Author: admin

ಹೆಚ್.ಡಿ.ಕೋಟೆ: ತಾಲೂಕು ವ್ಯವಸಾಯೋತ್ಪನ್ನ, ಮಾರಾಟ ಸಹಕಾರ ಸಂಘದ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಹೆಚ್.ಡಿ.ಕೋಟೆ ಪಟ್ಟಣದ ಸಂಘದ ಅಕ್ಕಿಗಿರಣಿ ಆವರಣದಲ್ಲಿ ಆಯೋಜಿಸಲಾಗಿತ್ತು. ಸಭೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮೊತ್ತಬಸವರಾಜಪ್ಪ, ಸದಸ್ಯರ ಸರ್ವಾನುಮತದಿಂದ ಸಹಕಾರ ಸಂಘವನ್ನು ಅಭಿವೃದ್ಧಿಪಡಿಸುವಲ್ಲಿ ಸರ್ವಸದಸ್ಯರ ಸಹಕಾರ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಮರಣ ಹೊಂದಿದ ಸದಸ್ಯರ ಕುಟುಂಬಕ್ಕೆ ಪರಿಹಾರ ಒದಗಿಸಬೇಕೆಂದು ಒಕ್ಕೊರಳಿಂದ ಸರ್ವ ಸದಸ್ಯರು ಒತ್ತಾಯಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಆಡಳಿತ ಮಂಡಳಿ ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿತು. ಕಾರ್ಯದರ್ಶಿ ಬೊಪ್ಪನಹಳ್ಳಿ ನಿಂಗರಾಜು ಸಭೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಸದಸ್ಯರಾದ ಎಂ.ಮಹದೇವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಅಧ್ಯಕ್ಷರಾದ ಬಸವರಾಜಪ್ಪ, ಉಪಾಧ್ಯಕ್ಷ ನೂರ್ ಅಹಮದ್, ಮಾದಪ್ಪ, ಯೋಗನರಸಿಂಹಗೌಡ, ಗುಣಪಾಲ, ಭುಜಂಗನಾಯಕ, ಶಿವಸ್ವಾಮಿ, ಈಶ್ವರ, ಮಾದಯ್ಯ, ಲಲಿತಮ್ಮ ಕೆಂಚಮ್ಮ, ರಾಜಣ್ಣ ಶಿವರಾಜು, ಸಿಬ್ಬಂದಿಗಳಾದ ಕಾರ್ಯದರ್ಶಿ ನಿಂಗರಾಜು, ಮಲ್ಲಪ್ಪ, ದೀಪಕ್, ಸೋಮು, ಗುರು ಹಾಗೂ ನೂರಾರು ಸಂಖ್ಯೆಯ ಸದಸ್ಯರು ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಚಿತ್ರದುರ್ಗ: ಪೌರಕಾರ್ಮಿಕರ ಬದುಕನ್ನು ಹಸನಾಗಿಸುವುದು ನಮ್ಮ ಸರ್ಕಾರದ ಮೂಲ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡುತ್ತಲೇ ಬಂದಿದ್ದೇವೆ ಎಂದು ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ಹಿರಿಯೂರು ತಾಲ್ಲೂಕಿನ ನೆಹರು ಕ್ರೀಡಾಂಗಣದ ಹಳೇ ಕಡಲೆಕಾಯಿ ಮಂಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೌರಕಾರ್ಮಿಕರಲ್ಲಿ 11,133 ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲಾಗಿದೆ. ರಾಜ್ಯದ ಎಲ್ಲಾ ರೀತಿಯ ಖಾಯಂ ಹೊರಗುತ್ತಿಗೆ ಮತ್ತು ಇತರ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಸರ್ಕಾರಿ ನೌಕರರರೆಂದು ಪರಿಗಣಿಸಲಾಗುವುದು, ಪೌರಕಾರ್ಮಿಕರಿಗೆ ಸರ್ಕಾರ ಊಟ ನೀಡುವಲ್ಲಿ ಅನುಕೂಲಕರವಾಗಿ ಬದಲಾವಣೆ ತರಲಾಗಿದೆ ಎಂದು ಅವರು ಹೇಳಿದರು. ಪೌರಕಾರ್ಮಿಕರು ದುರಾಭ್ಯಾಸಗಳಿಂದ ದೂರವಿದ್ದು, ಮಕ್ಕಳಿಗೆ ವಿದ್ಯಾಭ್ಯಾಸ ನೀಡುವಲ್ಲಿ ಹೆಚ್ಚು ಗಮನ ಕೊಡಬೇಕು. ಎಲ್ಲಂದರಲ್ಲಿ ಕಸ ಎಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ನಗರದಲ್ಲಿ ಪೌರಕಾರ್ಮಿಕರಿಗೆ 624+1,148 ಮನೆ ನಿರ್ಮಾಣ ಮಾಡಲು ತಯಾರಿ ನಡೆದಿದ್ದು, ಪೌರಕಾರ್ಮಿಕರಿಗೆ ಪ್ರತ್ಯೇಕ ಸೂರು ಕಲ್ಪಿಸಲಾಗುವುದು, ನಗರಕ್ಕೆ ಒಳಚರಂಡಿ ವ್ಯವಸ್ಥೆಗಾಗಿ 100 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲಿ ಇದು…

Read More

ಮಧುಗಿರಿ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಕೋಡ್ಲಾಪುರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಡಾ.ಜಿ.ಪರಮೇಶ್ವರ್ ಅಭಿಮಾನಿಗಳ ಯುವಬಳಗ ಹಾಗೂ ಮುರಳೀಧರ ಹಾಲಪ್ಪ ಅಭಿಮಾನಿಗಳ ಬಳಗದ ವತಿಯಿಂದ ಮುರಳೀಧರ ಹಾಲಪ್ಪ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ವೇಳೆ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಕೇಕ್ ಕತ್ತರಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವಸೈನ್ಯದ ಜಿಲ್ಲಾಧ್ಯಕ್ಷ ಮುರಳಿ ರಾಚಯ್ಯ, ಕರ್ನಾಟಕ ಕಾರ್ಮಿಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಮಾರುತಿ ಕೆ.ಎನ್., ರಂಗನಾಥ್, ಪುಟ್ನಂಜ, ರಾಜು, ಚಂದನ್, ಚಂದ್ರಕಾಂತ್, ಮಾದೇಶ್, ಪ್ರವೀಣ್ ಇನ್ನು ಮುಂತಾದ ಯುವಕರು ಉಪಸ್ಥಿತರಿದ್ದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ: ಜಮೀನು ವಿಚಾರವಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಬನಹಟ್ಟಿ ಕೆರೆ ಬಡಾವಣೆಯಲ್ಲಿ ನಡೆದಿದೆ‌. 65 ವರ್ಷದ ಮಾಳಪ್ಪ ಹಳ್ಳೂರ ಮೃತ ದುರ್ದೈವಿ. ಎರಡು ಗುಂಟೆ ಜಾಗಕ್ಕಾಗಿ ತಂದೆ ಮಾಳಪ್ಪ ಅವರನ್ನು ಮಗನಾದ ತುಕ್ಕಪ್ಪ ಶೆಡ್ ಮನೆಯಲ್ಲಿ ಕಟ್ಟಿಗೆಯಿಂದ ತಲೆಗೆ ಹೊಡೆದು ಹತ್ಯೆಗೈದಿದ್ದಾನೆ. ನಿನ್ನೆ ರಾತ್ರಿ 2.30ರ ಸುಮಾರಿಗೆ ಘಟನೆ ನಡೆದಿದ್ದು, ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಇಂಧನ ಹೊಂದಾಣಿಕೆ ಶುಲ್ಕ ಹೆಚ್ಚಾಗಲಿದ್ದು ಅಕ್ಟೋಬರ್ 1 ರಿಂದಲೇ ಗ್ರಾಹಕರಿಗೆ ಶುಲ್ಕದ ಬರೆ ಬೀಳಲಿದೆ. ಈಗ ಅಕ್ಟೋಬರ್ ನಲ್ಲಿ ಇಂಧನ ವೆಚ್ಚ ಶುಲ್ಕದ ಬಿಸಿ ಗ್ರಾಹಕರಿಗೆ ಮುಟ್ಟಲಿದ್ದು, ಪ್ರತಿ ಯೂನಿಟ್ ಮೇಲೆ 43 ಪೈಸೆ ದರ ಏರಿಕೆಯಾಗಲಿದೆ. ಮುಂದಿನ ವರ್ಷ ಮಾರ್ಚ್‍ವರೆಗೆ ಈ ದರ ಇರಲಿದೆ. ಕಲ್ಲಿದ್ದಲಿನ ದರ ಏರಿಕೆಯಾದರೇ ದರ ಏರಿಕೆ ಅನಿವಾರ್ಯ ಎನ್ನುವುದು ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ. ಇಂಧನ ಹೊಂದಾಣಿಕೆ ಶುಲ್ಕವನ್ನು ಮೂರು ತಿಂಗಳಿಗೊಮ್ಮೆ ಕೆಇ ಆರ್ ಸಿಗೆ ಪರಿಶೀಲನೆ ಮಾಡುವಂತೆ ಬೆಸ್ಕಾಂ ಮನವಿ ಕೂಡ ಮಾಡಿದೆ. ಆದರೆ, ಸದ್ಯ ಆರು ತಿಂಗಳಿಗೆ ಅನ್ವಯವಾಗುವಂತೆ ದರ ಏರಿಕೆಯಾಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಚಿವ ಸುನೀಲ್ ಕುಮಾರ್ ಕುವೆಂಪು ವಿರಚಿತ ನಾಡಗೀತೆ ಜಯಭಾರತ ಜನನಿಯ ತನುಜಾತೆದಾಟಿ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ನಾಡಗೀತೆಯನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ಹಾಡಲಾಗುತ್ತದೆ ಅಂತ ತಿಳಿಸಿದ್ದಾರೆ. ಎಸ್ .ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಜಯ ಭಾರತ ಜನನಿಯ ತನುಜಾತೆ ಹಾಡುವ ಅವಧಿಯನ್ನು 2.30 ನಿಮಿಷಕ್ಕೆ ನಿಗದಿ ಮಾಡಬೇಕು ಎಂದು ಶಿಫಾರಸು ಮಾಡಿತ್ತು, ಅದರಂತೆ ಈಗ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಬೆಳಗಾವಿಯ ಕೆಎಲ್‌ಇಎಸ್ ಆಸ್ಪತ್ರೆಗೆ ನಸುಕಿನ ಜಾವದಲ್ಲಿ ಜೀವಂತ ಹೃದಯ ಸಾಗಿಸುವಲ್ಲಿ ವೈದ್ಯರ ತಂಡ ಯಶಸ್ವಿಯಾಯಿತು. ಆಪಘಾತದಿಂದಾಗಿ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಿಸಿದ್ದ ವ್ಯಕ್ತಿಯೊಬ್ಬರ ಮಿದುಳು ನಿಷ್ಕ್ರಿಯಗೊಂಡಿತ್ತು. ಅವರ ಕುಟುಂಬ ವರ್ಗದವರೊಂದಿಗೆ ಚರ್ಚಿಸಿದ ವೈದ್ಯರು ಹೃದಯ ದಾನ ಮಾಡಲು ಪ್ರೇರೇಪಿಸಿದರು. ಶುಕ್ರವಾರ ನಸುಕಿನ 4ಗಂಟೆ ಸುಮಾರಿಗೆ ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ತರಲಾಯಿತು. ಹೃದ್ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಯಶಸ್ವಿ ಕಸಿ ಮಾಡಲಾಯಿತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪೊಲೀಸ್ ಸಿಬ್ಬಂದಿ ಜೀರೊ ಟ್ರಾಫಿಕ್ ನಿರ್ಮಾಣ ಮಾಡಿ ಸಹಕರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

