Subscribe to Updates
Get the latest creative news from FooBar about art, design and business.
- ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
- ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
- ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
- ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
- ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
- ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
- ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
- ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
Author: admin
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿದೆ. ಸತ್ಯೇಂದ್ರ ಜೈನ್ಗೆ ವಿಐಪಿ ಟ್ರೀಟ್ಮೆಂಟ್ ನೀಡಿದ್ದಕ್ಕಾಗಿ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಿದ ಕೆಲವು ದಿನಗಳ ನಂತರ ಇದೀಗ ಬಿಜೆಪಿ ಹಳೆಯ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸತ್ಯೇಂದ್ರ ಜೈನ್ಗೆ ತಿಹಾರ್ ಜೈಲಿನಲ್ಲಿ ವಿಐಪಿ ಚಿಕಿತ್ಸೆ ನೀಡಲಾಗಿದ್ದು, ತಲೆಗೆ ಮಸಾಜ್, ಪಾದಕ್ಕೆ ಮಸಾಜ್ ಮತ್ತು ಬೆನ್ನಿಗೆ ಮಸಾಜ್ ಮಾಡುತ್ತಿರುವುದನ್ನು ಸಿಸಿಟಿವಿಯ ವಿಡಿಯೋದಲ್ಲಿ ನೋಡಬಹುದು. ಆಪ್ ದೆಹಲಿ ಸಚಿವರಿಗೆ ಜೈಲಿನಲ್ಲಿ ಐಷಾರಾಮಿ ವ್ಯಸ್ಥೆ ಕಲ್ಪಿಸಿಕೊಟ್ಟಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ಇಡಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಿದೆ. 58 ವರ್ಷದ ದೆಹಲಿ ಸರ್ಕಾರದ ಸಚಿವ ಸತ್ಯೇಂದ್ರ ಜೈನ್ ಅವರನ್ನು ಮೇ 30ರಂದು ಬಂಧಿಸಲಾಗಿತ್ತು. ಈ ವಿಡಿಯೋವನ್ನು ಟ್ವೀಟ್ ಮಾಡಿರುವ ಬಿಜೆಪಿ, “ಜೈಲಿನಲ್ಲಿ ವಿವಿಐಪಿ ಚಿಕಿತ್ಸೆ! ಕೇಜ್ರಿವಾಲ್ ಇಂತಹ ಮಂತ್ರಿಯನ್ನು…
ಜಮ್ಮು ಕಾಶ್ಮೀರದ ಕುಪ್ವಾರಾದಲ್ಲಿ ಸಂಭವಿಸಿದ ಹಿಮಪಾತದಿಂದ ಮೂವರು ಯೋಧರು ಮೃತಪಟ್ಟಿದ್ದು, ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿನ ಮಚಿಲ್ ಸೆಕ್ಟರ್ ಬಳಿ ಹಿಮಪಾತ ಸಂಭವಿಸಿದ್ದು, ಮೂವರು ಯೋಧರ ಮೃತದೇಹ ಪತ್ತೆಹಚ್ಚಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಲೈಂಗಿಕ ದೌರ್ಜನ್ಯ ಎಸಗಿ ಒಂದು ವರುಷದ ಮಗುವನ್ನು ಕೊಲೆ ಮಾಡಿದ ಅಪರಾಧಿ ಯಶವಂತಪುರದ ನಿವಾಸಿ ಮೂರ್ತಿ ಅಲಿಯಾಸ್ ಹಲ್ಲುಜ್ಜನಿಗೆ (25) ತ್ವರಿತಗತಿಯ ವಿಶೇಷ ನ್ಯಾಯಾಲಯವು (ಎಫ್ಟಿಎಸ್ಸಿ) ಮರಣ ದಂಡನೆ ವಿಧಿಸಿದೆ. ಮೃತ ಮಗುವಿನ ಕುಟುಂಬಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ (ಡಿಎಲ್ಎಸ್ಎ) 5 ಲಕ್ಷ ಪರಿಹಾರ ನೀಡುವಂತೆಯೂ ನ್ಯಾಯಾಧೀಶೆ ಕೆ.