Author: admin

ಆಸ್ಕರ್ ಪ್ರಶಸ್ತಿ ವಿಜೇತ ಕೆನಡಾದ ನಿರ್ದೇಶಕ ಪಾಲ್ ಹ್ಯಾಗಿಸ್ ಅವರು ದಕ್ಷಿಣ ಇಟಲಿಯಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ. ಕೆನಡಾ ಮೂಲದ ಹ್ಯಾಗಿಸ್(೬೯) ಅವರು ಓಸ್ಟುನಿಯಲ್ಲಿ ಮಂಗಳವಾರ ಪ್ರಾರಂಭವಾಗುವ ಚಲನಚಿತ್ರ್ಯೋತ್ಸವಕ್ಕಾಗಿ ಇಟಲಿಯಲ್ಲಿದ್ದಾರೆ. ಈ ವೇಳೆ ಯುವ ವಿದೇಶಿ ಮಹಿಳೆಯೊಬ್ಬಳು ಎರಡು ದಿನಗಳಿಂದ ನನಗೆ ಹ್ಯಾಗಿಸ್ ಅವರು ಲೈಂಗಿಕ ಕಿರುಕುಳ ಕೊಡುತ್ತಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಆದರೆ ಹ್ಯಾಗಿಸ್ ಅವರ ಮೇಲೆ ದೂರು ಕೊಟ್ಟ ಮಹಿಳೆ ತನ್ನ ರಾಷ್ಟ್ರೀಯತೆ ಮತ್ತು ವಯಸ್ಸನ್ನು ಉಲ್ಲೇಖಿಸಿಲ್ಲ. ಮಹಿಳೆ ದೂರಿನ ಆಧಾರದ ಮೇಲೆ ಇಟಲಿ ಪೊಲೀಸರು ಹ್ಯಾಗಿಸ್ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಹ್ಯಾಗಿಸ್ ಹಿರಿಯ ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ. ಅವರು ೨೦೦೬ ರಲ್ಲಿ ‘ಕ್ರ್ಯಾಶ್’ ಸಿನಿಮಾಗಾಗಿ ಅತ್ಯುತ್ತಮ ಪ್ರಶಸ್ತಿಯಾದ ಆಸ್ಕರ್ ಪ್ರಶಸ್ತಿಯನ್ನು ಗೆದ್ದರು. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಕೇಂದ್ರ ಸರ್ಕಾರ ಜಾರಿ ಮಾಡಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಹಿಂಸಾಚಾರ ಭುಗಿಲೆದಿದ್ದು ಅಗ್ನಿಕುಂಡವಾಗಿರುವ ನಡುವೆ ಬಿಹಾರದಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಗೆ ೧೭ ಮಂದಿ ಸಾವನ್ನಪ್ಪಿದ್ದಾರೆ. “ಗುಡುಗು ಮತ್ತು ಸಿಡಿಲು ಸಹಿತ ಮಳೆಯಿಂದಾಗಿ ಭಾಗಲ್ಪುರದಲ್ಲಿ ೬, ವೈಶಾಲಿಯಲ್ಲಿ ೩, ಖಗಾರಿಯಾದಲ್ಲಿ ೨, ಕತಿಹಾರ್‌ನಲ್ಲಿ ೧, ಸಹರ್ಸಾದಲ್ಲಿ ೧, ಮಾಧೇಪುರದಲ್ಲಿ ೧, ಬಂಕಾದಲ್ಲಿ ೨ ಮತ್ತು ಮುಂಗಾರಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇದರ ಜೊತೆಗೆ ರಾಜ್ಯದ ಹಲವು ಭಾಗಗಳಲ್ಲಿ ಜಾನುವಾರುಗಳೂ ಕೂಡ ಮೃತಪಟ್ಟಿದ್ದು, ಗುಡುಗು,ಸಿಡಿಲು ಮತ್ತು ಮಳೆಯಿಂದ ಆಗಿರುವ ಹಾನಿಯನ್ನು ಅಂದಾಜು ಮಾಡುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಉತ್ತರ, ಮಧ್ಯ ಮತ್ತು ಪೂರ್ವ ಭಾಗದಲ್ಲಿ ಬಿಹಾರ ದೇಶಾದ್ಯಂತ ಭಾರೀ ಮಳೆಯೊಂದಿಗೆ ಗುಡುಗು ಸಹಿತ ಚಂಡಮಾರುತದ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಗುಜರಾತ್ ಪ್ರದೇಶ, ಮಧ್ಯಪ್ರದೇಶ, ವಿದರ್ಭದ ಹಲವು ಭಾಗಗಳು, ಛತ್ತೀಸ್‌ಗಢದ ಕೆಲವು…

Read More

ಸಾಕಷ್ಟು ಜನರು ಬಾಳೆ ಹಣ್ಣನ್ನು ಸೇವನೆ ಮಾಡುತ್ತಾರೆ. ಆದರೆ ಅವರಿಗೆ ಬಾಳೆ ಹಣ್ಣಿನ ಪ್ರಯೋಜನಗಳೇನು ಅನ್ನೋದೇ ತಿಳಿದಿರಲ್ಲ. ಬಾಳೆಹಣ್ಣು ಪೌಷ್ಟಿಕಾಂಶಗಳ ಕಣಜವಾಗಿದ್ದು, ಇದರಿಂದ ನಮ್ಮ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಬಾಳೆಹಣ್ಣಿನಲ್ಲಿರುವ ಪೌಷ್ಟಿಕಾಂಶಗಳು ಮತ್ತು ವಿಟಮಿನ್ ಗಳು ದೇಹದ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಿಶ್ಯಕ್ತಿಯಿಂದ ಬಳಲುತ್ತಿದ್ದವರು ಇದನ್ನು ಸೇವಿಸಿದರೆ ಉತ್ತಮ. ನಿಯಮಿತವಾಗಿ ಬಾಳೆಹಣ್ಣಿನ ಸೇವನೆಯಿಂದ ಹೃದಯಾಘಾತವನ್ನು ತಡೆಯಬಹುದು ಎಂದು ಸಂಶೋಧನೆ ತಿಳಿಸಿದೆ. ಇದರಲ್ಲಿರುವ ಪೊಟ್ಯಾಸಿಯಂ ಹೃದಯಬಡಿತ ಸರಿಯಾಗಿರುವಂತೆ ನೋಡಿಕೊಳ್ಳುತ್ತದೆ. ಅಜೀರ್ಣದ ಸಮಸ್ಯೆಯಿಂದ ಮುಕ್ತಿ ನೀಡಿ ಸರಾಗವಾಗಿ ಶೌಚ ಕ್ರಿಯೆ ಮುಗಿಸುವಂತೆ ನೋಡಿಕೊಳ್ಳುತ್ತದೆ. ಕೆಲಸದ ಒತ್ತಡದ ಕಾರಣಕ್ಕೆ ತಲೆನೋವು ಬಂದರೆ ಅದನ್ನು ನಿವಾರಿಸುವ ಗುಣ ಬಾಳೆಹಣ್ಣಿಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಬೆಂಗಳೂರು: ಜೂನ್ 21ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯೋಗ ದಿನಾಚರಣೆಯನ್ನು ಶಾಲೆಗಳಲ್ಲೂ ಆಚರಿಸಲು ಸೂಚಿಸಿದ್ದು, ಹೀಗಾಗಿ ಮಂಗಳವಾರ ಅರ್ಧ ದಿನ ರಾಜ್ಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಿಸುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ. ದಿನಾಂಕ 21.06.22ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲೂ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರುಗಳು, ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನಾಚರಣೆ ನಡೆಸಲು ಸೂಚಿಸಲಾಗಿದೆ. ಜೂನ್ 21ಕ್ಕೆ ಅರ್ಧದಿನ ಶಾಲೆಗಳಿಗೆ ರಜೆಯನ್ನು ಘೋಷಿಸಿರುವುದರಿಂದ ಆ ದಿನದ ಬದಲು ಜೂನ್ 25ರಂದು ಶನಿವಾರ ಪೂರ್ಣಪ್ರಮಾಣದ ಶಾಲೆಯನ್ನು ನಡೆಸಲು ಶಿಕ್ಷಣ ಇಲಾಖೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ತಾಯಿಯ ಮಾತು ಕೇಳದೇ ನೀರಿಗೆ ಈಜಾಡಲು ಇಳಿದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಡ್ಡಗೆರೆ ಗ್ರಾಮದ ಶ್ರೀ ವೀರನಾಗಮ್ಮ ಕಲ್ಯಾಣಿಯಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ಹೋಬಳಿಯ ಲಕ್ಕನಹಳ್ಳಿ ಗ್ರಾಮದ ವೀರನಾಗಣ್ಣ ಎಂಬವರ 14 ವರ್ಷ ವಯಸ್ಸಿನ ಪುತ್ರ ತರುಣ್ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ವಡ್ಡಗೆರೆಯ ಶ್ರೀವೀರನಾಗಮ್ಮ ದೇವಿ ದರ್ಶನಕ್ಕೆ ತನ್ನ ತಾಯಿ ಜೊತೆಗೆ ಆಗಮಿಸಿದ್ದ ಬಾಲಕ, ತಾಯಿ ನೀರಿಗೆ ಇಳಿಯ ಬೇಡ ಎಂದರೂ ಕೇಳದೇ ನೀರಿಗೆ ಧುಮುಕಿದ್ದು, ಇದಾದ ಬಳಿಕ ನೀರಿನಿಂದ ಮೇಲೆ ಬರಲಾಗದೇ, ತಾಯಿಯ ಕಣ್ಣೆದುರೇ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ, ತುರ್ತುವಾಹನ ಮತ್ತು ತಹಶೀಲ್ದಾರ್ ನಾಹೀದಾ ಜಂ ಜಂ ಬೇಟಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ  ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮೇಕೆ ಹಾಗೂ ಕುರಿ ಕಾಯುತ್ತಿದ್ದ  ಹೊಸಬೀರ್ವಾಳು ಗ್ರಾಮದ  ಸುಮಾರು 45 ವರ್ಷದ ಸಿದ್ದರಾಜು ಎಂಬುವವರು ನುಗು ಜಲಾಶಯದ ಹಿನ್ನೀರಿನಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಸುಮಾರು 20 ರಿಂದ 25 ಮೇಕೆ ಹಾಗೂ ಕುರಿ ಸಾಕಾಣಿಕೆ ಮಾಡಿಕೊಂಡಿದ್ದ ಇವರು ಪ್ರತಿ ನಿತ್ಯ ಜಾನುವಾರುಗಳಿಗೆ ಮೇವು ಒದಗಿಸಲು ಪಾಳು ಬಿದ್ದಿರುವ ಜಮೀನು ಹಾಗೂ ಸರ್ಕಾರಿ ಖರಾಬು ಸ್ಥಳಗಳನ್ನು ಅವಲಂಬಿಸಿದ್ದರು. ಪ್ರತಿನಿತ್ಯ ಸಿದ್ದರಾಜು ರವರು ತಮ್ಮ ಪತ್ನಿಯ ಜೊತೆ ಕಾಯಕದಲ್ಲಿ ತೊಡಗಿಕೊಂಡಿದ್ದರು ಆದರೆ ಆ ದಿನ ಅವರ ಪತ್ನಿ ಬೇರೆ ಕೆಲಸದ ನಿಮಿತ್ತ ಹುಲ್ಲಹಳ್ಳಿ ಗ್ರಾಮಕ್ಕೆ ಹೋಗಿದ್ದರು. ಹಾಗಾಗಿ ಅಂದು ಅವರೊಡನೆ ಅವರ ಮೊಮ್ಮಗನಾದ ಯಶವಂತ ಜೊತೆಯಲ್ಲಿದ್ದರು. ಸ್ನಾನ ಮಾಡಿ ಬರುತ್ತೇನೆ ದಡದಲ್ಲಿಯೇ ಕುಳಿತಿರು ಎಂದು ಮೊಮ್ಮಗನಿಗೆ ಹೇಳಿ ನೀರಿಗೆ ಇಳಿದಿದ್ದಾರೆ. ಅಷ್ಟರಲ್ಲೇ ಅವರು ಮದ್ಯ ಸೇವಿಸಿದ ಕಾರಣ ನೀರಿನಲ್ಲಿ ಜಾರಿ ಬಿದ್ದಿದ್ದಾರೆ. ಸುಮಾರು 10 ರಿಂದ 15 ನಿಮಿಷಗಳ ನಂತರವೂ ಇವರು ಮೇಲೆ ಬರದಿದ್ದನ್ನು ಗಮನಿಸಿದ ಅವರ ಮೊಮ್ಮಗ ಗ್ರಾಮದ ಬಸ್…

Read More