40 ಪರ್ಸೆಂಟ್ ಕಮಿಷನ್ ಆರೋಪದ ವಿಚಾರಕ್ಕೆ ನಾವು ಮುಕ್ತರಿದ್ದೇವೆ. ಈಗಲೂ ದೂರು ಮತ್ತು ದಾಖಲೆ ನೀಡಿದ್ರೆ ನಾಳೆಯೇ ತನಿಖೆಗೆ ಮಾಡಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪೇ ಸಿಎಂ ಪೋಸ್ಟರ್ ಅಭಿಯಾನ ವಿಚಾರ ಕಾಂಗ್ರೆಸ್ ನವರು ಯಾವ ಕ್ಯಾಂಪೇನ್ ಬೇಕಾದರೂ ಮಾಡಲಿ ಕೊನೆಗೆ ಸತ್ಯಕ್ಕೆ ಜಯ ಸಿಗುತ್ತೆ ಎಂದರು. 40 ಕಮಿಷನ್ ಆರೋಪದ ವಿಚಾರದಕ್ಕೆ ನಾವು ಮುಕ್ತರಿದ್ದೇವೆ. ದೂರು ಕೊಟ್ಟರೇ ತನಿಖೆ ನಡೆಸಲು ಸಿದ್ಧ. ನ್ಯಾಯಾಂಗ ತನಿಖೆಯಾಖೆ ಲೋಕಾಯುಕ್ತವೇ ಇದೆಯಲ್ಲ. ಲೋಕಾಯುಕ್ತ ತನಿಖೆಯನ್ನ ಮಾಡಿಸುತ್ತೇವೆ ಎಂದರು. ಕಾಂಗ್ರೆಸ್ ನಾಯಕರು ಬರೀ ರಾಜಕೀಯ ಪ್ರೇರಿತ ಆರೋಪ ಮಾಡುತ್ತಾರೆ. ಈ ಬಗ್ಗೆ ಸದನದಲ್ಲಿ ಚರ್ಚೆಗೆ ನಾವು ಸಿದ್ಧರಿದ್ದವು. ಆದರೆ ಅವರೇ ದಾಖಲೆ ಕೊಡಲಿಲ್ಲ. ಪುರಾವೆ ಇಲ್ಲದೆ ಮಾತನಾಡುವುದು ಬಹಳ ದಿನ ಉಳಿಯಲ್ಲ ಎಂದು ಸಿಎಂ ಬೊಮ್ಮಾಯಿ ಟಾಂಗ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಕಲಬುರಗಿ : ಮಕ್ಕಳ ಕಳ್ಳರ ವದಂತಿ ಹೆಚ್ಚಾಗಿದ್ದು, ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಮಹಿಳೆಯರಿಗೆ ಜನರು ಥಳಿಸಿದ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ನಡೆದಿದೆ. ತೆಲಂಗಾಣದ ಕೊತ್ಲಾಪುರದಿಂದ ಇಬ್ಬರು ಮಹಿಳೆಯರು ಪೋಲಕಪಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಿ ಅನುಮಾನಿಸಿದ ಜನರು ಮಕ್ಕಳ ಕಳ್ಳರೆಂದು ಭಾವಿಸಿ ಥಳಿಸಿದ್ದಾರೆ. ಮಹಿಳೆಯರನ್ನು ಥಳಿಸಿದ ಗ್ರಾಮಸ್ಥರು ಬಳಿಕ ಮಹಿಳೆಯರನ್ನು ಚಿಂಚೋಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದ ಪೊಲೀಸರು ಮಹಿಳೆಯರು ಸಂಬಂಧಿಕರ ಮನೆಗೆ ಬಂದಿರುವುದು ಎಂದು ತಿಳಿದುಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಂಜೀವ ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಇನಸ್ಟಾಗ್ರಾಂ ಖಾತೆ ತೆರೆದು ಹಣ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಎಚ್ಚರವಹಿಸುವಂತೆ ಎಸ್ .ಪಿ ಸಂಜೀವ ಪಾಟೀಲ ಮನವಿ ಮಾಡಿದ್ದಾರೆ. ಎಸ್ಪಿ ಸಂಜೀವ ಪಾಟೀಲ ಹೆಸರಿನಲ್ಲಿ ಸ್ನೇಹಿತರಿಗೆ , ಪರಿಚಯಸ್ಥರಿಗೆ ಹಣ ಕೇಳಲಾಗುತ್ತಿದೆ. ಈವರೆಗೆ ಅನೇಕರಿಗೆ ಹಣ ಕೇಳಿ ಗೂಗಲ್ ಪೇ ಮಾಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಎಸ್ .ಪಿ ಸಂಜೀವ ಪಾಟೀಲ ಅವರ ಗಮನಕ್ಕೆ ವಿಷಯ ಬಂದಿದ್ದು, ಕೂಡಲೇ ಇದನ್ನು ತಿರಸ್ಕರಿಸುವಂತೆ ಕೋರಿದ್ದಾರೆ. ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ಯಾರೋ ಸಾರ್ವಜನಿಕರಲ್ಲಿ ಹಣ ಕೇಳುತ್ತಿದ್ದುದ್ದ ಕಂಡು ಬಂದಿದ್ದು ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More