ಎನ್.ರೂಪಾ ಆದೇಶಿಸಿದ್ದಾರೆ. ಘಟನೆ ನಡೆದ ಮರು ದಿನವೇ ರಾಜಗೋಪಾಲನಗರ ಠಾಣೆಯ ಪೊಲೀಸರು ಅಪರಾಧಿಯನ್ನು ಬಂಧಿಸಿದ್ದರು. ಆಗ ಅಪರಾಧಿಗೆ 18 ವರ್ಷವಾಗಿತ್ತು. ಅಪರಾಧಿ ಮೂರ್ತಿ ಕೊಲೆಯಾದ ಮಗುವಿನ ತಂದೆಯ ಪರಿಚಯಸ್ಥ. 2015ರ ಸೆ.12ರಂದು ಮಧ್ಯಾಹ್ನ ಉಲ್ಲಾಸ್ ಚಿತ್ರಮಂದಿರದ ಬಳಿ ಮಗುವಿನ ತಂದೆಗೆ ಮೂರ್ತಿ ಸಿಕ್ಕಿದ್ದ. ಮಗುವಿಗೆ ತಿಂಡಿ ಕೊಡಿಸಲು ಮೂವರು ರಾಜಗೋಪಾಲ ನಗರದ ಮುಖ್ಯರಸ್ತೆಗೆ ತೆರಳಿದ್ದರು. ತಿಂಡಿ ತರುವವರೆಗೆ ಮಗುವನ್ನು ನೋಡಿಕೊಳ್ಳುವಂತೆ ಮೂರ್ತಿಗೆ ತಿಳಿಸಿದ್ದ ತಂದೆ ರಸ್ತೆಯ ಪಕ್ಕದಲ್ಲೇ ನಿಲ್ಲಿಸಿದ್ದರು. ತಿಂಡಿ ತರುವಷ್ಟರಲ್ಲಿ ಮಗುವನ್ನು ಮೂರ್ತಿ ಕರೆದೊಯ್ದಿದ್ದ. ಆಟೊದಲ್ಲಿ ಗೊರಗುಂಟೆಪಾಳ್ಯದ ಏರ್ಫೋರ್ಸ್ನ ಮುಖ್ಯ ಎಂಜಿನಿಯರ್ಕಚೇರಿಯ ನಿರ್ಜನ ಪ್ರದೇಶಕ್ಕೆ ಮಗುವನ್ನು ಕರೆದೊಯ್ದು ಬಾಯಿ ಮುಚ್ಚಿ…
ನವದೆಹಲಿ: ಡಿಸೆಂಬರ್ 7ರಿಂದ ಡಿಸೆಂಬರ್ 29 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. 2022ರ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 7ರಿಂದ ಪ್ರಾರಂಭವಾಗಿ ಡಿಸೆಂಬರ್ 29 ರವರೆಗೆ ನಡೆಯಲಿದೆ. ಒಟ್ಟು 23 ದಿನಗಳ ಅವಧಿಯಲ್ಲಿ 17 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳು ಮತ್ತು ರಚನಾತ್ಮಕ ಚರ್ಚೆಗಾಗಿ ಎದುರು ನೋಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದಾರೆ. ರಾಜ್ಯಸಭೆಯ ಅಧ್ಯಕ್ಷರಾಗಿರುವ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಅಧಿವೇಶನ ಇದಾಗಿದೆ. ಮುಂಬರುವ ಅಧಿವೇಶನದಲ್ಲಿ ಅಂಗೀಕರಿಸಬೇಕಾದ ಮಸೂದೆಗಳ ಪಟ್ಟಿಯನ್ನು ಸರ್ಕಾರ ಸಿದ್ಧ ಪಡಿಸುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆಯಾಗಿದೆ. ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆಯಾಗಿದೆ. ತನುಜಾ ಪರಸಪ್ಪ ಗೋಡಿ(32), ಸುದೀಪ್(4), ರಾಧಿಕಾ(3) ಶವವಾಗಿ ಸಿಕ್ಕರು. ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ನಿವಾಸಿ ತನುಜಾ ಮಕ್ಕಳನ್ನ ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಸವದತ್ತಿ ತಾಲೂಕು ಆಸ್ಪತ್ರೆಗೆ ಶವಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಸರ್ಕಾರಿ ನೌಕರಿಗೆ 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರನ್ನೊಳಗೊಂಡ 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಆಯೋಗದಲ್ಲಿ ಸದಸ್ಯರಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕ ಶ್ರೀಕಾಂತ್ ಬಿ. ವನಹಳ್ಳಿ ಹಾಗೂ ರಾಜ್ಯ ಮೂಲ ಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ 7 ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ನಗರದ ನ್ಯೂ ಹೊರೈಜನ್ ಕಾಲೇಜಿನ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ್ದಾರೆ. ಇಂಜಿನಿಯರಿಂಗ್ ಮೊದಲ ವರ್ಷದ ಆರ್ಯನ್, ದಿನಕರ್, ರಿಯಾ ಪಾಕ್ ಪರ ಘೋಷಣೆ ಕೂಗಿದ್ದಾರೆ. ಈ ವೇಳೆ ಇತರೆ ವಿದ್ಯಾರ್ಥಿಗಳು ಮೂವರನ್ನು ಥಳಿಸಲು ಮುಂದಾಗಿದ್ದಾರೆ. ಕೂಡಲೇ ವಿದ್ಯಾರ್ಥಿಗಳು ಉಳಿದ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಿದ್ದಾರೆ. ವಿದ್ಯಾರ್ಥಿಗಳ ವಿರುದ್ಧ ಮಾರತ್ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ. ಆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುತ್ತಿದ್ದಾರೆ. ಇನ್ನು ಕಾಲೇಜು ಆಡಳಿತ ಮಂಡಳಿ ಮೂವರನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಹುಜನ ಸಮಾಜ ಪಾರ್ಟಿ(BSP)ಯ ಜಿಲ್ಲಾಧ್ಯಕ್ಷರಾದ ದಾಸಪ್ಪ ಎಡಪದವು ಅವರು ಇಂದು ಮುಂಜಾನೆ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಜಾನೆ ವೇಳೆಗೆ ಎದೆನೋವಿನಿಂದ ಅಸ್ವಸ್ಥರಾದ ದಾಸಪ್ಪ ಅವರನ್ನು ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅವರು ಆಸ್ಪತ್ರೆಗೆ ತಲುಪುವ ಮೊದಲೇ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ. ದಾಸಪ್ಪ ಎಡಪದವು ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಹುಜನ ಚಳುವಳಿಯ ಪ್ರಭಾವಿ ನಾಯಕರಾಗಿದ್ದು, ಜಿಲ್ಲೆಯ ದಲಿತ ಪರ ಹೋರಾಟ, ಸಂಘಟನೆಗಳ ಪೋಷಕರೂ ಆಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸುಮಾರು ಒಂದು ದಶಕದ ಹಿಂದೆ ಬರೋಬ್ಬರಿ ಅಂದಾಜು ರೂ.