Subscribe to Updates
Get the latest creative news from FooBar about art, design and business.
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
- ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
Author: admin
ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ 6 ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರತ್ನಲಂ ಜಿಲ್ಲೆಯಲ್ಲಿ ಸಂಭವಿಸಿದೆ. ರಟ್ಲಂ ಜಿಲ್ಲೆಗೆ 35 ಕಿ.,ಮೀ. ದೂರದ ಸತ್ರುದ್ರ ಬಳಿಯ ರಟ್ಲಂ ಲೆಬ್ಡ್ ರಸ್ತೆಯಲ್ಲಿ ಭಾನುವಾರ ಈ ದುರ್ಘಟನೆ ಸಂಭವಿಸಿದೆ. ಅಪಘಾತದಿಂದ ಸಂಚಾರಿ ದಟ್ಟಣೆ ಉಂಟಾಗಿದೆ. ರಟ್ಲಂನಿಂದ ಬದ್ವಾರ್ ಗೆ ಹೋಗುತ್ತಿದ್ದ ಟ್ರಕ್ ಟಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದುಕೊಂಡು ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದಿದೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಶಕ್ತೀಕರಣ ನಿರ್ದೇಶನಾಲಯದಿಂದ ಆಯೋಜಿಸಿದ್ದ ವಿಶ್ವಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿಗೆ ತರಲಿದ್ದು, 5 ಲಕ್ಷ ರೂ.ವರೆಗಿನ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ. ಅಂಗವಿಕಲರು ಯಶಸ್ವಿಯಾಗಿ ಬದುಕು ನಡೆಸಲು ಸರಕಾರ ನಿರ್ಮಿಸುವ ಮನೆಗಳಲ್ಲಿ ಶೇ. 3ರಷ್ಟು ಮೀಸಲಾತಿ ನೀಡಲಾಗುವುದು. ಬುದ್ಧಿಮಾಂದ್ಯ ಮಕ್ಕಳಿಗೆ ವರ್ಕ್ ಶಾಪ್ ಸ್ಥಾಪಿಸಲು ಸರಕಾರ ಬದ್ಧವಾಗಿದೆ. ಜತೆಗೆ ಅಂಗ ವಿಕಲರಿಗೆ ಮಾ. 31ರೊಳಗೆ ಎರಡು ಸಾವಿರ ವಿದ್ಯುತ್ಛಕ್ತಿಚಾಲಿತ ಟ್ರೈಸಿಕಲ್ ನೀಡಲಾಗುತ್ತದೆ. ಅದಕ್ಕಾಗಿ ಈಗಾಗಲೇ 15 ಕೋಟಿ ರೂ. ನೀಡ ಲಾಗಿದ್ದುಎಂದು ಬೊಮ್ಮಾಯಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರ ಸಚಿವರು ಪ್ರವೇಶಿಸುವುದಕ್ಕೆ ಬಿಡುವುದಿಲ್ಲ. ಮಹಾರಾಷ್ಟ್ರ ಸಚಿವರು ಭಯೋತ್ಪಾದನೆಗೆ ಸೇರಿದವರಾಗಿದ್ದಾರೆ. ಅಂತಹ ರಾಷ್ಟ್ರ ದ್ರೋಹಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕಕ್ಕೆ ಪ್ರವೇಶಿಸಲು ಬಿಡುವುದಿಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 6ರಂದು ಬೆಂಗಳೂರಿನಿಂದ 100 ವಾಹನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿಗೆ ಆಗಮಿಸಲಿದ್ದಾರೆ. ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರುವುದಕ್ಕೆ ಜಿಲ್ಲಾಡಳಿತ ಅವಕಾಶ ಕೊಟ್ಟರೂ ನಾವು ಕೊಡುವುದಿಲ್ಲ. ಬೆಳಗಾವಿ ಗಡಿಯಲ್ಲಿ ಸಚಿವರನ್ನು ತಡೆಯುವ ಕೆಲಸ ಮಾಡುತ್ತೇವೆ ಎಂದರು. ಮಹಾರಾಷ್ಟ್ರ ಸಚಿವರು ಭಯೋತ್ಪಾಕದ ಕುಲಕ್ಕೆ ಸೇರಿದವರು. ಭಯೋತ್ಪಾದನೆ ಉಂಟು ಮಾಡುವಂಕ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಅಂತಹ ರಾಷ್ಟ್ರದ್ರೋಹಿಗಳು ಕರ್ನಾಟಕ ಪ್ರವೇಶಿಸುವುದು ಬೇಡ. ಹೀಗಾಗಿ ಗಡಿಯಲ್ಲೇ ಅವರನ್ನು ತಡೆಯುವಂತೆ ಕೆಲಸವನ್ನು ನಮ್ಮಕರವೇ ಕಾರ್ಯಕರ್ತರು ಮಾಡಲಿದ್ದಾರೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಾಂತಾರ ಚಿತ್ರದ ‘ವರಾಹ ರೂಪಂ’ಹಾಡು ಯೂಟ್ಯೂಬ್ನಲ್ಲಿ ಪ್ರತ್ಯಕ್ಷವಾಗಿದೆ. ಈ ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಬಳಿಕ ಹಾಡನ್ನು ಪ್ರಸಾರ ಮಾಡದಂತೆ ಕೇರಳದ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿತ್ತು. ಹಾಗಾಗಿ ಯೂಟ್ಯೂಬ್, ಮ್ಯೂಸಿಕ್ ಆ್ಯಪ್ಗಳಾದ ಸಾವನ್ ಮೊದಲಾದ ಪ್ಲಾಟ್ಫಾರ್ಮ್ಗಳಿಂದ ಈ ಹಾಡನ್ನು ಡಿಲಿಟ್ ಮಾಡಲಾಗಿತ್ತು. ವರಾಹ ರೂಪಂ ಹಾಡು ಕಾನೂನು ಹೋರಾಟದಲ್ಲಿ ಕಾಂತಾರ ಚಿತ್ರಕ್ಕೆ ಗೆಲುವು ಸಿಕ್ಕಿದೆ. ವರಾಹ ರೂಪಂ ಹಾಡಿನ ಕುರಿತು ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಇದಕ್ಕೂ ಮುನ್ನ ’ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್ಫಾರ್ಮ್ಗಳಲ್ಲಿ ಒಪ್ಪಿಗೆ ಇಲ್ಲದೆ ಬಳಸಬಾರದು ಎಂದು ಕೇರಳದ ಕೋರ್ಟ್ ಆದೇಶ ಹೊರಡಿಸಿತ್ತು. ಚಿತ್ರತಂಡವು ‘ವರಾಹ ರೂಪಂ’ ಹಾಡನ್ನು ಚಿತ್ರಮಂದಿರ, ಯೂಟ್ಯೂಬ್ನ ಹೊಂಬಾಳೆ ಫಿಲಂಸ್ನ ಚಾನಲ್, ಮ್ಯೂಸಿಕ್ ಆ್ಯಪ್ಗಳಾದ ಸಾವನ್ ಮುಂತಾದ ಕಡೆಗಳಿಂದ ಡಿಲಿಟ್ ಮಾಡಿತ್ತು. ಕಾಂತಾರ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಡಿ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿದ್ದು,…
ಪಾವಗಡ : ರಾಜ್ಯದಲ್ಲಿ 2023 ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಾವಗಡ ತಾಲೂಕು ಸಮಗ್ರ ಅಭಿವೃದ್ಧಿಗೆ ಹಾಗೂ ಆರ್ಥಿಕವಾಗಿ ಸದೃಢವಾಗಲು ಶ್ರಮಿಸುತ್ತೇವೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದರು. ಪಾವಗಡ ಪಟ್ಟಣದ ಮುಖಂಡ ತಿಮ್ಮಾರಾಜುರವರ ಮನೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ ನಂತರ ತುಮಕೂರು ರಸ್ತೆಯಲ್ಲಿರುವ ಕನಕದಾಸರ ಪ್ರತಿಮೆಗೆ 42 ಅಡಿವುಳ್ಳ ಬೃಹತ್ ಆಕಾರದ ಕಂಬಳಿ ಹಾರ ಹಾಕಿ ನಂತರ ಶನೇಶ್ವರ ಸರ್ಕಲ್ ಸಾರ್ವಜನಿಕ ಉದ್ದೇಶ ಮಾತನಾಡಿದ ಅವರು ಈ ಭಾಗದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಎಂ. ತಿಮ್ಮರಾಯಪ್ಪ ಅವರಿಗೆ ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ರಚಿಸಲು ನಿಮ್ಮೆಲ್ಲರ ಆಶೀರ್ವಾದ ಮುಖ್ಯ ಎಂಬುದಾಗಿ ತಿಳಿಸಿದರು. ಪಾವಗಡ ಘಟಕ ಸರ್ಕಾರಿ ನೌಕರರು ಮಾಜಿ ಮುಖ್ಯಮಂತ್ರಿಗಳಿಗೆ ಹೆಚ್.ಡಿ.ಕುಮಾರ್ ಸ್ವಾಮಿಯವರಿಗೆ ಒ.ಪಿ.ಎಸ್.ವಜಾ ಗೊಳಿಸಲು ಮನವಿ ಪತ್ರ ಸಲ್ಲಿಸಿದರು ನಂತರ ನಮ್ಮ ಸರ್ಕಾರ ಬಂದ ತಕ್ಷಣವೇ ನಿಮ್ಮ ಸಮಸ್ಯೆ ಬಗ್ಗೆ ಹರಿಸುವುದಾಗಿ ಆಶ್ವಾಸನೆ ನೀಡಿದರು. ಈ ಭಾಗದಲ್ಲಿ ಹದಿನೈದು ಸಾವಿರ ಕುಟುಂಬಗಳಿಗೆ 82 ಕೋಟಿ ಸಾಲ ಮನ್ನಾ…
