೆಯುತ್ತಿದ್ದಾರೆ. ಹೀಗಾಗಿ ಕರ್ನಾಟಕ-ಗೋವಾ ಗಡಿಯಲ್ಲಿ ಲಾರಿಗಳು ಸಾಲುಗಟ್ಟಿ ನಿಂತಿವೆ. ಖಾನಾಪುರ ತಾಲೂಕಿನ ಕಣಕುಂಬಿ ಗ್ರಾಮ ಮತ್ತು ಗೋವಾದ ಚೋರ್ಲಾ ಬಳಿ ಲಾರಿಗಳು ನಿಂತಿವೆ. ಚೋರ್ಲಾ ಘಾಟ್​ನಲ್ಲಿ ಗೂಡ್ಸ್​ ಲಾರಿ ಪ್ರವೇಶಕ್ಕೆ ನಿಷೇಧ ವಿಧಿಸಿದ್ದಕ್ಕೆ ಗೋವಾ ಪೊಲೀಸರ ವಿರುದ್ಧ ಲಾರಿ ಮಾಲಿಕರು ತೀರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 21ರಂದು ಅಧಿಸೂಚನೆ ಹೊರಡಿಸಿರುವ ಗೋವಾ ಉತ್ತರ ಜಿಲ್ಲಾಧಿಕಾರಿ, ಚೋರ್ಲಾ ಘಾಟ್ ಮೂಲಕ ಗೋವಾ ಪ್ರವೇಶಿಸಲು ಭಾರೀ ಲಾರಿಗಳಿಗೆ 2023ರ ಮಾರ್ಚ್ 19ರವರೆಗೆ ಸಂಚಾರ ನಿಷೇಧಿಸಿದ್ದಾರೆ. ಗೋವಾಗೆ ಸಂಪರ್ಕ ಕಲ್ಪಿಸುವ ರಾಮನಗರ ಗೋವಾ ರಸ್ತೆ ಕಳೆದ ಮೂರು ವರ್ಷಗಳಿಂದ ಬಂದ್ ಆಗಿದೆ. ಹೀಗಾಗಿ ಗೋವಾ ರಾಜ್ಯಕ್ಕೆ ಹೆಚ್ಚಿನ‌ ಪ್ರಮಾಣದಲ್ಲಿ ಚೋರ್ಲಾ ಘಾಟ್ ಮೂಲಕ ಗೂಡ್ಸ್ ವಾಹನಗಳು ತೆರಳುತ್ತವೆ. ಇದರಿಂದ ಕೇರಿ-ಬೆಳಗಾವಿ ರಾಜ್ಯ ಹೆದ್ದಾರಿ 01ರಲ್ಲಿ ಭಾರಿ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದೆ‌. ಪರಿಣಾಮ, ಉತ್ತರ ಗೋವಾ ಟ್ರಾಫಿಕ್ ಎಸ್‌ಪಿ ಮನವಿ ಮೇರೆಗೆ‌ ಉತ್ತರ ಗೋವಾದ ಡಿಸಿ…

Read More

ಶಿವಮೊಗ್ಗ : ರಾಜ್ಯಾದ್ಯಂತ ಪಿಎಫ್ ಐ ಮುಖಂಡರ ಮನೆಗಳ ಪೊಲೀಸರು ದಾಳಿ ಮಾಡಿ 70 ಕ್ಕೂಹೆಚ್ಚು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ , ಕೇಂದ್ರ ಸರ್ಕಾರ ಪಿಎಫ್ ಐ ನಿಷೇಧ ಮಾಡಲು ಮುಂದಾಗಿದೆ. ಇದನ್ನು ಕೇಂದ್ರ ಸರ್ಕಾರ ಮೊದಲೇ ಮಾಡಬೇಕಿತ್ತು. ಸಮಗ್ರ ತನಿಖೆ ಮಾಡಿದ ಮೇಲೆ ಎಸ್ ಡಿಪಿಐ,ಪಿಎಫ್‌ಐ ಸಂಘಟನೆಗಳ ಷಡ್ಯಂತ್ರ ಬಯಲಾಗಲಿದೆ ಎಂದರು. ಇನ್ನು ಪೇ ಸಿಎಂ ಕ್ಯಾಂಪನ್ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಈಗಾಗಲೇ ನಾವು ಕೇಸ್ ದಾಖಲು ಮಾಡಿದ್ದೇವೆ. ಸಿದ್ದರಾಮಯ್ಯ ವಿಪಕ್ಷ ನಾಯಕರಂತೆ ವರ್ತಿಸಲಿ,ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದಕ್ಕ ಕಾಂಗ್ರೆಸ್ ನಾಯಕರು ನಾಡಿನ ಜನತೆಗೆ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸಿಐಡಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ರಾಜ್ಯ ಸಮಗ್ರ ಶಿಕ್ಷಣ ಅಭಿಯಾನದ ನಿರ್ದೇಶಕಿ ಸೇರಿದಂತೆ ಶಿಕ್ಷಣ ಇಲಾಖೆಯ ಐವರು ಹಿರಿಯ ಅಧಿಕಾರಿಗಳು ಹಾಗೂ ಓರ್ವ ಕಂಪ್ಯೂಟರ್ ಆಪರೇಟರ್ ನನ್ನು ಬಂಧಿಸಲಾಗಿದೆ. ರಾಜ್ಯ ಸಮಗ್ರ ಶಿಕ್ಷಣ ಅಭಿಯಾನದ ನಿರ್ದೇಶಕಿ ಗೀತಾ, ಪಠ್ಯ ಪುಸ್ತಕ ವಿಭಾಗದ ನಿರ್ದೇಶಕ ಮಾದೇಗೌಡ, ನಿವೃತ್ತ ಜಂಟಿ ನಿರ್ದೇಶಕ ಬಸವರಾಜ್, ರತ್ನಯ್ಯ, ಶಿವಕುಮಾರ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ವಿಭಾಗದ ಕಚೇರಿ ಕಂಪ್ಯೂಟರ್ ಆಪರೇಟರ್ ನರಸಿಂಹರಾವ್ ಬಂಧಿಸಲಾಗಿದೆ. ಆರೋಪಿಗಳನ್ನು ಸಿಐಡಿ ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಹಿನ್ನೆಲೆ ಸಿಐಡಿ ಪೊಲೀಸರು ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಬಂಧಿತ ಐವರು ಆರೋಪಿಗಳು ಅಕ್ಟೋಬರ್ 1 ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಬೆಳಗಾವಿ: ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು, ಚೂರಿ ಇರಿತದಿಂದ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಕ್ಯಾಂಪ್ ಪ್ರದೇಶದಲ್ಲಿ ನಡೆದಿದೆ. ಕ್ಯಾಂಪ್‌ ಪ್ರದೇಶದ ನಿವಾಸಿ ಫರಾನ್‌ ಧಾರವಾಡಕರ (15) ಗಾಯಾಳು. ಈತ ಇಸ್ಲಾಮಿಯಾ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದು, ತನ್ನಿಬ್ಬರು ಸ್ನೇಹಿತರ ‌ಜತೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಂಬಾಭವಾನಿ ಮಂದಿರದ ಬಳಿ ಫರಾನ್ ಮೇಲೆ ಯುವಕರ ಗುಂಪು ದಾಳಿ ಮಾಡಿದೆ. ಈ ವೇಳೆ ನಡೆದ ಜಗಳದಲ್ಲಿ ಫರಾನ್‌ಗೆ ಚೂರಿಯಿಂದ ಇರಿಯುತ್ತಿದ್ದಂತೆ ಸ್ನೇಹಿತರಿಬ್ಬರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡಿರುವ ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತಿ ಕ್ಷೇತ್ರಗಳ ಮರು ವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮತ್ತೆ 12 ವಾರಗಳ ಕಾಲಾವಕಾಶ ನೀಡಿದೆ. ರಾಜ್ಯದ 31 ಜಿಲ್ಲಾಪಂಚಾಯತ್ ಮತ್ತು 239 ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಮುಂದಾಗಿರುವುದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿ ಹಂಗಾಮಿ ಮುಖ್ಯ ನ್ಯಾ.ಅಲೋಕ್ ಅರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮರು ವಿಂಗಡಣೆಗೆ ಆಯೋಗವು ಕಾಲಾವಕಾಶ ಕೋರಿದ್ದಕ್ಕೆ 12 ವಾರ ಸಮಯ ನೀಡುವಂತೆ…

Read More

ನವದೆಹಲಿ : 200 ಕೋಟಿ ರೂಪಾಯಿಗಳ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಗೆ ಪಟಿಯಾಲ ಹೌಸ್ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಟಿ ಜಾಕ್ವೆಲಿನ್’ಗೆ ಜಾಕ್ವೆಲಿನ್ ಅವರ ವಕೀಲರ ಕೋರಿಕೆಯ ಮೇರೆಗೆ 50,000 ರೂ.ಗಳ ಜಾಮೀನು ಬಾಂಡ್ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಇ.ಡಿ.ಯಿಂದ ಪ್ರತಿಕ್ರಿಯೆಯನ್ನು ಕೋರಿದರು ಮತ್ತು ಅವರಿಗೆ ಮಧ್ಯಂತರ ಜಾಮೀನು ನೀಡಲಾಯಿತು ಎಂದು ವರದಿ ಮಾಡಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಇ.ಡಿ.ಯಿಂದ ಪ್ರತಿಕ್ರಿಯೆಯನ್ನು ಕೋರಿದರು ಮತ್ತು ಅವರಿಗೆ ಮಧ್ಯಂತರ ಜಾಮೀನು ನೀಡಲಾಯಿತು ಎಂದು ವರದಿ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More