೪೫೦ ಕೋಟಿ ವೆಚ್ಚದಲ್ಲಿ ಅಂದಿನ ಸರ್ಕಾರದ ವತಿಯಿಂದ ನಿರ್ಮಾಣ ಮಾಡಿದಂತಹ ಬೆಳಗಾವಿಯ ಸುವರ್ಣ ವಿಧಾನ ಸೌಧ ಸರ್ಕಾರದ ಬೊಕ್ಕಸದ ಪಾಲಿಗೆ ಒಂದು ಬಿಳಿ ಆನೆ ಆದಂತಾಗಿದೆ. ಏಕೆಂದರೆ ಅಂದಿನಿಂದ ಈವರೆಗೆ ಬಂದು ಹೋಗಿರುವಂತಹ ವಿವಿಧ ಸರ್ಕಾರಗಳು ಸಚಿವಾಲಯ ಮಟ್ಟದ ಕಚೇರಿಗಳನ್ನು ಅಲ್ಲಿಗೆ ಸ್ಥಳಾಂತರಿಸುವಲ್ಲಿ ವಿಫಲವಾಗಿವೆ. ರಾಜಕಾರಣಿಗಳ ಆರೋಪವೇನೆಂದರೆ ಇದೊಂದು ಕೇವಲ ಗೋಡೌನ್ ರೀತಿಯಿರುವ ಕಟ್ಟವಾಗಿದ್ದು, ಸಚಿವಾಲಯ ಮಟ್ಟದ ಕಚೇರಿಗಳನ್ನು ಸ್ಥಾಪಿಸುವ ಯಾವುದೇ ಸೂಕ್ತ ಸೌಲಭ್ಯಗಳಿಲ್ಲವಂತೆ. ಜೊತೆಗೆ, ಹಿರಿಯ ಅಧಿಕಾರಿಗಳು ಬೆಳಗಾವಿಗೆ ಸ್ಥಳಂತಾರವಾಗಲು ನಿರಾಕರಿಸುತ್ತಿರುವರಂತೆ. ಅದರೆ ಇದಕ್ಕೆ ತದ್ವಿರುದ್ಧ ಎನ್ನುವಂತೆ ಅಧಿಕಾರಿಗಳ ಆರೋಪವೇನೆಂದರೆ, ರಾಜಕಾರಣಿಗಳಿಗೆ ಅಧಿಕಾರಿಗಳು ಬೆಂಗಳೂರಿನಲ್ಲೇ ಇರಬೇಕು ಎನ್ನುವುದು ಮತ್ತು ವಿವಿಧ ಸಚಿವಾಲಯಗಳ ಮಟ್ಟದ ಕಚೇರಿಗಳನ್ನು ಅಲ್ಲಿಗೆ ಸ್ಥಳಂತಾರಿಸುವಲ್ಲಿ ಇರುವ ರಾಜಕೀಯ ಇಚ್ಛಾಶಕ್ತಿಯ ಕೊರತೆಗಳೇ ಸುವರ್ಣ ವಿಧಾನ ಸೌಧದ ಸಂಪೂರ್ಣ ಬಳಕೆಗೆ ಎದುರಾಗಿರುವ ಮುಖ್ಯ ಕಾರಣಗಳಂತೆ. ರಾಜ್ಯ ಸರ್ಕಾರ ಸುವರ್ಣ ವಿಧಾನ ಸೌಧದ ನಿರ್ವಹಣೆಗಾಗಿಯೇ ವಾರ್ಷಿಕ ಬರೋಬ್ಬರಿ ರೂ.೫ ಕೋಟಿ ವೆಚ್ಚ ಮಾಡುತ್ತಿದೆ.…
ನಾಪತ್ತೆಯಾಗಿದ್ದ ಟ್ರಾನ್ಸ್ಪೋರ್ಟ್ ಉದ್ಯಮಿ ಬಾಲಸುಬ್ರಮಣ್ಯನ್ ಮೃತದೇಹ ಬೆಂಗಳೂರಿನ ಜೆ.ಪಿ ನಗರ 6ನೇ ಹಂತದ ಸಮೀಪ ಪತ್ತೆಯಾಗಿತ್ತು. ಪುಟ್ಟೇನಹಳ್ಳಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದು ಸಿಡಿಆರ್ ಪರಿಶೀಲಿಸಿ ಬಾಲಸುಬ್ರಮಣ್ಯನ್ ದೂರವಾಣಿ ಕರೆಗಳನ್ನು ವಿವರ ನೋಡಿದಾಗ ಮಹಿಳೆಯೊಬ್ಬಳ ಜೊತೆ ನಿರಂತರ ಸಂಪರ್ಕದಲ್ಲಿರುವ ವಿಚಾರ ತಿಳಿದುಬಂದಿದೆ. ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಕೊನೆಯ ಲೊಕೇಷನ್ ತೋರಿಸುತ್ತಿದೆ. ಹೀಗಾಗಿ ಬಾಲಸುಬ್ರಮಣ್ಯನ್ ಸಂಪರ್ಕದಲ್ಲಿದ್ದ ಆ ಮಹಿಳೆ ಯಾರು ಎನ್ನುವ ಬಗ್ಗೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ನವೆಂಬರ್ 16ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್ಗೆ ಕರೆದುಕೊಂಡು ಹೋಗಿದ್ದ ಬಾಲಸುಬ್ರಮಣ್ಯನ್ ಮನೆಗೆ ವಾಪಸ್ ಆಗದೇ ನಾಪತ್ತೆಯಾಗಿದ್ದರು. ನವೆಂಬರ್ 17ರಂದು ಬಾಲ ಸುಬ್ರಮಣಿಯನ್ ಮೃತ ದೇಹ ಪತ್ತೆಯಾಗಿದ್ದು,ಹಲವು ಅನುಮಾನಗಳು ಮೂಡಿತ್ತು. ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್ಗೆ ಕರೆದುಕೊಂಡು ಹೋಗಿದ್ದ ಬಾಲ ಸುಬ್ರಮಣಿಯನ್, ಸಂಜೆ 04-55ಕ್ಕೆ ಸೊಸೆಗೆ ಕರೆ ಮಾಡಿ ಹೊರಗಡೆ ಕೆಲಸವಿದೆ ಎಂದು ತಿಳಿಸಿದ್ದರು. ಅನಂತರ ಕರೆ ಮಾಡಿದರೆ ಅವರ ನಂಬರ್ ಸ್ವಿಚ್ಡ್ ಆಫ್ ಬಂದಿದೆ. ಮಗ ತಕ್ಷಣವೇ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ತೆರಳಿ…