ಲಖನೌ: ಶ್ರೀರಾಮ ಜನ್ಮಭೂಮಿ ಆವರಣದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆದ ದೇಣಿಗೆ ಅಭಿಯಾನದಲ್ಲಿ ದೇವಾಲಯದ ಟ್ರಸ್ಟ್‌ ನ ಬೊಕ್ಕಸಕ್ಕೆ ಬರೋಬ್ಬರಿ 5,457 ಕೋಟಿ ರೂ. ಬಂದಿತ್ತು. ಆದರೆ ಅಖಿಲ ಭಾರತ ಮಟ್ಟದಲ್ಲಿ ದೇಣಿಗೆ ಅಭಿಯಾನದ ಮೇಲ್ವಿಚಾರಣೆ ನಡೆಸುತ್ತಿರುವ ತಂಡದ ತಾತ್ಕಾಲಿಕ ವರದಿಯು ಪ್ರಕಾರ 22 ಕೋಟಿ ಮೌಲ್ಯದ ಚೆಕ್‌ಗಳು ಬೌನ್ಸ್ ಆಗಿವೆ. ಮತ್ತೊಂದೆಡೆ, ಟ್ರಸ್ಟ್ ಖಾತೆಗಳ ಜಿಲ್ಲಾವಾರು ಲೆಕ್ಕಪರಿಶೋಧನೆ ನಡೆಯುತ್ತಿರುವುದರಿಂದ ಇದುವರೆಗೆ ಸಂಗ್ರಹಿಸಲಾದ ಒಟ್ಟು ಮೊತ್ತದ ಅಂಕಿಅಂಶವು ತಾತ್ಕಾಲಿಕವಾಗಿದೆ. ಟ್ರಸ್ಟ್ ಮೂಲಗಳ ಪ್ರಕಾರ, ಬೌನ್ಸ್ ಆಗಿರುವ ಚೆಕ್‌ಗಳನ್ನು ಪ್ರತ್ಯೇಕಿಸಿ ಹೊಸ ಆಡಿಟ್ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ. ಇನ್ನು ಚೆಕ್‌ಗಳು ಬೌನ್ಸ್ ಆದ ಕಾರಣ ತಿಳಿದುಕೊಳ್ಳಲು ಪರಿಶೀಲಿಸಲಾಗುತ್ತಿದೆ. ‘ತಾಂತ್ರಿಕ ಕಾರಣಗಳಿಂದಾಗಿ ಬೌನ್ಸ್ ಆಗಿರುವ ಚೆಕ್‌ಗಳನ್ನು ಸಂಬಂಧಪಟ್ಟ ಬ್ಯಾಂಕ್‌ನ ಒಪ್ಪಿಗೆ ಪಡೆದ ನಂತರ ಮತ್ತೆ ಪ್ರತಿನಿಧಿಸಲಾಗುತ್ತದೆ’ ಎಂದು ಟ್ರಸ್ಟ್‌ನ ಸದಸ್ಯರೊಬ್ಬರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಬೆಂಗಳೂರು: ಮೋದಿ ಆಶೀರ್ವಾದವಿದ್ದರೆ ನವ ಕರ್ನಾಟಕದ ಕನಸು ನನಸಾಗುವುದರಲ್ಲಿ ಅನುಮಾನವೇ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕೊಮ್ಮಘಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿಮಾತನಾಡಿದ ಅವರು  ನಾಡಗೀತೆ ಉಲ್ಲೇಖಿಸಿ ಮಾತನಾಡಿ, ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೇ  ಎಂಬ ವಾಕ್ಯದಲ್ಲಿ ನಾವು ನಂಬಿಕೆ ಹೊಂದಿದ್ದೇವೆ ಎಂದರು. ಪ್ರಧಾನಿಯವರ ನವಭಾರತದ ಕಲ್ಪನೆಗೆ ನವ ಕರ್ನಾಟಕ ನಿರ್ಮಾಣದ ಮೂಲಕ ನಾವು ಕೈ ಜೋಡಿಸುತ್ತಿದ್ದೇವೆ. ಮೋದಿಯವರ ಆಶೀರ್ವಾದ ಇದ್ದರೆ ನವ ಕರ್ನಾಟಕದ ಕನಸು ಈಡೇರುತ್ತದೆ ಎಂದು ಅಭಿಪ್ರಾಯಪಟ್ಟರು. ಪ್ರಧಾನಿಯವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮುಂಬೈನ ನೇವಲ್ ಡಾಕ್‌ಯಾರ್ಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದಕ್ಕಾಗಿ ಜೂನ್ 18, 2022 ರಂದು ಜಾಬ್ ನ್ಯೂಸ್ ನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು 8ನೇ ಜುಲೈ 2022 ರೊಳಗೆ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬೇಕು. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 338 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದಕ್ಕಾಗಿ, ಐಟಿಐ ಅರ್ಹತೆ / ಫ್ರೆಶರ್ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಎಲೆಕ್ಟ್ರಿಷಿಯನ್, ಎಲೆಕ್ಟ್ರೋಪ್ಲೇಟರ್, ಮೆರೈನ್ ಎಂಜಿನ್ ಫಿಟ್ಟರ್, ಫೌಂಡ್ರಿ ಮ್ಯಾನ್, ಪ್ಯಾಟರ್ನ್ ಮೇಕರ್, ಮೆಕ್ಯಾನಿಕ್ ಡೀಸೆಲ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕ ಆನ್‌ ಲೈನ್ ಅರ್ಜಿಯ ಪ್ರಾರಂಭ ದಿನಾಂಕ – 21 ಜೂನ್ 2022 ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್ ಅಪ್ಲಿಕೇಶನ್‌ಗೆ ಕೊನೆಯ ದಿನಾಂಕ – 8 ಜುಲೈ 2022 ಶೈಕ್ಷಣಿಕ ಅರ್ಹತೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ 10 ನೇ ಮತ್ತು ಐಟಿಐ…

Read More

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ನಂದಿಬೆಟ್ಟ ಒಂದು ಸುಂದರ ಪ್ರವಾಸಿ ತಾಣ. ಇಲ್ಲಿ ವೀಕೆಂಡ್ ಬಂದ್ರೆ ಸಾಕು ಪ್ರವಾಸಿಗರ ದಂಡೇ ಇರುತ್ತೆ. ಫ್ಯಾಮಿಲಿ, ಕಾಲೇಜು ಸ್ಟೂಡೆಂಟ್ಸ್, ವಿದೇಶೀಗರು ಇಲ್ಲಿಗೆ ಬರುತ್ತಾರೆ. ಇದೇ ರೀತಿ ಬೆಂಗಳೂರಿನಿಂದ ಯುವಕರಿಬ್ಬರು ನಂದಿಬೆಟ್ಟದಲ್ಲಿನ ಸನ್ ರೈಸ್ ನೋಡುವ ಆಸೆಯಿಂದ ಬಂದ್ರು. ಆದರೆ ಜಾಲಿ ರೈಡ್ ನೆಪದಲ್ಲಿ ಸನ್ ರೈಸ್ ನೋಡುವ ಆಸೆಯಿಂದ ಬಂದ ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮತ್ತೋರ್ವ ಯುವಕನಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿ ಆಗಿದೆ. ನಂದಿಬೆಟ್ಟದ ತುದಿಯಿಂದ ಸನ್ ರೈಸ್ ನೋಡುವ ಆಸೆಯಿಂದ ಮಧ್ಯರಾತ್ರಿಯಿಂದಲೇ ನಂದಿಬೆಟ್ಪಕ್ಕೆ ಯುವಕರು ಲಗ್ಗೆ ಇಡ್ತಾರೆ. ಇದೇ ಆಸೆಯಲ್ಲಿ ಬಂದ ಬೆಂಗಳೂರಿನ ಶ್ರೀನಗರದ ಯುವಕ ಬೈಕ್ ಅಪಘಾತದಲ್ಲಿ ತನ್ನ ಪ್ರಾಣವನ್ನ ಕಳೆದುಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಣಿವೇಪುರದಲ್ಲಿ ನಿನ್ನೆ ಮುಂಜಾನೆ 5:30ರ ಸಮಯದಲ್ಲಿ ನಡೆದ ಅಪಘಾತದಲ್ಲಿ 26 ವರ್ಷದ ರಾಕೇಶ್ ಸ್ಥಳದಲ್ಲೇ ಪ್ರಾಣ ಕಳೆದು ಕೊಂಡ್ರೆ, ಸುನಿಲ್ ಎಂಬ ಯುವಕ ಗಂಭೀರವಾಗಿ ಗಾಯಾಗೊಂಡು…

Read More