Subscribe to Updates
Get the latest creative news from FooBar about art, design and business.
- ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
- ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
- ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
- ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
- ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
- ಹುಯಿಲ್ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
- ತುಮಕೂರು: ಗಾಜಿನ ಮನೆಯಲ್ಲಿ ‘ಸಿರಿಧಾನ್ಯ ಖಾದ್ಯಗಳ’ ಘಮಲು!
- 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್ ಗೆ ಪದೋನ್ನತಿ
Author: admin
ಶ್ರೀನಗರ: ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಡ್ರೋನ್ ಗಳು ಮತ್ತು ಕ್ಷಿಪಣಿಗಳ ಮೂಲಕ ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಲು ಪಾಕಿಸ್ತಾನ ವಿಫಲ ಪ್ರಯತ್ನ ಮಾಡಿದ ನಂತರ ಸರಣಿ ಸ್ಫೋಟಗಳು ಮತ್ತು ಸೈರನ್ ಗಳು ಕೇಳಿಬಂದವು. ನಸುಕಿನ ಜಾವ 3:50 ರಿಂದ 4:45 ರ ನಡುವೆ ಕೇಳಿದ ಸ್ಫೋಟಗಳಿಂದ ಜಮ್ಮು ನಗರದ ಕೆಲವು ಭಾಗಗಳಲ್ಲಿ ಕತ್ತಲೆಯಾಗಿದ್ದು, ಆಕಾಶದಲ್ಲಿ ಯುದ್ಧದ ಸನ್ನಿವೇಶ ಗೋಚರವಾಯಿತು. ಭದ್ರತಾ ಪಡೆಗಳು ತ್ವರಿತವಾಗಿ ಪ್ರತಿಕ್ರಿಯಿಸಿ ಡ್ರೋಣ್ ಗಳನ್ನು ಹೊಡೆದುರುಳಿಸಿವೆ. ರಕ್ಷಣಾ ಅಧಿಕಾರಿಗಳ ಪ್ರಕಾರ, ಪಾಕಿಸ್ತಾನ ಕಳೆದ ತಡರಾತ್ರಿ ಜಮ್ಮು, ಪಠಾಣ್ಕೋಟ್, ಉಧಂಪುರ ಮತ್ತು ಇತರ ಪ್ರದೇಶಗಳಲ್ಲಿನ ಮಿಲಿಟರಿ ಸ್ಥಾಪನೆಗಳ ಮೇಲೆ ಸಂಘಟಿತ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿವೆ. ಭಾರತೀಯ ಪಡೆಗಳು ವೈಮಾನಿಕ ಬೆದರಿಕೆಗಳನ್ನು ಯಶಸ್ವಿಯಾಗಿ ತಡೆದವು, ಒಳಬರುವ ಸಾಧನಗಳನ್ನು ತಟಸ್ಥಗೊಳಿಸಿದಾಗ ಸ್ಫೋಟಗಳನ್ನು ತೋರಿಸುವ ವೀಡಿಯೊಗಳಿವೆ. ಉರಿಯ ಮೊಹುರಾ ಬಳಿ ಪಾಕಿಸ್ತಾನದ ಶೆಲ್ ವಾಹನಕ್ಕೆ ಡಿಕ್ಕಿ ಹೊಡೆದಾಗ ನರ್ಗಿಸ್ ಬೇಗಂ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಹಫೀಜಾ ಎಂಬ ಮತ್ತೊಬ್ಬ…
ಮಂಡ್ಯ: ಆಪರೇಷನ್ ಸಿಂಧೂರ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಾದ್ಯಂತ ಎಚ್ಚರಿಕೆ ನೀಡಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ. ಭದ್ರತಾ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ನೀಡಿದ ಸೂಚನೆಗಳನ್ನು ಪಾಲಿಸಲಾಗುತ್ತಿದೆ ಎಂದು ಅವರು ಹೇಳಿದರು. ರಾಜ್ಯದ ಅಣೆಕಟ್ಟುಗಳು ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ‘ನಾವು ಎಲ್ಲೆಡೆ ಎಚ್ಚರಿಕೆ ನೀಡಿದ್ದೇವೆ. ಏಕೆಂದರೆ, ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ’ ಎಂದರು. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸ್ಥಳಗಳಲ್ಲಿ ಮಾಕ್ ಡ್ರಿಲ್ ಗಳನ್ನು ನಡೆಸಲಾಗುತ್ತಿದೆ ಮತ್ತು ಕೇಂದ್ರವು ನೀಡಿದ ಸೂಚನೆಗಳನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ತುಮಕೂರು: ಮಹಾನಗರಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಅವರು ಬುಧವಾರ ಪಾಲಿಕೆ ವ್ಯಾಪ್ತಿಯಲ್ಲಿರುವ 4 ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪಾಲಿಕೆಯ ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಆರೋಗ್ಯಾಧಿಕಾರಿ ಹಾಗೂ ಮತ್ತಿತರ ಅಧಿಕಾರಿಗಳ ತಂಡದೊಂದಿಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು ಸ್ವಚ್ಛತೆ, ಮೂಲಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಕ್ಯಾಂಟೀನ್ ನಲ್ಲಿ ಸಾರ್ವಜನಿಕರೊಂದಿಗೆ ಆಹಾರ ಸೇವಿಸುವ ಮೂಲಕ ಆಹಾರದ ಗುಣಮಟ್ಟ ಹಾಗೂ ಶುಚಿ–ರುಚಿಯನ್ನು ಪರಿಶೀಲಿಸಿದರು. ಇತರೆ ಹೋಟೆಲ್ ಗಳಿಗಿಂತ ಭಿನ್ನ ರೀತಿಯಲ್ಲಿ ಕಾಣಿಸುವಂತೆ ಇಂದಿರಾ ಕ್ಯಾಂಟೀನ್ ಗಳನ್ನು ಸೌಂದರ್ಯೀಕರಣಗೊಳಿಸಲಾಗಿದೆ. ಪ್ರಸ್ತುತ ಇರುವ 4 ಇಂದಿರಾ ಕ್ಯಾಂಟೀನ್ಗಳೊಂದಿಗೆ ಶಿರಾಗೇಟ್ ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ಗಳನ್ನು 2 ಹೊಸದಾಗಿ ಅನುಷ್ಠಾನಗೊಳಿಸಲು ಸರ್ಕಾರ ಅನುಮೋದನೆ ನೀಡಿದೆ. ಮುಂದಿನ 2 ವಾರಗಳಲ್ಲಿ ಹೊಸ ಇಂದಿರಾ ಕ್ಯಾಂಟೀನ್ ಗಳಲ್ಲಿ ಉತ್ತಮ ಗುಣಮಟ್ಟದ ಶುಚಿ—ರುಚಿಯಾದ ಆಹಾರ ವಿತರಣೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಇಂದಿರಾ ಕ್ಯಾಂಟೀನ್ ಗಳಲ್ಲಿ ತಿಂಡಿಗೆ 5 ರೂ. ಹಾಗೂ ಊಟಕ್ಕೆ 10 ರೂ.ಗಳ ದರ…
ತುಮಕೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಜಿಲ್ಲೆಯಲ್ಲಿ ಮೇ 5 ರಿಂದ 17ರವರೆಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಪ್ರತೀ ಮನೆಗೆ ಭೇಟಿ ನೀಡಿ ನೈಜ ಮಾಹಿತಿಯನ್ನು ಸಂಗ್ರಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗಣತಿದಾರರಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಶಿಕ್ಷಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಕೋತಿ ತೋಪು ವೃತ್ತದ ಬಳಿ ಸೋಮವಾರ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ–2025ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪರಿಶಿಷ್ಟ ಜಾತಿಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿ–ಗತಿಗಳ ವಾಸ್ತವಾಂಶವನ್ನು ಅರಿಯಲು ರಾಜ್ಯದಾದ್ಯಂತ ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಜಾತಿ ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈಗಾಗಲೇ ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿಯ…
ತುಮಕೂರು: ಜಿಲ್ಲೆಯಲ್ಲಿ ಮಳೆ–ಗಾಳಿಯಿಂದ ಹಾನಿಗೊಳಗಾದ ಮನೆ, ಜಾನುವಾರುಗಳ ಮಾಲೀಕರಿಗೆ 24 ಗಂಟೆಯೊಳಗಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಖಡಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತೀವ್ರ ಮಳೆ-ಗಾಳಿಯಿಂದ ತೋಟ, ಮನೆ ಹಾಗೂ ಜಾನುವಾರುಗಳಿಗೆ ಹಾನಿಯುಂಟಾಗಿರುವ ಬಗ್ಗೆ ಪ್ರಕರಣಗಳು ವರದಿಯಾಗಿವೆ. ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಶೀಘ್ರವೇ ಪರಿಹಾರ ನೀಡಲು ಕ್ರಮಕ್ಕೆ ಮುಂದಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಹಾನಿಗೊಳಗಾಗಿರುವ ಹಾಗೂ ಹಾನಿಗೊಳಗಾಗುವ ಸಂಭಾವ್ಯ ರಸ್ತೆ ಹಾಗೂ ಸೇತುವೆಗಳನ್ನು ಗುರುತಿಸಿ ತಕ್ಷಣವೇ ದುರಸ್ತಿಗೆ ಕ್ರಮ ಕೈಗೊಂಡು ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕ್ರಮಹಿಸಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯುತ್ ತಂತಿಗಳು ಹಾದು ಹೋಗುವ ಮಾರ್ಗದಲ್ಲಿ ಮಳೆಗಾಳಿಗೆ ಬೀಳುವ ಮರಗಳನ್ನು ಗುರುತಿಸಿ ಕೊಂಬೆಗಳನ್ನು ಕತ್ತರಿಸಬೇಕು. ಮಳೆಯಿಂದಾಗಿ ವಿದ್ಯುತ್ ಸಂಪರ್ಕ…
ತುಮಕೂರು: ಜಿಲ್ಲೆಯಲ್ಲಿ ವಿದ್ಯುತ್ ಶಾಕ್ನಿಂದಾಗಿ ನಾಲ್ವರ ಪ್ರಾಣ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಅಗತ್ಯ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತೀವ್ರ ಗಾಳಿ–ಮಳೆಯಿಂದ ಜಿಲ್ಲೆಯಲ್ಲಿ ಸುಮಾರು 560 ವಿದ್ಯುತ್ ಕಂಬಗಳು ಬಿದ್ದಿದ್ದು, ತಕ್ಷಣವೇ ಹಾನಿಗೊಳಗಾದ ಕಂಬಗಳನ್ನು ಬದಲಾಯಿಸುವಂತೆ ಸೂಚನೆ ಬೆಸ್ಕಾಂ ಅಧಿಕಾರಿಗಳಿಗೆ ನೀಡಲಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಹಾನಿಯಾದಲ್ಲಿ ಬೆಸ್ಕಾಂಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ 30 ರಿಂದ 40 ಮಿ.ಮೀ. ಮಳೆಯ ಸಾಧ್ಯತೆ ಇರುವುದರಿಂದ ಮುಂದಿನ 2 ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಸಂದರ್ಭದಲ್ಲಿ ಅತ್ಯಾವಶ್ಯಕ ಸಂದರ್ಭ ಹೊರತುಪಡಿಸಿ ದೂರ ಪ್ರಯಾಣ ಮಾಡದೆ ಮನೆಯಲ್ಲೇ ಇರುವಂತೆ ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಮುಖ್ಯವಾಗಿ ಮಕ್ಕಳ…
ತುಮಕೂರು: ಜಿಲ್ಲೆಯಲ್ಲಿರುವ ಅಂಗನವಾಡಿ, ಶಾಲಾ ಕಟ್ಟಡ, ಆವರಣ ಗೋಡೆ, ಶೌಚಾಲಯ ಸೇರಿದಂತೆ ಶಿಥಿಲಗೊಂಡಿರುವ ಹಾಗೂ ಬಳಕೆಗೆ ಯೋಗ್ಯವಲ್ಲದ ಕಟ್ಟಡಗಳನ್ನು ತೆರವುಗೊಳಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿಯಲ್ಲಿ ಶನಿವಾರ 2025–26ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ತಯಾರಿಕೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿಯ ಅನಿರ್ಬಂಧಿತ ಅನುದಾನ, ಲಿಂಕ್ ಡಾಕ್ಯುಮೆಂಟ್ಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಪಾಲನಾ ಮತ್ತು ಪಶುವೈದ್ಯ ಸೇವೆ, ಕೃಷಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ ಇಲಾಖೆಗಳು ತಮ್ಮ ಇಲಾಖೆಗಳಲ್ಲಿ ಅವಶ್ಯವಿರುವ ಸಿವಿಲ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೇ 9ರೊಳಗಾಗಿ ವಿವರವಾದ ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಬೇಕೆಂದು ಸೂಚಿಸಿದರಲ್ಲದೆ, ವಿವರವಾದ ಕಾಮಗಾರಿಗಳ ಸ್ಥಳ ಪರಿಶೀಲನೆ ಮಾಡಿ…
ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕು ಕಳ್ಳಂಬೆಳ್ಳ ಹೋಬಳಿ ಶೀಬಿ ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದು ಪಡಿಸಲು ಮತ್ತು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಂಡು, ಅಮೂಲ್ಯವಾದ ಅರಣ್ಯ ಭೂಮಿಯನ್ನು ಸಂರಕ್ಷಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದರು. ಶೀಬಿ ಅರಣ್ಯ ಪ್ರದೇಶಕ್ಕೆ ಶನಿವಾರ ಬೆಳಿಗ್ಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದ ಅವರು ಬೆಂಗಳೂರು-ಪುಣೆ ಹೆದ್ದಾರಿಯ ಪಕ್ಕದಲ್ಲೇ ಇರುವ ಈ ಅರಣ್ಯ ಭೂಮಿಗೆ ಭಾರೀ ಮೌಲ್ಯವಿದ್ದು, ಕೆಲವರು ಇದನ್ನು ಕಬಳಿಸಲು ಮತ್ತು ಒತ್ತುವರಿ ಮಾಡಲು ಯತ್ನಿಸುತ್ತಿದ್ದಾರೆ ಹೀಗಾಗಿ ಅರಣ್ಯ ಸಿಬ್ಬಂದಿ ಕಟ್ಟೆಚ್ಚರದಿಂದ ಇರಬೇಕು ಎಂದು ನಿರ್ದೇಶನ ನೀಡಿದರು. ಕೆಲವರು ನ್ಯಾಯಾಲಯದಲ್ಲಿ ಭೂಮಿಯ ಮಾಲೀಕತ್ವದ ಹೋರಾಟ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ಡಿನೋಟಿಫಿಕೇಷನ್ ಆಗದ ಹೊರತು, ಅರಣ್ಯ ಭೂಮಿ ಅರಣ್ಯವಾಗಿಯೇ ಉಳಿಯುತ್ತದೆ ಎಂದು ಹೇಳಿದರಲ್ಲದೆ, ಡಿನೋಟಿಫಿಕೇಷನ್ ಆಗದ ಈ ಅರಣ್ಯದಲ್ಲಿನ ಅಕ್ರಮ ಮಂಜೂರಾತಿ…
ಡೆಹ್ರಾಡೂನ್: ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಪತನಗೊಂಡು ಆರು ಪ್ರವಾಸಿಗರು ಮೃತಪಟ್ಟು, ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಕಾಶಿ ಜಿಲ್ಲೆಯ ಗಂಗಾನಿ ಬಳಿ ಖಾಸಗಿ ಹೆಲಿಕಾಪ್ಟರ್ ಪತನಗೊಂಡಿದೆ. ಏರೋಟ್ರಾನ್ಸ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ವಿಟಿ-ಒಎಕ್ಸ್ಎಫ್) ನಿರ್ವಹಿಸುವ, ಕ್ಯಾಪ್ಟನ್ ರಾಬಿನ್ ಸಿಂಗ್ ಪೈಲಟ್ ಮಾಡಿದ ಹೆಲಿಕಾಪ್ಟರ್ ಇದಾಗಿದ್ದು, ಡೆಹ್ರಾಡೂನ್ನ ಸಹಸ್ತ್ರಧಾರ ಹೆಲಿಪ್ಯಾಡ್ ನಿಂದ ಆರು ಪ್ರಯಾಣಿಕರೊಂದಿಗೆ ಟೇಕ್ ಆಫ್ ಆಗಿತ್ತು. ಗಂಗೋತ್ರಿ ಧಾಮದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಖರ್ಸಾಲಿ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ಇಳಿಯಬೇಕಿತ್ತು, ರಿಷಿಕೇಶ–ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅನಿರೀಕ್ಷಿತವಾಗಿ ಅಪಘಾತ ಸಂಭವಿಸಿದೆ. ಮೃತರನ್ನು ಮುಂಬೈನ ಕಲಾ ಸೋನಿ (61), ವಿಜಯ ರೆಡ್ಡಿ (57) ಮತ್ತು ರುಚಿ ಅಗರ್ವಾಲ್ (56), ಉತ್ತರ ಪ್ರದೇಶದ ರಾಧಾ ಅಗರ್ವಾಲ್(79) ಆಂಧ್ರಪ್ರದೇಶದ ವೇದಾವತಿ ಕುಮಾರಿ (48) ಮತ್ತು ಪೈಲಟ್ ಗುಜರಾತ್ನವರು. ಗಾಯಗೊಂಡ ವ್ಯಕ್ತಿಯನ್ನು ಆಂಧ್ರಪ್ರದೇಶದ ಭಾಸ್ಕರ್ ಎಂದು ಗುರುತಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ತುಮಕೂರು: ಪಾಕಿಸ್ತಾನದ ಉಗ್ರರ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ಹಿನ್ನೆಲೆ ತುಮಕೂರು ಜಿಲ್ಲಾ ಬಿಜೆಪಿಯಿಂದ ಭಾರತೀಯ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತುಮಕೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಭಾರತದ ಧ್ವಜ ಹಿಡಿದು ಯೋಧರ ಹೆಸರಿನಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪೂಜೆ ಸಲ್ಲಿಸಿದರು. ತುಮಕೂರು ನಗರ ಶಾಸಕ ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಹಲವರ ಸಮ್ಮುಖದಲ್ಲಿ ವಿಶೇಷ ಪೂಜೆ ನಡೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————