ಆಂಟೋನಿ ಬೇಗೂರು 1971 ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಭಾರತೀಯ ನೌಕಾಪಡೆಯು ಪ್ರಮುಖ ಪಾತ್ರ ವಹಿಸಿತು ಮತ್ತು ಆಪರೇಷನ್ ಟ್ರೈಡೆಂಟ್ ಅನ್ನು ಪ್ರಾರಂಭಿಸಿತು. ಈ ದಾಳಿಯ ನೆನಪಿಗಾಗಿ, ಪ್ರತಿ ವರ್ಷ ಡಿಸೆಂಬರ್ 4 ರಂದು ನೌಕಾಪಡೆಯ ದಿನವನ್ನು ಆಚರಿಸಲಾಗುತ್ತದೆ. ನೌಕಾಪಡೆಯ ದಿನದ ಇತಿಹಾಸ, ಅದರ ಮಹತ್ವ ಮತ್ತು ಅದನ್ನು ಹೇಗೆ ಆಚರಿಸಲಾಗುತ್ತದೆ. ಭಾರತೀಯ ನೌಕಾಪಡೆಯ ಪಾತ್ರ ಮತ್ತು ಸಾಧನೆಗಳನ್ನು ಗುರುತಿಸಲು ಡಿಸೆಂಬರ್ 4 ಅನ್ನು ಆಚರಿಸಲಾಗುತ್ತದೆ. ಈ ದಿನವು 1971 ರ ಇಂಡೋ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಪಾಕಿಸ್ತಾನದ ವಿರುದ್ಧ ಆಪರೇಷನ್ ಟ್ರೈಡೆಂಟ್ ಅನ್ನು ಪ್ರಾರಂಭಿಸುವುದನ್ನು ಸ್ಮರಿಸುತ್ತದೆ ಮತ್ತು ಭಾರತೀಯ ನೌಕಾಪಡೆಯ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸುತ್ತದೆ. ಭಾರತೀಯ ನೌಕಾಪಡೆಯು ಸಮತೋಲಿತ ಮೂರು ಆಯಾಮದ ಶಕ್ತಿಯಾಗಿದ್ದು ಅದು ಸಮುದ್ರದ ಮೇಲೆ ಮತ್ತು ಕೆಳಗೆ ಕಾರ್ಯನಿರ್ವಹಿಸುತ್ತದೆ ಮತ್ತು ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಸಮರ್ಥವಾಗಿದೆ. ಇದು ಹಿಂದೂ ಮಹಾಸಾಗರ ಪ್ರದೇಶದಲ್ಲಿ ತನ್ನ ಪರಿಸ್ಥಿತಿಗಳನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ನೌಕಾಪಡೆಯ ದಿನದ 2020 ರ ಥೀಮ್…
ಹಿಂದೂಗಳು ಮುಸ್ಲಿಮರಂತೆ ಸಣ್ಣ ವಯಸ್ಸಿನಲ್ಲೇ ಮದುವೆಯಾಗಬೇಕು. ಆಗ ಹಿಂದೂಗಳ ಸಂಖ್ಯೆಯೂ ಹೆಚ್ಚಾಗುತ್ತದೆ ಎಂದು ಅಸ್ಸಾಂನ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಹೇಳಿದ್ದಾರೆ. ಮುಸ್ಲಿಂ ಪುರುಷರು 20ರಿಂದ 22 ವರ್ಷಕ್ಕೆ ಮದುವೆಯಾಗುತ್ತಾರೆ. ಮುಸ್ಲಿಂ ಮಹಿಳೆಯರು 18ಕ್ಕೆ ಮದುವೆಯಾಗುತ್ತಾರೆ. ಆದರೆ ಹಿಂದೂಗಳು ಮದುವೆಗೆ ಮೊದಲು ಒಬ್ಬರು, ಎರಡು ಅಥವಾ ಮೂರು ಅಕ್ರಮ ಪತ್ನಿಯರನ್ನು ಇಟ್ಟುಕೊಳ್ಳುತ್ತಾರೆ. ಮಕ್ಕಳಿಗೆ ಜನ್ಮ ನೀಡುವುದಿಲ್ಲ. ಆ ಮಹಿಳೆಯರೊಂದಿಗೆ ಎಂಜಾಯ್ ಮಾಡಿ ಆಮೇಲೆ ಬೇರೆ ಮದುವೆಯಾಗುತ್ತಾರೆ. ಇದರಿಂದ ಅವರ ಜನಸಂಖ್ಯೆ ಹೆಚ್ಚಾಗುತ್ತಿಲ್ಲ ಎನ್ನುವ ಮೂಲಕ ಎಐಯುಡಿಎಫ್ ಮುಖ್ಯಸ್ಥ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು ಭಾರತ ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿದೆ ಎಂಬ ಹೇಳಿಕೆಗಳ ಬಗ್ಗೆ ಮಾತನಾಡಿದ ಎಐಯುಡಿಎಫ್ ಮುಖ್ಯಸ್ಥ ಅಜ್ಮಲ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 40 ವರ್ಷದ ನಂತರ ಹಿಂದೂಗಳು ಪೋಷಕರ ಒತ್ತಡಕ್ಕೆ ಮದುವೆಯಾಗುತ್ತಾರೆ. ಅವರು ಮಕ್ಕಳನ್ನು ಪಡೆಯುವ ಸಾಮರ್ಥ್ಯ ಹೊಂದಿರುತ್ತಾರೆ ಎಂದು ಹೇಗೆ ನಿರೀಕ್ಷಿಸಬಹುದು? ಇದೇ ಕಾರಣದಿಂದ…
ಬೆಂಗಳೂರಿನ ಜನರಿಗೆ ಚಿರತೆ ಭಯ ಇನ್ನು ಕಡಿಮೆಯಾಗಿಲ್ಲ, 2 ದಿನವಾದರೂ ಪ್ರತ್ಯಕ್ಷವಾಗದ ಚಿರತೆಗಳು ಸಿಲಿಕಾನ್ ಸಿಟಿ ಜನರ ನಿದ್ದೆಗೆಡಿಸಿವೆ. ಅರಣ್ಯಾಧಿಕಾರಿಗಳು ಬೋನು ಹಾಕಿ 2 ದಿನದಿಂದ ಹೊಂಚು ಹಾಕಿ ಕಾದು ಕುಳಿತಿದ್ದರೂ ಚಿರತೆಗಳು ಮಾತ್ರ ಸೆರೆಯಾಗಿಲ್ಲ. ಚಿರತೆಗಳು ಪ್ರತ್ಯಕ್ಷವಾಗದ ಕಾರಣ ತುರಹಳ್ಳಿ ಸುತ್ತಮುತ್ತಲ ಜನತೆಗೆ ಆತಂಕ ಹೆಚ್ಚಾಗಿದೆ. ಕೂಂಬಿಂಗ್ನಲ್ಲಿ ಚಿರತೆ ಹೆಜ್ಜೆ ಗುರುತಷ್ಟೇ ಪತ್ತೆಯಾಗಿದ್ದು, ಚಿರತೆಗಳಿಗಾಗಿ 2 ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ತಲಾಶ್ ನಡೆಸುತ್ತಿದ್ದಾರೆ. ಚಿರತೆ ಭಯದಿಂದ ತುರಹಳ್ಳಿ ಸುತ್ತಮುತ್ತಲಿನ ಜನರಿಗೆ ವಾಕಿಂಗೂ ಇಲ್ಲ, ಶಾಪಿಂಗೂ ಇಲ್ಲ ಎಂಬಂತಾಗಿದೆ. ರಾತ್ರಿ ಹೊತ್ತು ಒಬ್ಬೊಬ್ಬರೆ ಓಡಾಡಲು ಹೆದರುತ್ತಿದ್ದ ಜನ ಈಗ ಚಿರತೆ ಕಾಟದಿಂದ ಬೆಳಿಗ್ಗೆಯೂ ಕೂಡ ಹೆದರುತ್ತಿದ್ದಾರೆ. ಈ ಕಾರಣದಿಂದ ದ್ವಿಚಕ್ರ ವಾಹನ ಸಂಚಾರವೂ ಕೂಡ ವಿರಳವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಬೂತ್ ಅಧ್ಯಕ್ಷ ರಾಜ್‌ಕುಮಾರ್ ಮನ್ನಾ ಅವರ ಮನೆಯಲ್ಲಿ ಬಾಂಬ್ ಸ್ಫೋಟಗೊಂಡು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರಲ್ಲಿ ಒಬ್ಬರನ್ನು ಸ್ಥಳೀಯ ತೃಣಮೂಲ ಮತಗಟ್ಟೆ ಅಧ್ಯಕ್ಷ ರಾಜ್‌ಕುಮಾರ್ ಮನ್ನಾ ಎಂದು ಗುರುತಿಸಲಾಗಿದೆ. ಕಚ್ಚಾ ಬಾಂಬ್ ತಯಾರಿಕೆ ವೇಳೆ ಸ್ಫೋಟ ಸಂಭವಿಸಿದೆ ಎಂದು ಬಿಜೆಪಿ ಆರೋಪಿಸಿದೆ. ನವೆಂಬರ್ 6ರಂದು ಪಶ್ಚಿಮ ಬಂಗಾಳದ ದೇಗಂಗಾದಲ್ಲಿ ಟಿಎಂಸಿ ನಾಯಕನ ಮನೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಬಾಂಬ್ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದರು. ಕೆಲವು ಕಾರ್ಮಿಕರು ಸ್ಥಳೀಯ ಟಿಎಂಸಿ ನಾಯಕರ ನಿರ್ಮಾಣ ಹಂತದ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ಬಾಂಬ್‌ಗಳನ್ನು ಮನೆಯ ಮೆಟ್ಟಿಲುಗಳ ಕೆಳಗೆ ಇಡಲಾಗಿತ್ತು. ಕಾರ್ಮಿಕರು ಬಾಂಬ್‌ಗಳನ್ನು ಸ್ಪರ್ಶಿಸಿದ ತಕ್ಷಣ ಭಾರೀ ಶಬ್ದದೊಂದಿಗೆ ಸ್ಫೋಟವಾಗಿದೆ ಎನ್ನಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸ್ಕ್ಯಾನಿಂಗ್ ವರದಿ ತಪ್ಪು ಕೊಟ್ಟು ಮಗುವಿನ ಬುದ್ಧಿಮಾಂದ್ಯತೆಗೆ ಕಾರಣವಾದ ಡಯಾಗ್ನೋಸ್ಟಿಕ್ ಸೆಂಟರ್‌ಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 15 ಲಕ್ಷ ರೂ. ದಂಡ ವಿಧಿಸಿದೆ. ಮದ್ದೂರಿನ ಡಿ2 ಡಯಾಗ್ನೋಸ್ಟಿಕ್ ಸೆಂಟರ್‌ಗೆ ವೇದಿಕೆ 15 ಲಕ್ಷ ರೂ. ದಂಡ ಹಾಕಿ ಆದೇಶ ಹೊರಡಿಸಿದೆ. ಗೊರವನಹಳ್ಳಿ ಗ್ರಾಮದ ಸಿಂಧೂಶ್ರೀ ಗರ್ಭಿಣಿಯಾಗಿದ್ದಾಗ 20ನೇ ವಾರದ ಸ್ಕ್ಯಾನಿಂಗ್ ಪರೀಕ್ಷೆ ಮಾಡಿಸುವಂತೆ ವೈದ್ಯರು ಹೇಳಿದ್ದರು. ಡಿ2 ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಪರೀಕ್ಷೆ ಮಾಡಿಸಿದ್ದರು. ಭ್ರೂಣದ ಅಸಹಜ ಬೆಳವಣಿಗೆ ಪತ್ತೆ ಹಚ್ಚದೆ ತಪ್ಪು ಸ್ಕ್ಯಾನಿಂಗ್ ವರದಿಯನ್ನು ವೈದ್ಯರು ನೀಡಿದ್ದರು. ಇತ್ತ ಸ್ಕ್ಯಾನಿಂಗ್ ವರದಿ ಆಧರಿಸಿ ಸಿಂಧೂಶ್ರೀಗೆ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದರು. ಮಂಡ್ಯ ಮಿಮ್ಸ್‌ನಲ್ಲಿ ಸಿಂಧೂ ಶ್ರೀಗೆ ಹೆರಿಗೆಯಾಗಿತ್ತು. ಅಸಹಜವಾಗಿ ಬೆಳವಣಿಗೆಯಾಗಿದ್ದ ಮಗು ಕಂಡು ಪೋಷಕರು ಕಂಗಲಾಗಿದ್ದರು. ಗರ್ಭಿಣಿಯಾದ 20ನೇ ವಾರ ಮಗುವಿನ ಹೃದಯದ ಬಡಿತ, ಕಿಡ್ನಿ, ಮೆದುಳಿನ ಬೆಳವಣಿಗೆ ಬಗ್ಗೆ ಸ್ಕ್ಯಾನಿಂಗ್‍ನಲ್ಲಿ ಪತ್ತೆ ಹಚ್ಚಲಾಗುತ್ತೆ. ಆ ವೇಳೆ ಮಗುವಿನ ಅಸಹಜ ಬೆಳವಣಿಗೆ ಕಂಡು ಬಂದರೆ…